Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಬೆಂಗಳೂರು : ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯ ಆರೋಪದಡಿ ಕಾರವಾರ – ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಬಂಧಿಸಿದ್ದರು. ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸತೀಶ್ ಸೈಲ್ ಗೆ 2 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಬೇಲೇಕೇರಿ ಬಂದರಿನಲ್ಲಿ ವಶಕ್ಕೆ ಪಡೆದು ಸಂಗ್ರಹಿಸಲಾಗಿದ್ದ ಸಾವಿರಾರು ಟನ್‌ಗಳಷ್ಟು ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಣೆ ಮಾಡಿದ ಪ್ರಕರಣದಲ್ಲಿ ಶಾಸಕ ಸತೀಶ್ ಸೈಲ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಸತೀಶ್​ ಸೈಲ್​ ಮತ್ತಿತರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಹೈಕೋರ್ಟ್​​ ಶಿಕ್ಷೆಯನ್ನು ಅಮಾನತಿನಲ್ಲಿಟ್ಟಿತ್ತು. ಮಂಗಳವಾರ ಶಾಂತಿ ನಗರದ ಜಾರಿ ನಿರ್ದೇಶನಾಲಯದ ಕಚೇರಿಗೆ ಆಗಮಿಸಿದ್ದ ಸತೀಶ್ ಸೈಲ್ ಅವರನ್ನು ಅಧಿಕಾರಿಗಳು ಹಲವು ಗಂಟೆಗಳ ಕಾಲ…

Read More

ಬೆಂಗಳೂರು : ಮದ್ದೂರಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆ ಬಿಜೆಪಿ ನಾಯಕರು ಭೇಟಿ ಕೊಟ್ಟಿದ್ದರೆ. ಈ ಒಂದು ಭೇಟಿ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದು, ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಬಿಜೆಯವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಬಿಜೆಪಿಯವರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ. ಉರಿಗೌಡ, ನಂಜೇಗೌಡ ಕಥೆ ಕಟ್ಟಿದ್ರಲ್ಲ, ಎಲ್ಲಿ ಹೋದ್ರು ಅವರು, ಅಮಾಯಕರನ್ನು ಮುಂದಿಟ್ಟುಕೊಂಡು ಪ್ರತಿಭಟನೆ ಮಾಡಬೇಡಿ. ನಿಮ್ಮ ಮಕ್ಕಳನ್ನು ವಿದೇಶದಿಂದ ಕರೆಸಿ ಮದ್ದೂರು ಚಲೋ ಮಾಡಿ. ಬಡವರ ಮಕ್ಕಳನ್ನು ಯಾಕೆ ಬಳಸಿಕೊಳ್ತೀರಿ? ಕಲ್ಲು ತೂರಾಟ ಕೇಸ್ ಬಗ್ಗೆ ತನಿಖೆ ಆಗ್ತಿದೆ 21 ಜನರ ಬಂಧನವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿ ಕಾರಿದರು. ಬಿಜೆಪಿ ನಾಯಕರಿಂದ ಕೇಂದ್ರ ಸಚಿವ ಅಮಿತ ಶಾ ಭೇಟಿ ವಿಚಾರವಾಗಿ ಅಮಿತ್ ಶಾ ಯಾವುದೇ ಕೇಸ್ CBI ಗೆ ಕೊಡಬೇಡಿ ಎಂದಿದ್ದಾರೆ.…

Read More

ಬೆಂಗಳೂರು : ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಶಿವನಗೆರೆ ಗ್ರಾಮದಲ್ಲಿನ ಹೊನ್ನೇಶ್ವರ ದೇವಾಲಯದ ಸುತ್ತಲು ಪ್ರಾಣಿಗಳ ವಧೆ ಮತ್ತು ಮಾಂಸಾಹಾರ ಸೇವನೆ ನಿಷೇಧಿಸಿ ಹೊರಡಿಸಿರುವ ನೋಟಿಸ್‌ ಹಿಂಪಡೆಯಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಅಲ್ಲದೇ, ದೇವಾಲಯದ ಸುತ್ತಮುತ್ತಲ ಭಾಗಗಳಲ್ಲಿ ಪ್ರಾಣಿವಧೆ ಮಾತ್ರ ಸೀಮಿತಗೊಳಿಸಿ ಮುಂದಿನ ಒಂದು ವಾರದಲ್ಲಿ ಹೊಸದಾಗಿ ನೋಟಿಸ್‌ ನೀಡಲಾಗುವುದು ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ದೇವಾಲಯದ 200 ಮೀಟರ್‌ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ಮತ್ತು ಪ್ರಾಣಿ ಬಲಿ ನಡೆಸುವಂತಿಲ್ಲ ಎಂಬ ಷರತ್ತು ವಿಧಿಸಿ ಬಡವನಹಳ್ಳಿ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು 2014ರ ಜುಲೈ 13ರಂದು ಸ್ಥಳೀಯ ಪೊಲೀಸರ ಹೊರಡಿಸಿದ್ದ ನೋಟಿಸ್‌ ಪ್ರಶ್ನಿಸಿ ಹೊನ್ನೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಎಂ.ಶ್ಯಾಮಪ್ರಸಾದ್‌ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರ ಈ ಮಾಹಿತಿ ನೀಡಿದೆ.

Read More

ಬೆಂಗಳೂರು : ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಒಂದು ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು ಹೀಗಿವೆ. • ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ಹಿಂದಿನ ಬಾರಿ ನಮ್ಮ ಸರ್ಕಾರವಿದ್ದಾಗ 43,874ಮನೆಗಳು ಸೇರಿದಂತೆ ಒಟ್ಟು 47,848 ಮನೆಗಳನ್ನು ಮಂಜೂರು ಮಾಡಲಾಗಿದೆ. ಇದರಲ್ಲಿ 13,303 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಒಟ್ಟು 25,815 ಮನೆಗಳು ನಿರ್ಮಾಣ ಹಂತದಲ್ಲಿವೆ. • ಇದರಲ್ಲಿ ಫಲಾನುಭವಿಗಳ ವಂತಿಕೆ ಒಟ್ಟು ರೂ. 134ಕೋಟಿ ಸಂಗ್ರಹಿಸಲಾಗಿದೆ. ಮೊದಲ ಹಂತದಲ್ಲಿ 7900 ಮನೆಗಳು ಬಹುತೇಕ ಪೂರ್ಣಗೊಂಡಿದ್ದು, ಫಲಾನುಭವಿಗಳ ವಂತಿಕೆ ಮೊತ್ತ ರೂ. 216 ಕೋಟಿ ಬಾಕಿಯಿದೆ. ಮನೆ ಹಂಚಿಕೆ ಮಾಡಲು ಸಾಧ್ಯವಾಗುವಂತೆ ಈ ಬಾಕಿ ಮೊತ್ತದ ಪಾವತಿ ಬಗ್ಗೆ ಹುಡ್ಕೋದಿಂದ ಸಾಲ ಪಡೆಯುವುದು ಸೇರಿದಂತೆ ಸೂಕ್ತ ಪ್ರಸ್ತಾವನೆ ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಸ್ಲಂ ಬೋರ್ಡ್ ಅಡಿ 42ಸಾವಿರ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇಲ್ಲಿ ರಸ್ತೆ ಸೇರಿದಂತೆ…

Read More

ಮಂಡ್ಯ : ಮದ್ದೂರು ಪಟ್ಟಣದಲ್ಲಿ ಇಂದು ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ, ಬಿಜೆಪಿ ನಿಯೋಗ ಭೇಟಿ ನೀಡಿದೆ. ಈ ವೇಳೆ ಬೃಹತ್ ಗಣೇಶ ಮೆರವಣಿಗೆ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗಿಯಾಗಿದ್ದಾರೆ. ಈ ಒಂದು ಮೆರವಣಿಗೆಯಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಮಾತನಾಡಿ, ನಮಗೆ ತೊಡೆತಟ್ಟಿ ಸವಾಲು ಹಾಕಬೇಡಿ ತೊಡೆ ಮುರಿಯುತ್ತೇವೆ ತಲೆಯನ್ನು ತೆಗೆಯುತ್ತೇವೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕಲ್ಲು ಹೊಡೆದವರನ್ನು ಕಲ್ಲಿನೊಳಗೆ ಸಮಾಧಿ ಮಾಡೋ ತಾಕತ್ತಿದೆ. ಆ ಒಂದು ತಾಕತ್ ಹಿಂದೂ ಸಮಾಜಕ್ಕೆ ಇದೆ. ನಾವು ಟಿಪ್ಪು ಹಾಗೂ ಅವನ ಅಪ್ಪನನ್ನೇ ಬಿಡಲಿಲ್ಲ ನೀವು ಲೆಕ್ಕಕ್ಕಿಲ್ಲ. ಉರಿಗೌಡ ನಂಜೇಗೌಡ ರಕ್ತ ನಮ್ಮ ಮೈಯಲ್ಲಿ ಇದೆ. ನಮಗೆ ತೊಡೆತಟ್ಟಿ ಸವಾಲು ಹಾಕಬೇಡಿ ತೊಡೆ ಮುರಿಯುತ್ತೇವೆ ತಲೆಯನ್ನು ತೆಗೆಯುತ್ತೇವೆ. ಹಿಂದೂಗಳ ವಿಷಯದಲ್ಲಿ ರಾಜಕಾರಣ ಮಾಡಲ್ಲ ಪಾಕಿಸ್ತಾನದ ಮೇಲೆ ಪ್ರೀತಿ ಇದ್ದರೆ ಗಂಟು ಮೂಟೆ ಕಟ್ಟಿ ಹೊರಡಿ ಎಂದು ವಾಗ್ದಾಳಿ ನಡೆಸಿದರು. ಮುಸ್ಲಿಮರು ದೇವಸ್ಥಾನದ ಮುಂದೆ ಬರಬಾರದು ಎಂದು…

Read More

ಮಂಡ್ಯ : ಮುಂದಿನ ಜನ್ಮದಲ್ಲಿ ಮುಸ್ಲಿಂ ಧರ್ಮದಲ್ಲಿ ಹುಟ್ಟಬೇಕು ಅಂತ ಕಾಂಗ್ರೆಸ್ ಶಾಸಕ ಸಂಗಮೇಶ ಹೇಳಿಕೆ ನೀಡಿದ್ದು, ಇವರ ಹೇಳಿಕೆಗೆ ಮದ್ದೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿಕೆ ನೀಡಿದ್ದು, ಮುಂದಿನ ಜನ್ಮದಲ್ಲಿ ದನ ತಿನ್ನುವವನಾಗಿಯೇ ಹುಟ್ಟು ಎಂದು ವಾಗ್ದಾಳಿ ನಡೆಸಿದರು. ಸರ್ಕಾರದ ಸುಳ್ಳಿಗೆ ನಾವೇನೂ ಸುಳ್ಳು ಹೇಳೋಕ್ಕಾಗಲ್ಲ. ತಾತ್ಕಾಲಿಕವಾಗಿ ಆರೋಪಿಗಳನ್ನು ರಕ್ಷಣೆ ಮಾಡಬಹುದು. ಮಸೀದಿಯಿಂದ ಕಲ್ಲು ಹೊಡೆಯಲು ಬಿಜೆಪಿ ಹೇಳಿತ್ತಾ? ಯಾವ ಮುಖ ಇಟ್ಟುಕೊಂಡು ಈ ರೀತಿ ಮಾತಾಡುತ್ತಾರೆ? ನಾಚಿಕೆ ಆಗಲ್ವಾ ಇವರಿಗೆ? ಎಂದು ಕಿಡಿ ಕಾರಿದರು. ಅದರ ಬದಲು ಕ್ಯಾಬಿನೆಟ್ ಪೂರ್ತಿ ಸಂಗಮೇಶ್ ಹೇಳಿದಂತೆ ಮತಾಂತರ ಆಗಿ. ಆಗ ನಾವು ನಿಮ್ಮನ್ನು ನೇರವಾಗಿ ಎದುರಿಸುತ್ತೇವೆ. ಮಸೀದಿ ಹತ್ತಿರ ಬಂದಾಗ ಪೊಲೀಸರು ಮೈಕ್ ಆಫ್ ಮಾಡಿಸಿದ್ದಾರೆ. ಅದೇ ಅಸಹಿಷ್ಣುತೆ. ಹಿಂದೂ ದೇವಾಲಯದ ಬಳಿ ಮಿಲಾದ್ ಮೆರವಣಿಗೆ ಬರಬಾರದು ಎಂದು ಹೇಳಿದರೆ ಮುಸಲ್ಮಾನರು ಎಲ್ಲಿ ಹೋಗುತ್ತಾರೆ?. ಕರೆಂಟ್ ಆಫ್ ಮಾಡಿಸಿ ಕಲ್ಲು ಹೊಡೆಸಲು ಯಾರು ಕಾರಣ? ಇವರ ಈ ರೀತಿಯ…

Read More

ಬೆಂಗಳೂರು: ಅಕ್ರಮ ಆನ್‌ಲೈನ್ ಹಾಗೂ ಆಫ್‌ಲೈನ್ ಬೆಟ್ಟಿಂಗ್ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಇದುವರೆಗೂ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ಸೇರಿದ ಕೆಜಿಗಟ್ಟಲೇ ಚಿನ್ನ, ಬೆಳ್ಳಿ, ಐಷಾರಾಮಿ ಕಾರುಗಳು ಸೇರಿ 100 ಕೋಟಿ ರೂ. ಗೂ ಅಧಿಕ ಸ್ವತ್ತುಗಳನ್ನು ಜಪ್ತಿ ಮಾಡಿದೆ. ಇಡಿ ಅಧಿಕಾರಿಗಳು ಸೆ.6ರಂದು ಚಳ್ಳಕೆರೆಯಲ್ಲಿ ಕೆ. ಸಿ. ವೀರೇಂದ್ರ ಹಾಗೂ ಸಂಬಂಧಿಕರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಈ ವೇಳೆ 24 ಕೋಟಿ ರೂ. ಮೌಲ್ಯದ 24 ಕ್ಯಾರೆಟ್ 21.43 ಕೆ.ಜಿ. ಚಿನ್ನದ ಗಟ್ಟಿ, 10.985 ಕೆ.ಜಿ. ತೂಕದ ಚಿನ್ನ ಲೇಪಿತ 11 ಬೆಳ್ಳಿ ಗಟ್ಟಿಗಳು ಹಾಗೂ 1 ಕೆ.ಜಿ. ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಇದಕ್ಕೂ ಮುನ್ನ ಇ.ಡಿ. ಅಧಿಕಾರಿಗಳು ಆರೋಪಿ ಕೆ.ಸಿ. ವೀರೇಂದ್ರ ಅವರನ್ನು 15 ದಿನಗಳ ಕಾಲ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಕಡೆಯ ನಾಲ್ಕು ದಿನ ಹೆಚ್ಚಿನ ವಿಚಾರಣೆ ವೇಳೆ ಆರೋಪಿ ಕೆ.ಸಿ. ವೀರೇಂದ್ರ ಕಿಂಗ್…

Read More

ಧಾರವಾಡ : ಧಾರವಾಡದಲ್ಲಿ ಘೋರ ಘಟನೆಯೊಂದು ನಡೆದಿದ್ದು, ಕೆರೆಯಲ್ಲಿರುವ ಕಲುಷಿತ ನೀರು ಸೇವಿಸಿ 19ಕ್ಕೂ ಹೆಚ್ಚು ಜನರಿಗೆ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ನಡೆದಿದೆ. ಜನರು ಜ್ವರದಿಂದ ಬಳಲಿದ್ದು, ಬಳಿಕ ವಾಂತಿ, ಭೇದಿ, ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಈ ಬಾರಿ ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ಬೇರೆ ಬೇರೆ ಕಡೆಗಳಿಂದ ನೀರು ಕೆರೆಗೆ ಹರಿದುಬಂದಿದೆ. ಕೆರೆ ನೀರು ಕಲುಷಿತಗೊಂಡ ಕಾರಣದಿಂದ ಜನರಿಗೆ ಜ್ವರ ಬಂದಿದ್ದು, ವಾಂತಿ, ಭೇದಿ ಕಾಣಿಸಿಕೊಂಡಿರುವ ಸಾಧ್ಯತೆಯಿದೆ. ಇದರಿಂದ ಅಲ್ಲಿನ ಜನರು ಕಂಗಾಲಾಗಿದ್ದಾರೆ. ಕೆಲವರು ಗ್ರಾಮದಲ್ಲಿರುವ ಖಾಸಗಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಲ್ಲಿ ಮಾತ್ರ ತೆಗೆದುಕೊಂಡರೆ, ಕೆಲವರು ಅತಿಯಾಗಿ ಭೇದಿಮತ್ತು ಹೊಟ್ಟೆ ನೋವಿನಿಂದ ಬಳಲಿ ನವಲಗುಂದ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ತಹಶಿಲ್ದಾರ್​ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

Read More

ಚಾಮರಾಜನಗರ: ಅರಣ್ಯದ ಅಂಚಿನ ಗ್ರಾಮಗಳಿಗೆ ಹುಲಿ, ಚಿರತೆಗಳು ನುಗ್ಗಿ ಜನ – ಜಾನುವಾರುಗಳ ಮೇಲೆ ದಾಳಿ ಮಾಡುವುದು ಸಾಮಾನ್ಯವಾಗಿದೆ. ಜೀವ ಭಯದಲ್ಲಿರುವ ಜನರಿಗೆ ಅರಣ್ಯ ಇಲಾಖೆ ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಹುಲಿ ಹಿಡಿಯಲು ಇಟ್ಟಿದ್ದ ಬೋನಿನಲ್ಲಿ ಸಿಬ್ಬಂದಿ ಕೂಡಿ ಹಾಕಿದ ಘಟನೆ ತಾಲೂಕಿನ ಬೊಮ್ಮಲಾಪುರದಲ್ಲಿ ಇಂದು ನಡೆದಿದೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ ಐವರ ವಿರುದ್ಧ FIR ದಾಖಲಾಗಿದೆ.ಬೊಮ್ಮಲಪುರ ಗ್ರಾಮದ 5 ಜನರ ವಿರುದ್ಧ FIR ದಾಖಲಾಗಿದೆ. ಅರಣ್ಯ ಸಿಬ್ಬಂದಿಗಳು ನೌಕರರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ದೂರು ನೀಡಿದ ಹಿನ್ನೆಲೆ ಬಂಡೀಪುರ ಸಿಎಫ್ ಸೂಚನೆಯಂತೆ ಗುಂಡ್ಲುಪೇಟೆ ಠಾಣೆಗೆ ದೂರು ನೀಡಿದ್ದರು. ಸಿಬ್ಬಂದಿ ನೀಡಿದ ದೂರಿನ ಅನ್ವಯ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಹಿನ್ನೆಲೆ? ಹುಲಿ, ಚಿರತೆ ದಾಳಿಗೆ ಬೇಸತ್ತ ರೈತರು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಹುಲಿ ಹಿಡಿಯಲು ಎಂದು ಬಂದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರಾಣ ಭಯದಲ್ಲಿ…

Read More

ಕೋಲಾರ : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆಯ ವೇಳೆ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಮದ್ದೂರು ಪಟ್ಟಣಕ್ಕೆ ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ ಈ ವಿಚಾರವಾಗಿ ಕಾರ್ಮಿಕ ಸಚಿವ ಸಂತೋಷ ಲಾರ್ಡ್ ಬಿಜೆಪಿ ನಾಯಕರು ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕೋಲಾರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹಿಂದು ಮುಸ್ಲಿಂ ಗಲಾಟೆ ಬಿಟ್ಟು ಬಿಜೆಪಿ ಬೇರೆ ಏನು ಮಾಡುತ್ತಿಲ್ಲ ಕಲ್ಲುತೂರಾಟ ಮಾಡಿದವರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು ಇಂದು ಅವರು ಮಾತ್ರ ಅವರ ಆಸ್ತಿಗಳನ್ನು ಬಡವರಿಗೆ ಕೊಡಿ. ಬಿಜೆಪಿ ನಾಯಕರು ಮಕ್ಕಳು ಯಾವ ಪ್ರತಿಭಟನೆಗೆ ಬಂದಿದ್ದಾರೆ ಶಕ್ತಿಪೀಠಗಳು ಹೆಚ್ಚಾಗಿ ಮಾಡಿರುವುದು ನಾವೆ ಎಂದು ಕೋಲಾರದಲ್ಲಿ ಬಿಜೆಪಿ ವಿರುದ್ಧ ಸಂತೋಷ ಲಾಡ್ ವಾಗ್ದಾಳಿ ನಡೆಸಿದರು.

Read More