Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ತುಮಕೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತಂತೆ ಈಗಾಗಲೇ ಹಲವಾರು ಚರ್ಚೆಗಳು ಆರಂಭವಾಗಿದ್ದು ಇತ್ತೀಚಿಗೆ ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ತಂದೆ ರಾಜಕೀಯ ಕೊನೆಗಾಲದಲ್ಲಿ ಇದ್ದಾರೆ ಅವರ ನಂತರ ಹಿಂದೂ ಸಂಘಟನೆಯನ್ನು ಸತೀಶ್ ಜಾರಕಿಹೊಳಿ ಮುನ್ನಡೆಸಲಿದ್ದಾರೆ ಆ ಅರ್ಹತೆ ಅವರಿಗಿದೆ ಇದೆ ಎಂದು ಪರೋಕ್ಷವಾಗಿ ನೆಕ್ಸ್ಟ್ ಸಿಎಂ ಸತೀಶ್ ಜಾರಕಿಹೊಳಿ ಎಂದು ಹೇಳಿಕೆ ನೀಡಿದರು. ಅಲ್ಲದೇ ಇಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಕೆ.ಎಚ್ ಮುನಿಯಪ್ಪ ಅವರು ಹಿರಿಯರು ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ.ಅವರು ಮುಖ್ಯಮಂತ್ರಿ ಆದರೆ ನನಗೆ ತುಂಬಾ ಖುಷಿಯಾಗುತ್ತದೆ. ನಾನು ಅದನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದೀಗ ವೀರಭದ್ರ ಸ್ವಾಮಿಜಿಗಳು ಜಿ.ಪರಮೇಶ್ವರ್ ಅವರು ಮುಖ್ಯಮಂತ್ರಿ ಆಗಲಿ ಎಂದು ತಮ್ಮ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ನಡೆದ ಸಿದ್ದರಬೆಟ್ಟದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಚೆಟ್ಟೇನಹಳ್ಳಿಯಲ್ಲಿ ಧಾರ್ಮಿಕ ಸಭೆಯಲ್ಲಿ ಹೇಳಿಕೆ ನೀಡಿದ್ದು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಚೆಟ್ಟೇನಹಳ್ಳಿ ಪರಮೇಶ್ವರ್ ಸಿಎಂ ಆಗಲಿ ಎನ್ನುವುದು…
ಮಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಈಗಾಗಲೇ ಭಾರಿ ಚರ್ಚೆ ನಡೆಯುತ್ತಿದ್ದು ಅದರ ಜೊತೆಗೆ ಸಂಪುಟ ಪುನಾರ ರಚನೆ ಕುರಿತಂತೆ ಹಲವು ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ ಇದೀಗ ಐದು ವರ್ಷಗಳ ಕಾಲ ನೀವೇ ಮುಖ್ಯಮಂತ್ರಿನ ಅಂತ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ತೀರ್ಮಾನ ಮಾಡಿದರೆ ನಾನೇ ಮುಖ್ಯಮಂತ್ರಿ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು. ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು 5 ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರಿಯಲಿದ್ದಾರೆ ಅದಕ್ಕೆ ನಿಮ್ಮ ಅಭಿಪ್ರಾಯ ಏನು ಅಂತ ಕೇಳಿದಾಗ ಒಂದು ವೇಳೆ ಹೈಕಮಾಂಡ್ ಮನಸ್ಸು ಮಾಡಿದರೆ ಐದು ವರ್ಷಗಳ ಕಾಲ ಕೂಡ ನಾನೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತೇನೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಒಂದು ಹೇಳಿಕೆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಸಿಎಂ ಆಗಲು ತುದಿಗಾಲಲಿ ನಿಂತಿರುವ ಎಲ್ಲ ನಾಯಕರಿಗೂ ಸ್ಪಷ್ಟ ಸಂದೇಶ ನೀಡಿದ್ದಾರೆ ಎನ್ನಲಾಗುತ್ತಿದೆ.
ಕೋಲಾರ : ಮದ್ಯ ಸೇವನೆ ಬಳಿಕ ಸ್ನಾಕ್ಸ್ ನೀಡಿದ್ದಕ್ಕೆ ಬಾರ್ ಕ್ಯಾಶಿಯರ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೊಲೆ ನಡೆದ 24 ಗಂಟೆಯಲ್ಲೇ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಠಾಣೆ ಪೊಲೀಸರು ಕೊಲೆ ಆರೋಪಿ ಸುಭಾಷ್ ಅಲಿಯಾಸ್ ಮಿಯಾನನ್ನ ಅರೆಸ್ಟ್ ಮಾಡಿದ್ದಾರೆ. ಬಾರ್ ಮುಚ್ಚುವ ವೇಳೆ ಬಂದು ಸ್ನಾಕ್ಸ್ ಕೊಡಿ ಅಂತ ಸುಭಾಷ್ ಕಿರುಕುಳ ನೀಡಿದ್ದಾನೆ. ಈ ವೇಳೆ ಕುಮಾರ್ ಸ್ನಾಕ್ಸ್ ಕೊಡಲು ಆಗಲ್ಲ ಅಂತ ಹೇಳಿದಾಗ ಕುಮಾರ ಪತ್ನಿ ಮತ್ತು ಮಕ್ಕಳ ಎದುರೇ ಸುಭಾಷ್ ಚಾಕು ಇರಿದು ಕುಮಾರನನ್ನ ಭೀಕರವಾಗಿ ಕೊಲೆ ಮಾಡಿದ್ದ. ಇದೀಗ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು 24 ಗಂಟೆಯಲ್ಲಿ ಆರೋಪಿ ಸುಭಾಷ್ ನನ್ನ ಅರೆಸ್ಟ್ ಮಾಡಿದ್ದಾರೆ.
ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಎರಡು ವರ್ಷದ ಮಗುವೊಂದು ರಸ್ತೆಯಲ್ಲಿ ಆಟವಾಡುತ್ತಿರುವಾಗ ವೇಗವಾಗಿ ಬಂದಂತಹ ಕಾರು ಒಂದು ಡಿಕ್ಕಿ ಹೊಡೆದ ಪರಿಣಾಮ, ಎರಡು ವರ್ಷದ ಮಗು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಸಾವನ್ನಪ್ಪಿದೆ. ಶಿವಮೊಗ್ಗ ಹೊರವಲಯದ ವೀರೂಪಿನ ಕೊಪ್ಪದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಕಾರು ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡಿದ್ದ ವಿನಯ್ (2) ಇದೀಗ ದುರ್ಮರಣ ಹೊಂದಿದ್ದಾನೆ. ಅಪಘಾತವಾದ ತಕ್ಷಣ ಮಗುವನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.
ಹಾಸನ : ಹಾಸನದಲ್ಲಿ ಯುವಕನ ಬರ್ಬರ ಕೊಲೆ ಆಗಿದ್ದು, ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಈ ಒಂದು ಕೊಲೆ ನಡೆದಿದೆ. ಬೇಲೂರು ಪಟ್ಟಣದ ಹೊಳೆ ಬೀದಿಯ ನಿವಾಸಿ ಗಿರೀಶ್ (22) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಕೊಲೆಗೈದು ಅಜ್ಜಯ್ಯನ ಹಳ್ಳಿಯ ನಿವಾಸಿ ಶ್ರೀನಿವಾಸ್ ಪರಾರಿಯಾಗಿದ್ದಾನೆ. ಕೊಲೆ ಕುರಿತಂತೆ ಬೇಲೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಒಂದು ಕಡೆ ನವೆಂಬರ್ ನಲ್ಲಿ ಸಂಪುಟ ಪುನಾರಚನೆ ಆಗಲಿದೆ ಎಂದು ಹೇಳಲಾಗುತ್ತಿದ್ದು ಮತ್ತೊಂದು ಕಡೆಗೆ ನಾಯಕತ್ವ ಬದಲಾವಣೆ ಕೂಗು ಸಹ ಕೇಳಿ ಬಂದಿದೆ. ಇದೇ ವಿಚಾರವಾಗಿ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆಯ ಅಗತ್ಯವಿದ್ರೆ ಬಿಹಾರ ಚುನಾವಣೆಯ ಬಳಿಕ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ತೀರ್ಮಾನ ಕೈಗೊಳ್ಳುವುದು ಹೈಕಮಾಂಡ್. ನಾವು ಇಲ್ಲಿ ಕುಳಿತುಕೊಂಡು ತೀರ್ಮಾನ ಕೈಗೊಳ್ಳಲು ಆಗುವುದಿಲ್ಲ. ಅವಶ್ಯಕತೆ ಇದ್ದರೆ ಬಿಹಾರ ಚುನಾವಣೆ ನಂತರ ಹೈಕಮಾಂಡ್ನವರೇ ತೀರ್ಮಾನ ಮಾಡುತ್ತಾರೆ. ಪುನಾರಚನೆಯೋ?, ಎರಡೂವರೆ ವರ್ಷದ ನಂತರ ಅಧಿಕಾರ ಬದಲಾವಣೆಯೋ?, ಏನೇ ಇದ್ರೂ ಹೈಕಮಾಂಡ್ ತೀರ್ಮಾನ ಮಾಡಲಿದೆ. ನಾವು ಇಲ್ಲಿ ಮಾತಾಡೋದರಿಂದ ಗೊಂದಲ ಆಗುತ್ತೆ ಎಂದರು. ಶಿವಕುಮಾರ್ ಅವರಿಗೆ ಹೋಲಿಕೆ ಮಾಡುವ ನಾಯಕರು ಈಗ ಯಾರಿದ್ದಾರೆ?. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಹೇಳೋದಕ್ಕೆ ನಮಗೆ ಸಾಮರ್ಥ್ಯ ಇಲ್ಲ. ಅವರು ನಮ್ಮ ನಾಯಕರು. ನಮ್ಮ…
ನವದೆಹಲಿ : ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ವಿಚಾರಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಂಡು ವರದಿ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿದೆ. ಪಶ್ಚಿಮಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅನುಸರಣಾ ವರದಿಗಳನ್ನು ಸಲ್ಲಿಸಲು ವಿಫಲರಾದ ಕಾರಣ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದೆ. ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಈ ಕುರಿತು ಸೂಚನೆ ನೀಡಿದ್ದು, ಮುಂದಿನ ವಿಚಾರಣೆ ನವೆಂಬರ್ 3ರಂದು ಅಧಿಕಾರಿಗಳು ಹಾಜರಾಗದಿದ್ದರೆ ಕಠಿಣವಾದ ಕ್ರಮ ಕೈಗೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿತು. ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಸಂದೀಪ ಮೆಹೆತ ಹಾಗೂ ಎನ್.ವಿ ಅಂಜಾರಿಯಾ ಅವರ ಪೀಠದಿಂದ ಆದೇಶ ಹೊರಡಿಸಲಾಗಿದೆ. 2023ರ ಪ್ರಾಣಿ ಜನನ ನಿಯಂತ್ರಣ ನಿಯಮಗಳ ಅನುಷ್ಠಾನದ ಕುರಿತು ವರದಿ ಸಲ್ಲಿಸದ ರಾಜ್ಯಗಳ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದುವರೆಗೂ ಪಶ್ಚಿಮಬಂಗಾಳ, ದೆಹಲಿ ಮತ್ತು ತೆಲಂಗಾಣ ರಾಜ್ಯಗಳು ಮಾತ್ರ ಪಾಲಿಸಿದ್ದು ನವೆಂಬರ್ 3ರಂದು ಎಲ್ಲಾ ರಾಜ್ಯಗಳ ಮುಖ್ಯ…
ಚಿಕ್ಕಬಳ್ಳಾಪುರ : ಅಂತರಾಷ್ಟ್ರೀಯ ದರೋಡೆಕೋರ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರನ್ನು ಟಿಪ್ಪು ಸುಲ್ತಾನ್ ಬೇಸಿಗೆ ಅರಮನೆ ಮೇಲೆ ಬರೆದು ಕಿಡಿಗೇಡಿಗಳು ವಿಕೃತಿ ಮೆರೆದಿದ್ದಾರೆ. ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯಿ ಬರೆದು ವಿಕೃತಿ ಮೆರೆದಿದ್ದಾರೆ. ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ಇರುವಂತಹ ಟಿಪ್ಪು ಬೇಸಿಗೆ ಅರಮನೆಯ ಮೇಲೆ ಕಿಡಿಗೇಡಿಗಳು ಈ ರೀತಿ ಹೆಸರು ಬರೆದು ವಿಕೃತಿ ಮೆರೆದಿದ್ದಾರೆ. ಲಾರೆನ್ಸ್ ಬಿಷ್ಣೋಯಿ ಕುಖ್ಯಾತ ಅಂತರಾಷ್ಟ್ರೀಯ ದರೋಡೆಕೋರನಾಗಿದ್ದು ಭಾರತೀಯ ಪುರಾತತ್ವ ಇಲಾಖೆ ಅಧೀನದಲ್ಲಿ ಈ ಒಂದು ಅರಮನೆ ಇದೆ. ಅರಮನೆಯ ಗೋಡೆಯ ಮೇಲೆ ಲಾರೆನ್ಸ್ ಬಿಷ್ಣೋಯಿ ಹೆಸರು ಕೆತ್ತನೆ ಮಾಡಿ ವಿಕೃತಿ ಮೆರೆದಿದ್ದಾರೆ. ಪ್ರವಾಸಕ್ಕೆ ಎಂದು ಬರುವ ಪ್ರವಾಸಿಗರು ಈ ಒಂದು ಹೆಸರು ಬರೆದಿದ್ದಕ್ಕೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.
ಮೈಸೂರು : ನಿನ್ನೆ ಮೈಸೂರಲ್ಲಿ ಹುಲಿ ದಾಳಿಯಿಂದ ರೈತ ರಾಜಶೇಖರ್ (58) ಸಾವನಪ್ಪಿದ್ದ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಮೈಸೂರು ಎಸ್ಪಿಗೆ ರಾಜ್ಯ ರೈತ ಸಂಘ ಲಿಖಿತವಾಗಿ ದೂರು ಸಲ್ಲಿಸಿದೆ. ಹೌದು ಅರಣ್ಯ ಇಲಾಖೆ ನಿರ್ಲಕ್ಷಕ್ಕೆ ರೈತ ರಾಜಶೇಖರ್ ಬಲಿಯಾಗಿದ್ದಾನೆ. ಅರಣ್ಯಾಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಜ್ಯ ರೈತ ಸಂಘ ಲಿಖಿತವಾಗಿ ಎಸ್‌ಪಿಎ ದೂರು ನೀಡಿದ್ದಾರೆ. ಬೆಣ್ಣೆಗೆರೆಯಲ್ಲಿ ನಿನ್ನೆ ಹುಲಿ ದಾಳಿಗೆ ರೈತ ರಾಜಶೇಖರ್ ಬಲಿಯಾಗಿದ್ದ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬಣ್ಣಿಗೆರೆ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಅಧಿಕಾರಿಗಳ ನಿರ್ಲಕ್ಷದಿಂದ ಈ ಘಟನೆ ಸಂಭವಿಸಿದೆ ಎಂದು ರೈತರು ಅಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು : ಇತ್ತೀಚಿಗೆ ಸೈಬರ್ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಅಮಾಯಕರು ಸೈಬರ್ ವಂಚನೆಗೆ ಬಲಿಯಾಗುತ್ತಿದ್ದಾರೆ. ಇದೀಗ ವಿದೇಶದಲ್ಲಿ ಕುಳಿತು ಬೆಂಗಳೂರಿನಲ್ಲಿರುವ ವಿಸ್ಡಮ್ ಫೈನಾನ್ಸ್ ಕಂಪನಿಯ ಬ್ಯಾಂಕ್ ಖಾತೆ ಹ್ಯಾಕ್ ಮಾಡಿ ಕೋಟಿ ಕೋಟಿ ಲೂಟಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಮೂಲದ ಆರೋಪಿಯನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇಸ್ಮಾಯಿಲ್ ಬಂಧಿತ ಆರೋಪಿ. ಕೇಸ್ ಸಂಬಂಧ ಹ್ಯಾಕ್ ಮಾಡುವ ತಂಡದ ಜೊತೆಗೆ ಲಿಂಕ್ ಹೊಂದಿದ್ದ ಬೆಳಗಾವಿ ಮೂಲದ ಆರೋಪಿ ಇಸ್ಮಾಯಿಲ್‌ನನ್ನ ಪೊಲೀಸರು ಬಂಧಿಸಿದ್ದಾರೆ. ದುಬೈ, ಚೀನಾ, ಹಾಂಕಾಂಗ್‌ನಲ್ಲಿ ಕುಳಿತು ಹ್ಯಾಕ್ ಮಾಡುತ್ತಿದ್ದ ತಂಡದೊಂದಿಗೆ ಇಸ್ಮಾಯಿಲ್ ಸಂಪರ್ಕದಲ್ಲಿದ್ದ, ಸರ್ವಸರ್ ಅಕ್ಸೆಸ್ ಕೂಡ ನೀಡಿದ್ದ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ವಂಚನೆ ಮಾಡಿದ್ದು ಹೇಗೆ? ವಿಪಿಎನ್ ನೆಟ್‌ವರ್ಕ್ ಬಳಸಿ ಬರೋಬ್ಬರಿ 47 ಕೋಟಿ ಕದ್ದ ಸೈಬರ್ ವಂಚಕರು ಹಣವನ್ನ 600 ನಕಲಿ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು, ಆತನ ಬ್ಯಾಂಕ್ ಖಾತೆಯಲ್ಲಿ 10 ಕೋಟಿ ಹಣ…














