Author: kannadanewsnow05

ರಾಯಚೂರು : ರಾಯಚೂರು ಗ್ರಾಮೀಣ ಪೊಲೀಸರು ಲಾಡ್ಜ್‌ವೊಂದರ ಮೇಲೆ ದಾಳಿ ನಡೆಸಿ ವೇಶ್ಯಾವಾಟಿಕೆ ಜಾಲವನ್ನು ಭೇದಿಸಿದ್ದಾರೆ. ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ 6ಮಹಿಳೆಯರನ್ನು ರಕ್ಷಣೆ ಮಾಡಿದ್ದು, ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿರುವ ಘಟನೆ ರಾಯಚೂರಲ್ಲಿ ನಡೆದಿದೆ. ಹೌದು ರಾಯಚೂರು ಗ್ರಾಮೀಣ ಪೊಲೀಸರು ನಡೆಸಿದ ಮಿಂಚಿನ ಕಾರ್ಯಾಚರಣೆ ವೇಳೆ ಲಾಡ್ಜ್‌ ನಲ್ಲಿ ನಡೆಯುತ್ತಿದ್ದ ವೇಶ್ಯೆವಾಟಿಕೆ ರಾಕೆಟ್‌ನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಕನೂರು ಕ್ರಾಸ್ ಬಳಿ ಇರುವ ಮೇಘಾ ರೆಸ್ಟೋರೆಂಟ್‌ ಹೊಟೇಲ್‌ ಮೇಲೆ ದಾಳಿ ನಡೆಸಿದ ಪೊಲೀಸರು 6 ಮಹಿಳೆಯರನ್ನು ರಕ್ಷಿಸಿದ್ದು, ಈ ದುಷ್ಕೃತ್ಯಕ್ಕೆ ತೊಡಗಿದ್ದ ನಾಲ್ವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಆರೋಪಿಗಳು ಈ ಕೃತ್ಯಕ್ಕಾಗಿ ಬಳಸುತ್ತಿದ್ದ ಎರಡು ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮುಂದಿನ ತನಿಖೆ ನಡೆಯುತ್ತಿದೆ. ಈ ಕಾರ್ಯಾಚರಣೆಯನ್ನು ರಾಯಚೂರು ಗ್ರಾಮೀಣ ಪೊಲೀಸ್…

Read More

ಮಂಗಳೂರು : ಹಿಂದೂ ಮುಖಂಡನ ಮೊಬೈಲ್​ನಲ್ಲಿ ರಾಜಕಾರಣಿ ಒಬ್ಬರ ಅಶ್ಲೀಲ ವಿಡಿಯೋ ಪತ್ತೆ ಆಗಿರುವ ಬಗ್ಗೆ ಕರಾವಳಿಯಲ್ಲಿ ಭಾರಿ ಚರ್ಚೆ ಶುರುವಾಗಿದೆ. ಮಂಗಳೂರು ಪೊಲೀಸರ ತನಿಖೆ ವೇಳೆ ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹಸಂಯೋಜಕ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ಏನಿದು ಘಟನೆ? 2024ರಲ್ಲಿ ಮೂಡುಬಿದಿರೆ ತಾಲೂಕಿನ ಮಿಜಾರು ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಹಾಗೂ ಅವರ ಪುತ್ರಿಗೆ, ಬಸ್ ಮಾಲಕನಿಗೆ ಒತ್ತಡ ಹಾಕಿ ಸಮಿತ್ ರಾಜ್ 5 ಲಕ್ಷ ರೂ. ಪರಿಹಾರ ತೆಗೆಸಿಕೊಟ್ಟಿದ್ದ ಎನ್ನಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಬಸ್ ಮಾಲಕ, ಸಮಿತ್ ರಾಜ್ ವಿರುದ್ಧ ಬೆದರಿಕೆ ಮತ್ತು ಅಕ್ರಮ ಹಣ ವಸೂಲಿ…

Read More

ಮುಂಬೈ : ನಮ್ಮ ಜಗಳಕ್ಕಿಂತ ಮರಾಠಿ ಭಾಷೆಗೆ ಮೊದಲ ಆದ್ಯತೆ ನೀಡುತ್ತೇವೆ ಯಾವುದೇ ಕಾರಣಕ್ಕೂ ಹಿಂದಿ ಹೇರಿಕೆ ಸಹಿಸುವುದಿಲ್ಲ. ಮಹಾರಾಷ್ಟ್ರದಲ್ಲಿರಬೇಕು ಅಂದರೆ, ಮರಾಠಿ ಭಾಷೆ ಕಲಿಯಬೇಕು ವಿನಾಕಾರಣ ಬೇರೊಬ್ಬರ ಮೇಲೆ ಹಲ್ಲೆ ನಡೆಸುವುದು ಸರಿಯಲ್ಲ ಎಂದು ಮಹಾರಾಷ್ಟ್ರದ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಈ ಒಂದು ಹೇಳಿಕೆ ನೀಡಿದರು. 20 ವರ್ಷಗಳ ಬಳಿಕ ಉದ್ಧವ್ ಠಾಕ್ರೆ ಹಾಗೂ ರಾಜ್ ಠಾಕ್ರೆ ಮತ್ತೆ ಒಂದಾಗಿದ್ದು, ಮರಾಠಿ ವಿಡಿಯೋ ರ್ಯಾಲಿಯಲ್ಲಿ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ದಶಕಗಳ ಬಳಿಕ ನಾನು ಮತ್ತು ರಾಜ್ ಠಾಕ್ರೆ ವೇದಿಕೆ ಹಂಚಿಕೊಂಡಿದ್ದೇವೆ. ರಾಜ್ ಠಾಕ್ರೆ ಬಹಳ ಅತ್ಯುತ್ತಮ ಭಾಷಣ ಮಾಡಿದ್ದಾರೆ. ಹಿಂದುತ್ವ ಅಂದರೆ ಏನೆಂದು ಬಿಜೆಪಿಯವರು ನಮಗೆ ಕಲಿಸಬೇಕಾಗಿಲ್ಲ. ನಾಯಕರನ್ನು ಬಳಸಿಕೊಂಡು ಬಿಡುವುದು ಬಿಜೆಪಿ ಅವರ ಪಾಲಿಸಿಯಾಗಿದೆ.ನಾವು ಹಿಂದೂ ಮತ್ತು ಹಿಂದೂತ್ವವನ್ನು ಬಿಟ್ಟಿಲ್ಲ ಮುಂದೆ ಕೂಡ ಬಿಡಲ್ಲ. ನ್ಯಾಯಕ್ಕಾಗಿ ನಾವು ಬಾಹುಬಲಿ ಆಗಲು ಸಿದ್ದರಿದ್ದೇವೆ. ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದತಿಗೆ ಶಿವಸೇನೆ ಬೆಂಬಲ ನೀಡಿದೆ ಎಂದು ಬಿಜೆಪಿ ವಿರುದ್ಧ ಉದ್ಧವ್…

Read More

ಕಲಬುರ್ಗಿ : ಕಲ್ಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಂದು ಮಹಾ ಎಡಬಟ್ಟು ಆಗಿದ್ದು ಐಸಿಯುವಿ ನಲ್ಲಿದ್ದ ರೋಗಿಯ ಗ್ಲುಕೋಸ್ ಪೈಪ್ ಕಳಚಿ ತೀವ್ರ ರಕ್ತಸ್ರಾವ ಆಗಿರುವ ಘಟನೆ ನಡೆದಿದೆ. ಜಿಮ್ಸ್ ಆಸ್ಪತ್ರೆಯ ಐಸಿಯುವಿನಲ್ಲಿ ಸಿದ್ದಣ್ಣ ಚಿಕಿತ್ಸೆ ಪಡೆಯುತ್ತಿದ್ದರು. ಕಲ್ಬುರ್ಗಿ ತಾಲೂಕಿನ ಮೇಳಕುಂದ ಗ್ರಾಮದ ನಿವಾಸಿ ಸಿದ್ದಣ್ಣ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದಣ್ಣ ವಿಷ ಸೇವಿಸಿದ್ದರಿಂದ ಕಳೆದ ನಾಲ್ಕು ದಿನಗಳ ಹಿಂದೆ ಸಿದ್ದಣ್ಣ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ತಡರಾತ್ರಿ ರಕ್ತಸ್ರಾವ ಆಗಿದ್ದರಿಂದ ಆರೋಗ್ಯದಲ್ಲಿ ಮತ್ತಷ್ಟು ಏರುಪೇರು ಉಂಟಾಗಿದೆ. ಗುಣಮುಖವಾಗುತ್ತಿದ್ದ ವೇಳೆ ರಕ್ತಸ್ರಾವವಾಗಿ ರೋಗಿಯ ಸ್ಥಿತಿ ಗಂಭೀರವಾಗಿದೆ. ಇಂದು ಬೆಳಿಗ್ಗೆ ಹೃದಯಾಘಾತ ಆಗಿದೆ ಅಂತ ವೈದ್ಯರು ಹೇಳಿದ್ದಾರೆ. ಕಲ್ಬುರ್ಗಿಯ ಜಿಮ್ಸ್ ವೈದರಿಂದ ಬೇಜವಾಬ್ದಾರಿ ಉತ್ತರ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

Read More

ದಕ್ಷಿಣಕನ್ನಡ : ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶನಿವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿದಿದ್ದಾರೆ. ಹೈಸ್ಕೂಲ್ ಓದುವ ಸಂದರ್ಭ ಸಹಪಾಠಿಯಾಗಿದ್ದು ಪ್ರಸ್ತುತ ಪದವಿ ವಿದ್ಯಾರ್ಥಿನಿಯಾಗಿರುವ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ ಆಕೆಯನ್ನು ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಕರೆಸಿ ಬಲವಂತದ ದೈಹಿಕ ಸಂಪರ್ಕ ಬೆಳೆಸಿದ್ದ ಯುವತಿ ಗರ್ಭವತಿಯಾಗಿದ್ದು ಇತ್ತೀಚೆಗಷ್ಟೆ ಆಕೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.ಈ ಮಧ್ಯೆ ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದ ಶ್ರೀಕೃಷ್ಣ ಜೆ.ರಾವ್ ಇದೀಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವುದಾಗಿ ಆರೋಪಿಸಿ ಸಂತ್ರಸ್ತೆ ಆತನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆರಂಭದಲ್ಲಿ ಜೂ.11ಕ್ಕೆ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.…

Read More

ಬೆಳಗಾವಿ : ಜಾತ್ರೆಗೆ ಬಂದೋಬಸ್ತ್ ಬಂದಿದ್ದ ASI ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಠಾಣೆ ಎಲ್‌ಜೆ ಮೀರಾನಾಯಕ್ (56) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಒಂದು ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ASI ಮೀರಾನಾಯಕ್ ಬಂದೋಬಸ್ತಿಗೆ ಬಂದಿದ್ದರು. ಈ ವೇಳೆ ಇಂದು ಮೀರಾನಾಯಕ ಅವರು ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಗೋಕಾಕ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಬೆಳಿಗ್ಗೆ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೀರಾ ನಾಯಕ್ ಸಾವನ್ನಪ್ಪಿದ್ದಾರೆ.ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಮೀರಾ ನಾಯಕ್ ಮೃತದೇಹವನು ಶಿಫ್ಟ್ ಮಾಡಲಾಗಿದೆ.ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

Read More

ಕಲಬುರ್ಗಿ : ಆರ್‌ಎಸ್‌ಎಸ್‌ ದೇಶದ್ರೋಹಿ ಸಂಘಟನೆಯಾಗಿದ್ದು, ಮೂರು ಬಾರಿ ನಿಷೇಧಕ್ಕೊಳಗಾಗಿದೆ. ಅದರ ಮೇಲಿನ ನಿಷೇಧ ತೆಗೆದಿದ್ದೇ ದೊಡ್ಡ ತಪ್ಪಾಗಿದೆ. ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಖಂಡಿತವಾಗಿಯೂ ಆರ್‌ಎಸ್‌ಎಸ್‌ಗೆ ನಿಷೇಧ ಹೇರುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ ಎಸ್ ಗೆ ನೂರು ವರ್ಷದ ಇತಿಹಾಸವಿದೆ ಎಂದು ಛಲವಾದಿ ನಾರಾಯಣ ಸ್ವಾಮಿ ಹೇಳಿಕೆಗೆ ಪ್ರಿಯಾಂಕ್ ತಿರುಗೇಟು ಕೊಟ್ಟಿದ್ದು, 10 ವರ್ಷದಲ್ಲಿ ಕೇವಲ 10 ಒಳ್ಳೆಯ ಕಾರ್ಯಕ್ರಮ ಇದ್ದರೆ ಹೇಳಿ. ದೇಶದ ಅಭಿವೃದ್ಧಿ ಮಹಿಳಾ ಸಬಲೀಕರಣಕ್ಕೆ ಆರ್ ಎಸ್ ಎಸ್ ಕೊಡುಗೆ ಏನಿದೆ? ನಾರಾಯಣಸ್ವಾಮಿ ಅವರಿಗೆ ತಮ್ಮ ಇತಿಹಾಸವೇ ಗೊತ್ತಿಲ್ಲ. ಇನ್ನು ಆರೆಸ್ಸೆಸ್ ಇತಿಹಾಸ ಏನು ಗೊತ್ತಿರುತ್ತದೆ ಎಂದು ಲೇವಡಿ ಮಾಡಿದರು. ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ಇನ್ನು ಮುಂದೆ ನಾನು ಪ್ರತಿಕ್ರಿಯೆ ನೀಡಲ್ಲ. ಸಾವರ್ಕರ್ ಬಗ್ಗೆ ದಾಖಲೆ ಕೊಟ್ಟರೆ ರಾಜೀನಾಮೆ ಕೊಡುತ್ತೇನೆ ಅಂದಿದ್ದರು. ಮೊದಲು ಕೊಟ್ಟ ಮಾತಿನಂತೆ ಚಲವಾದಿ ರಾಜೀನಾಮೆ…

Read More

ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ ಕ್ಯೂಟ್ ನಿಂದ ಎಲೆಕ್ಟ್ರಾನಿಕ್ ಅಂಗಡಿ ಒಂದು ಹೊತ್ತಿ ಉರಿದಿರುವ ಘಟನೆ ಆರ್ ಟಿ ನಗರದ ದಿನ್ನೂರು ಬಳಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಇಂದ ಎಲೆಕ್ಟ್ರಾನಿಕ್ ವಸ್ತುಗಳಿದ್ದ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಇಂದ ಅಂಗಡಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಅಂಗಡಿಯಲ್ಲಿ ಯಾರು ಇಲ್ಲವಾದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ಮೌಲ್ಯದ ವಸ್ತುಗಳು ಮಾತ್ರ ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿತು.

Read More

ಬೆಂಗಳೂರು :  ನಟಿ ರಶ್ಮಿಕಾ ಮಂದಣ್ಣ ಈ ಹಿಂದೆ ಕನ್ನಡಿಗರನ್ನು ಕೆಣಕಿ ಹಲವು ಹೇಳಿಕೆ ನೀಡುವ ಮೂಲಕ ವಿವಾದ ಸೃಷ್ಟಿಸಿದ್ದರು. ಇದೀಗ ರಶ್ಮಿಕ ಮಂದಣ್ಣ ಮತ್ತೊಂದು ಹೇಳಿಕೆ ನೀಡಿದ್ದು, ಕೊಡವ ಸಮುದಾಯದಿಂದ ಫಿಲಂ ಇಂಡಸ್ಟ್ರಿಗೆ ಯಾರು ಬಂದಿಲ್ಲ. ಕೊಡವ ಸಮುದಾಯದ ಮೊದಲ ನಟಿ ನಾನು ಎಂದು ಸಂದರ್ಶನ ಒಂದರಲ್ಲಿ ನಟಿ ರಶ್ಮಿಕ ಮಂದಣ್ಣ ಹೀಗೆ ಹೇಳಿ ಮತ್ತೊಂದು ವಿವಾದ ಸೃಷ್ಟಿ ಮಾಡಿದ್ದಾರೆ. ಹೌದು ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಕಂಟ್ರೋವರ್ಸಿ ಹೇಳಿಕೆ ನೀಡಿದ್ದು, ಕೊಡವ ಸಮುದಾಯದಿಂದ ಇದುವರೆಗೂ ಇಂಡಸ್ಟ್ರಿಗೆ ಯಾರು ಬಂದಿಲ್ಲ. ಕೊಡುವ ಸಮುದಾಯದ ಮೊದಲ ನಟಿ ನಾನೇ ಬರ್ಕದತ್ ನಡೆಸಿದ ಸಂದರ್ಶನದಲ್ಲಿ ನಟಿ ರಶ್ಮಿಕ ಮಂದಣ್ಣ ಈ ಹೇಳಿಕೆ ನೀಡಿದ್ದಾರೆ. ಇಂಡಸ್ಟ್ರಿಯಲ್ಲಿ ಈಗಾಗಲೇ ಕೊಡವ ಸಮುದಾಯದ ಹಲವಾರು ನಟಿಯರು ಇದ್ದಾರೆ. ನಟಿ ಪ್ರೇಮಾ, ನಿಧಿ ಸುಭಯ್ಯ, ಹರ್ಷಿಕಾ ಪೂಣಚ್ಚ, ಶುಭ್ರಾ ಅಯ್ಯಪ್ಪ ಸೇರಿದಂತೆ ಹಲವು ನಟಿಯರು ಈಗಾಗಲೇ ಕನ್ನಡ ಇಂಡಸ್ಟ್ರಿಯಲ್ಲಿ ಇದ್ದು, ಪ್ರೇಮಾ ಹಲವು ಭಾಷೆಗಳಲ್ಲಿ ನಟಿಸಿ ಖ್ಯಾತಿ ಪಡೆದಿದ್ದಾರೆ.…

Read More

ಶಿವಮೊಗ್ಗ : ದೇಶದ ಎರಡನೇ ಅತಿ ಉದ್ದದ ತೂಗು ಸೇತುವೆ ಸಿಗಂದೂರು ಸೇತುವೆ ಜುಲೈ 14ರಂದು ಲೋಕಾರ್ಪಣೆ ಆಗಲಿದೆ‌. ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಸೇತುವೆ ಉದ್ಘಾಟಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸ್ಥಳ ಇನ್ನಷ್ಟೆ ನಿಗದಿ ಆಗಬೇಕಿದೆ.ಇಂದಿನಿಂದ ಎರಡನೇ ಹಂತದ ಲೋಡ್ ಟೆಸ್ಟ್ ನಡೆಯಲಿದೆ. ಅಲ್ಲದೆ ಕೊನೆಯ ಹಂತದ ಕೆಲಸ ಕಾರ್ಯ ಬಾಕಿ ಇದೆ ಎಂದು ತಿಳಿಸಿದರು. ಇನ್ನು, ಸರ್ಕಾರದ ಆದೇಶದಲ್ಲಿ ಈ ಸೇತುವೆಗೆ ಹೊಳೆಬಾಗಿಲು ಕಳಸವಳ್ಳಿ ಸೇತುವೆ ಎಂದು ಉಲ್ಲೇಖಿಸಲಾಗಿದೆ. ಆದರೆ ಈ ಸೇತುವೆಗೆ ಸಿಗಂದೂರು ಚೌಡೇಶ್ವರಿ ಸೇತುವೆ ಎಂದು ನಾಮಕರಣ ಮಾಡಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಒತ್ತಾಯಿಸುತ್ತೇವೆ ಎಂದು ರಾಘವೇಂದ್ರ ತಿಳಿಸಿದರು.

Read More