Subscribe to Updates
Get the latest creative news from FooBar about art, design and business.
Author: kannadanewsnow05
ತೆಲಂಗಾಣ : ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಶಮೈಲರಾಮ್‌ನಲ್ಲಿರುವ ಸಿಚಾರ್ ರಾಸಾಯನಿಕ ಉದ್ಯಮದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 5 ಜನರು ಸಾವನ್ನಪ್ಪಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ, ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ತೆಲಂಗಾಣ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳುವಂತೆ, ಸ್ಫೋಟದಿಂದಾಗಿ ಸುಮಾರು 15 ರಿಂದ 20 ಜನರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಸ್ಥಳದಲ್ಲಿ 11 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ. ಸಿಲುಕಿರುವ ಕಾರ್ಮಿಕರನ್ನು ಹುಡುಕಲು ಸ್ಥಳದಲ್ಲಿ ರಕ್ಷಣಾ ಮತ್ತು ಶೋಧ ತಂಡಗಳನ್ನು ನಿಯೋಜಿಸಲಾಗಿದೆ.
ಬೆಳಗಾವಿ : ಅನ್ಯಕೋಮಿನ ಯುವಕರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಕ್ಕೆ ಐವರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾರ್ಯಕರ್ತರ ವಿರುದ್ಧವೇ FIR ದಾಖಲಾಗಿದೆ. ಹೌದು ಅನ್ಯಕೋಮೀನ ಕೆಲವು ಜನ ಗೋವುಗಳನ್ನು ಖಸಾಯಿಕಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಮಾಹಿತಿ ತಿಳಿದು ಶ್ರೀರಾಮಸೇನೆ ಕಾರ್ಯಕರ್ತರು ಅದನ್ನು ತಡೆದಿದ್ದಾರೆ. ಬಳಿಕ ಮರಕೆ ಕಟ್ಟಿ ಹಾಕಿ ಗೋವುಗಳನ್ನು ರಕ್ಷಿಸಿದ ಹಾಗೂ ಹೊಡೆತದಿಂದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೆ ಇದೀಗ ‘FIR ದಾಖಲಾಗಿದ್ದು, BNS ಕಾಯ್ದೆ 189(2), 192(2), 115(2), 352(2), 126(2), ಹಾಗು 190 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.ಮಹಾವೀರ ಸೊಲ್ಲಾಪುರೆ ಎನ್ನುವವರು ಮಹಿಳೆಯರ ಮೇಲೆ ಶ್ರೀರಾಮ ಸೇನೆ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. SP ಭೀಮಾಶಂಕರ್ ಗುಳೇದ ಸ್ಪಷ್ಟನೆ ಈ ವಿಷಯಕ್ಕೆ ಸಂಬಂಧಿಸಿದಂತೆ…
ಹಾಸನ : ಇತ್ತೀಚಿಗೆ ಹೃದಯಘಾತ ಪ್ರಕರಣಗಳು ಸಾಮಾನ್ಯವಾಗಿ ಬಿಟ್ಟಿವೆ. ಆದರೆ ಹಾಸನದಲ್ಲಿ ಮಾತ್ರ ಈ ಒಂದು ಹೃದಯಾಘಾತದಿಂದ ಸಾವನಪುತ್ತಿರುವವರ ಪ್ರಕರಣಗಳು ಜನರಲ್ಲಿ ಆತಂಕ ಹೆಚ್ಚಿಸಿದೆ ಏಕೆಂದರೆ ಕಳೆದ 40 ದಿನಗಳಲ್ಲಿ ಇಂದಿನವರೆಗೆ ಒಟ್ಟು 21 ಜನರು ಈ ಒಂದು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಅಲ್ಲದೆ ಇಂದು ಒಂದೇ ದಿನ ಜಿಲ್ಲೆಯಲ್ಲಿ ಒಟ್ಟು ಮೂವರು ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಮನೆಯಲ್ಲೇ ಕುಸಿದು ಬಿದ್ದು ಮಹಿಳೆ ಸಾವು! ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 21ಜನ ಬಲಿಯಾಗಿದ್ದಾರೆ.…
ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ತಿಮ್ಮಪ್ಪನ ದರ್ಶನ ಪಡೆದು ಬರುತ್ತಿದ್ದಾಗ ಟಿ.ಟಿ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ರಾಜ್ಯದ ಮೂವರು ಸ್ಥಳದಲ್ಲೇ ಸ್ಥಳದಲ್ಲಿ ಸಾವನಪ್ಪಿದ್ದಾರೆ. ಎಂಟು ಮಂದಿಗೆ ಗಂಭೀರವಾದ ಗಾಯಗಳಾಗಿವೆ. ಆಂಧ್ರಪ್ರದೇಶದ ಮದನಪಲ್ಲಿ ಬಳಿ ಟಿಟಿ ವಾಹನ ಡಿಕ್ಕಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ 3 ಸಾವನ್ನಪ್ಪಿದ್ದಾರೆ ಉಳಿದ ಎಂಟು ಜನರುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಒಂದು ಅಪಘಾತದಲ್ಲಿ ರಾಜ್ಯದ ಮೂವರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ ಟಿಟಿ ವಾಹನದಲ್ಲಿದ್ದ ಮೇಘರ್ಷ (17) ಚರಣ್ (17) ಹಾಗೂ ಶ್ರಾವಣಿ ಸಾವನಪ್ಪಿದ್ದಾರೆ.ಮೃತರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗ್ರಾಮದವರು ಎಂದು ತಿಳಿದುಬಂದಿದೆ. ಆಂಧ್ರದ ಚಿತ್ತೂರು ಜಿಲ್ಲೆಯ ಮದನಪಲ್ಲಿ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.
ಹಾಸನ : ಹಾಸನದಲ್ಲಿ ಇಂದು ಒಂದೇ ದಿನ ಮೂವರು ಹೃದಯಘಾತಕ್ಕೆ ಬಲಿಯಾಗಿದ್ದಾರೆ. ತಡರಾತ್ರಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳುನಲ್ಲಿ ಯೋಧ ಸಾವನಪ್ಪಿದ್ದರೆ, ಇನ್ನೂ ಇಂದು ಬೆಳಿಗ್ಗೆ ತಾನೇ ಹೃದಯಾಘಾತದಿಂದ ಬೇಲೂರು ಪಟ್ಟಣದಲ್ಲಿ ಮಹಿಳೆ ಒಬ್ಬರು ಕುಸಿದು ಬಿದ್ದು ಸಾವನಪ್ಪಿದ್ದಾರೆ. ಇದೀಗ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿದ್ದಾಗ ಪ್ರಾಧ್ಯಾಪಕರೊಬ್ಬರೂ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಹಾಸನ ಜಿಲ್ಲೆಯಲ್ಲಿ ಒಂದೇ ದಿನ ಹೃದಯಾಘಾತಕ್ಕೆ ಮೂರು ಜನ ಬಲಿ ಯಾಗಿದ್ದಾರೆ. ಹಾಸನ ಜಿಲ್ಲೆಯ ಬೇಲೂರಿನ ಜೆಪಿ ನಗರದ ಲೇಪಾಕ್ಷಿ (50), ಹೊಳೆ ನರಸೀಪುರದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ, ಮುತ್ತಯ್ಯ (58) ಸಾವನಪ್ಪಿದ್ದಾರೆ, ಇವರು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು.ಹಾಗು ಕೆಂಬಾಳು ಗ್ರಾಮದಲ್ಲಿ ಹೃದಯಾಘಾತದಿಂದ ಯೋಧ ಲೋಹಿತ್ (38) ಸಾವನ್ನಪ್ಪಿದ್ದಾರೆ. ಕಳೆದ 40 ದಿನಗಳಲ್ಲಿ ಒಟ್ಟು 21 ಜನರು ಹೃದಯಘಾತಕ್ಕೆ ಬಲಿಯಾಗಿದ್ದಾರೆ ಇತ್ತೀಚಿಗೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯರು ಹೃದಯಾಘಾತಕ್ಕೆ ಏನು ಕಾರಣ ಎಂಬುದರ ಕುರಿತು ವರದಿ…
ದಕ್ಷಿಣಕನ್ನಡ : ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಯುವತಿ ಗರ್ಭವತಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿಗೆ. ಬಿಜೆಪು ಮುಖಂಡನ ಪುತ್ರ ಕೃಷ್ಣ ಜೆ ರಾವ್ ನಿಂದ ಗರ್ಭವತಿಯಾಗಿದ್ದಂತ ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಎಂಬುವರಿಂದ ಗರ್ಭವತಿಯಾಗಿರುವುದಾಗಿ ಸಂತ್ರಸ್ತ ಯುವತಿಯೊಬ್ಬಳು ದೂರು ನೀಡಿದ್ದಳು. ಈ ದೂರು ಆಧರಿಸಿ ಪ್ರಕರಣ ಕೂಡ ದಾಖಲಾಗಿದೆ. ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಕೃಷ್ಣ ಜೆ ರಾವ್ ನಾಪತ್ತೆಯಾಗಿದ್ದಾರೆ. ಯುವಕ ಕೃಷ್ಣ ಜೆ ರಾವ್ ವಿರುದ್ಧ ಲವ್ ಸೆಕ್ಸ್ ದೋಖಾ ಆರೋಪವನ್ನು ಸಂತ್ರಸ್ತ ಯುವತಿ ಮಾಡಿದ್ದಳು. ಹೈಸ್ಕೂಲ್ ನಲ್ಲಿ ಓದುತ್ತಿದ್ದಾಗವೇ ಕೃಷ್ಣ, ಸಂತ್ರಸ್ತೆ ನಡುವೆ ಪ್ರೇಮಾಂಕುರವಾಗಿತ್ತಂತೆ. ಇಂತಗ ಕೃಷ್ಣ ತನ್ನ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದಾಗಿ ಸಂತ್ರಸ್ತೆ ಆರೋಪಿಸಿದ್ದರು. ಅಕ್ಟೋಬರ್.11, 2024ರಂದು ದೈಹಿಕ ಸಂಪರ್ಕ ಬೆಳೆಸಿದ್ದನು. ಹೀಗಾಗಿ ತಾನು ಗರ್ಭವತಿಯಾಗಿರುವುದಾಗಿ ಸಂತ್ರಸ್ತೆ ದೂರು ನೀಡಿದ್ದರು. ಇಂತಹ…
ಬೆಂಗಳೂರು : ನಿಗದಿ ಮಾಡಿದ ದರಕ್ಕಿಂತಲೂ ಹೆಚ್ಚು ಹಣ ವಸೂಲಿ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಟೋ ಚಾಲಕರಿಗೆ ಸಾರಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ. ನಿಯಮ ಉಲ್ಲಂಘಿಸಿದ 15 ಆಟೋಗಳನ್ನು ಇದೀಗ RTO ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಹೌದು ನಿಗದಿತ ದರಕ್ಕಿಂತ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಪ್ರಯಾಣಿಕರಿಂದ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ಹಣ ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚು ದರ ವಸೂಲಿ ಮಾಡುತ್ತಿರುವ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಲ್ಲದೆ ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರಗಿಸುವಂತೆ ಸಾರಿಗೆ ಇಲಾಖೆ ಕಮಿಷನರ್ ಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಚೀಟಿ ವಂಚಕರ ಹಾವಳಿ ಹೆಚ್ಚುತ್ತಿದ್ದು, ಚೀಟಿ ಹಾಕುವ ವ್ಯಕ್ತಿಯೊಬ್ಬ ಸುಮಾರು ನಲವತ್ತಕ್ಕೂ ಹೆಚ್ಚು ಜನರಿಗೆ ಒಂದೂವರೆ ಕೋಟಿಗೂ ಅಧಿಕ ಹಣ ವಂಚನೆ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.ದೇವರ ಚಿಕ್ಕನಹಳ್ಳಿಯ ಶ್ರೀನಿವಾಸ ಲೇಔಟ್ ನ ಪಾಂಡುರಂಗ ಎಂಬ ವ್ಯಕ್ತಿ ಒಂದೂವರೆ ಕೋಟಿಗೂ ಅಧಿಕ ವಂಚನೆಯ ಎಸಗಿದ್ದಾನೆ. ಕಳೆದ 20 ವರ್ಷಗಳಿಂದ ಪಾಂಡುರಂಗ ಚೀಟಿ ವ್ಯವಹಾರ ನಡೆಸುತ್ತಿದ್ದ ಎನ್ನಲಾಗಿದೆ. ಹಣ ಪಡೆದು ರಾತ್ರೋರಾತ್ರಿ ಪಾಂಡುರಂಗ ಮನೆ ಖಾಲಿ ಮಾಡಿಕೊಂಡು ಪರಾರಿಯಾಗಿದ್ದಾನೆ. ಮನೆ ಲೀಸ್ ಗೆ ನೀಡಿ ಬ್ಯಾಂಕಿನಿಂದ ಪಾಂಡುರಂಗ ಲೋನ್ ಪಡೆದಿದ್ದ. ಲೀಸ್ ಗೆ ಇದ್ದವರನ್ನು ಪೊಲೀಸರು ಮತ್ತು ಬ್ಯಾಂಕ್ ನವರು ಇದೀಗ ಮನೆ ಖಾಲಿ ಮಾಡಿಸಿದ್ದಾರೆ. ಇಂದು ತಮಿಳುನಾಡಿಗೆ ಓಡಿ ಹೋಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಘಟನೆ ಸಂಭಂದ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಲೋಕದಲ್ಲಿ ಹುಟ್ಟಿದ ಯಾರೂ ಬಡತನದಲ್ಲಿ ಬದುಕಲು ಬಯಸುವುದಿಲ್ಲ. ಅವರು ತಮ್ಮ ಆದಾಯವನ್ನು ಹೆಚ್ಚಿಸಿಕೊಂಡು ಚೆನ್ನಾಗಿ ಬದುಕಲು ಮಾತ್ರ ಬಯಸುತ್ತಾರೆ. ಆರಾಮವಾಗಿ ಬದುಕಲು ಬಯಸುವವರೂ ಇದ್ದಾರೆ. ಈ ಅವಕಾಶ ಮತ್ತು ಸಂತೋಷದ ಅಧಿಪತಿ ಶುಕ್ರ. ಒಬ್ಬ ವ್ಯಕ್ತಿಯು ಶುಕ್ರನ ಕೃಪೆಯನ್ನು ಪಡೆದರೆ, ಅವನು ಯಾವುದೇ ರೀತಿಯಲ್ಲಿ ಕಷ್ಟಪಡುವುದಿಲ್ಲ ಮತ್ತು ಸಂತೋಷದ ಜೀವನವನ್ನು ನಡೆಸುತ್ತಾನೆ ಎಂದು ಹೇಳಲಾಗುತ್ತದೆ. ಈ ಪೋಸ್ಟ್‌ನಲ್ಲಿ, ಶುಕ್ರನ ಕೃಪೆಯನ್ನು ಪಡೆಯಲು ಮತ್ತು ಆದಾಯವನ್ನು ಹೆಚ್ಚಿಸಲು ಪಠಿಸಬೇಕಾದ ಮಂತ್ರವನ್ನು ನಾವು ನೋಡಲಿದ್ದೇವೆ . ಶ್ರೀ ಸಿಂಗದೂರು ಚೌಡಮ್ಮನವರ ದೇವಿ ಜ್ಯೋತಿಷ್ಯ ಪೀಠ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ಕೇಶವ ಕೃಷ್ಣ ಭಟ್ ತಂತ್ರಿ ನಂ:- 8971498358 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು,…
ಹಾಸನ : ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 20 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 20 ಜನ ಬಲಿಯಾಗಿದ್ದಾರೆ.














