Author: kannadanewsnow05

ರಾಯಚೂರು : ರಾಯಚೂರಿನಲ್ಲಿ ಭೀಕರವಾದ ಅಗ್ನಿ ದುರಂತ ಸಂಭವಿಸಿದ್ದು, ಮತ್ತು ದೇಹ ಒಂದನ್ನು ಸಾಗಿಸುತ್ತಿದ್ದ ಅಂಬುಲೆನ್ಸ್ ನಲ್ಲಿ ಇಂಜಿನ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಆತಕ್ಷಣ ಬೆಂಕಿಯ ಕೆನಾಲಿಗೆ ಇಡಿ ಆಂಬುಲೆನ್ಸ್ ಆವರಿಸಿದ್ದು ಅದೃಷ್ಟವಶಾತ್ ಅಂಬುಲೆನ್ಸ್ ಚಾಲಕ ಸೇರಿ ನಾಲ್ವರು ಬಚಾವ್ ಆಗಿರುವ ಘಟನೆ ನಡೆದಿದೆ. ಹೌದು ಮೃತದೇಹ ಸಾಗಿಸುತ್ತಿರುವಾಗ ಚಲಿಸುತ್ತಿರುವಾಗಲೇ ಅಂಬುಲೆನ್ಸ್ ಒಂದು ಘಟನೆ ರಾಯಚೂರು ನಗರದ ಆಶಾಪುರ ಮಾರ್ಗದಲ್ಲಿ ಈ ಒಂದು ಘಟನೆ ಸಂಭವಿಸಿದೆ. ರಾಯಚೂರು ನಿಂದ ಆಶಾಪುರಕ್ಕೆ ಆಂಬುಲೆನ್ಸ್ ತೆರಳುತ್ತಿತ್ತು. ಅಂಹುಲೆನ್ಸ್ ನಲ್ಲಿದ್ದ ಚಾಲಕ ಸೇರಿ ನಾಲ್ವರು ಅದೃಷ್ಟವಶಾತ್ ಪಾರಾಗಿದ್ದಾರೆ. ಆಂಬುಲೆನ್ಸ್ ನ ಇಂಜಿನ್ ಬಿಸಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಶಂಕಿಸಲಾಗಿದೆ.

Read More

ಕಲಬುರ್ಗಿ : ಇತ್ತೀಚಿಗೆ ರಾಜ್ಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕಲ್ಬುರ್ಗಿಯ ಜಿಲ್ಲೆಯಲ್ಲಿ ಕೂಡ ಅಂತಹ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಒಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೀರನಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಚಿಂಚೋಳಿ ತಾಲೂಕಿನ ಶಾಲೆ ಬೀರನಹಳ್ಳಿ ಗ್ರಾಮದ ರವಿಕುಮಾರ್ (26) ಎಂದು ತಿಳಿದುಬಂದಿದೆ.ಕೂಲಿ ಕೆಲಸ ಮಾಡುತ್ತಿದ್ದ ರವಿಕುಮಾರ್, ಭಾನುವಾರ ಗ್ರಾಮದಲ್ಲಿ ಲಾರಿಯಿಂದ ಪರ್ಸಿ ಇಳಿಸುವಾಗ ಮಧುಸೂದನ್ ಎಂಬವರು ಹಲ್ಲೆ ಮಾಡಿದ್ದರಿಂದ ತೀವ್ರವಾಗಿ ಅಸ್ವಸ್ಥರಾಗಿ ಮೃತಪಟ್ಟಿದ್ದಾರೆ ಎಂದು ಮೃತ ವ್ಯಕ್ತಿಯ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಪ್ರಕರಣ ದಾಖಲಿಸಿಕೊಂಡ ಪೊಲೀಸತು ಇದೀಗ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

Read More

ಬೆಂಗಳೂರು : ಬಿಜೆಪಿಯ ಬಣ ಬಡಿದಾಟಕ್ಕೆ ಮುಂದಾಗಿರುವ ಹೈಕಮಾಂಡ್ ನಾಯಕರು, ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವುದಕ್ಕೆ ಬ್ರೇಕ್ ಹಾಕಲು ಇದೀಗ ರೆಬಲ್​​​​​​ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಅವರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಿವೈ  ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗ ವಾಗ್ದಾಳಿ ವಿಚಾರವಾಗಿ ಯತ್ನಾಳ್​​ ಅವರಿಗೆ ಹೈಕಮಾಂಡ್​ ನೀಡಿರುವ ಇದು ಎರಡನೇ ನೋಟಿಸ್ ಆಗಿದೆ. ಕಳೆದೆರಡು ತಿಂಗಳ ಹಿಂದೆಯೂ ನೋಟಿಸ್ ನೀಡಲಾಗಿತ್ತು. ಬಿವೈ ವಿಜಯೇಂದ್ರ ಹಾಗೂ ಬಿಎಸ್ ಯಡಿಯೂರಪ್ಪ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ವಿವರಣೆ ಕೇಳಲಾಗಿದೆ. ಖುದ್ದು ಹಾಜರಾಗಿ, ವಿವರಣೆ ನೀಡುವಂತೆ ನೋಟಿಸ್‌ನಲ್ಲಿ ಸೂಚನೆ ನೀಡಲಾಗಿದೆ. ನೋಟಿಸ್ ನೀಡಿದ 72 ಗಂಟೆಗಳ ಒಳಗೆ ಉತ್ತರ ಕೊಡಬೇಕು ಅಂತ ಯತ್ನಾಳ್‌ಗೆ ಸೂಚನೆ ನೀಡಲಾಗಿದೆ.

Read More

ಶಿವಮೊಗ್ಗ : ನಕ್ಸಲ್ ಮುಂಡಗಾರು ಲತಾ ಮತ್ತು ವನಜಾಕ್ಷಿಯ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು ಈಗಿನಲಿಯಲ್ಲಿ ಇಂದು ಪೊಲೀಸರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಧೀಶ ಗೀತಾಮಣಿ ಅವರು ಇಬ್ಬರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ. ಹೌದು ಮುಂಡಗಾರು ಲತಾ ವನಜಾಕ್ಷಿಳನ್ನು ಪೊಲೀಸ್ ಕಸ್ಟಡಿಗೆ ನೀಡಿದ ನ್ಯಾಯಾಲಯ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ನ್ಯಾಯಾಲಯ ಈ ಕುರಿತು ಆದೇಶ ನೀಡಿದೆ. ಇಂದು ಇಬ್ಬರನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ JMFC ಕೋರ್ಟಿಗೆ ಪೊಲೀಸರು ಹಾಜರುಪಡಿಸಿದ್ದರು. ಮುಂಡಗರು ಲತಾ ಮತ್ತು ವನಜಾಕ್ಷಿ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಶಿವಮೊಗ್ಗ ಜಿಲ್ಲೆಯ ಆಗುಂಬೆಯ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು, ಶಿವಮೊಗ್ಗ ಜಿಲ್ಲೆಯ ಹೊಸನಗರ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿತ್ತು. ಇದೇ ಕಾರಣಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಇಂದು ಪೊಲೀಸರು ಇಬ್ಬರನ್ನು ಹಾಜರುಪಡಿಸಿದ್ದರು.ಈ ವೇಳೆ ಇಬ್ಬರನ್ನು 3 ದಿನಗಳ ಕಾಲ ಪೊಲೀಸ್…

Read More

ಕೊಪ್ಪಳ : ಇತ್ತೀಚಿಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನಲ್ಲಿ ವಾಲ್ಮೀಕಿ ಜಾತ್ರೆ ಕಾರ್ಯಕ್ರಮದಲ್ಲಿ ಸಚಿವ ಎಚ್ ಸಿ ಮಹದೇವಪ್ಪ ರಾಮನಿಂದ ವಾಲ್ಮೀಕಿಯೊ ಅಥವಾ ವಾಲ್ಮೀಕಿಯಿಂದ ರಾಮನೋ ಎನ್ನುವುದರ ಕುರಿತು ಚರ್ಚಿಸಬೇಕಿದೆ. ಅಯೋಧ್ಯೆ ರಾಮನೇ ಬೇರೆ ವಾಲ್ಮೀಕಿ ರಾಮನೇ ಬೇರೆ ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ರಾಮ ಒಬ್ಬನೇ ಆದರೆ ರಾಮನನ್ನು ಸೃಷ್ಟಿಸಿದ್ದು ವಾಲ್ಮೀಕಿ ಎಂದು ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ರಾಮನೇ ಬೇರೆ ಅಯೋಧ್ಯೆ ರಾಮನೆ ಬೇರೆ ಎಂದು ಸಚಿವ ಎಚ್.ಸಿ ಮಹಾದೇವಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ರಾಮ ಒಬ್ಬನೇ ಆದರೆ ರಾಮನನ್ನು ಸೃಷ್ಟಿ ಮಾಡಿದ್ದು ವಾಲ್ಮೀಕಿ. ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಸಚಿವ ಶಿವರಾಜ್ ತಂಗಡಗಿ ಕಿಡಿ ಕಾರಿದರು. ಬಿಜೆಪಿ ನಾಯಕರು ಅಭಿವೃದ್ಧಿಯ ಬಗ್ಗೆ ಎಲ್ಲೂ ಮಾತನಾಡಲ್ಲ. ನಾವು ಸಹ ರಾಮನ ಭಕ್ತರಿದ್ದೇವೆ.…

Read More

ಮಂಗಳೂರು : 12 ವರ್ಷದ ಬಾಲಕನೊಬ್ಬನ ಎದೆಭಾಗಕ್ಕೆ ತೆಂಗಿನ ಗರಿ ಹಾಗೂ ಕುತ್ತಿಗೆಯಲ್ಲಿದ್ದ ಸರ ಹೊಕ್ಕಿಕೊಂಡಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತನನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಸುಮಾರು ಎರಡು ಗಂಟೆಗಳ ಕಾಲ ಆಪರೇಷನ್‌ ಮಾಡಿ ಬಾಲಕನ ಎದೆಯಲ್ಲಿದ್ದ ಗರಿ ಹಾಗೂ ಸರವನ್ನು ದೇಹದಿಂದ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ವೈದ್ಯರ ಈ ಒಂದು ಕಾರ್ಯಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಹೌದು ಆಟವಾಡು ತ್ತಿದ್ದ 12ರ ಹರೆಯದ ಬಾಲಕನ ಮೇಲೆ ತೆಂಗಿನ ಗರಿ ಬಿದ್ದು, ಅದರ ತುಂಡು ಹಾಗೂ ಆತ ತೊಟ್ಟಿದ್ದ ಚೈನ್‌ ಕೂಡ ಕುತ್ತಿಗೆ ಮೂಲಕ ಎದೆಯ ಒಳಗೆ ಸೇರಿದ ಘಟನೆ ಮಡಿಕೇರಿ ಯಲ್ಲಿ ಸಂಭವಿಸಿದ್ದು, ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿ ಗರಿ ಮತ್ತು ಸರವನ್ನು ಹೊರ ತೆಗೆಯಲಾಗಿದೆ. ಘಟನೆ ಹಿನ್ನೆಲೆ? ಅಸ್ಸಾಂ ಮೂಲದ ಬಾಲಕ ಕಮಲ್‌ ಹುಸೇನ್‌(12)ನ ಹೆತ್ತವರು ಮಡಿಕೇರಿಯ ಮನೆಯಲ್ಲಿ ಕಾರ್ಮಿಕ ರಾಗಿದ್ದರು. ಅವರು ಶನಿವಾರ ತೋಟ ದಲ್ಲಿ ಕೆಲಸ ಮಾಡುತ್ತಿದ್ದಾಗ ಬಾಲಕ ಪಕ್ಕದಲ್ಲಿ…

Read More

ಕೋಲಾರ : ಪೌತಿ ಖಾತೆ ಮಾಡಿಕೊಡಲು ವ್ಯಕ್ತಿಯಯೊಬ್ಬರ ಬಳಿ 20 ಸಾವಿರ ಲಂಚ ಪಡೆಯುವ ಸಂದರ್ಭದಲ್ಲಿ ಎಸಿ ಕಚೇರಿಯ ಕೇಸ್ ವರ್ಕರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೋಲಾರ ಜಲಾಧಿಕಾರಿ ಕಚೇರಿ ಆವರಣದಲ್ಲಿ ನಡೆದಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿರುವ ಎಸಿ ಕಚೇರಿಯಲ್ಲಿ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಕೋಮಲಾ ಎನ್ನುವ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕೋಲಾರ ಉಪ ವಿಭಾಗಾಧಿಕಾರಿ ಕಚೇರಿಯ ಕೇಸ್ ವರ್ಕರ್ ಕೋಮಲಾ ಪೌತಿ ಖಾತೆ ಮಾಡಲು 50 ಸಾವಿರಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ವೇಳೆ ಮುಂಗಡವಾಗಿ 20,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಎಸಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕೇಸ್ ವರ್ಕರ್ ಕೋಮಲಳನ್ನು ಇದೀಗ ವಶಕ್ಕೆ ಪಡೆದು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕೋಲಾರ ಲೋಕಾಯುಕ್ತ ಇನ್ಸ್ಪೆಕ್ಟರ್ ರೇಣುಕಾ ನೇತೃತ್ವದಲ್ಲಿ ಈ ಒಂದು ಕಾರ್ಯಾಚರಣೆ ನಡೆದಿದೆ.

Read More

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಲಯದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಗೆ ಸಮನ್ಸ್ ಜಾರಿ ಮಾಡಿದ್ದು, ಈ ಒಂದು ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ನ್ಯಾ.ಎಂ.ನಾಗಪ್ರಸನ್ನ ಅವರು ಫೆಬ್ರವರಿ 20ರಂದು ವಿಚಾರಣೆ ನಿಗದಿಪಡಿಸಿದ್ದು 20ರವರೆಗೆ ಸಿಎಂ ಪತ್ನಿ ಪಾರ್ವತಿ ಹಾಗೂ ಬೈರತಿ ಸುರೇಶ್ ಅವರ ED ಸಮನ್ಸ್ ತಡೆಯಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಿದರು. ವಿಚಾರಣೆ ಆರಂಭದಲ್ಲಿ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಪರವಾಗಿ ವಕೀಲ ಸಂದೇಶ್ ಚೌಟ ಅವರು ವಾದ ಆರಂಭಿಸಿದರು. ಈ ಪ್ರಕರಣದಲ್ಲಿ ಅಪರಾಧದಿಂದ ಗಳಿಸಿದ ಹಣವಿಲ್ಲ. ಅಕ್ರಮ ಹಣದ ಗಳಿಕೆ ಇದ್ದರೆ ಮಾತ್ರ ಇಡಿಗೆ ಅಧಿಕಾರವಿದೆ. ಆಗ ಮಾತ್ರ ಇಡಿ ಸರ್ಚ್ ಮತ್ತು ಸೀಜ್ ಮಾಡಬಹುದು. ಮುಡಾದ ಮಾಜಿ ಆಯುಕ್ತ ಡಿಬಿ ನಟೇಶ್ ಪ್ರಕರಣದಲ್ಲಿ ಇಡಿ ಸರ್ಚ್ ಮತ್ತು ಸೀಜ್…

Read More

ಧಾರವಾಡ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಲಯದ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಸಚಿವ ಭೈರತಿ ಸುರೇಶ್ ಗೆ ಸಮನ್ಸ್ ಜಾರಿ ಮಾಡಿದ್ದು ಈ ಒಂದು ಸಮನ್ಸ್ ಪ್ರಶ್ನಿಸಿ, ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ನಲ್ಲಿ ಬೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸುತ್ತಿದ್ದಾರೆ. ED ನೀಡಿದ್ದ ಸಮನ್ಸ್ ರದ್ದು ಕೋರಿದ ಭೈರತಿ ಸುರೇಶ್ ಅರ್ಜಿ ವಿಚಾರಣೆ ಇದೀಗ ಧಾರವಾಡ ಹೈಕೋರ್ಟ್ ಪೀಠದಲ್ಲಿ ಆರಂಭವಾಗಿದೆ. ಸಚಿವ ಭೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸೀವಿ ನಾಗೇಶ್ ಅವರು ವಾದ ಮಂಡಿಸುತ್ತಿದ್ದು, ಮುಡಾದಲ್ಲಿ ಭೈರತಿ ಸುರೇಶ್ ಯಾವುದೇ ಹುದ್ದೆ ವಹಿಸಿಕೊಂಡಿಲ್ಲ ಹೀಗಾಗಿ ಇಡಿ ಸಮನ್ಸ್ ಕಾನೂನು ಬಾಹಿರವಾಗಿದೆ. ಈ ವೇಳೆ ಭೈರತಿ ಸುರೇಶ್ ಯಾವ ಇಲಾಖೆ ಸಚಿವರು ಎಂದು ಈ ವೇಳೆ ಹೈಕೋರ್ಟ್ ಪ್ರಶ್ನಿಸಿದೆ. ಭೈರತಿ ಸುರೇಶ್ ನಗರಾಭಿವೃದ್ಧಿ ಇಲಾಖೆಯ ಸಚಿವರು ಎಂದು ವಕೀಲರು ಪ್ರಶ್ನೆಗೆ…

Read More

ಹಾವೇರಿ : ಹಾವೇರಿಯಲ್ಲಿ ಅಚ್ಚರಿಯ ಘಟನೆ ಒಂದು ನಡೆದಿದ್ದು ಮೃತ ವ್ಯಕ್ತಿಯನ್ನು ಆಂಬುಲೆನ್ಸ್ ನಲ್ಲಿ ಮನೆಗೆ ಕರೆದ ಯುದ್ಧ ಸಂದರ್ಭದಲ್ಲಿ ನಡುವೆ ಒಂದು ಡಾಬಾ ಬಂದಿದೆ ಈ ವೇಳೆ ಪತ್ನಿ ಡಾಬಾ ಬಂತು ಊಟ ಮಾಡುತ್ತೀಯಾ ಎಂದು ಕಣ್ಣೀರುತ್ತಾ ಕೇಳಿದಾಗ ಸತ್ತಿದ್ದ ಪತಿ ತಕ್ಷಣ ಎಂದು ಕುಳಿತಿರುವ ಘಟನೆ ಹಾವೇರಿ ಜಿಲ್ಲೆಯ ಬಳಿಕ ಬಂಕಾಪುರದಲ್ಲಿ ಈ ಘಟನೆ ನಡೆದಿದೆ. ಹೌದು ಹಾವೇರಿ ಜಿಲ್ಲೆಯ ಬಂಕಾಪುರ ಗ್ರಾಮದ ಬಿಷ್ಣಪ್ಪ ಅಶೋಕ ಗುಡಿಮನಿ (45) ಸತ್ತಿದ್ದ ಎಂದು ಸ್ವಗ್ರಾಮಕ್ಕೆ ಮೃತದೇಹ ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ “ಡಾಬಾ ಬಂತು ನೋಡು ಊಟ ಮಾಡುತ್ತೀಯಾ?’ ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತವ್ಯಕ್ತಿ ಉಸಿರಾಡಿರುವುದು ಕಂಡುಬಂದಿದೆ. ಅದಕ್ಕೂ ಮುನ್ನ ಆತನನ್ನು ಧಾರವಾಡದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈ ವೇಳೆ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ಖಾಸಗಿ ವೈದ್ಯರು ತಿಳಿಸಿದ್ದರು. ಈ ವೇಳೆ ಆತನ ಮೃತದೇಹವವನ್ನು ಊರಿಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಬದುಕಿರುವ ಅಂಶ…

Read More