Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ವರದಿಯಾಗಿದ್ದು, ಪ್ರಿಯಕರೊಂದಿಗೆ ಸೇರಿ ಕ್ರೂರಿ ತಾಯಿಯೊಬ್ಬಳು ತನ್ನ ಹೆತ್ತ ಮಗುವನ್ನೇ ಕೊಂದಿರುವ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಗುಡ್ಡದ ಅಣ್ವಿರಿ ಗ್ರಾಮದಲ್ಲಿ ನಡೆದಿದೆ. ಪ್ರಿಯಾಂಕ (4) ಎನ್ನುವ ಮಗಳನ್ನು ಉಸಿರುಗಟ್ಟಿಸಿ ಗಂಗಮ್ಮ ಮತ್ತು ಪ್ರಿಯಕರ ಅಣ್ಣಪ್ಪ ಕೊಲೆ ಮಾಡಿದ್ದಾರೆ. ಆಗಸ್ಟ್ 5 ರಂದು ಪ್ರಿಯಾಂಕ ಕೊಲೆಗೈದು ಶವ ಸುಟ್ಟು ಹಾಕಲು ಯತ್ನಿಸಲಾಗಿದೆ. ತುಂಗಾ ಮೇಲ್ದಂಡೆ ಕಾಲುವೆ ಬಳಿ ಶವ ಸುಟ್ಟು ಹಾಕಲು ಪ್ರಯತ್ನಿಸಲಾಗಿದೆ. ಬಾಲಕಿಯ ದೇಹ ಅರ್ಧ ಸುಟ್ಟು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಬಿಟ್ಟು ಪ್ರಿಯಕರ ಅಣ್ಣಪ್ಪ ಮಡಿವಾಳ ಜೊತೆಗೆ ಗಂಗಮ್ಮ ವಾಸವಿದ್ದಳು. ಮಗಳನ್ನು ಕಳಿಸಿಕೊಡು ಎಂದು ಕೇಳಲು ಹೋದಾಗ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇದೀಗ ರಾಣೆಬೆನ್ನೂರು ಪೊಲೀಸರು ಗಂಗಮ್ಮ ಮತ್ತು ಅಣ್ಣಪ್ಪನನ್ನು ಅರೆಸ್ಟ್ ಮಾಡಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ಬೆಳಗಾವಿಯಲ್ಲಿ ನಿವೇಶನಕ್ಕಾಗಿ ಮಹಿಳೆಯ ಬರ್ಬರ ಕೊಲೆಯಾಗಿದ್ದು, ನಿವೇಶನಕ್ಕಾಗಿ ರೌಡಿ ಶೀಟರ್ ತನ್ನ ತಮ್ಮನ ಹೆಂಡತಿಗೆ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಟಿಳಕವಾಡಿಯಲ್ಲಿ ನಡೆದಿದೆ. ಬೆಳಗಾವಿ ನಗರದ ಟಿಳಕವಾಡಿಯ ಗೀತಾ ಗವಳಿ (45) ಎನ್ನುವ ಮಹಿಳೆಯನ್ನು ಗಣೇಶ ಎನ್ನುವ ವ್ಯಕ್ತಿ 20ಕ್ಕೂ ಹೆಚ್ಚು ಬಾರಿ ಚಾಕು ಇರಿದು ಕೊಲೆ ಮಾಡಿದ್ದಾನೆ. ಹಲವು ವರ್ಷಗಳ ಹಿಂದೆ ಗಣೇಶ್ ತಮ್ಮ ಅಂದರೆ ಕೊಲೆಯಾದ ಗೀತಾಳ ಪತಿ ಮೃತಪಟ್ಟಿದ್ದ. ಪತಿಗೆ ಸೇರಿದ 40×12 ನಿವೇಶನಕ್ಕಾಗಿ ರಂಜಿತ್ ಜೊತೆಗೆ ಜಗಳ ನಡೆದಿತ್ತು. ಇಂದು ಬೆಳಿಗ್ಗೆ ಮಾತಿನ ಚಕಮಕಿ ನಡೆದು ಗಣೇಶ್ ಗೀತಾಳಿಗೆ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಆರೋಪಿ ಗಣೇಶ್ ಟಿಳಕವಾಡಿ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಆಗಿದ್ದು, ಸದ್ಯ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Read More

ಮಂಡ್ಯ : ಇಂದು ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಅಲ್ಲದೆ ಇಂದು ಮದ್ದೂರು ಪಟ್ಟಣದಲ್ಲಿ ಸ್ವಯಂಘೋಷಿತ ಬಂದ್ ನಡೆಸಲಾಗಿದ್ದು, ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಸಹ ಭಾಗಿಯಾಗಲಿದ್ದಾರೆ. ಮದ್ದೂರು ಪಟ್ಟಣದಲ್ಲಿ ಇಂದು ಸಹ ಸ್ವಯಂ ಘೋಷಿತ ಬಂದ್ ಮಾಡಲಾಗಿದ್ದು, ಮೂರನೇ ದಿನವೂ ಬಂದ್ ಮುಂದುವರಿಯಲಿದೆ. ಇಂದು ಸಾಮೂಹಿಕ ಗಣಪತಿ ವಿಸರ್ಜನೆ ಕಾರ್ಯಕ್ರಮ ಹಿನ್ನೆಲೆಯಲ್ಲಿ 20 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರದಾಗಕ್ರಮವಾಗಿ 3000ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಅಂಗಡಿ ಮುಂಗಟ್ಟು ಮುಚ್ಚಿ ಸ್ವಯಂ ಘೋಷಿತ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

Read More

ಗಳೂರು : ಮಂಗಳೂರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಅಮೆಜಾನ್ ಸುಗಂಧ ದ್ರವ್ಯ ಫ್ಯಾಕ್ಟರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಒಂದು ಅಗ್ನಿ ಅವಘಡ ಸಂಭವಿಸಿದ್ದು ಮುಗಿಲತ್ತರಕ್ಕೆ ಬೆಂಕಿ ಹಬ್ಬಿದೆ. ಅಮೆಜಾನ್ ಸುಗಂಧ ದ್ರವ್ಯ ಕಾರ್ಖಾನೆಗೆ ಬೆಳಗಿನ ಜಾವ 5 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ತಾಂತ್ರಿಕ ಸಮಸ್ಯೆಯಿಂದ ಈ ಒಂದು ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ತಕ್ಷಣ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Read More

ಮಂಡ್ಯ : ಇಂದು ಸಾಮೂಹಿಕ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮದ್ದೂರಿಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಸಿ.ಟಿ.ರವಿ, ಪ್ರತಾಪ್ ಸಿಂಹ, ಛಲವಾದಿ ನಾರಾಯಸ್ವಾಮಿ, ಸುಮಲತಾ ಅಂಬರೀಶ್ ಸೇರಿದಂತೆ ಹಲವು ನಾಯಕರು ಭೇಟಿ ನೀಡಲಿದ್ದಾರೆ. ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ‌ ಭಾಗಿಯಾಗಲಿದ್ದು, ಅದಕ್ಕೂ ಮುನ್ನ ಕಲ್ಲೆಸೆತದಲ್ಲಿ ಗಾಯಗೊಂಡವರ ಮನೆಗೆ ಭೇಟಿ ಕೊಡಲಿದ್ದಾರೆ. ಸ್ಥಳೀಯರಿಗೆ ಧೈರ್ಯ ತುಂಬಲಿರುವ ಕಮಲ ನಾಯಕರು, ನಂತರ ಲಾಠಿ ಚಾರ್ಜ್ ವೇಳೆ ಗಾಯಗೊಂಡವರ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಬಿ.ವೈ.ವಿಜಯೇಂದ್ರರಿಂದ ಕಾಶಿವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತೆ. ನಂತರ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.a

Read More

ನೇಪಾಳ ಪ್ರಸ್ತುತ ಆಳವಾದ ರಾಜಕೀಯ ಮತ್ತು ಸಾಮಾಜಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಭ್ರಷ್ಟಾಚಾರ ವಿರೋಧಿ ಪ್ರತಿಭಟನೆಗಳು ಮತ್ತು ಸಾಮಾಜಿಕ ಮಾಧ್ಯಮ ನಿಷೇಧದ ವಿರುದ್ಧ ಸಾರ್ವಜನಿಕ ಪ್ರತಿಭಟನೆಯ ನಂತರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದರು. ಈ ಪ್ರತಿಭಟನೆಗಳ ಸಮಯದಲ್ಲಿ ಪೊಲೀಸ್ ಕ್ರಮದ ಸಮಯದಲ್ಲಿ ಕನಿಷ್ಠ 19 ಜನರು ಸಾವನ್ನಪ್ಪಿದ್ದು, ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ಇದೀಗ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ದೆಹಲಿಯ ಕರ್ನಾಟಕ ಭವನದ ನಿವಾಸಿ ಆಯುಕ್ತರು ವಿವಿಧ ತಂಡಗಳಲ್ಲಿ ಇರುವ ಕನ್ನಡಿಗರ ಸಂಪರ್ಕದಲ್ಲಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ವಿದೇಶಾಂಗ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.a

Read More

ಮಂಡ್ಯ : ಕಳೆದೆರಡು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ವಿಸರ್ಜನಾ ವೇಳೆ ಮೆರವಣಿಗೆಯ ಮೇಲೆ ಕಲ್ಲುತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಇದೀಗ ಇಂದು ಮತ್ತೆ ಸಾಮೂಹಿಕ ಗಣೇಶ ವಿಸರ್ಜನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಮದ್ದೂರು ಪಟ್ಟಣದಾದ್ಯಂತ ಖಾಕಿ ಸರ್ಪಗಾವಲು ಇದೆ. ದಕ್ಷಿಣ ವಲಯದ ಐಜಿಪಿ ಬೋರಲಿಂಗಯ್ಯ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಭದ್ರತೆಗೆ 5 ಮಂದಿ ಎಸ್ಪಿ, 4 ಮಂದಿ ಎಎಸ್ಪಿ ಸೇರಿದಂತೆ ಸಾವಿರಾರು ಪೊಲೀಸರು ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಮಂಡ್ಯ, ಮೈಸೂರು, ಬೆಂಗಳೂರು, ರಾಮನಗರ, ಚಾಮರಾಜನಗರ, ಹಾಸನ ಸೇರಿ ಹಲವು ಜಿಲ್ಲೆಗಳ ಪೊಲೀಸರ ನಿಯೋಜನೆಗೊಳಿಸಿದ್ದು, ಕೆಎಸ್ಆರ್‌ಪಿ, ಡಿಎಆರ್ ತುಕಡಿ, ರ್ಯಾಪಿಡ್ ಆ್ಯಕ್ಷನ್ ಪೋರ್ಸ್ ಸೇರಿ 2 ಸಾವಿರ ಪೊಲೀಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇಂದು ಮದ್ದೂರಿನಲ್ಲಿ ಇಲ್ಲ ನಿಷೇಧಾಜ್ಞೆ ಮದ್ದೂರು, ಮಳವಳ್ಳಿ, ಮಂಡ್ಯ ತಾಲೂಕಿನಲ್ಲಿ ಇಂದು ಮದ್ಯ ಮಾರಾಟ, ಸಾಗಾಣಿಕೆಗೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು, ಕಳೆದ ಎರಡು ದಿನಗಳ…

Read More

ಕೆಲವೊಮ್ಮೆ ವಿವಾಹದ ವಯಸ್ಸಿಗೆ ಬಂದ ಹುಡುಗ ಹುಡುಗಿಗೆ ಅನೇಕ ಅಡೆತಡೆಗಳು ಎದುರಾಗಬಹುದು. ಸಂಬಂಧಗಳು ಸರಿಹೊಂದದಿರುವುದು, ಪ್ರಸ್ತಾಪಗಳು ಮುರಿದು ಬೀಳುವುದು ಅಥವಾ ಪ್ರಸ್ತಾಪಗಳು ಬಾರದೇಯೇ ಇರಬಹುದು. ಅಂತಹ ಸಂದರ್ಭದಲ್ಲಿ ಮಾಡಬೇಕಾದ ಪರಿಹಾರಗಳೇನು ಎನ್ನುವುದನ್ನು ಎನ್ನುವುದನ್ನು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ರಾವ್ ಇಲ್ಲಿ ವಿವರಿಸಿದ್ದಾರೆ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ call/WhatsApp 9686268564 ಮದುವೆ ತಡವಾಗುತ್ತಿದ್ದರೆ, ಅದಕ್ಕಾಗಿ ತಲೆ ಕೆಡಿಸಿಕೊಳ್ಳಬೇಡಿ ಅಥವಾ ನಿಮ್ಮ ಸಂಬಂಧವು ಮತ್ತೆ ಮತ್ತೆ ಮುರಿದು ಬೀಳುತ್ತಿದ್ದರೆ ಬೇಸರಗೊಳ್ಳಬೇಡಿ. ಇದಕ್ಕಾಗಿ ಲಾಲ್ ಕಿತಾಬ್‌ನಲ್ಲಿ ಪರಿಹಾರಗಳನ್ನು ವಿವರಿಸಲಾಗಿದೆ. ಈ ಪರಿಹಾರಗಳು ನಿಮ್ಮ ಸಮಸ್ಯೆಗಳನ್ನು ದೂರ ಮಾಡುವುದರ ಜೊತೆಗೆ, ನಿಮಗೆ ಬೇಕಾದ ಸಂಗಾತಿಯನ್ನು ಆರಿಸಿಕೊಳ್ಳಲು ಸಹ ನಿಮಗೆ…

Read More

ಚಾಮರಾಜನಗರ : ಸಾಲ ನೀಡುವುದಾಗಿ ಆನ್ಲೈನ್ ನಲ್ಲಿ 2.38 ಲಕ್ಷ ಕಳೆದುಕೊಂಡು ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಸಾಲ ನೀಡುವುದಾಗಿ ಆನ್ಲೈನ್ ಆಪ್ ನಲ್ಲಿ 2.38 ಲಕ್ಷ ವಂಚನೆಗೆ ಒಳಗಾಗಿದ್ದಾನೆ. ಧಣಿ ಕ್ಯಾಪಿಟಲ್ಸ್ ಸಂಸ್ಥೆಯಿಂದ 15 ಲಕ್ಷ ಸಾಲ ನೀಡುವುದಾಗಿ ವಂಚನೆ ಎಸಗಲಾಗಿದ್ದು, 2.38 ಲಕ್ಷ ಹಣವನ್ನು ಆನ್ಲೈನ್ ಪೇಮೆಂಟ್ ಮಾಡಿದ್ದ ರಾಜಪ್ಪ, ಹಣ ವರ್ಗಾವಣೆ ಬಳಿಕ ವಂಚನೆ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.ನನ್ನ ಸಾವಿಗೆ ಧಣಿ ಕ್ಯಾಪಿಟಲ್ಸ್ ನ ಅನಂತ್ ಲೂಹ ಚಿಕ್ಕರಂಜನ್ ಕಾರಣ ಎಂದು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಕುರಿತು ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿ ಪ್ರೇಯಸಿಗಾಗಿ ಪತಿಯೊಬ್ಬ ತನ್ನ ಗರ್ಭಿಣಿ ಪತ್ನಿಯನ್ನು ಕೊಂದು ಅಪಘಾತವಾದಂತೆ ಬಿಂಬಿಸಿ ನಾಟಕವಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪತಿ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೌದು ಪ್ರೇಯಸಿಗಾಗಿ ಗರ್ಭಿಣಿ ಪತ್ನಿ ಕೊಂದು ಅಪಘಾತದ ನಾಟಕವಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತ್ನಿಯನ್ನು ಕೊಂದು ಅಪಘಾತದ ನಾಟಕವಾಡಿದ ಪತಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಪತಿ ವಕೀಲ ಪ್ರದೀಪ್ ಕಿರಣಿಗೆ ಸೇರಿ ಮುವರನ್ನು ಬಂಧಿಸಲಾಗಿದೆ. ಅಥಣಿ ತಾಲೂಕಿನ ಮಂಗಸೂಳಿ ಗ್ರಾಮದ ರಾಜೇಂದ್ರ ಕಾಂಬಳೆ ಹಾಗೂ ಮಹಾರಾಷ್ಟ್ರದ ಸಾಂಗ್ಲಿ ಸದ್ದಾಂ ಇನಾಂದಾರ್ ಬಂಧಿತರು ಎಂದು ತಿಳಿದು ಬಂದಿದೆ. ಕಾಗವಾಡ ತಾಲೂಕಿನ ಬಿಕೆ ಹೂಗಾರ್ ಗ್ರಾಮದಲ್ಲಿ ಈ ಒಂದು ಕೊಲೆ ಘಟನೆ ನಡೆದಿತ್ತು. ಪ್ರಕರಣ ಹಿನ್ನೆಲೆ? ಪ್ರೇಯಸಿಗಾಗಿ 15 ಲಕ್ಷ ಸುಪಾರಿ ಕೊಟ್ಟು ಚಟ್ಟ ಕಟ್ಟಿದ ಪತಿ, ರಾಡ್ ನಿಂದ ತಲೆಗೆ ಹೊಡೆದು ಆರು ತಿಂಗಳ ಗರ್ಭಿಣಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಸೆಪ್ಟೆಂಬರ್ 7ರಂದು ಬಿಕೆ ಉಗಾರ…

Read More