Subscribe to Updates
Get the latest creative news from FooBar about art, design and business.
Author: kannadanewsnow05
ಚಿಕ್ಕಮಗಳೂರು / ಶಿವಮೊಗ್ಗ : ರಾಜ್ಯದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಇಂದು ಚಿಕ್ಕಮಂಗಳೂರು ಜಿಲ್ಲೆಯ 6 ತಾಲೂಕುಗಳು ಹಾಗೂ ಶಿವಮೊಗ್ಗದ 2 ತಾಲೂಕುಗಳಲ್ಲಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಆರು ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಹಾಗು ಎನ್ ಆರ್ ಪುರ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಅದೇ ರೀತಿಯಾಗಿ ಶಿವಮೊಗ್ಗದಲ್ಲೂ ಸಹ ವರುಣ ಅಬ್ಬರಿಸುತ್ತಿದ್ದು, ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ಮತ್ತು ಹೊಸನಗರ ತಾಲೂಕಿನ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಶಿವಮೊಗ್ಗದಲ್ಲಿ ಮಳೆ ಮುಂದುವರೆದಿದ್ದು ಮುಂಜಾಗ್ರತ ಕ್ರಮವಾಗಿ ತಹಶೀಲ್ದಾರ್ ರಜೆ…
BREAKING : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿ, ಎರಡು ಹಸುಗಳಿಗೆ ಗಂಭೀರ ಗಾಯ : ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ!
ಮೈಸೂರು : ಮೈಸೂರಲ್ಲಿ ಹುಲಿ ದಾಳಿಗೆ ಒಂದು ಹಸು ಬಲಿಯಾಗಿದ್ದು, ಎರಡು ಹಸುಗಳಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಡುವಿನಹಳ್ಳಿ ಗ್ರಾಮದ ನಿವಾಸಿ ನಿಜಲಿಂಗಪ್ಪ ಗೆ ಈ ಹಸುಗಳು ಸೇರಿವೆ ಎನ್ನಲಾಗಿದೆ. ನಿಜಲಿಂಗಪ್ಪ ಅವರಿಗೆ ಸೇರಿದ 3 ಹಸುಗಳಲ್ಲಿ ಒಂದು ಹಸು ಹುಲಿ ದಾಳಿಗೆ ಬಲಿಯಾದರೆ, ಇನ್ನೆರಡು ಹಸುಗಳಿಗೆ ಗಾಯವಾಗಿದೆ. ಅರಣ್ಯ ಇಲಾಖೆ ಕ್ಯಾಮರಾದಲ್ಲಿ ಹುಲಿ ಓಡಾಟದ ದೃಶ್ಯ ಸೆರೆಯಾಗಿದೆ. ಹೆಡಿಯಾಲ, ಈರೇಗೌಡನ ಹುಂಡಿ, ಅಂಜನಾಪುರ ಬಳಿ ಹುಲಿ ಓಡಾಟ ನಡೆಸಿದೆ.ಹುಲಿ ಸರೆಗೆ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಇದೀಗ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಮೀನಿನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಬೊನ್ ಇಟ್ಟಿದ್ದಾರೆ.
ಬೆಂಗಳೂರು : ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಜಂಗಮರೆಂದು ಹಕ್ಕು ಮಂಡಿಸುತ್ತಿರುವುದರ ಕುರಿತು ನಿನ್ನೆ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ವೀರಶೈವ ಲಿಂಗಾಯಿತ ಧರ್ಮದಲ್ಲಿರುವ ಜಂಗಮರು ‘ಬೇಡ’ ಅಥವಾ ‘ಬುಡ್ಗ’ ಜಂಗಮರಲ್ಲ ಎಂದು ತಿಳಿಸಿದೆ. ಕಲಬುರಗಿ ಪೀಠದಲ್ಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಹಾಗೂ ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರಿದ್ದ ಕಲಬುರಗಿಯ ನ್ಯಾಯಪೀಠವು ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಅಥವಾ ಬುಡ್ಗ ಜಂಗಮರೆಂದು ತಿಳಿಸಿ, ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದು ಮೀಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ವೀರಶೈವರಲ್ಲಿನ ಜಂಗಮರು ಪೂಜಿಸುವ ವರ್ಗದವರು ಮತ್ತು ಅವರು ಸಸ್ಯಾಹಾರಿಗಳು. ಆದರೆ, ಬೇಡ ಜಂಗಮರು ಸಮಾಜದಲ್ಲಿ ಕೆಳ ಜಾತಿಗೆ ಸೇರಿದವರು ಮತ್ತು ಅವರನ್ನು ಅಸ್ಪೃಶ್ಯರೆಂದು ಪರಿಗಣಿಸಲಾಗುತ್ತದೆ ಎಂದು ಪೀಠ ತನ್ನ ಆದೇಶದಲ್ಲಿ ವಿವರಿಸಿದೆ. ಆದ್ದರಿಂದ ಲಿಂಗಾಯಿತರಲ್ಲಿನ ಜಂಗಮರು ತಾವು ಬೇಡ ಜಂಗಮರೆಂದು ಹಕ್ಕು ಮಂಡಿಸುತ್ತಿರುವುದರ ಕುರಿತು ಸೂಕ್ಷ್ಮ ಅವಲೋಕನ ನಡೆಸಲಾಗಿದೆ.…
ಬೆಂಗಳೂರು : ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ಸರಣಿ ಹೃದಯಘಾತಕ್ಕೆ ಇದುವರೆಗೂ 35ಕ್ಕೂ ಹೆಚ್ಚು ಜನರು ಹಾಸನ ಜಿಲ್ಲೆ ಒಂದರಲ್ಲಿ ಸಾವನಪ್ಪಿದ್ದಾರೆ. ಹಾಸನ ಜಿಲ್ಲೆ ಹೊರತುಪಡಿಸಿ ಉಳಿದ ಕೆಲ ಜಿಲ್ಲೆಗಳಲ್ಲೂ ಸಹ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತಕ್ಷಣ ಎಚ್ಚೆತ್ತ ಸರ್ಕಾರ ನಿಖರ ಕಾರಣ ತಿಳಿದುಕೊಳ್ಳಲು ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಿತು ಇದೀಗ ತಜ್ಞರ ಒಂದು ವರದಿಯಲ್ಲಿ ಆತಂಕಕಾರಿ ಅಂಶಗಳು ಬಯಲಾಗಿವೆ. ರಾಜ್ಯ ಹಾಗೂ ಹಾಸನದಲ್ಲಿ ಸಂಭವಿಸಿದ ಸರಣಿ ಹೃದಯಾಘಾತ ಪ್ರಕರಣಗಳ ಅಧ್ಯಯನಕ್ಕೆ ಸರ್ಕಾರ ಎರಡು ಪ್ರತ್ಯೇಕ ತಾಂತ್ರಿಕ ಸಮಿತಿ ರಚಿಸಿದೆ.ರಾಜ್ಯದಲ್ಲಿ ಸಂಭವಿಸುತ್ತಿರುವ ಹೃದಯಘಾತಕ್ಕೆ ಕಾರಣವೇನು ಎಂಬವುದು ತಜ್ಞರು ಅಧ್ಯಯನ ನಡೆಸಿ ಸಿದ್ದಪಡಿಸಿರುವ ವರದಿಯಲ್ಲಿ ಅಡಕವಾಗಿದೆ. ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆದಿದ್ದು, ಹಲವು ವಿಚಾರಗಳು ಚರ್ಚೆಯಾಗಿವೆ. ಅಲ್ಲದೆ ಕೆಲವು ಆತಂಕಕಾರಿ ಅಂಶಗಳು ಕೂಡ ಬಯಲಾಗಿವೆ. ತಜ್ಞರ ವರದಿಯಲ್ಲಿ ಏನಿದೆ? ತಾಂತ್ರಿಕ ಸಲಹಾ ಸಮಿತಿ ಅಧ್ಯಯನ ನಡೆಸಿ…
ಚಿಕ್ಕಮಗಳೂರು : ಸದ್ಯ ಮಲೆನಾಡು ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದೂ, ಈಗಾಗಲೇ ಭಾರಿ ಮಳೆಯಿಂದಾಗಿ ಚಿಕ್ಕಮಂಗಳೂರು, ಶೃಂಗೇರಿ ಉಡುಪಿ, ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಿಂದಾಗಿ ಭಾರಿ ಆವಾಂತರ ಸೃಷ್ಟಿಯಾಗಿದ್ದು, ಇದೀಗ ಚಿಕ್ಕಮಂಗಳೂರಲ್ಲಿ ಮಳೆ ಅಬ್ಬರ ಮುಂದುವರೆದಿದ್ದ ಹಿನ್ನೆಲೆಯಲ್ಲಿ 6 ತಾಲೂಕಿನ ಅಂಗನವಾಡಿಗಳಿಗೆ ರಜೆ ಗೋಪಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಆರು ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ ಹಾಗು ಎನ್ ಆರ್ ಪುರ ತಾಲೂಕಿನಲ್ಲಿ ಅಂಗನವಾಡಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು : ಆತನಿಗೆ ಅನ್ಯ ಮಹಿಳೆಯರೊಂದಿಗೆ ಅಕ್ರಮ ಸಂಬಂಧ ಇತ್ತು. ಅಲ್ಲದೇ ನಿತ್ಯ ಮದ್ಯಪಾನ ಮಾಡಿ ಮನೆಗೆ ಬರುತ್ತಿದ್ದ. ಇದರಿಂದ ಮನನೊಂದ ಆಕೆ ಪತಿಯನ್ನು ಹತ್ಯೆಗೈದು ಏನೂ ಗೊತ್ತಿಲ್ಲದಂತೆ ನಾಟಕವಾಡಿದ್ದ ಮಹಿಳೆ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಎಸ್.ಜಿ. ಪಾಳ್ಯದ ನಿವಾಸಿ ಭಾಸ್ಕರ್ (42) ಕೊಲೆಯಾದ ವ್ಯಕ್ತಿ. ಆರೋಪಿ ಪತ್ನಿ ಶ್ರುತಿ (32) ಬಂಧಿತೆ ಎಂದು ತಿಳಿದುಬಂದಿದೆ. ವರ್ಷದ ಹಿಂದೆ ಶ್ರುತಿಯನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಜೂ. 27ರಂದು ರಾತ್ರಿ ಬಾಸ್ಕರ್ ಮದ್ಯ ಸೇವಿಸಿ ಮನೆಗೆ ಬಂದಿದ್ದ. ಈ ವೇಳೆ ದಂಪತಿ ನಡುವೆ ಜಗಳವಾಗಿತ್ತು. ಕೋಪದಲ್ಲಿ ಶ್ರುತಿ ಮುದ್ದೆಕೋಲಿ ನಿಂದ ತಲೆಗೆ ಹೊಡೆದಿದ್ದು, ನಂತರ ಮಲಗಿದ್ದ ಭಾಸ್ಕರ್ ಬೆಳಗಾಗುವಷ್ಟರಲ್ಲಿ ಮೃತಪಟ್ಟಿದ್ದ. ಸುದ್ದಿ ತಿಳಿದು ಎಸ್.ಜಿ. ಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದಾಗ, ರಾತ್ರಿ ಮನೆಗೆ ಬಂದು ಮಲಗಿದ ಪತಿ ಸಾವನ್ನಪ್ಪಿದ್ದಾರೆಂದು ಪೊಲೀಸರ ಮುಂದೆ ಶ್ರುತಿ ಹೇಳಿಕೆ ನೀಡಿದ್ದಳು. ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ ಪರೀಕ್ಷೆಗೆ…
ಬೆಂಗಳೂರು : ಕನ್ನಡ ತಮಿಳಿನಿಂದ ಹುಟ್ಟಿದ್ದು ಎಂದು ತಮಿಳು ಖ್ಯಾತ ನಟ ಕಮಲ್ ಹಾಸನ ಈ ಹೇಳಿಕೆ ನೀಡಿ ಭಾರಿ ವಿವಾದಕ್ಕೆ ಗುರಿಯಾಗಿದ್ದರು. ಇದೀಗ ಕನ್ನಡದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನಟ ಕಮಲ್ ಹಾಸನ್‌ಗೆ ನಿರ್ದೇಶಿಸಿ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾ ಲಯ ನಿರ್ಬಂಧಾಜ್ಞೆ ಹೊರಡಿಸಿದೆ. ಹೌದು ನಟ ಕಮಲ್ ಹಾಸನ್ ಅವರಿಗೆ ನಿರ್ಬಂಧ ಕೋರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಸಲ್ಲಿಸಿರುವ ದಾವೆಯ ವಿಚಾರಣೆ ನಡೆಸಿದ ನಗರದ 31ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾ ಲಯ ಏಕಪಕ್ಷೀಯ ಆದೇಶ ಹೊರಡಿಸಿದೆ. ಕನ್ನಡ ಭಾಷೆಯ ಮೇಲೆ ಭಾಷಾಶಾಸ್ತ್ರಜ್ಞರ ಶ್ರೇಷ್ಠತೆ ಪ್ರತಿಪಾದಿಸುವ ಯಾವುದೇ ಹೇಳಿಕೆ ಅಥವಾ ಟೀಕೆಗಳನ್ನು ಪೋಸ್ಟ್ ಮಾಡುವುದು, ನೀಡುವುದು, ಬರೆಯುವುದು, ಪ್ರಕಟಿಸುವುದು ಅಥವಾ ವಿತರಿಸುವುದನ್ನು ನಿರ್ಬಂಧಿಸ ಲಾಗಿದೆ. ಕಮಲ್ ಹಾಸನ್ ಅಥವಾ ಅವ ಮೂಲಕ ಕಾರ್ಯನಿರ್ವಹಿಸುವ ಯಾವುದೇ ವ್ಯಕ್ತಿಗಳಿಗೆ ಅನ್ವಯವಾಗುತ್ತದೆ ಎಂದಿದೆ. ಅಲ್ಲದೆ, ದಾವೆ ಸಂಬಂಧ ಕಮಲ್ ಹಾಸನ್‌ಗೆ ಸಮನ್ಸ್ ಜಾರಿಗೊಳಿಸಿರುವ ನ್ಯಾಯಾಲಯ…
ಉಡುಪಿ : ಕಳೆದ ಕೆಲವು ದಿನಗಳ ಹಿಂದೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕುಂಜಾಲು ರಸ್ತೆಯಲ್ಲಿ ಪತ್ತೆಯಾದ ಗೋವಿನ ರುಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಸಂಘಟನೆ ನಾಯಕ ಶರಣ್ ಪಂಪ್‌ವೆಲ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಉಡುಪಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಹೌದು ಶರಣ್ ಪಂಪ್‌ವೆಲ್ ಗುರುವಾರ ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಕುಂಜಾಲಿನ ಗೋಹತ್ಯೆ ಪ್ರಕರಣದಲ್ಲಿ ಮುಸ್ಲಿಂ ಮೂಲಭೂತವಾದಿಗಳ ಕೈವಾಡ ಇದೆ ಎಂದು ಆರೋಪಿಸಿದ್ದರು. ಇದರ ವಿಡಿ ಯೋ ವಾಟ್ಸಪ್‌ನಲ್ಲಿ ಹರಿದಾಡಿತ್ತು. ಇದು ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ ಪ್ರಚೋದನಕಾರಿ ಹೇಳಿಕೆ, ಸಾರ್ವಜನಿಕ ಶಾಂತಿ, ಸುವ್ಯವಸ್ಥೆಗೆ ಭಂಗ ತರುವಂತಿದೆ. ಈ ಪ್ರಕರಣದ ಪೊಲೀಸ್ ತನಿಖೆ ಇನ್ನೂ ಪೂರ್ಣಗೊಂಡಿಲ್ಲ, ಅದಕ್ಕೆ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ, ಗೊಂದಲ ಉಂಟು ಮಾಡುವ ಸಾಧ್ಯತೆ ಇದೆ ಎಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮೈಸೂರು : ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರಿಗೆ ನಾನು ಬೆಂಬಲ ನೀಡಲೇಬೇಕು. ಬೆಂಬಲ ನೀಡುತ್ತೇನೆ. ಅದು ಬಿಟ್ಟರೆ ನನಗೆ ಬೇರೆ ಆಯ್ಕೆಯೇ ಇಲ್ಲ ಎಂದು ಬುಧವಾರ ಹೇಳಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನನ್ನ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂದು ಹೇಳಿದ್ದಾರೆ. ಚಾಮುಂಡಿಬೆಟ್ಟದಲ್ಲಿ ನಿನ್ನೆ ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಸುದ್ದಿಗಾರರ ಜೊತೆ ಅವರು ಮಾತ ನಾಡಿದರು. ಈ ವೇಳೆ, ಮುಖ್ಯಮಂತ್ರಿ ರೇಸ್ ನಿಂದ ಹೊರಬಿದ್ದಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಮಾರ್ಮಿಕವಾಗಿ ಉತ್ತರಿಸಿದರು. ಪ್ರಯತ್ನ ವಿಫಲವಾಗಬಹುದು. ಆದರೆ ಪ್ರಾರ್ಥನೆ ವಿಫಲವಾಗುವುದಿಲ್ಲ ಎಂಬುದು ನನ್ನ ನಂಬಿಕೆ. ನನಗೆ ಏನು ಬೇಕು ಅದನ್ನು ಪ್ರಾರ್ಥನೆ ಮಾಡಿದ್ದೇನೆ. ಈಗ ಯಾವ ಚರ್ಚೆಯೂ ಬೇಡ ಎಂದು ಹೇಳಿದರು. ರಾಜಕೀಯದ ಬಗ್ಗೆ ಈಗ ಏನನ್ನೂ ಮಾತನಾಡುವುದಿಲ್ಲ. ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷರು ಹಾಗೂ ಹಿರಿಯರು. ಅವರು ಬುದ್ದಿವಾದ ಹೇಳಿ ಸಂದೇಶ ಕೊಟ್ಟಿದ್ದಾರೆ. ಎಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡೋಣ ಎಂದಷ್ಟೇ ಹೇಳಿದರು. ದುಃಖವನ್ನು ದೂರ ಮಾಡುವ ದೇವಿ, ಚಾಮುಂಡಿ. ಈ ಬಾರಿ…
ಮಂಗಳೂರು : ಕಳೆದ 2022 ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ನನ್ನು ಅರೆಸ್ಟ್ ಮಾಡಿದ್ದಾರೆ. ಹೌದು ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು, ನಿನ್ನೆ ಕತಾರ್ನಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಬಂದು ಇಳಿಯುತ್ತಿದ್ದಂತೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇತರ ಆರೋಪಿಗಳು ಸಿಕ್ಕಿಬೀಳುತ್ತಿದ್ದಂತೆ ಆರೋಪಿ ಅಬ್ದುಲ್ ರಹಿಮಾನ್ ವಿದೇಶಕ್ಕೆ ಹಾರಿದ್ದನು. ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಆರೋಪಿ ಅಬ್ದುಲ್ ರಹಿಮಾನ್ ಸೇರಿದಂತೆ ಒಟ್ಟು 28 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಪಿಎಫ್ಐ ಪ್ರಮುಖರ ಸೂಚನೆ ಮೇರೆಗೆ ಅಬ್ದುಲ್ ರಹಿಮಾನ್ ಸೇರಿದಂತೆ ಇತರರು ಸೇರಿಕೊಂಡು ಪ್ರವೀಣ್ ನೆಟ್ಟಾರು ಕೊಲೆಗೆ ಸಂಚು ರೂಪಿಸಿದ್ದರು ಎಂದು ಎನ್ಐಎ ಸಲ್ಲಿಸಿದ…













