Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ವಿಜಯಪುರ : ಆರ್ ಎಸ್ ಎಸ್ ಪಾಠ ಸಂಚಲನಕ್ಕೆ ಅನುಮತಿ ನೀಡುವ ವಿಚಾರಕ್ಕೆ ಸಂಬಂಧಪಟ್ಟಂತೆ ವಿಜಯಪುರದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದು, ಅವರು ಏನು ಮಾಡುತ್ತಾರೆ ಮಾಡಲಿ ಅವರಿಗೆ ಅಧಿಕಾರ ಇರುವುದು ಏನು ಮಾಡುತ್ತಾರೆ ಮಾಡಲಿ ಇನ್ನೂ ಎರಡು ವರ್ಷ ಎಷ್ಟು ಹಾರಾಡುತ್ತಾರೆ ಹಾರಾಡಲಿ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಆಗ ಬಿವೈ ವಿಜಯೇಂದ್ರ ಏನು ಮುಖ್ಯಮಂತ್ರಿ ಆಗಿ ಬರುವುದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದರು. ವಿಜಯಪುರದಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಭವಿಷ್ಯದ ನಾಯಕ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಯತಿಂದ್ರ ಹೇಳಿದ್ದಾರೆ ಅಂದರೆ ಸಿಎಂ ಸಿದ್ದರಾಮಯ್ಯ ಹೇಳಿದಂತೆ, ಬೆಂಗಳೂರಿನಲ್ಲಿ ಕುಳಿತು ಕಲೆಕ್ಷನ್ ಯಾರು ಮಾಡುತ್ತಿದ್ದಾರೆ. ಯತೀಂದ್ರ ಮತ್ತು ಭೈರತಿ ಸುರೇಶ್ ಇಬ್ಬರು ಕಲೆಕ್ಷನ್ ಮಾಸ್ಟರ್ ಗಳು. ಸಿಎಂ ಸಿದ್ದರಾಮಯ್ಯನವರು ಕಲೆಕ್ಷನ್ ಮಾಡಲು ಬಿಟ್ಟಿದ್ದಾರೆ. ಯತೀಂದ್ರ ಏನು ಹೇಳುತ್ತಾರೋ ಅದನ್ನು ಸಿದ್ದರಾಮಯ್ಯ ಹೇಳಿದಂತೆ. ಸತೀಶ್ ಜಾರಕಿಹೊಳಿ ಅಯೋಗ್ಯನಿದ್ದಾನೆ ಎಂದು ಸಿದ್ದರಾಮಯ್ಯ ಹೇಳಲಿ…
ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಓವರ್ ಟೇಕ್ ವೇಳೆ ಕಾರಿಗೆ ಮತ್ತೊಂದು l ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟಡ್ ಮಧುವನಹಳ್ಳಿ ಬೈಪಾಸ್ ಔಟರ್ ರಿಂಗ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಕೊಳೆಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ಐ 10 ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾಂತರಾಜ್, ಸೋಮಣ್ಣ, ಮೂರ್ತಿ, ಖುಷಿ ಹಾಗೂ ಸ್ವಾತಿಗೆ ಗಂಭೀರವಾದ ಗಾಯಗಳಾಗಿದ್ದು ಗಾಯಾಳುಗಳಿಗೆ ಕೊಳ್ಳೇಗಾಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಗುದ್ದಿಸಿ ಪರಾರಿಯಾದ ಚಾಲಕನಿಗೆ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.
ಬೆಂಗಳೂರು : ಬೆಂಗಳೂರಲ್ಲಿ ಈರುಳ್ಳಿ ಮೂಟೆ ಅಡಿ ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡಲಾಗುತ್ತಿತ್ತು ಟೆಂಪೋದಲ್ಲಿ ಈರುಳ್ಳಿ ಮೂಟೆ ಅಂತ ಶ್ರೀಗಂಧ ಸಾಗಾಟ ಮಾರಾಟ ಮಾಡಲಾಗುತ್ತಿತ್ತು ಸುಮಾರು ಒಂದು ಕೋಟಿಗೂ ಹೆಚ್ಚು ಮೌಲ್ಯದ 750 ಕೆಜಿ ಶ್ರೀಗಂಧವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ನಿಂದ 750 ಕೆಜಿ ಶ್ರೀಗಂಧವನ್ನು ಬೆಂಗಳೂರಿಗೆ ಆರೋಪಿಗಳು ಸಾಗಾಟ ಮಾಡುತ್ತಿದ್ದರು. ನಕ ಬಂದಿಹಾಕಿ ಪೊಲೀಸರು ತಪಾಸಣೆ ನಡೆಸಿದ ಸಂದರ್ಭದಲ್ಲಿ ಪಿಕಪ್ ವಾಹನ ಬರುತ್ತಿರುವಾಗ ಅದನ್ನು ಪರಿಶೀಲನೆ ಮಾಡಿದಾಗ ಅದರ ಮೇಲ್ಭಾಗದಲ್ಲಿ ಈರುಳ್ಳಿ ಮೂಟೆ ಏರಿಸಲಾಗುತ್ತೆ ಬಳಿಕ ಕೆಳಗಡೆ ಇನ್ನಷ್ಟು ಪರಿಶೀಲನೆ ಮಾಡಿದಾಗ ಶ್ರೀಗಂಧದ ಮರದ ತುಂಡುಗಳು ಪತ್ತೆಯಾಗಿವೆ. 18 ಬ್ಯಾಗ್ ಗಳ್ಳಲ್ಲಿ ಶ್ರೀಗಂಧ ಮರದ ತುಂಡುಗಳನ್ನು ಪೊಲೀಸರು ಅವವಶಕ್ಕೆ ಶ್ಯಕ ಪಡೆದುಕೊಂಡಿದ್ದು, ಸಿದ್ದಾಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಶೇಕ್ ಶಾರುಖ್, ಶೇಕ್ ಅಬ್ದುಲ್ ಕಲಾಂ, ಪರಮೇಶ್ ರಾಮ ಭೂಪಾಲ್ ನನ್ನು ರೆಸ್ಟ್ ಮಾಡಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಡೀಲರ್ ಒಬ್ಬರಿಗೆ ಮಾರಾಟ ಮಾಡಲು ಸಾಗಾಟ…
ಮೈಸೂರು : ಮೈಸೂರಿನಲ್ಲಿ ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿಯಾಗಿದ್ದಾನೆ. ಹುಲಿ ದಾಳಿಯಿಂದ ರೈತ ರಾಜಶೇಖರ್ (58) ಸಾವನಪ್ಪಿದ್ದು ಜಮೀನಿನಲ್ಲಿ ದನ ಮೇಯಿಸುವಾಗ ಹುಲಿ ಏಕಾಏಕಿ ದಾಳಿ ಮಾಡಿದೆ. ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬೆನ್ನೆಕೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಖಂಡಿಸಿ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಬೆಳಗಾವಿ : ರಾಜ್ಯ ರಾಜಕಾರಣದಲ್ಲಿ ನವೆಂಬರ್ ನಲ್ಲಿ ಭಾರಿ ಬದಲಾವಣೆ ಆಗಲಿದೆ ಎಂದು ಈಗಾಗಲೇ ಹಲವು ನಾಯಕರು ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೆ, ಜನವರಿಯಲ್ಲಿ ನನಗೆ ಶುಕ್ರದೆಸೆ ಬರುವುದು ಪಕ್ಕಾ ಎನ್ನುವ ಮೂಲಕ ಸಂಪುಟ ಪುನಾರಚನೆಯಲ್ಲಿ ಸಚಿವನಾಗುವ ಇಂಗಿತವನ್ನ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಕ್ತಪಡಿಸಿದ್ದಾರೆ. ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ಸಂಪುಟ ಪುನರ್ ರಚನೆ ಆಗುವುದು ಮೊದಲೇ ಗೊತ್ತಿತ್ತು.ಶನಿವಾರ ಬೆಳಗಾವಿಯಲ್ಲಿ ಸಿಎಂ ಸಹ ಹೇಳಿದ್ದಾರೆ. ನನಗೆ ಸಚಿವನಾಗುವ ಸಂದರ್ಭ ಬರಲಿ. ಆ ಸಂದರ್ಭದಲ್ಲಿ ನಾನು ಪ್ರತಿಕ್ರಿಯೆ ನೀಡುತ್ತೇನೆ. ನಾವು ಯಾವುದೇ ಅಧಿಕಾರವನ್ನ ಕೇಳಿ ಪಡೆದವನಲ್ಲ. ಭಗವಂತನ ಆಶೀರ್ವಾದ ಹಾಗೂ ಹೈಕಮಾಂಡ್ ಇಚ್ಛೆ ಇದ್ರೆ ಸಚಿವ ಸ್ಥಾನ ನನಗೆ ತಾನಾಗಿಯೇ ಬರುತ್ತದೆ. ಹೈಕಮಾಂಡ್ ಕೊಟ್ಟ ಜವಾಬ್ದಾರಿಯನ್ನ ನಾವು ನಿಭಾಯಿಸಲು ಸಿದ್ಧ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸತೀಶ್ ಜಾರಕಿಹೊಳಿ ನಮ್ಮ ಮುಂದಿನ ಮಾರ್ಗದರ್ಶಕ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿ, ‘ಅವರವರ ವೈಯಕ್ತಿಕ…
ಚಾಮರಾಜನಗರ : ನಿನ್ನೆ ತಾನೆ ಬೆಂಗಳೂರಿನಲ್ಲಿ ಆಸ್ತಿ ವಿಚಾರವಾಗಿ ಮಗನ ತಲೆಗೆ ತಂದೆಯು ಒಬ್ಬರು ಶೂಟ್ ಮಾಡಿದ ಘಟನೆ ವರದಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ಚಾಮರಾಜನಗರ ಜಿಲ್ಲೆಯಲ್ಲಿ ಮೇಕಿಗಳ ವಿಚಾರವಾಗಿ ತಂದೆಯನ್ನು ಗಾಯಗೊಳಿಸಿ ನದಿಗೆ ತಳ್ಳಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಹೌದು ತಂದೆಯನ್ನು ಸ್ವಂತ ಮಗನೇ ಆಯುಧದಿಂದ ಗಾಯಗೊಳಿಸಿ ಕಾವೇರಿ ನದಿಗೆ ತಳ್ಳಿ ಹತ್ಯೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಸಮೀಪದ ಆತೂರು ಗ್ರಾಮದಲ್ಲಿ ನಡೆದಿದೆ. ಗೋಪಿನಾಥಂ ಗ್ರಾಮದ ಶಂಕರನ್ (70) ಹತ್ಯೆಯಾದವರು. ಈತನ ಎರಡನೇ ಮಗ ಗೋವಿಂದರಾಜ್ ಆರೋಪಿ ಎಂದು ತಿಳಿದುಬಂದಿದೆ. ಎರಡು ದಿನಗಳ ಹಿಂದೆ ಶಂಕರನ್ ಮನೆಗೆ ಬಾರದ ಹಿನ್ನೆಲೆ ಕುಟುಂಬದವರು ಮಲೆಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ಸಲ್ಲಿಸಿದ್ದರು. ಶನಿವಾರ ಸಂಜೆ ಕಾವೇರಿ ನದಿಯಲ್ಲಿ ಶಂಕರನ್ ಮೃತದೇಹ ಪತ್ತೆಯಾಗಿದೆ. ಮೃತನ ಪತ್ನಿ ಪಳನಿಯಮ್ಮ ತಮ್ಮ ಮಗ ಗೊವಿಂದರಾಜು ಅಪ್ಪನನ್ನು ಆಯುಧಗಳಿಂದ ಹೊಡೆದು ಕಾವೇರಿ ನದಿಗೆ ತಳ್ಳಿದ್ದಾನೆ ಎಂದು ದೂರು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಆನೇಕಲ್ ತಾಲೂಕಿನ ಸಿದ್ದಯ್ಯನ ದೊಡ್ಡಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದ್ದು, ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿದ್ದಯ್ಯನ ದೊಡ್ಡಿಯಲ್ಲಿ ಕಂಟೇನರ್ ಪಲ್ಟಿಯಾಗಿ ಇಬ್ಬರು ಸಾವನಪ್ಪಿದ್ದಾರೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಇಳಿಜಾರು ರಸ್ತೆಯ ಪಕ್ಕದ ಕಂದಕಕ್ಕೆ ಕಂಟೇನರ್ ಉರುಳಿ ಬಿದ್ದಿದೆ. ಕಂಟೇನರ್ ಕೆಳಗೆ ಇಬ್ಬರ ಮೃತ ದೇಹಗಳು ಸಿಲುಕಿಕೊಂಡಿವೆ. ಇನ್ನು ಘಟನೆಯಲ್ಲಿ ಕಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಬದಲಾವಣೆ ಗಾಳಿ ಬೀಸಿದ್ದು, ಇದೀಗ ಮಾಜಿ ಸಚಿವ ಕೆ.ಎನ್ ರಾಜಣ್ಣ ಸಿಎಂ ಬದಲಾವಣೆ ಕುರಿತು ಸ್ಪೋಟಕ ಹೇಳಿಕೆ ಒಂದನ್ನು ನೀಡಿದ್ದು, ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಂಪುಟ ಪುನಾರಚನೆ ಮೇಲೆ ಬದಲಾವಣೆ ಭವಿಷ್ಯ ನಿರ್ಧಾರವಾಗಲಿದೆ. ಸಂಪುಟ ಪುನಾರಚನೆ ಅಧಿಕಾರ ಯಾರಿಗೆ ಸಿಗುತ್ತೋ ಅವರೇ ಸಿಎಂ ಅಗಲಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಅವ್ರೆ 5 ವರ್ಷ ಸಿಎಂ ಆಗಿರಲಿದ್ದಾರೆ. ಬಿಹಾರ್ ಚುನಾವಣೆ ಬಳಿಕ ಬದಲಾವಣೆ ಆಗುತ್ತೆ ಎಂದು ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು.
ಬೆಂಗಳೂರು : ಬೆಂಗಳೂರಲ್ಲಿ ಆಂಟಿ ಪ್ರೀತ್ಸೇ ಎಂದು ಅಂಕಲ್ ಒಬ್ಬ ಹಿಂದೆ ಬಿದ್ದು ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ. ನಗರದ ಫ್ಯಾಷನ್ ಡಿಸೈನರ್ ಒಬ್ಬರಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ತಮಿಳುನಾಡಿನ ಇವಿಪಿ ಫಿಲ್ಮ್ ಸಿಟಿ ಮಾಲೀಕ ಸಂತೋಷ್ ರೆಡ್ಡಿ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಪ್ರೀತಿ ನಿರಕಾರಣೆ ಮಾಡಿದ್ದಕ್ಕೆ ಸಂತೋಷ್ ರೆಡ್ಡಿ ಫ್ಯಾಷನ್ ಡಿಸೈನರ್ ಮೇಲೆ ಹಲ್ಲೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಫ್ಯಾಷನ್ ಡಿಸೈನರ್ ಪೊಲೀಸರಿಗೆ ದೂರು ನೀಡಿದ್ದಾರೆ.ಸಂತೋಷ್ ರೆಡ್ಡಿ ತನ್ನ ಕಸೀನ್ ಮದ್ವೆಗೆ ಬಟ್ಟೆ ಬೇಕು ಎಂದು ಫ್ಯಾಷನ್ ಡಿಸೈನರ್‌ನ್ನು ಸಂಪರ್ಕಿಸಿದ್ದರಂತೆ. ಮಗಳು ಭಾವನ್ಯ ರೆಡ್ಡಿಯಿಂದ ಫ್ಯಾಷನ್ ಡಿಸೈನರ್ ಸಂಪರ್ಕ ಮಾಡಿದ್ದನಂತೆ. ಪರಿಚಯ ಸ್ನೇಹಕ್ಕೆ ತಿರುಗಿ, ಫ್ಯಾಮಿಲಿ ಫ್ರೆಂಡ್‍ನಂತೆ ಇದ್ದನಂತೆ. ನಂತರ ನಿಮ್ಮ ಬ್ಯುಸಿನೆಸ್‍ಗೆ ಹೂಡಿಕೆ ಮಾಡ್ತಿನಿ ಎಂದಿದ್ದ. ಅಲ್ಲದೇ ತನ್ನ ಮಗಳು ಭಾವನ್ಯ ರೆಡ್ಡಿಗೆ ಗಂಡು ಇದ್ದರೆ ನೋಡಿ ಎಂದು ಸಂತ್ರಸ್ತೆಗೆ ಇನ್ನಷ್ಟು ಹತ್ತಿರವಾಗಿದ್ದ ಎನ್ನಲಾಗಿದೆ. ಒಂದು ದಿನ ತನ್ನ…
ಬೆಳಗಾವಿ : ಕಿತ್ತೂರು ರಾಣಿ ಚನ್ನಮ್ಮನ ಸಮಾಧಿ ಸ್ಥಳವನ್ನು ರಾಷ್ಟ್ರೀಯ ಸ್ಮಾರಕವಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಕಳಿಸಲಾಗಿದೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚನ್ನಮ್ಮನ ಹೆಸರಿಡಲು ಕೇಂದ್ರಕ್ಕೆ ಪತ್ರ ಬರೆದು ಒಂದು ವರ್ಷವಾದರೂ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಕ್ರಮವಹಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಸಂಗೊಳ್ಳಿ ರಾಯಣ್ಣನನ್ನು ಹಿಡಿಯಲು ನಮ್ಮವರೇ ನೀಡಿದ ಮಾಹಿತಿಯು ಬ್ರಿಟಿಷರಿಗೆ ಅನುಕೂಲವಾಗಿತ್ತು. ಚನ್ನಮ್ಮನ ಹೋರಾಟದ ಬಗ್ಗೆ ನಾಡಿಗೆ ತಿಳಿಸುವುದಕ್ಕಾಗಿ 2017ರಲ್ಲಿ ನಮ್ಮ ಸರ್ಕಾರವೇ ಕಿತ್ತೂರು ಚೆನ್ನಮ್ಮ ಜಯಂತಿ ಆರಂಭಿಸಿತು ಎಂಬುದು ನಮಗೆ ಹೆಮ್ಮೆಯ ವಿಷಯ. ಚನ್ನಮ್ಮನ ಸಾಹಸಗಾಥೆ ತಿಳಿಸಲು ಜಯಂತಿ ಆರಂಭಿಸಲಾಯಿತೇ ಹೊರತು ರಾಜಕೀಯ ಕಾರಣಕ್ಕಲ್ಲ. ಚನ್ನಮ್ಮನ ಹೆಸರು ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತೆ ಎಂದು ಸಿಎಂ ಹೇಳಿದರು. ಇದೆ ವೇಳೆ ಉತ್ತರಧಿಕಾರಿ ಬಗ್ಗೆಯೂ ಮಾತನಾಡಿದ ಅವ್ರು, ಲೀಡರ್ ಯಾರು ಅಂತ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಅಹಿಂದ ಸಂಘಟನೆ ಮುನ್ನಡೆಸುವ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತೇ ಎಂದು ಸಂಘಟನೆ ಮುನ್ನಡೆಸುವ ಬಗ್ಗೆ…













