Author: kannadanewsnow05

ಚಾಮರಾಜನಗರ : ತೋಟದ ಮನೆಯಲ್ಲಿ ಗೃಹಿಣಿ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಚಾಮರಾಜನಗರ ತಾಲೂಕಿನ ಡೋಲ್ಲಿಪುರ ಬಳಿ ಶುಭಾ (38) ಎನ್ನುವ ಮಹಿಳೆಯ ಭೀಕರ ಕೊಲೆಯಾಗಿತ್ತು. ಪತ್ನಿ ಶುಭಾಳನ್ನು ಪತಿ ಮಹೇಶ್ ಕೊಲೆ ಮಾಡಿ ಡ್ರಾಮ ಮಾಡಿದದ್ದು ಇದೀಗ ಬೆಳಕಿಗೆ ಬಂದಿದೆ. ಪತ್ನಿ ಪ್ರಗ್ನೆಂಟ್ ಆದಳು ಅನ್ನೋ ಕಾರಣಕ್ಕೆ ಮಹೇಶ್ ಪತ್ನಿ ಶುಭಾಳನ್ನು ಭೀಕರವಾಗಿ ಕೊಲೆ ಮಾಡಿದ್ದ. ಜೂನ್ 30ರಂದು ಡೋಲ್ಲಿಪುರದ ಎಚ್ ಡಿ ಫಾರೆಸ್ಟ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಪತ್ನಿಕೊಂದು ಬಳಿಕ ಏನು ಗೊತ್ತೇ ಇಲ್ಲ ಎಂಬಂತೆ ಪತಿ ಮಹೇಶ್ ಭಾರಿ ಡ್ರಾಮ ಮಾಡಿದ್ದ.ಮಹೇಶನ ಶರ್ಟ್ ಮೇಲಿದ್ದ ರಕ್ತದ ಕಲೆಯಿಂದ ಸುಳಿವು ಸಿಕ್ಕಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಪತ್ನಿ ಶುಭಾಳನ್ನು ಕೊಲೆ ಮಾಡಿದ್ದು ಇದೀಗ ಬೆಳಗೆಗೆ ಬಂದಿದೆ. ತೋಟದ ಮನೆಯಲ್ಲಿ ಪತಿ ಅತ್ತೆಯ ಜೊತೆಗೆ ಶುಭ ವಾಸವಿದ್ದಳು. ಸದ್ಯ ಆರೋಪಿ ಮಹೇಶನನ್ನು ಪೊಲೀಸರು ಅರೆಸ್ಟ್ ಮಾಡಿ ಜೈಲಿಗೆ ಅಟ್ಟಿದ್ದಾರೆ.

Read More

ಬೆಳಗಾವಿ : ಜಾತ್ರೆಗೆ ಬಂದೋಬಸ್ತ್ ಬಂದಿದ್ದ ASI ಒಬ್ಬರು ಹೃದಯಘಾತದಿಂದ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ನಡೆದಿದೆ. ಹುಬ್ಬಳ್ಳಿಯ ಎಪಿಎಂಸಿ ಠಾಣೆ ಎಲ್‌ಜೆ ಮೀರಾನಾಯಕ್ (56) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಒಂದು ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ASI ಮೀರಾನಾಯಕ್ ಬಂದೋಬಸ್ತಿಗೆ ಬಂದಿದ್ದರು. ಈ ವೇಳೆ ಇಂದು ಮೀರಾನಾಯಕ ಅವರು ತೀವ್ರ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಮೀರಾ ನಾಯಕ್ ಸಾವನ್ನಪ್ಪಿದ್ದಾರೆ.ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಮೀರಾ ನಾಯಕ್ ಮೃತದೇಹವನು ಶಿಫ್ಟ್ ಮಾಡಲಾಗಿದೆ.ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ.

Read More

ಬೆಂಗಳೂರು : ಶಿಕ್ಷಕರನ್ನು ರಜೆ, ಬೋಧಕೇತರ ದಿನ ಅಥವಾ ಸಮಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದೆಂದು ತಿಳಿಸಲಾಗಿದೆ. ಶಿಕ್ಷಕರಿಗೆ ಈ ಕಾರ್ಯಗಳಿಂದ ಯಾವುದೇ ವಿನಾಯಿತಿ ನೀಡಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಹೌದು ಸುಪ್ರೀಂ ಕೋರ್ಟ್‌ ಆದೇಶ ಹಾಗೂ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನ ಹಾಗೂ ಮಾರ್ಗಸೂಚಿಗಳಲ್ಲಿ ಶಿಕ್ಷಕರನ್ನು ರಜೆ, ಬೋಧಕೇತರ ದಿನ/ಸಮಯದಲ್ಲಿ ಮತದಾರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಕಾರ್ಯಕ್ಕೆ ನಿಯೋಜಿಸಬಹುದೆಂದು ತಿಳಿಸಲಾಗಿದೆ. ಈ ವಿಚಾರವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌ ಅವರು ಇತ್ತೀಚೆಗೆ ಆಯೋಗಕ್ಕೆ ಪತ್ರ ಬರೆದಿದ್ದರು. ಸಾರ್ವಜನಿಕ ಹಿತದೃಷ್ಟಿ ಅಡಿಯಲ್ಲಿ ವಿವಿಧ ಶಾಲಾ ಶಿಕ್ಷಕರನ್ನು ಚುನಾವಣಾ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿಸಿರುವುದನ್ನು ಹಿಂಪಡೆಯುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು/ಜಿಲ್ಲಾ ಚುನಾವಣಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್.ಯೋಗೇಶ್ವರ ಪತ್ರ ಬರೆದು ಸ್ಪಷ್ಟನೆ…

Read More

ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವುಗಳು ಸಂಭವಿಸುತ್ತಿದ್ದು ಹಾಸನ ಜಿಲ್ಲೆಯೊಂದರಲ್ಲಿ ಕಳೆದ 45 ದಿನಗಳಲ್ಲಿ ಇದುವರೆಗೂ 35 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದೀಗ ಚಿಕ್ಕಮಂಗಳೂರಿನಲ್ಲಿ ಊಟ ಮಾಡುವಾಗ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದು ಲಾರಿ ಚಾಲರೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ. ಹೌದು ಅಜ್ಜಂಪುರ ಪಟ್ಟಣದ ಲಾರಿ ಚಾಲಕ ಸಗೀರ್ ಅಹ್ಮದ್ (45) ಇದೀಗ ಸಾವನ್ನಪ್ಪಿದ್ದಾರೆ ಊಟ ಮಾಡುವಾಗಲೇ ಏಕಾಎಕಿ ಎದೆನೋವು ಕಾಣಿಸಿಕೊಂಡಿದೆ. ಎದೆನೋವು ಕಾಣಿಸಿಕೊಂಡು ಅಹಮದ್ ಕುಸಿದು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಿನ್ನೆ ಸಹ ಚಿಕ್ಕಮಗಳೂರಿನಲ್ಲಿ ಹೃದಯಾಘಾತಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದರು.

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಹೃದಯಘಾತದಿಂದ ಸರಣಿ ಸಾವುಗಳು ಸಂಭವಿಸಿದ್ದು ಈಗಾಗಲೇ ಸರ್ಕಾರ ನಿರ್ಮಿಸಿದ ತಾಂತ್ರಿಕ ಸಲಹಾ ಸಮಿತಿ ವರದಿಸಿದ್ದ ಪಡಿಸಿದ್ದು ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಇದರ ಬೆನ್ನಲ್ಲೆ ದೆಹಲಿಗೆ ಹೊರಡಬೇಕಿದ್ದ ವಿಮಾನದಲ್ಲಿ ಪೈಲಟ್ ಒಬ್ಬರು ಕುಸಿದು ಬಿದ್ದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಪೈಲಟ್ ವಿಮಾನದ ಕಾಕ್ಪೀಟ್ ನಲ್ಲಿ ಕುಸಿದು ಬಿದ್ದಿರುವ ಘಟನೆ ನಡೆದಿದೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಬೇಕಿದೆ ವಿಮಾನದಲ್ಲಿ ಈ ಒಂದು ಘಟನೆ ನಡೆದಿದೆ ಏರ್ ಇಂಡಿಯಾ AI 2414 ವಿಮಾನದಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದೆ. ಅನಾರೋಗ್ಯ ಹಿನ್ನೆಲೆಯಲ್ಲಿ ಪೈಲೆಟ್ ವಿಮಾನದಲ್ಲಿಯೇ ಕುಸಿದು ಬಿದ್ದಿದ್ದಾರೆ.ನಂತರ ಮತ್ತೊಬ್ಬ ಪೈಲೆಟ್ ನೇಮಿಸಿದ ಬಳಿಕ ವಿಮಾನ ದೆಹಲಿಗೆ ತೆರಳಿದೆ.

Read More

ಶನಿವಾರ ಆಂಜನೇಯ ಸ್ವಾಮಿಗೆ ವಿಶೇಷ ದಿನವಾಗಿದ್ದು ಈ ದಿನ ಈ ಆರು ಪವರ್ ಫುಲ್ ಮಂತ್ರಗಳನ್ನು ಹೇಳಿದರೆ ನಿಮ್ಮ ಕಷ್ಟಗಳು ದೂರವಾಗುವುದು. ಆ ಮಂತ್ರಗಳು ಯಾವುವು ನೋಡಿ.ಓಂ ಹನುಮತೇ ನಮಃ- ಈ ಮಂತ್ರ ಹೇಳುವುದರಿಂದ ನಿಮಗೆ ಕಾನೂನಿನ ವಿವಾದಗಳು, ಸಂಕಷ್ಟಗಳಿದ್ದರೆ ನಿವಾರಣೆಯಾಗುವುದು. ಓಂ ಹಂ ಹನುಮತೇ ರುದ್ರಾತ್ಮಕಾಯಂ ಹಮ್ ಫಟ್- ಈ ಮಂತ್ರವು ನಿಮ್ಮನ್ನು ಮೃತ್ಯುಭಯದಿಂದ ದೂರ ಮಾಡುತ್ತದೆ. ಅಕಾಲ ಮೃತ್ಯು ಭಯವಿದ್ದರೆ ತಪ್ಪದೇ ಈ ಮಂತ್ರವನ್ನು ಜಪಿಸಿ. ಓಂ ಹಂ ಪವನ ನಂದನಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಹನುಮಂತನ ಆಶೀರ್ವಾದ ಪಡೆಯುತ್ತೀರಿ. ವಿಶೇಷವಾಗಿ ಇದನ್ನು ಬ್ರಹ್ಮಚಾರಿಗಳು ಹೇಳಿದರೆ ಉತ್ತಮ. ಓಂ ನಮೊ ಹರಿ ಮರ್ಕಟ ಮರ್ಕಟಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ಶತ್ರುಭಯ ನಾಶವಾಗುತ್ತದೆ. ಓಂ ನಮೋ ಭಗವತೇ ಆಂಜನಾಯಾಯೇ ಮಹಾಬಲಾಯೇ ಸ್ವಾಹ- ಈ ಮಂತ್ರವನ್ನು ಹೇಳುವುದರಿಂದ ರೋಗ ಭಯ ನಾಶವಾಗಿ ನೀವು ಆರೋಗ್ಯವಂತರಾಗುತ್ತೀರಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ…

Read More

ಕೋಲಾರ : ಕೋಲಾರ ಹಾಲು ಒಕ್ಕೂಟ ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಪೋಟಿ ನಡೆದಿದ್ದು, ಇಂದು ಕೋಮಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಬೆಳಿಗ್ಗೆ 11 ಗಂಟೆಗೆ ಕೋಮುಲ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕೋಲಾರ ಹಾಲು ಒಕ್ಕೂಟದ ಕಚೇರಿಯಲ್ಲಿ ಈ ಒಂದು ಚುನಾವಣೆ ನಡೆಯಲಿದೆ. ಶಾಸಕ ಕೆ ವೈ ನಂಜೇಗೌಡ ಅದ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗುವುದು ಖಚಿತ ಎನ್ನಲಾಗುತ್ತಿದೆ. ಮೂರನೇ ಬಾರಿಗೆ ಅಧ್ಯಕ್ಷರಾಗಿ ನಂಜೇಗೌಡ ಆಯ್ಕೆಯಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಎಂಟು ನಿರ್ದೇಶಕರೊಂದಿಗೆ ಕೆ.ವೈ ನಂಜೇಗೌಡ ಸದ್ಯ ರೆಸಾರ್ಟ್ ನಲ್ಲಿದ್ದಾರೆ. ಕಳೆದ ಎರಡು ಬಾರಿ ಕೂಡ ಕೆವೈ ನಂಜೇಗೌಡ ಕೋಮುಲ್ ಅಧ್ಯಕ್ಷರಾಗಿದ್ದರು. ಈ ಬಾರಿಯೂ ಕೂಡ ಅವರೇ ಅಧ್ಯಕ್ಷರಾಗುವುದು ಖಚಿತ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, KSRTC ಬಸ್ ಗೆ ಹಿಂದಿನಿಂದ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬೆಳಿಗ್ಗೆ 4ಗಂಟೆಗೆ ನಡೆದಿದೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಸುಕಿನ ಜಾವ 4 ಗಂಟೆಗೆ ಈ ಒಂದು ಅಪಘಾತ ಸಂಭವಿಸಿದೆ. ಬೈಕ್ ಸವಾರ ಮೊಹಮ್ಮದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕೆಎಸ್ಆರ್ಟಿಸಿ ಬಸ್ ಗೆ ಹಿಂಬದಿಯಿಂದ ವೇಗವಾಗಿ ಬಂದಂತಹ ಬೈಕ್ ಡಿಕ್ಕಿಯಾಗಿ ಮಹಮ್ಮದ್ ಅಜರ್ ಸಾವನ್ನಪ್ಪಿದ್ದು, ಸದ್ಯ ಮೊಹಮ್ಮದ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯ ಶವಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಅಪಘಾತದ ಕುರಿತು ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮೈಸೂರು : ಮೈಸೂರಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು, ಸಿಲಿಂಡರ್ ಸ್ಪೋಟಗೊಂಡು, ಮನೆಯೊಂದು ಸಂಪೂರ್ಣವಾಗಿ ಛಿದ್ರ ಛಿದ್ರವಾಗಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದಂತಹ ಅತ್ತೆ, ಸೊಸೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನ ವಡ್ಡರಗುಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮೈಸೂರು ಜಿಲ್ಲೆಯ ಹುಣಸೂರಿನ ವಡ್ಡರಗುಡಿಯಲ್ಲಿ ಮನೆಯಲ್ಲಿ ಸಿಲಿಂಡರ್ ಸ್ಫೋಟಕ್ಕೆ ಮನೆಯ ಮೇಲ್ಚಾವಣಿಗೆ ಛಿದ್ರ ಛಿದ್ರವಾಗಿದೆ. 60 ಗ್ರಾಂ ಚಿನ್ನಾಭರಣ 3 ಲಕ್ಷ ನಗದು ಸೇರಿದಂತೆ 20 ಲಕ್ಷದಷ್ಟು ಸಂಪೂರ್ಣವಾಗಿ ನಾಶವಾಗಿದೆ. ಸಿಲಿಂಡರ್ ಸ್ಪೋಟಗೊಳ್ಳುತ್ತಿದ್ದಂತೆ ಮತ್ತೆ ಈರಮ್ಮ, ಸೊಸೆ ಶಾಂತಲಾ ತಕ್ಷಣ ಮನೆಯಿಂದ ಹೊರಗಡೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಳಿಗಿರಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು ಬೈಕಗೆ ಖಾಸಗಿ ಬಸ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಬಳಿ ಒಂದು ಅಪಘಾತ ಸಂಭವಿಸಿದೆ. ಮೃತ ಬೈಕ್ ಸವಾರನನ್ನು ಬಚ್ಚಬೋರನಹಟ್ಟಿ ಗ್ರಾಮದ ರಮೇಶ್ (35) ಎನ್ನುವವರು ಸಾವನ್ನಪ್ಪಿದ್ದಾರೆ. ಬೈಕ್ ಗೆ ಡಿಕ್ಕಿಯಾಗಿ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಒಂದು ಖಾಸಗಿ ಬಸ್ ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿತ್ತು ಅಪಘಾತ ಕುರಿತಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More