Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬಾಗಲಕೋಟೆ : ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಕುರಿತು ಈಗಾಗಲೇ ಹಲವು ಚರ್ಚೆಗಳು ಆರಂಭವಾಗಿದ್ದು, ಇದರ ಬೆನ್ನಲ್ಲೇ ಅಬಕಾರಿ ಇಲಾಖೆ ಸಚಿವ ಆರ್.ಬಿ ತಿಮ್ಮಾಪುರ ಮುಂದಿನ ಮುಖ್ಯಮಂತ್ರಿ ಸಚಿವ ಸತೀಶ್ ಜಾರಕಿಹೊಳಿ ಆಗಲಿದ್ದಾರೆ ಎಂದು ಸ್ಪೋಟಕ ಭವಿಷ್ಯ ನೋಡಿದಿದ್ದಾರೆ. ಹೌದು ಮುಧೋಳದಲ್ಲಿ ಜಡಗಣ್ಣ- ಬಾಲಣ್ಣ ಕಂಚಿನ ಮೂರ್ತಿ ಅನಾವರಣ ಹಾಗೂ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವೇಳೆ ಮಾತನಾಡಿದ ಆರ್‌ಬಿ ತಿಮ್ಮಾಪೂರ, ಈ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸ್ವಾಗತ ಭಾಷಣ ಮಾಡುತ್ತಾ ಆರ್‌ಬಿ ತಿಮ್ಮಾಪೂರ, ವೇದಿಕೆಯಲ್ಲಿರುವ ನನ್ನ ನಾಯಕ, ಮುಂದಿನ ಎಲ್ಲರ ನಿರೀಕ್ಷೆಯಲ್ಲಿರುವ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾಗುವುದನ್ನು ಯಾರೂ ತಪ್ಪಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಸತೀಶ್ ಜಾರಕಿಹೊಳಿ ಯಾರದೋ ಕೃಪೆಯಿಂದ ಮುಖ್ಯಮಂತ್ರಿ ಆಗುವುದಲ್ಲ, ಅವರ ಸ್ವಂತ ಶಕ್ತಿಯಿಂದ ಮುಖ್ಯಮಂತ್ರಿ ಆಗುತ್ತಾರೆ. ಅಭಿವೃದ್ಧಿ ಕಾರ್ಯಗಳ ಮೂಲಕ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ. ಸತೀಶ್ ಜಾರಕಿಹೊಳಿ ಒಂದಲ್ಲ ಒಂದು ದಿನ…

Read More

ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಎಲ್ಲ ಸಂಘಟನೆಗಳು ಅನುಮತಿ ಪಡೆಯಬೇಕು. ಎಲ್ಲ ಸಂಘಟನೆಗಳು ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಕಾರ್ಯಕ್ರಮಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಈ ಕುರಿತು ಕಳೆದ ಸಚಿವ ಸಂಪುಟದಲ್ಲಿ‌ ತೀರ್ಮಾನವಾಗಿದೆ. ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ, ಸಂಸ್ಥೆಗಳು ಕಾರ್ಯಕ್ರಮ ನಡೆಸಲು ಅವಕಾಶ ಇಲ್ಲ. ಈ ಬಗ್ಗೆ ನಿನ್ನೆ ಸಂಜೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಇದೇ ಕಾರಣಕ್ಕೆ ಕಲಬುರಗಿಯಲ್ಲಿ ಪಥ ಸಂಚಲನಕ್ಕೆ ಅನುಮತಿ ನೀಡಿಲ್ಲ. ಆದೇಶವಾದ ಮೇಲೆ ಅವಕಾಶ ಕೊಟ್ಟರೆ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಆರ್​ಎಸ್​ಎಸ್​ ಹೊಸದೇನಲ್ಲ, ನೂರು ವರ್ಷವಾಗಿದೆ. ಆರ್​ಎಸ್​ಎಸ್​ ವಿಚಾರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹೊಂದಾಣಿಕೆ‌ ಆಗುವುದಿಲ್ಲ. ಅದರ ಬಗ್ಗೆ ಆಗಿಂದಾಗ್ಗೆ ಚರ್ಚೆಗಳು ನಡೆಯುತ್ತಿವೆ. ಹಾಗಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. 2013ರಲ್ಲಿ ಜಗದೀಶ್ ಶೆಟ್ಟರ್ ಅವರು ಆದೇಶ ಮಾಡಿದ್ದರು. ನಾವು ಆದೇಶ ಮಾಡಿದರೆ ಮಾತ್ರ ಪ್ರಶ್ನೆ ಮಾಡುತ್ತಾರೆ. ಅವರು ಮಾಡಿದರೆ ಗೊಂದಲ ಆಯ್ತು ಅಂತಾರೆ. ಪ್ರಚೋದನೆ ಆಗಬಾರದೆಂದು ಇದು…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಮನೆ ಮುಂದೆ ಹಚ್ಚಿದ ದೀಪದಿಂದ ಘೋರ ದುರಂತವೊಂದು ಸಂಭವಿಸಿದ್ದು, ಗ್ಯಾಸ್​​​​​​ ಸಿಲಿಂಡರ್​​​​​​ ಸ್ಫೋಟಗೊಂಡು ಎಂಟು ಜನ ಗಾಯಗೊಂಡು, ಏಳು ಬೈಕ್​​ಗಳು​ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್​ ಬಳಿ ಜರುಗಿದೆ. ಇಂದು ಮುಂಜಾನೆ ಸುಮಾರು 2.30ರ ಸುಮಾರಿಗೆ ಸಿಲಿಂಡರ್​​ ಸ್ಫೊಟಗೊಂಡಿದೆ. ಘಟನೆಯಲ್ಲಿ ಒಟ್ಟು 8 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಕಲ್ಮೇಶ್ ದರಿಯಪ್ಪ ಲೋಕಣ್ಣಬಾರ (30 ವರ್ಷ), ಸಚಿನ್ ಪ್ರಕಾಶ್ ಮೇರಿ (28), ಗಣೇಶ್ (26), ದಾಪು ದೇವಿ (28), ಡಿಂಪಲ್ ಪಟೇಲ್ (1 ವರ್ಷ), ಸ್ನೇಹಾ (22), ಐಶ್ವರ್ಯಾ (13) ಹಾಗೂ ಶ್ರುತಿ (23) ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ, ಏಳು ಬೈಕ್​ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಲ್ಲದೆ, ಮೂವರು ಮಹಿಳೆಯರು, ಇಬ್ಬರು ಮಕ್ಕಳು ಮತ್ತು ಮೂವರು ಪುರುಷರು ಸೇರಿದಂತೆ ಎಂಟು ಜನರು ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Read More

ಹಾಸನ : ಹಾಸನಾಂಬೆ ದರ್ಶನದ ವೇಳೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರಿಗೆ ಅವಮಾನ ಮಾಡಿರುವ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ದೇಗುಲದ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದೆ. ಶಾಸಕ ಸ್ವರೂಪ್ ಪ್ರಕಾಶ ನೇತೃತ್ವದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದೆ. ದೇವಸ್ಥಾನದ ಎರಡು ಬದಿಯ ರಸ್ತೆ ಬಂದ್ ಮಾಡಿ ಜೆಡಿಎಸ್ ಕಾರ್ಯಕರ್ತರು ಧರಣಿ ನಡೆಸುತ್ತಿದ್ದಾರೆ. ದೇವಾಲಯದ ಒಳ ನುಗ್ಗಲು ಪ್ರತಿಭಟನಾಕಾರರು ಯತ್ನಿಸಿದ್ದಾರೆ. ಈ ವೇಳೆ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದ್ದು, ಶಿಷ್ಟಾಚಾರ ವಾಹನದಲ್ಲಿ ಬಂದು ಗಣ್ಯರು ಸಿಲುಕಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಬರೋಕೆ ಹೇಳಿ ಎಂದು ಎಸಿಗೆ ತಾಕಿತ್ತು ಮಾಡಿದ್ದಾರೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಬ್ಯಾರಿಕೆಡ್ ಗಳನ್ನು ಹೆಚ್ಚಿಸಿದ್ದಾರೆ. ಹಾಸನ ಮಹಾನಗರ ಪಾಲಿಕೆಯ ಮುಂದೆ ಈ ಒಂದು ಪ್ರತಿಭಟನೆ ನಡೆಯುತ್ತಿದೆ ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕೆಂದು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ ಸ್ಥಳಕ್ಕೆ ಎಸಿ ಮಾರುತಿ ಬಂದು ಪ್ರತಿಭಟನಾಕಾರರನ್ನು ಮನವೊಲಿಸುತ್ತಿದ್ದಾರೆ.

Read More

ಚಾಮರಾಜನಗರ : ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಆರೋಪ ವಿಚಾರವಾಗಿ ಇದೀಗ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವೀರನಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ನಿಷೇಧ ಹಿನ್ನೆಲೆಯಲ್ಲಿ ಶಾಂತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರೀ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ ಎಂದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದ. ಶಿವಕುಮಾರ್ ಗೆ ಜಾತಿನಿಂದನೆ ಮಾಡಿ ಕೊಲೆ ಮಾಡೋದಾಗಿ ಧಮ್ಕಿ ಹಾಕಿದ್ದಾರೆ ಈ ಹಿನ್ನೆಲೆ ಶಿವಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಶಿವಕುಮಾರ್ ನೀಡಿದ ದೂರಿನ ಮೇರೆಗೆ ಇದೀಗ ಎಫ್ಐಆರ್ ದಾಖಲಾಗಿದೆ. 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಕೆಸ್ ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲಾಗಿದ್ದಕ್ಕೆ ವೀರನಪುರ ಗ್ರಾಮಸ್ಥರು ರೊಚ್ಚಿಗೆ ಎದ್ದಿದ್ದಾರೆ.…

Read More

ಚಾಮರಾಜನಗರ : ದಲಿತರಿಗೆ ದೇವಸ್ಥಾನ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಆರೋಪ ವಿಚಾರವಾಗಿ ಇದೀಗ 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವೀರನಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿತ್ತು. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ದೇವಸ್ಥಾನ ಪ್ರವೇಶಕ್ಕೆ ನಿಷೇಧ ಹಿನ್ನೆಲೆಯಲ್ಲಿ ಶಾಂತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಗ್ರಾಮದ ಎಲ್ಲಾ ಜನಾಂಗದ ಮುಖಂಡರು ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ದೇವಾಲಯದ ಆಸ್ತಿಯನ್ನು ಹರಾಜು ಹಾಕದೆ ಬರೀ ಲಿಂಗಾಯತ ಸಮಾಜದವರು ಮಾತ್ರ ಉಪಯೋಗಿಸುತ್ತಿದ್ದಾರೆ ಎಂದು ಗ್ರಾಮದಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದ. ಶಿವಕುಮಾರ್ ಗೆ ಜಾತಿನಿಂದನೆ ಮಾಡಿ ಕೊಲೆ ಮಾಡೋದಾಗಿ ಧಮ್ಕಿ ಹಾಕಿದ್ದಾರೆ ಈ ಹಿನ್ನೆಲೆ ಶಿವಕುಮಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಶಿವಕುಮಾರ್ ನೀಡಿದ ದೂರಿನ ಮೇರೆಗೆ ಇದೀಗ ಎಫ್ಐಆರ್ ದಾಖಲಾಗಿದೆ. 17 ಜನರ ವಿರುದ್ಧ ಅಟ್ರಾಸಿಟಿ ಕಾಯ್ದೆ ಅಡಿ ಕೆಸ್ ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲಾಗಿದ್ದಕ್ಕೆ ವೀರನಪುರ ಗ್ರಾಮಸ್ಥರು ರೊಚ್ಚಿಗೆ ಎದ್ದಿದ್ದಾರೆ.…

Read More

ಹುಬ್ಬಳ್ಳಿ : ಕಲ್ಬುರ್ಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ನಿರಾಕರಣೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಜ್ಯ ಸರ್ಕಾರ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮುಂದಾಗಿದೆ ಗಮನ ಬೇರೆ ಕಡೆ ಸೆಳೆಯಲು ಬೇಕು ಅಂತಲೇ ಹೀಗೆ ಮಾಡುತ್ತಿದ್ದಾರೆ. ಕೆಲ ವರ್ಷ ಬಿಟ್ಟರೆ ಎಲ್ಲಾ ವರ್ಷಗಳಲ್ಲೂ ಆರ್ ಎಸ್ ಎಸ್ ಪಥ ಸಂಚಲನ ನಡೆದಿದೆ ಎಂದು ತಿಳಿಸಿದರು. ಸಚಿವ ಪ್ರಿಯಾಂಕ ಖರ್ಗೆ ಅಸಹಿಷ್ಣತೆ ಒಳ್ಳೆಯದಲ್ಲ. ಮಲ್ಲಿಕಾರ್ಜುನ ಖರ್ಗೆ ಜೊತೆ ವಿನಮ್ರವಾಗಿ ಮಾತನಾಡುತ್ತೇವೆ. ಅವರು ಸಹ ನಮ್ಮ ಜೊತೆಗೆ ಚೆನ್ನಾಗಿ ಮಾತನಾಡುತ್ತಾರೆ. ಮಲ್ಲಿಕಾರ್ಜುನ ಖರ್ಗೆ ಎಂದಿಗೂ ಅಸಹಿಷ್ಣುತೆ ಮೆರೆದಿರಲಿಲ್ಲ. ತಂದೆಯನ್ನು ನೋಡಿ ಸಚಿವ ಪ್ರಿಯಾಂಕ ಖರ್ಗೆ ಕಲಿಯಬೇಕು ನಮ್ಮ ಮುಖಂಡರು ಅಕ್ರೋಶದಿಂದ ಪ್ರತಿಕ್ರಿಯಿಸಲು ಹೋಗಬಾರದು ಅವರು ಹೇಳಿಕೆ ಬಗ್ಗೆ ಆರ್ ಎಸ್ ಎಸ್ ನೋಡಿಕೊಳ್ಳುತ್ತದೆ. ತಮ್ಮ ವೈಫಲ್ಯ ಚರ್ಚಿಸಬಾರದು ಅಂತ ಆರ್ ಎಸ್ ಎಸ್ ವಿಚಾರ ತೆಗೆದಿದ್ದಾರೆ. ಸಂವಿಧಾನದ ಬಗ್ಗೆ ಕಾಂಗ್ರೆಸ್ನಂತೆ ನಾವು ಅಪಹಾಸ್ಯ ಮಾಡಿಲ್ಲ ಎಂದು…

Read More

ಬೆಂಗಳೂರು : ಚಿತ್ತಾಪುರದಲ್ಲಿ ಆರ್ ಎಸ್ ಎಸ್ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ವಿಚಾರವಾಗಿ ಕಲ್ಬುರ್ಗಿ ಜಿಲ್ಲೆಯಲ್ಲಿ ಪಥ ಸಂಚಲನ ಮಾಡುತ್ತೇವೆ ಅಂತ ಹಠ ಹಿಡಿದರು. ಮೊದಲೇ ಇತ್ತು ಏನು ದಿನಾಂಕವೆಂದು ಹೇಳಿರಲಿಲ್ಲ. ಉದ್ದೇಶಪೂರ್ವಕವಾಗಿ ನನ್ನ ಕ್ಷೇತ್ರದಲ್ಲಿ ಪ್ಲಾನ್ ಮಾಡಿಕೊಂಡಿದ್ದರು ನನಗೆ ಬುದ್ಧಿ ಕಲಿಸಬೇಕೆಂದು ಇದೆಲ್ಲ ಮಾಡಿದ್ದಾರೆ. ನನಗೆ ಬೆದರಿಕೆ ಹಾಕಿದ ವ್ಯಕ್ತಿ ಬಂಧನದ ಬಳಿಕ ಪಥ ಸಂಚಲನಕ್ಕೆ ಪ್ಲಾನ್ ಮಾಡಿದ್ದಾರೆ ಎಂದು ಬೆಂಗಳೂರಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು ಬೆಂಗಳೂರಲ್ಲಿ ಮಾತನಾಡಿದ ಅವರು, ಚಿತಾಪುರದಲ್ಲಿ ಆರ್‌ಎಸ್‌ ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ ವಿಚಾರವಾಗಿ ಎಷ್ಟು ಜನ ಸೇರುತ್ತಾರೆ ತಹಸಿಲ್ದಾರ್ ಗೆ ಮಾಹಿತಿಗೆ ನೀಡಿಲ್ಲ. ಸ್ಥಳದ ಎನ್ ಓ ಸಿ ಕೊಟ್ಟಿಲ್ಲ, ದಾಖಲೆ ಕೊಟ್ಟಿಲ್ಲ, ಅನುಮತಿಯನ್ನು ಕೇಳಿಲ್ಲ, ಸಂಘದ ನೋಂದಣಿ ಪ್ರಮಾಣ ಪತ್ರ ಸಲ್ಲಿಸಿಲ್ಲ ಹಲವಾರು ಪ್ರಶ್ನೆಗಳಿಗೆ ಪಥ ಸಂಚಲನ ನಡೆಸುವವರು ಮಾಹಿತಿ ನೀಡಿಲ್ಲ. ನಿನ್ನೆ ರಾತ್ರಿ ಯಾವುದೇ ನೋಂದಾಯಿತ ಅಲ್ಲ ಅಂತ ಬರೆದು ಕೊಟ್ಟಿದ್ದಾರೆ. ಈ ಕುರಿತು ಕೋರ್ಟ್…

Read More

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ದೀಪಾವಳಿ ಹಬ್ಬದಂದೆ ಘೋರವಾದ ದುರಂತ ನಡೆದಿದ್ದು, ಹಬ್ಬಕ್ಕಾಗಿ ರೆಸ್ಟೋರೆಂಟ್ ಮುಂಭಾಗದಲ್ಲಿ ತಳಿರುತೋರಣ ಕಟ್ಟಲು ಹೋದ ಯುವಕನಿಗೆ ವಿದ್ಯುತ್ ಸ್ವರ್ಶಿಸಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯ ಡಿ.ಕೆ ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಶನಿವಾರ ಬೆಳಗ್ಗೆ 11.30ರ ಸಮಯದಲ್ಲಿ ಘಟನೆ ನಡೆದಿದೆ. ಘಟನೆಯಲ್ಲಿ ನೇಪಾಳ ಮೂಲದ ಪದಮ್ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಡಿ.ಕೆ.ಫ್ಯಾಮಿಲಿ ರೆಸ್ಟೋರೆಂಟ್​ನಲ್ಲಿ ಆಡುಗೆ ಕೆಲಸಗಾರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ರೆಸ್ಟೋರೆಂಟ್​ನಲ್ಲಿ ದೀಪಾವಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿತ್ತು. ಹಬ್ಬಕ್ಕೆ ಪದಮ್ ರೆಸ್ಟೋರೆಂಟ್ ಮುಂಭಾಗದಲ್ಲಿ ಮಾವಿನ ತಳಿರುತೋರಣ ಕಟ್ಟಲು ಮುಂದಾಗಿದ್ದಾನೆ. ಮುಂಭಾಗದಲ್ಲಿದ್ದ ಪಾನ್ ಶಾಪ್ ಮೇಲೆ ಹತ್ತಿದ ಆತನಿಗೆ ತಲೆ ಮೇಲೆ ಹಾದು ಹೋಗಿದ್ದ ವಿದ್ಯುತ್ ಲೈನ್ ತಗುಲಿದೆ. ವಿದ್ಯುತ್ ಸ್ವರ್ಶದಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅವಘಡದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Read More

ಬೆಂಗಳೂರು : ರಾಜ್ಯದ ಯಜಮಾನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ಒಂದನ್ನು ನೀಡಿದ್ದು, ಐದು ಗ್ಯಾರಂಟಿ ಯೋಜನೆಗಲ್ಲಿ ಪ್ರಮುಖ ಗ್ಯಾರಂಟಿ ಯೋಜನೆಯದ ಗ್ರಹಲಕ್ಷ್ಮಿ ಯೋಜನೆ ಅಡಿಯಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಹೌದು ಷೇರು ಸಂಗ್ರಹಣೆಗೆ ಮಹಾಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪನೆಗೆ ಸಹಕಾರ ಇಲಾಖೆ ಇದೀಗ ಅನುಮತಿ ನೀಡಿದೆ. ಸಹಕಾರ ಸಂಘ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದ ಮಹಿಳೆಯರಿಗೆ ಈ ಒಂದು ಸಹಕಾರ ಸಂಘ ಸ್ಥಾಪನೆ ಮಾಡುವುದರಿಂದ ಮತ್ತಷ್ಟು ಹೆಚ್ಚಿನ ಅನುಕೂಲತೆಗಳು ಆಗಲಿವೆ ಎಂದು ಹೇಳಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಸಹಕಾರ ಸಂಘ ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಶೀಘ್ರದಲ್ಲಿ ಜಾರಿಗೆ ಬರುವ ಸಾಧ್ಯತೆ ಇದೆ

Read More