Author: kannadanewsnow05

ಮಾಸ್ಕೊ : ಮಾಸ್ಕೋ ಉಪನಗರ ಸಂಗೀತ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಬಂದೂಕುಧಾರಿಗಳು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 93 ಕ್ಕೆ ಏರಿದ್ದು ಅಲ್ಲದೆ ಘಟನೆಯಲ್ಲಿ ಗಾಯಗೊಂಡವರ ಸಂಖ್ಯೆ 145ಕ್ಕೆ ಏರಿದೆ ಎಂದು ಬಲಮೂಲಗಳಿಂದ ತಿಳಿದುಬಂದಿದೆ. ಮಾಸ್ಕೋದ ಕ್ರೋಕಸ್ ಸಿಟಿ ಹಾಲ್ ಸಂಗೀತ ಕಚೇರಿ ಸ್ಥಳಕ್ಕೆ ನುಗ್ಗಿದ ಶಸ್ತ್ರಸಜ್ಜಿತ ವ್ಯಕ್ತಿಗಳ ಗುಂಪು ಗುಂಡು ಹಾರಿಸಿ ಸ್ಫೋಟಕಗಳನ್ನು ಸ್ಫೋಟಿಸಿದ ನಂತರ ಈ ಘಟನೆ ನಡೆದಿದೆ. ಇದೀಗ ಘಟನೆಗೆ ಸಂಬಂಧಿಸಿದಂತೆ 11 ಉಗ್ರರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದಾದ ಕೆಲವೇ ಗಂಟೆಗಳಲ್ಲಿ ಇಸ್ಲಾಮಿಕ್ ಸ್ಟೇಟ್ ಈ ದಾಳಿಯ ಹೊಣೆ ಹೊತ್ತುಕೊಂಡಿತ್ತು. ಆದಾಗ್ಯೂ, ಈ ಹೇಳಿಕೆಯನ್ನು ಬೆಂಬಲಿಸಲು ಅದು ಯಾವುದೇ ಪುರಾವೆಗಳನ್ನು ಒದಗಿಸಲಿಲ್ಲ. ಮಾಸ್ಕೋದ ಹೊರವಲಯದಲ್ಲಿರುವ ಕ್ರಾಸ್ನೊಗೊರ್ಸ್ಕ್ನಲ್ಲಿ “ಕ್ರಿಶ್ಚಿಯನ್ನರ” ದೊಡ್ಡ ಸಭೆಯ ಮೇಲೆ ದಾಳಿ ನಡೆಸಿರುವುದಾಗಿ ಭಯೋತ್ಪಾದಕ ಗುಂಪು ಹೇಳಿಕೆಯಲ್ಲಿ ಹೇಳಿಕೊಂಡಿದೆ. ಮಾಸ್ಕೋ ಕನ್ಸರ್ಟ್ ಹಾಲ್ ಮೇಲೆ ಮಾರಣಾಂತಿಕ ದಾಳಿ ಅಂತರ್ಜಾಲದಲ್ಲಿ ಹರಿದಾಡುತ್ತಿರುವ ದೃಶ್ಯಾವಳಿಗಳು ವ್ಯಕ್ತಿಗಳು ಸಂಗೀತ ಕಚೇರಿ ಸಭಾಂಗಣವನ್ನು ಖಾಲಿ ಮಾಡಿ ಮೆಟ್ಟಿಲುಗಳ ಮೂಲಕ…

Read More

ತುಮಕೂರು : ತುಮಕೂರು ತಾಲೂಕಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂವರ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ ಮೂವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದವರು ಎಂದು ತಿಳಿದು ಬಂದಿದ್ದು, ಇಸಾಕ್(56), ಸಾಹುಲ್(45) ಹಾಗೂ ಇಮ್ತಿಯಾಜ್(34) ಮೃತರು ಎಂದು ಹೇಳಲಾಗುತ್ತಿದೆ. https://kannadanewsnow.com/kannada/gubbi-mla-srinivass-statement-on-cms-change-what-did-cm-siddaramaiah-say/ ಮೃತರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಿಂದ ತುಮಕೂರಿಗೆ ಬಂದಿದ್ದ ಮೂವರು, ಜಮೀನಿನಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಅಂತ ಆರೋಪಿಗಳು ನಂಬಿಸಿದ್ದರು.ಕಡಿಮೆ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ಆರೋಪಿಗಳು ಕರೆಸಿಕೊಂಡಿದ್ದರು ಎನ್ನಲಾಗಿದೆ. ಚಿನ್ನ ಖರೀದಿಗೆ ತಂದಿದ್ದ ಹಣ ದೋಚಲು ಆರೋಪಿಗಳು ಮೂವರನ್ನು ಕೊಂದಿದ್ದಾರೆ. ನಕಲಿ ಚಿನ್ನ ತೋರಿಸಿ ಹಣ ದೋಚಲು ಆರೋಪಿಗಳು ಇದೀಗ ಮೂವರನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಹಣ ದೋಚುವ ವೇಳೆ ಮೂವರ ಮೇಲೆ ಆರೋಪಿಗಳು ಹಲ್ಲೆ ಮಾಡಿ ಕೈಕಾಲು ಕಟ್ಟಿ ಕಾರಿನಲ್ಲಿ ಹಾಕಿದ್ದಾರೆ.ನಂತರ ಬೆಂಕಿ ಹಚ್ಚಿದ್ದಾರೆ. ಕಾರಿನ ಡಿಕ್ಕಿಯಲ್ಲಿ ಇಬ್ಬರ ಮೃತ ದೇಹ ಮಧ್ಯ ಭಾಗದಲ್ಲಿ ಒಬ್ಬನ ಮೃತ ದೇಹ…

Read More

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಶ್ರೀನಿವಾಸ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಿಎಂ ಬದಲಾವಣೆ ಬಗ್ಗೆ ಗುಬ್ಬಿ ಶಾಸಕ ಶ್ರೀನಿವಾಸ್ ಹೇಳಿಕೆ ವಿಚಾರವಾಗಿ ಶ್ರೀನಿವಾಸ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ.ಆ ಬಗ್ಗೆ ತಿಳಿದುಕೊಂಡು ನಾನು ಮಾತನಾಡುತ್ತೇನೆ ಎಂದು ಅವರು ತಿಳಿಸಿದರು. https://kannadanewsnow.com/kannada/102-people-including-27-pakistanis-30-iranians-rescued-in-anti-piracy-operations-indian-navy/ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ ಹೈಕಮಾಂಡ್ಗೆ ನಮ್ಮ ಅಭಿಪ್ರಾಯವನ್ನು ಹೇಳಿದ್ದೇವೆ. ಹೆಚ್ಚು ಕಡಿಮೆ ಬಳ್ಳಾರಿ ಕ್ಷೇತ್ರ ಕ್ಲಿಯರ್ ಆಗಿದೆ. ಬಾಕಿ ಇರುವ ಮೂರೂ ಕ್ಷೇತ್ರದ ಬಗ್ಗೆ ನಮ್ಮ ಅಭಿಪ್ರಾಯವನ್ನು ತಿಳಿಸಿದ್ದೇವೆಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. https://kannadanewsnow.com/kannada/wearing-sindoor-is-a-religious-duty-of-a-hindu-woman-court/ ಶಾಸಕ ಶ್ರೀನಿವಾಸ್ ಹೇಳಿದ್ದೇನು? ರಾಜ್ಯದಲ್ಲಿ ಇವತ್ತು ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸಲಿಲ್ಲ ಅಂದರೆ ನೈತಿಕ…

Read More

ನವದೆಹಲಿ : ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಭಾರತ್ ರಾಷ್ಟ್ರೀಯ ಸಮಿತಿ (ಬಿಆರ್‌ಎಸ್) ಶಾಸಕಿ ಕೆ ಕವಿತಾ ಅವರನ್ನು ಮಾರ್ಚ್ 26 ರವರೆಗೆ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ. ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ಇಡಿ ರಿಮಾಂಡ್ ಅನ್ನು ಮಾರ್ಚ್ 26 ರವರೆಗೆ ವಿಸ್ತರಿಸಿದೆ.ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಕವಿತಾ ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದ ಒಂದು ದಿನದ ನಂತರ ಇದೀಗ ಮೂರು ದಿನಗಳ ಕಾಲ ಇಡಿ ಕಸ್ಟಡಿಗೆ ಒಪ್ಪಿಸಿ ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದೆ.

Read More

ಶಿವಮೊಗ್ಗ : ಲೋಕಸಭಾ ಟಿಕೆಟ್ ಹಂಚಿಕೆ ವಿಚಾರವಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಅವರ ವಾಗ್ದಾಳಿ ಮುಂದುವರೆದಿದ್ದು ಇದೀಗ ಶಿವಮೊಗ್ಗದಲ್ಲಿ ಕೆಎಸ್ ಈಶ್ವರಪ್ಪ ಮಾತನಾಡಿದ್ದು ಶೋಭಾ ಕರಂದ್ಲಾಜೆ ಗೆ ಹಠ ಹಿಡಿದು ಟಿಕೆಟ್ ಕೊಡಿಸಿದ ಯಡಿಯೂರಪ್ಪ ನನ್ನ ಮಗನಿಗೆ ಮೋಸ ಮಾಡಿದರು ಎಂದು ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಉದ್ದೇಶಪೂರ್ವಕವಾಗಿ ಹಿಂದುತ್ವ ಹೋರಾಟಗಾರರ ಕಡೆಗಣನೆ ಮಾಡಲಾಗಿದೆ. ಪಕ್ಷಕ್ಕೆ ಸಂಬಂಧ ಇಲ್ಲದವರನ್ನು ಪದಾಧಿಕಾರಿಗಳನ್ನಾಗಿ ಮಾಡಿದ್ದಾರೆ. ಯಡಿಯೂರಪ್ಪ ಇದುವರೆಗೂ ನನ್ನ ಜೊತೆಗೆ ಮಾತುಕತೆ ನಡೆಸಿಲ್ಲ. ಇದಕ್ಕೂ ಮೊದಲು ನನ್ನ ಮಗನಿಗೆ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ ಶೋಭಾ ಕರಂದ್ಲಾಜೆ ಗೆ ಹಠ ಮಾಡಿ ಬಿಎಸ್ ಯಡಿಯೂರಪ್ಪ ಟಿಕೆಟ್ ಕೊಡಿಸಿದ್ದಾರೆ ಎಂದು ಕಿಡಿ ಕಾರಿದರು. ಟಿಕೆಟ್ ಗಾಗಿ ಶೋಭಾ ಕರಂದ್ಲಾಜೆ ದೆಹಲಿಗೆ ಹೋಗಿದ್ರಾ? ನನಗೆ ಮಗನ ಟಿಕೆಟ್ ವಿಚಾರವಾಗಿ ಬಿಎಸ್ ಯಡಿಯೂರಪ್ಪ ದೆಹಲಿಗೆ ಕರೆದರು.ಆದರೆ ಟಿಕೆಟ್ ನೀಡದೇ BS ಯಡಿಯೂರಪ್ಪ ನನಗೆ ಮೋಸ ಮಾಡಿದ್ದಾರೆ ಎಂದು ಶಿವಮೊಗ್ಗ…

Read More

ಬೆಂಗಳೂರು : ಸದ್ಯ ಕಾಂಗ್ರೆಸ್ ಪರಿಸ್ಥಿತಿ ಹೇಗಾಗಿದೆ ಎಂದರೆ ಒಡೆದ ಮನೆ ಅಂತ ಆಗಿದೆ ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಒಂದು ಗ್ಯಾಂಗ್ ಕಾಂಗ್ರೆಸ್ ನಲ್ಲಿಯೇ ಇದೆ ಎಂದು ವಿಪಕ್ಷ ನಾಯಕ ಆರ್ ಅಶೋಕ ಸ್ಪೋಟಕವಾದ ಹೇಳಿಕೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಬಿಜೆಪಿ ಚುನಾವಣಾ ಸಿದ್ದತಾ ಕಾರ್ಯಗಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವುದು ಕಾಂಗ್ರೆಸ್ ಪಕ್ಷದ ನಾಲಾಯಕ್ ಸರ್ಕಾರ. ಇದು ಜನರಿಗೆ ದ್ರೋಹ ಮಾಡಿದಂಥ ಸರ್ಕಾರ. ಮೇಕೆದಾಟು ವಿಚಾರದಲ್ಲಿ ದ್ವಂದ್ವ ನೀಲು ಪ್ರದರ್ಶಿಸಿದ ಸರ್ಕಾರ ಇಲ್ಲಿದೆ. https://kannadanewsnow.com/kannada/what-is-isis-k-and-what-was-the-reason-for-the-moscow-attack-that-killed-at-least-80-people-heres-the-information/ ಈ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಿಲ್ಲ. ಜನ ಕುಡಿಯುವ ನೀರಿಗೆ ಒದ್ದಾಡುತ್ತಿದ್ದರೂ ಸ್ಪಂದಿಸದ ಸರ್ಕಾರ ಇಲ್ಲಿದೆ. ಈ ಭ್ರಷ್ಟ ಸರ್ಕಾರಕ್ಕೆ ಜನ ಬೆಂಬಲ ನೀಡಲ್ಲ. ಬದಲಿಗೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡುತ್ತಾರೆ ಎಂದರು. ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕ ಕಾಂಗ್ರೆಸ್ ಪಕ್ಷದ ಸ್ಥಿತಿಯ ಬಗ್ಗೆ ಈಗಾಗಲೇ ಹೇಳಿದ್ದಾರೆ. ರಾಜ್ಯದಲ್ಲಿ ಸೂಪರ್ ಸಿಎಂ, ಶಾಡೋ ಸಿಎಂ…

Read More

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ನಂತರ ಇದೀಗ ಬೆಂಗಳೂರು ನಗರದಾದ್ಯಂತ ಪೊಲೀಸರು ಅಲರ್ಟ್ ಆಗಿದ್ದು, ಮತದಾರರ ಮೇಲೆ ರೌಡಿ ಶೀಟರ್ ಗಳ ಪ್ರಭಾವ ಬೀರಬಾರದೆಂದು ಇಂದು ಬೆಳಿಗ್ಗೆ 5:00ಯಿಂದ 7 ಗಂಟೆಯವರೆಗೆ ಬೆಂಗಳೂರಿನ ಪಶ್ಚಿಮ ವಿಭಾಗದ ಪೊಲೀಸ ಅಧಿಕಾರಿಗಳು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. https://kannadanewsnow.com/kannada/big-update-punjab-hooch-tragedy-death-toll-rises-to-21/ ಹೀಗಾಗಿ ಇಂದು ಬೆಂಗಳೂರಿನಲ್ಲಿ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರ ದಾಳಿ ನಡೆಸಲಾಗಿದ್ದು, ಪಶ್ಚಿಮ ವಿಭಾಗದ ಠಾಣಾ ವ್ಯಾಪ್ತಿಯ ರೌಡಿಶೀಟರ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೆ ಕಲಾಸಿಪಾಳ್ಯ, ಕಾಟನ್ ಪೇಟೆ, ಸಿಟಿ ಮಾರ್ಕೆಟ್ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಬರುವಂತಹ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. https://kannadanewsnow.com/kannada/breaking-bjp-finalises-three-seats-for-jds-to-contest-in-mandya-hassan-kolar/ ಬೆಳಗ್ಗೆ 5:00 ಯಿಂದ ಬೆಳಿಗ್ಗೆ 7:00ವರೆಗೆ ಪೊಲೀಸರಿಂದ ಆಗುವವರ ಮನೆಗಳ ತಪಾಸಣೆ ನಡೆಸಿದ್ದಾರೆ.ಸದ್ಯ ರೌಡಿಗಳ ಕೆಲಸ, ಪೂರ್ವಾಪರ,ಫೋನ್ ನಂಬರ್ ಗಳನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಡ್ಕೊಂಡು ಪರಿಶೀಲನೆ ನಡೆಸಿದ್ದಾರೆ.ಕೆಲವರು ವಾರೆಂಟ್ ಜಾರಿಯಾದ್ರೂ ಕೂಡ ಕೋರ್ಟಿಗೆ ಹಾಜರಾಗಿರಲಿಲ್ಲ. https://kannadanewsnow.com/kannada/he-has-broken-the-trust-of-crores-of-indians-anna-hazare-on-kejriwals-arrest/…

Read More

ಬೆಂಗಳೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳ ಸಂಬಂಧಿಸಿ ದಂತೆ ಬಿಜೆಪಿಗೆ ಬಹಳ ಕಗ್ಗಂಟಾಗಿ ಪರಿಣಮಿಸಿತ್ತು ಏಕೆಂದರೆ ಸುಮಲತಾ ಅಂಬರೀಶ್ ಅವರು ಕಳೆದ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು ಈ ಬಾರಿ ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿಯವರು ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬಂದಿದ್ದು ಇದೀಗ ಬಿಜೆಪಿ ಹಾಸನ ಕೋಲಾರ ಮಂಡ್ಯ ಕ್ಷೇತ್ರಗಳು ಜೆಡಿಎಸ್ಗೆ ನೀಡಿದೆ ಎಂದು ತಿಳಿದು ಬಂದಿದೆ. https://kannadanewsnow.com/kannada/he-has-broken-the-trust-of-crores-of-indians-anna-hazare-on-kejriwals-arrest/ ನಿನ್ನೆ ನಡೆದ ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ ಅಗರ್ವಾಲ್ ಹೇಳಿಕೆ ನೀಡಿದ್ದು, ಬಿಜೆಪಿ 25 ಸೀಟ್ಗಳನ್ನು ಆಯ್ಕೆ ಮಾಡಿಕೊಂಡಿದೆ 25 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸಲಿದ್ದು ಉಳಿದ 3 ಕ್ಷೇತ್ರಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ. ಇದೀಗ ಕೋಲಾರ ಹಾಗೂ ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿದೆ ಎಂದು ಬಿಜೆಪಿ ಸಭೆಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ತಿಳಿಸಿದರು. https://kannadanewsnow.com/kannada/how-many-more-days-will-you-lie-to-kannadigas-that-they-have-done-as-promised/ ಈ ಮೂಲಕ ಮಂಡ್ಯದ ಹಾಲಿ ಸಂಸದ ಆಗಿರುವ ಸುಮಲತಾ ಅಂಬರೀಶ್ ಗೆ ಬಿಜೆಪಿ ಬಿಗ್ ಶಾಕ್…

Read More

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಡಿಯುವ ಮುನ್ನ ತನ್ನ ಪ್ರಣಾಳಿಕೆಯಲ್ಲಿರುವಂತಹ ಭರವಸೆಗಳ ಕುರಿತಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ವಿರುದ್ಧ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ. https://kannadanewsnow.com/kannada/new-tax-rules-to-come-into-effect-from-april-1-heres-what-you-need-to-know/ 2013-18ರಲ್ಲಿ ತಾವು ಕೊಟ್ಟ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇನೆ ಎಂದು ಹೇಳಿದ್ದೀರಿ. ಅಸಲಿಗೆ ನಿಮ್ಮ ಪ್ರಣಾಳಿಕೆಯಲ್ಲಿದ್ದ ಘೋಷಣೆಗಳು 165 ಅಲ್ಲ 173. ಅದರಲ್ಲಿ ಐದು ವರ್ಷಗಳಲ್ಲಿ ತಾವು ಈಡೆರಿಸಿದ್ದು ಕೇವಲ 38%, ಅಂದರೆ 67 ಮಾತ್ರ. ಇನ್ನು ಕಳೆದ 10 ತಿಂಗಳುಗಳಲ್ಲಿ ತಮ್ಮ ಸಾಧನೆ ದೊಡ್ಡ ಶೂನ್ಯ. ಗ್ಯಾರೆಂಟಿಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದು ಮಾಡಿ ರಾಜ್ಯವನ್ನ 1 ಲಕ್ಷ ಕೋಟಿ ರೂಪಾಯಿ ಸಾಲದ ಸುಳಿಯಲ್ಲಿ ಸಿಲುಕಿಸಿದ್ದೇ ನಿಮ್ಮ…

Read More

ಬೆಂಗಳೂರು : ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿದ್ದು ಇದೀಗ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯು ಚುನಾವಣಾ ಸಿದ್ದತಾ ಕಾರ್ಯಾಗಾರ ಹಮ್ಮಿಕೊಂಡಿದ್ದು, ಈ ಕಾರ್ಯಗಾರದಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿರುವ ರಾಧಾ ಮೋಹನ್ ದಾಸ್ ಅಗರ್ವಾಲ್ ಕಾರ್ಯಕರ್ತರಿಗೆ ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/note-march-25-is-the-last-date-for-inclusion-of-name-in-the-voters-list/ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ರಾಧಾ ಮೋಹನ್ದಾಸ್ ಅಗರ್ವಾಲ್ ಅವರು, ಕಾರ್ಯಕರ್ತರಿಗೆ ಅಗರ್ವಾಲ್ ಕಿವಿಮಾತು ಹೇಳಿದ್ದು, ನಮ್ಮೊಳಗಿನ ಮಾತು ಬಂದ್ ಆಗಬೇಕು. ಯಾವುದೇ ರೀತಿಯಾದ ಆಂತರಿಕ ಚರ್ಚೆ ಆಗಬಾರದೆಂದು ಇದೇ ವೇಳೆ ಖಡಕ್ ಸೂಚನೆ ನೀಡಿದ್ದಾರೆ. https://kannadanewsnow.com/kannada/hd-deve-gowda-files-complaint-with-election-commission-against-hassan-dc-issues-notice-to-ec-seeking-clarification/ ಹಾಸನ ಮಂಡ್ಯ ಕೋಲಾರದಲ್ಲೂ ಕೂಡ ನಾವು ಕೆಲಸ ಮಾಡಬೇಕು. ಜೆಡಿಎಸ್ ಜೊತೆಗೆ ಸೇರಿಕೊಂಡು ಕೆಲಸ ಮಾಡಬೇಕು.ಅಭ್ಯರ್ಥಿ ಯಾರೇ ಆದರೂ ಕೂಡ ಅವರ ಪರವಾಗಿ ನಾವು ಕೆಲಸ ಮಾಡಬೇಕು.ಜೆಡಿಎಸ್ ಅಭ್ಯರ್ಥಿಗಳ ಪರವೂ ಕೂಡ ಕೆಲಸ ಮಾಡಬೇಕು ಎಂದು ರಾಧಾ ಮೋಹನ್ ದಾಸ್ ಅಗರ್ವಾಲ್ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. https://kannadanewsnow.com/kannada/alert-sukanya-samriddhi-yojana-if-you-dont-do-this-by-march-31-your-account-will-be-closed/ ಈ ಒಂದು…

Read More