Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಡೆಲಿವರಿ ಬಾಯ್ ನಿಂದ ಮಾಡೆಲ್ ಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಆರ್ ಟಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಬ್ರೆಜಿಲ್ ಮೂಲದ ಮಾಡೆಲ್ ಗೆ ಡೆಲಿವರಿ ಬಾಯ್ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಬ್ಲಿಂಕಿಂಟ್ ಡೆಲಿವರಿ ಬಾಯ್ ಕುಮಾರರಾವ್ ಎಂಬಾತ ಲೈಂಗಿಕ ಕಿರುಕುಳ ನೀಡಿದ್ದು, ಫುಡ್ ಡೆಲಿವರಿ ಕೊಡಲು ಬಂದಿದ್ದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಆರ್ ಟಿ ನಗರದಲ್ಲಿರುವ ಮಾಡೆಲ್ ಮನೆಯಲ್ಲಿಯೇ ಲೈಂಗಿಕ ಕಿರುಕುಳ ನೀಡಿದ್ದು, ಸೆಪ್ಟೆಂಬರ್ 17ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.. ಕುಮಾರ್ ರಾವ್ ಕಾಲೇಜು ವಿದ್ಯಾರ್ಥಿಯಾಗಿದ್ದು ಪಾರ್ಟ್ ಟೈಮ್ ಆಗಿ ಬ್ಲಿಂಕ್ ಇಟ್ ಡೆಲಿವರಿ ಮಾಡುತ್ತಿದ್ದ. ಸಂತ್ರಸ್ತೇ ಕೆಲಸ ಮಾಡುತ್ತಿದ್ದ ಕಂಪನಿ ಮ್ಯಾನೇಜರ್ ಕಾರ್ತಿಕ್ ದೂರು ನೀಡಿದ್ದಾರೆ. ಕುಮಾರ್ ರಾವ್ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು…
ಹಾಸನ : ಹಾಸನದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಕಳೆದ ಐದು ದಿನಗಳ ಹಿಂದೆ ಅಡುಗೆ ಅನಿಲ ಸೋರಿಕೆಯಿಂದಾಗಿ ಸುಟ್ಟಗಾಯವಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಪೈಕಿ ಪತ್ನಿ ಸಾವನ್ನಪ್ಪಿದ್ದು, ಪತಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೋಭಾ (42) ಮೃತಪಟ್ಟವರು ಎಂದು ತಿಳಿದುಬಂದಿದೆ. ನಗರದ ವೀರಾಂಜನೇಯ ಬಡಾವಣೆ ನಿವಾಸಿ, ಪಿರಿಯಾಪಟ್ಟಣ ತಾಲೂಕಿನ ಕಿತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸೀನಿಯರ್ ಹೆಲ್ತ್ ಇನ್ಸ್ಪೆಕ್ಟರ್ ಕುಮಾರ್ ಹಾಗು ಶೋಭಾ ಅ.23ರಂದು ಅಡುಗೆ ಮಾಡುತ್ತಿದ್ದ ವೇಳೆ ಗ್ಯಾಸ್ ಸೋರಿಕೆಯಾಗಿ ಮನೆಯಲ್ಲಿ ಪದಾರ್ಥಗಳಿಗೆ ಒಮ್ಮೆಲೆ ಬೆಂಕಿ ಹತ್ತಿಕೊಂಡು ಇಡೀ ಮನೆ ಆವರಿಸಿದ್ದು,ಪತಿ ಕುಮಾರ್ ರಕ್ಷಿಸಲು ಹೋಗಿ ಅವರು ಸಹ ತೀವ್ರಗಾಯಗೊಂಡಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅ.27ರ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಶೋಭಾ ಸಾವನ್ನಪ್ಪಿದ್ದಾರೆ. ಪತಿ ಕುಮಾರ್ ಸಹ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿಯ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿದೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು : ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಕುಣಿಗಲ್ ತಹಶೀಲ್ದಾರ್ ರಶ್ಮಿಗೆ 25,000 ದಂಡ ವಿಧಿಸಲಾಗಿದೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರು ಈ ಆದೇಶ ಹೊರಡಿಸಿದ್ದು, ಮಾಹಿತಿ ಆಯೋಗದ ಆಯುಕ್ತ ರುದ್ರಣ್ಣ ಸೂಚನೆ ಮೇರೆಗೆ ಆದೇಶ ಹೊರಡಿಸಿದ್ದಾರೆ. ಕಡತ ಒಂದರ ಮಾಹಿತಿ ನೀಡುವಂತೆ ನರಸೇಗೌಡ ಎಂಬುವವರು ಅರ್ಜಿ ಸಲ್ಲಿಸಿದರು. ಕುಣಿಗಲ್ ತಾಲೂಕಿನ ಕುಂದೂರು ಗ್ರಾಮದ ನಿವಾಸಿ ನರಸೇಗೌಡ ಅರ್ಜಿ ಸಲ್ಲಿಸಿದ್ದರು. ಮಾಹಿತಿ ನೀಡಲು ವಿಳಂಬವಾಗಿದ್ದಕ್ಕೆ ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಮಾಹಿತಿ ಆಯೋಗ ತಹಶೀಲ್ದಾರ ರಶ್ಮಿಗೆ 25,000 ದಂಡ ಮತ್ತು ಶಿಸ್ತು ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನವೆಂಬರ್ ವೇತನದಲ್ಲಿ 25,000 ದಂಡ ಹಿಡಿದಿಡುವಂತೆ ಆದೇಶಿಸಿದ್ದಾರೆ. ಅರ್ಜಿದಾರ ನರಸಿ ಗೌಡಗೆ 5000 ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಮೊಂತಾ ಚಂಡಮಾರುತದ ಪರಿಣಾಮ ನೆಲೆಯಲ್ಲಿ ರೈಲುಗಳ ಸಂಚಾರದಲ್ಲಿ ವಿಳಂಬ ಆಗಿದೆ ಬೆಂಗಳೂರಿನಿಂದ ಹೊರಡಬೇಕಿದ್ದ ರೈಲುಗಳ ಸಂಚಾರದಲೂ ವಿಳಂಬವಾಗಿದ್ದು 12 ಗಂಟೆಗಳ ಕಾಲ ರೈಲುಗಳು ತಡವಾಗಿ ಸಂಚರಿಸಲಿವೆ. ಅಲ್ಲದೇ ಕಾಕಿನಾಡದಿಂದ ಬರಬೇಕಿದ್ದ ಎಕ್ಸ್ಪ್ರೆಸ್ ರೈಲು ರದ್ದಾಗಿದೆ ಕಾಕಿನಾಡ- ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ರೈಲು ರದ್ದಾಗಿವೆ. ಬೆಂಗಳೂರು ನಾಗೇರ್ ಕಾಯಲ್ ರೈಲು ಸಂಚಾರ ಕೂಡ ಬಂದ್ ಆಗಿದ್ದು, ಕೆಲವು ರೈಲುಗಳ ವೇಳಾಪಟ್ಟಿಯನ್ನು ರೈಲ್ವೆ ಇಲಾಖೆ ಬದಲು ಮಾಡಿದೆ. 12 ಗಂಟೆಗಳ ಕಾಲ ತಡವಾಗಿ ಸಂಚರಿಸಲಿವೆ ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ರೈಲ್ವೇ ನಿಲ್ದಾಣದಲ್ಲಿ ಮಾಹಿತಿ ಪಡೆದು ಸಂಚರಿಸಬೇಕು.
ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ದೀಪಾವಳಿಯಂದೆ ಭೀಕರ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಅಗ್ನಿ ದುರಂತದಲ್ಲಿ ಎಂಟು ಬೈಕ್ಗಳು ಹಾಗೂ ಮನೆಯ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸ್ನೇಹ ಮೇದಾರ ಸಾವನಪ್ಪಿದ್ದಾಳೆ. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ನೇಹ ಚಿಕಿತ್ಸೆ ಪಡೆಯುತ್ತಿದ್ದಾಲಿ. ಆದರೆ l ಚಿಕಿತ್ಸೆ ಫಲಿಸದೆ ಸ್ನೇಹ ಸಾವನ್ನಪ್ಪಿದ್ದಾಳೆ. ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿ ಘಟನೆ ನಡೆದಿತ್ತು ಹಬ್ಬಕ್ಕೆ ಹಚ್ಚಿದ ದೀಪಗಳಿಂದ ಬೆಂಕಿ ಹತ್ತಿಕೊಂಡಿತ್ತು 8 ಬೈಕ್ ಹಾಗೂ ಇಡೀ ಮನೆ ಸುಟ್ಟು ಕರಕಲಾಗಿತ್ತು. ಈ ಒಂದು ಘಟನೆಯಲ್ಲಿ ಸ್ನೇಹ ಗಂಭೀರವಾಗಿ ಗಾಯಗೊಂಡಿದ್ದಳು ಆದರೆ ಬೆಳಗಾವಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಸಾವನ್ನಪ್ಪಿದ್ದಾಳೆ.
ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಶ್ಚಿಮ ಬಂಗಾಳದ ಮೂಲದ ಮಹಿಳೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಾದನಾಯಕನಹಳ್ಳಿ ಪೊಲೀಸ್ ಸರು ಪ್ರಕರಣದ A1 ಆರೋಪಿಯಾಗಿದ್ದ ಮಿಥುನ್ ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿ ಆಗಿರುವಂತಹ A1 ಆರೋಪಿ ಮಿಥುನ್ ನನ್ನ ಮಾದನಾಯಕನಹಳ್ಳಿ ಪೋಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ ದಾಖಲಾಗುತ್ತಿದ್ದಂತೆ ಆರೋಪಿ ಮಿಥುನ್ ಪರಾರಿಆಗಿದ್ದ ಶಿವಗಂಗೆಯ ಬಳಿ ತಲೆಮರಿಸಿಕೊಂಡಿದ್ದ ಮಿಥುನನ್ನು ಅರೆಸ್ಟ್ ಮಾಡಿದ್ದು ಪ್ರಕರಣದ ಎಲ್ಲಾ ಆರೋಪಿಗಳನ್ನು ಪೊಲೀಸರು ಇದೀಗ ಅರೆಸ್ಟ್ ಮಾಡಿದ್ದಾರೆ. ಟೆಕ್ನಿಕಲ್ ಎವಿಡೆನ್ಸ್ ಸಂಗ್ರಹಿಸಲು ಮುಂದಾಗಿರುವ ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವರದಿಯನ್ನು ಸಿದ್ಧಪಡಿಸಲಿದ್ದಾರೆ.
ಉತ್ತರಕನ್ನಡ : ಖಾಸಗಿ ಬಸ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಂದು ಕೋಟಿ ರೂಪಾಯಿಯನ್ನು ಜಪ್ತಿ ಮಾಡಿಕೊಳ್ಳಲಾಗಿದೆ. ಉತ್ತರಕನ್ನಡ ಜಿಲ್ಕೆಯ ಕಾರವಾರ ತಾಲೂಕಿನ ಮಾದಾಳಿ ಚೆಕ್ ಪೋಸ್ಟ್ ನಲ್ಲಿ ಹಣ ವಶಕ್ಕೆ ಪಡೆದುಕೊಳ್ಳಲಾಗಿದೆ. ಗೋವಾದಿಂದ 1 ಕೋಟಿ ರೂಪಾಯಿ ಹಣವನ್ನು ಬೆಂಗಳೂರಿಗೆ ಸಾಗಿಸಲಾಗುತ್ತಿತ್ತು ಕಲ್ಮೇಶಕುಮಾರ್, ಬೊಂಬ್ರಾರಾಮ್ ಎಂಬುವವರ ಬ್ಯಾಗಿನಲ್ಲಿ ಹಣ ಪತ್ತೆಯಾಗಿದೆ. ಪೊಲೀಸರು ಖಾಸಗಿ ಬಸ್ ತಪಾಸಣೆ ನಡೆಸಿದ್ದಾರೆ ಒಂದು ಕೋಟಿ ರೂಪಾಯಿ ಹಣ ಪತ್ತೆಯಾಗಿದೆ. ನಿನ್ನೆ ರಾತ್ರಿ 9:30 ಕ್ಕೆ ಪೊಲೀಸರು ಹಣ ವಶ ಪಡೆದು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ ಅಂಡ್ ರನ್ ಪ್ರಕರಣ ನಡೆದಿದ್ದು, ಹಿಟ್ ಅಂಡ್ ರನ್ ಗೆ ಇಬ್ಬರು ಬೈಕ್ ಸವಾರರು ಬಲಿಯಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಈ ಒಂದು ಘಟನೆ ಸಂಭವಿಸಿದ್ದು, ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ಇದ್ದಂತಹ ಇಬ್ಬರು ಯುವಕರು ಸಾವನಪ್ಪಿದ್ದಾರೆ. ಈ ಒಂದು ಅಪಘಾತದಲ್ಲಿ ತೂಬಗೆರೆ ನಿವಾಸಿ ನಂದನ್ ಕುಮಾರ್ (22) ಹಾಗೂ ದೊಡ್ಡ ತಿಮ್ಮನಹಳ್ಳಿಯ ರವಿಕುಮಾರ್ (24) ಮೃತ ಯುವಕರು ಎಂದು ತಿಳಿದುಬಂದಿದೆ. ಮೃತರು ದೊಡ್ಡಬಳ್ಳಾಪುರ ನಗರದ ಎಲ್ ಅಂಡ್ ಟಿ ಕಂಪನಿಯ ಸಿಬ್ಬಂದಿಗಳು ಎಂದು ತಿಳಿದುಬಂದಿದೆ. ಬೈಕ್ ಗೆ ಹಿಂದಿನಿಂದ ವೇಗವಾಗಿ ಬಂದಂತಹ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ.ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಕೊಪ್ಪಳ : ಕೊಪ್ಪಳದಲ್ಲಿ ಹೃದಯ ವಿದ್ರಾವಕ ಒಂದು ಘಟನೆ ಒಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಬೆನಕಲ್ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳನ್ನು ಕೊಲೆ ಮಾಡಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ, ಇಬ್ಬರು ಮಕ್ಕಳನ್ನು ಕೊಂದು ತಾಯಾತ್ಮ ತಿಳಿ ಶರಣಾಗಿದ್ದಾಳೆ. ಮಕ್ಕಳಾದ ರಮೇಶ (4) ಮತ್ತು ಜಾನು (2) ಹತ್ತಿ ಗೈದು ಲಕ್ಷ್ಮವ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಬೆಂಗಳೂರು : ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್ ನಿಂದ ಪ್ರಯಾಣಿಕನೊಬ್ಬ ತನ್ನ ಬ್ಯಾಗ್ ನಲ್ಲಿ ಅಕ್ರಮವಾಗಿ ಎರಡೂವರೆ ಕೆಜಿ ಗಾಂಜಾವನ್ನು ತಂದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆಯ ವೇಳೆ ಸಿಗಿ ಬಿದ್ದಿದ್ದಾನೆ. ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡುವರೆ ಕೆಜಿ ಕಾಂಜಾ ಪತ್ತೆಯಾಗಿದೆ. ಬ್ಯಾಂಕಾಕ್ ನಿಂದ ಪ್ರಯಾಣಿಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ತನ್ನ ಬ್ಯಾಗ್ ನ ಕೆಳಭಾಗದಲ್ಲಿ ಅಂಟಿಸಿ ಗಾಂಜಾ ತಂದಿದ್ದ. ವಿಮಾನ ನಿಲ್ದಾಣದಲ್ಲಿ ಪೊಲೀಸರ ಪರಿಶೀಲನೆ ವೇಳೆ ಗಾಂಜಾ ಪತ್ತೆಯಾಗಿದೆ. ಸದ್ಯ ಕೆಂಪೇಗೌಡ ಏರ್ಪೋರ್ಟ್ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.














