Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಉಡುಪಿ : ಉಡುಪಿಯಲ್ಲಿ ಘೋರವಾದ ದುರಂತ ನಡೆದಿದ್ದು, ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಲೇಬರ್ ಕಾಲೋನಿಯ ಜೋಪಡಿಯಲ್ಲಿ ನಡೆದಿದೆ. ಮಲ್ಲೇಶ್ (23) ಹಾಗು ಪವಿತ್ರಾ (17) ನೇಣಿಗೆ ಶರಣಾಗಿರುವ ಪ್ರೇಮಿಗಳು ಎಂದು ತಿಳಿದುಬಂದಿದೆ. ಮೃತ ಪವಿತ್ರಾ ತಾಯಿ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ವೈದ್ಯ ಪತಿಯಿಂದಲೇ ಡಾಕ್ಟರ್ ಕೃತಿಕಾ ರೆಡ್ಡಿ ಕೊಲೆ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ದೊರತಿದೆ. ಸಿನಿಮಾ ಸ್ಟೈಲ್ ನಲ್ಲಿ ಕೃತಿಕಾ ರೆಡ್ಡಿ ಕೊಲೆಗೆ ಪತಿ ಮಹೇಂದ್ರ ಪ್ಲಾನ್ ಮಾಡಿದ್ದ. ಆದರೆ ಸಿಕ್ಕಿಬೀಳದಿರಲು ಖತರ್ನಾಕ್ ಸಂಚು ರೂಪಿಸಿದ್ದಾನೆ ಇದೀಗ ವಿಚಾರಣೆ ವೇಳೆ ಸ್ಪೋಟಕ ಅಂಶ ಬಯಲಾಗಿದೆ. ಪೊಲೀಸರ ವಿಚಾರಣೆ ವೇಳೆ ಡಾ. ಮಹೇಂದ್ರ ಅನೆಸ್ಥೆಶಿಯಾ ಕುರಿತಂತೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ ಇದರಿಂದಲೇ ಕೃತಿಕಾಳನ್ನು ಕೊಲೆ ಮಾಡಿದ್ದಾನೆ. ದೇಹದಲ್ಲಿ ಅನೆಸ್ಥೆಶಿಯ ಹೆಚ್ಚು ಸಮಯ ಇರುವುದಿಲ್ಲ. ಅನಸ್ತೇಶಿಯ ನಾಲ್ಕು ಗಂಟೆಯಲ್ಲಿ 50% ಕಡಿಮೆ ಆಗುತ್ತದೆ 24 ಗಂಟೆ ಕಳೆದರೆ ಅನಸ್ತೇಶಿಯ ಸಂಪೂರ್ಣ ಅಂಶ ನಾಶವಾಗುತ್ತದೆ. ಪೋಸ್ಟ್ಮಾರ್ಟಂಮಾಡಿದರೂ ಕೂಡ ಅನಸ್ತೇಶಿಯಾ ಪತ್ತೆ ಕಂಡುಹಿಡಿಯುವುದು ಕಷ್ಟ. ಹಾಗಾಗಿ ಆತ ಪ್ಲಾನ್ ಮಾಡಿ ಕೃತಿಕಾ ರೆಡ್ಡಿಗೆ ಅನಸ್ತೇಶಿಯ ನೀಡುತ್ತಿದ್ದ ಪ್ರೋಪೋಪೋಲ್ ಅನೆಸ್ಥೆಶಿಯಾ ಕೊಟ್ಟಿದ್ದ ಎಂದು ತಿಳಿದುಬಂದಿದೆ. ಇದೀಗ ಪೊಲೀಸರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಂದ್ರ ರೆಡ್ಡಿಯ ಮೊಬೈಲ್ ಮತ್ತು ಲ್ಯಾಪ್ಟಾಪ್ ಸೀಜ್ ಮಾಡಿದ್ದಾರೆ. ಪತ್ನಿ ಮೆಡಿಕಲ್ ಸರ್ಟಿಫಿಕೇಟ್ಸ್, ಮೊಬೈಲ್…

Read More

ಚೆನ್ನೈ: ಭಾರತದ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ಅವರ ಚೆನ್ನೈನ ಮಾಜಿ ನಿವಾಸವನ್ನು ಗುರಿಯಾಗಿಸಿಕೊಂಡು ಗುರುವಾರ ಸಂಜೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ನಗರ ಪೊಲೀಸರಿಂದ ತ್ವರಿತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗುರುವಾರ ಸಂಜೆ 6:33 ಕ್ಕೆ ಈ ಬೆದರಿಕೆ ಸಂದೇಶ ಕಳುಹಿಸಲಾಗಿದೆ ಎಂದು ತೆನಾಂಪೇಟೆ ಪೊಲೀಸ್ ಜಿಲ್ಲೆಯ ಅಧಿಕಾರಿಗಳು ತಿಳಿಸಿದ್ದಾರೆ. Mylaporemla@gmail.com ವಿಳಾಸದಿಂದ ಬಂದ ಈ ಇಮೇಲ್ ಅನ್ನು ಫೋರ್‌ಶೋರ್ ಎಸ್ಟೇಟ್ ಪೊಲೀಸ್ ಠಾಣೆ ಸೇರಿದಂತೆ ಹಲವಾರು ಅಧಿಕೃತ ಪೊಲೀಸ್ ಇಮೇಲ್ ಐಡಿಗಳಿಗೆ ಕಳುಹಿಸಲಾಗಿದೆ. ಮೈಲಾಪುರದ 5 ನೇ ಟ್ರಸ್ಟ್ ಕ್ರಾಸ್ ಸ್ಟ್ರೀಟ್‌ನಲ್ಲಿರುವ ಉಪರಾಷ್ಟ್ರಪತಿಯವರ ಮನೆಯಲ್ಲಿ ಬಾಂಬ್ ಇರಿಸಲಾಗಿದೆ ಎಂದು ಸಂದೇಶದಲ್ಲಿ ಹೇಳಲಾಗಿತ್ತು. ಆದಾಗ್ಯೂ, ಪ್ರಾಥಮಿಕ ತನಿಖೆಗಳಿಂದ ಉಪರಾಷ್ಟ್ರಪತಿಗಳು ಸುಮಾರು ಒಂದು ವರ್ಷದ ಹಿಂದೆ ಮೈಲಾಪುರ ಆಸ್ತಿಯನ್ನು ಖಾಲಿ ಮಾಡಿದ್ದರು ಎಂದು ತಿಳಿದುಬಂದಿದೆ. ಚೆನ್ನೈಗೆ ಭೇಟಿ ನೀಡಿದ ಸಮಯದಲ್ಲಿ ಅವರು ಪೋಯಸ್ ಗಾರ್ಡನ್‌ನ ಬಿನ್ನಿ ರಸ್ತೆಯಲ್ಲಿರುವ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದರು. ಬೆದರಿಕೆ ಕರೆ ಬಂದ ಕೂಡಲೇ ತೇನಾಂಪೇಟೆ…

Read More

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಇದೀಗ ಇಡೀ ರಾಜ್ಯವೇ ಬೆಚ್ಚಿಬಿಳಿಸುವಂತಹ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನಲ್ಲಿ ಬೆಚ್ಚಿಬಿಳಿಸುವ ಘಟನೆ ನಡೆದಿದ್ದು, ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಾಲಗಿದೆ ಪ್ರತಿಷ್ಠಿತ ಖಾಸಗಿ ಇಂಜಿನಿಯರ್ ಕಾಲೇಜಿನಲ್ಲಿ ಈ ಒಂದು krutyab ನಡೆದಿದೆ. ಸೀನಿಯರ್ ವಿದ್ಯಾರ್ಥಿನಿಯ ಮೇಲೆ ಜೂನಿಯರ್ ವಿದ್ಯಾರ್ಥಿಯೊಬ್ಬ ರೇಪ್ ಮಾಡಿದ್ದಾನೆ. ಕಾಲೇಜಿನ ವಾಶ್ ರೂಮ್ ಗೆ ಎಳೆದೋಯ್ದು ಇದು ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ. ಸದ್ಯ ಹನುಮಂತನಗರ ಠಾಣೆ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಪ್ರಕರಣದ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ದಿನೇ ದಿನೇ ಕ್ರೈಂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು ಇದೀಗ ಹಾಡ ಹಗಲೇ ವಿದ್ಯಾರ್ಥಿನಿಯ ಭೀಕರ ಕೊಲೆಯಾಗಿದೆ. ವಿದ್ಯಾರ್ಥಿನಿಯ ಕತ್ತು ಕೊಯ್ದು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಈ ಒಂದು ಭೀಕರ ಹತ್ಯೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಈ ಒಂದು ಕೊಲೆ ನಡೆದಿದೆ. ಯುವತಿಯನ್ನು ಬೈಕ್ ನಲ್ಲಿ ಕರೆದು ತಂದ ದುಷ್ಕರ್ಮಿಗಳು ಕತ್ತು ಕೊಯ್ದು ಕೊಲೆ ಮಾಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಶ್ರೀರಾಮಪುರ ಪೋಲಿಸರು ಭೇಟಿ ನೀಡಿ ಪರಿಶೀಲನೆ ಕೂಡ ಮಾಡಿದ್ದಾರೆ. ವಿದ್ಯಾರ್ಥಿನಿ ಯಾರು? ಯಾವ ಕಾರಣಕ್ಕೆ ದುಷ್ಕರ್ಮಿಗಳು ವಿದ್ಯಾರ್ಥಿನಿಯ ಕೊಲೆ ಮಾಡಿದ್ದಾರೆ ಎನ್ನುವುದರ ಕುರಿತು ಇನ್ನಷ್ಟೇ ಮಾಹಿತಿ ಸಿಗಬೇಕಿದೆ. ಪ್ರಾಥಮಿಕವಾಗಿ ಶ್ರೀರಾಮಪುರ ರೈಲ್ವೆ ಟ್ರ್ಯಾಕ್ ಬಳಿ ಒಂದು ಕೊಲೆ ನಡೆದಿದೆ.

Read More

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಇಲಾಖೆಯ ಕೆಲವರು ಆರ್​ಎಸ್​​ಎಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಬಂಧ ವರದಿ ತರಿಸಿಕೊಂಡು, ಅಂಥವರನ್ನು ಅಮಾನತು ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ. ಸರ್ಕಾರಿ ನೌಕರರು ಕೆಲಸ ಮಾಡುತ್ತಾರೆ ಅಂದುಕೊಂಡಿದ್ದೇವೆ. ಆದರೆ, ಅವರು ನಮಗಿಂತಲೂ ಹೆಚ್ಚು ರಾಜಕೀಯದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರಿ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಷಣ ಮಾಡುವುದಲ್ಲದೆ, ಬೇರೆ ರೀತಿಯಲ್ಲೂ ಪಾಲ್ಗೊಂಡಿದ್ದಾರೆ. ಇದರಲ್ಲಿ ನಮ್ಮ ಇಲಾಖೆಯ ಕೆಲವರಿದ್ದಾರೆ. ಈ ಸಂಬಂಧ ವರದಿ ತರಿಸಿಕೊಳ್ಳುತ್ತಿದ್ದು, ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಈ ಹಿಂದೆ 2013ರಲ್ಲಿ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶದ ಪ್ರತಿಯನ್ನು ಹಂಚಿಕೊಂಡಿದ್ದಾರೆ. ಶಾಲೆಗಳು, ಶಾಲೆಗಳ ಆವರಣಗಳು ಯಾವುದೇ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಗಳಿಂದ ಮುಕ್ತವಾಗಿರಬೇಕು, ಶಾಲೆಗಳು ಶಿಕ್ಷಣೇತರ ಚಟುವಟಿಕೆಗಳಿಂದ ಮುಕ್ತವಾಗಿರಬೇಕು. ಶಾಲೆಗಳ ಆವರಣವು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಮೀಸಲಿರಬೇಕು ಎಂದು ತನ್ನದೇ ಸರ್ಕಾರ ಹೊರಡಿಸಿದ ಆದೇಶ, ತಾವೇ ರೂಪಿಸಿದ ನಿಯಮಗಳ ಬಗ್ಗೆ ಬಿಜೆಪಿಗೆ ಅರಿವಿಲ್ಲವೇ? ಅಥವಾ ಈ ಆದೇಶ ಆರ್ಎಸ್ಎಸ್ ಗೆ ಅನ್ವಯಿಸುವುದಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 2013ರಲ್ಲಿ ಜಗದೀಶ್ ಶೆಟ್ಟರ್ ಸಿಎಂ…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೆರಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ ಎಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಇನ್ನು ಇದೇ ವಿಚಾರವಾಗಿ ಸಂಪುಟ ಸಭೆ ಮುಕ್ತಾಯವಾದ ಬಳಿಕ, ಸರ್ಕಾರಿ ಆವರಣದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಪೂರ್ವನುಮತಿ ಕಡ್ಡಾಯ. ಹೊಸ ನಿಯಮಗಳನ್ನು ಕಾನೂನಾತ್ಮಕವಾಗಿ ಜಾರಿಗೆ ತರಲಾಗುತ್ತದೆ. ಯಾವುದೇ ಸಂಘಟನೆಯನ್ನು ನಾವು ನಿಷೇಧ ಮಾಡಲು ಆಗಲ್ಲ. ಸಾರ್ವಜನಿಕ ಸ್ಥಳಗಳಲ್ಲಿ ಮನಸ್ಸಿಗೆ ಬಂದಂತೆ ಕಾರ್ಯಕ್ರಮ ಮಾಡುವಂತಿಲ್ಲ ಎಂದು ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಸರ್ಕಾರಿ ಆವರಣಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ…

Read More

ಬೆಂಗಳೂರು : ನಟಿ, ಮಾಜಿ ಸಂಸದೆ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ಇದೀಗ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಬೆಂಗಳೂರಿನ 4ನೇ ACJM ಕೋರ್ಟ್ ಗೆ ಒಟ್ಟು 600 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ನಟಿ ರಮ್ಯಾಗೆ ಕಳುಹಿಸಿದ್ದ ಮೆಸೇಜ್, ವಿಡಿಯೋಗಳ ಸಮೇತ ವಿವರಿಸಲಾಗಿದೆ. ರಾಜೇಶ್ ಎಂಬ ಆರೋಪಿ ಐಶ್ವರ್ಯಾ ಎಂಬ ಅಕೌಂಟ್ ಮೂಲಕವಾಗಿ ರಮ್ಯಾಗೆ ಅಶ್ಲೀಲ ವಿಡಿಯೋ ಕಳುಹಿ ವಿಕೃತಿ ಮೆರೆದಿದ್ದ. ಹಾಗಾಗಿ ಸಿಸಿಬಿ ಪೊಲೀಸರು ಬೆಂಗಳೂರಿನ 4ನೇ ACJM ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

Read More

ಬೆಂಗಳೂರು : FAO ಸ್ಥಾಪನೆ ದಿನವನ್ನು ವಿಶ್ವ ಆಹಾರ ದಿನಾಚರಣೆ ಮಾಡುತ್ತೇವೆ. ಕಾಳಸಂತೆಯಲ್ಲಿ ಅಕ್ಕಿ ಮಾರಾಟ ಮಾಡಿದರೆ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ವಿಧಾನಸೌಧದಲ್ಲಿನ ಬ್ಯಾಂಕ್ವೆಟ್ ಹಾಲಿನಲ್ಲಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಗಾಳಿ, ನೀರು, ಮಣ್ಣು ಸೇವಿಸಿ ಬದುಕೋಕೆ ಆಗುತ್ತಾ? ಮನುಷ್ಯ ಬದುಕಲು ಆಹಾರ ಸೇವನೆ ಮುಖ್ಯ. ಕಾರ್ಪೊರೇಟ್ ಕಂಪನಿಗಳಿಂದ ಸಣ್ಣ ರೈತರಿಗೆ ಸಮಸ್ಯೆ ಆಗುತ್ತದೆ ಪ್ರಸಕ್ತ ದಿನಗಳಲ್ಲಿ ರೈತರ ರಕ್ಷಣೆ ಕೂಡ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇನ್ನೊಬ್ಬರ ಮನೆ ಮುಂದೆ ಆಹಾರಕ್ಕೆ ಕೈಚಾಚಬಾರದು ಎಂದು ಉಚಿತ ಅಕ್ಕಿ ವಿತರಿಸಲಾಗುತ್ತಿದೆ. ನಾವೆಲ್ಲ ಮುದ್ದೆ ತಿನ್ನುತ್ತಿದ್ವಿ. ನೆಂಟರು ಬಂದಾಗ ಮಾತ್ರ ಅನ್ನ ತಿಂತಾ ಇದ್ದೆವು. ಉತ್ತರ ಕರ್ನಾಟಕ ಭಾಗದಲ್ಲಿ ಜೋಳದ ರೊಟ್ಟಿ ಮತ್ತು ಚಪಾತಿ ತಿನ್ನುತ್ತಿದ್ದರು. ನಮ್ಮಜ್ಜಿ ಹೊಟ್ಟೆ ತುಂಬಾ ಹಿಟ್ಟು, ಬಾಯಿ ತುಂಬಾ ಅನ್ನ ತಿನ್ನುತ್ತಿದ್ದರು. ನಮ್ಮ ಅಮ್ಮನ ಬಳಿ ಬಂದು ತುತ್ತು…

Read More

ಬೆಂಗಳೂರು : ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗಳಿಗೆ ನಿಷೇಧ ಹೆರಬೇಕು ಎಂದು ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೆ, ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಸರ್ಕಾರ ಸ್ಥಳಗಳಲ್ಲಿ ಖಾಸಗಿ ಕಾರ್ಯಕ್ರಮಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಕಡ್ಡಾಯ ಎಂದು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಯಿತು. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ಸರ್ಕಾರಿ ಆವರಣಗಳಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ ಪೂರ್ವಾನುಮತಿ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿತು. ಪರೋಕ್ಷವಾಗಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಸರ್ಕಾರ ನಿರ್ಬಂಧ ವಿಧಿಸಿದೆ. ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳಿಗೆ ಪೂರ್ವಾಮತಿ ಕಡ್ಡಾಯ, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ನಡೆಸಲು ಅನುಮತಿ ಕಡ್ಡಾಯ ಎಂದು ಆರ್ಎಸ್ಎಸ್ ಹೆಸರು ಉಲ್ಲೇಖ ಮಾಡದೆ ರಾಜ್ಯ ಸರ್ಕಾರ ಇದೀಗ ಆರ್ ಎಸ್ ಎಸ್…

Read More