Author: kannadanewsnow05

ಚಾಮರಾಜನಗರ : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೇಕಟಿ ಗೇಟ್ ಬಲಿ ಈ ಅಪಘಾತ ಸಂಭವಿಸಿದ್ದು, ಪತಿ ಶಶಿಧರ್, ಪತ್ನಿ ಶಾಲಿನಿ ಹಾಗೂ ತಾಯಿ ಭಾಗ್ಯಮ್ಮ ಮೃತ ದುರ್ದೈವಿಗಳು ಎಂದು ತಿಳಿದುಬಂದಿದ್ದು, ಮೃತರು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೂಡ್ಲಪುರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಮೂವರು ಇಂದು ಚಿಕ್ಕದೇವಮ್ಮನ ಬೆಟ್ಟಕ್ಕೆ ಹೋಗಿ ವಾಪಸ್ ಹೋಗುವಾಗ ಬೈಕ್ ಗೆ ಕಾರು ಡಿಕ್ಕಿಯಾಗಿ ಮೂವರು ಸಾವನಪ್ಪಿದ್ದಾರೆ.ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಗದಗ : ಗದಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, KSRTC ಬಸ್ ಹಾಗೂ ಬೈಕ್​ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸವಾರನ ಕಾಲು ಕಟ್ ಆಗಿರುವ ಭಯಾನಕ ಘಟನೆ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ. KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಮುಂಡರಗಿ ತಾಲೂಕಿನ ಹಿರೇವಡ್ಡಟ್ಟಿ ಗ್ರಾಮದ ನಿವಾಸಿಯಾದ ಬೈಕ್ ಸವಾರ ಗವಿಸಿದ್ದಪ್ಪ ಬನ್ನಿಕೊಪ್ಪ ಎಂಬವವರ ಕಾಲು ಕಟ್ ಆಗಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೈಕ್ ಸವಾರ ಮುಂಡರಗಿಯಿಂದ ಹಿರೇವಡ್ಡಟ್ಟಿ ಗ್ರಾಮಕ್ಕೆ ತೆರಳುತ್ತಿದ್ದರು. ಇದೇ ವೇಳೆ ಗದಗನಿಂದ ಮುಂಡರಗಿ ಪಟ್ಟಣಕ್ಕೆ ಬರುತ್ತಿದ್ದ ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಳಗಾವಿ : ಬೆಳಗಾವಿಯಲ್ಲಿ ಇಂದು ಘೋರವದಂತಹ ದುರಂತ ಸಂಭವಿಸಿದ್ದು ಮದುವೆ ಮಂಟಪಕ್ಕೆ ಏಕಾಏಕಿ ಟ್ರಾಕ್ಟರ್ ನುಗ್ಗಿದೆ. ಈ ವೇಳೆ ಟ್ರ್ಯಾಕ್ಟರ್ ಹರಿದು 7 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ವಡಗಾವಿಯ ಬಾಲಕೃಷ್ಣ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಕಣಬರ್ಗಿಯ ಆರುಷ್‌ ಮಹೇಶ ಮೋದೇಕರ (7) ಎಂದು ತಿಳಿದುಬಂದಿದೆ.ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಆರುಷ್‌, ಮಂಟಪದೊಳಗೆ ಆಟವಾಡುತ್ತಿದ್ದ. ಈ ವೇಳೆ ಮಣ್ಣು ತುಂಬಿದ ಟ್ರಾಕ್ಟರ್ ಏಕಾಏಕಿ ಮದುವೆ ಮಂಟಪಕ್ಕೆ ನುಗ್ಗಿದೆ. ಮಂಟಪದಲ್ಲಿ ಆಟವಾಡುತ್ತಿದ್ದ ಆರುಷ್ ಮೇಲೆ ಟ್ರ್ಯಾಕ್ಟರ್‌ ನುಗ್ಗಿ ಡಿಕ್ಕಿ ಹೊಡೆದಿದ್ದರಿಂದ ಆರುಷ್ ಗಂಭೀರವಾಗಿ ಗಾಯಗೊಂಡಿದ್ದ. ಆತನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆ ಕುರಿತು ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ : ಉಡುಪಿಯಲ್ಲಿ ಇಂದು ಸರ್ಕಾರಿ ಪ್ರೌಢಶಾಲೆಯಲ್ಲಿ ಇದ್ದಂತಹ 35 ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ನಡೆಸಿರುವ ಘಟನೆ, ಉಡುಪಿಯ ಒಳಕಾಡು ವಾರ್ಡ್ ನಲ್ಲಿರುವ ಪ್ರೌಢಶಾಲೆಯಲ್ಲಿ ನಡೆದಿದೆ. ಹೌದು ಶಾಲೆಯಲ್ಲಿದ್ದ 35ಕ್ಕೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ನಡೆಸಿದೆ.ಹೆಜ್ಜೇನು ದಾಳಿ ಮಾಡಿದ ತಕ್ಷಣ ಮಕ್ಕಳನ್ನು ಆಸ್ಪತ್ರೆ ಕರೆದೊಯ್ಯಲು SDMC ಸದಸ್ಯ ಬಂದಿದ್ದಾನೆ. ಈ ಗೆಳೆಯ SDMC ಸದಸ್ಯನ ಮೇಲೂ ಕೂಡ ಹೆಜ್ಜೆನು ದಾಳಿ ಮಾಡಿದೆ. ಸರ್ಕಾರಿ ಶಾಲೆಯ ತರಗತಿಯ ಪಕ್ಕದಲ್ಲಿ 5 ಹೆಜ್ಜೆನು ಗೂಡುಗಳು ಇವೆ. ಸದ್ಯ ಜಿಲಾಸ್ಪತ್ರೆಯ ಐಸಿಯುವಿನಲ್ಲಿ SDMC ಸದಸ್ಯನಿಗೆ ಇದೀಗ ಚಿಕಿತ್ಸೆ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದಾರೆ.

Read More

ಕೊಪ್ಪಳ : ಇಂದು ಕೊಪ್ಪಳದಲ್ಲಿ ಘೋರವಾದ ದುರಂತ ಸಂಭವಿಸಿದ್ದು, ಸ್ಟೀಲ್ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು 10 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಅಲ್ಲಾಗ್ರಾಮದ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ದುರಂತ ನಡೆದಿದೆ. ಹೌದು ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 9 ಜನ ಅಸ್ವಸ್ಥರಾಗಿದ್ದು, ಹೊಸಪೇಟೆ ಬಳಿ ಇಸ್ಪಾಟ್ ಸ್ಟೀಲ್ ಫ್ಯಾಕ್ಟರಿಯಲ್ಲಿ ಈ ಒಂದು ಘಟನೆ ನಡೆದಿದೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಈ ಒಂದು ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಓರ್ವ ಕಾರ್ಮಿಕ ಮೃತಪಟ್ಟು, ಹತ್ತಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ತಾಲೂಕಿನ ಅಲ್ಲಾನಗರ ಗ್ರಾಮದ ನಿವಾಸಿ ಮಾರುತಿ ಕೊರಗಲ್ (24) ಮೃತವ್ಯಕ್ತಿ ಎಂದು ಗುರುತಿಸಲಾಗಿದೆ. ಓರ್ವ ಕಾರ್ಮಿಕ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಕೊಪ್ಪಳ ತಾಲೂಕಿನ ಅಲ್ಲಾನಗರ ಗ್ರಾಮದ ಬಳಿಯ ಫ್ಯಾಕ್ಟರಿಯಲ್ಲಿ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ 10 ಜನ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.…

Read More

ಉತ್ತರಪ್ರದೇಶ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭ ಮೇಳ ನಡೆಯುತ್ತಿದ್ದು, ದೇಶದ ಎಲ್ಲಾ ರಾಜ್ಯಗಳು ಸೇರಿದಂತೆ ಜಗತ್ತಿನ ವಿವಿಧ ರಾಷ್ಟ್ರಗಳಿಂದ ಅನೇಕ ಜನರು ಭೇಟಿ ನೀಡುತ್ತಿದ್ದಾರೆ. ಇದೀಗ ಪ್ರಯಾಗ್ ರಾಜ್ ನಲ್ಲಿ ವಿಮಾನ ವಿಳಂಬವಾಗಿದ್ದಕ್ಕೆ ಅನ್ನ ನೀರಿಲ್ಲದೆ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಹೌದು ತಾಂತ್ರಿಕ ದೋಷದಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಇದೀಗ ವಿಳಂಬವಾಗಿದೆ. ಪ್ರಯಾಗ್ ರಾಜ್ ನಿಂದ ಬೆಂಗಳೂರಿಗೆ ತೆರಳಬೇಕಿದ್ದ ವಿಮಾನ ಇದೀಗ ವಿಳಂಬವಾಗಿದೆ. ಗಂಟೆಗಟ್ಟಲೆ ವಿಳಂಬವಾಗಿದ್ದರಿಂದ ವಿಮಾನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಮಧ್ಯಾಹ್ನ 2:10ಕ್ಕೆ ಹೊರಡಬೇಕಿದ್ದ ವಿಮಾನ SG664 ಸಂಜೆಯಾದರೂ ವಿಮಾನ ಹೊರಡದಿದ್ದಕ್ಕೆ ಪ್ರಯಾಣಿಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಬೆಳಗ್ಗೆಯಿಂದ ವಿಮಾನ ನಿಲ್ದಾಣದಲ್ಲಿ ಕನ್ನಡಿಗರು ಕಾದು ಕುಳಿತಿದ್ದಾರೆ. ಅನ್ನ, ನೀರಿಲ್ಲದೆ ನೂರಾರು ವಿಮಾನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ರಾತ್ರಿ 11 15ಕ್ಕೆ ವಿಮಾನ ಟೇಕ್ ಆಫ್ ಆಗುವುದಾಗಿ ಸಿಬ್ಬಂದಿಗಳು ಹೇಳುತ್ತಿದ್ದಾರೆ. ಸದ್ಯ ಸ್ಪೈಸ್ ಜೆಟ್ ವಿಮಾನ ಯಾನ ಸಂಸ್ಥೆಯ ವಿರುದ್ಧ ಸದ್ಯ ಪ್ರಯಾಣಿಕರು ಆಕ್ರೋಶ ಹೊರ…

Read More

ಚಿಕ್ಕಬಳ್ಳಾಪುರ : ಮೂರ್ಚೆ ರೋಗ ಇದ್ದಂತಹ ಯುವಕನೊಬ್ಬ ಅಸ್ವಸ್ಥಗೊಂಡು ಬೋಲೇರೋ ವಾಹನದಲ್ಲಿ ಮಲಗಿದ್ದಲ್ಲಿಯೇ ಸಾವನಪ್ಪಿದ್ದು, ವಾಹನದ ಮಾಲೀಕ ಬಂಧು ನೋಡಿದಾಗ ಯುವಕವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಲ್ಲಿ ನಡೆದಿದೆ. ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಒಂದು ಘಟನೆ ನಡೆದಿದೆ. ಗೌರಿಬಿದನೂರು ನಗರದ ನಿವಾಸಿ ಸಲ್ಮಾನ್ ಮೃತ ದುರ್ದೈವಿ ಎಂದು ತಿಳಿದುಬಂದಿದ್ದು, ಮೂರ್ಛೆ ರೋಗದಿಂದ ಬಳಲುತ್ತಿದ್ದ ಸಲ್ಮಾನ್ ಅಸ್ವಸ್ಥಗೊಂಡು ವಾಹನದಲ್ಲಿ ಕುಳಿತಿದ್ದ. ವಾಹನದ ಮಾಲೀಕ ಬಂದು ನೋಡಿದಾಗ ಸಲ್ಮಾನ್ ಮೃತಪಟ್ಟಿದ್ದ ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Read More

ಕಲಬುರ್ಗಿ : ಆಕಸ್ಮಿಕ ಬೆಂಕಿಯಿಂದಾಗಿ 8 ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಈ ಒಂದು ಅಗ್ನಿ ಅವಘಡ ಸಂಭವಿಸಿದೆ. ಜೇವರ್ಗಿ ತಾಲೂಕಿನ ಬುಟ್ನಾಳ ರಸ್ತೆಯಲ್ಲಿರುವ 8 ಅಂಗಡಿಗಳು ಆಕಸ್ಮಿಕ ಬೆಂಕಿಯಿಂದಾಗಿ ಸುಟ್ಟು ಕರಕಲಾಗಿವೆ . ದೇವೇಂದ್ರ, ಮನೋಹರ, ಶ್ರೀಶೈಲ್, ಪ್ರಕಾಶ್, ಮೋಹನ್ ಹಾಗೂ ಬಸವರಾಜ್ ಎಂಬುವವರ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಈ ವೇಳೆ 8 ಅಂಗಡಿಯಲ್ಲಿದ್ದ ಸಾಗುವಾನಿ ಬಾಗಿಲಗಳು, ಯಂತ್ರಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನೆ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾಸ್ಥಳಕ್ಕೆ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ವರ್ತೂರು ಪ್ರಕಾಶ್ ಆಪ್ತೆ ಶ್ವೇತಾ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊರ್ವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿ ಮೋಹನ್ ಲಾಲ್ ಎನ್ನುವ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸರಿಂದ ಆರೋಪಿಯನ್ನು ಬಂಧಿಸಲಾಗಿದೆ. ರಾಜಸ್ಥಾನದಲ್ಲಿ ಬೆಂಗಳೂರು ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಆರೋಪಿಗೆ ಶ್ವೇತಾ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿ ಬಂದಿತ್ತು. ಮೋಹನ್ ಲಾಲ್ ಗೆ ಸುಮಾರು 1ಕೆಜಿ 800 ಗ್ರಾಂ ಚಿನ್ನಾಭರಣ ಕೊಟ್ಟಿದ್ದ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಕೇಸ್ ದಾಖಲಾಗುತ್ತಿದ್ದಂತೆ ಆರೋಪಿ ಮೋಹನ್ ಲಾಲ್ ಪರಾರಿಯಾಗಿದ್ದ. ಸದ್ಯ ಆತನನ್ನು ರಾಜಸ್ಥಾನದಲ್ಲಿ ಬಂಧಿಸಿ ಬೆಂಗಳೂರು ಪೊಲೀಸರು ಕರೆತಂದಿದ್ದಾರೆ. ಆರೋಪಿಯನ್ನು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Read More

ಬೆಂಗಳೂರು : ವ್ಯಕ್ತಿಯೊಬ್ಬರು 10 ಸಾವಿರಕ್ಕೆ ಕಾರು ಬುಕ್ ಮಾಡಿ ಬಳಿಕ ಕ್ಯಾನ್ಸಲ್ ಮಾಡಿದ್ದರು. ನಂತರ ಕಸ್ಟಮರ್ ಕೇರ್ ಗೆ ಕರೆ ಮಾಡಿ ಹಣ ವಾಪಸ್ ನೀಡುವಂತೆ ತಿಳಿಸಿದಾಗ ಇದೇ ವೇಳೆ ಸೈಬರ್ ವಂಚಕರು ವ್ಯಕ್ತಿಯಿಂದ ಸುಮಾರು 20 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಇಂದಿರಾನಗರ ನಿವಾಸಿ ಕೆ. ಸುಮನಾ ಪ್ರಸಾದ್ ಎಂಬುವರು ವಂಚನೆಗೊಳಗಾಗಿದ್ದು,ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸುಮನಾ ಪ್ರಸಾದ್ ಅವರು ಕೆಲಸ ನಿಮಿತ್ತ ಹೊರ ಹೋಗಲು ಜ.23ರಂದು ಕಾರು ಬಾಡಿಗೆ ಪಡೆಯಲು ಗೂಗಲ್​ನಲ್ಲಿ ಶೋಧ ನಡೆಸಿದ್ದರು. ಈ ವೇಳೆ ಸ್ಪೇನಿ ಕಾರ್ ಎಂಬ ವೆಬ್​ಸೈಟ್​ನಲ್ಲಿ ಕಾರನ್ನ ಬುಕ್ ಮಾಡಿ ಕ್ಯೂ ಆರ್ ಕೋಡ್ ಮೂಲಕ 10 ಸಾವಿರ ರೂಪಾಯಿ ಪಾವತಿಸಿದ್ದರು. ಬಳಿಕ ಆರ್ಡರ್ ರದ್ದು ಮಾಡಿದ್ದರು. ಗೂಗಲ್ ಮುಖಾಂತರ ಕಸ್ಟಮರ್ ಕೇರ್ ನಂಬರ್ ಪಡೆದು ಹಣ ವಾಪಸ್ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ವಾಟ್ಸಪ್ ಮೂಲಕ ಶೇರ್ ದಿ…

Read More