Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಈಗಾಗಲೇ ಚಿಕ್ಕಮಂಗಳೂರು, ಉಡುಪಿ, ಕೊಡಗು, ಶಿವಮೊಗ್ಗದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಇದೀಗ ಶಿವಮೊಗ್ಗದಲ್ಲಿ ಘೋರ ದುರಂತ ನಡೆದಿದ್ದು, ಮಳೆಯಿಂದ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ, ವೃದ್ದೆಯೋರ್ವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಅಡಗಡಿ ಗ್ರಾಮದಲ್ಲಿ ನಡೆದಿದೆ. ಗೋಡೆ ಕುಸಿದು ಮೃತಪಟ್ಟ ವೃದ್ಧೆಯನ್ನು ಶತಾಯುಷಿ ಸಿದ್ದಮ್ಮ (100) ಎಂದು ತಿಳಿದುಬಂದಿದೆ. ಇವರು ದಾವಣಗೆರೆ ಜಿಲ್ಲೆ ಹೊನ್ನಾಳ್ಳಿ ತಾಲೂಕಿನ ಕುಂಕೋವ ಗ್ರಾಮದ ನಿವಾಸಿಯಾಗಿದ್ದಾರೆ. ಇತ್ತೀಚೆಗೆ ಅಡಗಡಿ ಗ್ರಾಮದಲ್ಲಿರುವ ಸಂಬಂಧಿ ಹೇಮಾವತಿ ಎಂಬುವರ ಮನೆಗೆ ಆಗಮಿಸಿದ್ದಾಗ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮನೆಯಲ್ಲಿದ್ದ ಹೇಮಾವತಿ ಎಂಬುವರಿಗೆ ಗಾಯವಾಗಿದ್ದು, ಅವರುನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದಂತೆ ಅವರ ಕುಟುಂಬ ಸದಸ್ಯರಾದ ಪಲ್ಲವಿ, ಪರಶುರಾಮ್, ಚೇತನ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಕುಣಿಗಲ್ ಬೈಪಾಸ್ ನಲ್ಲಿ ಈ ಒಂದು ಅಪಘಾತ ನಡೆದಿದೆ. ಬೆಂಗಳೂರಿನ ಶ್ರೀರಾಂಪುರದ ಪ್ರಜ್ವಲ್ (22) ಹಾಗೂ ಸಹನಾ (21) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕುಣಿಗಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಒಂದು ಅಪಘಾತ ಸಂಭವಿಸಿದೆ. ಲಾರಿಯನ್ನು ಜಪ್ತಿ ಮಾಡಿ ಪೊಲೀಸರು ಚಾಲಕನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನೆಲಮಂಗಲದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ : ಕಳೆದ ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರ ಭೀಕರ ಗುಂಡಿನ ದಾಳಿಗೆ 25 ಅಮಾಯಕರು ಬಲಿಯಾಗಿದ್ದರು. ಅದಾದ ಬಳಿಕ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಮೂಲಕ 100ಕ್ಕೂ ಅಧಿಕ ಉಗ್ರರನ್ನು ಹತ್ಯೆಗೈದು ಸೇಡು ತೀರಿಸಿಕೊಂಡಿತು. ಇದೀಗ ಬಾಲಿವುಡ್ ನಟ ಅಮೀರ್ ಖಾನ್ ಭಯೋತ್ಪಾದಕರು ಮುಸ್ಲಿಮರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಮೀರ್ ಖಾನ್ ನಟನೆಯ ‘ಸಿತಾರೆ ಜಮೀನ್ ಪರ್’ ಚಿತ್ರ ಬಿಡುಗಡೆಗೆ ಸಿದ್ಧತೆಯಾಗಿದ್ದು, ಸಿನಿಮಾ ಪ್ರಚಾರದಲ್ಲಿರುವ ಅವರು ಇತ್ತೀಚಿಗೆ ನೀಡಿದ ಸಂದರ್ಶನ ಒಂದರಲ್ಲಿ ಹೇಳಿಕೆ ನೀಡಿದ್ದು, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆಯೂ ಆಮಿರ್ ಖಾನ್ ಮುಕ್ತವಾಗಿ ಮಾತನಾಡಿದ್ದಾರೆ. ಆಮಿರ್ ಖಾನ್ ರಜತ್ ಶರ್ಮಾ ಅವರ ‘ಆಪ್ ಕಿ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಂದರ್ಶನದ ಸಮಯದಲ್ಲಿ ಆಮಿರ್ ಖಾನ್ ಅವರಿಗೆ ಪಹಲ್ಗಾಮ್ ದಾಳಿಯ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಅಮೀರ್ ಖಾನ್ ಮತ್ತಷ್ಟು ಹೇಳುತ್ತಾ, ಯಾವುದೇ ಧರ್ಮವು ನಮಗೆ…
ಬೆಂಗಳೂರು : ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕೇರಳದ ಪೆರಿಂಗೊಟ್ಟುಕರ ದೇವಸ್ಥಾನದ ಅರ್ಚಕ ಅರುಣ್ ನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಬೆಳ್ಳಂದೂರು ಪೊಲೀಸರು ಅರ್ಚಕ ಅರುಣನ್ನು ಬಂಧಿಸಿದ್ದಾರೆ. ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿಯಾಗಿದ್ದು ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಮಾಟ ಮಂತ್ರ ಮಾಡಿಸಿದ್ದಾರೆ ಎಂದು ಮಹಿಳೆ ಪೂಜೆಗಾಗಿ ದೇಗುಲಕ್ಕೆ ತೆರಳಿದ್ದರು. 24 ಸಾವಿರ ಹಣ ಕೊಟ್ಟರೆ ಪೂಜೆ ಮಾಡುವುದಾಗಿ ಅರ್ಚಕ ಅರುಣ್ ಹೇಳಿದ್ದ. ಬಳಿಕ ಮಹಿಳೆ ಮೊಬೈಲ್ ನಂಬರ್ ಪಡೆದು ಹೇಳಿದ ದಿನ ಬರಲು ಸೂಚನೆ ನೀಡಿದ್ದಾನೆ. ಮಹಿಳೆಗೆ ತಡರಾತ್ರಿಯಲ್ಲಿ ನಿರಂತರ ವಾಟ್ಸಾಪ್ ಕರೆ ಮಾಡುತ್ತಿದ್ದ. ಅಲ್ಲದೇ ಬೆತ್ತಲೆಯಾಗಿ ಮಹಿಳೆಗೆ ವಿಡಿಯೋ ಕರೆ ಮಾಡುತ್ತಿದ್ದ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಮಾಟ ಮಂತ್ರ ಹೋಗಬೇಕು ಅಂದರೆ ಬೆತ್ತಲಾಗಬೇಕು ಅಂತ ಅರ್ಚಕ ಹೇಳಿದ್ದ ಮಹಿಳೆ ಒಪ್ಪದಿದ್ದಕ್ಕೆ ಮಕ್ಕಳು ಸಾಯುವ ಹಾಗೆ ಪೂಜೆ ಮಾಡುವ ಬೆದರಿಕೆ ಹಾಕಿದ್ದಾನೆ. ಅರ್ಚಕ ಅರುಣ್ ಬೆದರಿಕೆಯಿಂದ ಮಹಿಳೆ…
ಬೆಂಗಳೂರು : ರಾಜ್ಯ ಸರ್ಕಾರಕ್ಕೆ ಮತ್ತೊಂದು ಮುಜುಗರ ಎದುರಾಗುವ ಆತಂಕ ಶುರುವಾಗಿದ್ದು, ಲೋಕಾಯುಕ್ತರೆ ಅಕ್ರಮದಲ್ಲಿ ಭಾಗಿಯಾಗಿರುವ ಆರೋಪ ಕೇಳಿ ಬಂದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಲೋಕಾಯುಕ್ತ ಎಸ್ ಪಿ ರಿಲೀವ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೇ ಅಕ್ರಮದಲ್ಲಿ ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳ ಹೆಸರು ಕೂಡ ತಳಕು ಹಾಕಿಕೊಂಡಿದೆ. ಇಬ್ಬರು ಸಚಿವರ ಆಪ್ತ ಕಾರ್ಯದರ್ಶಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಗುಮಾನಿ ಹಬ್ಬಿದ್ದು,, ಇಬ್ಬರು ಸಚಿವರ ಪಿಎ ಗಳ ಹೆಸರನ್ನು ಲೋಕಾಯುಕ್ತ ಎಸ್ ಪಿ ಬಂಧನಕ್ಕೂ ಮುನ್ನ ಉಲ್ಲೇಖಿಸಿದ್ದಾರೆ. ಅಲ್ಲದೆ ಸಚಿವರ ಪಿಎಗಳು ಅಕ್ರಮದಲ್ಲಿ ಕೈಜೋಡಿಸಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ. ಈ ಒಂದು ಅಕ್ರಮ ಪ್ರಕರಣ ಸರ್ಕಾರದ ವಿರುದ್ಧ ವಿಪಕ್ಷಕ್ಕೆ ಇದೀಗ ಮತ್ತೊಂದು ಅಸ್ತ್ರ ದೊರೆಯುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರ ಮೊದಲ ಅವಧಿಯಲ್ಲೂ ಮುಜುಗರ ಉಂಟಾಗಿತ್ತು. ಲೋಕಾಯುಕ್ತರೆ ಅಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಮುಜುಗರ ಉಂಟಾಗಿತ್ತು. ಇದೀಗ ಸಚಿವರ ಆಪ್ತ ಕಾರ್ಯದರ್ಶಿಗಳ ಪಾತ್ರದ ಬಗ್ಗೆ ಗುಮಾನಿ ಹಬ್ಬಿದೆ. ಸಚಿವರ ಹೆಸರು ಬಹಿರಂಗಗೊಂಡರೆ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿಜಿಲ್ಲೆಯ ಸಾಗರ ಮತ್ತು ಹೊಸನಗರ ತಹಶೀಲ್ದಾರರು ರಜೆ ಘೋಷಿಸಿದ್ದಾರೆ. ಉಳಿದ ತಾಲ್ಲೂಕುಗಳಿಗೆ ಯಾವುದೇ ರಜೆ ಘೋಷಿಸಲಾಗಿಲ್ಲ. ಇದು ಶಾಲಾ ಕಾಲೇಜುಗಳು ಅಂಗನವಾಡಿಗಳು ಮತ್ತು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ತಹಶೀಲ್ದಾರರ ಮೂಲಕ ಮಾಹಿತಿ ನೀಡಿದ್ದಾರೆ.
ದಾವಣಗೆರೆ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಹೆಲಿಕ್ಯಾಪ್ಟರ್ ಬದಲಾಗಿ ರಸ್ತೆ ಮಾರ್ಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರು ದಾವಣಗೆರೆಗೆ ಆಗಮಿಸಲಿದ್ದು, ಹವಾಮಾನ ವೈಪರೀತ್ಯ ಹಿನ್ನೆಲೆ ರಸ್ತೆ ಮಾರ್ಗವಾಗಿ ದಾವಣಗೆರೆಗೆ ತೆರಳಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ಡಿಎಂ ಡಿಕೆ ಶಿವಕುಮಾರ್ ದಾವಣಗೆರೆಗೆ ಆಗಮಿಸಲಿದ್ದು, ಶಾಮನೂರು ಶಿವಶಂಕರಪ್ಪ ಅವರ ಹುಟ್ಟುಹಬ್ಬ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ದಾವಣಗೆರೆ ನಗರದ ಬಾಪೂಜಿ ಸಮುದಾಯ ಭವನದಲ್ಲಿ ಈ ಒಂದು ಕಾರ್ಯಕ್ರಮ ನಡೆಯಲಿದೆ. ಬಳಿಕ ಮಧ್ಯಾಹ್ನ 2:30ಕ್ಕೆ ತೊಗರಿ ಬೇಳೆ, ಕಡಲೆ ಬೇಳೆ ಉದ್ಘಾಟನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಗೆ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ದಾವಣಗೆರೆಯ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನಂತರ ಸಂಜೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಗುರ್ಲಾಪುರ ಬಳಿ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ಭೀಕರವಾದ ಅಪಘಾತ ಸಂಭವಿಸಿದ್ದು, ಬೈಕ್ ಹಾಗೂ ಲಾರಿ ಮಧ್ಯೆ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪಟ್ಟಣದ ಕಜ್ಜಾಳ ಮಡ್ಡಿಯ ಶ್ರೀಶೈಲ ಹಾದಿಮನಿ(34), ತಾಲ್ಲೂಕಿನ ರಂಗಾಪುರ ಗ್ರಾಮದ ಸುರೇಶ ಮಾರಾಪುರ(32) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರೆಸಿದ್ದಾರೆ.
ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಭಾರಿ ಮಳೆ ಆಗುತ್ತಿದ್ದು, ಬಿರುಗಾಳಿ ಸಹಿತ ಭಾರಿ ಮಳೆ ಆಗುತ್ತಿರುವುದರಿಂದ ರಸ್ತೆಗೆ ಅಡ್ಡಲಾಗಿ ಬೃಹತ್ ಮರ ಒಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮೂರು ವಿದ್ಯುತ್ ಕಂಬಗಳು ಧರೆಗೆ ಉರುಳಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೈಮರದ ಚಂದ್ರಿಕಾ ಎಸ್ಟೇಟ್ ಬಳಿ ಈ ಒಂದು ಘಟನೆ ಸಂಭವಿಸಿದೆ. ಚಂದ್ರದ್ರೋಣ ಪರ್ವತದ ಸಾಲಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಇನಾಮ್ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಗೆ ಅಡಲಾಗಿ ಬೃಹತ್ ಮರ ಬಿದ್ದು ಪ್ರವಾಸಿಗರು ಮತ್ತು ಸ್ಥಳೀಯರು ಪರದಾಟ ನಡೆಸುತ್ತಿದ್ದಾರೆ. ಅಲ್ಲದೆ ಚಂದ್ರದ್ರೋಣ ಪರ್ವತಕ್ಕೆ ತೆರಳುವ ಕೈಮರ ಚೆಕ್ ಪೋಸ್ಟ್ ಅನ್ನು ಬಂದ್ ಮಾಡಲಾಗಿದೆ ಹೋಲಿ ಸಿಬ್ಬಂದಿ ಪ್ರವಾಸಿಗರನ್ನು ಅಲ್ಲಿಂದ ವಾಪಸ್ ಕಳಿಸುತ್ತಿದ್ದಾರೆ ಚಿಕ್ಕಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ
ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಇಂದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಕಾರಣ ಮನೆಯಿಂದ ಹೊರಗೆ ಬರದಂತ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ನಾಳೆ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆಯನ್ನು ಘೋಷಿಸಿ ಡಿಸಿ ವಿದ್ಯಾ ಕುಮಾರಿ.ಕೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಈ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿನಲ್ ಆದೇಶ ಹೊರಡಿಸಿದ್ದು, ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ನಾಳೆ ಕೂಡ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ನಾಳೆ ಜಿಲ್ಲೆಯ ಐದು ತಾಲ್ಲೂಕಿನ ಶಾಲೆಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ,…














