Author: kannadanewsnow05

ಬೆಂಗಳೂರು: ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಕರ್ನಾಟಕ ಪೊಲೀಸ್ ಇಲಾಖೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿಯಾಗಿ ಒಂದು ಮಹತ್ವದ ಹೆಜ್ಜೆ ಇಟ್ಟಿವೆ. ಬೆಂಗಳೂರಿನ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ನೆಲೆಸಿದ್ದ 272 ಬಾಂಗ್ಲಾದೇಶಿ ಪ್ರಜೆಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿ, ಅವರನ್ನು ಅವರ ಸ್ವದೇಶಕ್ಕೆ ಗಡಿಪಾರು (Deportation) ಮಾಡಲಾಗಿದೆ. ಇದು ದೇಶದ ಇತರೆ ನಗರಗಳಿಗೆ ಹೋಲಿಸಿದರೆ ಅತ್ಯಂತ ದೊಡ್ಡ ಮಟ್ಟದ ಗಡಿಪಾರು ಪ್ರಕ್ರಿಯೆ ಎಂದು ಗುರುತಿಸಲ್ಪಟ್ಟಿದೆ. ಕಾರ್ಯಾಚರಣೆಯ ಹಿನ್ನೆಲೆ ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನ ಐಟಿ ಹಬ್‌ಗಳು, ನಿರ್ಮಾಣ ಪ್ರದೇಶಗಳು ಮತ್ತು ಕಸ ವಿಲೇವಾರಿ ಘಟಕಗಳ ಸುತ್ತಮುತ್ತ ಅಕ್ರಮ ವಲಸಿಗರು ನೆಲೆಸಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಸಿಸಿಬಿ (CCB) ಮತ್ತು ಸ್ಥಳೀಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು. ಈ ಪೈಕಿ 178 ಪುರುಷರು, 94 ಮಹಿಳೆಯರು ಮತ್ತು 12 ಮಕ್ಕಳು ಸೇರಿದ್ದಾರೆ. ಎಲ್ಲರನ್ನು ಪೊಲೀಸರು ಪತ್ತೆ ಮಾಡಿ ಒಟ್ಟಿಗೆ ಗಡಿಪಾರು ಮಾಡಿದ್ದಾರೆ. ಜೊತೆಗೆ…

Read More

ಬೆಂಗಳೂರು : ಇಂದು ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆ ಇದು ಈ ಹಿನ್ನೆಲೆ ಜನರಿಗೆ ಎಚ್ಚರದಿಂದ ಇರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ವಿಜಯಪುರ, ವಿಜಯನಗರ, ದಾವಣಗೆರೆ, ಬಳ್ಳಾರಿ, ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯ ಮುನ್ಸೂಚನೆಯಿದ್ದು ಎಚ್ಚರಿಕೆ ವಹಿಸುವಂತೆ ಜನರಿಗೆ ಸೂಚಿಸಲಾಗಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ…

Read More

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಕೊಲೆ ನಡೆದಿದ್ದು ರಾಜಸ್ಥಾನ್ ಮೂಲದ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ವರ್ತೂರು ಪೊಲೀಸ್ ಠಣ ವ್ಯಾಪ್ತಿಯಲ್ಲಿ ಈ ಒಂದು ಕೊಲೆ ನಡೆದಿದ್ದು, ತಡರಾತ್ರಿ ದಲ್ರಾಮ್ ಎನ್ನುವ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ರಾಜಸ್ಥಾನದಲ್ಲಿ ದಲ್ರಾಮ್ ಕೌಟುಂಬಿಕ ಕಲಹ ಹೊಂದಿದ್ದ. ಬೆಂಗಳೂರಿನಲ್ಲಿ ಮಾತನಾಡಲು ಬಂದು ಕೊಲೆಯಾಗಿದ್ದಾನೆ. ಗ್ಯಾಸ್ ಅಂಗಡಿ ಬಳಿಗೆ ದಲ್ರಾಮ್ ನನ್ನ ಕರೆಸಿಕೊಂಡು ದುಷ್ಪರ್ಮಿಗಳು ಕೊಲೆ ಮಾಡಿದ್ದಾರೆ ಕಾರಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳು ದಲ್ರಾಮ್ ನನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ವಿಜಯಪುರ : ವಿಜಯಪುರದಲ್ಲಿ ಘೋರವಾದ ಘಟನೆ ಒಂದು ನಡೆದಿದ್ದು ಮದುವೆಗೆ ಹೆಣ್ಣು ಸಿಗಲಿಲ್ಲ ಎಂದು ಮನನ್ನೊಂದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಚಿಮ್ಮಲಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಶಂಕರ ತಳವಾರ (25) ಎಂದು ತಿಳಿದು ಬಂದಿದೆ. ಎರಡು ವರ್ಷದ ಹಿಂದೆ ಮದುವೆ ನಿಶ್ಚಯವಾಗಿ ಹಾಗೂ ಮದುವೆ ಮುರಿದು ಬಿದ್ದಿತ್ತು. ಬಳಿಕ ಎಷ್ಟೇ ಹುಡುಕಿದರೂ ಕೂಡ ಹೆಣ್ಣು ಸಿಗದಕ್ಕೆ ಶಂಕರ್ ನೊಂದು ಇಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಮೀನಿನಲ್ಲಿ ಕುರಿಗಾಹಿ ಯುವಕ ಶಂಕರ್ ನೇಣಿಗೆ ಶರಣಾಗಿದ್ದಾನೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಾಗಲಕೋಟೆ : ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಮಾಂಸ ತಿನ್ನುವ ವಿಚಾರಕ್ಕೆ ಹೇಳಿಕೆ ನೀಡಿದ್ದು ಇದಕ್ಕೆ ಸಿಎಂ ಸಿದ್ದರಾಮಯ್ಯ ಯುಗಾದಿ ಹಬ್ಬ, ದೀಪಾವಳಿ ಹಬ್ಬದಂದು ನಾನು ಮಾಂಸ ತಿನ್ನುತ್ತೇನೆ. ನಾನು ಮಾಂಸ ತಿನ್ನುವುದು ನಿಜ ಅದರಲ್ಲಿ ತಪ್ಪೇನಿದೆ ಎಂದು ಬಿಜೆಪಿಯ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಪ್ರತಾಪ್ ಸಿಂಹ ಹೇಳಿದ್ದೇನು? ಸಿದ್ದರಾಮಯ್ಯ ಯುಗಾದಿ ಹಬ್ಬದಂದೂ ಮಾಂಸ ತಿಂತೀನಿ ಅಂತಾರೆ. ಸಿದ್ರಾಮಣ್ಣ ನೀನು ಮಾಂಸನಾದ್ರೂ ತಿನ್ನು, ಸುನ್ನತ್​​ ಆದರೂ ಮಾಡಿಕೋ, ಏನ್ಬೇಕಾದರೂ ಮಾಡು ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ನೀನು ಯುಗಾದಿ, ದೀಪಾವಳಿ ಹಬ್ಬಕ್ಕೆ ಮಾಂಸ ತಿಂತೀನಿ ಅಂದರೆ 15% ಮುಸ್ಲಿಮರನ್ನು ಓಲೈಸಲು ಹಿಂದೂಗಳ ಭಾವನೆಗೆ ಧಕ್ಕೆ ತಂದಂತೆ. 85% ಹಿಂದೂಗಳಿದ್ದರೂ ಹರಿದು ಹಂಚಿ ಹೋಗಿದ್ದಾರೆ. ಗೌಡ, ಲಿಂಗಾಯತ, ಕುರುಬ, ವಾಲ್ಮೀಕಿ, ದಲಿತರು ವಿಭಜನೆಯಾಗಿದೆ. ಹಿಂದೂಗಳು ಉಳಿಯಬೇಕು ಅಂದ್ರೆ ಒಗ್ಗಟ್ಟಾಗಬೇಕು ಎಂದು ಹೇಳಿದ್ದಾರೆ.

Read More

ಹುಬ್ಬಳ್ಳಿ : ಲವ್ ಜಿಹಾದ್ ಪ್ರಕರಣದಲ್ಲಿ ಜಿಮ್ ಟ್ರೈನರ್ ಬಂಡವಾಳ ಬಗೆದಷ್ಟು ಬಯಲಾಗುತ್ತಿದೆ. ಇದೀಗ ಸಂತ್ರಸ್ತೆಗೆ ಸಮೀರ್ 8 ರಿಂದ 10 ಬಾರಿ ಗರ್ಭಪಾತದ ಮಾತ್ರೆ ನೀಡಿದ್ದ ಎಂದು ತಿಳಿದುಬಂದಿದೆ. ಪೊಲೀಸರು ಸಮೀರ್ ಮೊಬೈಲ್‌ನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದಾಗ ಮತ್ತಷ್ಟು ಬಯಲಾಗಿದೆ. ಮೊಬೈಲ್‌ನಲ್ಲಿ ಕೆಲ ರೋಚಕ ವಿಡಿಯೋಗಳು, ಯುವತಿಯರೊಂದಿಗಿನ ವಾಟ್ಸಪ್ ಚಾಟ್‌ಗಳು ಪತ್ತೆಯಾಗಿದೆ. ಮೊಬೈಲ್‌ನಲ್ಲಿ ಸಂತಸ್ತೆ ಗರ್ಭಪಾತದ ಮಾತ್ರೆ ತೆಗೆದುಕೊಳ್ಳುತ್ತಿರುವ ವಿಡಿಯೋ ಕೂಡ ಸಿಕ್ಕಿವೆ. ಸಮೀರ್ ಪ್ರತಿ ಸಾರಿ ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಗರ್ಭಪಾತ ಮಾತ್ರೆ ಕೊಡಿಸುತ್ತಿದ್ದ. ಒಂದು ವೇಳೆ ನಿರಾಕರಿಸಿದ್ದರೆ ಒತ್ತಡ ಹೇರುತ್ತಿದ್ದ. ಅದಕ್ಕಾಗಿ ಮಾತ್ರೆ ತೆಗೆದುಕೊಳ್ಳುವಾಗ ವಿಡಿಯೋ ಮಾಡಿ ಕಳಿಸುವಂತೆ ಸಂತ್ರಸ್ತೆಗೆ ಸೂಚಿಸಿದ್ದ. ಇದೇ ರೀತಿ 8 ರಿಂದ 10 ಸಾರಿ ಗರ್ಭಪಾತದ ಮಾತ್ರೆ ನೀಡಿದ್ದ ಎನ್ನುವುದು ಮೊಬೈಲ್‌ನಿಂದ ಬಲಯಾಗಿದೆ. ಇನ್ನು ಸಂತ್ರಸ್ತೆ ಯುವತಿ ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನ ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಮತ್ತು ಬರೋ…

Read More

ಹುಬ್ಬಳ್ಳಿ : ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿಯ ತಾಯಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ಸಹೋದರಿ ತೈಸಿನ್ ಸೇರಿದಂತೆ 6 ಜನರ ವಿರುದ್ಧ ದೂರು ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನ ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ. ಬಳಿಕ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ವಿಡಿಯೋ ಮಾಡಿಟ್ಟುಕೊಂಡು ಬೆದರಿಕೆ ಹಾಕಿದ್ದ. ಇದಾದ ಬಳಿಕ ಬೆದರಿಕೆ ಹಾಕಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಸದ್ಯ ಯುವತಿಯ ದೂರಿನ ಆಧಾರದ ಮೇಲೆ ಸಮೀರ್ ವಿರುದ್ಧ ಬಿಎನ್‌ಎಸ್ 64(1), 351, 123 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ದೂರಿನ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸದ್ಯ ಸಮೀರ್ ಹುಬ್ಬಳ್ಳಿಯ…

Read More

ಹಾವೇರಿ : ಹಾವೇರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಶಿಡೆನ್ನೂರಲ್ಲಿ ನಡೆದಿದೆ. ವಿದ್ಯುತ್ ಪ್ರವಹಿಸಿ ಅಭಿಷೇಕ ತೆವರಿ (22) ಎನ್ನುವ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನಪ್ಪಿದ್ದಾನೆ. ಹೊಸ ಮನೆಯಲ್ಲಿ ಫ್ಯಾನ್ ಅಳವಡಿಸುವ ವೇಳೆ ಈ ಒಂದು ದುರ್ಘಟನೆ ಸಂಭವಿಸಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ : ಲವ್ ಜಿಹಾದ್ ಕೇಸಲ್ಲಿ ಜಿಮ್ ಟ್ರೈನರ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಮೀರ್ ವಿರುದ್ಧ ಸಂತ್ರಸ್ತೆ ಇದೀಗ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ಸಂತ್ರಸ್ತ ಯುವತಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಸಮೀರ್ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಾರೆ. ನಾನು ಜಿಮ್‌ಗೆ ಹೋಗುವಾಗ ಸಮೀರ್ ಪರಿಚಯವಾಗಿದ್ದ. 2025ರ ಆ.16ರಂದು ನನ್ನ ಮನೆಗೆ ಕರೆಸಿಕೊಂಡಿದ್ದ. ಆ ವೇಳೆ ಜ್ಯೂಸ್‌ನಲ್ಲಿ ಮತ್ತು ಬರೋ ಪದಾರ್ಥ ಹಾಕಿ ನನಗೆ ಕುಡಿಸಿದ್ದ. ಬಳಿಕ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದನ್ನು ವಿಡಿಯೋ ಮಾಡಿಟ್ಟುಕೊಂಡು ಬೆದರಿಕೆ ಹಾಕಿದ್ದ. ಇದಾದ ಬಳಿಕ ಬೆದರಿಕೆ ಹಾಕಿ ಮತ್ತೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿದ್ದಾರೆ. ಸದ್ಯ ಯುವತಿಯ ದೂರಿನ ಆಧಾರದ ಮೇಲೆ ಸಮೀರ್ ವಿರುದ್ಧ ಬಿಎನ್‌ಎಸ್ 64(1), 351, 123 ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ದೂರಿನ ಹಿನ್ನೆಲೆ ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಸದ್ಯ ಸಮೀರ್ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನೂ…

Read More

ಮಹಾರಾಷ್ಟ್ರ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲ್ಲೂಕಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಶಿವಾಜಿನಗರ ಪ್ರದೇಶದ ರಾಜ್ ಬ್ಯಾಂಕ್ವೆಟ್ ಹಾಲ್​ನಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಸ್ನೇಹ ಸಮ್ಮೇಳನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಕೂಡ ಭಾಗಿಯಾಗಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಕಾರ್ಯಕ್ರಮ ಮುಗಿದ ನಂತರ, ದಿಂಡೋರಿಯ ದರ್ಗೋಡ್ ಕುಟುಂಬವು ಎರ್ಟಿಗಾ ಕಾರಿನಲ್ಲಿ ಮನೆಗೆ ತೆರಳುವಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಭೀಕರ ದುರಂತದಲ್ಲಿ ಒಂದೇ ಕುಟುಂಬದ 9 ಜನ ಸಾವನ್ನಪ್ಪಿದ್ದಾರೆ. ಮೃತರನ್ನು ರೇಷ್ಮಾ ಸುನಿಲ್ ದರ್ಗುಡೆ (27), ಆಶಾ ಅನಿಲ್ ದರ್ಗುಡೆ (32), ಖುಷಿ/ಶ್ರಿಷ್ಟಿ ಅನಿಲ್ ದರ್ಗುಡೆ (14), ಶ್ರೇಯಸ್ ಅನಿಲ್ ದರ್ಗುಡೆ (11), ರಾಖಿ/ಗುಣವಂತಿ ಸುನಿಲ್ ದರ್ಗುಡೆ, ಶ್ರಾವಣಿ ಅನಿಲ್ ದರ್ಗುಡೆ (11), ಸಮೃದ್ಧಿ ರಾಜೇಂದ್ರ ದರ್ಗುಡೆ (7), ಮಾಧುರಿ ಅನಿಲ್ ದರ್ಗುಡೆ…

Read More