Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಮುಖಂಡ ದೇವರಾಜೇಗೌಡ ಇದಕ್ಕೆಲ್ಲ ರೂವಾರಿಗಳು ಹಾಗೂ ಕಥಾನಾಯಕರು ಡಿಕೆ ಶಿವಕುಮಾರ್ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ LR ಶಿವರಾಮೇಗೌಡ ತಿರುಗೇಟು ನೀಡಿದ್ದು, ಬಿಜೆಪಿ ಹಾಗೂ ಕುಮಾರಸ್ವಾಮಿ ಪೆನ್ ಡ್ರೈವ್ ಮಹಾ ನಾಯಕರು ಎಂದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಖಂಡ ವಕೀಲ ದೇವರಾಜೇಗೌಡ ಒಬ್ಬ ಬ್ಲಾಕ್ ಮೇಲರ್. ಹಣಕ್ಕಾಗಿ ನಮ್ಮ ಬಳಿ ದೇವರಾಜೇಗೌಡ ಬಂದಿದ್ದ ಅನಿಸುತ್ತದೆ. ದೇವರಾಜೇಗೌಡ ಬಳಿ ಏನಿದೆಯೋ ಅದನ್ನೆಲ್ಲ ಬಿಡುಗಡೆ ಮಾಡಲಿ. ಬಿಜೆಪಿ ಮುಖಂಡ ದೇವರಾಜ ಗೌಡಗೆ ನಾನು ಯಾವುದೇ ರೀತಿಯಾದಂತಹ ಆಮೀಷ ಒಡ್ಡಿಲ್ಲ ಎಂದರು. ಬಿಜೆಪಿ ಹಾಗೂ ಹೆಚ್‍ಡಿ ಕುಮಾರಸ್ವಾಮಿಯೇ ಪೆನ್ ಡ್ರೈವ್ ಮಹಾ ನಾಯಕರು.ಇಡೀ ಪ್ರಕರಣದಲ್ಲಿ ನನ್ನ ಪಾತ್ರವೂ ಇಲ್ಲ ಡಿಸಿಎಂ ಡಿಕೆ ಪಾತ್ರವೂ ಇಲ್ಲ. ದೇವರಾಜ್ ಗೌಡನೇ ನನ್ನ ಬಳಿ ಬಂದು ಡಿಕೆ ಭೇಟಿ ಮಾಡಿಸಲು ಒತ್ತಾಯಿಸಿದ್ದ. ಹೀಗಾಗಿ ಡಿಕೆ ಶಿವಕುಮಾರ್ ಅವರ ಜೊತೆ ಒಂದು ನಿಮಿಷ ಮಾತನಾಡಿಸಿದೆ.ಪ್ರಕರಣವನ್ನು…
ಬೆಂಗಳೂರು : ವಸತಿ ಸಮೋಕ್ಷಯ ನಿರ್ಮಾಣದಲ್ಲಿ ಕೆಲಸ ಮಾಡುತ್ತಿದ್ದ ಜಾರ್ಖಂಡ್ ಮೂಲದ ಯುವಕನೊಬ್ಬ ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ರಿತೇಶ್ ಎಂದು ಹೇಳಲಾಗುತ್ತಿದ್ದು,ಮಣ್ಣಿನ ದಿಬ್ಬದ ಮೇಲಿಂದ ಬಿದ್ದು ಜಾರ್ಖಂಡ್ ಯುವಕ ಸಾವನ್ನಪ್ಪಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಿಕ್ಕ ಹೊಸಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದೆ. ಮೃತ ರಿತೇಶ್ ವಸತಿ ಸಮುಚ್ಚಯ ನಿರ್ಮಾಣ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ.
ಬೆಳಗಾವಿ : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇದ್ದರೂ ಕೂಡ, ಆದಾಗ ಅಕ್ರಮವಾಗಿ ಹಣ ಮಧ್ಯ ಸಾಗಾಟ ನಡೆಸುತ್ತಿರುವವರ ಮೇಲೆ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ಕಣ್ಣಿಟ್ಟಿದ್ದಾರೆ. ಹಗರಿ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹಂಚಿಕೆ ಇಲ್ಲದೆ ಮತದಾರರಿಗೆ ಹಣ ಹಂಚುತ್ತಿದ್ದ ಓರ್ವ ವ್ಯಕ್ತಿಯನ್ನು ಇದೀಗ ಪೊಲೀಸರು ಕೋಶಕ್ಕೆ ಪಡೆದಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಉಗಾರ ಬಿಕೆ ಗ್ರಾಮದಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಇನ್ನು ಇಬ್ಬರು ಪರಾರಿ ಆಗಿದ್ದಾರೆ. ಮತದಾರರಿಗೆ ತಲಾ 500 ರೂಪಾಯಿ ಹಂಚುತ್ತಿದ್ದ ಗೋಕಾಕ್ ಮೂಲದ ವ್ಯಕ್ತಿ ಎಂದು ಹೇಳಲಾಗುತ್ತಿದ್ದು 35,000 ನಗದು ಹಾಗೂ ಮತದಾರರ ಪಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತಂತೆ ಪ್ರಕರಣ ದಾಖಲಾಗಿದ್ದು ವಶಕ್ಕೆ ಪಡೆದಿರುವ ಆರೋಪಿಯನ್ನು ಇದೀಗ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ಬಿಸಿಲಿನಿಂದ ಬಸವಳಿದಿದ್ದ ಬೆಂಗಳೂರಿನ ಜನತೆಗೆ ವರುಣ ಕೃಪೆ ತೋರಿದ್ದು ಇದೀಗ ನಗರದ ಹಲವೆಡೆ ಬಿರುಗಾಳಿ ಸಮೇತ ಮಳೆ ಶುರುವಾಗಿದೆ. ಮುಂದಿನ 3 ಗಂಟೆಗಳಲ್ಲಿ ಮಳೆ ಸಾಧ್ಯತೆ ಎಂಬ ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಇದೀಗ ನಗರದ ಚಾಲುಕ್ಯ ಸರ್ಕಲ್, ಪ್ಯಾಲೇಸ್ ರಸ್ತೆ ಸೇರಿ ಹಲವೆಡೆ ಮಳೆರಾಯ ಆರ್ಭಟಿಸಿದ್ದಾನೆ. ಬೆಂಗಳೂರು ನಗರದ ಆನೇಕಲ್ ತಾಲೂಕಿನ, ಚಂದಾಪುರ, ವಣಕನಹಳ್ಳಿ, ಸೋಲೂರು ಗೋಮ್ಮಾಳಪುರ ಭಾಗದಲ್ಲಿ ಆಲಿಕಲ್ಲು ಮಳೆಯಾಗಿದೆ.ಅದೇ ರೀತಿಯಾಗಿ ಮುಂದಿನ 3 ಗಂಟೆಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಬಾಕಿ ವೇತನ ಬಿಡುಗಡೆಗೆ ಆಗ್ರಹಿಸಿ 108 ಆಂಬುಲೆನ್ಸ್ ಚಾಲಕರು ಮುಷ್ಕರ ನಡೆಸುತ್ತಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಮಾತನಾಡಿ, ಲೋಕಸಭೆ ಚುನಾವಣೆ ಇರುವುದರಿಂದ ಪುಷ್ಕರವನ್ನು ಕೈಬಿಡಿ ಎಂದು ಚಾಲಕರಲ್ಲಿ ಮನವಿ ಮಾಡಿದರು. ಬೆಂಗಳೂರಿನಲ್ಲಿ ಮುಷ್ಕರ ಕುರಿತು ಮಾತನಾಡಿದ ಅವರು, ಸಿಬ್ಬಂದಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣದ ಕೊರತೆ ಇಲ್ಲ. 108 ಆಂಬುಲೆನ್ಸ್ ಚಾಲಕರಿಗೆ ಪೂರ್ತಿ ಹಣ ನೀಡಿದ್ದೇವೆ. ವೇತನ ನೀಡುವಲ್ಲಿ ಸಣ್ಣ ಸಮಸ್ಯೆಯಾಗಿತ್ತು. ಆದರೆ ಸಂಬಳ ಕೊರತೆ ಮಾಡಿಲ್ಲ ಎಂದು ಅವರು ತಿಳಿಸಿದರು. ಇದು ಚುನಾವಣೆ ಸಮಯ ಬದಲಾವಣೆ ಮಾಡುವುದಕ್ಕೆ ಆಗುವುದಿಲ್ಲ. ಅಶೋಕ್ ಅವರೇ ನಿಮ್ಮ ಸರ್ಕಾರದ ಅವಧಿಯಲ್ಲಿ ಲೋಪವಾಗಿತ್ತು. ಚುನಾವಣಾ ನೀತಿ ಸಂಹಿತೆ ಇರುವುದರಿಂದ ಸಿಬ್ಬಂದಿ ಮುಷ್ಕರ ಕೈ ಬಿಡಿ ಎಂದು 108 ಆಂಬುಲೆನ್ಸ್ ಚಾಲಕರಿಗೆ ಮನವಿ ಮಾಡಿದರು. ಒಂದು ವೇಳೆ ಕೈ ಬಿಡದಿದ್ದರೆ ನಾವು ಪರ್ಯಾಯ ಕ್ರಮಕ್ಕೆ ಮುಂದಾಗುತ್ತೇವೆ 108 ಜನರಿಗೆ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದರು ನಮ್ಮ ಬಳಿ ಬೇರೆ ಚಾಲಕರಿದ್ದಾರೆ…
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಶೀಲ ವಿಡಿಯೋ ಪ್ರಕರಣಕ್ಕೆ ಇದೀಗ ಬಿಜೆಪಿ ಮುಖಂಡ ಹೊಸ ಸಿಡಿಸಿದ್ದು, ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹಸ್ತಕ್ಷೇಪವಿದೆ ಎಂದು ಮಾಡುವುದೇ ಕಾಂಗ್ರೆಸ್ ನವರ ಗುರಿಯಾಗಿತ್ತು ಎಂದು ಗಂಭೀರವಾದಂತಹ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾತನಾಡಿರುವ ಆಡಿಯೋವನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಮೂರು ದಿನದ ಹಿಂದೆ ಡಿಕೆ ಶಿವಕುಮಾರ್ ನನಗೆ ಕರೆ ಮಾಡಿದ್ದರು.ಸಂಧಾನಕ್ಕೆ ಶಿವರಾಮೇಗೌಡರನ್ನು ಕಳುಹಿಸಿದ್ದರು. ನನಗೆ ರಾತ್ರಿ 12:40ಕ್ಕೆ ಡಿಕೆ ಶಿವಕುಮಾರ್ ಕರೆ ಮಾಡಿದ್ದರು.ಮೋದಿ ಹಸ್ತಕ್ಷೇಪ ಇದೆ ಅಂತ ಪ್ರೂವ್ ಮಾಡುವುದೇ ಕಾಂಗ್ರೆಸ್ ನವರ ಗುರಿಯಾಗಿತ್ತು ಎಂದು ಆರೋಪಸಿದರು. ಈ ಪ್ರಕರಣದ ಬಗ್ಗೆ ದೇಶಾದ್ಯಂತ ಪ್ರಚಾರ ಮಾಡುವ ಉದ್ದೇಶವಾಗಿತ್ತು.ಅದಕ್ಕಾಗಿ ಕೈಜೋಡಿಸಬೇಕು ಎಂದು ನನ್ನನ್ನು ಕರೆದಿದ್ದರು. ಹತ್ತಕ್ಕೂ ಹೆಚ್ಚು ಬಾರಿ ಶಿವರಾಮೇಗೌಡ ನನ್ನ ಭೇಟಿಯಾಗಿದ್ದಾರೆ. ಒಂದೊಂದು ಟೈಮ್ ಅಲ್ಲಿ ಒಂದೊಂದು ರೀತಿ ನನ್ನ ಜೊತೆಗೆ ಮಾತನಾಡಿದ್ದಾರೆ.ಈ ಕೇಸ್…
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿರುದ್ಧ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ, ಪೆನ್ ಡ್ರೈವ್ ನ ಕಥಾನಾಯಕರೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗಂಭೀರವಾದ ಆರೋಪ ಮಾಡಿದರು.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್ ಡ್ರೈವ್ ಕಥಾನಾಯಕರೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಹಾಗೂ ಡಿಸಿಎಂ ಆಗಿರುವ ಡಿಕೆ ಶಿವಕುಮಾರ್ ಅವರೇ ಇದರ ರೂವಾರಿ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದರಲ್ಲಿ ಇನ್ನೊಬ್ಬರ ನಾಯಕರ ಆಡಿಯೋ ಸಹ ಇದೆ ದೇವರಾಜೇಗೌಡ ಮೇಲೆ ಕೆಸ್ ಹಾಕಲು ಈಗ ಹೊರಟಿದ್ದಾರೆ.ಡಿಸಿಎಂ ರವರು ಮಾತುಕತೆಗೆ ನನ್ನ ಬಳಿ ಕೆಲ ಜನರನ್ನು ಕಳುಹಿಸಿದ್ದರು.ಪೆನ್ ಡ್ರೈವ್ ಒಬ್ಬ ಮಹಾ ನಾಯಕನ ಬಳಿ ಹೋಗಿತ್ತು. ಡಿಕೆ ಮಾತಾಡಿರುವ ಆಡಿಯೋ ಬಿಡುಗಡೆ ಮಾಡಿದ ದೇವರಾಜ್ ಗೌಡ LR ಶಿವರಾಮೇಗೌಡ ಮೊದಲು ಮಾತನಾಡಿದರು ಆಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಗೆ ಫೋನ್ ಕೊಟ್ಟರು ಎಲ್ಲರ ಶಿವರಾಮೇಗೌಡರಿಂದ ಆಡಿಯೋದಲ್ಲಿ ಭರವಸೆ ನೀಡಿದರು ಎಂದು ಡಿಕೆ ಶಿವಕುಮಾರ್…
ಬೆಂಗಳೂರು : ತೀವ್ರ ಬರ ಹಾಗೂ ಅತ್ಯಂತ ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ್ದ ಜನರಿಗೆ ಇತ್ತೀಚಿಗೆ ಹಲವು ಕಡೆಗಳಲ್ಲಿ ಮಳೆಯಾಗಿ ಜನರ ಮುಖದಲ್ಲಿ ಸ್ವಲ್ಪ ನೆಮ್ಮದಿ ಕಾಣುವಂತಾಗಿದೆ.ಇದೀಗ ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಹಗುರ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆ ಸಾಧ್ಯತೆ ಇರಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ರಾಮನಗರದಲ್ಲಿ ಮಳೆಯಾಗಲಿದೆ. ಇವತ್ತು ಬೆಂಗಳೂರಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು ಈ ಕುರಿತಂತೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಕೊಡಗು : ಸಾಮಾನ್ಯವಾಗಿ ಚಿಕ್ಕ ಚಿಕ್ಕ ವಿಷಯಗಳಿಗೆ ಸಂಬಂಧಿಸಿದಂತೆ ಮದುವೆ ಮುರಿದು ಬಿದ್ದಿರುವುದನ್ನು ನಾವು ನೋಡಿದ್ದೇವೆ ಇದೀಗ ಅಂತಹದ್ದೇ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದ್ದು ಸಿಹಿ ಅಡುಗೆ ಮಾಡಿಲ್ಲ ಎಂದು ಆರೋಪಿಸಿ ಇದೀಗ ವರನ ಕಡೆಯವರು ಮದುವೆ ಮುರಿದಿದ್ದಾರೆ. ಹೌದು ಸಿಹಿ ಅಡುಗೆ ಮಾಡಿಲ್ಲ ಎಂದು ಮದುವೆ ಮುರಿದ ವರನ ಕಡೆಯವರು, ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ಈ ಒಂದು ಘಟನೆ ನಡೆದಿದೆ. ಸೋಮವಾರಪೇಟೆಯ ಛತ್ರ ಒಂದರಲ್ಲಿ ಮದುವೆಯೊಂದು ನಿಗದಿಯಾಗಿತ್ತು. ಸೋಮವಾರಪೇಟೆಯ ಹಾನಗಲ್ ಗ್ರಾಮದ ಯುವತಿ ಹಾಗೂ ಕುಣಿಗಲ್ ಯುವಕನ ಜೊತೆಗೆ ವಿವಾಹ ನಿಶ್ಚಯವಾಗಿತ್ತು. ಈ ವೇಳೆ ಅಡುಗೆಯಲ್ಲಿ ಸಿಹಿ ಮಾಡಿಲ್ಲ ಎಂದು ವರನ ಕಡೆಯವರು ತಗಾದೆ ತೆಗೆದಿದ್ದಾರೆ. ಇದೆ ಸಂದರ್ಭದಲ್ಲಿ ಮಧುಮಗ ಮತ್ತು ಮಧುಮಗಳು ಉಂಗುರವನ್ನು ಬಿಸಾಕಿದ್ದಾರೆ. ವಧು ಕಡೆ ವರದಕ್ಷಿಣೆ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಇದೀಗ ಸೋಮವಾರಪೇಟೆ ಠಾಣೆಯಲ್ಲಿ ವರನ ವಿರುದ್ಧ ಯುವತಿಯ ಕಡೆಯವರು ದೂರು ದಾಖಲಿಸಿದ್ದಾರೆ.
ಬೆಂಗಳೂರು : ಮಹಿಳೆ ಅಪಹರಣ ಪ್ರಕರಣದಲ್ಲಿ ಬಂದಿಯುತ ರಾಗಿರುವ ಶಾಸಕ ಎಚ್ಡಿ ರೇವಣ್ಣ ಅವರು ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನೀಗಾಗಿ ಮತ್ತೊಂದು ಅರ್ಜಿಯನ್ನು ಸಲ್ಲಿಸಿದ್ದರು.ಇದೀಗ ಈ ಒಂದು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ವಿಚಾರಣೆಯನ್ನು ನಾಳೆ ಮುಂದೂಡಿದೆ. ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ಅಪಹರಣಕ್ಕೆ ಒಳಗಾಗಿದ್ದ ಮಹಿಳೆಯ ಮಗ ಇತ್ತೀಚಿಗೆ ನನ್ನ ತಾಯಿ ಕಾಣೆಯಾಗಿದ್ದಾಳೆ ಹುಡುಕಿ ಕೊಡಿ ಎಂದು ದೂರು ಸಲ್ಲಿಸಿದ್ದ. ಈ ಪ್ರಕರಣದಲ್ಲಿ HD ರೇವಣ್ಣ ಹಾಗೂ ಭವಾನಿ ರೇವಣ್ಣ ಸಂಬಂಧಿಯಾಗಿರುವ ಸತೀಶ್ ಬಾಬು ವಿರುದ್ಧ FIR ದಾಖಲಾಗಿತ್ತು. ಕಳೆದ ಎರಡು ದಿನಗಳ ಹಿಂದೆ ಈ ಒಂದು ಪ್ರಕರಣದಲ್ಲಿ ಶಾಸಕ HD ರೇವಣ್ಣ ಅವರನ್ನು ಬಂಧಿಸಲಾಗಿತ್ತು.ಬಂಧನಕ್ಕೂ ಮುನ್ನ ಅವರು ನಿರೀಕ್ಷಣಾ ಜಾಮೀನನ್ನು ಸಲ್ಲಿಸಿದ್ದರು. ಆದರೆ ಅದನ್ನು ಕೋರ್ಟ್ ಅದನ್ನು ಮುಕ್ತಾಯಗೊಳಿಸಿದ್ದು ಇದೀಗ ಬಂಧನದಲ್ಲಿರುವ ರೇವಣ್ಣ ಅವರು ಮತ್ತೆ ಜಾಮೀನಿಗಾಗಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ನಾಳೆಗೆ ಮುಂದೂಡಿದೆ.