Subscribe to Updates
Get the latest creative news from FooBar about art, design and business.
Author: kannadanewsnow05
ದಕ್ಷಿಣಕನ್ನಡ : ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಇದ್ದ ವಿವಾಹಿತೆಯೋಬ್ಬರು ಸಾವನ್ನಪ್ಪಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ನಾಟೆಕಲ್ ಸಮೀಪ ನಡೆದಿದೆ. https://kannadanewsnow.com/kannada/bjp-president-j-p-naddas-wifes-fortuner-car-stolen-in-delhi/ ಈ ಒಂದು ಅಪಘಾತ ನಡೆದ ನಂತರ ತಕ್ಷಣ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ, ದೀಕ್ಷಿತ್ ಎಂಬವರ ಪತ್ನಿ ನಿಧಿ (29) ಸಾವನ್ನಪ್ಪಿದವರು. ಗಂಭೀರವಾಗಿ ಗಾಯಗೊಂಡಿರುವ ಸಹಸವಾರ ಯತೀಶ್ ದೇವಾಡಿಗ ಉಳ್ಳಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. https://kannadanewsnow.com/kannada/moscow-terror-supect-brutally-tortured-with-privates-hooked-up-to-80v-battery/ ಇಬ್ಬರು ಮುಡಿಪುವಿನಲ್ಲಿ ಭಾನುವಾರ ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾಗುವ ಸಂದರ್ಭ ಈ ದುರ್ಘಟನೆ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ಗೆ ಡಿಕ್ಕಿ ಹೊಡೆದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು…
ಚಿಕ್ಕಬಳ್ಳಾಪುರ : ರಾಜಕಾರಣದಲ್ಲಿ ಕೊಕ್ಕೆ ಅಥವಾ ವಕ್ರ ಆಗಿರುವ ಡಾ.ಕೆ. ಸುಧಾಕರ್ ಅವರನ್ನು ಪವಿತ್ರವಾದ ಪಾರ್ಲಿಮೆಂಟ್ ಮೆಟ್ಟಿಲು ಹತ್ತುವುದಕ್ಕೂ ಕೂಡ ಬಿಡುವುದಿಲ್ಲ. ಬೇಕಿದ್ದರೆ ಕೇಂದ್ರ ಸರ್ಕಾರವೇ ಚಿಕ್ಕಬಳ್ಳಾಪುರಕ್ಕೆ ಬಂದು ನಿಂತುಕೊಳ್ಳಲಿ. ಸುಧಾಕರ್‌ಗೆ ಪಾರ್ಲಿಮೆಂಟ್ ಹೋಗಲು ಬಿಡುವುದಿಲ್ಲ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು. https://kannadanewsnow.com/kannada/breaking-reels-queen-sonu-gowda-sent-to-14-day-judicial-custody-in-child-adoption-case/ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲವೇ ಕೆಲವು ಬಿಜೆಪಿ ನಾಯಕರಿಗೆ ಸುಧಾಕರ್ ಸಹಾಯ ಮಾಡಿದ್ದಾರೆ. ಯಾವ ಥರದ ಸಹಾಯ ಅಂದ್ರೆ, ಸೂರ್ಯ ನಮಸ್ಕಾರ, ಕಪಾಲಿ ಭಾತ್, ಶವಾಸನ, ದೀರ್ಘ ದಂಡ ನಮಸ್ಕಾರ ಮಾಡಿಸಿದ್ದಾರೆ ಅನಿಸುತ್ತದೆ. ಇದೆಲ್ಲ ನಾಯಕರಿಗೆ ಮಾಡಿಸಿದ್ದಕ್ಕೆ ಬಹುಶಃ ಸುಧಾಕರ್ ಗೆ ಟಿಕೆಟ್ ಸಿಕ್ಕಿದೆ ಎಂದು ವಾಗ್ದಾಳಿ ನಡೆಸಿದರು. https://kannadanewsnow.com/kannada/pakistan-begins-second-phase-of-preparations-for-return-of-afghans-report/ ನಾನು ನನ್ನ ಎಲ್ಲ ಆದಾಯದ ದಾಖಲೆಗಳನ್ನು ಡಿಕ್ಲೇರ್ ಮಾಡುವುದಕ್ಕೆ ರೆಡಿ. ಸುಧಾಕರ್ ಪ್ರಾಮಾಣಿಕರಾಗಿದ್ರೆ ಅವರ ಆದಾಯದ ಮೂಲ ಬಿಡುಗಡೆ ಮಾಡುವುದಕ್ಕೆ ಸಿದ್ದ ಇದ್ದಾರಾ?ಕೋವಿಡ್‌ನಲ್ಲಿ 2,200 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ನಮ್ಮ ಸರ್ಕಾರ ಆರೋಪ ಮಾಡಿತ್ತು.…
ಬೆಂಗಳೂರು : ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾ ಸ್ಟಾರ್ ರೀಲ್ಸ್ ರಾಣಿಯಂದೇ ಕರೆಸಿಕೊಳ್ಳುವ ಸೋನು ಗೌಡಗೆ ಇದೀಗ ಬೆಂಗಳೂರಿನ ಸಿಜೆಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇತ್ತೀಚಿಗೆ ರಾಯಚೂರು ಜಿಲ್ಲೆಯ ಒಂದು ಮಗುವನ್ನು ಕಾನೂನು ಬಾಹಿರವಾಗಿ ಸೋನು ಶ್ರೀನಿವಾಸಗೌಡ ದತ್ತು ದತ್ತು ಪಡೆದುಕೊಂಡಿದ್ದರು. ಇದೀಗ ಸೋನು ಶ್ರೀನಿವಾಸ ಗೌಡಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಸಿಜೆಮ್ ಕೋರ್ಟಿನ ನ್ಯಾಯಾಧೀಶರು ಇದಿ ಆದೇಶ ಹೊರಡಿಸಿದ್ದಾರೆ. ಘಟನೆ ಹಿನ್ನೆಲೆ? ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 1’ರ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ ಅರೆಸ್ಟ್ ಆಗಿದ್ದಾರೆ. ಮಗುವನ್ನು ಕಾನೂನಾತ್ಮಕವಾಗಿ ದತ್ತು ಪಡೆಯದೆ ಅಕ್ರಮವಾಗಿ ದತ್ತು ಪಡೆದಿದ್ದೇ ಅವರ ಬಂಧನಕ್ಕೆ ಕಾರಣ. ಅಷ್ಟೇ ಅಲ್ಲ, ಹಲವು ನಿಯಮಗಳನ್ನು ಸೋನು ಶ್ರೀನಿವಾಸ ಗೌಡ ಗಾಳಿಗೆ ತೂರಿದ್ದಾರೆ. ಈ ಸಂಬಂಧ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ದೂರನ್ನು ಆಧರಿಸಿ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸರು ನಟಿಯನ್ನು…
ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದೂರು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ.ಶೋಭಾ ಕರಂದ್ಲಾಜೆ ಅವರ ಬಹಿರಂಗ ಪ್ರಚಾರ ಮತ್ತು ಭಾಷಣಗಳಿಗೆ ನಿರ್ಭಂದಿಸುವಂತೆ ರಾಜ್ಯ ಕಾಂಗ್ರೆಸ್ ಮುಖಂಡ ಕುಶಾಲ್ ಹರುವೇಗೌಡ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. https://kannadanewsnow.com/kannada/credit-card-new-rule-rbi-allows-credit-card-users-to-change-billing-more-than-once/ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವು ಹಿಂದೂ- ಮುಸ್ಲಿಂ-ಕ್ರೈಸ್ತರು ಎಂಬ ಬೇಧ-ಭಾವವಿಲ್ಲದೆ, ಜಾತಿ-ಮತ-ಪಂಥಗಳನ್ನು ಮೀರಿ ಜನರು ಸಹೋದರತ್ವದಿಂದ ವಾಸಿಸುತ್ತಿದ್ದಾರೆ.ಕ್ಷೇತ್ರದಲ್ಲಿ ವ್ಯಾಪ್ತಿಯ 8 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 2656 ಪೋಲಿಂಗ್ ಬೂನ್ಸ್ ಒಳಪಡುವ ಸುಮಾರು 28-30 ಲಕ್ಷ ಜನ ಮತದಾರರು ಇದ್ದಾರೆ. https://kannadanewsnow.com/kannada/is-r-ashoka-allergic-to-kumkum-or-disgusting/ ಇಂತಹ ಶಾಂತಿ ಸೌಹಾರ್ದತೆಯ ಬೀಡು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಭಾರತೀಯ ಜನತಾ ಪಕ್ಷದಿಂದ ಪ್ರಚೋದನಕಾರಿ ಭಾಷಳಿಗೆ ಕೋಮು ಗಲಭೆಗಳಿಗೆ ಕುಖ್ಯಾತರಾಗಿರುವ ಶೋಭಾ ಕರಾಂದ್ಲಾಜೆ ಅವರು ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜನರಲ್ಲಿ ಆತಂಕ ಬಹಳಷ್ಟು ಮೂಡಿಸಿದೆ. https://kannadanewsnow.com/kannada/658-58-litres-in-ballari-liquor-seized/ ಕೋಮುಗಲಭೆಗೆ ಪ್ರಚೋದಿಸುವಂತಹ ಭಾಷಣಗಳಿಂದಲೇ ಕುಖ್ಯಾತಿ ಹೊಂದಿರುವ ಕೇಂದ್ರ…
ಕಲಬುರಗಿ : ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಚೇರಿಯಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಗೆ ಸನ್ಮಾನ ಮಾಡುವ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರೊಬ್ಬರು ಹಣೆಗೆ ಕುಂಕುಮ ಇಡಲು ಬಂದಾಗ ನಿರಾಕರಿಸಿದ ಘಟನೆ ನಡೆದಿದೆ.ಸಿದ್ದರಾಮಯ್ಯ ಹಿಂದೂ ವಿರೋಧಿ, ಕೇಸರಿ ಕಂಡರೆ ಆಗಲ್ಲ, ಕೇಸರಿ ಶಲ್ಯ ಧರಿಸಲ್ಲ, ಕುಂಕುಮ ಹಾಕಲ್ಲ ಎಂದೆಲ್ಲಾ ಟೀಕಿಸುವ ರಾಜ್ಯದ ಬಿಜೆಪಿ ನಾಯಕರು ತಮ್ಮ ನಾಯಕನ ಈ ನಡೆಗೆ ಏನು ಹೇಳುತ್ತಾರೆ? ಎನ್ನುವ ಪ್ರಶ್ನೆ ಸಾರ್ವಜನಿಕರಲ್ಲಿ ಉದ್ಭವಿಸಿದೆ. https://kannadanewsnow.com/kannada/35-somalian-pirates-apprehended-by-indian-navy-remanded-to-10-day-police-custody/ ಹೌದು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬಿಜೆಪಿ ಕಚೇರಿಗೆ ಆಗಮಿಸಿದ ಆರ್. ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು…
ಮೈಸೂರು : ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಕೊಡಗು ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಮೂರು ಕ್ಷೇತ್ರಗಳ ಸಚಿವರು ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಆಯೋಜಿಸಿದ ಸಭೆಯಲ್ಲಿ ಸಮುದ್ರಮಯ್ಯ ಮಾತನಾಡಿ ಬಿಜೆಪಿಯವರು ಕೇವಲ ‘ಜೈ ಶ್ರೀರಾಮ್’ ಎಂದು ಕೂಗಿದರೆ ನಾನು ‘ಜೈ ಸೀತಾರಾಮ್’ ಎಂದು ಕೂಗುತ್ತೇನೆ ನನ್ನ ಹೆಸರಲ್ಲೇ ರಾಮನಿದ್ದಾನೆ ಎಂದು ತಿಳಿಸಿದರು. https://kannadanewsnow.com/kannada/breaking-bjp-releases-5th-list-of-candidates-high-command-replaces-anant-kumar-hegde-with-kageri/ ಸಮಾಜದಲ್ಲಿರುವ ಅಸಮಾನತೆ ಹೋಗಬೇಕು. ಆದರೆ ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಸಮಾಜದಲ್ಲಿ ಬಿರುಕು ಮೂಡಿದಷ್ಟೂ ಅಸಮಾನತೆ ಬೆಳೆಯುತ್ತದೆ. ಶ್ರೀರಾಮಚಂದ್ರ, ಸೀತಾ, ಲಕ್ಷ್ಮಣ ಎಲ್ಲರೂ ನಮಗೆ ಪೂಜ್ಯರು. ಈಗ ಬಿಜೆಪಿ ಕೇವಲ ಜೈ ಶ್ರೀರಾಮ್ ಕೂಗುತ್ತದೆ. ನಾನು ಜೈ ಸೀತಾರಾಮ್ ಎಂದು ನಿರಂತರವಾಗಿ ಕೂಗುತ್ತೇನೆ. ನನ್ನ ಹೆಸರಿನಲ್ಲೇ ರಾಮನಿದ್ದಾನೆ. https://kannadanewsnow.com/kannada/big-relief-for-mlas-vedavyas-kamath-bharat-shetty-hc-stays-probe-into-jerosa-school-controversy/ ಹತ್ತು ವರ್ಷ ಅಧಿಕಾರ ಮಾಡಿದ ನರೇಂದ್ರಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ರಾಮ ಸರ್ವರಿಗೂ ಸೇರಿದವನು. ನನ್ನ ಹೆಸರಲ್ಲೇ ರಾಮ…
ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು ರಾಜ್ಯದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರವಾಗಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅನಂತ್ ಕುಮಾರ್ ಹೆಗಡೆ ಬದಲು ಇದೀಗ ಹೈಕಮಾಂಡ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಟಿಕೆಟ್ ನೀಡಿದೆ. ಅಲ್ಲದೆ ಇದೇ ವೇಳೆ ಇತ್ತೀಚಿಗೆ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಜಗದೀಶ್ ಶೆಟ್ಟರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬದಲು ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡಲಾಗಿದೆ. ಅಲ್ಲದೆ ಹೈಕಮಾಂಡ್ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಯ ಮಾಜಿ ಸಚಿವ ಸುಧಾಕರ್ ಅವರಿಗೆ ಕೂಡ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಟಿಕೆಟ್ ಸಿಕ್ಕಿದೆ.ಬಿಜೆಪಿ 5ನೇ ಪಟ್ಟೆ ಬಿಡುಗಡೆಯಾಗಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ್ದು, ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ 1) ಉತ್ತರ ಕನ್ನಡ ಲೋಕಸಭಾ ಕ್ಷೇತ್ರ – ವಿಶ್ವೇಶ್ವರ…
ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿಗೆ ಬಿಗ್ ರಿಲೀಫ್ : ಜೆರೋಸಾ ಶಾಲೆಯ ವಿವಾದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ
ಮಂಗಳೂರು: ಇತ್ತೀಚಿಗೆ ಮಂಗಳೂರನಲ್ಲಿ ಜೆರೋಸಾ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ ಸೇರಿದಂತೆ ಐವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಅಲ್ಲದೆ ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶ ನೀಡಿದೆ ಎಂದು ತಿಳಿದುಬಂದಿದೆ. https://kannadanewsnow.com/kannada/industrialist-and-former-congress-leader-naveen-jindal-joins-bjp/ ಫೆ.12ರಂದು ಜೆರೋಸಾ ಶಾಲೆಯಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹಿಂಪ ಮುಖಂಡ ಶರಣ್ ಪಂಪೈಲ್, ಪಾಲಿಕೆ ಸದಸ್ಯರಾದ ಸಂದೀಪ್ ಗರೋಡಿ, ಭರತ್ ಕುಮಾರ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು.ಶಾಲೆಯ ಬಳಿಯ ನಿವಾಸಿ ಅನಿಲ್ ಜೆರಾಲ್ಡ್ ಲೋಬೊ ಎಂಬವರು ಪಾಂಡೇಶ್ವರ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಐವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿ ಆರೋಪಿಗಳು ಹೈಕೋರ್ಟ್ನಲ್ಲಿ ಜಾಮೀನು ಪಡೆದಿದ್ದರು. ವಾದವನ್ನು ಆಲಿಸಿದ ಜಸ್ಟೀಸ್ ಕೃಷ್ಣ ಎಸ್.ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕರಣದ ತನಿಖೆಗೆ ತಡೆ ನೀಡಿದ್ದು, ದೂರುದಾರರಿಗೆ ನೋಟಿಸ್ ಜಾರಿಗೊಳಿಸಿ ಆದೇಶಿಸಿತು. ಜೆರೋಸಾ ಶಾಲೆಯ ವಿರುದ್ಧದ ಆರೋಪಗಳ…
ಹುಬ್ಬಳ್ಳಿ : ಬೈಕ್ ಸವಾರನಿಗೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ಕಾರವಾರ್ ರಸ್ತೆಯ ಇಎಸ್ಐ ಆಸ್ಪತ್ರೆ ಮುಂಭಾಗ ಈ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಕಾರವಾರ ರಸ್ತೆಯ ಇ ಎಸ್ ಐ ಆಸ್ಪತ್ರೆ ಮುಂಭಾಗ ಘಟನೆ ನಡೆದಿದ್ದು, ಇದೀಗಹಳೆ ಹುಬ್ಬಳ್ಳಿ ಪೊಲೀಸರು ಮೃತ ಸವಾರನ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರಕರಣವಾಗಿದೆ. ಬೈಕುಗಳ ನಡುವೆ ಅಪಘಾತ, ಇಬ್ಬರು ಸಾವು, ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೇವಡಿಕೋಪ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಾಪಟ್ಟಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ವೆಂಕನಗೌಡ ಪಾಟೀಲ್ (50) ಪ್ರಮೋದ್ ಕುಮಾರ್ (18) ಎನ್ನುವವರು ಮೃತಾಪಟ್ಟಿದ್ದಾರೆ. ಮತ್ತೆ ಇಬ್ಬರ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ಪೊಲೀಸ್…
ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ವೆಂಕನಗೌಡ ಪಾಟೀಲ್ (50) ಪ್ರಮೋದ್ ಕುಮಾರ್ (18) ಎನ್ನುವವರು ಮೃತಪಟ್ಟಿದ್ದಾರೆ. ಮತ್ತೆ ಇಬ್ಬರ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.