Author: kannadanewsnow05

ಹಾಸನ : ಇತ್ತೀಚಿಗೆ ಹೃದಯಾಘಾತದಿಂದ ಸಾವು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಅದರಲ್ಲೂ ರಾಜ್ಯದ ಹಾಸನ ಜಿಲ್ಲೆಯಲ್ಲಿ ಕಳೆದ ಒಂದೇ ತಿಂಗಳಿನಲ್ಲಿ 19ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದರಿಂದ ಜಿಲ್ಲೆಯ ಜನತೆ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನಿನ್ನೆ ಸಹ ಹಾಸನದಲ್ಲಿ ಹೃದಯಘಾತಕ್ಕೆ ಇಬ್ಬರು ಬಲಿಯಾಗಿದ್ದಾರೆ. ಹೌದು ಹಾಸನ ಜಿಲ್ಲೆಯಲ್ಲಿ ನಿನ್ನೆ ಹೃದಯಘಾತಕ್ಕೆ ಆಟೋ ಚಾಲಕರೊಬ್ಬರು ಬಲಿಯಾಗಿದ್ದು, ಹೃದಯಾಘಾತದಿಂದ ಗೋವಿಂದ (37) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಿದ್ಧೇಶ್ವರ ನಗರ ನಿವಾಸಿಯಾಗಿರುವ ಗೋವಿಂದ ಅವರು ಆಟೋ ಚಾಲಕ ರಾಗಿ ಕೆಲಸ ಮಾಡುತ್ತಿದ್ದರು. ಬೆಳಿಗ್ಗೆ 7 ಗಂಟೆ ಸಮಯದಲ್ಲಿ ಗೋವಿಂದ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ ಆಟೋ ಚಲಾಯಿಸುವಾಗ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಆಟೋ ಚಲಾಯಿಸಿಕೊಂಡು ಗೋವಿಂದ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಗೋವಿಂದ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಒಂದು ತಿಂಗಳ ಅಂತರದಲ್ಲಿ ಇದೀಗ 19 ಜನ ಹೃದಯಾಘಾತದಿಂದ ಸಾವನ್ನಪ್ಪಿರುವುದು ಆತಂಕ ಮನೆ ಮಾಡಿದೆ. ದಿನೇ ದಿನೇ ಹಾಸನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು…

Read More

ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಲ್ಲಿ ಇಂಜಿನಿಯರಿಂಗ್​​ ಸೀಟ್​​​​ ಹಂಚಿಕೆ ಹಗರಣದ ಸಂಬಂಧ ಬೆಂಗಳೂರಿನ ಪ್ರತಿಷ್ಠಿತ ಮೂರು ಖಾಸಗಿ ಕಾಲೇಜುಗಳು ಒಳಗೊಂಡಂತೆ 17 ಕಡೆಗಳಲ್ಲಿ ದಾಳಿ ನಡೆಸಿ ಶೋಧಕಾರ್ಯ ನಡೆಸಿದ್ದ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಈ ಸಂಬಂಧ 1.37 ಕೋಟಿ ರೂ.ನಗದು ಸೇರಿದಂತೆ ಮಹತ್ವದ ದಾಖಲಾತಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ಈ ಕುರಿತು ED ಸಾಮಾಜಿಕ ಜಾಲತಾಣ X ನಲ್ಲಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸೀಟು ಬ್ಲಾಕಿಂಗ್ ದಂಧೆ ನಡೆಸುತ್ತಿದ್ದ ಆರೋಪದಡಿ ನಗರದ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು, ಆಕಾಶ್ ಇನ್ ಸ್ಟಿಟ್ಯೂಟ್ ಇಂಜಿನಿಯರಿಂಗ್ ಕಾಲೇಜು ಹಾಗೂ ನ್ಯೂ ಹಾರಿಜನ್ ಕಾಲೇಜುಗಳು, ಪ್ರಕರಣಕ್ಕೆ ಸಂಬಂಧಿತ ಆರೋಪಿತರ ಸದಸ್ಯರ ಮನೆ, ಕಚೇರಿ ಸೇರಿದಂತೆ 17 ಕಡೆಗಳಲ್ಲಿ ಜೂನ್ 25 ಹಾಗೂ 26ರಂದು ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ 1.37 ಕೋಟಿ ರೂ. ನಗದು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಸೀಟು ಬ್ಲಾಕಿಂಗ್ ಹಗರಣ ಸಂಬಂಧ ಕಳೆದ ವರ್ಷ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು…

Read More

ಬೆಂಗಳೂರು : ತುರ್ತು ಪರಿಸ್ಥಿತಿ ಹೆಸರಿನಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಅವಹೇಳನ ಮಾಡಿದ್ದಕ್ಕೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಸಿಡಿದಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ಇಂದು ನಡೆಯಿತು. ಬಳಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೌದು ತುರ್ತು ಪರಿಸ್ಥಿತಿಯ ಹೆಸರಿನಲ್ಲಿ ಇಂದಿರಾ ಗಾಂಧಿ ಅವರಿಗೆ ಬಿಜೆಪಿ ಅವಹೇಳನ ಮಾಡಿದೆ ಎಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ. ಬಿಜೆಪಿ ವಿರುದ್ಧ ಸಿಡಿದೆದ್ದು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹಾಕಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.

Read More

ಬೆಂಗಳೂರು : RSS ನವರು ಮನುಸ್ಮೃತಿಯ ಮೇಲೆ ನಂಬಿಕೆ ಇಟ್ಟವರು. ಅವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ದತ್ತಾತ್ರೇಯ ಹೊಸಬಾಳೆ ಹೇಳಿದಂತೆ ಸಂವಿಧಾನ ಅದು ಮಾಡಿರುವುದಲ್ಲ. ಪಾರ್ಲಿಮೆಂಟ್ ನಲ್ಲಿ ಚರ್ಚಿಸಿ ಸಂವಿಧಾನ ರಚನೆ ಆಗಿರುವುದು ಎಂದು ದತ್ತಾತ್ರೇಯ ಹೊಸಬಾಳೆ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಆರ್ ಎಸ್ ಎಸ್ ಮೊದಲಿನಿಂದಲೂ ಸಂವಿಧಾನ ಬದಲಾವಣೆಯಾಗಬೇಕು ಮನುಸ್ಮೃತಿ ಜಾರಿಗೆ ಬರಬೇಕು ಅನ್ನುವಂತಹ ಮನಸ್ಥಿತಿಯಲ್ಲಿ ಇದ್ದಾರೆ ಅವರು ಅದನ್ನು ಬಿಟ್ಟು ಬೇರೆ ಇನ್ನೇನು ಹೇಳುತ್ತಾರೆ? ಸಂವಿಧಾನ ಪಾರ್ಲಿಮೆಂಟ್ ನಲ್ಲಿ ಚರ್ಚೆಯಾಗಿ ತೀರ್ಮಾನ ಆಗಿರುವಂತದ್ದು ಎಂದು ದತ್ತಾತ್ರೇಯ ಹೊಸಬಾಳೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು? ದತ್ತಾತ್ರೇಯ ಹೊಸಬಾಳೆಯವರು ಭಾರತದ ಸಂವಿಧಾನದ ಪೀಠಿಕೆಯಲ್ಲಿ ಎರಡು ಪದಗಳನ್ನು ಸೇರಿಸಲಾಗಿದೆ. ಎರಡು ಪದಗಳನ್ನು ಜೋಡಿಸಲಾಗಿದೆ. ನಮಗೆಲ್ಲರಿಗೂ ಯುವಕರಿಗೆ ಗೊತ್ತಿಲ್ಲ ಜಾತ್ಯತೀತ ಮತ್ತು ಸಮಾಜವಾದಿ ಮೊದಲು ಈ ಎರಡು ಪದಗಳು ಸಂವಿಧಾನದ ಪೀಠಿಕೆಯಲ್ಲಿ ಇರಲಿಲ್ಲ. ಎರಡು ಸುದ್ದಿಗಳನ್ನು ಸೇರಿಸಲಾಗಿದೆ. ಸಂವಿಧಾನದ ಪ್ರಸ್ತಾವನೆ ಶಾಶ್ವತ…

Read More

ಚಿಕ್ಕಬಳ್ಳಾಪುರ : ಜುಲೈ 2ರಂದು ನಂದಿಗಿರಿಧಾಮದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ, ನಂದಿ ಗಿರಿಧಾಮ, ಸ್ಕಂದಗಿರಿಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜೂನ್ 30ರ ಬೆಳಿಗ್ಗೆ 6 ರಿಂದ ಜುಲೈ 3ರ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಜುಲೈ ಎರಡರಂದು ಸಚಿವ ಸಂಪುಟ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮವಾಗಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಬಿ.ಎನ್ ರವೀಂದ್ರ ಆದೇಶ ಹೊರಡಿಸಿದ್ದಾರೆ.

Read More

ಬೆಂಗಳೂರು : ಮುಂಬರುವ ಸೆಪ್ಟೆಂಬರ್ ನಲ್ಲಿ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು, ಬಹುದೊಡ್ಡ ರಾಜಕೀಯ ಕ್ರಾಂತಿ ಆಗುತ್ತದೆ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿಕೆಗೆ, ಇದೀಗ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡ ನನಗೂ ಮಂತ್ರಿಯಾಗುವ ಅರ್ಹತೆ ಇದೆ ಆಸೆಯೂ ಇದೆ ಎಂದು ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರು ಅವರು ಪ್ರತಿಕ್ರಿಯೆ ನೀಡಿದ್ದು, ಕೆ.ಎನ್ ರಾಜಣ್ಣ ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಇಂತಹ ಊಹಾಪೋಹಗಳನ್ನು ಯಾರು ಶುರು ಮಾಡಿದ್ದಾರೆ ಗೊತ್ತಿಲ್ಲ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಆಗಲ್ಲ ಇದೆಲ್ಲದರ ಕುರಿತು ವರಿಷ್ಠರು ನಿರ್ಧರಿಸುತ್ತಾರೆ. ನನಗೂ ಮಂತ್ರಿ ಆಗಬೇಕು ಎಂಬ ಆಸೆ ಇದೆ. ನನಗೆ ಮಂತ್ರಿ ಆಗುವ ಅವಕಾಶ ಸಿಗುತ್ತೋ ಬಿಡುತ್ತೋ ಗೊತ್ತಿಲ್ಲ. ನನಗೂ ಆಸೆ ಇದೆ ಅರ್ಹತೆ ಇದೆ ಎಂದು ಎದೆ ಬೆಳೆ ವಿಜಯಾನಂದ ಕಾಶಪ್ಪನವರ್ ತಮ್ಮ ಮಂತ್ರಿ ಆಗುವ ಕನಸು ಬಿಚ್ಚಿಟ್ಟಿದ್ದಾರೆ.

Read More

ವಿಜಯಪುರ : ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದವರು ಯಾರು? ಬಿವೈ ವಿಜಯೇಂದ್ರ ಇಂತಹ ಹಲ್ಕಾ ಕೆಲ್ಸ ಯಾರಾದರೂ ಮಾಡುತ್ತಾರಾ? ಡಿಕೆ ಶಿವಕುಮಾರ್ ಮತ್ತು ವಿಜಯೇಂದ್ರ ಕೂಡಿ, ರಮೇಶ್ ಜಾರಕಿಹೊಳಿ ಜೀವನ ಹಾಳು ಮಾಡಿದ್ದಾರೆ. ಬಿಜೆಪಿ ಹಿರಿಯ ನಾಯಕರಿಗೆ ಈಗ ನೆನಪಾಯ್ತಾ? ಎಂದು ಬಿ ವೈ ವಿಜಯೇಂದ್ರ ವಿರುದ್ಧ ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪೋಟಕ ಆರೋಪ ಮಾಡಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಬದಲಾವಣೆ ಆಗಬೇಕು. ಬದಲಾವಣೆಯ ಬಗ್ಗೆ ಚರ್ಚೆಗಳು ಬೇಡ ಬದಲಾವಣೆ ಆಗಲಿ. ಬಿವೈ ವಿಜಯೇಂದ್ರನಿಂದ ರಾಜ್ಯದಲ್ಲಿ ಬಿಜೆಪಿ ನೆಲಕಚ್ಚಿದೆ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿಗೆ ಬಾರಿ ಹೊಡೆತ ಬಿದ್ದಿದೆ ವಿಜೇಂದ್ರ ಒಳಪಂದಕ್ಕೆ ಬಿಜೆಪಿಗೆ ಹಿನ್ನಡೆಯಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿವೈ ವಿಜಯೇಂದ್ರ ಒಳ ಒಪ್ಪಂದದಿಂದ, ಹೀನಾಯವಾಗಿ ಸೋತಿದ್ದೇವೆ. ಚಾಮರಾಜನಗರ, ತುಮಕೂರು,ಚಿಕ್ಕಬಳ್ಳಾಪುರ, ಕಲಬುರ್ಗಿ, ಬೀದರ್, ರಾಯಚೂರು, ಕೊಪ್ಪಳ ದಾವಣಗೆರೆ ಸೇರಿದಂತೆ 10 ಜಿಲ್ಲೆಗಳಲ್ಲಿ ಸೋತಿದ್ದೇವೆ ಕೊಪ್ಪಳದಲ್ಲಿ ಬಿವೈ ವಿಜಯೇಂದ್ರ ಒಬ್ಬ ಚೀಲ ಇದ್ದಾನೆ…

Read More

ಮಂಗಳೂರು : ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅಂತ ಹೇಳಕ್ಕಾಗಲ್ಲ. ಇದೀಗ ಮಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ತಮ್ಮನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಕ್ಕನು ಸಹ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೌದು ತಮ್ಮನ ಅಂತ್ಯ ಸಂಸ್ಕಾರಕ್ಕೆಂದು ಚೆನ್ನೈನಿಂದ ಬಂದಿದ್ದ ಅಕ್ಕ ನಗರದ ಹೊರವಲಯದ ಪಾವಂಜೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೆ, ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ನಗರದ ಬಂಗ್ರಕೂಳೂರು ನಿವಾಸಿ ಶ್ರುತಿ (27) ಮೃತಪಟ್ಟವರು ಎಂದು ತಿಳಿದುಬಂದಿದೆ. ಕಂಪ್ಯೂಟರ್ ಇಂಜಿನಿಯರಿಂಗ್ ಮುಗಿಸಿರುವ ಶ್ರುತಿ ಚೆನ್ನೈನಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿದ್ದರು. ಮೆಕ್ಯಾನಿಕ್ ಆಗಿದ್ದ ತನ್ನ ಸಹೋದರ ಸುಜಿತ್ ಜೂನ್ 10ರಂದು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅವರು ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲು ಕೆಲಸಕ್ಕೆ ರಜೆ ಹಾಕಿ ಮನೆಗೆ ಬಂದಿದ್ದರು. ಈ ನಡುವೆ ಬ್ಯಾಂಕ್ ಕೆಲಸಕ್ಕೆಂದು ತಂದೆಯೊಂದಿಗೆ ಸ್ಕೂಟರ್​ನಲ್ಲಿ ಕಿನ್ನಿಗೋಳಿ ಕಡೆಗೆ ಹೋಗಿ ಮತ್ತೆ ಮನೆಯತ್ತ ಹಿಂದೆ ಬರುತ್ತಿದ್ದರು. ಮಳೆ ಬಂದ ಹಿನ್ನೆಲೆಯಲ್ಲಿ ಪಾವಂಜೆ ಬಳಿ‌ ಸ್ಕೂಟರ್ ನಿಲ್ಲಿಸಿ,…

Read More

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸಚಿವ ಕೆ ಎನ್ ರಾಜಣ್ಣ ಸೆಪ್ಟೆಂಬರ್ ಬಳಿಕ ಬದಲಾವಣೆಯ ಗಾಳಿ ಬೀಸಲಿದೆ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಯತೀಂದ್ರ ಸಿದ್ದರಾಮಯ್ಯ ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ಯಕ್ಕೆ ಇಲ್ಲ ಕಾಂಗ್ರೆಸ್ ಹೈಕಮಾಂಡ್ ನಾಯಕರು ಆ ರೀತಿ ಏನು ಹೇಳಿಕೆ ನೀಡಿಲ್ಲ ಎಂದು ಬೆಂಗಳೂರಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಸ್ಪೋಟಕವಾದ ಹೇಳಿಕೆಯನ್ನು ನೀಡಿದರು.

Read More

ಬೆಂಗಳೂರು : ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಬೆಂಗಳೂರಿನ ವಿಧಾನಸೌಧದಲ್ಲಿ ದಸರಾ ಪೂರ್ವಭಾವಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಪೂರ್ವಭಾವಿ ಸಭೆಯ ಬಳಿಕ ಮಾತನಾಡಿದ ಅವರು, ಸೆಪ್ಟೆಂಬರ್ 22ರಂದು ಬೆಳಿಗ್ಗೆ 10:10ಕ್ಕೆ ಮೈಸೂರು ದಸರಾ ಉದ್ಘಾಟನೆ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಮೈಸೂರು ಉತ್ಸವ ನಡೆಯಲಿದೆ. ಅಕ್ಟೋಬರ್ 2ರಂದು ದಸರಾ ಜಂಬೂ ಸವಾರಿ ನಡೆಯಲಿದೆ ಸಂಜೆ 4:42 ರಿಂದ 5:06 ನಡುವೆ ಜಂಬೂ ಸವಾರಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಬಾರಿ 9 ದಿನದ ಬದಲು 11 ದಿನ ದಸರಾ ಆಚರಣೆಗೆ ನಿರ್ಧರಿಸಿದ್ದೇವೆ. ಅಧಿಕ ಪಂಚಮಿ ಬಂದಿರುವುದರಿಂದ 11 ದಿನಗಳ ಕಾಲ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿಂದೆಯೂ 8 ಬಾರಿ 11 ದಿನ ದಸರಾ ನಡೆದಿದೆ. ರಾಜ್ಯದಲ್ಲಿ ಉತ್ತಮ ಮಳೆಯಿಂದ ರೈತರು ಸಂತಸದಿಂದ ಇದ್ದಾರೆ. ಹಾಗಾಗಿ ವಿಗ್ರಂಬಣೆಯಿಂದ ಮೈಸೂರು…

Read More