Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ವಿರುದ್ಧ ಕಾಂಗ್ರೆಸ್ ಶಾಸಕ ರವಿ ಗಣಿಗ ಆಕ್ರೋಶ ಹೊರ ಹಾಕಿದ್ದು, ಈ ಒಂದು ಪ್ರಕರಣದಲ್ಲಿ ಹಾಸನದ ಮಾಜಿ ಶಾಸಕನ ಕೈವಾಡವಿದೆ ಎಂದು ಆರೋಪಿಸಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕೈವಾಡವಿದೆ ಎನ್ನುವುದಕ್ಕೆ ಸಾಕ್ಷಿ ತೋರಿಸಲಿ. ಡಿಕೆ ಶಿವಕುಮಾರ್ ಅವರ ಬಳಿ ನಿತ್ಯ ಸಾವಿರಾರು ಜನರು ಬರುತ್ತಾರೆ ಹೋಗುತ್ತಾರೆ. ದೇವರಾಜೇಗೌಡ, ಮಾಜಿ ಶಾಸಕ ಏಕೆ ಷಡ್ಯಂತ್ರ ಮಾಡಿರಬಾರದು? ಎಂದು ಪ್ರಶ್ನಿಸಿದರು. ದೇವರಾಜೇಗೌಡ ಶಿವರಾಮೇಗೌಡ ಇಬ್ಬರು ಇರಬಹುದು ಅಲ್ಲವೇ? ಶಿವರಾಮೇಗೌಡರನ್ನು ಕಳುಹಿಸಿ ಯಾಕೆ ಷಡ್ಯಂತ್ರ ಮಾಡಿರಬಾರದು? ಪ್ರಜ್ವಲ್ ಸ್ಟೇ ತಂದಾಗ ದೇವರಾಜೇಗೌಡ ಹಾಸನದಲ್ಲಿ ಏನು ಹೇಳಿದರು ಎಲ್ಲವನ್ನು ರಿಲೀಸ್ ಮಾಡುತ್ತೇನೆ ಅಂತ ಹೇಳಿದ್ದರು ಅಲ್ವಾ. ಪೆನ್ ಡ್ರೈವ್ ಕೇಸ್ನಲ್ಲಿ ಹಾಸನದ ಮಾಜಿ ಶಾಸಕನ ಕೈವಾಡ ಇದೆ ಎಂದು ಆರೋಪಿಸದರು. ಒಂದು ತಿಂಗಳ ದೇವರಾಜೇಗೌಡ…
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಶಾಸಕ ರೇವಣ್ಣ ಅವರ ವಿರುದ್ಧ ಈಗಾಗಲೇ ಎಸ್ಐಟಿ ತನಿಖೆ ಕೈಗೊಂಡಿದ್ದು ಈ ಕುಡಿದಂತೆ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ ಸಿಬಿಐ ತನಿಖೆಯು ಬೇಡ SIT ತನಿಖೆಯು ಬೇಡ ನ್ಯಾಯಾಂಗ ತನಿಖೆಯಾಗಲಿ ಎಂದು ಅಗ್ರಹಿಸಿದರು. ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಯಾವ ಸಿಬಿಐ ತನಿಖೆಯು ಬೇಡ SIT ತನಿಖೆಯು ಬೇಡ ಹೈಕೋರ್ಟ್ ಮೂಲಕ ನ್ಯಾಯಾಂಗ ತನಿಖೆಯಾಗಲಿ ಎಂದು HD ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಇದುವರೆಗೂ ಭಾರತಕ್ಕೆ ಬಂದಿಲ್ಲ. ಅಲ್ಲದೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಸಕ ಎಚ್ ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಅಲ್ಲದೆ ರೇವಣ್ಣ ಅವರು ಕೂಡ ನ್ಯಾಯಾಂಗದ ಮೂಲಕ ಸತತವಾಗಿ ಹೋರಾಟ ಮಾಡುತ್ತಲೇ ಇದ್ದಾರೆ.
ಮಂಗಳೂರು : ಅತ್ಯಂತ ವೇಗವಾಗಿ ಬಂದಂತಹ ಆಂಬುಲೆನ್ಸ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಕೇರಳ ಮೂಲದ ಮೂವರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಅಂಬುಲೆನ್ಸ್ ಡಿಕ್ಕಿಯಾಗಿ ಕಾರಿನಲ್ಲಿ ತೆರಳುತ್ತಿದ್ದವರು ಮೂವರು ಇದೀಗ ಸಾವನಪ್ಪಿದ್ದಾರೆ.ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದರೆ ಒಬ್ಬ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಕಾಸರಗೋಡು ಜಿಲ್ಲೆಯ ಮಂಜೆಶ್ವರ ಬಳಿ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟವರನ್ನು ಕೇರಳದ ತ್ರಿಶೂರು ಜಿಲ್ಲೆಯ ಗುರುವಾಯುರು ಗ್ರಾಮದವರು ಎಂದು ಹೇಳಲಾಗುತ್ತಿದೆ. ಶ್ರೀನಾಥ್, ಶರತ್ ಮೆನನ್ ಸೇರಿ ಮೂವರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ ಅಪಘಾತದ ವೇಳೆ ಆಂಬುಲೆನ್ಸ್ನಲ್ಲಿದ್ದ ರೋಗಿಗೂ ಗಾಯವಾಗಿದೆ. ಘಟನೆ ಕುರಿತಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆ ಇಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಮಾಡಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯಶಿಕಾರಿಪುರದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಇಂದು ಮತದಾನ ಹಿನ್ನೆಲೆಯಲ್ಲಿ ಬೈಕ್ ಸವಾರ ಮತದಾನ ಮಾಡಲು ತೇರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು ಬೈಕ್ ಸವಾರ ಮಂಜುನಾಥ್ (32) ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.ಚುರ್ಚಿಗೊಂಡಯಿಂದ ಭದ್ರಾವತಿಗೆ ತೆರಳುವಾಗ ಈ ಒಂದು ಅಪಘಾತ ಸಂಭವಿಸಿದೆ. ಶಿಕಾರಿಪುರದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರವಾದ ಆರೋಪ ಮಾಡಿದ್ದೂ, ಈ ಒಂದು ಪೆನ್ ಡ್ರೈವ್ ಕೆಸಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಸ್ಕ್ರಿಪ್ಟ್ ರೈಟರ್ ಆಗಿದ್ದು, ಸಿದ್ದರಾಮಯ್ಯ ಡೈರೆಕ್ಷನ್ ಹಾಗೂ ಡಿಕೆ ಶಿವಕುಮಾರ್ ಪ್ರೊಡ್ಯೂಸರ್ ಆಗಿದ್ದಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದರು. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಕ್ಕಲಿಗರಿಗೆ ಅವಮಾನ ಮಾಡಲು ಒಂದು ಲಕ್ಷ ಪೆನ್ ಡ್ರೈವ್ ಹಂಚಿಕೆ ಮಾಡಿದ್ದಾರೆ. ಒಂದು ಲಕ್ಷ ಪೆನ್ ಡ್ರೈವ್ ಗಳಲ್ಲಿ ವಿಡಿಯೋ ಹಾಕಿ ಹಂಚಿದ್ದಾರೆ. ಲಿಂಗಾಯತರಿಗೆ ಅವಮಾನ ಮಾಡಿದ್ರು ಈಗ ಒಕ್ಕಲಿಗರಿಗೆ ಅಪಮಾನ ಮಾಡುತ್ತಿದ್ದಾರೆ ಎಂದರು. ಎಸ್ಐಟಿ ಸಿದ್ದರಾಮಯ್ಯ ಮತ್ತು ಡಿಕೆ ಪರ ರಬ್ಬರ್ ಸ್ಟ್ಯಾಂಪ್ ಆಗಿದೆ. ದಾಖಲೆಗಳನ್ನು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ. ಸಿಎಂ ರಹಸ್ಯ ಸಭೆ ಮಾಡಿ ಸಂಚು ಮಾಡಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹೋಗುವುದರಲ್ಲೂ…
ಬೆಂಗಳೂರು : ರಾಜ್ಯದಲ್ಲಿ ಎರಡನೇ ಸುತ್ತಿನ ಲೋಕಸಭಾ ಚುನಾವಣೆಗೆ ಇಂದು ಮತದಾನ ನಡೆಯುತ್ತಿದ್ದೂ, ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾರರಿಂದ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಹೌದು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎರಡನೇ ಹಂತದ ಮತದಾನ ನಡೆದಿದ್ದು, ಮತದಾರರಿಂದ ಭರ್ಜರಿ ರೆಸ್ಪೋನ್ಸ್ ಸಿಕ್ಕಿದ್ದು, ಇಂದು ಮಧ್ಯಾಹ್ನ 1 ಗಂಟೆಯವರೆಗೆ ಶೇ 41.59 ರಷ್ಟು ಮತದಾನ ಆಗಿದೆ ಎಂದು ತಿಳಿದುಬಂದಿದೆ. ಚಿಕ್ಕೋಡಿ 45, ಉತ್ತರ ಕನ್ನಡ 44.22, ಶಿವಮೊಗ್ಗ 44.98 ಬೆಳಗಾವಿ 40.57, ಬಳ್ಳಾರಿ 44.36, ದಾವಣಗೆರೆ 42.32, ಬಾಗಲಕೋಟೆ 41.91, ಬೀದರ್ 37.97 ವಿಜಯಪುರ 33.87, ಧಾರವಾಡ 40.61 ಕಲಬುರ್ಗಿ 37.48, ಹಾವೇರಿ 43.29, ಕೊಪ್ಪಳ 47.74, ಕೊಪ್ಪಳ 42.74, ರಾಯಚೂರು 38.6 ಶಿವಮೊಗ್ಗ 44.98 ರಷ್ಟು ಪ್ರತೀಶತ ಮತದಾನ ನಡೆದಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು : ಕೆಪಿಸಿಸಿ ಉಪಾಧ್ಯಕ್ಷ GN ನಂಜುಂಡಸ್ವಾಮಿ ಕಾರು ಅಪಘಾತವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಒಂದು ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಕಾರು ಪಲ್ಟಿಯಾಗಿದ್ದರಿಂದ GN ನಂಜುಂಡಸ್ವಾಮಿ ತಲೆಗೆ ಪೆಟ್ಟಾಗಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಗಂಭೀರವಾಗಿ ಗಾಯಗೊಂಡಿರುವ ಜಿಎನ್ ನಂಜುಂಡಸ್ವಾಮಿ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲೀಸಲಾಗಿದ್ದು,ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಆಡಿಷನ್ಗೆ ಬಾ ಎಂದು ಕಾಸ್ಟಿಂಗ್ ನಿರ್ದೇಶಕ ಸೂರ್ಯ ಅಶ್ಲೀಲವಾಗಿ ಮೆಸೇಜ್ ಮಾಡಿದ ಹಿನ್ನೆಲೆಯಲ್ಲಿ ಆತನ ವಿರುದ್ಧ ಬೆಂಗಳೂರು ನಗರದ ಆರ್.ಆರ್. ನಗರ ಠಾಣೆಯಲ್ಲಿ ನಟಿ ಅಮೂಲ್ಯ ಗೌಡ ದೂರು ನೀಡಿದ್ದಾರೆ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು ಕಾಂಪ್ರಮೈಸ್ ಆಗು ಅಂದಿದ್ದಕ್ಕೆ ಆತನಿಗೆ ಪೊಲೀಸರ ಎದುರೇ ಚಪ್ಪಲಿಂದ ಹೊಡೆದಿದ್ದೇನೆ ಎಂದು ನಟಿಯ ಅಮೌಲ್ಯ ಗೌಡ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರ್ದೇಶಕ ಸೂರ್ಯ ನನಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದರು.ಹೀಗಾಗಿ ಆರ್ ಆರ್ ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ನಟಿ ಅಮೂಲ್ಯ ಗೌಡ ಹೇಳಿಕೆ ನೀಡಿದರು. ಸೂರ್ಯ ಇದೀಗ ಪೋಲೀಸರ ಕೈಗೆ ಸಿಕ್ಕಿದ್ದಾನೆ ಪೊಲೀಸರಿಗೆ ಕಾಂಪ್ರಮೈಸ್ ಮಾಡಿಕೊಳ್ಳಿ ಅಂದರು. ನಾನು ಪೊಲೀಸರ ಮುಂದೆ ಆತನಿಗೆ ಚಪ್ಪಲಿಯಲ್ಲಿ ಹೊಡೆದೆ. ಹೀಗಾಗಿ ನನ್ನ ಮೇಲೆ ಈಗ ಎಫ್ಐಆರ್ ದಾಖಲಿಸಿದ್ದಾನೆ. ನಾನು ಸುಮ್ಮನಿದ್ದರೆ ಮತ್ತಷ್ಟು ಹುಡುಗಿಯರಿಗೆ ಇದೇ ರೀತಿ ಮಾಡುತ್ತಾನೆ ಎಂದು ಕಿಡಿ ಕಾರಿದರು. ಹೀಗಾಗಿ ಅದಕ್ಕೆ ಬಂದು ದೂರು ಕೊಟ್ಟಿದ್ದೇನೆ.…
ಚಿಕ್ಕಮಗಳೂರು : ರಸ್ತೆಯಲ್ಲಿ ವೇಗವಾಗಿ ಬೈಕ್ ಚಲಾಯಿಸುತ್ತಿದ್ದಾಗ ನಿಯಂತ್ರಣಕ್ಕೆ ಸಿಗದೇ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ನಡೆದಿದೆ. ಮೃತ ಸವಾರರನ್ನು ಹೊರನಾಡು ಗ್ರಾಮದ ಉಮೇಶ್, ಮುಂಡುಗದ ಮನೆ ಗ್ರಾಮದ ಸುನಿಲ್ ಮೃತಪಟ್ಟ ಯುವಕರು ಎಂದು ಹೇಳಲಾಗುತ್ತಿದೆ.ಉಮೇಶ್, ಸುನೀಲನನ್ನು ಶಿವಮೊಗ್ಗಕ್ಕೆ ಬಿಡಲು ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ಬೈಕ್ ನಿಯಂತ್ರಣಕ್ಕೆ ಸಿಗದೇ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನಾ ನಂತರ ಸ್ಥಳಕ್ಕೆ ಎನ್.ಆರ್ ಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಎನ್.ಆರ್ ಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ಕುರಿತಂತೆ ಎನ್.ಆರ್ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ವಜಾಗೊಳಿಸಿದೆ. ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ದಿಗ ನಾಳೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕರು ಕರಣಿ ಅರ್ಜಿ ಸಲ್ಲಿಸಿದ್ದರು ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ವಜಾ ಗೊಳಿಸಿದೆ.