Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಒಳ ಮೀಸಲಾತಿ ಸರ್ವೇ ಮಾಡುವ ವೇಳೆ ಸಾರ್ವಜನಿಕರೊಂದಿಗೆ ಕಿರಿಕ್ ಮಾಡಿದ್ದು ಅಲ್ಲದೆ ಹಲ್ಲೆಗೆ ಮುಂದಾಗಿದ್ದ, ಬಿಬಿಎಂಪಿ ಮೂವರು ಅಧಿಕಾರಿಗಳನ್ನು ಇದೀಗ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಸರ್ವೆ ಮಾಡದೆ ಮನೆ ಬಾಗಿಲಿಗೆ ಸ್ಟಿಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮನೆ ಮಾಲೀಕರ ಮೇಲೆ ಸಿಬ್ಬಂದಿಗಳು ಹಲ್ಲೆಗೆ ಯತ್ನಿಸಿದ್ದಾರೆ ಈ ಹಿನ್ನೆಲೆ ಮೂರು ಅಧಿಕಾರಿಗಳನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ಹೌದು ಕಾಟಾಚಾರಕ್ಕೆ ಸಮೀಕ್ಷೆ ನಡೆಸಿದ ಮೂವರು ಸಿಬ್ಬಂದಿಗಳು ಅಮಾನತುಗೊಂಡಿದ್ದಾರೆ. ಒಳ ಮೀಸಲಾತಿ ಸಮೀಕ್ಷೆ ವೇಳೆ ಬಿಬಿಎಂಪಿ ಸಿಬ್ಬಂದಿ ಕಿರಿಕ್ ಮಾಡಿರುವ ವಿಚಾರವಾಗಿ ಇದೀಗ ಸಮೀಕ್ಷೆ ನಡೆಸಿದ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ವಿವಿಧ ವಾರ್ಡ್ ಗಳ ಮೂರು ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ. ಸಾರ್ವಜನಿಕರ ಜೊತೆ ಕಿರಿಕ್ ಆರೋಪ ಬೆನ್ನಲ್ಲೇ ಸಸ್ಪೆಂಡ್ ಮಾಡಲಾಗಿದೆ. 198ನೇ ವಾರ್ಡ್ ಕಂದಾಯ ವಸೂಲಿಗಾರ ಸೆಂದಿಲ್ ಕುಮಾರ್, ಬಿಬಿಎಂಪಿ 24ನೇ ವಾರ್ಡಿನ ಕಂದಾಯ ವಸೂಲಿಕಾರ ಪೆದ್ದರಾಜು ಹಾಗೂ ಬಿಬಿಎಂಪಿ ರೆವೆನ್ಯೂ ಇನ್ಸ್ಪೆಕ್ಟರ್ ರಮೇಶ್ ಕುಮಾರ್ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವೇದಿಕೆಯ ಮೇಲೆ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಬರಮನೆಗೆ ಸಿಎಂ ಸಿದ್ದರಾಮಯ್ಯ ಕಪಾಳಮೋಕ್ಷಕೆ ಮುಂದಾಗಿದ್ದ ಘಟನೆಗೆ ಸಂಬಂಧಿಸಿದಂತೆ ಇದೀಗ ತೀವ್ರವಾಗಿ ನೊಂದಿರುವ ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿ ಕೋರಿ ಪತ್ರ ಬರೆದಿದ್ದು, ಸದ್ಯ ವೈರಲ್ ಆಗಿದೆ. ಪತ್ರದಲ್ಲಿ ತಮ್ಮ ನೋವನ್ನು ತೋಡಿಕೊಂಡ ಭರಮನಿ ನಾನು ಮಾಡದೇ ಇರುವ ತಪ್ಪಿಗೆ ಅವಮಾನಕ್ಕೆ ಒಳಗಾಗಿದ್ದೇನೆ ಎಂದು ಪತ್ರದಲ್ಲಿ ಉಲ್ಲೆಖಿಸಿದ್ದಾರೆ. ಪತ್ರದಲ್ಲಿ ASP ಭರಮನಿ ಅವರು, ಸಾವಿರಾರು ಜನರು ಸೇರಿದ ಸಭೆಯಲ್ಲಿ ನನಗೆ ಅವಮಾನ ಆಗಿದೆ. ಸಾರ್ವಜನಿಕ ಸಭೆಯಲ್ಲಿ ನನ್ನ ಆತ್ಮಸ್ಥೈರ್ಯ ಕುಗ್ಗಿಸಿದ್ದಾರೆ. ನಾನು ಮಾಡದ ತಪ್ಪಿಗೆ ಅವಮಾನಕ್ಕೆ ಒಳಗಾಗಿದ್ದೇನೆ. ಏ ಯಾವನೋ ಎಸ್ ಪಿ ಬಾರಯ್ಯ ಇಲ್ಲಿ ಅಂತ ಕರೆದರು. ಸಿದ್ದರಾಮಯ್ಯ ಅವಮಾನದಿಂದ ನಾನು ನೊಂದಿದ್ದೇನೆ. ಏರು ಧ್ವನಿಯಲ್ಲಿ ಕರೆದಾಗ ಸ್ಥಳೀಯ ಎಸ್ ಪಿ ಆಗಲಿ ಡಿಸಿಪಿ ಆಗಲಿ ಯಾರು ಇರಲಿಲ್ಲ ಸಿದ್ದರಾಮಯ್ಯ ಅವರ ಮಾತಿಗೆ ಓಗೊಟ್ಟು ವೇದಿಕೆಗೆ ಹೋದೆ. ಸಿಎಂ…
BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ : ತಪ್ಪಿದ ಭಾರಿ ಅನಾಹುತ!
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು ಮೈಸೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಉದಯಪುರ ಎಕ್ಸ್ಪ್ರೆಸ್ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಸಿಬ್ಬಂದಿಗಳು ರೈಲನ್ನು ನಿಲ್ಲಿಸಿ ಬೆಂಕಿ ನಂದಿಸಿರುವ ಘಟನೆ ಬೆಂಗಳೂರಿನ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹೌದು ಚಲಿಸುತ್ತಿದ್ದ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ವಂದಾರಗುಪ್ಪೆ ಬಳಿ ರೈಲು ನಿಲ್ಲಿಸಿ ಸಿಬ್ಬಂದಿಗಳು ಕೂಡಲೇ ಬೆಂಕಿ ನಂದಿಸಿದ್ದಾರೆ. ಬೆಂಗಳೂರಿಗೆ ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ವಂದಾರಗುಪ್ಪೆ ಗ್ರಾಮದಲ್ಲಿ ಒಂದು ಘಟನೆ ನಡೆದಿದ್ದು, ಉದಯಪುರ ಎಕ್ಸ್ಪ್ರೆಸ್ ರೈಲಿನ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರಿನಿಂದ ಬೆಂಗಳೂರಿಗೆ ಈ ಒಂದು ಎಕ್ಸ್ಪ್ರೆಸ್ ರೈಲು ತೆರಳುತಿತ್ತು. ಸದ್ಯ ಭಾರಿ ಅನಾಹುತ ಒಂದು ತಪ್ಪಿದೆ.
ಬೆಂಗಳೂರು : ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯರಿಂದ ಅಪಮಾನಕ್ಕೆ ಒಳಗಾಗಿದ್ದ ಧಾರವಾಡ ಎಎಸ್‌ಪಿ ನಾರಾಯಣ ಭರಮನಿ ಅವರ ಸ್ವಯಂ ನಿವೃತ್ತಿ ವಿಚಾರದಲ್ಲಿ ಸರ್ಕಾರ ಮತ್ತೊಂದು ಯಡವಟ್ಟು ಮಾಡಿದ್ದು, ಸ್ವಯಂ ನಿವೃತ್ತಿಗೆ ಗೃಹ ಇಲಾಖೆ ಸೂಚನೆ ನೀಡಿದೆ. ಹೌದು ಗೃಹ ಇಲಾಖೆಯಿಂದ ಸ್ವಯಂ ನಿವೃತ್ತಿ ಅಂಗೀಕಾರಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಜುಲೈ 6ಕ್ಕೆ ಡೆಡ್‌ಲೈನ್ ಫಿಕ್ಸ್ ಮಾಡಿದ್ದು, ಅಷ್ಟರೊಳಗೆ ವಿಆರ್‌ಎಸ್ ಪತ್ರ ವಾಪಸ್ ಪಡೆಯದೇ ಇದ್ದರೆ ಸ್ವಯಂ ನಿವೃತ್ತಿ ಅಂಗೀಕರಿಸುವಂತೆ ಸೂಚನೆ ನೀಡಲಾಗಿದೆ. ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಅವರಿಂದ ಅಧಿಕಾರಿ ಅಪಮಾನಕ್ಕೆ ಒಳಗಾಗಿದ್ದರು. ಬೆಳಗಾವಿ ಸಮಾರಂಭದಲ್ಲಿ ಬಿಜೆಪಿ ಕಾರ್ಯಕರ್ತರು ಏಕಾಏಕಿ ಪ್ರತಿಭಟನೆಗೆ ಮುಂದಾಗಿದ್ದರಿಂದ ಆಕ್ರೋಶಗೊಂಡ ಸಿಎಂ, ಅಧಿಕಾರಿ ಮೇಲೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು. ಈ ಸನ್ನಿವೇಶದಿಂದ ಅಧಿಕಾರಿ ನೊಂದುಕೊಂಡಿದ್ದರು. ಸ್ವಯಂಪ್ರೇರಿತ ನಿವೃತ್ತಿಗೆ ನಾರಾಯಣ ಅವರು ಅರ್ಜಿ ಸಲ್ಲಿಸಿದ್ದಾರೆ. ತಮಗಾದ ಅವಮಾನಕ್ಕೆ ಭರಮನಿ ಅವರು ನೊಂದುಕೊಂಡಿದ್ದರು. ಹೀಗಾಗಿ, ಕೆಲಸದಿಂದಲೇ ಸ್ವಯಂ ನಿವೃತ್ತಿಗೆ ಮುಂದಾಗಿದ್ದರು. ಅಧಿಕಾರಿಯ ನಡೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಬಳಿಕ…
ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಹಾಸನ ಜಿಲ್ಲೆಯಲ್ಲಿ ಕಳೆದ ಒಂದುವರೆ ತಿಂಗಳಲ್ಲಿ 31ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದೀಗ ಇಂದು ಬೆಳಿಗ್ಗೆ ಕಲಬುರ್ಗಿ ಯಾದಗಿರಿಯಲ್ಲಿ ಇಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದು, ಇಂದು ಚಿಕ್ಕಮಗಳೂರಲ್ಲಿ ಓರ್ವ ಯುವಕ ಹಾಗೂ ಚಾಮರಾಜನಗರದಲ್ಲಿ ಖಾಸಗಿ ಬಸ್ ಚಾಲಕ ಸಾವನಪ್ಪಿದ್ದಾರೆ. ಹೌದು, ಚಿಕ್ಕಮಗಳೂರಲ್ಲಿ ಹೃದಯಾಘಾತಕ್ಕೆ 29 ವರ್ಷದ ಯುವಕ ಸಾವನ್ನಪ್ಪಿದ್ದಾನೆ, ಟೆಂಗಿನಕಾಯಿ ವ್ಯಾಪಾರ ಮಾಡಿಕೊಂಡಿದ್ದ ಹರೀಶ್ ಸಾವನಪ್ಪಿದ್ದಾರೆ. ತರೀಕೆರೆ ತಾಲೂಕಿನ ಶವಾನಿ ಗ್ರಾಮದಲ್ಲಿ ಘಟನೆ ನಡೆದಿದ್ದು ನಿನ್ನೆ ಬೆಳಗಿನ ಜಾವ ಯುವಕ ವಾಂತಿ ಮಾಡಿಕೊಂಡಿದ್ದ. ಕ್ಯಾಸ್ಟ್ರಿಕ್ ಎಂದು ಮಾತ್ರೆ ನುಂಗಿ ಮಲಗಿದ್ದರು ಮತ್ತೆ ವಾಂತಿಯಾಗಿ ಹರೀಶ್ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಇನ್ನು ಮತ್ತೊಂದು ಹೃದಯಾಘಾತ ಘಟನೆ ನಡೆದಿದ್ದು, ಖಾಸಗಿ ಬಸ್ ಚಾಲಕ ಸಾವನ್ನಪ್ಪಿರುವ ಘಟನೆ ಹನೂರು ತಾಲೂಕಿನ ಮೀಣ್ಯಂ ಗ್ರಾಮದ ರಮೇಶ್ ಸಾವನಪ್ಪಿದ್ದಾರೆ. ಬಸ್ ಚಲಾಯಿಸುತ್ತಿದ್ದಂತೆ ರಮೇಶ್ (47) ಎನ್ನುವವರಿಗೆ ಎದೆನವು ಕಾಣಿಸಿಕೊಂಡಿದೆ. ಬಸ್ ನಿಲ್ದಾಣಕ್ಕೆ ಬಂದು ಜ್ಯೂಸ್ ಕುಡಿವಾಗ ಹೃದಯಾಘಾತ ಸಂಭವಿಸಿದೆ. ತಕ್ಷಣ…
ಮೈಸೂರು : ರಾಜ್ಯದಲ್ಲಿ ಒಂದಾದ ಮೇಲೊಂದು ಹೃದಯಘಾತ ಪ್ರಕರಣಗಳು ದಾಖಲಾಗುತ್ತಿವೆ. ಕಳೆದ ಒಂದುವರೆ ತಿಂಗಳಲ್ಲಿ ಹಾಸನ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು ಹೃದಯಾಘಾತಕ್ಕೆ 31 ಜನರು ಬಲಿಯಾಗಿದ್ದಾರೆ.ಇಂದು ಬೆಳಿಗ್ಗೆ ತಾನೇ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು ಇದೀಗ ಮೈಸೂರಿನಲ್ಲಿ ಹೃದಯಾಘಾತಕ್ಕೆ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹೌದು ಜಿಮ್ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಹಾಸನ ಮೂಲದ ಇಂಜಿನಿಯರ್ ಒಬ್ಬರು ಸಾವನಪ್ಪಿದ್ದಾರೆ. ಹಾಸನದ ಇಂಜಿನಿಯರ್ ಶ್ರೀಧರ್ ಕೊನೆಯುಸುರಳಿದಿದ್ದಾರೆ ಶ್ರೀಧರ್ (51) ಎನ್ನುವವರು ಸಾವನಪ್ಪಿದ್ದಾರೆ. 10 ದಿನಗಳ ಹಿಂದೆ ವ್ಯಾಯಾಮ ಮಾಡುವಾಗ ಈ ಒಂದು ಘಟನೆ ನಡೆದಿದೆ. ವಿಜಯನಗರ ಬಡಾವಣೆಯ ಜಿಮ್ ನಲ್ಲಿ ವ್ಯಾಯಾಮ ಮಾಡುತ್ತಿರುವಾಗಲೇ ಶ್ರೀಧರ ಸಾವನಪ್ಪಿದ್ದಾರೆ.
ಕೋಲಾರ : ಕೋಲಾರದಲ್ಲಿ ಘೋರ ಘಟನೆ ನಡೆದಿದ್ದು, ಜಿಲ್ಲಾಸ್ಪತ್ರೆಯ ನೌಕರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ENT ವಿಭಾಗದ ಕೊಠಡಿಯಲ್ಲಿ ಹರೀಶ್ ಬಾಬು (33) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಹರೀಶ್ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿ ನಿವಾಸಿ ಎಂದು ತಿಳಿದುಬಂದಿದೆ. ಡೇಟಾ ಎಂಟ್ರಿ ಆಪರೇಟರ್ ಆಗಿ ಹರೀಶ್ ಬಾಬು ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಕುರಿತು ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಲ್ಲಿ ನಿನ್ನೆ ತಾನೇ ಮನೆಯ ಸದಸ್ಯರಿಗೆ ಮಾಹಿತಿ ನೀಡದೆ ಮನೆಯ ಬಾಗಿಲಿಗೆ ಜಾತಿಗಣತಿ ನಡೆಸದೆ ಕೇವಲ ಸ್ಟಿಕರ್ ಅಂಟಿಸಿ ತೆರಳುತ್ತಿದ್ದ ಬಿಬಿಎಂಪಿ ಸಿಬ್ಬಂದಿಯ ಕಳ್ಳಾಟ ಬಯಲಾಗಿತ್ತು. ಇದೀಗ ಒಳ ಮೀಸಲಾತಿ ಸರ್ವೆ ವೇಳೆ ಬಿಬಿಎಂಪಿ ಸಿಬ್ಬಂದಿ ಗೂಂಡಾಗಿರಿ ನಡೆಸಿದ್ದಾರೆ. ಸರ್ವೆ ಪ್ರಶ್ನಿಸಿದ್ದಕ್ಕೆ ಮನೆ ಮಾಲೀಕನಿಗೆ ಸಿಬ್ಬಂದಿಗಳು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಹೌದು ಬೆಂಗಳೂರಿನ ಸಾರ್ವಭೌಮ ನಗರದಲ್ಲಿ ನಿನ್ನೆ ಬೆಳಿಗ್ಗೆ ಈ ಒಂದು ಘಟನೆ ನಡೆದಿದೆ. ನಂದೀಶ್ ಎಂಬಾತನ ಮೇಲೆ ಹಲ್ಲೆಗೆ ಪಾಲಿಕೆ ಸಿಬ್ಬಂದಿಗಳು ಯತ್ನಿಸಿದ್ದಾರೆ. ಬಿಬಿಎಂಪಿ ಸಿಬ್ಬಂದಿಯ ಗೂಂಡಾ ವರ್ತನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆ ಮಾಲೀಕರ ಮಾಹಿತಿ ಪಡೆಯದೆ ಸಿಬ್ಬಂದಿಗಳು ಸ್ಟಿಕರ್ ಆಂಟಿಸಿದ್ದಾರೆ. ಇದನ್ನು ಪ್ರಶ್ನಿಸಿದ್ದಕ್ಕೆ ಮನೆಯ ಮಾಲೀಕನ ಮೇಲೆ ಸಿಬ್ಬಂದಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಸರಿಯಾಗಿ ಸರ್ವೆ ಮಾಡದೆ ಹಲ್ಲೆಗೆ ಮುಂದಾದ ಸಿಬ್ಬಂದಿ ನಡೆಗೆ ಜನರು ಆಕ್ರೋಶ ಹೊರಹಾಕಿದ್ದಾರೆ. ಇತ್ತ ದೂರು ದಾಖಲಿಸುವ ಬದಲು ಪೊಲೀಸರು ರಾಜಿಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.
ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸಂಖ್ಯೆ ಮುಂದುವರಿದಿದ್ದು ಇದೀಗ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ 72 ವರ್ಷದ ವೃದ್ದೆ ಒಬ್ಬರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದ ದೇವಮ್ಮ (72)+ಎನ್ನುವ ವೃದ್ದೆ ಸಾವನಪ್ಪಿದ್ದಾರೆ. ಎದೆನೋವು ಹಿನ್ನೆಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಸಂಬಂಧಿಕರು ತಕ್ಷಣ ಕರೆದುಕೊಂಡು ಹೋಗಿದ್ದರು. ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಾಪಸ್ ಆಗುವ ವೇಳೆ ದೇವಮ್ಮ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ವಾಪಸ್ ಆಗುವಾಗ ಮಾರ್ಗ ಮಧ್ಯೆಯೇ ದೇವಮ್ಮಾ ಸಾವನಪ್ಪಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಗ್ರಾಪಂ ಸದಸ್ಯ ಬಲಿ! ಇನ್ನು ಹಾಸನದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ ಮುಂದುವರೆದಿದ್ದು, ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕಾರಗೋಡು (41) ಎನ್ನುವವರು ಸಾವನ್ನಪ್ಪಿದ್ದಾರೆ. ಆಲೂರು ತಾಲೂಕಿನ ಕಲ್ಲಾರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ರಾತ್ರಿ ಮಲಗಿದ್ದಲ್ಲಿಯೇ ಸಂತೋಷಕ್ಕೆ ಹೃದಯಘಾತ ಸಂಭವಿಸಿದೆ. ಬೆಳಿಗ್ಗೆ ಸಂತೋಷ ನನ್ನ ಎಬ್ಬಿಸಲು ಹೋಗಿದ್ದಾಗ ಕುಟುಂಬಸ್ಥರಿಗೆ ಈ ಕುರಿತು ತಿಳಿದಿದೆ ಕೂಡಲೇ ಅವರು…
ಬೀದರ್ : ಬೀದರ್ನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ಬಾವಿಗೆ ಗೂಡ್ಸ್ ವಾಹನ ಬಿದ್ದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಬೀದರ್ ತಾಲೂಕಿನ ಘೋಡಂಪಳ್ಳಿ ಬಳಿ ನಿನ್ನೆ ರಾತ್ರಿ ಈ ಒಂದು ಭೀಕರ ಬಗಾದ ಸಂಭವಿಸಿದೆ ಘೋಡಂಪಳ್ಳಿಯ ಚಾಲಕ ಲಕ್ಷ್ಮಿಕಾಂತ್ ಮತ್ತು ರವಿ ಮೃತ ದುರ್ದೇವಿಗಳು ಎಂದು ತಿಳಿದುಬಂದಿದೆ. ಘೋಡಂಪಳ್ಳಿಯ ಅರ್ಜುನ್, ಪ್ರಜ್ವಲ್, ಪವನ್ ಮತ್ತು ಸಂಗಮೇಶ್ ಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳುಗಳಿಗೆ ಬೀದರ್ ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅತಿ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ ಘಟನೆ ಕುರಿತಂತೆ ಗಾಂಧೀ ಗಂಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














