Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಮಂಡ್ಯ : ಮಂಡ್ಯದಲ್ಲಿ ಘೋರ ಘಟನೆ ನಡೆದಿದ್ದು, ಸೇತುವೆ ಕಾಮಗಾರಿ ನಡೆಯುತ್ತಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಬೆಟ್ಟದಾಸನದೊಡ್ಡಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿ ಕಾಮಗಾರಿ ನಡೆಯುತ್ತಿದ್ದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನಪ್ಪಿದ್ದಾನೆ. ಕೆಸ್ತೂರು ಗ್ರಾಮದ ನಿವಾಸಿ ರಾಮು (50) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾಮಗಾರಿ ಮಾಹಿತಿ ಫಲಕ ಅಳವಡಿಸದೆ ಕಾಮಗಾರಿ ನಡೆಸಲಾಗುತ್ತಿತ್ತು ಎನ್ನುವ ಆರೋಪ ಕೇಳಿ ಬಂದಿದೆ. ಇನ್ನು ಘಟನೆ ಕುರಿತಂತೆ ಕೆಸ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ನೀಡಿದ್ದ ದೂರಿನ ಅನ್ವಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ನೌಕರರು ಸೇರಿ 15 ಮಂದಿ ವಿರುದ್ದ ಭಾನುವಾರ ಪ್ರಕರಣ ದಾಖಲಾಗಿದೆ. ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ಕಮಲಮ್ಮ ಎಂಬುವರು, ಅರಣ್ಯ ಇಲಾಖೆಯವರು ತನ್ನ ಕೈ ಹಿಡಿದು ಎಳೆದಾಡಿ, ಕಪಾಳಕ್ಕೆ ಹೊಡೆದು, ತಳ್ಳಿ ಬೀಳಿಸಿದ್ದಾರೆ. ಅಲ್ಲದೆ, ನನ್ನ ಮಗ ಗಂಗಾಧರ ಸ್ವಾಮಿ ಮತ್ತು ನಮ್ಮ ಜಮೀನಿನ ಬಾಜುದಾರರಾದ ರಘು, ಪ್ರದೀಪ್, ರೇವಣ್ಣ ಅವರುಗಳಿಗೆ ಕೈನಿಂದ ಹೊಡೆದು ನನ್ನ ಮಗನನ್ನು ಕೊಲೆ ಮಾಡುವ ಉದ್ದೇಶದಿಂದ ಕತ್ತು ಹಿಡಿದು ಹಿಸುಕಲು ಯತ್ನಿಸಿದ್ದಾರೆ. ಪ್ರಸಾದ್ ಮೇಲೆ ಜೀಪ್ ಹತ್ತಿಸಿ ಹತ್ಯೆಗಯ್ಯಲು ಯತ್ನ ಮಾಡಲಾಗಿದೆ ಎಂದು ಆರೋಪಿಸಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದ್ದರು.‌ ಅರಣ್ಯ ಇಲಾಖೆ ಡಿಆರ್​​ಎಫ್ಒ ಜ್ಞಾನಶೇಖರ್, ಡಿಆರ್​​ಎಫ್ಒ ಕಾರ್ತಿಕ್​ ಯಾದವ್​, ಎಸಿಎಫ್ ಸುರೇಶ್,‌ ಡಿಆರ್​​ಎಫ್ಒ ಶಿವಕುಮಾರ್ ಇತರ ನೌಕರರಾದ ಶಿವಣ್ಣ, ಸುಚಿತ್ರ, ಸುಬ್ರಹ್ಮಣ್ಯ, ನಾಗೇಶ್, ಸೋಮು, ಪ್ರವೀಣ್, ಮಣಿಕಂಠ,…

Read More

ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬಳ್ಳಾರಿ ಉದ್ಯಮಿ ಕುಮಾರಸ್ವಾಮಿ ಮನೆ ಮೇಲೆ ಸಿಬಿಐ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸುತ್ತಿದೆ. ಉದ್ಯಮಿ ಕುಮಾರಸ್ವಾಮಿ ಮಗ ಗೋವಿಂದರಾಜು ಮನೆಗಳ ಮೇಲೆ ಇದೀಗ ಸಿವಿಐ ನಡೆಸಿದೆ. ಕುಮಾರಸ್ವಾಮಿ ಪುತ್ರ ಗೋವಿಂದರಾಜು ಬಳ್ಳಾರಿಯ ಹಾಲಿ ಕಾರ್ಪೊರೇಟರ್ ಆಗಿದ್ದು, ಬಳ್ಳಾರಿಯ ಗಾಂಧಿನಗರದಲ್ಲಿರುವ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ನೆಕ್ಕಂಟಿ ನಾಗರಾಜ್ ಖಾತೆಯಿಂದ ಗೋವಿಂದರಾಜು ಖಾತೆಗೆ ಅಕ್ರಮ ಹಣ ವರ್ಗಾವಣೆ ಸಂಬಂಧ ಗೋವಿಂದರಾಜು ಮನೆಯಲ್ಲಿ ಸಿಬಿಐ ದಾಖಲೆ ಪರಿಶೀಲನೆ ನಡೆಸುತ್ತಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ನಗರದ ಕಾಲೇಜು ವಿದ್ಯಾರ್ಥಿನಿಗೆ ಆಟೋ ಚಾಲಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಸೆಪ್ಟಂಬರ್ 8ರಂದು ಪುಟ್ಟೇನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, 19 ವರ್ಷದ ವಿದ್ಯಾರ್ಥಿನಿ ನೀಡಿರುವ ದೂರಿನ ಅನ್ವಯ ಆಟೋ ಚಾಲಕ ಹನುಮಂತಪ್ಪ ತಳವಾರ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆ. 8 ರಂದು ಸಂಜೆ‌ 4:30ಕ್ಕೆ ಕಾಲೇಜಿನಿಂದ ಮನೆಗೆ ತೆರಳಲು ವಿದ್ಯಾರ್ಥಿನಿ ರ‍್ಯಾಪಿಡೋ ಮೂಲಕ ಆಟೋ ಬುಕ್ ಮಾಡಿದ್ದಳು. ಸಂಜೆ 5:15 ಗಂಟೆ ಸುಮಾರಿಗೆ ಆಕೆಯನ್ನು ಮನೆ ಬಳಿ ಡ್ರಾಪ್​ ಮಾಡಿದ್ದ ಚಾಲಕ, ಅದೇ ಸಂದರ್ಭದಲ್ಲಿ ನೀವು ಸಿನೆಮಾ ನಟಿಯ ಥರ ಇದ್ದೀರಿ ಎನ್ನುತ್ತ ಬ್ಯಾಗ್‌ಗಳನ್ನು ಇಳಿಸಲು ಸಹಾಯ ಮಾಡುವುದಾಗಿ ತಾನೂ ಕೆಳಗಿಳಿದಿದ್ದಾನೆ. ಬಳಿಕ ವಿದ್ಯಾರ್ಥಿನಿಯ ಸಮೀಪ ಬಂದು, ನಿಮಗೆ ಜ್ವರವಿದೆಯಾ? ಎಂದು ಆಕೆಯ ಹಣೆಯನ್ನು ಸ್ಪರ್ಶಿಸಿದ್ದ. ಆ ಸಂದರ್ಭದಲ್ಲಿ ಸ್ಪರ್ಶಿಸದಂತೆ ತಿಳಿಸಿದರೂ, ಸಹ ವಿದ್ಯಾರ್ಥಿನಿಯ ಖಾಸಗಿ ಅಂಗ ಸ್ಪರ್ಶಿಸಲಾರಂಭಿಸಿದ್ದ.…

Read More

ಬೆಂಗಳೂರು : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ. ಇಂದು ಹೈ ಕೋರ್ಟ್ ವಿಭಾಗಿಯ ಪೀಠದಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ ಹಿಂದೂ ವಿರೋಧಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಭುವನೇಶ್ವರಿ ಕನ್ನಡ ಬಾವುಟದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆಯಾಗಿದೆ. ಕೆಂಪು ಹಳದಿ ಬಣ್ಣದ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ…

Read More

ಬೆಂಗಳೂರು : ವರನಟ ಡಾ. ರಾಜಕುಮಾರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು ವಿನೋದ ಶೆಟ್ಟಿ ಎಂಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಡಾ.ರಾಜಕುಮಾರ್ ಹಾಗೂ ಅವರ ಕುಟುಂಬದವರ ಬಗ್ಗೆ ಆವಾಚ್ಯವಾಗಿ ನಿಂದನೆ ಮಾಡಿ ಮಾತನಾಡಿದ್ದ. ಬಾಯಿಗೆ ಬಂದಂತೆ ಮಾತನಾಡಿ ತಾಕತ್ತಿದ್ದರೆ ಬನ್ನಿ ಅಂತ ವಿನೋದ ಶೆಟ್ಟಿ ಅವಾಜ್ ಹಾಕಿದ್ದ. ಇದೀಗ ಬೆಂಗಳೂರಿನ ಸಿಸಿಬಿ ಪೊಲೀಸರು ಆರೋಪಿ ವಿನೋದ್ ಶೆಟ್ಟಿಯನ್ನ ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ. ಇಂದು ಹೈ ಕೋರ್ಟ್ ವಿಭಾಗಿಯ ಪೀಠದಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿದ್ದು ಸರಿಯಲ್ಲ ಹಿಂದೂ ವಿರೋಧಿ ಕನ್ನಡ ವಿರೋಧಿ ಹೇಳಿಕೆ ನೀಡಿದ್ದಾರೆ. ಭುವನೇಶ್ವರಿ ಕನ್ನಡ ಬಾವುಟದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಬಾನು ಮುಷ್ತಾಕ್ ನೀಡಿದ ಹೇಳಿಕೆಯ ಇಂಗ್ಲಿಷ್ ಅನುವಾದ ಸಲ್ಲಿಕೆಯಾಗಿದೆ. ಕೆಂಪು ಹಳದಿ ಬಣ್ಣದ ಬಗ್ಗೆಯೂ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಈ ದೇಶದಲ್ಲಿ…

Read More

ಶಿವಮೊಗ್ಗ : ಶಿವಮೊಗ್ಗದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು ರಸ್ತೆ ಗುಂಡಿಗೆ ಬೈಕ್ ಸವಾರ ಒಬ್ಬ ಬಲಿಯಾಗಿದ್ದಾರೆ. ಆಳವಾದ ಗುಂಡಿ ತಪ್ಪಿಸಲು ಹೋಗಿ ಮಹೇಶ್ ಎನ್ನುವ ಬೈಕ್ ಸವಾರ ಸಾವನಪ್ಪಿದ್ದಾರೆ. ಮೃತ ಮಹೇಶ್ ಮೆಡಿಕಲ್ ಪ್ರತಿನಿಧಿಯಾಗಿದ್ದರು. ಶಿವಮೊಗ್ಗದ ಮಲಗುಪ್ಪ ಬಡಾವಣೆಯಲ್ಲಿ ಈ ಒಂದು ಘಟನೆ ನಡೆದಿದೆ. ಗುಂಡಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಬೈಕ್ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಹೇಶ್ ಚಿಕಿತ್ಸೆ ಫಲಿಸದೆ ಸಾವನಪ್ಪಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿಂದ ಬಿದ್ದು ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದ್ದು, ನೆಲಮಂಗಲದ ಮಾದನಾಯಕನಹಳ್ಳಿ ಅಪಾರ್ಟ್ಮೆಂಟ್ ಅಲ್ಲಿ ಈ ಒಂದು ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ನ 24ನೇ ಮಹಡಿಯಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪ್ರೆಸ್ಟೀಜ್ ಅಪಾರ್ಟ್ಮೆಂಟ್ ನಿಂದ ಬಿದ್ದು ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಎರಡು ದಿನಗಳ ಹಿಂದೆ ಲೋಕೇಶ್ ಅಕ್ಕನ ಭಾವನ ಮನೆಗೆ ಬಂದಿದ್ದ. ಅಕ್ಕ ಭಾವ ಮನೆಯಲ್ಲಿ ಇಲ್ಲದ ವೇಳೆ ಲೋಕೇಶ್ ಆತ್ಮಹತ್ಯೆ ಶರಣಾಗಿದ್ದಾನೆ. ಎರಡು ದಿನ ಮನೆಯಲ್ಲಿದ್ದು ಮೂರನೇ ದಿನ ಲೋಕೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಪಾರ್ಟ್ಮೆಂಟ್ನಿಂದ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲೂ ಸಹ ಸೆರೆಯಾಗಿದೆ. ಅನಾರೋಗ್ಯದ ಹಿನ್ನೆಲೆ ಲೋಕೇಶ್ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈತ ಖಾಸಗಿ ಮಾಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಇನ್ನೊಂದು ಕಡೆ ಅನಾರೋಗ್ಯದ ಸಮಸ್ಯೆ ಕಾಡುತ್ತಿತ್ತು. ಹಾಗಾಗಿ ಲೋಕೇಶ್ ಅಕ್ಕನ ಮನೆಗೆ ಬಂದು ಎರಡು ದಿನಗಳ ಕಾಲ ಇದ್ದ ಬಹಳ ಖಿನ್ನತೆಗೆ ಒಳಗಾಗಿದ್ದ.ಲೋಕೇಶ್ ಮೂರನೇ ದಿನ ನಸುಕಿನ…

Read More

ಬೆಂಗಳೂರು : ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸೋ ಕಾಲ ಸಮೀಪಿಸಿದೆ ಎನ್ನಲಾಗುತ್ತಿದೆ. ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇರಿಸಲು ಸೆಪ್ಟೆಂಬರ್.16, 2025ರ ನಾಳೆ ಸಭೆಯನ್ನು ಸರ್ಕಾರ ಕರೆಯಲಾಗಿದೆ. ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ:16.09.2025ರ ನಾಳೆ ಮಧ್ಯಾಹ್ನ 3.00 ಗಂಟೆಗೆ ಕೊಠಡಿ ಸಂಖ್ಯೆ:331, 3ನೇ ಮಹಡಿ, ಬಹುಮಹಡಿಗಳ ಕಟ್ಟಡ ಇಲ್ಲಿ ಈ ಕೆಳಕಂಡ ವಿಷಯಗಳ ಕುರಿತು ಚರ್ಚಿಸಲು ಸಭೆಯನ್ನು ಏರ್ಪಡಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಪರಿಶಿಷ್ಟ ಪಂಗಡ ಪಟ್ಟಿಗೆ ಕುರುಬ ಸಮುದಾಯ ಸೇರ್ಪಡೆ ವಿಚಾರವಾಗಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಹೇಳಿಕೆ ನೀಡಿದ್ದು, ಬೇಡಿಕೆ ಇತ್ತು ಈ ಬಗ್ಗೆ ನಾವು ದಾಖಲೆ ಕೇಳಿದ್ದೆವು. ನಾಳೆ ಬೆಂಗಳೂರಿನಲ್ಲಿ ಕುರುಬ ಸಮುದಾಯದ ಸಭೆ ಕರೆದಿದ್ದಾರೆ ಅದಾದ ಮೇಲೆ ಕೋಲಿ ಸಮುದಾಯದ ಸಭೆ ಕೂಡ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

Read More