Author: kannadanewsnow05

ಬೆಂಗಳೂರು : ಬೆಂಗಳೂರಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ವೇಳೆ ರೈತರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದ್ದು ಹೃದಯಾಘಾತಕ್ಕೆ ರೈತ ಈಶ್ವರ (50) ಸಾವನ್ನಪ್ಪಿದ್ದಾರೆ. ಇವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ನಿವಾಸಿಯಾಗಿದ್ದು, ಇಂದು ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ರೈಲು ಇಳಿದು ಫ್ರೀಡಂ ಪಾರ್ಕ್ ಗೆ ತೆರಳುತ್ತಿದ್ದರು. ಮೆಜೆಸ್ಟಿಕ್ ರೈಲು ನಿಲ್ದಾಣದ ರಸ್ತೆಯಲ್ಲಿಯೇ ಈಶ್ವರ ಕುಸಿದು ಬಿದಿದ್ದಾರೆ. ಧರಣಿಯಲ್ಲಿ ಪಾಲ್ಗೊಳ್ಳುವ ತೆರಳುವಾಗ ರೈತ ಅಸ್ವಸ್ಥನಾಗಿ ಕುಸಿದು ಬಿದ್ದಿದ್ದಾರೆ. ಪೊಲೀಸರು ಸಿಪಿಆರ್ ಮಾಡಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು ಅಪೋಲೋ ಆಸ್ಪತ್ರೆಗೆ ಸಾಗಿಸುವಾಗಲೇ ಮಾರ್ಗ ಮಧ್ಯೆ ರೈತ ಸಾವನಪ್ಪಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಹೃದಯಘಾತದಿಂದ ಸಾವನ್ನಪ್ಪಿರುವ ಮಾಹಿತಿ ತಿಳಿದು ಬಂದಿದೆ.

Read More

ವಿಜಯನಗರ : ವಿಜಯನಗರದಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿಗೆ ಲಾರಿ ಒಂದು ಡಿಕ್ಕಿಯಾಗಿ ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲಿ ಸಾವನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಕೆಪಿಟಿಸಿಎಲ್ ಕಚೇರಿಯ ಮುಂದೆ ಹೆದ್ದಾರಿಯಲ್ಲಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಬಳಿ ಚಲಿಸುತ್ತಿದ್ದ ಕಾರಿಗೆ ವೇಗವಾಗಿ ಬಂದಂತಹ ಲಾರಿ ಎಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.ಈ ಒಂದು ಅಪಘಾತದಲ್ಲಿ ಸ್ಥಳದಲ್ಲೇ ದಂಪತಿಗಳಿಬ್ಬರು ಸಾವನಪ್ಪಿದ್ದಾರೆ. ಚಾಲಕ ಮುತ್ತಪ್ಪ ಪೂಜಾರ್ (35) ಪತ್ನಿ ರೇಣುಕಾ (30) ಮೃತರು ಎಂದು ತಿಳಿದುಬಂದಿದೆ. ಇನ್ನು ಮಕ್ಕಳದಂತಹ ಅನುಶ್ರೀ (9) ರೂಪಶ್ರೀ (6) ಮತ್ತು ಖುಷಿ (4) ಗಂಭೀರವಾದ ಗಾಯಗಳಾಗಿವೆ. ಇವರೆಲ್ಲರೂ ಬಾಗಲಕೋಟೆ ಜಿಲ್ಲೆಯ ಚಟ್ನಿಹಾಲು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಮುತ್ತಪ್ಪ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಮೊಹರಂ ಹಬ್ಬದ ಪ್ರಯುಕ್ತ ಚಟ್ನಿಹಾಳು ಗ್ರಾಮಕ್ಕೆ ಹೊರಟಿದ್ದರು. ಅಪಘಾತ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಲಾರಿ ಸುಮಾರು ಅರ್ಧ…

Read More

ಮಂಗಳೂರು : ಮಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಮಾರಾಟದ ಜಾಲವನ್ನು ಪೊಲೀಸರು ಇದೀಗ ಭೇದಿಸಿದ್ದಾರೆ. ತಮ್ಮ ಮಕ್ಕಳ ಡ್ರಗ್ಸ್ ಅಡಿಕ್ಟ್ ಬಗ್ಗೆ ಇಬ್ಬರು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೋಷಕರ ದೂರಿನ ಮೇರೆಗೆ ಪೊಲೀಸರು ಡ್ರಗ್ಸ್ ಜಾಲವನ್ನು ಇದೀಗ ಭೇದಿಸಿದ್ದಾರೆ. ಮಂಗಳೂರಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಮಂಗಳೂರು ಸೆನ್ ಕ್ರೈಂ ಠಾಣೆ ಪೋಲಿಸರಿಂದ ಈ ಒಂದು ಕಾರ್ಯಾಚರಣೆ ನಡೆದಿದೆ. ಮಂಗಳೂರಿನ ತುಷಾರ್ (21) ಧನ್ವಿಶೆಟ್ಟಿ (20) ಸಾಗರ್ ಕರ್ಕೆರ (19) ವಿಕಾಸ (23) ವಿಘ್ನೇಶ್ ಕಾಮತ್ (24) ಎನ್ನುವ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಮಂಗಳೂರಿನ ಹಾಲಾಡಿ ಬಳಿ ಇವರನ್ನು ಅರೆಸ್ಟ್ ಮಾಡಲಾಗಿದೆ. ಮಾದಕ ವಸ್ತುಗಳನ್ನು ಮಾಡಲು ತಯಾರಿ ಮಾಡುತ್ತಿದ್ದಾಗ ಪೊಲೀಸರು ರೇಡ್ ಮಾಡಿದ್ದಾರೆ. ಬಂಧಿತರಿಂದ 5 ಲಕ್ಷ 20 ಸಾವಿರ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ.ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಈ ಒಂದು ಗ್ಯಾಂಗ್ ಡ್ರಗ್ಸ್ ಪೂರೈಸುತ್ತಿತ್ತು ಗಾಂಜಾವನ್ನು ಚಿಕ್ಕ ಚಿಕ್ಕ ಪ್ಯಾಕೆಟ್ ಮಾಡಿ…

Read More

ಚಿಕ್ಕಮಗಳೂರು : 20 ಸಾವಿರ ಲಂಚ ಪಡೆಯುವಾಗ ಮೆಸ್ಕಾಂ ಜೆಇ ಒಬ್ಬ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ. ಗಂಗಾ ಕಲ್ಯಾಣ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ಲಂಚ ಪಡೆಯುವಾಗ ಕಡೂರು ತಾಲೂಕಿನ ಮೆಸ್ಕಾಂ ಜೆಇ ಪ್ರಶಾಂತ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.  ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಮತಿಘಟ್ಟದ ಜೆಪಿ ಪ್ರಶಾಂತ್ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದರು. ಗಂಗಾ ಕಲ್ಯಾಣ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕೊಡಲು ವ್ಯಕ್ತಿ ಒಬ್ಬರ ಬಳಿ 20,000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಚಿಕ್ಕಮಂಗಳೂರು ಲೋಕಾಯುಕ್ತ ಎಸ್ಪಿ ಸ್ನೇಹಾ ನೇತೃತ್ವದಲ್ಲಿ ಇಂದು ದಾಳಿ ನಡೆಸಲಾಗಿತ್ತು.

Read More

ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದಂತಹ ಶಾಲಿನಿ ರಜನೀಶ್ ಅವರ ಕುರಿತು ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ಅವಹೇಳನಕಾರಿ ಹೇಳಿಕೆ ನೀಡಿರುವ ಕುರಿತಂತೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಕಾರಿದ್ದು, ಬಿಜೆಪಿಯವರು ರಾಮನ ಕಥೆ ಹೇಳುವ ಬಾಯಲ್ಲಿ ಇಂತಹ ಹಲಕ ಮಾತುಗಳು ಮಾತನಾಡುತ್ತಾರೆ ಎಂದು ಹೆಬ್ಬಾಳ್ಕರ್ ಆಕ್ರೋಶ ಹೊರಹಾಕಿದರು. ಬೀದರ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರವಿಕುಮಾರ್ ಹೆಣ್ಣು ಕುಲಕ್ಕೆ ಅವಮಾನ ಮಾಡಿದ್ದಾರೆ. ರವಿಕುಮಾರ್ ಹೇಳಿಕೆಯಿಂದ ಬಿಜೆಪಿಯ ಸಂಸ್ಕೃತಿ ಗೊತ್ತಾಗುತ್ತದೆ. ಬಿಜೆಪಿಯ ಕುಟಿಲ ರಾಜಕಾರಣ ಮುಖವಾಡ ಬಯಲಾಗುತ್ತಿದೆ. ಮಹಿಳೆಯರ ಬಗ್ಗೆ ಗೌರವದ ಬಗ್ಗೆ ಮಾತನಾಡುತ್ತಾರೆ ಒಂದು ಕಡೆ ರಾವಣನ ಕಥೆಯು ಅವರು ಹೇಳುತ್ತಾರೆ ರಾಮನ ಕಥೆಯು ಬಿಜೆಪಿಯವರು ಹೇಳುತ್ತಾರೆ ಇದು ಬಿಜೆಪಿಯವರ ಕುಟಿಲ ರಾಜಕಾರಣದ ಇನ್ನೊಂದು ಮುಖವಾಡ ಎಂದರು. ಒಂದು ಕಡೆ ರಾಮಾಯಣದ ಕಥೆ ಹೇಳ್ತಾರೆ ಮತ್ತು ಇನ್ನೊಂದು ರಾವಣನ ಕಥೆಯು ಹೇಳುತ್ತಾರೆ ಬಾಯಿ ತೆರೆದರೆ ಈ ರೀತಿ ಹಲ್ಕ ಮಾತಾಡುತ್ತಾರೆ. ಇದು ಬಿಜೆಪಿಯವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಅವರಿಗೆ ನಾಚಿಕೆ…

Read More

ಬೆಂಗಳೂರು : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಸ್ ಅವರ ಕುರಿತು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಎಫ್ಐಆರ್ ಕೂಡ ದಾಖಲಾಗಿದ್ದು, ಇದೀಗ ಎಂಎಲ್‌ಸಿ ರವಿ ಕುಮಾರ್ ಅವರು ಎಫ್ಐಆರ್ ಅನ್ನು ಪ್ರಶ್ನಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಎಫ್ಐಆರ್ ಪ್ರಶ್ನಿಸಿ ಹೈಕೋರ್ಟಿಗೆ ಎಂಎಲ್ಸಿ ರವಿಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ತುರ್ತು ವಿಚಾರಣೆಗೆ ವಕೀಲ ಸುಯೋಗ ಹೇರಳೆ ಹೈಕೋರ್ಟಿಗೆ ಮನವಿ ಮಾಡಿದ್ದಾರೆ. ಈ ವೇಳೆ ಮಧ್ಯಾಹ್ನ 2:30ರ ನಂತರ ವಿಚಾರ ನಡೆಸಲು ಹೈಕೋರ್ಟ್ ಒಪ್ಪಿಗೆ ನೀಡಿದೆ. ಶಾಲಿನಿ ರಜನೀಶ್ ಅವರ ಕುರಿತು ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಇಂದು ಎಫ್ಐಆರ್ ದಾಖಲಾಗಿತ್ತು. ಹಾಗಾಗಿ ಇದೀಗ ರವಿಕುಮಾರ್ ಅದನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದಾರೆ. FIR ದಾಖಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ…

Read More

ಶಿವಮೊಗ್ಗ : ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಗಿಂತಲೂ ಮುಂಚೆ ಮಳೆ ಆರಂಭವಾಗಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಆಗುತ್ತಿದ್ದು ಅದರಲ್ಲೂ, ಶಿವಮೊಗ್ಗ ಒಂದೇ ಜಿಲ್ಲೆಯಲ್ಲಿ ದಾಖಲೆಯ 270 ಮಿಲಿ ಮೀಟರ್ ಮಳೆ ಆಗಿದೆ ಎಂದು ತಿಳಿದು ಬಂದಿದೆ. ಹೌದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ದಾಖಲೆಯ ಪ್ರಮಾಣದ ಮಳೆಯಾಗಿದೆ.ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ 270 ಮಿಲಿ ಮೀಟರ್ ಮಳೆ ಆಗಿದೆ. ರಾಜ್ಯದಲ್ಲೇ ಅತ್ಯಧಿಕ 270 ಮಿಲಿ ಮೀಟರ್ ಪ್ರಮಾಣದ ಮಳೆ ದಾಖಲೆಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿಕಲ್ ನಲ್ಲಿ 270 ಮಿಲಿ ಮೀಟರ್ ಮಳೆ ಆಗಿರೋದು ದಾಖಲೆಯಾಗಿದೆ. ಅದೇ ರೀತಿ ಹೊಸನಗರ ತಾಲೂಕಿನ ಯಡಿಯೂರಿನಲ್ಲಿ 234, ಮಾಸ್ತಿಕಟ್ಟೆಯಲ್ಲಿ 217, ಮಾಣಿಯಲ್ಲಿ 257, ಹಕ್ಕಲಿನಲ್ಲಿ 159, ಬಿದನೂರು ನಗರದಲ್ಲಿ 134, ಚಕ್ರ ನಗರದಲ್ಲಿ 120, ಲಿಂಗನಮಕ್ಕಿಯಲ್ಲಿ 83, ಹೊಸನಗರದಲ್ಲಿ 75.4 ಮಿಲಿ ಮೀಟರ್ ಮಳೆ ದಾಖಲಾಗಿದೆ. ಲಿಂಗನಮಕ್ಕಿ ಜಲಾಶಯಕ್ಕೆ 45,070 ಕ್ಯೂಸೆಕ್ ನೀರಿನ ಒಳಹರಿವು ಹೆಚ್ಚಿದ್ದು,…

Read More

ಮೈಸೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ಕುಟುಂಬ ಸಮೇತವಾಗಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಚಾಮುಂಡೇಶ್ವರಿ ತಾಯಿಯ ಬಳಿ ನನಗೆ ಏನು ಬೇಕು ಅದನ್ನು ನಾನು ಬೇಡಿಕೊಂಡಿದ್ದೇನೆ ಎಂದು ತಿಳಿಸಿದರು. ಪ್ರಯತ್ನಕ್ಕಿಂತ ಪ್ರಾರ್ಥನೆ ಫಲ ಕೊಡುತ್ತೆ ಎಂಬುದು ನಮ್ಮ ನಂಬಿಕೆ. ಕುಟುಂಬಸ್ಥರ ಜೊತೆಗೆ ಬಂದು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದೇನೆ. ರಾಜ್ಯಕ್ಕೆ ಒಳ್ಳೆದಾಗಲಿ ಎಂದು ದೇವಿಯ ಬಳಿ ಪ್ರಾರ್ಥನೆ ಮಾಡಿದ್ದೇನೆ. ನನಗೆ ಏನು ಬೇಕು ಅದನ್ನು ತಾಯಿಯ ಬಳಿ ಪ್ರಾರ್ಥನೆ ಮಾಡಿದ್ದೇನೆ. ಇಲ್ಲಿ ರಾಜಕೀಯ ಮಾತನಾಡುವುದಕ್ಕೆ ಬಂದಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನಮಗೆ ಬುದ್ಧಿಮಾತು ಹೇಳಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿಕೊಂಡು ಕೆಲಸ ಮಾಡುತ್ತೇವೆ ಎಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

Read More

ಹಾಸನ : ಹಾಸನ ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮತ್ತೊಬ್ಬ ಯುವಕ ಹಾಗು ಓರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 45 ದಿನಗಳಲ್ಲಿ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಹಾಸನ ಹೊರವಲಯದ ಚಿಕ್ಕಕೊಂಡಗುಳ ಗ್ರಾಮದಲ್ಲಿ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪಿದ್ದಾನೆ. 21 ವರ್ಷದ ಮದನ್ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ. ಮೃತ ಮದನ್ ಹಾಸನ ತಾಲೂಕಿನ ಚಿಟ್ನಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ. ತಾಯಿ ಜೊತೆ ಚನ್ನಪಟ್ಟಣದಲ್ಲಿ ಮದನ್ ವಾಸವಾಗಿದ್ದ 2 ದಿನದ ಹಿಂದೆ ಚಿಕ್ಕಕೊಂಡಗುಳದ ಭಾವನ ಮನೆಗೆ ಬಂದಿದ್ದ ಈ ವೇಳೆ ನಿನ್ನೆ ರಾತ್ರಿ ಎದೆನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಮೂಲಕ ಹಾಸನ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಇನ್ನು ಹಾಸನದಲ್ಲಿ ಮತ್ತೋರ್ವ ವೃದ್ದೆ ಹೃದಯಾಘಾತಕ್ಕೆ ಬಲಿಯಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಲೂರು ತಾಲೂಕಿನ ಕಲ್ಲಹಳ್ಳಿ ಗ್ರಾಮದ ರಾಜಮ್ಮ ಮೃತ ದುರ್ದೈವಿ. ಜೂನ್ 14ರಂದು ಮನೆಯಲ್ಲಿ ಅಡಿಗೆ ಮಾಡುತ್ತಿದ್ದಾಗಲೇ ಹೃದಯಾಘಾತವಾಗಿ ರಾಜಮ್ಮ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ…

Read More

ಮಂಡ್ಯ : ಕಾವೇರಿ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಬಚಾವಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಹದೇವಪುರ ಪಟ್ಟಣದಲ್ಲಿ ನಡೆದಿದೆ.ಬೆಂಗಳೂರು ಮೂಲದ 19 ವರ್ಷದ ಯುವತಿಯನ್ನು ಸದ್ಯ ರಕ್ಷಣೆ ಮಾಡಲಾಗಿದೆ. ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಲಾಗಿದೆ. ಶ್ರೀರಂಗಪಟ್ಟಣದ ಮಹದೇವಪುರ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ನಿನ್ನೆ ಸಂಜೆ ಬೆಂಗಳೂರಿನ ಯುವತಿ ನದಿಗೆ ಹಾರಿದ್ದಳು. ಕಾವೇರಿ ನದಿಯಲ್ಲಿ ಯುವತಿ ಕೊಚ್ಚಿಕೊಂಡು ಹೋಗುತ್ತಿದ್ದಳು. ಈ ವೇಳೆ ಅದೃಷ್ಟವಶಾತ್ ಬಚಾವ್ ಆಗಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ನಡುಗಡ್ಡೆಯಲ್ಲಿ ಸಿಲುಕಿ ಪರದಾಡಿದ್ದಾಳೆ. ರಾತ್ರಿಯಿಡಿ ನಡು ಗಡ್ಡೆಯಲ್ಲೇ ಸಿಲುಕಿದ್ದಾಳೆ. ಇಂದು ಬೆಳಿಗ್ಗೆ ಸ್ಥಳೀಯರು ಯುವತಿಯನ್ನು ಗಮನಿಸಿದ್ದಾರೆ. ನದಿಯ ಮಧ್ಯೆ ಸಿಲುಕಿ ಯುವತಿ ಸಹಾಯಕ್ಕೆ ಅಂಗಲಾಚಿದ್ದಾಳೆ. ಯುವತಿಯ ಕಿರುಚಾಟ ಕೇಳಿ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದೊಂದಿಗೆ ಸ್ಥಳಕ್ಕೆ ಬಂದಿದ್ದು, ಪೊಲೀಸರು ಆಗಮಿಸಿದ್ದಾರೆ. ಸಿಬ್ಬಂದಿಗಳು ಯುವತಿಯನ್ನು ರಕ್ಷಣೆ ಮಾಡಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಸದ್ಯ…

Read More