Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ‘ಫಿಕ್ಸಿಸ್’ ಎನ್ನುವ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಸಿಸಿಬಿ ಸ್ಪಾ ಮೇಲೆ ದಾಳಿ ಮಾಡಿದೆ. ಬೆಂಗಳೂರಿನ ರಿಚ್ಮಂಡ್ ಟೌನ್ ನಲ್ಲಿರುವ ಫಿಕ್ಸಿಸ್ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸಿಸಿಬಿ ದಾಳಿ ವೇಳೆ ಬಾಂಗ್ಲಾದೇಶದ ಅಜಯಶೂರ ಜಿಲ್ಲೆಯ ಕುಲ್ನ ಪ್ರದೇಶದ ಯುವತಿ ಪತ್ತೆಯಾಗಿದ್ದಾಳೆ. ಫಿಕ್ಸಿಸ್ ಸ್ಪಾನಲಿ ಸಿಸಿಬಿ ಅಧಿಕಾರಿಗಳು ಇದೀಗ ದಾಳಿ ಪರಿಶೀಲನೆ ನಡೆಸುತ್ತಿದ್ದಾರೆ. ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ಈ ಒಂದು ದಾಳಿ ನಡೆದಿದೆ.
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಅರಣ್ಯ ಪ್ರದೇಶದ ಓಂಕಾರ ಅರಣ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಹುಲಿ ದಾಳಿಗೆ ಪುಟ್ಟಮ (45) ಎನ್ನುವ ಮಹಿಳೆ ಬಲಿಯಾಗಿದ್ದಾರೆ. ಕುರಿ ಮೇಯಿಸಲು ತೆರಳಿದ ವೇಳೆ ದೇಶಿಪುರ ಕಾಲೋನಿಯ ಪುಟ್ಟಮ್ಮ ಬಲಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೇಶಿಪುರದ ಪುಟ್ಟಮ್ಮರನ್ನು ಹುಲಿ ಕೊಂದು ಸ್ವಲ್ಪದೂರು ಎಳೆದೊಯ್ದಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಕೋಲಾರ : ಮಾವಿನ ಬಲೆ ತೀವ್ರವಾಗಿ ಕುಸಿತಗೊಂಡಿದ್ದರಿಂದ ವ್ಯಾಪಾರಿ ಒಬ್ಬರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಮಾವಿನ ತೋಟದಲ್ಲಿ ಕಟಾವು ಮಾಡುವ ವೇಳೆ ವ್ಯಾಪಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದ ಮಾವಿನ ತೋಟದಲ್ಲಿ ಈ ಒಂದು ಘಟನೆ ನಡೆದಿದ್ದು, ಹೃದಯಘಾತದಿಂದ ಮೊಹಮ್ಮದ್ ಶಫಿವುಲ್ಲಾ ಅಲಿಯಾಸ್ ಅನ್ವರ್ (55) ಸಾವನ್ನಪ್ಪಿದ್ದಾರೆ. ಮೃತ ಅನ್ವರ್ ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ನಿವಾಸಿ ಎನ್ನಲಾಗಿದ್ದು, ಸುಮಾರು 30 ಲಕ್ಷ ರೂಪಾಯಿ ಮಾವಿನ ವಹಿವಾಟು ಮಾಡಿದ್ದರು. ಇಂದು ಮಾವಿನ ಬೆಳೆ ಮತ್ತಷ್ಟು ಕುಸಿತ ಸುದ್ದಿ ತಿಳಿದು ತೀವ್ರ ಹೃದಯಘಾತವಾಗಿದೆ. ಬೆಲೆ ಕುಸಿತದಿಂದ ಬೆಳೆಗೆ ಔಷಧಿ ಸಿಂಪಡಿಸಿದ್ದರು. ಅದರ ದುಡ್ಡು ಸಹ ಬಾರದೇ ಸಂಕಷ್ಟ ಅನುಭವಿಸಿದ್ದರು. ಸಹ ದುಡ್ಡು ಬಾರದೇ ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಮಾವಿನ ತೋಟದಲ್ಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಮಾವಿನ ಬೆಳೆಗೆ ಬೆಂಬಲ ಬೆಲೆ 18 ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಸರ್ಕಾರದ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ…
ಬೆಂಗಳೂರು : ಇಸ್ರೇಲ್ ಹಾಗೂ ಇರಾನ್ ನಡುವೆ ತೀವ್ರ ಯುದ್ಧ ನಡೆಯುತ್ತಿದೆ. ಎರಡು ದೇಶಗಳ ನಡುವೆ ಮಿಸೈಲ್ ಡ್ರೋನ್ ವಾರ್ ನಡೆಯುತ್ತಿದ್ದು, ಜನಸಾಮಾನ್ಯರು ದಾಳಿಗೆ ತುತ್ತಾಗಿದ್ದಾರೆ. ಇಂತಹ ಆತಂಕದ ಪರಿಸ್ಥಿತಿಯ ನಡುವೆ ಇಸ್ರೇಲ್ನ ಟೆಲ್ ಅವೀವ್ನಲ್ಲಿ 18 ಮಂದಿ ಕನ್ನಡಿಗರು ಸಿಲುಕಿಕೊಂಡಿದ್ದರು. ಇಂದು 18 ದಿನ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಹೌದು ಇಸ್ರೇಲ್ ಅಲ್ಲಿ ಸಿಲುಕಿದ್ದ 18 ಜನ ಕನ್ನಡಿಗರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಕುವೈತ್ ನಿಂದ ಮುಂಬೈಗೆ ಬಂದು ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ್ದಾರೆ. ಸಂಜೆ 5 ಗಂಟೆಗೆ ಏರ್ ಇಂಡಿಯಾ ವಿಮಾನದಲ್ಲಿ 18 ಜನ ಕನ್ನಡಿಗರು ಇದೀಗ ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 18 ಜನ ಕನ್ನಡಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್ ಆಗಿದ್ದಾರೆ.
ಬೆಂಗಳೂರು : 18 ವರ್ಷಗಳ ನಂತರ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದ ಖುಷಿ RCB ಅಭಿಮಾನಿಗಳಿಗೆ ಬಹಳ ದಿನ ಉಳಿಯಲಿಲ್ಲ. ಏಕೆಂದರೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಜನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ನೀಡಿದ್ದಾರೆ. ಹೌದು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಎಂ, ಡಿಸಿಎಂ ಸೇರಿದಂತೆ ಐಎಎಸ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್, ಡಾ. ಶಾಲಿನಿ ರಜನೀಶ್, ಸತ್ಯವತಿ, ಕೆಎಸ್ ಸಿಎ, ಆರ್ ಸಿಬಿ, ಸಸ್ಪೆಂಡ್ ಆದ ಪೊಲೀಸ್ ಅಧಿಕಾರಿ ದಯಾನಂದ್, ವಿಕಾಸ್ ಕುಮಾರ್, ಶೇಖರ್ ತೆಕ್ಕಣನವರ್, ವಿಧಾನಸೌಧ ಡಿಸಿಪಿ ಕರಿಬಸನಗೌಡ ಸೇರಿ ಹಲವರ ವಿರುದ್ಧ ದೂರು ನೀಡಿದ್ದಾರೆ. ಕಳೆದ ಜೂನ್ 4 ರಂದು ಬೆಂಗಳೂರಿನಲ್ಲಿ ದುರಂತ ನಡೀತು. 11…
ದಕ್ಷಿಣಕನ್ನಡ : ದಕ್ಷಿಣ ಕನ್ನಡದಲ್ಲಿ ಇಂದು ಬಿಚ್ಚಿ ಬೀಳಿಸುವ ಘಟನೆ ನಡೆದಿದ್ದು, ಪತಿ ಪತ್ನಿಯ ಮೃತ ದೇಹ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿಯೇ ಗರ್ಭಿಣಿ ಪತ್ನಿಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಾವೂರು ಗ್ರಾಮದ ಬಡಗುಂಡಿ ಸಮೀಪ ನಡೆದಿದೆ. ಮನೆಯೊಂದರಲ್ಲಿ ಸಜೀಪದ ತಿಮ್ಮಪ್ಪ ಮೂಲ್ಯ (52) ಹಾಗೂ ಅವರ ಗರ್ಭಿಣಿ ಪತ್ನಿ ಜಯಂತಿ (45) ಅವರ ಮೃತದೇಹಗಳು ಇಂದು ಪತ್ತೆಯಾಗಿದ್ದವು. ಆದರೆ ಯಾವುದೋ ವಿಷಯಕ್ಕೆ ಪತ್ನಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಮೃತರ ಸಂಬಂಧಿಗಳ ದೂರಿನಂತೆ ಪ್ರಕರಣ ದಾಖಲಾಗಿದೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿದ್ದರೆ, ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಸಮೀಪದವರು ಬೆಳಗ್ಗೆಯಾದರೂ ಬಾಗಿಲು ತೆರೆಯಲಿಲ್ಲವೇಕೆ ಎಂದು ಸಂಶಯದಿಂದ ಗಮನಿಸಿದಾಗ ವಿಷಯ ಗೊತ್ತಾಗಿದ್ದು, ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸಂಬಂಧಿಕರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಮನೆಯಲ್ಲಿಯೆ ಮಗುವಿಗೆ ಜನ್ಮ ನೀಡಿದ ತಾಯಿಯೊಬ್ಬರು ತೀವ್ರ ರಕ್ತಸ್ರಾವದಿಂದ ಸಾವನಪ್ಪಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಛತ್ತಿಸ್ಗಢ ಮೂಲದ ಸಂಜನಾ (25) ಎಂದು ತಿಳಿದುಬಂದಿದೆ. ಸಂಜನಾ ಮನೆಯಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಮಗುವಿನ ಜನನದ ಬಳಿಕ ಅವರಿಗೆ ತೀವ್ರ ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ. ಗಂಡನನ್ನು ತೊರೆದು ಸಂಜನಾ ಅಮ್ಮನ ಜೊತೆಗೆ ಇದ್ದರು. ಸದ್ಯ ಮಗುವಿಗೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ವಿಜಯಪುರ : ರಸ್ತೆ ಅಪಘಾತದಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಅಂಬಳನೂರ ಕ್ರಾಸ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ನಲ್ಲಿ ಶಿಕ್ಷಕ ವಾಸುದೇವ ಹಂಚಾಟೆ ತೆರಳುತ್ತಿದ್ದರು. ಈ ವೇಳೆ ಸಡನ್ ಆಗಿ ನಾಯಿ ರಕ್ಷಿಸಲು ಹೋಗಿ ವಾಸುದೇವ ಅವರ ಬೈಕ್ ಸ್ಕಿಡ್ ಆಗಿದೆ. ರಸ್ತೆಯ ಮೇಲೆ ಶಿಕ್ಷಕ ವಾಸದೇವ ಕೆಳಗಡೆ ಬಿದ್ದಿದ್ದಾರೆ. ರಸ್ತೆ ಮೇಲೆ ಬಿದ್ದಿದ್ದರಿಂದ ತಲೆಗೆ ಪೆಟ್ಟಾಗಿ ತೀವ್ರ ರಕ್ತ ಸೋರಿಕೆಯಾಗಿ ಶಿಕ್ಷಕ ವಾಸುದೇವ್ ಸಾವನ್ನಪ್ಪಿದ್ದಾರೆ. ಬಸವನ ಬಾಗೇವಾಡಿ ತಾಲೂಕಿನ ಕನಕಲ ಗ್ರಾಮದ ಶಾಲೆಯಲ್ಲಿ ವಾಸದೇವ್ ವಿಜ್ಞಾನ ಶಿಕ್ಷಕರಾಗಿದ್ದರು. ನೆಚ್ಚಿನ ಶಿಕ್ಷಕರನ್ನು ಕಳೆದುಕೊಂಡು ವಿದ್ಯಾರ್ಥಿಗಳು ಬಿಕ್ಕಿಬಿಕ್ಕಿ ಅತ್ತಿದ್ದಾರೆ.
ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ನನಗೆ ಅಧಿಕಾರ ಕೊಡಿ ಎಂಬ ಹೇಳಿಕೆ ವಿಚಾರವಾಗಿ ಅವರು ಹೇಳಲಿ ಬಿಡಿ ಅವರಿಗೆ ಯಾರು ಬೇಡ ಅಂದೋರು? 2028ಕ್ಕೆ ಪ್ರಧಾನಮಂತ್ರಿಯಾಗಲಿ ಮುಖ್ಯಮಂತ್ರಿ ಆಗಲಿ, ಬೇಡ ಅಂದೋರ್ಯಾರು? ಆದರೆ ಹೈಕಮಾಂಡ್ ಎಲ್ಲವನ್ನೂ ಅಂತಿಮವಾಗಿ ನಿರ್ಧಾರ ಮಾಡುತ್ತದೆ. ಸಾಮೂಹಿಕ ನಾಯಕತ್ವದ ಮೇಲೆ ಅಧಿಕಾರಕ್ಕೆ ಬರುವುದು ಎಂದು ಸಂಪುಟ ಸಭೆಯ ನಂತರ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದರು. ಇನ್ನು ಬಳ್ಳಾರಿ ಹಾಲು ಒಕ್ಕೂಟದ ಚುನಾವಣೆ ವಿಳಂಬ ವಿಚಾರವಾಗಿ ಭೀಮ ನಾಯಕ್ ಆರೋಪಕ್ಕೆ ಸಚಿವ ಜಯನ ರಾಜಣ್ಣ ಪ್ರತಿಕ್ರಿಯೆ ನೀಡಿದ್ದು, ಆ ರೀತಿ ತಿಳಿದುಕೊಂಡಿದ್ದರೆ ನಾನೇನು ಮಾಡೋಕೆ ಆಗಲ್ಲ. ಸಿಎಂ ಸಿದ್ದರಾಮಯ್ಯಗೆ ದೂರು ಕೊಟ್ಟ ಮೇಲೆ ಅವರೇ ನಿರ್ಧಾರ ಮಾಡುತ್ತಾರೆ. ನಾವು ಕೋರ್ಟ್ ಆದೇಶದ ವಿರುದ್ಧ ಹೋಗೋಕಾಗಲ್ಲ. ಅದರ ಬಗ್ಗೆ ಸಂಪೂರ್ಣ ಮಾಹಿತಿ ನನಗೂ ಸಹ ಇಲ್ಲ. ಈ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡಲ್ಲ ಎಂದು ತಿಳಿಸಿದರು.
ಬೆಂಗಳೂರು : ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು, ದಾಳಿ ಮಾಡಿ ಲಂಚಬಾಕ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸುತ್ತಾರೆ. ಆದರೆ ಲೋಕಾಯುಕ್ತ ಅಧಿಕಾರಿಗಳೇ ಇಂತಹ ಭ್ರಷ್ಟಾಚಾರದಲ್ಲಿ ತೊಡಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಮುಖ ಆರೋಪಿ ಆಗಿರುವ ಶ್ರೀನಾಥ್ ಜೋಶಿ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ಹೌದು ಲೋಕಾಯುಕ್ತ ಪೊಲೀಸರ ದಾಳಿ ಬೆದರಿಕಯೋಡ್ಡಿ ಅಧಿಕಾರಿಗಳಿಂದ ಹಣ ಹೊಸೂಲಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀನಾಥ್ ಜೋಶಿ ವಿರುದ್ಧದ ಪ್ರಕರಣಕ್ಕೆ ಇದೀಗ ಹೈಕೋರ್ಟ್ ತಡೆ ನೀಡಿದೆ. ವಿಚಾರಣೆಯನ್ನು ಹೈಕೋರ್ಟ್ ಜೂನ್ 30ಕ್ಕೆ ನಿಗದಿಪಡಿಸಿದೆ. ಶ್ರೀನಾಥ್ ಜೋಶಿ ಲೋಕಾಯುಕ್ತ ಪೊಲೀಸರ ನೋಟಿಸ್ ರದ್ದು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಶ್ರೀನಾಥ್ ಜೋಶಿ ವಿರುದ್ಧದ ಪ್ರಕರಣಕ್ಕೆ ತಡೆ ನೀಡಿದೆ.














