Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ರಾಜ್ಯದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳ ಮೇಲೆ ಕಡಿವಾಣ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ ಖರ್ಗೆ ಪತ್ರ ಬರೆದಿದ್ದು ಇದೀಗ ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಬಿಜೆಪಿಆರ್ ಎಸ್ ಎಸ್ ನ ಕೈಗೊಂಬೆ. ಆರ್ ಎಸ್ ಎಸ್ ಇಲ್ಲದೆ ಬಿಜೆಪಿ ಶೂನ್ಯ. ಧರ್ಮ ಇಲ್ಲದೆ ಆರ್ ಎಸ್ ಎಸ್ ಜೀರೋ ಎಂದು ಬೆಂಗಳೂರಿನಲ್ಲಿ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದರು. ನಾನು ಹಿಂದೂ, ಅಥವಾ ಹಿಂದೂ ಧರ್ಮದ ವಿರೋಧಿ ಅಲ್ಲ ‘RSS’ ವಿರೋಧಿ. ಕರಾವಳಿ ಮಲೆನಾಡಿನಲ್ಲಿ ಯಾರು ಬಲಿಯಾಗಿದ್ದಾರೆ ಮಾಹಿತಿ ತೆಗೆಯಿರಿ. ಬೇರೆ ಸಂಘಟನೆಗಳು ದೊಡ್ಡ ದೊಣ್ಣೆ ಹಿಡಿದುಕೊಂಡು ಓಡಾಡಿದರೆ ಒಪ್ಪುತ್ತಿರ? ಶಾಲೆಗಳಲ್ಲಿ ಆರ್ ಎಸ್ ಎಸ್ ನಿಂದ ನಡೆಯುತ್ತಿರುವ ಬ್ರೈನ್ ವಾಷ್ ನಿಲ್ಲಬೇಕು ಆರ್ಎಸ್ಎಸ್ ಲೈಂಗಿಕ ಕಿರುಕುಳದ ಬಗ್ಗೆ ಪುಸ್ತಕವನ್ನೇ ಬರೆದಿದ್ದಾರೆ ಹನುಮೇಗೌಡ ಎಂಬ ಪುಸ್ತಕ ಬರೆದಿದ್ದಾರೆ. ಬಿಜೆಪಿ ಆರ್ ಎಸ್ ಎಸ್ ಕೈಗೊಂಬೆಯಾಗಿದ್ದು ಆರ್ ಎಸ್ ಎಸ್ ತೆಗೆದುಬಿಟ್ಟರೆ ಬಿಜೆಪಿ ಶೂನ್ಯ. ಇನ್ನು ಧರ್ಮವಿಲ್ಲದೆ…

Read More

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಕ್ರೂಜರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ತೇಗುರು ಗ್ರಾಮದ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಸುರೇಶ ತುಪ್ಪದ (55) ಮತ್ತು ಮಹಾಂತಮ್ಮ (82) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 10 ಜನರಿಗೆ ಗಂಭೀರವಾದ ಗಾಯಗಳಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತೂರು ಮತ್ತು ಗಾಯಾಳುಗಳು ಗದಗದ ನಿವಾಸಿಗಳು ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಕೊಲ್ಲಾಪುರದಿಂದ ಗದಗ ಕಡೆಗೆ ಕ್ರೂಜರ್ ವಾಹನ ತೆರಳುತ್ತಿತ್ತು.ಚಾಲಕನ ನಿರ್ಲಕ್ಷದಿಂದ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ನಿದ್ದೆ ಮಂಪರಿನಲ್ಲಿ ಚಾಲಕ ಮರಕೆ ಡಿಕ್ಕಿ ಹೊಡೆದು ಈ ಒಂದು ದುರಂತ ಸಂಭವಿಸಿದೆ. ಅಪಘಾತದ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷನ ಪುತ್ರನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪ್ರತಾಪ್ ರಾವ್ ಪಾಟೀಲ್ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ವೃದ್ಧನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಪ್ರಕರಣದಲ್ಲಿ ಶಿವರಾಜ್ ಪಾಟೀಲ್ A1ಆರೋಪಿ ಆಗಿದ್ದಾರೆ.ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಇಟ್ನಾಳದಲ್ಲಿ ಈ ಒಂದು ಘಟನೆ ನಡೆದಿದ್ದು ಅಕ್ಟೋಬರ್ 6 ರಂದು ನಡೆದ ಘಟನೆ ತಡವಾಗಿ ಬಳಕೆಗೆ ಬಂದಿದೆ. ಇಟ್ನಾಳ್ ಗ್ರಾಮದ ಸರ್ವೆ ನಂಬರ್ 43/6 ಮತ್ತು 202/2 ಜಮೀನು ವಿಚಾರಕ್ಕೆ ಗಲಾಟೆ ನಡೆದಿದೆ. ಸದ್ಯಕ್ಕೆ ಇಬ್ಬರು ಆರೋಪಿಗಳನ್ನು ಮಾತ್ರ ಹಾರೋಗೇರಿ ಪೊಲೀಸ್ರು ಬಂಧಿಸಿದ್ದಾರೆ A1 ಆರೋಪಿ ಸರಿ ಪ್ರಮುಖ ಆರೋಪಿಗಳು ಬಂಧನಕೆ ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಗೋಕಾಕ್ ಆಸ್ಪತ್ರೆಯಲ್ಲಿ ಸದ್ಯ ಮಹಿಳೆ ಮತ್ತು ವೃದ್ಧ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಉತ್ತರಕನ್ನಡ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿತು. ಗ್ಯಾರಂಟಿ ಯೋಜನೆ ಮಾಡಿ ಈಗ ಎರಡುವರೆ ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ವಿಚಾರವಾಗಿ, ಕಾಂಗ್ರೆಸ್ ಶಾಸಕ ಆರ್. ವಿ ದೇಶಪಾಂಡೆ ಸ್ವಪಕ್ಷದ ವಿರುದ್ಧವೇ ಬೇಸರ ಹೊರಹಾಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನ ಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಶಾಸಕ ಆರ್.ವಿ ದೇಶಪಾಂಡೆ ಹೇಳಿದರು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊರೆ ಆಗಿದೆ. ಜನರಿಗೆ ಅನುಕೂಲವಾಗಿರುವುದು ಒಂದೆಡೆಯಾದ್ರೆ, ಇನ್ನೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ.ಮಹಿಳೆಯರು ಎಲ್ಲ ಸೌಲಭ್ಯಗಳನ್ನ ಪಡೆಯುತ್ತಿದ್ದಾರೆ. ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಸರ್ಕಾರದ ಈ ಯೋಜನೆಗಳನ್ನ ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನ ರಚಿಸಲಾಗಿದೆ. ಅವುಗಳನ್ನು ನಿಭಾಯಿಸುವುದೇ ಆಗಿದೆ.…

Read More

ಚಿಕ್ಕಬಳ್ಳಾಪುರ : ಪಕ್ಕದ್ ಮನೆಯ ಯುವಕನನ್ನು ಪ್ರೀತಿಸಿ ಲವ್ ಮ್ಯಾರೇಜ್ ಆದ ಹಿನ್ನೆಲೆಯಲ್ಲಿ ಯುವತಿಯ ಕುಟುಂಬಸ್ಥರು ಯುವಕನ ತಾಯಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಸಂಗಟಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. ಹೌದು ಪಕ್ಕದ್ಮನೆ ಹುಡುಗ, ಹುಡುಗಿ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಒಂದೇ ಜಾತಿಯವರಾಗಿದ್ದು, ಮದುವೆಯಾಗಲು ಇಚ್ಚಿಸಿದ್ದರು. ಆದರೆ ಹುಡುಗಿ ಮನೆಯವರಿಗೆ ಈ ಮದುವೆ ಇಷ್ಟ ಇರಲಿಲ್ಲ. ಅವರ ವಿರೋಧದ ನಡುವೆ ಇಬ್ಬರೂ ಮದುವೆಯಾಗಿದ್ದಾರೆ. ಇದರಿಂದ ಕೆರಳಿದ ಹುಡುಗಿ ಮನೆಯವರು ಹುಡುಗನ ತಾಯಿಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಬಯ್ಯಮ್ಮ (48) ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ ಐವತ್ತು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರು ವಲಯದ NCB ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಕೆಜಿ ಹೈಡ್ರೋಗಾಂಜ 6 ಕೆಜಿ ಸೈಲೋಸ್ ಸಿಬಿಲ್ ಅಣಬೆ ಜಪ್ತಿ ಮಾಡಿದ್ದಾರೆ. ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿ ಒಟ್ಟು 50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಥೈಲ್ಯಾಂಡ್ ನಿಂದ ಡ್ರಗ್ಸ್ ಸಾಗಾಟದ ಬಗ್ಗೆ NCB ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದರು. ಮಾಹಿತಿಯಂತೆ ಅಕ್ಟೋಬರ್ 9ರಂದು ಕೊಲಂಬೋದಿಂದ ಬರುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇಬ್ಬರಿಂದ ಸುಮಾರು 31 ಕೆಜಿ ಹೈಡ್ರೋಗಂಜ 4 ಕೆಜಿ ಸೈಲೋ ಸಿಬಿನ್ ಅಣಬೆ ಸೀಜ್ ಮಾಡಿದ್ದಾರೆ. ಇಬ್ಬರ ವಿಚಾರಣೆ ವೇಳೆ ಹ್ಯಾಂಡ್ಲರ್ ಶ್ರೀಲಂಕಾದಿಂದ ಕೂಡ ಡ್ರಗ್ಸ್ ಬರುವ ಮಾಹಿತಿ ಕೂಡ ತಿಳಿದು ಬಂದಿದೆ. ಅದರಂತೆ ಶ್ರೀಲಂಕಾ ಪ್ರಜೆಯನ್ನು ಅಧಿಕಾರಿಗಳು ಕಾದು ಅರೆಸ್ಟ್ ಮಾಡಿದ್ದಾರೆ ಹ್ಯಾಂಡ್ಲರ್ ನಿಂದ ಸುಮಾರು 14…

Read More

ಬೆಂಗಳೂರು : ಕಳೆದ ಸೆಪ್ಟೆಂಬರ್ 22 ರಿಂದ ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಇತ್ತೀಚಿಗೆ ಅಷ್ಟೆ ಬೆಂಗಳೂರಲ್ಲೂ ಕೂಡ ಸಮೀಕ್ಷೆ ಆರಂಭ ಆಗಿದೆ. ಇದುವರೆಗೂ ಬೆಂಗಳೂರು ನಗರದಲ್ಲಿ 11.95 ಲಕ್ಷ ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇಂದು ಒಂದು ದಿನ 1,35,2732 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಕಳೆದ 9 ದಿನಗಳಲ್ಲಿ ಒಟ್ಟು 11,95,717 ಮನೆಗಳ ಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಕೇಂದ್ರ ನಗರ ಪಾಲಿಗೆ ವ್ಯಾಪ್ತಿಯಲ್ಲಿ ರೂ. 1,53,839 ಮಣಿಗಳ ಸಮೀಕ್ಷೆ ಪೂರ್ಣಗೊಂಡಿದೆ. ಪೂರ್ವ ನಗರಪಾಲಿಕೆ ವ್ಯಾಪ್ತಿಯಲ್ಲಿ 1,75,480 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಇನ್ನು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,92,239 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಅದೇ ರೀತಿಯಾಗಿ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2,11, 38 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ಹಾಗೂ ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ 3,62,851 ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ..

Read More

ಉಡುಪಿ : ರಾಜ್ಯದಲ್ಲಿ RSS ಚಟುವಟಿಕೆ ಕಡಿವಾಣ ಹಾಕುವ ಬಗ್ಗೆ ಪ್ರಿಯಾಂಕ್ ಖರ್ಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ಈ ವಿಚಾರವಾಗಿ ತಾಕತ್ತಿದ್ದರೆ ಆರ್‌ಎಸ್‌ಎಸ್‌ (RSS) ನಿಷೇಧ ಮಾಡಿ ಚುನಾವಣೆಗೆ ಬನ್ನಿ ಎಂದು ಸಚಿವ ಪ್ರಿಯಾಂಕ್‌ ಖರ್ಗೆಗೆ ಮಾಜಿ ಸಚಿವ ಸುನಿಲ್‌ ಕುಮಾರ್‌ ಸವಾಲು ಹಾಕಿದರು. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಚಟುವಟಿಕೆಗಳನ್ನು ಬ್ಯಾನ್‌ ಮಾಡುವಂತೆ ಸಿಎಂಗೆ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಈ ಕುರಿತು ಮಾತನಾಡಿದ ಸುನಿಲ್‌ ಕುಮಾರ್‌, ಆರ್‌ಎಸ್‌ಎಸ್ ನಿಷೇಧ ಹೇಳಿಕೆ ನಾಚಿಕೆ ಸಂಗತಿ.‌ ಪ್ರಿಯಾಂಕ್ ಖರ್ಗೆ ಅವಿವೇಕಿತನದ ಪತ್ರ ಬರೆದಿದ್ದಾರೆ. ಇವರ ತಂದೆ ಗೃಹ ಸಚಿವರವಾಗಿದ್ದಾಗಲೇ ಆರ್‌ಎಸ್‌ಎಸ್ ಅನ್ನು ಏನೂ ಮಾಡಲು ಆಗಿಲ್ಲ. ಅಧಿಕಾರದ ಮದ, ಸೊಕ್ಕಿನಿಂದ ಈ ರೀತಿಯ ಹೇಳಿಕೆ ಕೊಡುತ್ತಿದ್ದೀರಿ. ನಿಮ್ಮ ತಂದೆ ಎಐಸಿಸಿ ಅಧ್ಯಕ್ಷರಾಗಿ ಬರಬಹುದು ಪದೇ ಪದೇ ದುರಹಂಕಾರದಿಂದ ಮಾತನಾಡಬೇಡಿ. ಇದು ನಿಮ್ಮ ಬೆಳವಣಿಗೆಗೆ ಒಳ್ಳೆಯದಲ್ಲ ಎಂದು ಕಿಡಿಕಾರಿದರು. ಕರ್ನಾಟಕದಲ್ಲಿ ಕೆಟ್ಟ ಸರ್ಕಾರ ಇದೆ. ಮುಖ್ಯಮಂತ್ರಿಗಳಿಗೆ ಸಂಪುಟದಲ್ಲಿ ಹಿಡಿತ ಇಲ್ಲ. ಯಾರು ಏನು…

Read More

ಬೆಂಗಳೂರು : ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಚಲಿಸುತ್ತೀದ್ದ ಕ್ಯಾಂಟರ್ ಒಂದು ಉರಿದಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಪೂರ್ವ ತಾಲೂಕಿನ ಬೂದಿಗೆರೆ ರಸ್ತೆಯಲ್ಲಿ ಈ ಒಂದು ಅವಘಡ ಸಂಭವಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕ್ಯಾಂಟರ್ ಚಾಲಕ ವಾಹನದಿಂದ ತಕ್ಷಣ ಇಳಿದು ಪ್ರಣ ಉಳಿಸಿಕೊಂಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿಯಿಂದ ಕ್ಯಾಂಟರ್ ನ ಇಂಜಿನ್ ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ರೀತಿಯಾಗಿ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ಒಂದು ಕಡೆ ವಿಪಕ್ಷ ನಾಯಕರು ನವೆಂಬರ್ನಲ್ಲಿ ಭಾರಿ ಕ್ರಾಂತಿ ಅಗಲಿದೆ ರಾಜ್ಯ ರಾಜಕಾರಣದಲ್ಲಿ ಹಲವು ಬದಲಾವಣೆ ಆಗಲಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇನ್ನೊಂದು ಕಡೆ ಸಿಎಂ ಸಿದ್ದರಾಮಯ್ಯ ತಮ್ಮ ಎಲ್ಲಾ ಸಂಪುಟ ಸಹ ಉದ್ಯೋಗಿಗಳಿಗೆ ನಾಳೆ ಔತಣಕೂಟ ಏರ್ಪಡಿಸಿದ್ದಾರೆ. ಈ ಮೂಲಕ ಬಿಹಾರ ಚುನಾವಣೆಯ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಮಾಡೋದು ಬಹುತೇಕ ಫಿಕ್ಸ್ ಎಂಬಂತೆ ಈ ಒಂದು ಔತಣಕೂಟದ ಮೂಲಕ ಸುಳಿವು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ನಾಳೆ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದು, ಸಚಿವ ಸಂಪುಟ ಪುನಾರಚನೆಗು ಮುನ್ನ ಸಿಎಂ ಸಿದ್ದರಾಮಯ್ಯ ಔತಣಕೂಟ ಏರ್ಪಡಿಸಿದ್ದಾರೆ. ಬಿಹಾರ ಎಲೆಕ್ಷನ್ ಫಲಿತಾಂಶದ ಬಳಿಕ ಸಂಪುಟ ಪುನಾರಚನೆ ಬಹುತೇಕ ಪಕ್ಕಾ ಎಂದು ಹೇಳಲಾಗುತ್ತಿದೆ. ಬೇರೆ ಬೇರೆ ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲೂ ಕೂಡ ಈ ಒಂದು ಔತಣಕೂಟ ಭಾರಿ ಮಹತ್ವ ಪಡೆದುಕೊಂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಸಚಿವರು ಹೇಗೆ ತೊಡಗಿಸಿಕೊಳ್ಳಬೇಕು ಎಂಬ…

Read More