Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಳಗಾವಿ : ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕರ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಭರ್ಜರಿ ಗೆಲುವು ಸಾಧಿಸಿದ್ದು, ಬೆಳಗಾವಿಯಲ್ಲಿ ಮತ್ತೆ ಪಾರುಪತ್ಯ ಮೆರೆದಿದ್ದಾರೆ. ಪ್ರತಿಷ್ಠಿತ ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಜಾರಕಿಹೊಳಿ ಬಣದ ಒಂಬತ್ತು ಜನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 16 ನಿರ್ದೇಶಕ ಸ್ಥಾನಗಳ ಪೈಕಿ 9 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. 2 ನಾಮಪತ್ರ ವಾಪಸ್ ಪಡಿಸುವಲ್ಲಿ ಬಾಲಚಂದ್ರ ಜಾರಕಿಹೊಳಿ ಯಶಸ್ವಿಯಾಗಿದ್ದಾರೆ. ಕಾಗವಾಡದಿಂದ ರಾಜುಕಾಗೆ, ಚಿಕ್ಕೋಡಿ ಇಂದ ಗಣೇಶ ಹುಕ್ಕೇರಿ, ಯರಗಟ್ಟಿ ತಾಲೂಕಿನಿಂದ ವಿಶ್ವಾಸ ವೈದ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಗೋಕಾಕ್ ನಿಂದ ರಮೇಶ್ ಜಾರಕಿಹೊಳಿ ಪುತ್ರ ಅಮರನಾಥ, ಬೆಳಗಾವಿ ತಾಲೂಕಿನಿಂದ ಸಚಿವ ಸತೀಶ್ ಪುತ್ರ ರಾಹುಲ್ ಜಾರಕಿಹೊಳಿ ಆಯ್ಕೆಯಾಗಿದ್ದು, ಮೂಡಲಗಿಯಿಂದ ನೀಲಕಂಠ, ಸವದತ್ತಿಯಿಂದ ವಿರುಪಾಕ್ಷ ಮಾಮನಿ, ಖಾನಾಪುರ ತಾಲೂಕಿನಿಂದ ಅರವಿಂದ ಪಾಟೀಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ ಚನ್ನರಾಜ ಹಟ್ಟಿಹೊಳಿ ವಿರೋಧವಾಗಿ ಆಯ್ಕೆಯಾಗಿದ್ದಾರೆ ಜಾರಕಿಹೊಳಿ ಬಣದ ವಿರುದ್ಧ…
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿತ್ತು. ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಶಿವರಾಜ್ ಗೋವಿಂದರಾಜ ಅವರಿದ್ದ ಪೀಠ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಮಹೇಶ ತಿಮರೋಡಿ ಗಡಿಪಾರು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ಇಂದು ಹೈಕೋರ್ಟ್ ಅಲ್ಲಿ ವಿಚಾರಣೆ ನಡೆಯಿತು. ಈ ವೇಳೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ ಅವರಿದ್ದ ಪೀಠ ಆದೇಶವನ್ನು ಕಾಯ್ದಿರಿಸಿದ್ದು, ಹೈಕೋರ್ಟ್ ಆದೇಶದ ವರೆಗೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ. ಮುಂದಿನ ಆದೇಶದ ವರೆಗೆ ಗಡಿಪಾರು ಜಾರಿಗೊಳಿಸಿದಂತೆ ಸೂಚನೆ ನೀಡಿದರು. ಈ ಮೂಲಕ ಮಹೇಶ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.
ಶಾಸಕರ ಅಭಿಪ್ರಾಯ ಇಲ್ಲದೆ ‘ಸಿಎಂ’ ಆಗಲು ಸಾಧ್ಯವಿಲ್ಲ : ಪರೋಕ್ಷವಾಗಿ ಡಿಕೆ ಶಿವಕುಮಾರ್ ‘CM’ ಆಗಲ್ಲ ಎಂದ ಸಿದ್ದರಾಮಯ್ಯ!
ಬಾಗಲಕೋಟೆ : ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುವ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಶಾಸಕರ ಅಭಿಪ್ರಾಯ ಇಲ್ಲದೆ ಮುಖ್ಯಮಂತ್ರಿ ಆಗಲು ಆಗಲ್ಲ. ಬಹುಮತ ಇದಾರೆ ಮಾತ್ರ ಸಿಎಂ ಆಗೋಕೆ ಸಾಧ್ಯ. ಮತ್ತು ಹೈಕಮಾಂಡ್ ಆಶೀರ್ವಾದವು ಇರಬೇಕು ಶಾಸಕರ ಅಭಿಪ್ರಾಯ ಮತ್ತು ಹೈಕಮಾಂಡ್ ಎರಡೂ ಮುಖ್ಯವಾಗಿವೆ ಎಂದು ಬಾಗಲಕೋಟೆಯಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ನಮ್ಮ ಶಾಸಕರು ಹಾಗೂ ಹೈಕಮಾಂಡ್ ಇಬ್ಬರು ಮುಖ್ಯವಾಗಿದ್ದಾರೆ. ಶಾಸಕರ ಅಭಿಪ್ರಾಯವಿಲ್ಲದೆ ಯಾರು ಮುಖ್ಯಮಂತ್ರಿ ಆಗಕ್ಕೆ ಆಗಲ್ಲ. ಬಹುಮತ ಇದ್ದರೆ ಮಾತ್ರ ಸಿಎಂ ಆಗೋಕೆ ಸಾಧ್ಯ. ಅಲ್ಲದೆ ಹೈಕಮಾಂಡ್ ಆಶೀರ್ವಾದ ಮುಖ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಆ ಮೂಲಕ ಡಿಕೆ ಶಿವಕುಮಾರ್ ಸಿಎಂ ಆಗಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ಹೇಳಿದಂತಿದೆ.
ಬಾಗಲಕೋಟೆ : ನಮ್ಮ ದೇಶದಲ್ಲಿ ಅನೇಕ ಧರ್ಮ ಜಾತಿಗಳಿವೆ.ನಾವು ಜಾತಿ ಧರ್ಮ ಮಾಡಿದ್ದಲ್ಲ. ಮೊದಲಿಂದಲೂ ಬೆಳೆದು ಬಂದಿದೆ ನಾವು ಬೇರೆ ಜಾತಿಯವರನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು ಇದನ್ನು ಮೂಲಭೂತವಾಗಿ ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ನಡೆದ ಸರ್ವಧರ್ಮ ಮಹಾಸಂಗಮದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಹಿಂದೂ ಧರ್ಮದವರ ರಕ್ತ ಇಸ್ಲಾಂ ಧರ್ಮದವರ ರಕ್ತ ಬೇರೆ ಇರುತ್ತಾ? ಅನಾರೋಗ್ಯ ಇದ್ದಾಗ ಯಾವುದಾದರೂ ರಕ್ತ ಕೊಡ್ರಪ್ಪ ಅಂತ ಹೇಳುತ್ತೇವೆ. ಕಾಯಿಲೆ ವಾಸಿಯಾದಾಗ ನಿನ್ನದು ಯಾವ ಜಾತಿ ಅಂತ ಕೇಳುತ್ತೇವೆ. ಇದು ನ್ಯಾಯಾನ? ಬಸವಣ್ಣನವರು ದಯವೇ ಧರ್ಮದ ಮೂಲವಯ್ಯ ಅಂತ ಹೇಳಿದರು ಇದನ್ನು ತಿಳಿದುಕೊಂಡರೆ ಸಾಕು ಅಲ್ವಾ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು. ನಾವು ಇಂತಹ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿಲ್ಲ. ನಾನು ಕುರುಬರ ಜಾತಿಯಲ್ಲಿ ಹುಟ್ಟಬೇಕು ಅಂತ ಅರ್ಜಿ ಹಾಕಿದ್ನಾ? ಇಲ್ಲ ನಮ್ಮ ಅಪ್ಪ ಅವ್ವ ಕುರುಬರಾಗಿದ್ದರು. ಅದಕ್ಕೆ ನಾನು ಕುರುಬನಾಗಿದ್ದೇನೆ ಪ್ರಾಣಿಗಳನ್ನು…
ಬಾಗಲಕೋಟೆ : ರಾಜ್ಯದ ಸರ್ಕಾರಿ ಸ್ಥಳ, ಮುಜುರಾಯಿ ದೇವಸ್ಥಾನಗಳಲ್ಲಿ ಆರ್‌ಎಸ್‌ಎಸ್‌ನ (RSS) ಎಲ್ಲಾ ಚಟುವಟಿಕೆಗಳನ್ನು ರದ್ದುಪಡಿಸುವಂತೆ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪ್ರತ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ. ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ನವದೆಹಲಿ : ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದಾಖಲೆ ಸಮೇತ ಬಿಡುಗಡೆ ಮಾಡಿ ಆರೋಪ ಮಾಡಿದ್ದರು. ಈ ಕುರಿತು ಎಸ್ಐಟಿ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದ್ದು SIT ರಚನೆಗೆ ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಹೌದು 2024ರ ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ವಿಶೇಷ ತನಿಖೆ ನಡೆಸಬೇಕು ಎಂದು ಸುಪ್ರೀಂಕೋರ್ಟ್ ಮುಂದೆ ಅರ್ಜಿ ಸಲ್ಲಿಕೆಯಾಗಿತ್ತು. ಆದರೆ, ಎಸ್ಐಟಿ ತನಿಖೆಗೆ ಕೋರ್ಟ್ ನಕಾರ ವ್ಯಕ್ತಪಡಿಸಿದ್ದು, ಅರ್ಜಿದಾರರು ಚುನಾವಣಾ ಆಯೋಗಕ್ಕೆ ದೂರು ನೀಡಬೇಕೆಂದು ಸೂಚಿಸಿದೆ. ರಾಹುಲ್ ಗಾಂಧಿ ಸೇರಿದಂತೆ ವಿಪಕ್ಷಗಳು ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಮನವಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜಯಮಾಲ್ಯ ಬಾಗಚಿ ಅವರಿದ್ದ ಸರ್ವೋಚ್ಚ…
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ವರದಕ್ಷಣೆ ಕಿರುಕುಳಕ್ಕೆ ಗೃಹಿಣಿ ಒಬ್ಬಳು ಬಲಿಯಾಗಿದ್ದಾಳೆ. ಶಿಡ್ಲಘಟ್ಟ ತಾಲೂಕಿನ ರಾಮಾಲಿಂಗಪುರ ಗ್ರಾಮದಲ್ಲಿ ಈ ಒಂದು ಘಟನೆ ಸಂಭವಿಸಿದ್ದು, ಶಿರಿಷ (21) ಎನ್ನುವ ಗ್ರಹಿಣಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಶ್ರೀನಾಥ್ ಮತ್ತು ಶಿರಿಷ ಪ್ರೀತಿಸಿ ಮದುವೆ ಆಗಿದ್ದರು. ಪತಿ ಶ್ರೀನಾಥ್ ಹಾಗೂ ಅವರ ಪೋಷಕರ ವಿರುದ್ಧ ಇದೀಗ ಕೊಲೆ ಆರೋಪ ಕೇಳಿ ಬದಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ದಾಖಲಾಗಿದೆ. ಇನ್ನು ಎಫ್ಐಆರ್ ನಲ್ಲಿರುವ ಲೋಪ ಸರಿಪಡಿಸುವಂತೆ ಧರಣಿ ಕೈಗೊಂಡಿದ್ದಾರೆ ಪೊಲೀಸರ ವಿರುದ್ಧ ಮೃತ ಶಿರೀಶ ಪೋಷಕರು ಅಕ್ರೋಶ ಅವರ ಹಾಕಿದ್ದು ಪತಿ ಶ್ರೀನಾಥ್ ಮನೆಯ ಎದರು ಶವ ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ ಶ್ರೀಡ್ಲಘಟ್ಟ ತಾಲೂಕಿನ ರಾಮಲಿಂಗಾಪುರದಲ್ಲಿ ಶ್ರೀನಾಥ ಮನೆ ಇದ್ದು ಮನೆಯಂಗಳದಲ್ಲಿ ಶಿವಸಂಸ್ಕಾರ ಮಾಡುವುದಾಗಿ ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು : ಕಳೆದ ಹಲವು ದಿನಗಳಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಆಸ್ಪತ್ರೆಯಿಂದ ಎಚ್ ಡಿ ದೇವೇಗೌಡ ಅವರು ಡಿಸ್ಚಾರ್ಜ್ ಆಗಿದ್ದಾರೆ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಹೆಚ್ ಡಿ ದೇವೇಗೌಡ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ನೇರವಾಗಿ ಪದ್ಮನಾಭನಗರ ಮನೆಗೆ ಎಚ್ಡಿ ದೇವೇಗೌಡ ಆಗಮಿಸಿದ್ದಾರೆ. ಹೌದು ಕಳೆದ ಒಂದು ವಾರದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೇವೇಗೌಡರು ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ಡಿಸ್ಚಾರ್ಜ್ ಆಗಿದ್ದಾರೆ. ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ನಿಂದ ಆಸ್ಪತ್ರೆಗೆ ದಾಖಲಾಗಿದ್ದ ದೇವೇಗೌಡರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ಸಲಹೆಯಂತೆ ಮುಂದಿನ ಕೆಲವು ದಿನಗಳು ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
BREAKING : ‘RSS’ ನಿಂದ ‘ಲೈಂಗಿಕ ಕಿರುಕುಳ’ ಆರೋಪ : ಕೇರಳದಲ್ಲಿ ಡೆತ್ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆಗೆ ಶರಣು!
ಕೇರಳ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ಕೇರಳದಲ್ಲಿ ದುರಂತ ಒಂದು ಸಂಭವಿಸಿದ್ದು ಯುವಕನೊಬ್ಬನಿಗೆ ಆರ್ ಎಸ್ ಎಸ್ ಕಾರ್ಯಕರ್ತ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಕೇರಳದಲ್ಲಿ ಟೆಕ್ಕಿ ಆನಂದ್ ಎನ್ನುವ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಹೌದು ಇನ್ಸ್ಟಾಗ್ರಾಮ್ ನಲ್ಲಿ ಯುವಕ ಆನಂದ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆರ್ ಎಸ್ ಎಸ್ ಸದಸ್ಯರಿಂದ ಲೈಂಗಿಕ ಕಿರುಕುಳ ಎಂದು ಆರೋಪ ಮಾಡಿರುವ ಆತ ನಿರಂತರವಾಗಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಕೇರಳದ ತಿರುವನಂತಪುರ ಲಾಡ್ಜ್ ನಲ್ಲಿ ಆನಂದ್ ಆತ್ಮಹತ್ಯೆಗೆ ಶರಣಾಗಿದ್ದಾನೆ.ಕಳೆದ ಗುರುವಾರ ಸಂಜೆ ಈ ಒಂದು ಘಟನೆ ನಡೆದಿದೆ ಆನಂದ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಅದೇ ದಿನ ಇನ್ಸ್ಟಾಗ್ರಾಮ್ ನಲ್ಲಿ ಆನಂದ್ ಪೋಸ್ಟ್ ಕೂಡ ಮಾಡಿದ್ದಾನೆ. ಬಾಲ್ಯದಲ್ಲಿಯೇ ಆರ್ ಎಸ್ ಎಸ್ ನಿಂದ ದೌರ್ಜನ್ಯ ಅನುಭವಿಸಿದ ಕುರಿತು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾನೆ.…
ಬಾಗಲಕೋಟೆ : ರಾಜ್ಯದಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಚಿವ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರ ಬರೆದಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯಸಭಾ ಸದಸ್ಯ ನಾರಾಯಣ ಭಾಂಡಗೆ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಿಯಾಂಕ ಅನ್ನೋ ಹೆಸರು ಗಂಡು ಅಥವಾ ಹೆಣ್ಣು ಎನ್ನುವುದರ ಕುರಿತು ನನಗೆ ಗೊತ್ತಾಗ್ತಿಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ ಖರ್ಗೆ ಮಾತನಾಡುವ ಮಾತುಗಳು ಅವರಿಗೆ ಸಂಬಂಧ ಇಲ್ಲದೆ ಇರುವುದನ್ನು ಮಾತನಾಡುತ್ತಾರೆ. ಆರ್ ಎಸ್ ಎಸ್ ಬ್ಯಾನ್ ಮಾಡಲು ಕಾಂಗ್ರೆಸ್ ಪಕ್ಷದ ಅಜ್ಜ ಮುತ್ತಜ್ಜರಿಗೆ ಸಾಧ್ಯ ಆಗಿಲ್ಲ. 1962ರಲ್ಲಿ ದೆಹಲಿಯಲ್ಲಿ ಜನವರಿ 26ರಂದು ಆರ್ ಎಸ್ ಎಸ್ ಕಾರ್ಯಕ್ರಮಕ್ಕೆ ನೆಹರು ಅವಕಾಶ ಮಾಡಿಕೊಟ್ಟಿದ್ದರು. ನೀವು ಅದನ್ನು ಬ್ಯಾನ್ ಮಾಡಲು ಹೊರಟಿದ್ದೀರಾ ಎಂದು ಆಕ್ರೋಶ ಹೊರ ಹಾಕಿದ್ದಾರೆ.













