Subscribe to Updates
Get the latest creative news from FooBar about art, design and business.
Author: kannadanewsnow05
ಮಂಡ್ಯ : 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಲೋಕಾಯುಕ್ತ ಪೊಲೀಸರ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಗಿ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಹೌದು ಶೆಟ್ಟಿಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಅರಸ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶೆಟ್ಟಿ ಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನಾಗಿದ್ದು, 1 ಲಕ್ಷ ಪಡೆಯುವಾಗ ಈತ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಮಾಗನೂರು ಗ್ರಾಮದ ನಿವಾಸಿ ಶಂಕರ್ ನಿಂದ 8 ಲಕ್ಷ ಲಂಚಕ್ಕೆ ಮನೋಹರ್ ಬೇಡಿಕೆ ಇಟ್ಟಿದ್ದ. ದೂರದಾರ ಹಾಗೂ ಎಡಿಎಲ್ ಆರ್ ನಡುವಿನ ಜಾಗದ ವಿವಾದಕ್ಕೆ ಈ ವಿಚಾರವಾಗಿ ಮಧ್ಯಪ್ರವೇಶ ಮಾಡದಿರಲು 8 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ. ಈ ವೇಳೆ 1ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಮನೋಹರ್ ಅರಸ್ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾನೆ. ಸದ್ಯ ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ್…
ಬೆಂಗಳೂರು : ಬೆಂಗಳೂರಿನಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ.ಇದೀಗ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು , ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸೀಗೇಹಳ್ಳಿಯಲ್ಲಿ ನಿರ್ಮಾಣ ಹಂತದ 3 ಅಂತಸ್ತಿನ ಕಟ್ಟಡ ಹೊತ್ತಿ ಉರಿದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಹೌದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವಂತಹ ಶಿವಾನಿ ಗ್ರೀನ್ಸ್ ಲೇಔಟ್ ನಲ್ಲಿ ಸತೀಶ್ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಈ ಒಂದು ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಭವಿಷ್ಯವಾಣಿಗೆ ಯಾವುದೇ ಬೆಲೆ ಇಲ್ಲ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಕಾವೇರಿ ಆಸ್ಪತ್ರೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ಸ್ವೀಕರಿಸಿ ಮಾತನಾಡಿದ ಅವರು, ಬಿಜೆಪಿಯ ಆಂತರಿಕ ಜಗಳ ಹಾದಿ, ಬೀದಿಗೆ ಬಂದಿದ್ದು, ಅವಾಚ್ಯ ಶಬ್ದಗಳಲ್ಲಿ ಬೈದಾಡಿಕೊಳ್ಳುತ್ತಿದ್ದಾರೆ. ಅವರಿಗೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಪ್ರಶ್ನಿಸಿದರು. ಮತಗಟ್ಟೆ ಸಮೀಕ್ಷೆ ಸುಳ್ಳಾಗಿದೆ ದೆಹಲಿ ಚುನಾವಣೆ ಕುರಿತಂತೆ ಮತಗಟ್ಟೆ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಹಿಂದೆಯೂ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗಿವೆ. ಕಾಂಗ್ರೆಸ್ ಅಧಿಕಾರಕ್ಕಾಗಿ ರಚನೆಯಾದ ಪಕ್ಷವಲ್ಲ. ಅದು ಜನಸೇವೆಗಾಗಿ, ಸ್ವಾತಂತ್ರ್ಯಕ್ಕಾಗಿ ರೂಪುಗೊಂಡ ಆಂದೋಲನ. ನಾನು ಅಧಿಕಾರದಲ್ಲಿದ್ದರೂ ಜನ ಸೇವೆ ಮಾಡುತ್ತೇವೆ. ಪ್ರತಿಪಕ್ಷದಲ್ಲಿದ್ದರೂ ಜನರಿಗಾಗಿ ಹೋರಾಟ ಮಾಡುತ್ತೇವೆ ಎಂದರು.
ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧಿ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ತುರ್ತು ಆರೋಗ್ಯ ಸಂದರ್ಭದಲ್ಲಿ ಸ್ಥಳೀಯ ಪಂಚಾಯ್ತಿ ವ್ಯಾಪ್ತಿಯ ನಿವಾಸಿಗಳಿಗೆ, ಉದ್ಯಾನದ ಸಿಬ್ಬಂದಿಗೆ ಮತ್ತು ಪ್ರವಾಸಿಗರಿಗೆ ಈ ಆಂಬ್ಯುಲೆನ್ಸ್ ನೆರವು ಲಭಿಸುವಂತಾಗಬೇಕು ಎಂದರು. ಬನ್ನೇರುಘಟ್ಟ ಬೆಂಗಳೂರು ಬಳಿಯೇ ಇರುವ ದೊಡ್ಡ ಕಾನನ ಪ್ರದೇಶವಾಗಿದ್ದು, 1970ರಲ್ಲಿ ಉದ್ಯಾನ ಸ್ಥಾಪಿಸಲಾಯಿತು, 1974ರಲ್ಲಿ ರಾಷ್ಟ್ರೀಯ ಉದ್ಯಾನ ಎಂದು ಘೋಷಿಸಲಾಯಿತು. ಪ್ರಸ್ತುತ ಇಲ್ಲಿ ಮೃಗಾಲಯ, ಚಿಟ್ಟೆ ಪಾರ್ಕ್, ಕರಡಿ ಸಫಾರಿ, ಹುಲಿ ಸಫಾರಿ, ಸಿಂಹ ಸಫಾರಿ ಇದ್ದು, ಇತ್ತೀಚೆಗೆ ತಾವೇ ಚಿರತೆ ಸಫಾರಿಯನ್ನೂ ಉದ್ಘಾಟಿಸಿದ್ದು, ಇದು ಪ್ರವಾಸಿಗರಿಗೆ…
ಬೆಂಗಳೂರು : ತನ್ನ ಪತ್ನಿಯ ಮೇಲೆ ಕಣ್ಣು ಹಾಕಿದಕ್ಕೆ ವ್ಯಕ್ತಿಯೊಬ್ಬ ಸ್ನೇಹಿತನಿಗೆ ಕಂಠಪೂರ್ತಿ ಕುಡಿಸಿ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಹಲ್ಲೆಗೋಳಗಾದ ವ್ಯಕ್ತಿಯನ್ನು ಕಿರಣ್ ಎಂದು ತಿಳಿದುಬಂದಿದ್ದು, ಆರೋಪಿ ಅರ್ಜುನ್ ನನ್ನು ತಲಘಟ್ಟಪುರ ಪೊಲೀಸ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಸದ್ಯ ಕಿರಣ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಹಿನ್ನೆಲೆ? ಹಲ್ಲೆಗೊಳಗಾದ ಕಿರಣ್, ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದ. ಆರೋಪಿ ಅರ್ಜುನ್ ಕಾರು ಚಾಲಕನಾಗಿದ್ದ. ಕಳೆದೊಂದು ವರ್ಷದಿಂದ ಇಬ್ಬರು ಸ್ನೇಹಿತರಾಗಿದ್ದಾರೆ. ಆಗಾಗ ಅರ್ಜುನ್ ಮನೆಗೆ ಕಿರಣ್ ಬಂದು ಹೋಗುತ್ತಿದ್ದ. ಈ ಮಧ್ಯೆ ಸ್ನೇಹಿತನ ಪತ್ನಿಯನ್ನ ಸಂಪರ್ಕಿಸಲು ಹವಣಿಸುತ್ತಿದ್ದ. ನಿರಂತರವಾಗಿ ಕರೆ ಹಾಗೂ ವಾಟ್ಸ್ಆ್ಯಪ್ ಸಂದೇಶ ಕಳುಹಿಸುತ್ತಿದ್ದ. ಈ ವಿಷಯ ಅರಿತ ಆರೋಪಿ ಅರ್ಜುನ್ ಕೋಪಗೊಂಡಿದ್ದ.ತನ್ನ ಪತ್ನಿಗೆ ನಿರಂತರ ಕರೆಗೆ ಮಾಡುವುದನ್ನ ಮುಂದುವರಿಸಿದ್ದ ಸ್ನೇಹಿತನಿಗೆ ಬುದ್ಧಿ ಕಲಿಸಲು ಅರ್ಜುನ್ ಸಂಚು ರೂಪಿಸಿದ್ದ…
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಚ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ ಎಂದು ತಿಳಿಸಿದರು. ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ…
ಯಾದಗಿರಿ : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಜನರು ಸರಣಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಇದೀಗ ಯಾದಗಿರಿ ಜಿಲ್ಲೆಯಲ್ಲಿ ಮೀಟರ್ ಬಡ್ಡಿ ದಂಧೆ ಕೋರನ ಕಿರುಕುಳಕ್ಕೆ ಬೇಸತ್ತು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಹೌದು ನೇಣು ಬಿಗಿದುಕೊಂಡು ಯುವಕ ಅಂಜಪ್ಪ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಅಂಜಪ್ಪ ಸೂಸೈಡ್ ಗೆ ಯತ್ನಿಸಿದ್ದಾನೆ. ಕೂಡಲೇ ಆತನನ್ನು ಸ್ಥಳೀಯರು ರಕ್ಷಿಸಿದ್ದಾರೆ. ಯಾದಗಿರಿಯ ಸ್ವಾಮಿ ವಿವೇಕಾನಂದರ ನಗರದಲ್ಲಿ ಈ ಒಂದು ಘಟನೆ ನಡೆದಿದೆ. ಮೀಟರ್ ಬಡ್ಡಿ ದಂಧೆಗೆ ಯುವಕ ನೊಂದು ಆತ್ಮಹತ್ಯೆ ಯತ್ನಿಸಿದ್ದಾನೆ. ಮೌನೇಶ್ ಎಂಬ ವ್ಯಕ್ತಿ ಅವಳಿ ಅಂಜಪ್ಪ 10,000 ಸಾಲವನ್ನು ಪಡೆದಿದ್ದ ಈ ವೇಳೆ ಹತ್ತು ಸಾವಿರಕ್ಕೆ ಅಸಲು ಮೀಟರ್ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದರಿಂದ ನೊಂದ ಅಂಜಪ್ಪ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಹಾಸನ : ಹಾಸನದಲ್ಲಿ ಘೋರವಾದ ದುರಂತವೊಂದು ಸಂಭವಿಸಿದ್ದು, ಟ್ರ್ಯಾಕ್ಟರ್ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಕ್ಕಿಹಳ್ಳಿ ನಡೆದಿದೆ. ಮೃತ ಯುವಕನನ್ನು ಹಾಸನ ತಾಲೂಕಿನ ಮಲ್ಲಾಪುರ ಗ್ರಾಮದ ಸಂಜು (25) ಮೃತ ದುರ್ದೈವಿ ಎಂದು ತಿಳಿದುಬಂದಿದೆ.ಬೇಲೂರು ತಾಲ್ಲೂಕಿನ ಹಕ್ಕಿಹಳ್ಳಿ ಸಮೀಪದ ಸಿಲ್ವರ್ ಸ್ಯಾಂಡ್ ಕ್ರಷರ್‌ನಿಂದ ಲೋಡ್ ತುಂಬಿಕೊಂಡು ಬರುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿದ್ದು, ಸಂಜು ಟ್ರ್ಯಾಕ್ಟರ್ ಅಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರಷರ್ ಮಾಲೀಕರು ಸಮರ್ಪಕ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸದ ಕಾರಣ ದುರ್ಘಟನೆ ಸಂಭವಿಸಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘಟನೆ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೇವನಹಳ್ಳಿ ಬಳಿ ಕಂಬಳಿಪುರದಲ್ಲಿ ನಡೆದಿದೆ. ರಸ್ತೆಯ ಬದಿಯಲ್ಲಿ ನಿಂತಿದ್ದ ಟ್ರಕ್ ಗೆ ವೇಗವಾಗಿ ಬಂದಂತಹ ಕಾರು ಭೀಕರವಾಗಿ ಡಿಕ್ಕಿ ಹೊಡೆದಿದೆ.ಈ ವೇಳೆ ನಿಯಂತ್ರಣ ತಪ್ಪಿ ಟ್ರಕ್ಕಿಗೆ ಕಾರು ಡಿಕ್ಕಿ ಹೊಡೆದಿದೆ ಕೂಡಲೇ ಕಾರು ಚಾಲಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಮೃತನನ್ನು ಆಂಧ್ರ ಮೂಲದ ಅಮರ್ ಪ್ರಸಾದ್ ಮೃತ ಚಾಲಕ ಎಂದು ತಿಳಿದುಬಂದಿದ್ದು ಅಪಘಾತದ ರಭಸಕ್ಕೆ ಕಾರು ಮೂರು ರೌಂಡ್ ಪಲ್ಟಿ ಹೊಡೆದಿದೆ.
ಹಾಸನ : ನಿನ್ನೆ ತಾನೇ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು. ಇದೀಗ ಹಾಸನದಲ್ಲಿ ಚಾಕ್ಲೇಟ್ ಕೊಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದ್ದು ಸದ್ಯ ಆರೋಪಿಯನ್ನು ಪೊಲೀಸರು ಆಯ್ಕೆ ಪಡೆದುಕೊಂಡಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಕಾಮುಕ ಕೃಷ್ಣ ಎನ್ನುವ ಆರೋಪಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಈ ಒಂದು ಘಟನೆ ನಡೆದಿದೆ ಸಂಬಂಧಿಕರ ಮದುವೆಗೆ ಪೋಷಕರು ತೆರಳಿದ್ದರು. ಈ ಸಂದರ್ಭದಲ್ಲಿ ಚಾಕ್ಲೆಟ್ ಕೊಡುವ ನೆಪದಲ್ಲಿ ಕೀಚಕ ಕೃಷ್ಣ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













