Subscribe to Updates
Get the latest creative news from FooBar about art, design and business.
Author: kannadanewsnow05
ಬಾಗಲಕೋಟೆ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಕಟ್ಟೆ ಕೆರೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮಗು ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ಮಹಾರಾಷ್ಟ್ರ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 2 ವರ್ಷದ ಮಗು ಹಲಕಿ ಪಾಂಡೆ, ಮನೀಸ್ ಪಾಂಡೆ (23), ಲಕ್ಷ್ಮೀ ಚಿಮರಡಿ (27), ರೇಖಾ ಭೋಕೆ ಮೃತ ದುರ್ದೈವಿಗಳು. ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಒಬ್ಬ ಪುಟ್ಟ ಮಗು ಹಾಗೂ ಮೂವರು ದೊಡ್ಡವರು (ಒಟ್ಟು ನಾಲ್ವರು) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಮಖಂಡಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನಾ ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮೆರಾ ಇಟ್ಟ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಬಂದಿತ ನಕಲಿ ಪತ್ರರ ಮೊಬೈಲ್ ಪರಿಶೀಲನೆ ವೇಳೆ ಸುಮಾರು ನೂರಕ್ಕೂ ಹೆಚ್ಚು ಬೆತ್ತಲೆ ವಿಡಿಯೋಗಳು ಇದೀಗ ಪತ್ತೆಯಾಗಿದೆ. ತನಿಖೆ ವೇಳೆ ಈ ಒಂದು ಬೆತ್ತಲೆ ವಿಡಿಯೋಗಳು ಪತ್ತೆಯಾಗಿದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹಣ ಕೊಡದಿದ್ದರೆ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಬಂಧಿತರಾದ ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಪೊಲೀಸರು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಹಿಳಾ ಅಧಿಕಾರಿಯೊಬ್ಬರ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿದ್ದ ಆರೋಪಿಗಳು, ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿದ್ದರು. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ…
ಬೆಂಗಳೂರು : ಬೆಂಗಳೂರಲ್ಲಿ ಬಿಜೆಪಿ ಸಂಸದ ಬಸವರಾಜ್ ಬೊಮ್ಮಾಯಿ ಪಿಎ ಚಂದ್ರು ಅವರ ಪತ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮನೆಯಲ್ಲಿ ನೇಣು ಬಿಗಿದುಕೊಂಡು ಚಂದ್ರು ಪುತ್ರ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಸಂಜಯನಗರದ ಲೊಟ್ಟೆ ಗೊಲ್ಲಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಹೇಮಂತ್ ಆತ್ಮಹತ್ಯೆಗೆ ಕಾರಣ ನಿಗೂಢವಾಗಿದೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮರಣೋತ್ತರ ಪರೀಕ್ಷೆಗೆ ಎಂ ಎಸ್ ರಾಮಯ್ಯ ಆಸ್ಪತ್ರೆಗೆ ಹೇಮಂತ್ ಶವ ರವಾನಿಸಲಾಗಿದೆ.
ಬೆಂಗಳೂರು : ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕದ ಸುಪ್ರಸಿದ್ದ ನಂದಿನಿ ಬ್ರಾಂಡ್ ಗಳ ಕುರಿತು ಫೇಕ್ ಸುದ್ದಿಗಳು ಹರಿದಾಡುತ್ತಿದ್ದವು. ಇದೀಗ ಈ ಒಂದು ನಕಲಿ ಉತ್ಪನ್ನಗಳ ತಡೆಗೆ ಕೆಎಂಎಫ್ ಮಾಸ್ಟರ್ ಪ್ಲಾನ್ ಮಾಡಿದ್ದು, ಗ್ರಾಹಕರು ಬಳಸುವ ನಂದಿನಿ ಬ್ರಾಂಡ್ ಅಸಲಿಯೋ ನಕಲಿಯೋ ಎಂದು ತಿಳಿಯಲು ಇದೀಗ ಹೊಸ ಪ್ಲಾನ್ ಸಿದ್ಧಪಡಿಸಿದೆ. ಹೌದು ಕೆಎಂಎಫ್ ಸದ್ಯ ನಂದಿನಿ ಉತ್ಪನ್ನಗಳ ಪ್ಯಾಕೆಟ್ ಮೇಲೆ ಕ್ಯೂಆರ್ ಕೋಡ್ ಅಳವಡಿಕೆ ಮೂಲಕ ಬ್ರ‍್ಯಾಂಡ್ ಶ್ರೇಣಿ ಕಾಪಾಡುವ ಜೊತೆಗೆ ನಕಲಿ ಉತ್ಪನ್ನಗಳ ಹಾವಳಿಗೂ ಬ್ರೇಕ್ ಹಾಕಲು ಮುಂದಾಗಿದೆ. ಆರಂಭಿಕವಾಗಿ ತುಪ್ಪದ ಪ್ಯಾಕೆಟ್ ಮತ್ತು ಬಾಟಲ್‌ಗಳ ಮೇಲೆ ಈ ಕೋಡ್ ಅಳವಡಿಕೆ ಮಾಡಿದೆ. ತುಪ್ಪ ಕ್ವಾಲಿಟಿ ಅಥವಾ ಅಸಲಿತನವನ್ನ ಪರೀಕ್ಷೆ ಮಾಡಬೇಕಿದ್ರೆ ನೇರವಾಗಿ ಕೋಡ್‌ನ್ನ ಒಮ್ಮೆ ಸ್ಕ್ಯಾನ್ ಮಾಡಿ, ನಂಬರ್ ಹಾಕಿದ್ರೆ, ಒಟಿಪಿ ಬರಲಿದೆ. ಇದನ್ನ ಎಂಟರ್ ಮಾಡಿದ ಕೂಡಲೇ ಆ ತುಪ್ಪದ ಸಂಪೂರ್ಣ ಮಾಹಿತಿ ನಿಮ್ಮ ಫೋನ್‌ನಲ್ಲಿ ಸಿಗಲಿದೆ. ಎಲ್ಲಿ ತಯಾರಾಗಿದೆ. ಯಾವಾಗ ತಯಾರಿಕಾ ಜಾಗದಿಂದ ಮಾರುಕಟ್ಟೆಗೆ ಬಂದಿದೆ.…
ಬೆಂಗಳೂರು : ನಿನ್ನೆ ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಲಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಾಗಲಕೋಟೆ ಎಸ್ಪಿ ಸಿದ್ದಾರ್ಥ್ ಮಾಹಿತಿ ನೀಡಿದ್ದು ಇದುವರೆಗೂ 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಆರೋಪಿಗಳ ವಿರುದ್ಧ ಸುಮಟೊ ಕೇಸ್ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ ಇನ್ನು ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತಮ್ಮ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ ಎಂದು ಕಿಡಿ ಕಾರಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ಕಲ್ಲು, ಚಪ್ಪಲಿ ತೂರಾಟದ ಪುಂಡಾಟಿಕೆ ನಡೆದಿರುವುದು ಅತ್ಯಂತ ಖಂಡನೀಯ ಹಾಗೂ ಹೇಯ ಕೃತ್ಯ. ಈ ಓಲೈಕೆ ದುರಾಡಳಿತದ, ತುಘಲಕ್ ಕಾಂಗ್ರೆಸ್ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದ್ದು, ಶಾಂತಿ ಕದಡುವ ಕಿಡಿಗೇಡಿಗಳಿಗೆ ರಾಜಾಶ್ರಯ ಸಿಕ್ಕಿದೆ. ಪೊಲೀಸರ ಉಪಸ್ಥಿತಿಯಲ್ಲಿಯೇ ಕಲ್ಲು ತೂರಾಟ ನಡೆದರೆ, ಇನ್ನು ರಾಜ್ಯದಲ್ಲಿ ಜನಸಾಮಾನ್ಯರಿಗೆ ಸುರಕ್ಷತೆ ಎಲ್ಲಿದೆ? ಈ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ, ಹಿಂದೂಗಳ ಹಬ್ಬ…
ಬಾಗಲಕೋಟೆ : ನಗರದಲ್ಲಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಪ್ರತಿಕ್ರಿಯೆ ನೀಡಿದ್ದು, ಘಟನೆಯ ಕುರಿತ ಎಲ್ಲಾ ಮಾಹಿತಿಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಬುಧವಾರ ಸಂಜೆ ನಡೆದ ಈ ಘಟನೆಯ ಹಿನ್ನೆಲೆ 8 ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ತನಿಖೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಗಲಕೋಟೆ ಜಿಲ್ಲಾ ಎಸ್ ಪಿ ಸಿದ್ದಾರ್ಥ ಗೊಯಲ್ ಮಾಹಿತಿ ನೀಡಿದ್ದು, ಈ ಗಲಾಟೆ ಪೂರ್ವ ಯೋಜಿತವಾಗಿದ್ದಲ್ಲ ಮತ್ತು ಡಿಜೆ ವಿಚಾರಕ್ಕಾಗಿಯಾಗಿ ಕಲ್ಲು ತೂರಾಟ ನಡೆದಿಲ್ಲ. ರಾತ್ರಿ ಸುಮಾರು 10 ಗಂಟೆ 6 ನಿಮಿಷಕ್ಕೆ ಕಲ್ಲು ತೂರಾಟವಾಗಿದ್ದು, ಈ ವೇಳೆ ನನಗೆ ಮತ್ತು ಇಬ್ಬರು ಕಾನ್ಸ್ಟೇಬಲ್ಗಳಿಗೆ ಗಾಯಗಳಾಗಿವೆ ಎಂದು ಎಸ್ಪಿ ತಿಳಿಸಿದ್ದಾರೆ. ಕಲ್ಲು ತೂರಾಟದ ಜೊತೆ ಚಪ್ಪಲಿಯನ್ನು ಕೂಡ ಎಸೆಯಲಾಗಿದೆ. ಮಸೀದಿ ಒಳಗೆ ಕಲ್ಲಿನಿಂದ ಶೂ ರ್ಯಾಕ್ ಮಾಡಲಾಗಿತ್ತು. ಅದೇ ರ್ಯಾಕ್ನ ಕಲ್ಲು ತೆಗೆದುಕೊಂಡು ತೂರಾಟ ನಡೆಸಲಾಗಿದೆ. ಮಸೀದಿಯೊಳಗೆ ಯಾವುದೇ ರಾಡ್ ಆಗಲಿ…
ಬೆಂಗಳೂರು : ಬೆಂಗಳೂರಲ್ಲಿ ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಗೂರು ಸಮೀಪದ ಗ್ರೇಟರ್ ಬೆಂಗಳೂರು ಕಸ ಸಂಸ್ಕರಣ ಘಟಕದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಕಸದ ರಾಶಿ ಧಗ ಧಗನೆ ಹೊತ್ತಿ ಉರಿಯುತ್ತಿದೆ. ಬೆಂಕಿ ಜೊತೆಗೆ ಘಟಕದ ಸುತ್ತಮುತ್ತಲು ಕೂಡ ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಹುಳಿಮಾವು ಮತ್ತು ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುತ್ತಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುತ್ತಿರುವುದನ್ನು ಪ್ರಶ್ನಿಸಿ ತಡೆದಿದ್ದಕ್ಕೆ ಹಲ್ಲೆ ನಡೆಸಲಾಗಿದೆ. ಕಲ್ಬುರ್ಗಿಯಲ್ಲಿ ವಿದ್ಯಾರ್ಥಿಯಿಂದ ಪರೀಕ್ಷಾ ಮೇಲ್ವಿಚಾರಕರ ಮೇಲೆ ಹಲ್ಲೆ ನಡೆದಿದೆ. ಡಾಕ್ಟರ್ ಮಾಲಕರೆಡ್ಡಿ ಹೋಮಿಯೋಪತಿ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಸಹಾಯಕ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಮೇಲೆ ವಿದ್ಯಾರ್ಥಿ ಹಲ್ಲೆ ಮಾಡಿದ್ದಾನೆ ಕಾಲೇಜಿನ ವಿದ್ಯಾರ್ಥಿ ಶಹಬಾಜ್ ಎಂಬತ ಪ್ರಧ್ಯಾಪಕರ ಮೇಲೆ ಹಲ್ಲೆ ಮಾಡಿದ್ದಾನೆ. ಮಟೀರಿಯ ಮೆಡಿಕ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿತ್ತು. ಮೊಬೈಲ್ ಬಳಸಿ ವಿದ್ಯಾರ್ಥಿ ಶಹಾಬಾದ್ ನಕುಲು ಮಾಡಲು ಮುಂದಾಗಿದ್ದ. ಇದನ್ನು ಪ್ರಶ್ನಿಸಿ ಪ್ರಾಧ್ಯಾಪಕ ಶಿವರಾಜ್ ಕುಮಾರ್ ಅವರು ಆತನ ಉತ್ತರ ಪತ್ರಿಕೆಯನ್ನು ಪಡೆದಿದ್ದಾರೆ. ಈ ವೇಳೆ ಶಿವರಾಜಕುಮಾರ್ ಮೇಲೆ ಶಹಬಾಜ್ ಹಲ್ಲೆ ಮಾಡಿದ್ದಾನೆ. ವಿದ್ಯಾರ್ಥಿ ಶಹಬಾಜ್ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿದ್ಯಾರ್ಥಿಯ ನಡವಳಿಕೆಯ ಬಗ್ಗೆ ಆಡಳಿತ ಮಂಡಳಿ ಪಾಲಕರಿಗೆ ಮಾಹಿತಿ ನೀಡಿದೆ. ಮುಂದಿನ ಪರೀಕ್ಷೆಗಳಿಗೆ ಅವಕಾಶ ನೀಡಿದರಲು ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದೆ.
ಕಲಬುರ್ಗಿ : ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಲ್ಬುರ್ಗಿ ಜಿಲ್ಲೆಯಲ್ಲಿ ಹುಚ್ಚುನಾಯಿ ಅಟ್ಟಹಾಸ ಮೆರೆದಿದೆ. ನಗರದ ದೇವಿ ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ ಐದು ಮಕ್ಕಳು ಗಾಯಗೊಂಡಿದ್ದಾರೆ.ಮನೆ ಮುಂದೆ ಆಟವಾಡುತ್ತಿದ್ದಾಗ ಹುಚ್ಚುನಾಯಿ ಒಂದು ದಾಳಿ ಮಾಡಿದೆ. ದಾಳಿಯ ಪರಿಣಾಮ ಮಕ್ಕಳ ಕಣ್ಣು ಕಿವಿ ಮತ್ತು ಎದೆ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ಐವರು ಮಕ್ಕಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಾಲಿಕೆ ಅಧಿಕಾರಿಗಳ ವಿರುದ್ಧ ದೇವಿ ನಗರ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ದಿನ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರಪ್ರದೇಶ : RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲೆಟು ಎಸೆಯಲಾಗಿದೆ ಆರ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ವಂದೇ ಭಾರತ ರೈಲಿನ ಮೇಲೆ ಕಿಡಿ ಗಿಡಿಗಳು ಕಲ್ಲು ತೂರಿದ್ದಾರೆ. ಉತ್ತರ ಪ್ರದೇಶದ ಕೌಡ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ದೆಹಲಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿನ ಗಾಜು ಬಿರುಕು ಬಿಟ್ಟಿದೆ. ನಿನ್ನೆ ಮಧ್ಯಾಹ್ನ 3.20 ರ ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.














