Author: kannadanewsnow05

ಬೆಂಗಳೂರು : ಇಡೀ ವಿಶ್ವವೇ ಮೆಚ್ಚುವ ಪ್ರಭಾವಿ ಪ್ರಧಾನಿ ಎನ್ನುವ ನರೇಂದ್ರ ಮೋದಿಯನ್ನು ವೀಕ್ ಪಿಎಂ ಎನ್ನುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಹಾಸ್ಯಾಸ್ಪದವಾಗಿದೆ. ಯಾರು ಸ್ಟ್ರಾಂಗ್ ಅಂತ ಹೇಳಿಕೊಳ್ಳುತ್ತಾರೋ ಅವರು ವೀಕ್ ಇರುತ್ತಾರೆ. ಮೋದಿ ಒನ್ ಆಫ್ ದಿ ಸ್ಟ್ರಾಂಗ್ ಲೀಡರ್ ಎಂದು ಬಿಜೆಪಿ ಮಾಜಿ ಶಾಸಕ ಸಿಟಿ ರವಿ ತಿಳಿಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿಗೆ ಸಿಗುತ್ತಿರುವ ಜನ ಬೆಂಬಲ ಕಂಡು ಭಯದಿಂದಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ.ಸಿಎಂ ಸಿದ್ದರಾಮಯ್ಯ ಒಂದು ಟ್ವೀಟ್ ಮಾಡಿದ್ದಾರೆ. ಟ್ವೀಟ್​ ನಲ್ಲಿ ‘ನಾನು ಸ್ಟ್ರಾಂಗ್ ಸಿಎಂ, ಮೋದಿ ವೀಕ್ ಪಿಎಂ’ ಅಂತ ಹೇಳಿದ್ದಾರೆ ಎಂದು ತಿಳಿಸಿದರು. ಇದಕ್ಕೆ ಉತ್ತರಿಸಿದ ಸಿಟಿ ರವಿ ಯಾರು ಸ್ಟ್ರಾಂಗ್ ಅಂತ ಹೇಳಿಕೊಳ್ಳುತ್ತಾರೋ ಅವರು ವೀಕ್ ಇರುತ್ತಾರೆ. ಮೋದಿ ಸ್ಟ್ರಾಂಗ್ ಲೀಡರ್ ಅಂತ ಅನೇಕರು ಹೇಳಿದ್ದಾರೆ. ಮೋದಿ ಈಸ್ ಅವರ್ ಲೀಡರ್ ಅಂದಿದ್ದಾರೆ. ಮೋಸ್ಟ್ ಪಾಪ್ಯುಲರ್ ಪರ್ಸನ್ ಅಂತ ಅಮೆರಿಕ ಅಧ್ಯಕ್ಷರು ಹೇಳಿದ್ದಾರೆ…

Read More

ಧಾರವಾಡ: ಮನೆಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಮನೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮನೆಯಲ್ಲಿದ್ದ ಓರ್ವ ಮಹಿಳೆ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ. ಮಹಾದೇವಿ ಒಗೆನ್ನವರ(28)ಮೃತ ಮಹಿಳೆಯಾಗಿದ್ದು, ಸುರೇಶ ಒಗೆನ್ನವರ, ಶ್ರೀಧರ ಒಗೆನ್ನವರ, ಚಿನ್ನಪ್ಪ ಒಗೆನ್ನವರ ಹಾಗೂ ಗಂಗವ್ವ ಒಗೆನ್ನವರ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ‌. ಅಡುಗೆ ಮನೆಯಲ್ಲೇ ಇದ್ದ ಮಹಿಳೆ ಮಹಾದೇವಿ ಹೊರಗಡೆ ಬರಲಾಗದೇ ಅಲ್ಲೇ ಸಿಲುಕಿ ಸಾವನ್ನಪ್ಪಿದ್ದಾರೆ. ಇದರಿಂದ ಮಹಾದೇವಿ ದೇಹ ಸಂಪೂರ್ಣ ಬೆಂದು ಹೋಗಿದೆ. ಉಳಿದವರು, ಹಾಗೋ ಹೀಗೋ ಮಾಡಿ ಹೊರ ಬಂದಿದ್ದಾರೆ. ಅವರಿಗೂ ಗಾಯಗಳಾಗಿವೆ. ಅಕ್ಕಪಕ್ಕವೇ 2-3 ಸಿಲಿಂಡರ್​ಗಳಿದ್ದವು. ಆದರೆ ಅವುಗಳಿಗೆ ಬೆಂಕಿ ತಗುಲಿಲ್ಲ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಹಾಗೂ ಗರಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಚೆನ್ನೈ: ಇತ್ತೀಚೆಗೆ ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ತಮಿಳುನಾಡು ಕಾರಣ ಎಂದು ಮಂಗಳವಾರ ಹೇಳಿದ್ದರು. ಈ ಹೇಳಿಕೆಗೆ ಸಂಬಂಧಪಟ್ಟಂತೆ ಬಿಜೆಪಿ ನಾಯಕಿ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಬುಧವಾರ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ತಮಿಳುನಾಡು ಕರ್ನಾಟಕದ ಜನರ ಮಧ್ಯೆ ಕೋಮು ದ್ವೇಷದ ಭಾಷಣ ಮಾಡಿದ್ದಾರೆ. ಆದರೆ ಇಲ್ಲಿಯವರೆಗೆ ರಾಷ್ಟ್ರೀಯ ತನಿಖಾ ದಳ ಯಾರನ್ನೂ ಬಂಧನ ಮಾಡಿಲ್ಲ. ಹೀಗಾಗಿ ಪ್ರಜಾಪತ್ರಿನಿಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಡಿಎಂಕೆಯ ಆ‌ರ್.ಎಸ್ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಈಬಗ್ಗೆ ಡಿಎಂಕೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದೆ. ಇನ್ನು ತಮಿಳಿಗರ ಆಕ್ರೋಶಕ್ಕೆ ಕಾರಣವಾಗಿದೆ ಶೋಭಾ ಕರಂದ್ಲಾಜೆ ಅವರು ನನ್ನ ತಮಿಳು ಸಹೋದರ ಮತ್ತು ಸಹೋದರಿಯರಿಗೆ ನಾನು ಕ್ಷಮೆ ಕೇಳುತ್ತೇನೆ. ಸಮಾಜದಲ್ಲಿ ಬೆಳಕು ಚೆಲುವಂತ ಕುರಿತಂತೆ ಹೇಳಿಕೆ ನೀಡಿದ್ದೇನೆ ಹೊರತು ಯಾವುದೇ ನೋವುಂಟು ಮಾಡುವ ಉದ್ದೇಶ ನನಗಿಲ್ಲ.…

Read More

ಬೆಳಗಾವಿ : ತಮ್ಮ ಮಗ ಮೃಣಾಲ್​ಗೆ ಟಿಕೆಟ್ ದೊರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರ ಬಳಿ ಆತನ ಪರ ಕೆಲಸ ಮಾಡುವಂತೆ ಸಚಿವೆ ಸೂಚಿಸಿದ್ದಾರೆ.ಈ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆ ಮೂಲಕ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. https://kannadanewsnow.com/kannada/breaking-two-naxals-killed-in-encounter-between-security-forces-and-maoists-in-chhattisgarh/ ಪುತ್ರ ಮೃಣಾಲ್​ಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗುತ್ತಿದ್ದಂತೆಯೇ ಸಚಿವೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದಾರೆ. ಮಗ ಮೃಣಾಲ್ ಪರ ಕೆಲಸ ಮಾಡುವಂತೆ ಮತ್ತು ಮತ ಹಾಕಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. https://kannadanewsnow.com/kannada/we-have-made-jds-prime-minister-chief-minister-dk-shivakumar-suresh/ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸುತ್ತಿದ್ದ ಕಚೇರಿಯ ಮೇಲೆ ಚುನಾವಣಾಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಠಾತ್ ದಾಳಿ ನಡೆಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ, ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಸಭೆ ಮಾಡುತ್ತಿರುವುದು ಗಮನಕ್ಕೆ…

Read More

ಛತ್ತೀಸ್‌ಗಢ : ಪುರಂಗೆಲ್-ಗಾಂಪುರ್ ಅರಣ್ಯದಲ್ಲಿ ದಾಂತೇವಾಡ ಬಿಜಾಪುರ ಗಡಿಯ ಬಳಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಸಾವನ್ನಪ್ಪಿದ್ದಾರೆ. ಕಿರಾಂಡುಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಿರಂಡುಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪುರಂಗೆಲ್-ಗಾಂಪುರ ಅರಣ್ಯದಲ್ಲಿ ದಾಂತೇವಾಡ ಬಿಜಾಪುರ ಗಡಿಯಲ್ಲಿ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲೀಯರು ಹತರಾಗಿದ್ದಾರೆ. ಪೊಲೀಸರು ಎರಡು ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಇಂದಿನ ಎನ್‌ಕೌಂಟರ್ ನಲ್ಲಿ ದಾಂತೇವಾಡ ಜಿಲ್ಲಾ ಕೇಂದ್ರದಿಂದ 40 ಕಿಮೀ ದೂರದಲ್ಲಿರುವ ಕಿರಾಂಡುಲ್ ಪೊಲೀಸ್ ಠಾಣೆ ವ್ಯಾಪ್ತಿಯ ಪುರಂಗೆಲ್ ಗಾಂಪುರ್ ಅರಣ್ಯ ಪ್ರದೇಶದಲ್ಲಿ ನಡೆದಿದೆ. “ಇಬ್ಬರು ಮಾವೋವಾದಿಗಳ ಶವಗಳು, ಒಬ್ಬ ಪುರುಷ ಮತ್ತು ಮಹಿಳೆಯನ್ನು ವಶಪಡಿಸಿಕೊಳ್ಳಲಾಗಿದೆ. ಎರಡು ಸ್ವದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಅವರನ್ನು ಗುರುತಿಸುವ ಪ್ರಯತ್ನ ಮುಂದುವರಿದಿದೆ” ಎಂದು ದಾಂತೇವಾಡ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ರೈ ತಿಳಿಸಿದ್ದಾರೆ.

Read More

ಕೊಪ್ಪಳ : ತಮ್ಮ ಮಗನಿಗೆ ಲೋಕಸಭಾ ಟಿಕೆಟ್ ಸಿಕ್ಕಿಲ್ಲವೆಂದು ಈಗಾಗಲೇ ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಬಂಡಾಯವೇದಿದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಇದೀಗ ಬಿಜೆಪಿ ಮತ್ತೊಬ್ಬ ನಾಯಕ ಬಂಡಾಯವೇದಿದ್ದು ಕೊಪ್ಪಳದಿಂದ ಸಂಸದ ಕರಡಿ ಸಂಗಣ್ಣ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/gps-based-toll-collection-to-replace-fastag-soon-heres-the-details/ ಹೌದು ಕೆಎಸ್ ಈಶ್ವರಪ್ಪ ಬಳಿಕ ಮತ್ತೊಬ್ಬ ಬಿಜೆಪಿ ನಾಯಕ ಬಂಡಾಯವೆದ್ದಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಸಂಗಣ್ಣ ಕರಡಿ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. https://kannadanewsnow.com/kannada/govt-fixes-age-limit-for-pregnancy-through-ivf-method/ ಇದೆ ವಿಚಾರವಾಗಿ ನಾಳೆ ಕಾರ್ಯಕರ್ತರು ಹಾಗೂ ಬೆಂಬಲಿಗರ ಜೊತೆಗೆ ಸಂಗಣ್ಣ ಕರಡಿ ಸಭೆಯನ್ನು ಕರೆದಿದ್ದಾರೆ ಎನ್ನಲಾಗಿದೆ. ಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

Read More

ಮುಂಬೈ : ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅನ್ನು ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಿದ್ದ ಮಾಜಿ ಎನ್​ಸಿಬಿ ಅಧಿಕಾರಿ ಸಮೀರ್ ವಾಂಖಡೆ, ನಟಿ ರಾಖಿ ಸಾವಂತ್ ಹಾಗೂ ವಕೀಲ ಅಲಿ ಖಾಸಿಫ್ ಖಾನ್ ವಿರುದ್ಧ 11 ಲಕ್ಷದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ. https://kannadanewsnow.com/kannada/pm-modi-should-be-shot-in-the-head-rjd-leader-awadhesh-singh-yadav-watch-video/ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಇತ್ತೀಚೆಗೆ ಬಿಗ್ ಬಾಸ್ 14 ರ ಸ್ಪರ್ಧಿ ರಾಖಿ ಸಾವಂತ್ ಮತ್ತು ಡ್ರಗ್ಸ್ ಪ್ರಕರಣದಲ್ಲಿ ರೂಪದರ್ಶಿ ಮುನ್‌ಮುನ್ ಧಮೇಚಾ ಪರವಾಗಿರುವ ವಕೀಲ ಅಲಿ ಕಾಶಿಫ್ ಖಾನ್ ವಿರುದ್ಧ 11 ಲಕ್ಷದ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ಈ ಪ್ರಕರಣವು ಭಾರತದ ಮುಂಬೈನಲ್ಲಿರುವ ಮಲಾಡ್‌ನ ದಿಂಡೋಶಿ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ದಾಖಲಾಗಿದೆ. https://kannadanewsnow.com/kannada/zomato-withdraws-move-to-introduce-green-uniforms-for-vegetarians/ ಸಮೀರ್ ವಾಂಖೆಡೆ ಪ್ರಚಾರ ಪ್ರಿಯ, ಇದೇ ಕಾರಣಕ್ಕೆ ಆತ ಕೇವಲ ಸೆಲೆಬ್ರಿಟಿಗಳನ್ನು ಗುರಿ ಮಾಡಿಕೊಂಡು ಅವರಿಗೆ ಹಿಂಸೆ ನೀಡಿದ್ದ. ಆತ ಭ್ರಷ್ಟ, ಸೆಕ್ಷನ್ 29 ಅನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ’ ಎಂಬಿತ್ಯಾದಿ ಆರೋಪಗಳನ್ನು…

Read More

ತುಮಕೂರು : ಲೋಕಸಭೆ ಚುನಾವಣೆ  ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರ ಹಾಕಿದ್ದು, ಯಾರೋ ನೋಡಿ ಬಂದ ಹೆಣ್ಣನ್ನು ನಾನು ಮದುವೆ ಆಗಲ್ಲ ಎಂದು ಮಾಧುಸ್ವಾಮಿ ಮಾರ್ಮಿಕವಾಗಿ ಹೇಳಿದರು. https://kannadanewsnow.com/kannada/indias-start-up-revolution-led-by-youth-pm-modi/ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾನು ಎರಡು ಮೂರು ವಿಷಯವನ್ನು ನಿಮ್ಮ ಬಳಿ ಹೇಳಿಕೊಳ್ಳುತ್ತಿದ್ದೇನೆ. ನಾನು ಕಾಂಗ್ರೆಸ್ ಸೇರಲಿದ್ದೇನೆ ಎಂದು ಎಲ್ಲೋ ಪತ್ರಿಕೆಯಲ್ಲಿ ವರದಿ ಮಾಡಿದ್ದಾರೆ. ಕಾಂಗ್ರೆಸ್ ನ ಬಿ ಫಾರಂ ಮಾಧುಸ್ವಾಮಿಗೆ ಸಿಗುತ್ತೆ ಎಂದು ಉಲ್ಲೇಖಿಸಿದ್ದಾರೆ. ಬಿ ಫಾರಂ ಬದಲಾಯಿಸಿ ಕಾಂಗ್ರೆಸ್ ಪಕ್ಷದವರು ಕರೆದರೂ ಚುನಾವಣೆಯಲ್ಲಿ ಸ್ಪರ್ಧಿಸಲಾರೆ. ಬಿಜೆಪಿಯವರು ಕರೆದರೂ ಚುನಾವಣೆಗೆ ನಿಲ್ಲುವುದಿಲ್ಲ ಎಂದರು. https://kannadanewsnow.com/kannada/breaking-four-killed-13-injured-as-tempo-falls-into-gorge-in-kerala/ ತುಮಕೂರಿನಲ್ಲಿ ಬೆಳೆದವನಾಗಿ ಹೊರಗಿನವರಿಗೆ ಟಿಕೆಟ್ ಕೊಡುವುದಕ್ಕೆ ನನ್ನ ಒಪ್ಪಿಗೆ ಇಲ್ಲ. ನನಗೆ ಕೊಡಬೇಕು ಅಂತಲ್ಲ, ಜಿಲ್ಲೆಯ ಯಾರಿಗೆ ಕೊಟ್ಟರೂ ತೊಂದರೆ ಇರಲಿಲ್ಲ. ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಮೇಲೆ ನನಗೆ ಯಾವುದೇ…

Read More

ಇಡುಕ್ಕಿ: ಕೇರಳದ ಇಡುಕ್ಕಿಯ ಮಂಕುಲಂನ ಅನಕುಲಂ ಬಳಿ ಮಂಗಳವಾರ ಪ್ರವಾಸಿ ವಾಹನ ಅಪಘಾತಕ್ಕೀಡಾಗಿ ನಾಲ್ವರು ಸಾವನ್ನಪ್ಪಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಟೆಂಪೋ ಟ್ರಾವೆಲರ್ ಕಮರಿಗೆ ಉರುಳಿ ಬಿದ್ದು ದುರಂತ ಸಂಭವಿಸಿದೆ. ಮೃತರು ತಮಿಳುನಾಡಿನ ನಿವಾಸಿಗಳಾದ ಪಿಕೆ ಸೇತು (34), ಅಭಿನವ್, ಗುಣಶೇಖರನ್ (70), ಮತ್ತು ಥಾನ್ವಿಕ್ (1) ಎಂದು ಹೇಳಲಾಗುತ್ತಿದೆ.ಪೇಮಾರಂ ತಿರುವಿನಲ್ಲಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಕ್ರ್ಯಾಶ್ ಬ್ಯಾರಿಯರ್ ಗೆ ಡಿಕ್ಕಿ ಹೊಡೆದಿದೆ. ವಾಹನ ಕಮರಿಗೆ ಬಿದ್ದಿದೆ. ಎಲ್ಲಾ ಗಾಯಾಳುಗಳನ್ನು ತೊಡುಪುಳ ಮತ್ತು ಆದಿಮಾಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ವಾಹನದೊಳಗೆ ಹದಿನಾಲ್ಕು ಮಂದಿ ಇದ್ದರು ಎನ್ನಲಾಗಿದೆ.

Read More

ಬೆಂಗಳೂರು: ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಬುಧವಾರ ಹೇಳಿದ್ದಾರೆ.ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು ಸಿದ್ಧರಾಮಯ್ಯ ವಿರುದ್ಧ ಗುಡುಗಿದ್ದಾರೆ. https://kannadanewsnow.com/kannada/lok-sabha-elections-2024-for-the-first-time-employees-of-11-departments-including-journalists-will-get-postal-ballots/ ಬಿ.ಕೆ. ಹರಿಪ್ರಸಾದ್‌ ಅವರು ತಮ್ಮ ಮೇಲೆ ಪದೇ ಪದೇ ವಾಗ್ದಾಳಿ ನಡೆಸಿದರೂ ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳಲಾಗದಷ್ಟು, ಕನಿಷ್ಠ ಪಕ್ಷ ಪ್ರತ್ಯುತ್ತರ ಕೂಡ ನೀಡಲಾಗದಷ್ಟು ಅಸಹಾಯಕರ ತಾವು ಎಂದು ಅಶೋಕ್‌ ಹೇಳಿದ್ದಾರೆಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಬಣ ಅವಕಾಶ ಸಿಕ್ಕಾಗಲೆಲ್ಲಾ ಬಂಡಾಯದ ಬಾವುಟ ಹಾರಿಸಿ ತಮ್ಮ ಕುರ್ಚಿಯ expiry date ಮುಗಿಯುತ್ತದೆ ಎಂದು ಕಾಲೆಳೆಯುತ್ತಿದ್ದರೂ ಏನೂ ಮಾಡಲಾಗದ ಅಸಹಾಯಕ ಸ್ಥಿತಿ ನಿಮ್ಮದು ಎಂದಿದ್ದಾರೆ. https://kannadanewsnow.com/kannada/big-relief-for-national-common-mobility-card-users-no-kyc-required-up-to-rs-3000/ ಪ್ರಧಾನಿ ಮೋದಿ ಅವರೇ ಮತ್ತೊಮ್ಮೆ ಮುಂದಿನ ಐದು ವರ್ಷ ಈ ದೇಶದ ಸ್ಟ್ರಾಂಗ್ ಪ್ರಧಾನಿ ಆಗಿ ಮುಂದುವರೆಯುತ್ತಾರೆ ಎಂದು ವಿಶ್ವಾಸದಿಂದ ಹೇಳುವ ಧೈರ್ಯ ನನಗಿದೆ.ನಿಮಗೆ ತಾಕತ್ತಿದ್ದರೆ, ನೀವು ಹೇಳಿಕೊಳ್ಳುವಂತೆ ತಾವು ಸ್ಟ್ರಾಂಗ್ ಮುಖ್ಯಮಂತ್ರಿಯೇ ಆಗಿದ್ದರೆ, “ನಾನೇ ಐದು ವರ್ಷ ಮುಖ್ಯಮಂತ್ರಿ” ಎಂದು…

Read More