Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ನವದೆಹಲಿ : ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆಗೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಇದೀಗ ಸೂಚನೆ ನೀಡಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಶಾಸಕರಾಗಿ ಆಯ್ಕೆ ಅಸಿಂಧುಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ್ದು, ಇದೀಗ ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಫಲಿತಾಂಶವನ್ನು ಮುಚ್ಚಿದಲಕೋಟೆಯಲ್ಲಿ ಸಲ್ಲಿಸಲು ಸುಪ್ರೀಂಕೋರ್ಟ್ ರಾಜ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಪ್ರಕರಣದ ಹಿನ್ನೆಲೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದಿಂದ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಲ್ಲಾ 15 ಮಂದಿ ಸ್ಪರ್ಧಿಗಳ ಏಜೆಂಟ್​​ಗಳಿಗೆ ಮತ ಎಣಿಕೆ ಕೇಂದ್ರದಲ್ಲಿ ಸಮರ್ಪಕ ವ್ಯವಸ್ಥೆ ಮಾಡಿರಲಿಲ್ಲ. ಒಂದೇ ಕೊಠಡಿಯಲ್ಲಿ ಮತಗಳ ಎಣಿಕೆ ಕಾರ್ಯ ನಡೆಯಬೇಕಿದ್ದು, ಎರಡು ಪ್ರತ್ಯೇಕ ಕೊಠಡಿಯಲ್ಲಿ ಎಣಿಕೆ ಮಾಡಲಾಗಿದೆ.ಆ ಮೂಲಕ ಜನಪ್ರತಿನಿಧಿಗಳ ಕಾಯ್ದೆಯ ನಿಯಮಗಳು…

Read More

ಬೆಂಗಳೂರು : ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಶಾಲಾ ಕಟ್ಟಡದಿಂದ ಜಿಗಿದು 17 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಿಚರ್ಡ್ಸ್ ಟೌನ್ ನಲ್ಲಿ ಈ ಒಂದು ಘಟನೆ ನಡೆದಿದೆ.ಮೃತ ಬಾಲಕ 12ನೇ ತರಗತಿಯ ವಿಜ್ಞಾನ ವಿದ್ಯಾರ್ಥಿ ಎಂದು ಹೇಳಲಾಗಿದೆ. ನಿನ್ನೆ ಬೆಳಿಗ್ಗೆ 8.20ರ ಸುಮಾರಿಗೆ ಶಾಲಾ ಕಟ್ಟಡದಿಂದ ಹಾರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಇಲ್ಲಿಯವರೆಗೆ ತಿಳಿದು ಬಂದಿಲ್ಲ. ವಿದ್ಯಾರ್ಥಿಯ ಸಾವನ್ನು ಅಸಹಜ ಸಾವು ಎಂದು ವರದಿ (ಯುಡಿಆರ್) ಮಾಡಲಾಗಿದೆ. ಈಗಾಗಲೇ ಪೊಲೀಸರು ಶಾಲೆಯ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ವಿದ್ಯಾರ್ಥಿ ಸಾವಿಗೆ ಕಾರಣ ಏನು ಎಂಬುದನ್ನು ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ರಾಕೇಶ್ ಕಿಶೋರ್ ಶೂ ಎಸೆದು ಅಪಮಾನಿಸಿದ ಕೃತ್ಯದ ವಿರುದ್ಧ ಕೃತ್ಯದ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅಷ್ಟೇ ಅಲ್ಲ ದೇಶದ ಹಲವೆಡೆ ಪ್ರಕರಣಗಳು ದಾಖಲಾಗಿವೆ. ಆದರೆ. ಇನ್ನೊಂದೆಡೆ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಮೇಲೆ ವಕೀಲ ನಡೆಸಿದ ಕೃತ್ಯವನ್ನು ಸಮರ್ಥಿಸುತ್ತಿರುವ ಸನ್ನಿವೇಶವೂ ಕಂಡುಬರುತ್ತಿದೆ. ಈ ಬೆಳವಣಿಗೆ ಬಗ್ಗೆ ಕಾನೂನು ತಜ್ಞರು ಹಾಗೂ ವಕೀಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಕೇಶ್ ಕಿಶೋರ್ ನಡೆಸಿರುವ ಸಂವಿಧಾನ ವಿರೋಧಿ ಕೃತ್ಯವನ್ನು ಕೆಲವರು ಸಮರ್ಥಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿರುವ ಪ್ರಕರಣಕ್ಕೆ ಕರ್ನಾಟಕವೂ ಸಾಕ್ಷಿಯಾಗಿವೆ. ಈ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಮಾಜಿ ಸರ್ಕಾರಿ ಅಭಿಯೋಜಕರೂ ಆದ ಮಂಗಳೂರಿನ ಹಿರಿಯ ವಕೀಲ ಮನೋರಾಜ್ ರಾಜೀವ್, ಅಂತಹಾ ಕೃತ್ಯವನ್ನು ಬೆಂಬಲಿಸಿ ಪ್ರಚಾರ ಮಾಡುವವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಪ್ರತಿಪಾದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಾನೂನು ಘಟಕದ ಅಧ್ಯಕ್ಷರೂ…

Read More

ಬೆಂಗಳೂರು : ರಾಜ್ಯದಲ್ಲಿ RSS ಚಟುವಟಿಕೆಗಳಿಗೆ ನಿಷೇಧದ ಕುರಿತು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಇದೀಗ ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಬಂದಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಈ ಕುರಿತು ಪ್ರಿಯಾಂಕ ಖರ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗನಿಸುವುದು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ಪ್ರಶ್ನಿಸಲು ಧೈರ್ಯ ಮಾಡಿದರಿಂದ ಬೆದರಿಕೆ ಕರೆಗಳು ಬರುತ್ತಿವೆ.ನನ್ನ ಮತ್ತು ನನ್ನ ಕುಟುಂಬಕ್ಕೆ ಬೆದರಿಕೆಗಳು ಹಾಗೂ ನಿಂದನೆ ಕರೆಗಳು ಬರುತ್ತಿದ್ದು, ಆದರೆ ನಾನು ಇದು ಯಾವುದಕ್ಕೂ ವಿಚಲಿತನಾಗುವುದಿಲ್ಲ. ಅಥವಾ ಆಶ್ಚರ್ಯ ಪಡುವುದಿಲ್ಲ ಆರ್ ಎಸ್ ಎಸ್ ಮಹಾತ್ಮ ಗಾಂಧಿ ಅಥವಾ ಅಂಬೇಡ್ಕರ್ ಅವರನ್ನೇ ಬಿಟ್ಟಿಲ್ಲ. ಇನ್ನು ಅವರು ನನ್ನನ್ನು ಏಕೆ ಬಿಡುತ್ತಾರೆ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಸಮಾನತೆ ವಿವೇಚನೆ ಕರುಣೆಯಲ್ಲಿ ಬೇರೂರಿರುವ ಸಮಾಜ ಕಟ್ಟಬೇಕಿದೆ ಈ ದೇಶವನ್ನು ಅತ್ಯಂತ…

Read More

ಕೊಪ್ಪಳ : ಕೊಪ್ಪಳದಲ್ಲಿ ಬಲ್ಡೊಟಾ ಕಾರ್ಖಾನೆ ವಿಚಾರವಾಗಿ, ಗವಿಸಿದ್ದೇಶ್ವರ ಸ್ವಾಮೀಜಿ ಮೌನ ಅನುಷ್ಠಾನಕ್ಕೆ ಜಾರಿದ್ದಾರೆ. ವಾರದಲ್ಲಿ 6 ದಿನಗಳ ಕಾಲ ಗವಿ ಸಿದ್ದೇಶ್ವರ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ ಜಾರಿದ್ದಾರೆ. ಹೌದು ಬಲ್ಡೊಟಾ ಕಾರ್ಖಾನೆ ವಿಚಾರವಾಗಿ, ಕಳೆದ ಕೆಲವು ದಿನಗಳ ಹಿಂದೆ ಜಿಲ್ಲೆಯ ಎಲ್ಲ ಜನರೊಂದಿಗೆ ಪ್ರತಿಭಟನೆ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಾರದಲ್ಲಿ 6 ದಿನಗಳ ಕಾಲ ಗವಿ ಸಿದ್ದೇಶ್ವರ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ ಜಾರಿದ್ದಾರೆ. ಸೋಮವಾರ ಮಾತ್ರ ಭಕ್ತರಿಗೆ ದರ್ಶನ ನೀಡಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳು ಕಾರ್ಖಾನೆ ರದ್ಧತಿ ಆದೇಶ ತರಬೇಕು ಎಂದಿದ್ದರು. ಫೆಬ್ರವರಿ ನಡೆದ ಹೋರಾಟದ ವೇಳೆ ಶ್ರೀಗಳು ಹೇಳಿದ್ದರು. ಬೃಹತ್ ಹೋರಾಟ ನಡೆಸಿದರು, ಕಾರ್ಖಾನೆ ನಿಲ್ಲುವ ಲಕ್ಷಣ ಕಾಣುತಿಲ್ಲ. ಬಲ್ಡೊಟಾ ಕಾರ್ಖಾನೆಯಾದರೆ ಕೊಪ್ಪಳ ತೊರೆಯುವೆ ಎಂದು ಹೇಳಿದ್ದರು. ಇದೀಗ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ ಜಾರಿದ ಹಿನ್ನೆಲೆ ಭಕ್ತರಲ್ಲಿ ಆತಂಕ ಹೆಚ್ಚಿದೆ. ಯಾವಾಗಲು ಮಂಗಳವಾರ ಮಾತ್ರ ಮೌನ ಅನುಷ್ಠಾನ ಕೈಗೊಳ್ಳುತ್ತಿದ್ದರು. ಇದೀಗ ವಾರದಲ್ಲಿ 6 ದಿನ ಸ್ವಾಮೀಜಿಗಳು ಮೌನ ಅನುಷ್ಠಾನಕ್ಕೆ…

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಪೆಡ್ಲಿಂಗ್ ಮಾಡಿತ್ತಿದ್ದ ಇಬ್ಬರು ನೈಜೆರಿಯಾ ಮೂಲದ ಇಬ್ಬರು ಅರೆಸ್ಟ್ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದು, ಒಕೆ ಚಿನ್ಯಾಡು ಸ್ಯಾಮ್ಯೂಯಲ್, ಕ್ಯೂಕಿರಿಜಾ ಟೋಪಿಸ್ಟಾ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಿಂದ 2.15 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಅಲ್ಲದೇ 43 ಗ್ರಾಂ ಕೊಕೇನ್, 490 ಗ್ರಾಂ MDMA ಬೈಕ್ ಜಪ್ತಿ ಮಾಡಿದ್ದಾರೆ. ಆರೋಪಿಗಳು 2011ಕ್ಕೂ ಮೊದಲೇ ನೈಜೆರಿಯಾದಿಂದ ಬೆಂಗಳೂರಿಗೆ ಬಂದಿದ್ದರು. ನಕಲಿ ಪಾಸ್ಪೋರ್ಟ್ ವೀಸಾ ಬಳಸಿ ಬೆಂಗಳೂರಲ್ಲೇ ನೆಲೆಸಿದ್ದರು. ಐಟಿ ಉದ್ಯೋಗಿಗಳು, ಸ್ಥಳೀಯರನ್ನು ಟಾರ್ಗೆಟ್ ಮಾಡಿ ಡ್ರಗ್ ಪೆಡ್ಲಿಂಗ್ ಮಾಡಿತ್ತಿದ್ದರು. ಬೈಕ್ ನಲ್ಲಿ ಬಂದು ಡ್ರಗ್ ಮಾರುತ್ತಿದ್ದಾಗ ದಾಳಿ ಮಾಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Read More

ರಾಯಚೂರು : ರಾಯಚೂರಲ್ಲಿ ಘೋರ ದುರಂತ ಸಂಭವಿಸಿದ್ದು, ತಾಲೂಕಿನ ಮರ್ಚೆಡ್ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕೊಠಡಿಯೊಂದು ಹೊತ್ತಿ ಉರಿದಿದೆ. ಕಿಡಿಗೇಡಿಗಳು ಶಾಲೆಯ ಕೊಠಡಿಗೆ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಸರ್ಕಾರಿ ಶಾಲೆಯ LKG ಕ್ಲಾಸ್ ರೂಂ ಬೆಂಕಿಗೆ ಆಹುತಿಯಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಕ್ಲಾಸ್ ರೂಂನಲ್ಲಿದ್ದ ಎಲ್ಲ ವಸ್ತುಗಳು ಸುಟ್ಟು ಭಸ್ಮವಾಗಿವೆ. ಪುಸ್ತಕಗಳು, ಚೇರ್, ಟೇಬಲ್, ಮಕ್ಕಳ ಆಟಿಕೆಗಳು ಸುಟ್ಟು ಭಸ್ಮವಾಗಿವೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Read More

ಮಂಡ್ಯ : ಹೆಣ್ಣು ಭ್ರೂಣ ಪತ್ತೆ & ಹತ್ಯೆ ದಂಧೆಗೆ ಕಡಿವಾಣ ಹಾಕಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಲಿಂಗಾನುಪಾತ ಏರಿಕೆಯಾಗಿದೆ. ಪ್ರತಿ ಸಾವಿರ ಗಂಡಿಗೆ 869 ಇದ್ದ ಹೆಣ್ಣು ಮಕ್ಕಳ ಸಂಖ್ಯೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ಕ್ರಮದಿಂದ ಲಿಂಗಾನುಪಾತ ಏರಿಕೆಯಾಗಿದೆ. ಸದ್ಯ ಮಂಡ್ಯ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಸಂಖ್ಯೆ 930ಕ್ಕೆ ಏರಿಕೆಯಾಗಿದೆ. ಈ ವರ್ಷ 61 ಹೆಣ್ಣುಮಕ್ಕಳ ಸಂಖ್ಯೆ ಹೆಚ್ಚಳವಾಗಿದೆ. ಕೆಲ ವರ್ಷಗಳಿಂದ ಮಂಡ್ಯದಲ್ಲಿ ಭ್ರೂಣ ಹತ್ಯೆ ನಡೆಯುತ್ತಿತ್ತು. ಎಗ್ಗಿಲ್ಲದೇ ಸಾವಿರಾರು ಹೆಣ್ಣು ಭ್ರೂಣ ಹತ್ಯೆ ನಡೆಸಲಾಗಿತ್ತು. ಈ ಇಂದು ಪ್ರಕರಣ ಇಡೀ ದೇಶಾದ್ಯಂತ ಭಾರಿ ಸದ್ದು ಮಾಡಿತ್ತು. ಮಂಡ್ಯ ಪಾಂಡವಪುರ, ನಾಗಮಂಗಲದಲ್ಲಿ ಭ್ರೂಣ ಹತ್ಯೆ ನಡೆದಿತ್ತು. ಆರೋಪಿಗಳು ಬಂಧಿಸಿದ್ರು ಭ್ರೂಣ ಹತ್ಯೆ ಮುಂದುವರೆದಿತ್ತು.

Read More

ನವದೆಹಲಿ : ತಮ್ಮ ಆಸ್ತಿಗಳಿಂದ ವಸೂಲಿ ಮಾಡಲಾದ ಹಣದ ವಿವರಗಳನ್ನು ಭಾರತೀಯ ಸಾರ್ವಜನಿಕ ವಲಯದ ಬ್ಯಾಂಕುಗಳು ತಡೆಹಿಡಿದಿವೆ ಎಂದು ಆರೋಪಿಸಿ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಮಂಗಳವಾರ ಟೀಕಿಸಿದ್ದಾರೆ , ವಸೂಲಿ ಮಾಡಿದ ಹಣದ ಅಧಿಕೃತ ದೃಢೀಕರಣದ ಹೊರತಾಗಿಯೂ ಪೂರ್ಣ ಖಾತೆಯನ್ನು ಪ್ರಸ್ತುತಪಡಿಸದಿದ್ದಕ್ಕಾಗಿ ಅವರು ನಾಚಿಕೆಪಡಬೇಕು ಎಂದು ಹೇಳಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮೂಲಕ ಕಿಡಿ ಕಾರಿರುವ ಅವರು, ನನ್ನಿಂದ ಗ್ಯಾರಂಟರ್ ಆಗಿ ಹಣವನ್ನು ಪಡೆಯುತ್ತಿರುವ ಭಾರತೀಯ ಸಾರ್ವಜನಿಕ ವಲಯದ ಬ್ಯಾಂಕುಗಳು, ಕೇಂದ್ರ ಹಣಕಾಸು ಸಚಿವರು 14,100 ಕೋಟಿ ರೂ.ಗಳನ್ನು ಅದೇ ಬ್ಯಾಂಕುಗಳಿಗೆ ಮರುಸ್ಥಾಪಿಸಲಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದರೂ, ವಸೂಲಾತಿಯ ಖಾತೆಯ ನಿಖರವಾದ ಹೇಳಿಕೆಯನ್ನು ಇನ್ನೂ ಸಲ್ಲಿಸದಿದ್ದಕ್ಕೆ ನಾಚಿಕೆಪಡಬೇಕು ಎಂದು ಬರೆದಿದ್ದಾರೆ. https://twitter.com/TheVijayMallya/status/1977875655904874769?t=Xbl5dhv3xi5RaejT19Zb9A&s=19

Read More

ಬೆಂಗಳೂರು : ಬೆಂಗಳೂರು ನಗರದಲ್ಲಿ ಈ ಹಿಂದೆ ಸಾಕಷ್ಟು ರೋಡ್ ರೇಜ್ ಪ್ರಕರಣಗಳು ನಡೆದಿದ್ದು, ಎಷ್ಟೇ ನಿಯಂತ್ರಣ ಕ್ರಮ ಕೈಗೊಂಡರು ಸಹ ಈ ರೋಡ್ ರೇಜ್ ಪ್ರಕರಣಗಳು ನಿಲ್ಲುತ್ತಿಲ್ಲ. ಇದೀಗ ನಗರದಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ನಡೆದಿದ್ದು, ಬುಲೆಟ್ ಬೈಕ್ ನಲ್ಲಿ ಬಂದ ಬೈಕ್ ಸವಾರ ದೌಲತ್ತು ಮೆರೆದಿದ್ದಾನೆ. ಬುಲೆಟ್ ಬೈಕ್ ನಲ್ಲಿ ಬಂದಂತಹ ಬೈಕ್ ಸವಾರ ಸಡನ್ ಆಗಿ ಅಡ್ಡ ಬಂದ ಅಂತ ಪ್ರಶ್ನಿಸಿದಕ್ಕೆ ಅಶ್ಲೀಲವಾಗಿ ಬೈದಿದ್ದಾನೆ. ಬೆಂಗಳೂರಿನ ಕುರುಬ ಹಳ್ಳಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಸಡನ್ ಆಗಿ ಅಡ್ಡ ಬಂದಿದ್ದಕ್ಕೆ ಶರತ್ ಎನ್ನುವವರು ಪ್ರಶ್ನಿಸಿದ್ದಾರೆ. ಈ ವೇಳೆ ಬುಲೆಟ್ ನಲ್ಲಿ ಬಂದಂತಹ ವ್ಯಕ್ತಿ ಶರತ್ ಅವರಿಗೆ ಅಶ್ಲೀಲವಾಗಿ ನಿಂದನೆ ಮಾಡಿ ಬೈದಿದ್ದಾನೆ.

Read More