Author: kannadanewsnow05

ಬೆಳಗಾವಿ : ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಬಳಿ ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ವೆಂಕನಗೌಡ ಪಾಟೀಲ್ (50) ಪ್ರಮೋದ್ ಕುಮಾರ್ (18) ಎನ್ನುವವರು ಮೃತಪಟ್ಟಿದ್ದಾರೆ. ಮತ್ತೆ ಇಬ್ಬರ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ತಾಲೂಕು ಅಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ಠಾಣೆಯಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ.

Read More

ಕಲಬುರ್ಗಿ : ಆಫ್ಜಲ್ಪುರ ತಾಲೂಕಿನ ಅಕ್ರಮ ಮರಳುಗಾರಿಕೆ ಅಡ್ಡ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 7.50 ಲಕ್ಷ ಮರಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಕಲಬುರ್ಗಿ ಜಿಲ್ಲೆಯ ಆಫ್ಜಲ್ಪುರ ತಾಲೂಕಿನ ಪೊಲೀಸರ ಕಾರ್ಯಾಚರಣೆ ನಡೆಸಿದ್ದು ದೇಸಾಯಿ ಕಲ್ಲೂರ್, ಗುಡ್ಡೇವಾಡಿ, ಘತ್ತರಗ ಗ್ರಾಮದ ಅಕ್ರಮ ಮರಳು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. https://kannadanewsnow.com/kannada/ram-mandir-will-not-fill-the-stomach-of-the-poor-it-will-fill-with-5-kg-of-rice-given-by-siddaramaiah-sr-srinivas/ ಕಲಬುರ್ಗಿ ಜಿಲ್ಲೆಯ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 380 ಲೋಡ್ ನಷ್ಟು ಅಕ್ರಮ ಮರಳುವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಭೀಮಾ ನದಿಯಿಂದ ಅಕ್ರಮವಾಗಿ ಬರಲು ತಂದು ಸಂಗ್ರಹಿಸಿದ್ದರು ಎನ್ನಲಾಗಿದೆ.ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದಾರೆ. ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-two-separate-cases-registered-against-two-high-court-judges-for-threat-call/

Read More

ತುಮಕೂರು : ಕಳೆದ ಎರಡು ದಿನಗಳ ಹಿಂದೆ ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲದೆ ಹೋದಲ್ಲಿ ಸಿಎಂ ಸಿದ್ದರಾಮಯ್ಯ ನೈತಿಕವಾಗಿ ರಾಜೀನಾಮೆ ನೀಡಬೇಕು ಎಂಬ ಶಾಸಕ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಸಂಚಲನ ಮೂಡಿಸಿತ್ತು.ಇದೀಗ ತುಮಕೂರಿನ ಗುಬ್ಬಿಯಲ್ಲಿ ಕಾಂಗ್ರೆಸ್ ಶಾಸಕ ಎಸ್ ಆರ್ ಶ್ರೀನಿವಾಸ್ ರಾಮ ಮಂದಿರ ಕಟ್ಟುವುದರಿಂದ ಬಡವನ ಹೊಟ್ಟೆ ತುಂಬಲ್ಲ ಆದರೆ ಸಿದ್ದರಾಮಯ್ಯ ಕೊಟ್ಟ 5 ಕೆಜಿಯಿಂದ ಬಡವನ ಹೊಟ್ಟೆ ತುಂಬುತ್ತೆ ಎಂದು ತಿಳಿಸಿದರು. https://kannadanewsnow.com/kannada/breaking-two-separate-cases-registered-against-two-high-court-judges-for-threat-call/ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನಲ್ಲಿ ಮಾತನಾಡಿದ ಅವರು, ಶ್ರೀರಾಮ ಮಂದಿರದಿಂದ ಬಡವನ ಹೊಟ್ಟೆ ತುಂಬಲ್ಲ.ಈ ಚುನಾವಣೆಯಲ್ಲಿ ಬಿಜೆಪಿಯವರು ಶ್ರೀರಾಮನನ್ನು ತೋರಿಸುತ್ತಿದ್ದಾರೆ. ನಾವು ರಾಮನ ಭಕ್ತರೇ ಹನುಮನ ರೀತಿ ಎದೆ ಬಗಿದು ತೋರಿಸುತ್ತಿಲ್ಲ. ಅಲ್ಲಿ ರಾಮಮಂದಿರ ನಿರ್ಮಿಸಿದರೆ ಇಲ್ಲಿರುವ ಬಡವನ ಹೊಟ್ಟೆ ತುಂಬಲ್ಲ ಎಂದು ಅವರು ತಿಳಿಸಿದರು. https://kannadanewsnow.com/kannada/lok-sabha-elections-2024-how-many-cases-have-been-registered-so-far-here-are-the-details/ ಸಿದ್ದರಾಮಯ್ಯ ಕೊಟ್ಟ 5 ಕೆಜಿ ಅಕ್ಕಿಯಿಂದ ಬಡವನ ಹೊಟ್ಟೆ ತುಂಬುತ್ತೆ. ಸಿದ್ದರಾಮಯ್ಯ ಬಡವರ ಪರ ಹಿಂದುಳಿದವರ ಪರ ಕೆಲಸ ಮಾಡುತ್ತಿದ್ದಾರೆ. ಶಾಸಕ ಎಸ್…

Read More

ಬೆಂಗಳೂರು: ಸೈಬ‌ರ್ ಕಳ್ಳರು ಮುಂಬೈ ಪೊಲೀಸರ ಸೋಗಿನಲ್ಲಿ ಹೈಕೋರ್ಟ್ ಇಬ್ಬರು ನ್ಯಾಯಮೂರ್ತಿಗಳಿಗೆ ಕರೆ ಮಾಡಿ ಬೆದರಿಕೆ ಹಾಕಿರುವ ಆರೋಪದಡಿ ಇಲ್ಲಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿರುವುದು ವರದಿಯಾಗಿದೆ.ಭದ್ರತಾ ಅಧಿಕಾರಿಗೆ ದೂರು ನೀಡಲು ನ್ಯಾಯಮೂರ್ತಿಗಳು ನಿರ್ದೇಶನ ನೀಡಿದ್ದಾರೆ. ಸದ್ಯ ಪ್ರತ್ಯೇಕ ಎರಡು ಪ್ರಕರಣಗಳ ಆಧಾರದಲ್ಲಿ ತನಿಖೆ ಆರಂಭಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. https://kannadanewsnow.com/kannada/are-you-worried-about-debt-do-this-experiment-and-lakhs-and-crores-of-rupees-are-guaranteed-to-be-paid/ ನ್ಯಾಯಮೂರ್ತಿಗಳ ನಿರ್ದೇಶನದ ಮೇರೆಗೆ ಹೈಕೋರ್ಟ್‌ ಭದ್ರತಾ ಅಧಿಕಾರಿಗಳಾದ ಇನ್‌ಸ್ಪೆಕ್ಟರ್ ಜಿ.ಶೋಭಾ ಮತ್ತು ಸಬ್‌ಇನ್‌ಸ್ಪೆಕ್ಟರ್ ಎ.ಆರ್.ರಘುನಾಯ್ಕ ನೀಡಿದ ದೂರಿನನ್ವಯ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಿಸಿಕೊಂಡಿರುವ ವಿಧಾನಸೌಧ ಠಾಣಾ ಪೊಲೀಸರು ತನಿಖೆ ಕೈಗೊಂಡಿರುವುದಾಗಿ ತಿಳಿಸಿದ್ದಾರೆ. ಮಾ.15ರಂದು ಹೈಕೋರ್ಟ್‌ ಇಬ್ಬರು ನ್ಯಾಯಮೂರ್ತಿಗಳಿಗೆ ಕರೆ ಮಾಡಿರುವ ಅಪರಿಚಿತ ಇಬ್ಬರು ಆರೋಪಿಗಳು, ಡಿ.ಒ.ಪಿ.ಟಿ ಇಲಾಖೆಯಿಂದ ಕರೆ ಮಾಡುತ್ತಿದ್ದೇನೆ. ತಾವು ಒಂದು ಸಿಮ್ ಕಾರ್ಡ್ ಹೊಂದಿದ್ದೀರಿ. ಆ ಸಿಮ್ ಕಾರ್ಡ್‌ನಿಂದ ಕಾನೂನು ಬಾಹಿರವಾಗಿ ಜಾಹೀರಾತು ಹಾಗೂ ಆಕ್ಷೇಪಾರ್ಹ ಮೆಸೇಜ್ ಹಾಕುತ್ತಿದ್ದೀರಿ. ಇದರಿಂದ ನಿಮ್ಮ ಮೇಲೆ ಮುಂಬೈನ ಅಂದೇರಿ ಈಸ್ಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

Read More

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಇತ್ತೀಚಿಗೆ ಬಿ ಎಸ್ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಇದೀಗ ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರರನ್ನು ಸೋಲಿಸಿ ಸೋಲಿಸುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರರ ವಿರುದ್ಧ ಕೆ.ಎಸ್ ಈಶ್ವರಪ್ಪ ಸೆಡ್ಡು ಹೊಡೆದು ನಿಂತಿದ್ದಾರೆ. https://kannadanewsnow.com/kannada/raghavendra-will-lose-the-elections-and-go-home-vijayendra-will-resign-eshwarappa/ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ ಎಸ್ ಯಡಿಯೂರಪ್ಪ ದುಡ್ಡಿನ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಶಿಕಾರಿಪುರ ಕ್ಷೇತ್ರದ ಜನರನ್ನು ಕುರಿಗಳ ರೀತಿ ಅಂದುಕೊಂಡಿದ್ದಾರೆ. ರಾಘವೇಂದ್ರ ಸೋಲಿಸುವ ಮೂಲಕ ಅವರಿಗೆ ಬುದ್ಧಿ ಕಲಿಸಬೇಕು. ಸೋಲಿನ ರುಚಿ ಏನು ಅಂತ ಯಡಿಯೂರಪ್ಪಗೆ ತೋರಿಸಬೇಕು. ಅಪ್ಪ ಮಕ್ಕಳು ಬೇಡವೆಂದು ಶಿಕಾರಿಪುರದ ಜನ ತೀರ್ಮಾನಿಸಿದ್ದಾರೆ.ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ. ಪಕ್ಷ ಉಳಿಯಬೇಕು ಹಿಂದುತ್ವ ಉಳಿಯಬೇಕು ಅದಕ್ಕಾಗಿ ಸ್ಪರ್ಧಿಸುತ್ತಿದ್ದೇನೆ. ನರೇಂದ್ರ ಮೋದಿ ಕಾಂಗ್ರೆಸ್ ಕುಟುಂಬದ ಕೈಯಲ್ಲಿ ಇದೆ ಅಂತಾರೆ ರಾಜ್ಯದ ಬಿಜೆಪಿಯಲ್ಲಿ ಏನು ನಡೆಯುತ್ತಿದೆ? ಎಂದು…

Read More

ಶಿವಮೊಗ್ಗ : ಲೋಕಸಭೆ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ತಮ್ಮ ಮಗನಿಗೆ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಬಂಡಾಯ ವೆದ್ದಿರುವ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಇದೀಗ ಮತ್ತೆ ಬಿಎಸ್ ವೈ ಹಾಗೂ ಅವರ ಪುತ್ರರವರು ಕಿಡಿ ಕಾರಿದ್ದಾರೆ. https://kannadanewsnow.com/kannada/delhi-holi-celebrated-by-throwing-colours-at-each-other-after-girls-misbehave-with-girls-in-metro/ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದು ನನ್ನ ಹೋರಾಟ ಬಿಜೆಪಿ ವಿರುದ್ಧವಲ್ಲ ಕುಟುಂಬ ರಾಜಕಾರಣದ ವಿರುದ್ಧ. ಶಿವಮೊಗ್ಗ ಕ್ಷೇತ್ರದಲ್ಲಿ ನನಗೆ ಪಕ್ಷಾತೀತವಾಗಿ ಬೆಂಬಲವನ್ನು ನೀಡುತ್ತಿದ್ದಾರೆ.ನಾನು ಬಿಜೆಪಿಯನ್ನು ಬಿಟ್ಟಿಲ್ಲ ಇನ್ನು ಬಿಜೆಪಿಯಲ್ಲಿ ಇದೀನಿ ಎಂದು ತಿಳಿಸಿದರು. https://kannadanewsnow.com/kannada/rr-vs-lsg-match-stopped-for-a-moment-after-just-two-balls-know-why/ ಕಾಂಗ್ರೆಸ್ ನಲ್ಲಿ ಇದ್ದವರ ಮನೆಗೆ ಹೋಗಿ ಮತ್ತೆ ಬಿಜೆಪಿಗೆ ಕರೆತರುತ್ತಾರೆ. ಮಾಜಿ ಸಿಎಂ ಶೆಟ್ಟರನ್ನು ಕರೆದುಕೊಂಡು ಬಂದು ಟಿಕೆಟ್ ನೀಡುತ್ತಾರೆ.ಕೇಂದ್ರದ ನಾಯಕರ ಮೇಲೆ ಪ್ರಭಾವ ಬೀರಿ ಬಿಎಸ್ ಯಡಿಯೂರಪ್ಪ ಟಿಕೆಟ್ ಹಂಚಿದ್ದಾರೆ.ಇದರ ಪರಿಣಾಮ ಏನೆಂದು ಲೋಕಸಭಾ ಚುನಾವಣೆ ಬಳಿಕ ಗೊತ್ತಾಗಲಿದೆ ಎಂದು ಎಚ್ಚರಿಕೆ ನೀಡಿದರು. https://kannadanewsnow.com/kannada/%e0%b2%90%e0%b2%9f%e0%b2%bf-%e0%b2%87%e0%b2%a1%e0%b2%bf-%e0%b2%b8%e0%b2%bf%e0%b2%ac%e0%b2%bf%e0%b2%90-%e0%b2%a6%e0%b2%be%e0%b2%b3%e0%b2%bf%e0%b2%97%e0%b3%86-%e0%b2%b9%e0%b3%86%e0%b2%a6%e0%b2%b0/ ಲೋಕಸಭಾ ಚುನಾವಣೆ ಬಳಿಕ ಬಿ ವೈ ವಿಜಯೇಂದ್ರ ರಾಜೀನಾಮೆ ನೀಡುತ್ತಾರೆ. ಶಿವಮೊಗ್ಗ…

Read More

ನವದೆಹಲಿ : ಮೆಟ್ರೋಗಳಲ್ಲಿ ಇತ್ತೀಚಿಗೆ ರೀಲ್ಸ್ ಮಾಡುವುದು ಒಂದು ಶೋಕಿ ಆಗಿಬಿಟ್ಟಿದೆ. ಅಲ್ಲದೆ ಇಂತಹ ಪ್ರಕರಣಗಳು ಹೆಚ್ಚುತ್ತಿವೆ. ಇದೀಗ ದೆಹಲಿ ಮೆಟ್ರೋ ರೈಲಿನಲ್ಲಿ ಯುವತಿಯರಿಬ್ಬರು ಅಸಭ್ಯವಾಗಿ ವರ್ತಿಸಿದ್ದು ಹೋಳಿ ಹಬ್ಬ ಹಿನ್ನೆಲೆಯಲ್ಲಿ ಪರಸ್ಪರ ಬಣ್ಣ ಎರಚಿಕೊಂಡು ಅಸಭ್ಯವಾಗಿ ವರ್ತಿಸಿ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡಿರುವ ವಿಡಿಯೋ ಇದೀಗ ವೈರಲ್ ಆಗಿದೆ. https://kannadanewsnow.com/kannada/rr-vs-lsg-match-stopped-for-a-moment-after-just-two-balls-know-why/ ಇಬ್ಬರು ಹುಡುಗಿಯರು ನೆಲದ ಮೇಲೆ ಕುಳಿತಿರುವುದು ಮತ್ತು ನೆಲದ ಮೇಲೆ ಬಣ್ಣ ಹರಡಿರುವುದನ್ನು ನೀವು ವೀಡಿಯೊದಲ್ಲಿ ನೋಡಬಹುದು. ಇದರ ನಂತರ, ಅಂಗ್ ಲಗಾ ದೇ ರೆ… ಸಾಂಗ್​​ ಪ್ಲೇ ಆದ ತಕ್ಷಣ, ಇಬ್ಬರೂ ಅಸಭ್ಯ ರೀತಿಯಲ್ಲಿ ಪರಸ್ಪರ ಬಣ್ಣಗಳನ್ನು ಹಚ್ಚಲು ಪ್ರಾರಂಭಿಸುತ್ತಾರೆ. https://kannadanewsnow.com/kannada/%e0%b2%90%e0%b2%9f%e0%b2%bf-%e0%b2%87%e0%b2%a1%e0%b2%bf-%e0%b2%b8%e0%b2%bf%e0%b2%ac%e0%b2%bf%e0%b2%90-%e0%b2%a6%e0%b2%be%e0%b2%b3%e0%b2%bf%e0%b2%97%e0%b3%86-%e0%b2%b9%e0%b3%86%e0%b2%a6%e0%b2%b0/ ಇದೀಗ ಈ ವಿಡಿಯೋವನ್ನು ಪ್ರತಿಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿದ್ದು ಇದಕ್ಕೆ ಹಲವಾರು ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಕಾನೂನಿನ ಅಗತ್ಯವಿಲ್ಲ. 15 ಸೆಕೆಂಡ್‌ಗೆ 1 ಲಕ್ಷ ರೂಪಾಯಿ ಶುಲ್ಕ ವಿಧಿಸಿದರೆ ಸಾಕು ಎಂದು ಒಬ್ಬ ಬಳಕೆದಾರರು ಬರೆದಿದ್ದರೆ, ಅಂತಹವರನ್ನು ಮೆಟ್ರೋದಲ್ಲಿ ನಿಷೇಧಿಸಬೇಕು ಎಂದು…

Read More

ಮುಂಬೈ : ವಿರೋಧ ಪಕ್ಷದ ನಾಯಕರು ಚುನಾವಣಾ ಆಯೋಗ, ಐಟಿ, ಸಿಬಿಐ, ಇಡಿ ದಾಳಿಗೆ ಹೆದರಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಹೊರತು, ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕೆ ಹೋಗುತ್ತಿಲ್ಲ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ವಾಗ್ದಾಳಿ ನಡೆಸಿದ್ದಾರೆ. https://kannadanewsnow.com/kannada/our-first-priority-is-to-protect-the-interests-of-the-people-of-the-state-minister-dinesh-gundu-rao/ ಚುನಾವಣಾ ಪ್ರಚಾರ ಸಿದ್ಧತೆ ನಡೆಸುತ್ತಿದ್ದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರವಿಂದ್‌ ಕೇಜ್ರಿವಾಲ್‌ ಬಂಧನ ಪ್ರಕರಣದ ಕುರಿತು ಮಾತನಾಡುತ್ತಾ, ಬಿಜೆಪಿಯಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಬಿಜೆಪಿಗೆ ಹೋದವರು ಪ್ರೀತಿಯಿಂದಾಗಿ, ತತ್ವ ಸಿದ್ಧಾಂತಗಳನ್ನು ಇಷ್ಟಪಡುವ ಕಾರಣಕ್ಕಾಗಲಿ ಹೋಗುತ್ತಿಲ್ಲ. ಭಾರತೀಯ ಚುನಾವಣಾ ಆಯೋಗ, ಐಟಿ, ಇಡಿ, ಸಿಬಿಐ ತನಿಖಾ ಸಂಸ್ಥೆಗಳು ಎಲ್ಲವೂ ಅವರ ಬಳಿಯೇ ಇದೆ. ಇವುಗಳನ್ನು ಬಳಸಿ ಬಿಜೆಪಿ ದಾಳಿ ಮಾಡಿಸುತ್ತಾರೆ ಅಂತಾ ಹೆದರಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಕಿಡಿ ಕಾರಿದರು. https://kannadanewsnow.com/kannada/ks-eshwarappa-will-be-persuaded-not-to-contest-independently-state-bjp-in-charge-agarwal/ ಇದೇ ಕಾರಣಕ್ಕಾಗಿ ಕಳೆದ ತಿಂಗಳು ಅಶೋಕ್ ಶಂಕರರಾವ್ ಚವ್ಹಾಣ್‌ ಅವರೂ ಬಿಜೆಪಿ ಸೇರಿದರು. ಬಿಜೆಪಿಯವರು ಎಲ್ಲಾ ಪಕ್ಷಗಳನ್ನು ಹೀಗೆ ಒಡೆಯುತ್ತಿದ್ದಾರೆ. ಇದು ರಾಜಕೀಯವಲ್ಲ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಾಗ್ದಾಳಿ…

Read More

ಮೈಸೂರು: ಈಶ್ವರಪ್ಪ ಬಿಜೆಪಿ ಕಟ್ಟಾಳು. ಚು‌ನಾವಣೆಗೆ ಸ್ಪರ್ಧಿಸದಂತೆ ಅವರ ಮನವೊಲಿಸುವ ಪ್ರಯತ್ನ ಯಶಸ್ವಿ ಆಗಲಿದೆ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.‌ ನಗರದಲ್ಲಿ ಭಾನುವಾರ ಪತ್ರಕರ್ತರ ‌ಜೊತೆ ಅವರು ಮಾತನಾಡಿದರು. ಬಿಜೆಪಿ ದೊಡ್ಡ ಪಕ್ಷ. ಏಕಕಾಲಕ್ಕೆ ಎಲ್ಲರಿಗೂ ಅವಕಾಶ ಸಿಗದು. ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆದವರು ನಿಷ್ಠರಾಗಿಯೇ ಉಳಿಯುತ್ತಾರೆ ಎಂದರು. ರಾಜ್ಯದಲ್ಲಿ ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಅನುಕೂಲ ಆಗಿದೆ.‌ ಮುಂಚೆ ಲಿಂಗಾಯತ, ಒಕ್ಕಲಿಗದಂತಹ ಪ್ರಬಲ ಸಮುದಾಯಗಳು ಒಂದೊಂದು ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದವು. ಈಗ ಎಲ್ಲ ಜಾತಿಗಳೂ ಒಂದೇ ವೇದಿಕೆಯಲ್ಲಿ ಒಗ್ಗೂಡಿವೆ. ರಾಜ್ಯದ ಒಂದು ಕ್ಷೇತ್ರದಲ್ಲೂ ಈ ಬಾರಿ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂದರು. ಜೆಡಿಎಸ್ ಜೊತೆಗೂಡಿಯೇ ಪ್ರಚಾರ ಮಾಡುತ್ತೇವೆ. ಸೀಟು ಹಂಚಿಕೆ ಅಂತಿಮ ಆಗದ ಕಾರಣ ಅವರು ಹಿಂದಿನ ಪ್ರಚಾರ ಸಭೆಗಳಿಗೆ ಬಂದಿರಲಿಲ್ಲ. ಬಿಜೆಪಿ ತಾರಾ ಪ್ರಚಾರಕರ ಪಟ್ಟಿಯಲ್ಲಿ ಎಚ್.ಡಿ. ದೇವೇಗೌಡ, ಕುಮಾರಸ್ವಾಮಿ ಸಹ ಇದ್ದಾರೆ’ ಎಂದರು.‌

Read More

ಮೈಸೂರು : ಲೋಕಸಭಾ ಚುನಾವಣೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಸಭೆ ನಡೆಸಿದರು.ಈ ವೇಳೆ ಮೈಸೂರು ಹಾಗೂ ಚಾಮರಾಜ ಕ್ಷೇತ್ರದಲ್ಲಿ ಗೆಲ್ಲುವ ವಾತಾವರಣವಿದೆ ಎಂದು ಸಭೆಯ ಬಳಿಕ ತಿಳಿಸಿದರು. https://kannadanewsnow.com/kannada/nikhil-kumaraswamy-seeks-a-days-time/ ಮೈಸೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕರ ಹಾಗೂ ಮುಖಂಡರ ಜೊತೆ ಹೇಗೆ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಇರುವುದರಿಂದ ಸಭೆ ಮಾಡಿದ್ದೇವೆ.ಮೈಸೂರು ಚಾಮರಾಜನಗರ ಕ್ಷೇತ್ರದಲ್ಲಿ ಗೆಲ್ಲುವ ವಾತಾವರಣ ಇದೆ ಒಂದು ವಿಧಿಯ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು. https://kannadanewsnow.com/kannada/candidate-for-mandya-lok-sabha-seat-to-be-finalised-by-tomorrow-evening-hdk/ ಮೈಸೂರು ಚಾಮರಾಜನಗರ ಕ್ಷೇತ್ರದ ಸಂಬಂಧ ಮುಖಂಡರ ಹಾಗೂ ನಾಯಕರ ಜೊತೆ ಸಭೆ ನಡೆಸಿದರು. ತುಂಬಾ ಗಂಭೀರವಾಗಿ ಈ ಚುನಾವಣೆಯನ್ನು ಪರಿಗಣನೆ ಮಾಡಬೇಕು ಎಂದು ಎಲ್ಲರಿಗೂ ಸಭೆಯಲ್ಲಿ ಸೂಚನೆ ನೀಡಿದ್ದೇನೆ. ಯದುವೀರ್ ಒಡೆಯರ್ ಅವರು ನಮ್ಮ ಟಾರ್ಗೆಟ್ ಅಲ್ಲ. ನಮಗೆ ಏನಿದ್ದರೂ ಬಿಜೆಪಿ ಟಾರ್ಗೆಟ್ ಹಾಗಾಗಿ ಯಾವುದೇ ಕಾಂಗ್ರೆಸ್ ನಾಯಕರು ಮುಖಂಡರು ಮಾಧ್ಯಮಗಳ…

Read More