Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಕಾರಿನ ಟೈರ್ ಪಂಚರ್ ಆಗಿ ನಿಯಂತ್ರಣ ಕಳೆದ ಕೊಂಡು ರಸ್ತೆ ಬದಿಯಲ್ಲಿದ್ದಂತಹ ಕೆರೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಐವರು ವೈದ್ಯಕೀಯ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಮುದ್ದೆನಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರಿಗೆ ಗಂಭೀರವಾಗಿ ಗಾಯಗಳಿವೆ. ತಕ್ಷಣ ಸ್ಥಳೀಯರು ಚನ್ನರಾಯಪಟ್ಟಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿದ್ದವರು ಚೆನ್ನೈ ಮೂಲದ ವೈದ್ಯಕೀಯ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಸಿಲುಕಿದವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧಾರವಾಡ : ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣೆಗೇರಿಯಲ್ಲಿ ನಡೆದಿದೆ. ಆದರೆ ಪತಿಯ ಮನೆಯವರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಮೃತ ಗೃಹಿಣಿಯನ್ನು ಶಭನಮ್ ಎಂದು ತಿಳಿದುಬಂದಿದೆ. ನಿನ್ನೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅಣ್ಣಿಗೇರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. ಮಹಿಳೆಯ ಕತ್ತಿನ ಬಾಗದಲ್ಲಿ ಗಾಯಗಳಾಗಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಇನ್ನು ಮಹಿಳೆಯ ಮಗ ಅಮ್ಮನಿಗೆ ತಂದೆ ಹಾಗೂ ಅಜ್ಜಿ ಹೊಡೆದಿರುವುದಾಗಿ ಕಣ್ಣೀರಿಟ್ಟಿದ್ದಾನೆ.ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಶಭನಮ್ ಗೆ ಪತಿ ಹಾಗೂ ಕುಟುಂಬದವರು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಅನುಮಾನಾಸ್ಪದವಾಗಿ ಶಭನಮ್ ಸಾವನ್ನಪ್ಪಿದ್ದು, ಶಭನಮ್ ಪತಿ ಸಾಮದಾನಿ ಗೌಸುಸಾಬ್, ಫಾತಿಮ ಅಮಾಬುಸಾಬ್, ದಾವಲ್ಮಾ ರಫಿಕ್ ವಿರುದ್ಧ FIR ದಾಖಲಾಗಿದೆ.
ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಬೈಕ್ಗೆ ವೇಗವಾಗಿ ಬಂದು ಸಾರಿಗೆ ಬಸ್ ಗುದ್ದಿದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ. ಹೌದು ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ರಾಜ್ಯದಲ್ಲಿ ‘ಆನ್ಲೈನ್ ಗೇಮ್’ ಗೆ ಮತ್ತೊಂದು ಬಲಿ : ಧಾರವಾಡದಲ್ಲಿ ‘IIT’ ಸ್ಟಾಫ್ ನರ್ಸ್ ನೇಣಿಗೆ ಶರಣು!
ಧಾರವಾಡ : ಇತ್ತೀಚಿಗೆ ರಾಜ್ಯದಲ್ಲಿ ಆನ್ಲೈನ್ ಗೇಮ್ ನಿಂದ ಅನೇಕ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.ಇದೀಗ ಆನ್ಲೈನ್ ಗೆ ನಲ್ಲಿ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದ ಇದರಿಂದ ಮನನೊಂದ ಯುವಕ ನೀಡೋ ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಹೌದು ನಾಗರಾಜ್ ಶಿವಪ್ಪ ಉಳವಣ್ಣವರ(30) ಎನ್ನುವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಆನ್ ಲೈನ್ ಗೇಮ್ ಚಟದಿಂದ ನೇಣಿಗೆ ಶರಣಾದ ಶಂಕೆ ವ್ಯಕ್ತವಾಗಿದೆ. ಮೃತ ನಾಗರಾಜ್ ಅನ್ ಲೈನ್ ಗೇಮ್ ನಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಕಳೆದುಕೊಂಡಿದ್ದು, ತೀವ್ರ ನಷ್ಟಕ್ಕೊಳಗಾಗಿದ್ದ. ಅಲ್ಲದೇ ಈತ ಐಐಟಿ ಸ್ಟಾಫ್ ನರ್ಸ್ ಎಂದು ತಿಳಿದುಬಂದಿದೆ.ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ‘ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ’ : ಮಾಜಿ ಸಚಿವ ಶ್ರೀರಾಮುಲು ಹೊಸ ಬಾಂಬ್!
ಕೋಲಾರ : ಒಂದು ಕಡೆ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಯಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣ ಹೈಕಮಾಂಡ್ಗೆ ವಿಜಯೇಂದ್ರ ವಿರುದ್ಧ ದೂರು ನೀಡಿದ್ದು, ಇನ್ನೊಂದು ಕಡೆ ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಸರಿಯಾಗಿ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಇದೀಗ ಹೊಸ ದಾಳವನ್ನು ಉರುಳಿಸಿದ್ದಾರೆ. ಈ ಕುರಿತು ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ. ಸದ್ಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಇದ್ದಾರೆ. ಆಕಸ್ಮಿಕವಾಗಿ ಬದಲಾದರೆ ನಾನು ರಾಜ್ಯಾಧ್ಯಕ್ಷನಾಗಲು ಸಿದ್ಧನಿದ್ದೇನೆ ಎಂದು ಹೊಸ ದಾಳ ಉರುಳಿಸಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರನ್ನು ಬದಲಿಸಿ ಎಂದು ಒತ್ತಾಯ ಮಾಡಲ್ಲ ಒಂದು ವೇಳೆ ನನಗೆ ಅವಕಾಶ ಕೊಟ್ಟರೆ ನಾನು ರಾಜ್ಯಾಧ್ಯಕ್ಷ ಸ್ಥಾನವನ್ನು ನಿಭಾಯಿಸುತ್ತೇನೆ. ಆದರೆ ಸದ್ಯ ಇರುವ ಹಾಲಿ ಅಧ್ಯಕ್ಷರನ್ನು ಬದಲಿಸಿ ಎಂದು ಒತ್ತಾಯ ಮಾಡಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಅವರು…
ಬೆಳಗಾವಿ : ಬೆಳಗಾವಿಯಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಪತಿಯೊಬ್ಬ ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಉಪ್ಪಾರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಪತ್ನಿಯನ್ನು ಮೀರಾಬಾಯಿ (25) ಎಂದು ತಿಳಿದುಬಂದಿದ್ದು, ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು ಕಟಾವು ಗ್ಯಾಂಗ್ ಜೊತೆ ಉಪ್ಪಾರಟ್ಟಿಗೆ ಕೆಲಸಕ್ಕೆ ಬಂದಿದ್ದರು. ಈ ವೇಳೆ, ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಇಷ್ಟಾದರೂ ಕೂಡ ಪತಿಯ ಕೃತ್ಯ ಇಷ್ಟಕ್ಕೆ ನಿಲ್ಲದ. ತಾನು ಏನೋ ದೊಡ್ಡ ಘನಂದಾರಿ ಕೆಲಸ ಮಾಡಿರೋ ಥರ ಕೊಲೆಯ ಬಳಿಕ ಆರೋಪಿಯು ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿ ತೋರಿಸಿದ್ದ ಎನ್ನಲಾಗುತ್ತಿದೆ. ಸದ್ಯ ಆರೋಪಿ ಬಾಲಾಜಿಯನ್ನು ವಶಕ್ಕೆ ಪಡೆದಿರುವ ಗೋಕಾಕ್ ಗ್ರಾಮೀಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಉತ್ತರಕನ್ನಡ : ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಹಾವಳಿಯಿಂದ ಅನೇಕ ಜನರು ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಇದೀಗ ಉತ್ತರ ಕನ್ನಡದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ರಾತ್ರೋರಾತ್ರಿ ಐವರು ಬಡ್ಡಿ ದಂಧೆ ಕೋರರನ್ನು ಅರೆಸ್ಟ್ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ನಡೆದಿದೆ. ಹೌದು ರಾತ್ರೋರಾತ್ರಿ ಬಡ್ಡಿ ದಂಧೆ ಕೋರರನ್ನು ಅರೆಸ್ಟ್ ಮಾಡಲಾಗಿದ್ದು, ಮುಂಡಗೋಡ ತಾಲೂಕಿನಲ್ಲಿ ಸಿನಿಮೀಯ ರೀತಿಯಲ್ಲಿ ಬಡ್ಡಿ ದಂಧೆ ಕರೋನ ಮೀಟಿಂಗ್ ನಡೆಯುತ್ತಿತ್ತು. ಈ ವೇಳೆ ರಾತ್ರೋ ರಾತ್ರಿ ಮೀಟರ್ ಬಡ್ಡಿಯಲ್ಲಿ NMD ಖ್ಯಾತಿಯ ಜಮೀರ್ನನ್ನು ಅರೆಸ್ಟ್ ಮಾಡಿದ್ದಾರೆ. ಒಬ್ಬರಿಗೆ 10 ಲಕ್ಷ ಕೊಟ್ಟು 30% ಬಡ್ಡಿಯಲ್ಲಿ 15 ಪರ್ಸೆಂಟ್ ತನಗೆ ಉಳಿದ 15% ವಸೂಲಿ ಹುಡುಗರಿಗೆ ಎಂದು ಬಡ್ಡಿ ದಂಧೆಕೊರ ಹೇಳಿದ್ದ. ಕೆಲಸ ಇಲ್ಲದ ಯುವಕರನ್ನು ಬಳಸಿಕೊಂಡು ಮೀಟರ್ ಬಡ್ಡಿ ದಂಧೆ ನಡಿಸುತ್ತಿದ್ದ ಎನ್ನಲಾಗಿದೆ ಸ್ಥಳೀಯ ದೂರಿನ ಮೇರೆಗೆ ಸದ್ಯ ಐವರು ಪುಡಿ ರೌಡಿಗಳನ್ನ ಇದೀಗ ಅರೆಸ್ಟ್ ಮಾಡಿದ್ದಾರೆ. ತಿಂಗಳಿಗೆ 40 ರಿಂದ 50,000 ಬಡ್ಡಿ ಬರುತ್ತಿತ್ತು. ರಾತ್ರಿ ಹೊಡೆದು…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದಂತಹ ಅಗ್ನಿ ಅವಘಡ ಸಂಭವಿಸಿದ್ದು ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಎಂಬ ಕೈಗಾರಿಕಾ ಪ್ರದೇಶದಲ್ಲಿ ಸ್ಟೀಲ್ ಕಾರ್ಖಾನೆಯ ಪಕ್ಕದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. A1 ಸ್ಟೀಲ್ಕಾರ್ಖಾನೆ ಪಕ್ಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ತ್ಯಾಜ್ಯಕ್ಕೆ ಹೊತ್ತಿಕೊಂಡ ಬೆಂಕಿ ಕಾರ್ಖಾನೆಗೆ ಹಬ್ಬುವ ಸಾಧ್ಯತೆ ಇದೆ ಎನ್ನಲಾಗಿದೆ. ಗೌರಿಬಿದನೂರು ಕುಡುಮಲಕುಂಟೆ ಗ್ರಾಮದಲ್ಲಿ ಪ್ರಕರಣ ನಡೆದಿದೆ. A1 ಸ್ಟೀಲ್ ಕಾರ್ಖಾನೆಗೆ ಪಕ್ಕದಲ್ಲಿ ಈ ಒಂದು ಬೆಂಕಿ ಒಗಡ ಸಂಭವಿಸಿದೆ. ತ್ಯಾಜ್ಯಕ್ಕೆ ಹೊತ್ತಿಕೊಂದಿದೆ.ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಹರಸಾಹಸಪಡುತ್ತಿದ್ದಾರೆ
ಬೆಂಗಳೂರು : ಬ್ಯಾಂಕ್ ಗಳಿಂದ ಲೆಕ್ಕ ಕೋರಿ ಹೈಕೋರ್ಟ್ ಗೆ ವಿಜಯ ಮಲ್ಯ ಅರ್ಜಿ ಸಲ್ಲಿಸಿದ್ದು, ವಿಜಯ ಮಲ್ಯ ಪರ ಹಿರಿಯ ವಕೀಲ ಸಜನ್ ಪೂವಯ್ಯ ಹೈಕೋರ್ ನಲ್ಲಿ ಇಂದು ವಾದ ಮಂಡಿಸಿದರು. ಈ ವೇಳೆ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರಾದ ಆರ್ ದೇವದಾಸ್ ಅವರು ಬ್ಯಾಂಕ್ಗಳಿಗೆ ಹಾಗೂ ವಸೂಲಾತಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ ವಿಜಯ್ ಮಲ್ಯ ಪರ ಹಿರಿಯ ವಕೀಲ ಸಜನ್ ಪೂವಯ್ಯ ವಾದ ಮಂಡಿಸಿ 6200 ಕೋಟಿ ಸಾಲ ಕೊಡಬೇಕಿತ್ತು. 14,000 ಕೋಟಿ ವಸೂಲಿಯಾಗಿದೆ ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ.ಸಾಲ ವಸೂಲಾತಿ ಅಧಿಕಾರಿ10,200 ಕೋಟಿ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣ ಸಾಲ ತೀರಿದ್ದರೂ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ನೀಡುವಂತೆ ನಿರ್ದೇಶಿಸಲು ಮನವಿ ಮಾಡಿದರು. ಈ ವೇಳೆ ಜಡ್ಜ್ ಬ್ಯಾಂಕಗಳಿಗೂ ಹಾಗೂ ಸಾಲ ವಸೂಲಾತಿ ಅಧಿಕಾರಿಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾ.ಆರ್ ದೇವದಾಸ್ ಅವರಿಂದ ಹೈಕೋರ್ಟ್ ಪೀಠ ಇದೀಗ…
ಕಲಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ನಾಲವಾರದ ಕೋರಿಸಿದ್ದೇಶ್ವರ ಸಂಸ್ಥಾನ ಮಠದಲ್ಲಿ ಭತ್ತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಚಿತಾಪುರ ತಾಲೂಕಿನ ನಾಲವಾರದ ಶ್ರೀ ಕೋರಿಸಿದ್ದೇಶ್ವರ ಮಠದಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಮಲ್ಲಿಕಾರ್ಜುನ ವೀರಯ್ಯಸ್ವಾಮಿ ಹಿರೇಮಠ (35) ಆತ್ಮಹತ್ಯೆ ಮಾಡಿಕೊಂಡ ಭಕ್ತ ಎಂದು ತಿಳಿದುಬಂದಿದೆ. ವೀರಯ್ಯಸ್ವಾಮಿ ಮಠದ ಪೀಠಾಧಿಪತಿ ತೋಟೇಂದ್ರ ಶಿವಾಚಾರ್ಯ ಅವರ ತಂಗಿಯ ಪುತ್ರ ಎನ್ನಲಾಗಿದ್ದು, ಒಂದು ವರ್ಷದ ಹಿಂದೆ ಅವರಿಗೆ ಮದುವೆಯಾಗಿತ್ತು. ಪೂಜ್ಯರ ಸೇವೆ ಮಾಡುತ್ತ ಮಠದಲ್ಲೇ ವಾಸವಿದ್ದರು ಎಂದು ತಿಳಿದುಬಂದಿದೆ.ಮಠದಲ್ಲಿರುವ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಚಿತ್ತಾಪೂರ ಹಣೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.













