Subscribe to Updates
Get the latest creative news from FooBar about art, design and business.
Author: kannadanewsnow05
ಕೊಡಗು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಕಳೆದ ಹಲವು ದಿನಗಳಿಂದ ಸರಣಿ ಆತ್ಮಹತ್ಯೆ ಪ್ರಕರಣಗಳು ನಡೆದಿದ್ದವು. ಇದೀಗ ಕೊಡಗಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ನೊಂದು ಮಹಿಳೆ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರಪೇಟೆಯ ಶನಿವಾರ ಸಂತೆಯಲ್ಲಿ ನಡೆದಿದೆ. ಹೌದು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ಹಸೀನಾ ಎನ್ನುವ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಶನಿವಾರ ಸಂತೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಫೈನಾನ್ಸ್ ಸಂಸ್ಥೆಗಳ ಏಜೆನ್ಸಿಗಳ ವಿರುದ್ಧ ಕುಟುಂಬಸ್ಥರು ಕಿರುಕುಳದ ಕುರಿತು ಆರೋಪಿಸಿದ್ದಾರೆ. ಹಸೀನಾ ಕೆಲವು ಫೈನಾನ್ಸ್ ಸಂಸ್ಥೆಗಳಿಂದ ಸಾಲ ಪಡೆದಿದ್ದರು. ಸಾಲ ಮರುಪಾವತಿಸದಕ್ಕೆ ಹಸಿನಾಗಿ ಕರೆ ಮಾಡಿ ಸಿಬ್ಬಂದಿಗಳು ಬೆದರಿಕೆ ಹಾಕಿದ್ದರು ಎಂದು ಫೈನಾನ್ಸ್ ಏಜೆಂಟರ ವಿರುದ್ಧ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಘಟನೆ ಕುರಿತು ಶನಿವಾರ ಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಇಂದು ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿ ಸಂಬಂಧ ರಾಜ್ಯಪಾಲರು ಸುಗ್ರೀವಾಜ್ಞೆ ಜಾರಿಗೆ…
ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಕರಡು ಪ್ರತಿಯನ್ನು ಇತ್ತೀಚಿಗೆ ರಾಜ್ಯಪಾಲರಿಗೆ ಕಳುಹಿಸಿದ್ದು, ಇದೀಗ ರಾಜ್ಯಪಾಲ ಥಾವರ ಚಂದ್ ಗೆಹ್ಲೊಟ್ ಈ ಒಂದು ಸುಗ್ರೀವಾಜ್ಞೆ ಪ್ರತಿಗೆ ಅಂಕಿತ ಹಾಕುವ ಮೂಲಕ ಸುಗ್ರೀವಾಜ್ಞೆ ಜಾರಿಗೆ ಅನುಮೋದನೆ ನೀಡಿದ್ದಾರೆ. ಹೌದು ಹಲವು ಸಲಹೆಗಳನ್ನು ನೀಡಿ ರಾಜ್ಯಪಾಲರು ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ ರಾಜ್ಯಪಾಲರು, ಈ ವಿಷಯದ ಕುರಿತು ಅಧಿವೇಶನದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಜಾರಿ ಆಗಿದ್ದು ಈ ಒಂದು ಸುಗ್ರೀವಾಜ್ಞೆಗೆ ರಾಜ್ಯಪಾಲರು ಇದೀಗ ಅಂಕಿತ ಹಾಕಿದ್ದಾರೆ. ಹಾಗಾಗಿ ಮೈಕ್ರೋ ಫೈನಾನ್ಸ್ ಮಾಲೀಕರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.
ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಇಬ್ಬರು ವಾದ ಅಪಘಾತ ಸಂಭವಿಸಿದ್ದು ಕಾರು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಬಚಾವಾಗಿದ್ದಾರೆ. ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಕಾರೊಂದು ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ. ಕೆಂಗೇರಿ ಪಂಚಮುಖಿ ಗಣಪತಿ ದೇವಸ್ಥಾನದ ಬಳಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡು ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪರಾಗಿದ್ದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪುರಸಭೆ ಚುನಾವಣೆ ಫಲಿತಾಂಶದ ವೇಳೆ ಬಿಜೆಪಿ ಹಾಗು ಜೆಡಿಎಸ್ ಭಾರಿ ಹೈಡ್ರಾಮಾ ನಡೆದಿದ್ದು, ಪುರಸಭೆ ಅಧ್ಯಕ್ಷ ಗಾದಿಗಾಗಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಬಡಿದಾಟ ನಡೆದಿದೆ. ಜೇವರ್ಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಹೊಡೆದಾಟ ನಡೆದಿದೆ.ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಆದರೆ ಈ ಒಂದು ಹೊಡೆದಾಟದ ನಡುವೆ ಜೆಡಿಎಸ್ ಪುರಸಭೆಯ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಹೌದು ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ಪುರಸಭೆ ಬಳಿ ಈ ಒಂದು ಘಟನೆ ನಡೆದಿದೆ. ಪೊಲೀಸರ ಎದುರೇ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಕೊನೆಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಜೆಡಿಎಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಜೇವರ್ಗಿ ಪುರಸಭೆ ಅಧ್ಯಕ್ಷರಾಗಿ ಗುರುಲಿಂಗಪ್ಪಗೌಡ ಮಾಲಿಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಗಂಗೂಬಾಯ್ ಸತ್ಕಾರ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಕೆಲವು ಸದಸ್ಯರು ಜೆಡಿಎಸ್ ಗೆ ಬೆಂಬಲ ನೀಡಿದ್ದಾರೆ. ಬಿಜೆಪಿ 17 ಸದಸ್ಯರು ಜೆಡಿಎಸ್ ಮತ್ತು ಕಾಂಗ್ರೆಸ್ನ ತಲಾ ಮೂರು ಸದಸ್ಯರಿದ್ದಾರೆ. ಕೊನೆಗಳಿಗೆಯಲ್ಲಿ…
ಕಲಬುರ್ಗಿ : ಗ್ರಾಂ. ಪಂಚಾಯತಿ ಸದಸ್ಯನಿಂದಲೇ ಲಂಚಕ್ಕೆ ಕೈವೊಡ್ಡಿದ ಅಧ್ಯಕ್ಷನನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಬಲೆಗೆ ಬೀಳಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಾಳಗಿ ಎಂಬಲ್ಲಿ ನಡೆದಿದೆ. ಸದಸ್ಯನಿಂದಲೇ ಲಂಚ ಪಡೆಯುವಾಗ ಗ್ರಾಮ ಪಂಚಾಯತಿ ಅಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕಾಳಗಿ ತಾಲೂಕಿನ ರಾಜಪುರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ. ಗ್ರಾ.ಪಂ.ಅಧ್ಯಕ್ಷ ಪ್ರಕಾಶ್ ರೆಡ್ಡಿ ಎಂದು ತಿಳಿದು ಬಂದಿದೆ. ಕಲ್ಬುರ್ಗಿ ಜಿಲ್ಲೆಯ ಕಾಳಗಿ ತಾಲೂಕಿನ ರಾಜಪುರ ಎಂಬ ಗ್ರಾಮ ಪಂಚಾಯತಿಯಲ್ಲಿ ಪ್ರಕಾಶ್ ರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ ಸರ್ವೇ ನಂಬರ್ 4ರಲ್ಲಿ DCB ತೆರಿಗೆ ಹೆಸರು ನೋಂದಾಯಿಸಲು ಪ್ರಕಾಶ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಸದಸ್ಯ ಚಂದ್ರಶೇಖರ್ ಕಡೆಯಿಂದ 5 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ ಲೋಕಾಯುಕ್ತ ಇನ್ಸ್ಪೆಕ್ಟರ್ ಅಕ್ಕಮಹಾದೇವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸದ್ಯ ಪ್ರಕಾಶನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಅಮಾನುಷವಾದ ಘಟನೆ ನಡೆದಿದ್ದು, ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ರಾಕ್ಷಸ ಪತಿಯೊಬ್ಬ ಆಕೆಯ ಬಾಯಿಗೆ ಫೆವಿಕ್ವೀಕ್ ಹಾಕಿ ಭೀಕರವಾಗಿ ಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಾರೋಕ್ಯಾತನಹಳ್ಳಿ ಎಂಬಲ್ಲಿ ನಡೆದಿದೆ. ಹೌದು ಅನೈತಿಕ ಸಂಬಂಧ ಶಂಕೆ ಪತ್ನಿಯ ಹತ್ಯೆಗೆ ಯತ್ನಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹಾರೋಕ್ಯಾತನಹಳ್ಳಿ ಯಲ್ಲಿ ನಡೆದಿದೆ. ಸಿದ್ಧಾಂಲಿಂಗಯ್ಯ ಪತ್ನಿ ಮಂಜಳಳನ್ನು ಕೊಲೆಗೆ ಯತ್ನಿಸಿದ್ದಾನೆ. ಪತಿ ಹಿಮಾಲಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ಮಂಜುಳಾ ಗಾರ್ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದಳು.ಪ್ರಕರಣ ಕುರಿತು ಮಾದನಾಯಕನಹಳ್ಳಿಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಟವರ್ ಲೊಕೇಶನ್ ಆಧರಿಸಿ ಆರೋಪಿ ಪತಿ ಸಿದ್ದಲಿಂಗಯ್ಯನನ್ನು ಬಂಧಿಸಲಾಗಿದೆ. ಕಳೆದ 10 ವರ್ಷಗಳ ಹಿಂದೆ ಇಬ್ಬರು ಮದುವೆಯಾಗಿದ್ದು, ರಾಯಚೂರಲ್ಲಿ ಇಬ್ಬರು ಮಕ್ಕಳು ಇದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ ಹೂಡಿಕೆದಾರರು ಕೈಗಾರಿಕೆಯನ್ನು ಪ್ರಮೋಟ್ ಮಾಡಬೇಕು. ಸಣ್ಣ ಮತ್ತು ಮಧ್ಯಮ ಕೈಗಾರಿಕೆಯನ್ನು ಪ್ರಮೋಟ್ ಮಾಡಬೇಕು ಎಂದು ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶ ಆಯೋಜನೆ ಮಾಡಲಾಗಿದ್ದು, ಸಮಾವೇಶದ ಕುರಿತು ಮಾತನಾಡಿದ ಅವರು, 10 ಜನರಿಂದ ಹಿಡಿದು 100 ಜನರಿಗೆ ಉದ್ಯೋಗ ಸೃಷ್ಟಿಸಲಾಗುತ್ತಿದೆ. ಸ್ಥಳೀಯ ಮಸಾಲೆ ಪದಾರ್ಥ, ಬಟ್ಟೆ, ಏರ್ ಕ್ರಾಫ್ಟ್ ಎಲ್ಲವೂ ಇಲ್ಲಿದೆ. 7 ಸೀಟು ಹೊಂದಿರುವ ಏರ್ ಟ್ಯಾಕ್ಸಿ ವಿಮಾನ ಸಿದ್ಧಪಡಿಸಿ ಇಟ್ಟಿದ್ದಾರೆ. ಏರ್ ಟ್ಯಾಕ್ಸಿ ವಿಮಾನವನ್ನು ಪ್ರಕಾಶ್ ಸಿದ್ದ ಪಡಿಸಿದ್ದಾರೆ ಎಂದರು. ಅರಮನೆ ಮೈದಾನದಿಂದ ಎಲೆಕ್ಟ್ರಾನಿಕ್ ಸಿಟಿಗೆ ಹೋಗಿ ಬರಬಹುದು. ಇದೆಲ್ಲವೂ ಸಾಧ್ಯವಿದೆ. ಇದಕ್ಕೆ ಸರ್ಕಾರ ಪ್ರೋತ್ಸಾಹ ಕೊಡಬೇಕು ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದಿರುವ ಎಲ್ಲರಿಗೂ ಅಭಿನಂದನೆ ನಾವು ಉದಾಸೀನ ಮಾಡಬಾರದು…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರವಾದಂತಹ ದುರಂತ ಸಂಭವಿಸಿದ್ದು, ಅಪಾರ್ಟ್ಮೆಂಟ್ ಒಂದರ 20ನೇ ಮಹಡಿಯಿಂದ ಜಿಗಿದು 15 ವರ್ಷದ ಬಾಲಕಿ ಒಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೌದು ಮಧ್ಯಪ್ರದೇಶದ ಮೂಲದ ಕುಟುಂಬವು ಅಪಾರ್ಟ್ಮೆಂಟ್ ನಲ್ಲಿ ವಾಸವಿತ್ತು. ಅವರ ಮಗಳು 15 ವರ್ಷದ ಬಾಲಕಿ 20ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಬಾಲಕಿ ಓದುತ್ತಿದ್ದಳು ಎನ್ನಲಾಗಿದ್ದು, 15 ವರ್ಷದ ಬಾಲಕಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸಳಕ್ಕೆ ಕಾಡುಗೋಡಿ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಹಾವೇರಿ : ನಿಂದು ಇನ್ನೂ ಚಿಕ್ಕ ವಯಸ್ಸಿದೆ. ಚಿಕ್ಕವಯಸಲ್ಲಿ ತಮಗೂ ಸೇವನೆ ಮಾಡುವುದು ಒಳ್ಳೆಯದಲ್ಲ ಎಂದು ಬುದ್ಧಿ ಹೇಳಿದ್ದಕ್ಕೆ ಮನನೊಂದ ಯುವತಿ ಒಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ. ನೇಣಿಗೆ ಶರಣಾದ ಯುವತಿಯನ್ನು ಬೀಬಿಜಾನ್ ಸೊಂಡಿ (18) ಎಂದು ತಿಳಿದುಬಂದಿದೆ.ಮನೆಯವರು ತಂಬಾಕು ತಿನ್ನೋದು ಬಿಡು ಅಂತ ಬುದ್ಧಿವಾದ ಹೇಳಿದ್ದಕ್ಕೆ ಯುವತಿ ಬೀಬಿಜಾನ್ ನೇಣಿಗೆ ಶರಣಾಗಿದ್ದಾಳೆ.ಯುವತಿ ಕಳೆದ ಕೆಲವು ದಿನಗಳಿಂದ ತಂಬಾಕು ಸೇವನೆ ಚಟಕ್ಕೆ ಅಂಟಿಕೊಂಡಿದ್ದಳು. ತಂಬಾಕು ಸೇವನೆ ಮಾಡುವುದನ್ನು ಬಿಡುವಂತೆ ಬೀಬಿಜಾನ್ ಗೆ ತಂದೆ-ತಾಯಿ ಬುದ್ಧಿವಾದ ಹೇಳಿದ್ದರು. ಮನೆಗೆಲಸ ಮಾಡುತ್ತಿದ್ದ ಬೇಬಿಜಾನ್ ನಾನು ದುಡಿಮೆ ಮಾಡಿ ನನ್ನ ಸ್ವಂತ ಹಣದಲ್ಲಿ ಖರ್ಚು ಮಾಡಲು ಅಪ್ಪ ಅಮ್ಮ ಬಿಡುತ್ತಿಲ್ಲ ಎಂದು ತಂದೆ ತಾಯಿಯೊಂ ದಿಗೆ ಬೇಬಿ ಜಾನ್ ಮತ್ತೆ ಜಗಳವಾಡಿದ್ದಾಳೆ.ನೀನಿನ್ನೂ ಚಿಕ್ಕವಳು. ನಿನ್ನ ಜೀವನದ ಆಯಸ್ಸು ತುಂಬಾ ಹೆಚ್ಚಾಗಿದೆ. ಆದ್ದರಿಂದ ತಂಬಾಕು ಸೇವನೆ ಬಿಟ್ಟು ನಿನ್ನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು…
ಮೈಸೂರು : ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ಅಧಿಕಾರಿಗಳು ಇದುವರೆಗೂ ನಡೆಸಿದ ತನಿಖೆ ಕುರಿತಂತೆ ಸಮಗ್ರ ವರದಿಯನ್ನು ತಯಾರಿಸಿದ್ದು ಇದೀಗ ಮೈಸೂರು ಲೋಕಾಯುಕ್ತ ಎಸ್.ಪಿ ಟಿ ಉದೇಶರವರು, ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ. ಹೌದು ಮುಡಾ ಹಗರಣ ಪ್ರಕರಣದ ಅಂತಿಮ ತನಿಖಾ ವರದಿ ಸಲ್ಲಿಕೆಯಾಗಿದ್ದು, ಐಜಿಪಿ ಸುಬ್ರಮಣ್ಯೇಶ್ವರ ರಾವ್ ಗೆ ಮುಡಾ ಹಗರಣದ ಅಂತಿಮ ತನಿಖಾ ವರದಿಯನ್ನು ಸಲ್ಲಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ ರವರು ಅಂತಿಮ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ.














