Author: kannadanewsnow05

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಬಂಧಿಸಿದ್ದು, ವಿದ್ಯುತ್ ಸ್ಪರ್ಶಿಸಿ ದಂಪತಿ ಸಾವನ್ನಪ್ಪಿದ ಘಟನೆ ನಡೆದಿದೆ. ಸೊರಬ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮೃತರನ್ನು ಕೃಷ್ಣಪ್ಪ (55) ಮತ್ತು ಅವರ ಪತ್ನಿ ವಿನೋದ (42) ಎಂದು ಗುರುತಿಸಲಾಗಿದೆ. ಮನೆ ಮುಂದೆ ಬಟ್ಟೆ ಒಣಗಿಸಲು ಹಾಕಿದ್ದ ಕಬ್ಬಿಣದ ತಂತಿಗೆ ಮನೆಯ ವಿದ್ಯುತ್ ಮೋಟಾರ್‌ನ ವೈರ್‌ಗಳು ಸಂಪರ್ಕವಾಗಿದ್ದು, ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ತಂತಿ ತೇವಗೊಂಡಿದೆ. ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದ ವಿನೋದ ಅವರಿಗೆ ವಿದ್ಯುತ್ ತಗುಲಿದ್ದು, ಅವರನ್ನು ರಕ್ಷಿಸಲು ಧಾವಿಸಿದ ಪತಿ ಕೃಷ್ಣಪ್ಪ ಅವರಿಗೂ ಶಾಕ್ ಹೊಡೆದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಟ್ಟೆ ಒಣಗಿಸುವ ತಂತಿಗೆ ಮೋಟಾರ್‌ನ ಸ್ಕಿನ್ ಹೋಗಿರುವ ವೈರ್ ಮೂಲಕ ವಿದ್ಯುತ್ ಹರಿದಿದ್ದು ಇದಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಸೊರಬ ಪೊಲೀಸ್ ಠಾಣೆಯ ಪಿಎಸ್ಐ ನವೀನ್ ಕುಮಾರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಹೃದಯವಿದ್ರಾವಕ ಒಂದು ಘಟನೆ ನಡೆದಿದ್ದು ಯಾರೋ ಪಾಪಿಗಳು ವಿಷಯುಕ್ತ ಆಹಾರ ನೀಡಿದರಿಂದ ಅದನ್ನು ತಿಂದು ರಕ್ತವಾಂತಿ ಮಾಡು ಮತ್ತು ಐದು ಶ್ವಾನಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ಕೆ.ಆರ್ ಪುರಂನ ಭಟ್ಟರಹಳ್ಳಿಯಲ್ಲಿ ನಿನ್ನೆ ಈ ಒಂದು ಘಟನೆ ನಡೆದಿದ್ದು, ರಕ್ತವಾಂತಿ ಮಾಡುತ್ತ ತೀವ್ರ ಅಸ್ವಸ್ಥಗೊಂಡಿದ್ದ 6 ಬೀದಿನಾಯಿಗಳಲ್ಲಿ 5 ಬೀದಿನಾಯಿಗಳು ರಸ್ತೆಯಲ್ಲಿಯೇ ಒದ್ದಾಡಿ ಸಾವನ್ನಪ್ಪಿವೆ. ಒಂದು ನಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಬೀದಿನಾಯಿಗಳು ಸಾವನ್ನಪ್ಪುತ್ತಿರುವ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ನಾಯಿಗಳು ಆಹಾರ ತಿಂದ ಕೆಲ ಹೊತ್ತಿನಲ್ಲೇ ವಿಚಿತ್ರವಾಗಿ ನರಳಾಡಿವೆ ತಕ್ಷಣ ಸ್ಥಳೀಯರು ಎಲ್ಲ ನಾಯಿಗಳಿಗೆ ನೀರು ಕುಡಿಸಿದ್ದಾರೆ. ಆದರೆ ಆರು ನಾಯಿಗಳಲ್ಲಿ ಐದು ನಾಯಿಗಳು ರಕ್ತದ ವಾಂತಿ ಮಾಡುತ್ತ ಒದ್ದಾಡುತ್ತಾ ಸಾವನ್ನಪ್ಪಿವೆ. ಒಂದು ನಾಯಿ ಮಾತ್ರ ಬದುಕು ಉಳಿದಿದೆ. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಏರೋನೊಟಿಕಲ್ ಇಂಜಿನಿಯರ್ ನಂದಿನಿ ಎನ್ನುವವರು ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಫಾರ್ಚುನರ್ ಮತ್ತು ದ್ವಿಚಕ್ರ ವಾಹನದ ನಡುವೆ ಈ ಒಂದು ಅಪಘಾತ ಸಂಭವಿಸಿದೆ. ಖಾಸಗಿ ಕಂಪನಿ ಮಹಿಳಾ ಉದ್ಯೋಗಿಯಾಗಿದ್ದ ನಂದಿನಿ ಇದೀಗ ಸಾವನಪ್ಪಿದ್ದಾರೆ. ಮೂಲತಃ ನೆಲಮಂಗಲ ತಾಲೂಕಿನ ಹುಸ್ಕೂರು ನಿವಾಸಿಯಾಗಿದ್ದ ನಂದಿನಿ ಕಳೆದ ಆರು ತಿಂಗಳಿನಿಂದ ಬಾಗಲೂರಿನ ಪಿಜಿಯಲ್ಲಿ ನಂದಿನಿ ವಾಸವಿದ್ದರು. ನಿನ್ನೆ ಸಂಜೆ ಕೆಲಸ ಮುಗಿಸಿ ಪಿಜಿಗೆ ತೆರಳುವಾಗ ಈ ಒಂದು ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ನಂದಿನಿ ತಲೆ ಮತ್ತು ಕಾಲಿಗೆ ತೀವ್ರವಾಗಿ ಗಾಯಗಳಾಗಿದ್ದವು. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ತೀವ್ರ ರಕ್ತ ಸ್ರಾವದಿಂದ ನಂದಿನಿ ಸಾವನ್ನಪ್ಪಿದ್ದಾರೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಅಪಘಾತದ ಕುರಿತು ಪ್ರಕರಣ ದಾಖಲಿಸಿ ಕೊಂಡುಕೊಂಡಿರುವ ಪೊಲೀಸರು ಇದೀಗ ತನಿಖೆ ನಡೆಸುತ್ತಿದ್ದಾರೆ.

Read More

ದಾವಣಗೆರೆ : ದಾವಣಗೆರೆಯಲ್ಲಿ ಬೆಚ್ಚಿಬಿಳಿಸುವಂತಹ ಘಟನೆ ಒಂದು ನಡೆದಿದ್ದು ಯುವಕನೊಬ್ಬ ತನ್ನ ಪತ್ನಿಯ ಮಲತಾಯಿಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದು ಅಲ್ಲದೆ ಇಂದು ಪತ್ನಿಯನ್ನು ಬಿಟ್ಟು ಅತ್ತೆಯ ಜೊತೆಗೆ ಪರಾರಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಹೌದು 55 ವರ್ಷದ ಮಹಿಳೆಯ ಜೊತೆಗೆ ಯುವಕ ಪರಾರಿಯಾಗಿದ್ದಾನೆ. ಆಂಟಿಯ ಮೇಲೆ 25 ವರ್ಷದ ಯುವಕನಿಗೆ ಪ್ರೀತಿ ಹುಟ್ಟಿದ್ದು, ಇದೊಂದು ಸಿನಿಮಾ ಸ್ಟೋರಿಯನ್ನೇ ಈ ಒಂದು ಕಥೆ ಮೀರಿಸುವಂತಿದೆ. ಮಲತಾಯಿ ಶಾಂತ ಜೊತೆಗೆ ಯುವಕ ಗಣೇಶ್ ಎಸ್ಕೇಪ್ ಆಗಿದ್ದಾನೆ. ದಾವಣಗೆರೆ ಜಿಲ್ಲೆಯ ಮುದ್ದೇನಹಳ್ಳಿ ಗ್ರಾಮದಲ್ಲಿ ಇದೊಂದು ಘಟನೆ ನಡೆದಿದೆ. ಚೆನ್ನಗಿರಿ ತಾಲೂಕಿನ ಮರವಂಜಿ ಗ್ರಾಮದ ಗಣೇಶ ಮೇ 12 ರಂದು ಪತ್ನಿಯನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಅತ್ತೆ ಶಾಂತಾ ಜೊತೆ ಪರಾರಿಯಾಗಿದ್ದಾನೆ. ಮಹಿಳೆ ಶಾಂತ ಜೊತೆಗೆ ಗಣೇಶ್ ಪರಾರಿಯಾಗಿದ್ದಾನೆ. 25 ವರ್ಷದ ಯುವಕನಾಗಿರುವ ಗಣೇಶ ಹೆಂಡತಿಯ ಮಲತಾಯಿಯ ಜೊತೆ ಪರಾರಿಯಾಗಿದ್ದಾನೆ. ಗಣೇಶ್ ಪತ್ನಿ ಹೇಮಾಳ ಮಲತಾಯಿ ಆಗಿರುವ ಶಾಂತ ಮುದ್ದೇನಹಳ್ಳಿ ನಿವಾಸಿಯಾಗಿದ್ದಾರೆ. ಇನ್ನು ಯುವಕ…

Read More

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಮೀಣ್ಯಂ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಹುಲಿಗಳಿಗೆ ವಿಷ ಪ್ರಾಶನ ಮಾಡಿರುವುದು ಪತ್ತೆಯಾಗಿದೆ. ಹಸುಗಳಿಗೆ ವಿಷ ಪ್ರಾಶನ ಮಾಡಿದ್ದು ಬಳಿಕ ಅದನ್ನು ತಿಂದ ಹುಲಿಗಳು ಸಾವನ್ನಪ್ಪಿವೆ ಎಂದು ಉಪ ಸಂರಕ್ಷಣಾಧಿಕಾರಿ ಚಕ್ರಪಾಣಿ ಹೇಳಿಕೆ ನೀಡಿದರು. ವಿಷ ಪ್ರಾಶನದಿಂದಲೇ ಐದು ಹುಲಿಗಳು ಮೃತಪಟ್ಟಿವೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಈ ಕುರಿತು ಹೇಳಿಕೆ ನೀಡಿದ್ದು, ಮರಣೋತ್ತರ ಪರೀಕ್ಷೆ ವೇಳೆ ಹುಲಿ ದೇಹದಲ್ಲಿ ವಿಷ ಪತ್ತೆಯಾಗಿದೆ. ಹಸುವಿನ ದೇಹದ ಮೇಲು ವಿಷದ ಅಂಶ ಕಂಡು ಬಂದಿದೆ ಹುಲಿ ಬೇಟೆಯಾಡಿದ ನಂತರ ವಿಷ ಹಾಕಿರುವ ಸಾಧ್ಯತೆ ಇದೆ. ಹುಲಿಗಳು ನಾಡಿಗೆ ಬಂದಿಲ್ಲ, ಹಸುಗಳೆ ಕಾಡಿಗೆ ಬಂದಿವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಹೇಳಿಕೆ ನೀಡಿದರು.

Read More

ವಿಜಯಪುರ : ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆ ವಿಚಾರವಾಗಿ ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಖುರ್ಚಿ ಕಾಲಿ ಇಲ್ಲ ಎಂದು ವಿಜಯಪುರ ನಗರದಲ್ಲಿ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿಕೆ ನೀಡಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರ ಹಾಗೂ ಪಕ್ಷದ ಅಧ್ಯಕ್ಷರ ಬದಲಾವಣೆ ವಿಚಾರ ಹಾಗು ಸಚಿವ ಸಂಪುಟ ರಚನೆ ವಿಚಾರ ಇದೆಲ್ಲವೂ ಹೈಕಮಾಂಡ್ ಅವರಿಗೆ ಬಿಟ್ಟಿದ್ದು ಈ ವಿಚಾರಗಳು ಇಕ್ಬಾಲ್ ಕೈನಲ್ಲೂ ಇಲ್ಲ ನನ್ನ ಕೈನಲ್ಲೂ ಇಲ್ಲ ಎಂದು ಶಾಸಕ ಇಕ್ಬಾಲ್ ಹೇಳಿಗೆಗೆ ಸಚಿವ ಎಂಬಿ ಪಾಟೀಲ್ ಅವರು ತಿರುಗೇಟು ನೀಡಿದರು. ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡಿದ ಸಚಿವ ಎಂ ಬಿ ಪಾಟೀಲ್, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ.ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿ ಎಂದು ಕೇಳಿಲ್ಲ. ಒಂದು ವೇಳೆ ಅಧ್ಯಕ್ಷ ಸ್ಥಾನ ನೀಡಿದರೆ ನೋಡೋಣ ಎಂದು ವಿಜಯಪುರ ನಗರದಲ್ಲಿ ಕೈಗಾರಿಕಾ…

Read More

ಬೆಂಗಳೂರು : ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಹೇಳಿಕೆ ನೀಡಿರುವ ಸಚಿವ ಕೆ.ಎನ್.ರಾಜಣ್ಣ ಮಾತು ಭಾರಿ ಚರ್ಚೆಗೆ ಕಾರಣವಾಗಿದೆ. ಈ ನಡುವೆ ರಾಜಣ್ಣ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೆ ವಿಚಾವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧಲ್ಲಿ ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿಕ ಅವರು ಮಾತನಾಡಿದರು. ಪಕ್ಷದಲ್ಲಿ ಆಂತರಿಕ ಜಗಳ ಇರುವ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸಚಿವ ಕೆ.ಎನ್.ರಾಜಣ್ಣ ಅವರು ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಯಾಗಬಹುದು ಎಂದು ಹೇಳಿದ್ದಾರೆ. ಇಂಥದ್ದೇ ಆಗುತ್ತದೆ ಎಂದು ಹೇಳಿಲ್ಲ ಎಂದರು. ಸಚಿವ ಕೆ.ಎನ್.ರಾಜಣ್ಣ ಗುರುವಾರ ವಿಧಾನಸೌಧದಲ್ಲಿ ಮಾತನಾಡುತ್ತಾ, ಸೆಪ್ಟೆಂಬರ್​​ನಲ್ಲಿ ಕ್ರಾಂತಿಯಾಗಲಿದೆ. ಇದು ಪಕ್ಷದ ವಿಚಾರದಲ್ಲಿಯೋ, ಸರ್ಕಾರದ ವಿಚಾರದಲ್ಲಿಯೋ ಕಾದು ನೋಡಿ‌. ಕಾಂಗ್ರೆಸ್‌ನಲ್ಲಿ ಪವರ್ ಸೆಂಟರ್‌ಗಳು ಜಾಸ್ತಿ ಆಗಿವೆ. 2013-2018ರಲ್ಲಿ ಪವರ್ ಸೆಂಟರ್ ಒಂದೇ ಇದ್ದದ್ದು. ಈಗ ಎರಡ್ಮೂರು ಎಷ್ಟು ಬೇಕಿದ್ದರೂ ಹೇಳಿಕೊಳ್ಳಬಹುದು. ಪವರ್ ಸೆಂಟರ್ ಜಾಸ್ತಿ ಇದ್ದಾಗ ಜಂಜಾಟವೂ ಜಾಸ್ತಿ ಆಗುತ್ತದೆ ಎಂದು ಹೇಳಿಕೆ…

Read More

ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಇಬ್ಬರೂ ಯುವಕರು ಭೀಮಾ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಮಾಚನೂರು ಬಳಿ ಈ ದುರ್ಘಟನೆ ಸಂಭವಿಸಿದೆ. ಸಿದ್ದಪ್ಪಾ (20) ರಾಮು (18) ಯುವಕರು ಭೀಮಾನದಿಯಲ್ಲಿ ಕೊಚ್ಚಿ ಹೋಗಿದ್ದಾರೆ. ಬೆಳಿಗ್ಗೆ ಜಾನುವಾರುಗಳನ್ನು ಮೇಯಿಸಲು ಇಬ್ಬರು ಯುವಕರು ತೆರಳಿದ್ದಾರೆ. ಯುವಕರು ನೀರು ಪಾಲಾದ ಬಗ್ಗೆ ಅಗ್ನಿಶಾಮಕ ದಳಕ್ಕೆ ಸ್ಥಳೀಯರು ತಕ್ಷಣ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ವಡಗೆರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಗೃಹ ಸಚಿವರಾದ ಡಾ.‌ ಜಿ.ಪರಮೇಶ್ವರ ಅವರು ರಾಜ್ಯ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆಯುತ್ತಿರುವ ವಾರ್ಷಿಕ ಸಮಾವೇಶದಲ್ಲಿ, ಪೊಲೀಸ್ ಪ್ರಗತಿ ಪರಿಶೀಲನೆ‌ ವೇಳೆ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದರು. ಕರಾವಳಿ ಭಾಗದಲ್ಲಿ ಸೌಹಾರ್ದತೆ ಕಾಪಾಡಲು ವಿವಿಧ ಧಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು. ದ್ವೇಷ ಭಾಷಣ, ಪ್ರಚೋದನಾತ್ಮಕ ಭಾಷಣ ಮಾಡುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಿ. ಇದೇ ಕಾರಣದಿಂದ ಆ ಭಾಗದ ಜನ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮಂಗಳೂರು ಬಿಟ್ಟು ಬೆಂಗಳೂರು, ಮೈಸೂರಿಗೆ ಕಳುಹಿಸುತ್ತಿದ್ದಾರೆ. ಕೋಮು ಗಲಾಟೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇರಲಿಲ್ಲ. ಈಗ ಆ ಜಿಲ್ಲೆಗೂ ವ್ಯಾಪಿಸಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದಲ್ಲಿ ರಾಜ್ಯದಾದ್ಯಂತ ಮುಂದುವರಿಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವರ ವಿರುದ್ಧ, ಫೇಕ್ ನ್ಯೂಸ್ ಹರಡುವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಆ್ಯಕ್ಷನ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಿದರು. ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಮಾದಕ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ…

Read More

ಬೆಂಗಳೂರು : ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ ಸ್ವಾಮೀಜಿ ಅವರೊಂದಿಗೆ ಚರ್ಚೆ ಮಾಡಿ ಜನ್ಮದಿನಾಂಕವನ್ನು ತಿಳಿದು, ಅಂದಿನಿಂದ ನಿರಂತರವಾಗಿ ಸರ್ಕಾರ ಕೆಂಪೇಗೌಡ ಜಯಂತಿಯನ್ನು ಆಚರಣೆ ಮಾಡುತ್ತಿದೆ. ಬೆಂಗಳೂರು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದ್ದರೆ ಅದಕ್ಕೆ ಅಡಿಪಾಯ ಹಾಕಿದ್ದು ಕೆಂಪೇಗೌಡರು ಎಂದರು ಅವರನ್ನು ಸ್ಮರಿಸುವ ಕೆಲಸವನ್ನು ಸರ್ಕಾರ ಮಾಡಿದೆ. ಬೆಂಗಳೂರಿನ ನಾಲ್ಕು ಭಾಗದಲ್ಲಿ ಗೋಪುರಗಳನ್ನು ಕಟ್ಟಿಸಿದ ಕೆಂಪೇಗೌಡರು ಅಂದೇ ಬೆಂಗಳೂರಿನ ಆಡಳಿತ ಹೇಗಿರಬೇಕೆಂದು ಅರಿತು ವೃತ್ತಿ ಆಧಾರಿತವಾಗಿ ನಗರತ್ ಪೇಟೆ, ಚಿಕ್ಕಪೇಟೆ, ಬಳೆಪೇಟೆ…

Read More