Subscribe to Updates
Get the latest creative news from FooBar about art, design and business.
Author: kannadanewsnow05
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, 2 ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೆ ಸಾವನಪ್ಪಿರುವ ಘಟನೆ ಹಾಸನದ ಗುಡ್ಡೆನಹಳ್ಳಿ ರಾಷ್ಟ್ರೀಯ ಹೆದ್ದಾರಿ 373 ರಲ್ಲಿ ನಡೆದಿದೆ. ಮೃತ ಯುವಕರನ್ನು ಗುಡ್ಡೆನಹಳ್ಳಿ ರಾಕೇಶ್ (29) ಹಾಗೂ ಮಯೂರ (24) ಅಪಘಾತದಲ್ಲಿ ಸಾವನಪ್ಪಿದ್ದಾರೆ. ಮಕ್ಕಳನ್ನು ಕಳೆದುಕೊಂಡು ಪೋಷಕರು ಗೋಳಾಡುತ್ತಿದ್ದಾರೆ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ, ಬೆಳ್ತಂಗಡಿ ತಾಲೂಕಿನಲ್ಲಿ ಮಕ್ಕಳು ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಸ್ಫೋಟಕವೊಂದು ಸ್ಪೋಟಗೊಂಡು ಬಾಲಕನೊಬ್ಬ ಗಾಯಗೊಂಡ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಂದಾರು ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಬಲಿಪೆ ನಿವಾಸಿಗಳಾದ ಮುಕುಂದ ಮತ್ತು ಜಯಶ್ರೀ ದಂಪತಿಯ ಪುತ್ರ ಅಭೀಶ್ (11) ಅವಘಡದಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದು ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮನೆಯ ಅಂಗಳದಲ್ಲಿ ಇಬ್ಬರು ಮಕ್ಕಳು ಆಟವಾಡುತ್ತಿದ್ದ ವೇಳೆ ಚೆಂಡಿನಂತಿದ್ದ ವಸ್ತುವೊಂದು ಪತ್ತೆಯಾಗಿದ್ದ. ಅದನ್ನು ತೆಗೆದುಕೊಂಡು ಕ್ರಿಕೆಟ್ ಆಡಲು ಮುಂದಾಗಿದ್ದಾರೆ. ಒಬ್ಬ ಬೌಲಿಂಗ್ ಮಾಡಿದ್ದು, ಇನ್ನೊಬ್ಬ ಬ್ಯಾಟಿಂಗ್ ಮಾಡಿದ ಸಂದರ್ಭ ಸ್ಫೋಟಗೊಂಡಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಅಭೀಶ್ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು : ಗುತ್ತಿಗೆದಾರರಿಂದ ಕಮಿಷನ್ ಆರೋಪದ ವಿಚಾರವಾಗಿ ಕಮಿಷನ್ ಹಿಂದೆಯೂ ಇತ್ತು, ಈಗಲೂ ಇದೆ, ಮುಂದೆಯೂ ಇರುತ್ತೆ. ಅದನ್ನು ಕಂಡು ಹಿಡಿಯುವುದಕ್ಕೆ ಆಗಲ್ಲ. ಹಿಂದಿನ ಸರ್ಕಾರ ಮಾಡಿರುವ ತಪ್ಪು ಅದು. ನೀರಾವರಿ, ಲೋಕೋಪಯೋಗಿ ಇಲಾಖೆಯಲ್ಲಿ ಜಾಸ್ತಿ ಬಾಕಿ ಇದೆ. ಕಾಮಗಾರಿ ನಿಲ್ಲಿಸುವುದಕ್ಕೆ ಆಗಲ್ಲ, ಅವರಿಗೆ ಕಂಫರ್ಟ್ ಇದ್ದ ಕಡೆ ಟೆಂಡರ್ ಹಾಕೇ ಹಾಕ್ತಾರೆ ಎಂದರು. ಎಂದು ಸಚಿವ ಸತೀಶ್ ಜಾರಕಿಹೊಳಿ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ನಮ್ಮ ಇಲಾಖೆಯಲ್ಲಿ 12 ಸಾವಿರ ಕೋಟಿ ರೂ. ಬಾಕಿ ಇತ್ತು. ಮೂರು ಸಾವಿರ ಕೋಟಿ ಕೊಡಲಾಗಿದೆ. 9 ಸಾವಿರ ಕೋಟಿ ಬಾಕಿ ಇದೆ. ಅದನ್ನು ಬ್ಯಾಲೆನ್ಸ್ ಮಾಡುತ್ತೇವೆ. ನಾವು ನಿಮಗೆ ಅಪ್ರೂವ್ ಕೊಟ್ಟಿಲ್ಲ ಅಂತಲೂ ಚರ್ಚೆ ಆಗಿದೆ. ನಾವು ಕೊಡುವುದರಲ್ಲೇ ಬ್ಯಾಲೆನ್ಸ್ ಮಾಡಿ ಅಂತ ಚರ್ಚೆ ಆಗಿದೆ. ಇದರಲ್ಲಿ ಅಧಿಕಾರಿಗಳ ಲೋಪ ಎನ್ನಲು ಬರಲ್ಲ. ಹಿಂದಿನ ಸರ್ಕಾರವೇ ಇದಕ್ಕೆ ಕಾರಣ ಎಂದು ಆರೋಪಿಸಿದರು. ನಮ್ಮಲ್ಲಿರುವ ಬಜೆಟ್ಗೆ ಸರಿದೂಗಿಸುವ ಕೆಲಸ ಮಾಡುತ್ತಿದ್ದೇವೆ. ಇವರನ್ನು ದಾರಿ ತಪ್ಪಿಸುವ ಕೆಲಸ…
ಹುಬ್ಬಳ್ಳಿ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ನೌಕರರು ಮುಷ್ಕರಕ್ಕೆ ಇಳಿದಿದ್ದಾರೆ. ಇದೀಗ ಕೆಲಸ ಬಿಟ್ಟು ಮುಷ್ಕರಕ್ಕೆ ಹೇಳಿದವರ ಸಂಬಳಕ್ಕೆ ಕತ್ತರಿ ಹಾಕಲಾಗಿದ್ದು, ನೋ ವರ್ಕ್ ನೋವೇಸ್ ನೋಟಿಸ್ ಜಾರಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಎಂಡಿ ಪ್ರಿಯಾಂಕ ಮಾಹಿತಿ ನೀಡಿದ್ದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಎಂಡಿ ಆಗಿರುವ ಪ್ರಿಯಾಂಕ ವೈದ್ಯಕೀಯ ರಜೆ ಹೊರತುಪಡಿಸಿ ಬೇರೆಯವರಿಗೆ ರಜೆ ನೀಡಿಲ್ಲ ಎಂದು ತಿಳಿಸಿದ್ದು, ನೌಕರರು ಮುಷ್ಕರ ಎರಡು ದಿನಗಳ ಹಿಂದೆ ನೌಕರರಿಗೆ ನೋ ವರ್ಕ್ ನೋ ವೇಜಸ್ ಆದೇಶ ಮಾಡಿದ್ದೇವೆ. ಎಲ್ಲದಕ್ಕೂ ಮುಷ್ಕರ ಒಂದೇ ದಾರಿ ಇಲ್ಲ. ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆ. ಇವತ್ತು ಯಾವುದೇ ರೀತಿ ತೊಂದರೆ ಇಲ್ಲ ಒಂದು ಗಂಟೆ ವರೆಗೂ ಯಾವ ಬಸ್ ಗಳು ನಿರ್ಗಮನ ಆಗಬೇಕೊ ಅವೆಲ್ಲ ತೆರಳಿವೆ. ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗಿಲ್ಲ ಎಂದರು
ಬೆಂಗಳೂರು : ಮುಡಾ ಮಾಜಿ ಆಯುಕ್ತ ಡಿ ಬಿ ನಟೇಶ್‌ಗೆ ಮುಂಬಡ್ತಿ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ. ಸ್ನೇಹಮಯಿ ದೂರಿಗೆ ಪತ್ರದ ಮೂಲಕ ಶಾಲಿನಿ ರಜನಿಶ್ ಸ್ಪಷ್ಟೀಕರಣ ನೀಡಿದ್ದಾರೆ. ತಾವು ಸಲ್ಲಿಸಿರುವ ದೂರಿನಲ್ಲಿ ಮಾಡಿರುವ ಆರೋಪಗಳು ನಿರಾಧಾರ ಆಗಿವೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಮಾಜಿ ಅಧ್ಯಕ್ಷ ನಟೇಶ್ ಅವರಿಗೆ ಭರ್ತಿ ನೀಡುವ ವಿಚಾರವಾಗಿ ಕೋಟ್ಯಾಂತರ ಹಣ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣಗೆ ತಿರುಗೇಟು ನೀಡಿದ್ದಾರೆ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸಿಲ್ಲ. ಸರ್ಕಾರಕ್ಕೆ ಯಾವುದೇ ಪೂರಕ ದಾಖಲೆಗಳನ್ನು ಸಲ್ಲಿಸಿರುವುದಿಲ್ಲ ಆರೋಪ ಸಂಬಂಧ ಸೂಕ್ತ ದಾಖಲೆಗಳನ್ನು ಒದಗಿಸಿದರೆ ನಿಯಮಾನುಸಾರ ಸಾಕ್ಷಿ ಆಧಾರಗಳನ್ನು ಖಂಡಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪತ್ರದ ಮೂಲಕ ಸಿ ಎಸ್ ಶಾಲಿನಿ ರಜನೀಶ್ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ,6 ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ಗಳಲ್ಲಿ 23.88 ಕೋಟಿ ರೂ. ಮೌಲ್ಯದ 4.776 ಕೆ.ಜಿ ಕೊಕೇನ್ ಪತ್ತೆಯಾಗಿದೆ. ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ವಿಭಾಗದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಪ್ರಯಾಣಿಕ ಬ್ರೆಜಿಲ್ ಮೂಲದವ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದಿರುವ ಎನ್ಸಿಬಿ ಅಧಿಕಾರಿಗಳು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್ಡಿಪಿಎಸ್) ಕಾಯ್ದೆಯಡಿ ಪ್ರಕರಣ ದಾಖಲು ಮಾಡಿದ್ದಾರೆ. ಫೆಬ್ರುವರಿ 17ರಂದು ಕತಾರ್ನ ದೋಹಾದಿಂದ ಬಂದ ಪ್ರಯಾಣಿಕನ ಬಳಿ ಇದ್ದ ಬ್ಯಾಗ್ಗಳನ್ನು ತಪಾಸಣೆ ನಡೆಸಿದಾಗ ಭಾರಿ ಪ್ರಮಾಣದ ಕೊಕೇನ್ ಪತ್ತೆಯಾಗಿದೆ. ಮಹಿಳೆಯರು ಬಳಸುವ ಬ್ಯಾಗ್ನಲ್ಲಿ ಮರೆಮಾಚಿ ಕೊಕೇನ್ ಸಾಗಿಸಲಾಗುತ್ತಿತ್ತು. ಬ್ಯಾಗ್ನ ಕೆಳಭಾಗದಲ್ಲಿ ಕೆಮಿಕಲ್ನಿಂದ ಮಾಡಲಾಗದ ಪದರಗಳ ಒಳಗೆ ಕೊಕೇನ್ ಇಡಲಾಗಿತ್ತು. ಪ್ರಯಾಣಿಕರ ಚೆಕ್ ಇನ್ ವೇಳೆ ಮಾದಕವಸ್ತು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. https://twitter.com/narcoticsbureau/status/2024143495041339553?t=_gCYCIkYGMBCzJbbyWYDgw&s=19
ಬೆಂಗಳೂರು, ಫೆ.19 : ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು. ಏನಾದರೂ ಕಸ ವಿಲೇವಾರಿಗೆ ಬಿಡುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಬೇಕಲ್ಲವೇ? ಕಸ ಯಾರದ್ದು ಅದು ಜನರ ಕಸ. ಮೊದಲಿನಿಂದಲೂ ಹೇಗೆ ಸಂಪ್ರದಾಯವಿತ್ತೋ ಅದೇ ರೀತಿ ಮಾಡಿಕೊಂಡು ಬರುತ್ತಿದ್ದೇವೆ. ಬಿಜೆಪಿ ಹಾಗೂ ನಮ್ಮ ಸಮಯದಲ್ಲಿ ತೀರ್ಮಾನ ಮಾಡಿದ್ದು ಇದೇ ರೀತಿ” ಎಂದರು. “ನಾವು ಅಭಿವೃದ್ಧಿಗೆ ಹಣ ಕೊಟ್ಟಿದ್ದೇವೆ. ಸಾವಿರಾರು ಕೋಟಿಯನ್ನು ಎಷ್ಟು ಎಂದು ಕೊಡಲು ಆಗುತ್ತದೆ. 20, 30 ಕೋಟಿ ಸೇರಿದಂತೆ 50- 100 ಕೋಟಿ ಹಣವನ್ನು ಅಭಿವೃದ್ಧಿಗೆ…
ಬೆಂಗಳೂರು, ಫೆ.19: ಸಾರಿಗೆ ನೌಕರರ ಬೇಡಿಕೆಗಿಂತ ಕಡಿಮೆ ಹಿಂಬಾಕಿ ನೀಡಿರುವ ಬಗ್ಗೆ ಸದ್ಯ ಅಷ್ಟು ಕೊಟ್ಟಿರುವುದಕ್ಕೆ ಸಂತೋಷ ಪಡಬೇಕು. ಸರ್ಕಾರದ ಪರಿಸ್ಥಿತಿಯನ್ನು ಅವರು ಅರ್ಥ ಮಾಡಿಕೊಳ್ಳಬೇಕು. ದಯವಿಟ್ಟು ಸಾರಿಗೆ ನೌಕರರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಪ್ರಿಯಾಂಕಾ ಗಾಂಧಿ ಅವರ ಜೊತೆ ಅಸ್ಸಾಂ ಭೇಟಿ ಪ್ರಿಯಾಂಕಾ ಗಾಂಧಿ ಅವರು, ನಾನು, ಭೂಪೇಶ್ ಬಘೇಲ ಅವರು ಹಾಗೂ ತಂಡ ಅಸ್ಸಾಂಗೆ ತೆರಳುತ್ತಿದ್ದೇವೆ. ಹಲವು ವಿಚಾರಗಳ ಕುರಿತು ಸರಣಿ ಸಭೆಗಳನ್ನು ನಡೆಸುತ್ತೇವೆ. ಅಸ್ಸಾಂ ಚುನಾವಣೆ ವಿಚಾರವಾಗಿ ದೆಹಲಿಯಲ್ಲಿ 3-4 ಸಭೆಗಳನ್ನು ನಡೆಸಿದ್ದೇವೆ. ಬೇಕಾದ ಮಾಹಿತಿಗಳನ್ನು ಪಡೆದುಕೊಂಡಿದ್ದೇವೆ. ತಂತ್ರಗಾರಿಕೆ ಸೇರಿದಂತೆ ಇನ್ನಿತರೇ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಾರಿ ಅಸ್ಸಾಂನಲ್ಲಿ ಬದಲಾವಣೆ ಆಗುತ್ತದೆ ಎನ್ನುವ ಭರವಸೆಯಿದೆ. ಕಾಮಾಕ್ಯ ದೇವಿ ದೇವಾಲಯಕ್ಕೂ ಭೇಟಿ ನೀಡುತ್ತೇನೆ. ಎರಡು ದಿನಗಳ ಪ್ರವಾಸ ಇದಾಗಿದೆ” ಎಂದು ಹೇಳಿದರು.
ಹಾಸನ : ಹಾಸನದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿದ ಫಾರ್ಚುನರ್ ಕಾರು ರಸ್ತೆ ಬದಿಯ ಮನೆಗೆ ನುಗ್ಗಿದ ಘಟನೆ ಹಾಸನ ತಾಲೂಕಿನ ಯಲಗುಂದ ಗ್ರಾಮದಲ್ಲಿ ಕಳೆದ ರಾತ್ರಿ ಸಂಭವಿಸಿದೆ. ಪರಿಣಾಮ ಕಾರಲ್ಲಿದ್ದ ಐದು ಜನ ಯುವಕರು ಗಾಯಗೊಂಡಿದ್ದಾರೆ. ಅತೀ ವೇಗದಲ್ಲಿ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಇದರಿಂದ ಕಾಂಪೌಂಡ್ ಹಾರಿ ಮನೆಗೆ ಕಾರು ಗುದ್ದಿದೆ. ಪರಿಣಾಮ ಮನೆಯ ಚಾವಣಿ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಘಟನೆ ಬಳಿಕ ಸ್ಥಳೀಯರು ಆಗಮಿಸಿ, ಗಾಯಾಳುಗಳನ್ನು ರಕ್ಷಿಸಿದ್ದಾರೆ.
ಬೆಂಗಳೂರು : ನಿರ್ಮಾಪಕ ಸಾರಾ ಗೋವಿಂದು ಅವರ ಮೊಬೈಲ್ ನಂಬರ್ ಹ್ಯಾಕ್ ಆಗಿದೆ. ಫೋನ್ ನಂಬರ್ ಹ್ಯಾಕ್ ಮಾಡಿದ ಹ್ಯಾಕರ್ಸ್ ಗಳು ಸಾರಾ ಗೋವಿಂದು ಅವರ ಕಾಂಟಾಕ್ಟ್ ನಲ್ಲಿ ಇದ್ದವರಿಗೆ 45 ಸಾವಿರ ಕಳುಹಿಸಲು ಮೆಸೇಜ್ ಮಾಡಿದ್ದಾರೆ. ಹೌದು ಕನ್ನಡ ಚಲನಚಿತ್ರರಂಗದ ಖ್ಯಾತ ನಿರ್ಮಾಪಕ ಸಾರಾ ಗೋವಿಂದ ಅವರ ಫೋನ್ ಅನ್ನು ಹ್ಯಾಕ್ ಮಾಡಿದ್ದಾರೆ.ಅಲ್ಲದೆ ಅವರ ಮೊಬೈಲ್ ನಲ್ಲಿ ಇರುವ ಎಲ್ಲಾ ಕಾಂಟಾಕ್ಟ್ ಗಳ ನಂಬರ್ ಗಳಿಗೆ ಮೆಸೇಜ್ ಮಾಡಿ 45,000 ಹಣ ಹಾಕುವಂತೆ ಮೆಸೇಜ್ ಮಾಡಿದ್ದಾರೆ. ಈ ಕುರಿತು ನಿರ್ಮಾಪಕ ಸಾರಾಗುವ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು ಹ್ಯಾಕರ್ಸ್ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ













