Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಗೆ ಅಗ್ರಿಮೆಂಟ್ ಆಗಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಒಪ್ಪಿಕೊಂಡಿದ್ದಾರೆ. ಕಳೆದ ಆರು ತಿಂಗಳಿಂದ ನಾನು ಇದನ್ನೇ ಹೇಳುತ್ತಿದ್ದೇನೆ. ಸಿದ್ದರಾಮಯ್ಯನವರನ್ನು ಅತಂತ್ರ ಮಾಡಲು ಕುತಂತ್ರ ನಡೆದಿದೆ. ಅವರಿಗೆ ಗೇಟ್‌ಪಾಸ್ ನೀಡುವುದು ಗ್ಯಾರಂಟಿಯಾಗಿದೆ. ನಾನು ಹೇಳಿದ್ದ ಜ್ಯೋತಿಷ್ಯ ನಿಜವಾಗಿದೆ. ಕಾಂಗ್ರೆಸ್‌ನ ಶಾಸಕರು ರಾಜಾರೋಷವಾಗಿ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಿದ್ದರಾಮಯ್ಯನವರಿಗೆ ಬೋರ್ಡಿಂಗ್ ಪಾಸ್ ಇದ್ದಂತೆ ಎಂದರು. ಸರ್ಕಾರ ಎರಡೂವರೆ ವರ್ಷಗಳಲ್ಲಿ ಟೇಕಾಫ್ ಆಗಿಲ್ಲ. ಶಾಸಕರೆಲ್ಲರೂ ತಿರುಗುಬಿದ್ದಿದ್ದಾರೆ. ಶಾಸಕರು ಸಿದ್ದರಾಮಯ್ಯನವರ ಪರವಾಗಿ ಇಲ್ಲ ಎಂಬುದು ಸುರ್ಜೇವಾಲಾ ಅವರ ಸಭೆಯಿಂದ ಗೊತ್ತಾಗಿದೆ. ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೇಂದ್ರಕ್ಕೆ ಹೋಗುವುದು ಗ್ಯಾರಂಟಿಯಾಗಿದೆ. ಇನ್ನೆರಡು ವರ್ಷವೂ ಇದೇ ರೀತಿ ಅತಂತ್ರದಲ್ಲೇ ಸರ್ಕಾರ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆಯವರಿಗೆ…
ಗದಗ : ಒಂದು ಕಡೆ 5 ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇನ್ನೊಂದು ಕಡೆ ಹಲವು ಮಠಾಧೀಶರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಸಿಗಲಿ ಅಂತ ಹೇಳಿಕೆ ನೀಡುತ್ತಿದ್ದಾರೆ. ಡಿಕೆಶಿ ಬೆಂಬಲಿತ ಹಲವು ಶಾಸಕರು ಕೂಡ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದರ ಮಧ್ಯ ಹಾಲು ಕೆಟ್ಟರು ಹಾಲುಮತ ಕೆಡಲ್ಲ. ಅಂಥವರ ಕೈಯಲ್ಲಿ ಅಧಿಕಾರ ಕೊಟ್ಟಿದ್ದೀರಿ ಅಧಿಕಾರ ಬದಲಾಯಿಸುವುದು ಅಷ್ಟು ಸುಲಭವಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರವಾಗಿ ಮೊಹರಂ ಅಲಿ ದೈವ ವಾಣಿ ಭವಿಷ್ಯ ನುಡಿದಿದೆ. ಹೌದು ಗದಗ ಜಿಲ್ಲೆಯ ರೋಣ ತಾಲೂಕಿನ ಕೌಜಗೇರಿ ಗ್ರಾಮದ ಮೊಹರಂ ಹಬ್ಬದ ಅಂಗವಾಗಿ ನಿನ್ನೆ ಅಲಿ ದೇವರು ದೈವ ಭವಿಷ್ಯ ವಾಣಿಯು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಬಂದಿದೆ. ಹಾಲು ಕೆಟ್ಟರೆ ಹಾಲುಮತ ಕೆಡಲ್ಲ. ಅಂಥವರ ಕೈಯಾಗ ಅಧಿಕಾರ ಸಿಕ್ಕಿದೆ, ನೀವು ಕೊಟ್ಟಿರಿ ಅದನ್ನ ಬದಲಿ ಮಾಡುವುದು ಅಷ್ಟು ಸುಲಭವಲ್ಲ…
ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು ಕಿತ್ತಿ ಹಾಕಿದ್ದರು. ಈ ವೇಳೆ ಇಂದಿರಾಗಾಂಧಿ ಪುತ್ರ ಸಂಜಯ್ ಗಾಂಧಿ 1.7 ಜನರಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ ಎಂದು ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಈ ಒಂದು ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ತುರ್ತು ಪರಿಸ್ಥಿತಿ ಹೇರಿ 50 ವರ್ಷ ಹಿನ್ನೆಲೆಯಲ್ಲಿ ಇಂದು ಧಾರವಾಡದ ಪುಟ್ಟಪ್ಪ ಸಭಾಭವನದಲ್ಲಿ ವಿಕಸಿತ ಭಾರತ ಸಂಕಲ್ಪ ಸಭೆ ಆಯೋಜನೆ ಮಾಡಲಾಗಿತ್ತು. ಒಂದು ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಇವರು ಕೇಳಿದ ಹಾಡು ಹೇಳದಿದ್ದಕ್ಕೆ ಕಿಶೋರ್ ಕುಮಾರ್ ಅವರ ಹಾಡುಗಳಿಗೆ ಬ್ಯಾನ್ ಮಾಡಿದರು. ಕಿಶೋರ್ ಕುಮಾರ್ ಹಾಡು ಕೂಡ ವಿಡಿಯೋದಲ್ಲಿ ಬರಲಿಲ್ಲ. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಲಾಲು ಪ್ರಸಾದ್ ಜೈಲು ಸೇರಿದ್ದರು. ಆದರೆ ಲಾಲು ಪ್ರಸಾದ್ ಯಾದವ್ ಈಗ ಕಾಂಗ್ರೆಸ್ ಜೊತೆಗೆ ಇದ್ದಾರೆ. ಇಂದಿರಾ ಗಾಂಧಿ ಪುತ್ರ…
ಕೊಡಗು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಘಟನೆಗಳು ನಡೆದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಇಂದು ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೌದು ಕೊಡಗು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ, ಇಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆದಂತೆ, ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶ ಹೊರಡಿಸಿದ್ದಾರೆ
ಬೆಂಗಳೂರು : ಎಲ್ಲರು ನನ್ನನ್ನು ದುರಹಂಕಾರಿ ಎನ್ನುತ್ತಾರೆ. ಐ ಡೋಂಟ್ ಕೇರ್, ನಾನು ಸ್ವಾಭಿಮಾನಿ ಅಷ್ಟೇ ಎಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ನಿಮ್ಮ ಮಕ್ಕಳನ್ನು ಅವಿದ್ಯಾವಂತರಾಗಲು ಬಿಡಬೇಡಿ ವಿದ್ಯೆ ಇದ್ದರೆ ಮಾತ್ರ ಸ್ವಾಭಿಮಾನ ಬೆಳೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಗುಲಾಮಗಿರಿ ಮನೆ ಮಾಡಿಕೊಳ್ಳುತ್ತದೆ ಎಂದು ವೀರೇಂದ್ರ ಕೇಶವ ತಾರಕಾನಂದ ಪರಿಶ್ರೀ ಪುಣ್ಯಾರಾಧನೆ ಸ್ಮರಣಾರ್ಥ ಭಕ್ತರ ಭಂಡಾರದ ಕುಟಿಲ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೇಳಿಕೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೇಲ್ಜಾತಿಯ ಬಡವ ಬಂದರೆ ಗೌರವ ಕೊಡುತ್ತೇವೆ. ಕೆಲವರ್ಗದ ಶ್ರೀಮಂತ ಬಂದರೆ ಅವರನ್ನು ಕೀಳಾಗಿ ಕಾಣುತ್ತೇವೆ. ಸ್ವಾಭಿಮಾನಿಗಳಾಗಿ ಬದುಕುವುದು ದುರಹಂಕಾರ ಅಲ್ಲ. ನನ್ನ ನೋಡಿದರೆ ದುರಹಂಕಾರಿ ಅಂತಾರೆ ನಾನು ಸ್ವಾಭಿಮಾನಿ ದುರಹಂಕಾರಿ ಅಂತ ಯಾರೇ ಕರೆದರೂ ನಾನು ಅದಕ್ಕೆ ಸೊಪ್ಪು ಹಾಕಲ್ಲ ವಿರೋಧ ಮಾಡುವವರು ಸತ್ಯಕ್ಕೆ ಹತ್ತಿರವಾಗಿರಬೇಕು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಮೇಲ್ವರ್ಗದ ಬಡವ ಬಂದರೆ ಏನು ಸ್ವಾಮಿ ಎನ್ನುತ್ತಾರೆ. ದಲಿತನೊಬ್ಬ ವಿದ್ಯಾವಂತ ಶ್ರೀಮಂತ ಬಂದರೆ ಏಕವಚನದಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಹೃದಯಾಘತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 8 ಮಂದಿ ಮೃತಪಟ್ಟಿದ್ದಾರೆ. ಹಾಸನ ಮತ್ತು ಚಿಕ್ಕಮಗಳೂರಿನಲ್ಲಿ ಇಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕೊಂಗಲಬೀಡು ಗ್ರಾಮದ ಆನಂದ್ (44) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆನಂದ್ ಐಚನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾಗಿದ್ದರು. ಶನಿವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಆನಂದ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಪತ್ನಿ ಬಳಿ ಎದೆ ನೋವುತ್ತಿದೆ ಎಂದು ಹೇಳಿದ್ದಾರೆ. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಟೋ ಕರೆತರುವಷ್ಟರಲ್ಲಿ ಆನಂದ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 37 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಾಸನದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಕಾರಿನಲ್ಲಿ ತೆರಳುತ್ತಿದ್ದ ರಂಗನಾಥ್ (57) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರಂಗನಾಥ್ ಅವರು ಕುಟುಂಬ ಸಮೇತ ಮಂಗಳೂರಿಗೆ ಪ್ರವಾಸಕ್ಕೆಂದು ಹೋಗಿದ್ದರು. ರವಿವಾರ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ರಂಗನಾಥ್ ಅವರ ಪುತ್ರಿ ಕಾರು ಚಲಾಯಿಸುತ್ತಿದ್ದರು. ಕಾರು ಹಾಸನ ಜಿಲ್ಲಾಧಿಕಾರಿ…
ಬೆಂಗಳೂರು : ಶ್ರಮಕ್ಕೆ ಪ್ರತಿಫಲ ಸಿಗಲೇಬೇಕು ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜಯ ಸಾಧಿಸಲು ಉಪಮುಖ್ಯಮಂತ್ರಿ ಕಾರಣ. ಪಕ್ಷದ ಗೆಲುವಿಗೆ ಶಿವಕುಮಾರ್ ಅವರ ಶ್ರಮವಿದೆ. ಅವರಿಗೂ ಈ ರಾಜ್ಯದ ಮುಖ್ಯಮಂತ್ರಿ ಯಾಗಿ ಆಡಳಿತ ನಡೆಸಲು ಒಂದು ಸಿಗಬೇಕು ಅವಕಾಶ ಎಂದು ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕಾ ವೀರ ಸೋಮೇಶ್ವರ ಸ್ವಾಮೀಜಿ ಸಲಹೆ ನೀಡಿದ್ದಾರೆ. “ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರಚಂಡ ಬಹುಮತ ಗಳಿಸಲು ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾದ ನಂತರ ಬಹಳ ಶ್ರಮ ಪಟ್ಟಿರುವುದು ರಾಜ್ಯದ ಜನರಿಗೆ ತಿಳಿದಿದೆ. ಚುನಾವಣೆ ನಂತರ ನಡೆದಿರುವ ಒಳ ಒಪ್ಪಂದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ. ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಆದ ಒಡಂಬಡಿಕೆಯಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೆ ಗೌರವವಿದೆ” ಎಂದರು. “ನಾಯಕತ್ವದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನಾಯಕರೇ ಅಲ್ಲಲ್ಲಿ ಮಾತನಾಡಿದ ವಿಚಾರ ಹೊರಬರುತ್ತಿದೆ. ಇದರ ಬಗ್ಗೆ ರಾಷ್ಟ್ರೀಯ ನಾಯಕರು ಸ್ಪಷ್ಟಣೆ ನೀಡಿ ತಿಳಿಗೊಳಿಸಿದರೆ ಜನರಲ್ಲಿ ನೆಮ್ಮದಿ ಉಂಟಾಗಲಿದೆ. ಶಿವಕುಮಾರ್ ಅವರಿಗೂ ಉನ್ನತ…
ತುಮಕೂರು : ರಾಜ್ಯದಲ್ಲಿ ಸುಳ್ಳುಸುದ್ದಿ ಪ್ರಕಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಫೇಕ್ ನ್ಯೂಸ್ ಹಾವಳಿ ತಡೆಗಟ್ಟಲು ವಿಶೇಷ ಕಾಯ್ದೆ ಜಾರಿ ಅಗತ್ಯವಾಗಿದೆ. ಪೇಯ್ಡ್ ನ್ಯೂಸ್ ಸಹ ಪತ್ರಿಕಾ ರಂಗದಲ್ಲಿ ತೂರಿಕೊಂಡಿದೆ. ದೊಡ್ಡ ದೊಡ್ಡ ಚಾನೆಲ್ ಗಳು, ಪತ್ರಿಕೆಗಳ ಒಡೆತನ ಕೈಗಾರಿಕೋದ್ಯಮಿಗಳ, ಬಂಡವಾಳ ಶಾಹಿಗಳ ಕೈಗಳಲ್ಲಿದ್ದು ಅವರ ಹಿತಾಸಕ್ತಿ ನಿಟ್ಟಿನಲ್ಲಿ ಕಾರ್ ನಿರ್ವಹಿಸುತ್ತಿವೆ. ಸಾಮಾಜಿಕ ಕಳಕಳಿ ಗಿಂತ ಸ್ವಹಿತಾಸಕ್ತಿ ಹೆಚ್ಚಾಗಿದೆ. ಸುದ್ದಿ ಮಾಧ್ಯಮಗಳಲ್ಲಿ ಗ್ರಾಮೀಣ ವರದಿಗಳಿಗಿಂತ ನಗರಮುಖಿ ಸುದ್ದಿಗಳು ಹೆಚ್ಚಿರುತ್ತವೆ. ಹಾಗಾಗಿ ಸುಳ್ಳುಸುದ್ದಿ ಪ್ರಕಟಿಸುವ ಮಾಧ್ಯಮಗಳ ಮೇಲೆ ನಿಯಂತ್ರಣ ಹೇರಲು ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದು ಪರಮೇಶ್ವರ್ ಹೇಳಿಕೆ ನೀಡಿದರು
ಕೊಪ್ಪಳ : ರಸ್ತೆ ಬೇಕು ಅಂದ್ರೆ ಗ್ಯಾರಂಟಿ ಬಂದ್ ಅಂತ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಇದೀಗ ತಮ್ಮ ಹೇಳಿಕೆಗೆ ಉಲ್ಟಾ ಹೊಡೆದಿದ್ದು, ಯಾವ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ. ಯಾವುದೇ ಗೊಂದಲ ಬೇಡ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ರಸ್ತೆ ಬೇಕೆಂದರೆ ಗ್ಯಾರಂಟಿ ಯೋಜನೆ ಬಂದ್ ಮಾಡಲಾಗುವುದು ಎಂದು ನೀಡಿದ್ದ ಹೇಳಿಕೆಗೆ ನಿನ್ನೆ ಸ್ಪಷ್ಟನೆ ನೀಡಿದ ಅವರು, ಗ್ಯಾರಂಟಿ ಯೋಜನೆಗಳಿಂದ ಹಣದ ಕೊರತೆ ಉಂಟಾಗಿಲ್ಲ. ಗ್ಯಾರಂಟಿಯಿಂದ ಜನರಿಗೆ 52 ಸಾವಿರ ಕೋಟಿ ನೀಡುತ್ತೇವೆ. ಜತೆಗೆ, ಜನರಿಗೆ ಸಬ್ಸಿಡಿಯಾಗಿ ಸಹ ಇನ್ನೂ 50 ಸಾವಿರ ಕೋಟಿ ನೀಡುತ್ತಿದ್ದೇವೆ ಎಂದರು. ಹೇಳಿಕೆ ತಪ್ಪಾಗಿ ಅರ್ಥೈಸುತ್ತಿದ್ದಾರೆ. ಹಳ್ಳಿಯಲ್ಲಿ ಮಾತನಾಡುವ ಸಂದರ್ಭ ಒಂದೇ ವರ್ಷ ಎಲ್ಲ ಕೆಲಸ ಮಾಡಬೇಕು ಎಂದರೆ ಹೇಂಗಪ್ಪಾ, ಮುಂದಿನ ವರ್ಷ ಗ್ರಾಮೀಣ ರಸ್ತೆಗಳನ್ನು ಮಾಡಿ ಕೊಡುತ್ತೇನೆ ಎಂದು ಹೇಳಿದ್ದೇನೆ. ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತಗೊಂಡಿಲ್ಲ. ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಿದೆ. ಇದರ ಜತೆಗೆ ಅಭಿವೃದ್ಧಿಗೂ ಸಾಕಷ್ಟು ಹಣ ನೀಡಿದ್ದೇವೆ.…
ಬೆಂಗಳೂರು : ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿಯು ನಿಗಮಿತ ನಿಕಾಯವಾಗಿದ್ದು, ಶಾಶ್ವತ ಉತ್ತರಾಧಿಕಾರವನ್ನು ಹೊಂದಿರುವುದರಿಂದ ಸಾಮಾನ್ಯ ಮೊಹರನ್ನು ಹೊಂದಲು ಅವಕಾಶ ನೀಡಿದೆ ಎಂದು ತಿಳಿಸಿರುವ ಸಚಿವರು ಈ ಸಂಬಂಧ ಇಲಾಖೆಯು ಈಗಾಗಲೆ ಆದೇಶ ಹೊರಡಿಸಿದೆ ಎಂದಿದ್ದಾರೆ. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಮತ್ತು ಸದಸ್ಯರುಗಳು ತಮ್ಮ ಅಧಿಕೃತ ವಿಸಿಟಿಂಗ್ ಕಾರ್ಡ್ ಮೇಲೆ ತಮ್ಮ ಅಧಿಕಾರದ ಅವಧಿಯಲ್ಲಿ ಮಾತ್ರ ಈ ಲಾಂಛನವನ್ನು ಬಳಸಬಹುದಾಗಿದ್ದು, ಮಾಜಿ ಜನ ಪ್ರತಿನಿಧಿಗಳು, ನಿವೃತ್ತ ಅಧಿಕಾರಿಗಳು, ನೌಕರರಿಗೆ ಹಾಗೂ ಇನ್ನಿತರ ಸಂದರ್ಭಗಳಲ್ಲಿ ಬಳಕೆಯ ಮೇಲೆ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಈ…













