Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : ಮೊದಲ ಬಾರಿಗೆ ರಾಜ್ಯಾದ್ಯಂತ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ಹಾಗೂ 15 ಜಿಲ್ಲೆಗಳಲ್ಲಿ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಯನ್ನು ಸೆಪ್ಟಂಬರ್ 15ರಿಂದ ಆರಂಭಿಸಿ, 45 ಕಚೇರಿ ಕೆಲಸದ ದಿನಗಳಲ್ಲಿ ಮುಕ್ತಾಯಗೊಳಿಸಲಾಗುತ್ತದೆ. ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಪೂರ್ವ ತಯಾರಿ ಮಾಡಿಕೊಂಡಿದ್ದು, ಮೊಬೈಲ್ ಆ್ಯಪ್ ಮೂಲಕ ಟ್ರಾನ್ಸ್ಜೆಂಡರ್ಸ್ ಸಮೀಕ್ಷೆ ನಡೆಯಲಿದೆ. ಇದಕ್ಕಾಗಿ KARMANI ವೆಬ್ ಅಪ್ಲಿಕೇಶನ್ ಸಿದ್ಧಪಡಿಸಲಾಗಿದೆ. ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆಗೆ ಸೇವಾ ಸಿಂಧು ಮೂಲಕ ಮಾಜಿ ದೇವದಾಸಿ ಮಹಿಳೆಯರ ಮರುಸಮೀಕ್ಷೆ ವೆಬ್ ಅಪ್ಲಿಕೇಶನ್ ರೆಡಿ ಮಾಡಲಾಗಿದೆ. ಈ ಮೂಲಕ ಪ್ರತ್ಯೇಕವಾಗಿ ಎರಡು ಸಮೀಕ್ಷೆ ಕೈಗೊಳ್ಳಲಾಗುತ್ತದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ವಿವರಿಸಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಈ ಸಂಬಂಧ ಪ್ರಕಟಣೆ ಹೊರಡಿಸಿದ್ದಾರೆ. ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಈ ಸಮೀಕ್ಷೆ ನಡೆಯಲಿದೆ.…
ಹಾಸನ : ಹಾಸನದ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದಿರುವ ದುರಂತ ನಿಜಕ್ಕೂ ದುರಾದೃಷ್ಟಕರ. ಟ್ರಕ್ ಚಾಲಕ ಭುವನೇಶ್ ಎಂಬಾತನ ನಿರ್ಲಕ್ಷ್ಯವೇ ಈ ದುರಂತಕ್ಕೆ ಮುಖ್ಯ ಕಾರಣ. ಈಗಾಗಲೇ ಆತನ ವಿರುದ್ಧ ಗೋರೂರ್ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದರು. ಅಲ್ಲದೆ, ಜನರಿಂದ ತೀವ್ರ ಥಳಿತಕ್ಕೊಳಪಟ್ಟವನಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ವಿರುದ್ಧ ಎಲ್ಲಾ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ಸಮಯದಲ್ಲಿ ಟ್ರಕ್ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಸಮಾಜದಲ್ಲಿ ಅಶಾಂತಿಗೆ ಕಾರಣವಾಗುವ ಇಂತಹ ದುರ್ವರ್ತನೆಯೂ ಸಹ ಕಾನೂನು ರೀತಿಯ ಅಪರಾಧವಾಗಿದ್ದು, ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದ…
ಮೈಸೂರು : ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದರು. ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಹಾಸನ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರಿಗೆ ಮೃತರ ಸಂಬಂಧಿಕರನ್ನು ಭೇಟಿ ಮಾಡಿ ಪರಿಹಾರ ಘೋಷಣೆ ಮಾಡುವಂತೆ ಸೂಚಿಸಿದ್ದೇನೆ ಎಂದರು. ಆರ್ಥಿಕವಾಗಿ ಹಿಂದುಳಿದಿದ್ದಾರೆ ಎಂದೇ ಪರಿಹಾರ ನೀಡಿದೆ ಸತ್ತವರು ಹೆಚ್ಚಾಗಿ…
ಮೈಸೂರು : ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮದ್ದೂರು ಠಾಣೆಯಲ್ಲಿ ಬಿಜೆಪಿ ನಾಯಕರು ವಿರುದ್ಧ ಎಫ್‌ಐಆರ್ ದಾಖಲು ಮಾಡಿರುವ ವಿಚಾರವಾಗಿ ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಯಶೋದನಕಾರಿ ಭಾಷಣ ಮಾಡಿದವರನ್ನು ಸುಮ್ಮನೆ ಬಿಡಬೇಕಾ ಅಂತ ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು ದಾಖಲಿಸಿರುವುದು ಹಿಂದೂಗಳ ಟಾರ್ಗೆಟ್ ಅಲ್ಲ. ನಾನು ಕೂಡ ಹಿಂದೂ ನನ್ನ ಹೆಸರಿನಲ್ಲೇ ಎರಡು ದೇವರು ಇವೆ. ಸಿದ್ದ ಎಂದರೆ ಈಶ್ವರ ರಾಮ ಎಂದರೆ ವಿಷ್ಣು. ಪ್ರಚೊಧನಕಾರಿ ಭಾಷಣ ಮಾಡಿದವರನ್ನು ಸುಮ್ಮನೆ ಬಿಡಲಾಗುತ್ತದಾ? ಸಮಾಜದ ಶಾಂತಿಗೆ ಭಂಗ ತಂದವರ ವಿರುದ್ಧ ಕ್ರಮ ಕೈಗೊಳ್ಳುವುದು ತಪ್ಪಲ್ಲ. ಪೊಲೀಸರು ನಿಯಮದ ಪ್ರಕಾರ ಅವರ ಮೇಲೆ ಕೇಸ್ ಹಾಕಿದ್ದಾರೆ ಇದರಲ್ಲಿ ರಾಜಕೀಯ ಎಲ್ಲಿದೆ ಹಿಂದುಗಳ ಟಾರ್ಗೆಟ್ ಅಂದರೆ ಹೇಗೆ ಎಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇನ್ನು ಹಾಸನದಲ್ಲಿ ಗಣಪತಿ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 9 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ…
ಹಾಸನ : ನಿನ್ನೆ ತಡರಾತ್ರಿ ಹಾಸನ ಮೈಸೂರು ರಸ್ತೆ ರಾಷ್ಟ್ರೀಯ ಹೆದ್ದಾರಿ 373 ರ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರಕ್ ಹರಿದು 9 ಜನ ಮೃತಪಟ್ಟಿದ್ದಾರೆ. ದುರಂತಕ್ಕೆ ಟ್ರಕ್ ಚಾಲಕ ಭುವನ್ ಅವರ ಬೇಜವಾಬ್ದಾರಿ ತನವೇ ಕಾರಣ. ಅಲ್ಲದೆ, ಈ ಭಾಗದಲ್ಲಿ ರಸ್ತೆಯನ್ನು ವೈಜ್ಞಾನಿಕವಾಗಿ ನಿರ್ಮಿಸಿಲ್ಲ, ಹೀಗಾಗಿ ರಸ್ತೆಯನ್ನು ಮತ್ತಷ್ಟು ಅಗಲೀಕರಣ ಮಾಡಬೇಕು ಎಂಬ ಕೂಗೂ ಹಿಂದಿನಿಂದಲೂ ಕೇಳಿಬರುತ್ತಿದೆ. ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸರ್ಕಾರದ ಪರವಾಗಿ ನಾನು ಹಾಗೂ ಹಾಸನ ಜಿಲ್ಲೆ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರೂ ಸಹ ಪತ್ರ ಬರೆಯಲಿದ್ದಾರೆ. ಅಲ್ಲದೆ, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೂ ಪರಿಹಾರ ನೀಡಬೇಕಿದೆ. ಈ ಬಗ್ಗೆ ಪತ್ರದಲ್ಲಿ ಒತ್ತಾಯಿಸಲಾಗುತ್ತೆ ಎಂದು ತಿಳಿದುಬಂದಿದೆ. ಈಗಾಗಲೇ ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಆದಂತಹ ಕೃಷ್ಣ ಭೈರೇಗೌಡ ಅವರು ಭೇಟಿ ನೀಡಿದ್ದಾರೆ ಈ ವೇಳೆ ಸ್ಥಳೀಯರು ಭಟ್ಟವರು ಎಲ್ಲರೂ ಕೂಡ ಬಡವರಾಗಿದ್ದು…
ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯಲಿರುವ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿಮೇಳದ ಮೊದಲ ದಿನವೇ ದುರಂತವೊಂದು ಸಂಭವಿಸಿದೆ. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಅವಘಡ ನಡೆದು ಓರ್ವ ಮೃತಪಟ್ಟಿದ್ದಾನೆ. ತುಮಕೂರು ಮೂಲದ ಪರಶುರಾಮ (32) ಮೃತ ವ್ಯಕ್ತಿ. ಇಂದಿನಿಂದ ನಡೆಯುವ ಕೃಷಿ ಮೇಳದ ಪ್ರದರ್ಶನಕ್ಕೆ ಟ್ರ್ಯಾಕ್ಟರ್ ತಂದಿದ್ದರು. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ನಿಯಂತ್ರಣ ತಪ್ಪಿ ಪರಶುರಾಮನ ಮೈಮೇಲೆ ಬಿದ್ದು, ಸ್ಥಳದಲ್ಲೇ ಅಸುನೀಗಿದ್ದಾನೆ. ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಿನ್ನೆ ರಾತ್ರಿ ಯುವಕರ ನಡುವೆ ಕ್ಷುಲ್ಲಕ್ಕೆ ಕಾರಣಕ್ಕೆ ಜಗಳವಾಗಿದ್ದು, ಈ ವೇಳೆ ಯುವಕನೋರ್ವನ ಕೈಗೆ ಚಾಕುವಿನಿಂದ ಇರಿಯಲಾಗಿದೆ.ಗಾಯಗೊಂಡ ಯುವಕನನ್ನಿ ಸುಪ್ರೀತ್ ಎಂದು ತಿಳಿದುಬಂದಿದೆ. ಸದ್ಯ ಚಾಕು ಇರಿದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಎಲ್ ಐಸಿ ಕಚೇರಿ ಸಮೀಪ ಕಳೆದ ರಾತ್ರಿ ಘಟನೆ ನಡೆದಿದೆ. ಸ್ಥಳಕ್ಕೆ ಅಡಿಷನಲ್ ಎಸ್ಪಿ ರಮೇಶ್ ಕುಮಾರ್ ಭೇಟಿ ನೀಡಿದ್ದು, ತನಿಖೆ ನಡೆಯುತ್ತಿದೆ.
ಮಂಡ್ಯ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಕೆಪಿಸಿಸಿ ವಕ್ತಾರ ಎಲ್.ಆರ್. ಶಿವರಾಮೇಗೌಡ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿ ಗಲಾಟೆ ಮಾಡಲೆಂದು ಕಾಯುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಗಣೇಶ ಗಲಾಟೆಗೆ ಬಿಜೆಪಿ ಕಿತಾಪತಿ ನಡೆಸಿದೆ. ಮಂಡ್ಯದಲ್ಲಿ ಬಿಜೆಪಿ ವಿಜೃಂಭಿಸುತ್ತಿದ್ದು ಜೆಡಿಎಸ್ ಪಕ್ಷವು ಮಾಯವಾಗಿದೆ ಎಂದು ಶಿವರಾಮೇಗೌಡ ಬಿಜೆಪಿ ಜೆಡಿಎಸ್ ವಿರುದ್ದ LRS ವ್ಯಂಗ್ಯವಾಡಿದರು. ಮದ್ದೂರಿನಲ್ಲಿ ನಡೆದಿರುವ ಗಣೇಶನ ಗಲಾಟೆ ವಿಷಾದನೀಯ. ಬಿಜೆಪಿಯವರಿಗೆ ರಾಜ್ಯದಲ್ಲಿ ಗಣೇಶ ಮೂರ್ತಿಯ ಗಲಾಟೆಯನ್ನೇ ಕಾಯುತ್ತಿದ್ದಾರೆ. ಬಿಜೆಪಿಯವರಿಗೆ ಮೊದಲೇ ಅಧಿಕಾರ ಇಲ್ಲ ಎಂದು ವಾಗ್ದಾಳಿ ನಡೆಸಿದರು. ದಯಮಾಡಿ ನಮ್ಮ ಮಂಡ್ಯ ಜಿಲ್ಲೆಯನ್ನು ಹಾಳು ಮಾಡಬೇಡಿ. ಒಂದು ಸಣ್ಣ ಗಲಾಟೆಗೆ ರಾಜ್ಯದ ಮಹಾನ್ ಲೀಡರ್ ಗಳು ಪದೇ ಪದೇ ಬಂದು ಉದ್ರೇಕ ಭಾಷಣ ಮಾಡ್ತಾರೆ. ಹಿಂದೂ ಮತ್ತು ಮುಸ್ಲಿಂ ಜನಾಂಗವನ್ನು ಹೆಚ್ಚು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದೇನೆ.…
ಬೆಂಗಳೂರು ಸೆ13: ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸಂಭವಿಸಿದ ಭೀಕರ ಅಪಘಾತದ ಹಿನ್ನೆಲೆಯಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು ನೀಡಿದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.ಘಟನೆ ನಡೆದ ಕ್ಷಣದಿಂದ ರಾತ್ರಿಯಿಡೀ ಅಧಿಕಾರಿಗಳ ತಂಡ-ವೈದ್ಯರ ತಂಡಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರು ತೀವ್ರ ನಿಗಾ ವಹಿಸಿದ್ದಾರೆ. ಮೃತರ ಕುಟುಂಬಗಳ ಜೊತೆ ಸತತ ಸಂಪರ್ಕದಲ್ಲಿದ್ದ ಅಧಿಕಾರಿಗಳು ಮೃತರ ಮರಣೋತ್ತರ ಪರೀಕ್ಷೆ ರಾತ್ರಿಯೇ ನಡೆಯಲು ಬೇಕಾದ ಅಗತ್ಯ ಕ್ರಮ ಕೈಗೊಂಡರು. ವೈದ್ಯರ ತಂಡ ಬೆಳಗಾಗುವವರೆಗೂ ಕಾಯದೇ ರಾತ್ರಿಯೇ ಮರಣೋತ್ತರ ಪರೀಕ್ಷೆ ಮತ್ತು ಕಾನೂನು ಪ್ರಕ್ರಿಯೆ ಮುಗಿಸಿ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದೆ. ಗಾಯಾಳುಗಳ ಚಿಕಿತ್ಸೆಗೆ ಖುದ್ದಾಗಿ ಜಿಲ್ಲಾ ವೈದ್ಯಾಧಿಕಾರಿಗಳೇ ಉಸ್ತುವಾರಿ ವಹಿಸಿದ್ದು, ಅಗತ್ಯ ವೈದ್ಯರ ತಂಡವನ್ನು ರಚಿಸಿದ್ದಾರೆ. ಅಗತ್ಯವಾದ ಎಲ್ಲಾ ಆಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ.ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ವೈದ್ಯಾಧಿಕಾರಿಯವರ ಜೊತೆ ನಿರಂತರ ಸಂಪರ್ಕದಲ್ಲಿರುವ ಉಸ್ತುವಾರಿ ಸಚಿವರು ಆಸ್ಪತ್ರೆಗಳಿಗೆ…
ಹಾಸನ : ನಿನ್ನೆ ಹಾಸನದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಗಣೇಶ ಮೆರವಣಿಗೆಯ ವೇಳೆ ನಿಯಂತ್ರಣ ಕಳೆದುಕೊಂಡ ಕ್ಯಾಂಟರ್ ಒಂದು ಏಕಾಏಕಿ ನುಗ್ಗಿದೆ ಈ ಒಂದು ಘಟನೆ ಹಿನ್ನೆಲೆ 9 ಜನರು ಸಾವನ್ನಪ್ಪಿದ್ದು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅದರಲ್ಲೂ ಮೃತಪಟ್ಟರಲ್ಲಿ ಆರು ಜನ ವಿದ್ಯಾರ್ಥಿಗಳೇ ಆಗಿದ್ದು, ಇನ್ನು ಉಳಿದ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ 17 ಜನರಿಗೆ ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟರ್ ಹರಿದ ಘಟನೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿದ್ದಾರೆ. ಶಾಂತಿಗ್ರಾಮದಿಂದ ದುರಂತ ನಡೆದ ಸ್ಥಳಕ್ಕೆ ಕೃಷ್ಣಭರೇಗೌಡ ಭೇಟಿ ನೀಡಿದ್ದು ದುರಂತ ನಡೆದ ಸ್ಥಳವನ್ನು ಸಚಿವರು ಪರಿಶೀಲನೆ ಮಾಡಿದರು. ಪರಿಶೀಲನೆಯ ಬಳಿಕ ಸಚಿವರು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.










