Author: kannadanewsnow05

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜುಲೈ 5ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-3 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ. ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ…

Read More

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ಇಂದು ತಡೆ ನೀಡಿತು. ಹೌದು ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಿಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು. ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ…

Read More

ಬೆಂಗಳೂರು : ರಾಜ್ಯದಲ್ಲಿ ಸರಣಿ ಹೃದಯಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಖರ ಕಾರಣ ತಿಳಿದುಕೊಳ್ಳಲು ಇತ್ತೀಚಿಗೆ ರಾಜ್ಯ ಸರ್ಕಾರ ತಾಂತ್ರಿಕ ಸಲಹಾ ಸಮಿತಿ ರಚನೆ ಮಾಡಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ 10 ತಜ್ಞರ ಒಳಗೊಂಡ ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ಇದೀಗ ವರದಿ ಸಲ್ಲಿಸಲಿದೆ. ಹೃದಯಾಘಾತದ ಸಾವು ನಿಯಂತ್ರಣಕ್ಕೆ ತಜ್ಞರು ಸಲಹೆ ನೀಡಿದ್ದು,ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಹೌದು ಕೋವಿಡ್ ಬಂದು ಹೋದವರಲ್ಲಿ ಕೊಂಚ ಹೃದಯ ಸಮಸ್ಯೆ ಇದೆ. ಜನರಲ್ಲಿ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಾಗಿಲ್ಲ. ಕೋವಿಡ್ ವೈರಸ್ ಕೊಂಚ ಪ್ರಮಾಣದಲ್ಲಿ ಸಮಸ್ಯೆ ಮಾಡಿದೆ. ವರದಿಯಲ್ಲಿ ಹಾರ್ಟ್ ಕಾರ್ಯಕ್ಷಮತೆ ಕಡಿಮೆಯ ಬಗ್ಗೆ ಉಲ್ಲೇಖ ಮಾಡಲಾಗಿದೆ ಕೋವಿಡ್ ಬಂದು ಹೋದ ಮೂರು ವರ್ಷದ ಬಳಿಕ ಸಮಸ್ಯೆ ಆಗಿದೆ. ಕೋವಿಡ್ ಬಂದು ಹೋದವರಲ್ಲಿ ಹೃದಯ ಸಮಸ್ಯೆ ಕಾಣುತ್ತಿದೆ. ನಿದ್ರಾ ಹೀನತೆ, ಸುಸ್ತು, ಉಸಿರಾಟದ ಸಮಸ್ಯೆ ಹೆಚ್ಚಾದ ಬೊಜ್ಜು, ಹೃದಯದ ಕಾರ್ಯಕ್ಷಮತೆ ಕಡಿಮೆಯಾಗಿರುವ ಬಗ್ಗೆ ಉಲ್ಲೇಖನಾಗಿದೆ. ಇನ್ನು 15…

Read More

ಹಾಸನ : ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅಲ್ಲದೇ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.ಅಲ್ಲದೇ ಇಂದು ಒಂದೇ ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಐವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಹೌದು ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ 2 ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದ ಈ ವೇಳೆ ನಿನ್ನೆ ರಾತ್ರಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಇನ್ನು ಹಾಸನದಲ್ಲಿ ಮತ್ತೋರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಲೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ರಾಜಮ್ಮ ಮೃತ ದುರ್ದೈವಿ. ಜೂನ್ 14ರಂದು…

Read More

ಚಿಕ್ಕಮಗಳೂರು : ಕಳೆದ ಹತ್ತು ದಿನಗಳಿಂದ ನಾಪತ್ತೆಯಾಗಿದ್ದ ಫಾರೆಸ್ಟ್ ಗಾರ್ಡ್ ಶರತ್ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ನೀಲಗಿರಿ ಪ್ಲಾಂಟೇಶನ್ ನಲ್ಲಿ ಬೆತ್ತಲೆಯಾಗಿ ಶರತ್ (33) ಇದೀಗ ಮೃತದೇಹ ಪತ್ತೆಯಾಗಿದೆ. ನೀಲಗಿರಿ ಪ್ಲಾಂಟೇಶನ್ ನಲ್ಲಿ ಫಾರೆಸ್ಟ್ ಗಾರ್ಡ್ ಶರತ್ ನನ್ನು ಇದೀಗ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಫಾರೆಸ್ಟ್ ಗಾರ್ಡ್ ಶರತ್ ಮೂಲತಃ ಕೊಡಗು ಜಿಲ್ಲೆಯ ಕಾಲೋ ನಿವಾಸಿಯಾಗಿದ್ದು ಶರತ್ ಗಾಗಿ 10 ದಿನಗಳಿಂದ ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿದ್ದ ಕುರಿತು ಪ್ರಕರಣ ಕೂಡ ದಾಖಲಾಗಿತ್ತು

Read More

ಮಂಡ್ಯ : ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಪ್ರಕರಣಗಳು ದಿಂದದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರಲ್ಲೂ ಕಳೆದ 43 ದಿನಗಳಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇದುವರೆಗೂ 35 ಜನರು ಸಾವನ್ನಪ್ಪಿದ್ದರೆ. ಇದೀಗ ಮಂಡ್ಯದಲ್ಲಿ ಕೂಡ ಹೃದಯಾಘಾತಕ್ಕೆ ಮಹಿಳೆ ಬಲಿಯಾಗಿದ್ದಾರೆ. ಹೌದು ಪಾತ್ರೆ ತೊಳೆಯುತ್ತಿದ್ದಾಗಲೇ ಹೃದಯಘಾತದಿಂದ ಮಹಿಳೆಯ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಾಳೆಹೊನ್ನಗ ಗ್ರಾಮದಲ್ಲಿ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ಕುಸಿದು ಬಿದ್ದು ಶೀಲಾ (45) ಸಾವನಪ್ಪಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತಂತೆ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು ಈ ಹಿನ್ನೆಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೌದು ಈ ಒಂದು ಹೇಳಿಕೆಯಿಂದ ಎಂಎಲ್ಸಿ ರವಿಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಹಾಗಾಗಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಪರ ವಕೀಲರಾದಂತಹ ವಕೀಲ ಸುಯೋಗ ಹೇರಳೆ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಇಂದು ಅರ್ಜಿ ಸಲ್ಲಿಸಿದ್ದಾರೆ. ಜನರ ಪ್ರತಿಭಟನೆ ಮೂಲಕ ನಡೆಸಿ ಮನವಿ ಸಲ್ಲಿಕೆಗೆ ಮುಂದಾಗಿದ್ದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಈ ವೇಳೆ ಲಭ್ಯ ಇರಲಿಲ್ಲ. ಸರ್ಕಾರಿ ಕೆಲಸದಲ್ಲಿ ಸದಾ ಬಿಸಿಯಾಗಿರುತ್ತಾರೆ. ಈ ಅರ್ಥದಲ್ಲಿ ರವಿಕುಮಾರ್ ಹೇಳಿಕೆ ನೀಡಿದ್ದಾರೆ. ಆದರೂ ಎಫ್ಐಆರ್ ದಾಖಲಿಸಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Read More

ಶಿವಮೊಗ್ಗ : ಬಿಜೆಪಿಯ ಮಾಜಿ ಸಚಿವ ಈಶ್ವರಪ್ಪ ಅವರಿಗೆ ಬಿಗ್ ಶಾಕ್ ಎದುರಾಗಿದ್ದು, ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಿ ಎಂದು ಲೋಕಾಯುಕ್ತ ನೋಟಿಸ್ ನೀಡಿದೆ.ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಹಾಗೂ ಅವರ ಪುತ್ರ ಕಾಂತೇಶ್, ಸೊಸೆ ಶಾಲಿನಿ ವಿರುದ್ಧ ಲೋಕಾಯುಕ್ತ ಪೊಲೀಸರು ದೂರು ದಾಖಲಿಸಿಕೊಂಡು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ‌‌. ಲೋಕಾಯುಕ್ತ ಎಸ್​ಪಿ ಕಚೇರಿಗೆ ಇಂದು ಸೂಕ್ತ ದಾಖಲೆಗಳೊಂದಿಗೆ ಹಾಜರಾಗುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಕೆ.ಎಸ್‌.ಈಶ್ವರಪ್ಪ ಅವರು ಮಂತ್ರಿಯಾಗಿದ್ದಾಗ ಅಕ್ರಮ ಆಸ್ತಿ ಗಳಿಕೆ‌ ಮಾಡಿದ್ದಾರೆಂದು ಆರೋಪಿಸಿ ಶಿವಮೊಗ್ಗದ ವಕೀಲ ವಿನೋದ್ ಎಂಬವರು 2012ರಲ್ಲಿ ಹೈಕೋರ್ಟ್​ನಲ್ಲಿ ಪ್ರಕರಣ ದಾಖಲಿಸಿದ್ದರು. ಈ ಕುರಿತು ಹೈಕೋರ್ಟ್, 2021ರಲ್ಲಿ ವಿಚಾರಣೆ ನಡೆಸುವಂತೆ ಸೂಚಿಸಿ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ ಮಾಡಿತ್ತು. ನಾಲ್ಕು ವರ್ಷಗಳ ಕಾಲ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ವಿಚಾರಣೆ ನಡೆಸಿತ್ತು.‌ 2025ರ ಏಪ್ರಿಲ್ 5 ರಂದು ಲೋಕಾಯುಕ್ತ ಪೊಲೀಸರಿಗೆ ಎಫ್​ಐಆರ್ ದಾಖಲಿಸಲು ನ್ಯಾಯಾಲಯ ಸೂಚಿಸಿತ್ತು. ಎಫ್​ಐಆರ್ ದಾಖಲಿಸಿ 3 ತಿಂಗಳಲ್ಲಿ ವರದಿ…

Read More

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಕುರಿತು ಬಿಜೆಪಿ ಎಂಎಲ್ಸಿ ರವಿಕುಮಾರ್ ಆಕ್ಷೇಪಾರ್ಹ ಹೇಳಿಕೆ ವಿಚಾರವಾಗಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಗೆ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರಿಗೆ ನಾಲಿಗೆ ಉದ್ದವಾಗಿದೆ ಎಂದಷ್ಟೇ ಹೇಳಿದರು. ಇನ್ನು ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎನ್ ರವಿ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಎನ್ ರವಿಕುಮಾರ್ ಗೆ ನಾಯಿಗೆ ಬಂದಿರೋ ಕಾಯಿಲೆ ಬಂದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

Read More

ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇಂದು ಬೆಳಿಗ್ಗೆ ತ್ತಾನೆ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾಗಿದ್ದ ಇದೀಗ ಹಾಸನ ಜಿಲ್ಲೆಯಲ್ಲಿ ಮನೆಯಲ್ಲಿಯೇ ಕುಸಿದುಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಹಾಸನ ಜಿಲ್ಲೆಯ ಒಂದರಲ್ಲಿ ಇದುವರೆಗೂ ಹೃದಯಾಘಾತದಿಂದ ಸಾವನ್ನಪ್ಪಿರುವ ಒಟ್ಟು ಸಾವಿನ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಹೌದು ಮನೆಯಲ್ಲಿಯೇ ಹೃದಯಾಘಾತವಾಗಿ ಮಹಿಳೆ ಸಾವನಪ್ಪಿದ್ದಾರೆ 55 ವರ್ಷದ ಬಿಎನ್ ವಿಮಲಾಗೆ ಹೃದಯ ಸ್ತಂಭನವಾಗಿದೆ. ಹಾಸನದ ದಾಸರ ಕೊಪ್ಪಲಿನಲ್ಲಿ ವಿಮಲಾ ದುರ್ಮರಣ ಹೊಂದಿದ್ದಾರೆ.ನಿನ್ನೆ ರಾತ್ರಿ ಮನೆಯಲ್ಲಿದ್ದಾಗಲೇ ಹೃದಯಘಾತವಾಗಿದೆ. ತಕ್ಷಣ ಮನೆಯವರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಅಷ್ಟರಲ್ಲಾಗಲೇ ಬಿ ಎಂ ವಿಮಲಾ ಸಾವನ್ನಪ್ಪಿದ್ದಾರೆ. ಹಾಸನದ ದಾಸನ ಕೊಪ್ಪಲಿನಲ್ಲಿ ಈ ಒಂದು ಘಟನೆ ನಡೆದಿದೆ.

Read More