Subscribe to Updates
Get the latest creative news from FooBar about art, design and business.
Author: kannadanewsnow05
ಉತ್ತರಕನ್ನಡ : ರಾಜ್ಯದಲ್ಲಿ ಸಿಎಂ ಬದಲಾವಣೆ ಸಂಬಂಧ ಚರ್ಚೆ ನಡೆಯುತ್ತಿದೆ. ಇದರ ಬೆನ್ನಲ್ಲೆ ಡಿನ್ನರ್ ಪೊಲಿಟಿಕ್ಸ್ ಹೆಚ್ಚಾಗಿದೆ. ಸಿಎಂ ಸಿದ್ದರಾಮಯ್ಯ ಡಿಸಿಎಂ. ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಪೊಲಿಟಿಕ್ಸ್ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಿದ್ದರು. ನಿನ್ನೆ ಸತೀಶ್ ಜಾರಕಿಹೊಳಿ ಡಿನ್ನರ್ ಪಾರ್ಟಿ ನಡೆಸಿದ್ದರು. ಅಲ್ಲದೇ ಸದನದಲ್ಲೂ ಕೂಡ ನಾಯಕತ್ವ ಬದಲಾವಣೆ ಚರ್ಚೆ ನಡೆಯಿತು. ಇದರ ಮಧ್ಯ ಡಿಸಿಎಂ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದು, ನನ್ನ ಮತ್ತು ಸಿದ್ದರಾಮಯ್ಯ ಮಧ್ಯೆ ಒಪ್ಪಂದ ನಡೆದಿದೆ. ನಾವಿಬ್ಬರೂ ಮಾತನಾಡಿಕೊಂಡಿದ್ದೇವೆ, ಅದರಂತೆ ನಡೆದುಕೊಳ್ಳುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೀಶ್ವರಿ ಅಮ್ಮನವರ ದೇವಸ್ಥಾನಕ್ಕೆ ಡಿಕೆಶಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ, ನಾನು ಯಾವತ್ತೂ ಐದು ವರ್ಷ ಇರುವುದಿಲ್ಲ ಎಂದು ಹೇಳಿಲ್ಲ. ಹೈಕಮಾಂಡ್ ನಿರ್ಧಾರ ಆಗಿದೆ. ಹೈಕಮಾಂಡ್ ಸಿಎಂ ಪರವಾಗಿ ಇದ್ದದ್ದಕ್ಕೆ ಅವರು ಸಿಎಂ ಆಗಿದ್ದಾರೆ ಎಂದರು. ಈಗಲು ಮುಂದೆಯೂ ನಾನೇ ‘CM’ ಇನ್ನು…
ಬೆಂಗಳೂರು : ಮನೆ ಮುಂದೆ ಆಟವಾಡುತ್ತಿದ್ದ ಬಾಲಕನಿಗೆ ಹಿಂಬದಿಯಿಂದ ಒದ್ದು ವಿಕೃತಿ ಮೆರೆದಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 14 ರಂದು ತ್ಯಾಗರಾಜನಗರದಲ್ಲಿ ಘಟನೆ ನಡೆದಿದ್ದು, ರಂಜನ್ ಎಂಬ ಆರೋಪಿಯನ್ನ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜ್ಜಿ ಮನೆಗೆ ಬಂದಿದ್ದ ಬಾಲಕ ನೀವ್ ಜೈನ್ ತನ್ನ ಪಾಡಿಗೆ ತಾನು ರಸ್ತೆಯಲ್ಲಿ ಆಟವಾಡುತ್ತಿದ್ದ. ಈ ವೇಳೆ ಹಿಂದಿನಿಂದ ಬಂದಿದ್ದ ರಂಜನ್ ಜಾಡಿಸಿ ಒದ್ದಿದ್ದರಿಂದ ಬಾಲಕ ಮುಗ್ಗರಿಸಿ ಬಿದ್ದಿದ್ದ. ಆರೋಪಿಯ ಕುಕೃತ್ಯದಿಂದ ನೆಲಕ್ಕೆ ಬಿದ್ದ ಬಾಲಕನಿಗೆ ತರಚಿದ ಗಾಯಗಳಾಗಿದ್ದವು. ಆರೋಪಿಯ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದರಿಂದ ಪ್ರಕರಣ ದಾಖಲಿಸಿಕೊಂಡ ಬನಶಂಕರಿ ಠಾಣೆ ಪೊಲೀಸರು ಆರೋಪಿ ರಂಜನ್ನನ್ನು ಬಂಧಿಸಿದ್ದಾರೆ.
ಗದಗ : ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲೂ ಇಂದು ಗದಗ ಜಿಲ್ಲಾ ಆಯುಷ್ ಇಲಾಖೆ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ಧಿಡಿರ್ ಎಂದು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದರು. ಗದಗ ಲೋಕಾಯುಕ್ತ ಸಿಪಿಐ ಪರಮೇಶ್ವರ್ ನೇತೃತ್ವದ ತಂಡದಿಂದ ದಾಳಿ ನಡೆಸಲಾಗಿದೆ. ಆಯುಷ್ ಇಲಾಖೆಯಲ್ಲಿ ಭ್ರಷ್ಟಾಚಾರ ಆಡಿಯೋ ಭಾರಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಿದರು.
ಬೆಂಗಳೂರು : ಬೆಂಗಳೂರಲ್ಲಿ ರೌಡಿ ಶೀಟರ್ ಬಿಕ್ಲು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜು ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ ವಿಧಿಸಿದ್ದ ಸರ್ಕಾರದ ಕ್ರಮವನ್ನು ರದ್ದುಪಡಿಸಿರುವ ಹೈಕೋರ್ಟ್, ಇದೇ ಆರೋಪ ಸಂಬಂಧ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವುದಕ್ಕೆ ನಿರಾಕರಿಸಿದೆ. ಜತೆಗೆ, ಪ್ರಕರಣ ಸಂಬಂಧ ಕೋರಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಈ ಆದೇಶದಿಂದ ಈ ಹಿಂದೆ ಮಂಜೂರಾಗಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನು ರದ್ದಾದಂತಾಗಿದ್ದು, ಭೈರತಿ ಬಸವರಾಜು ಅವರಿಗೆ ಬಂಧನ ಭೀತಿ ಎದುರಾದಂತಾಗಿದೆ. ಬಿಕ್ಲು ಶಿವಕುಮಾರ್ ಕೊಲೆ ಪ್ರಕರಣದಲ್ಲಿ ತಮ್ಮ ವಿರುದ್ದ ದಾಖಲಾಗಿದ್ದ ಕೋಕಾ ಕಾಯಿದೆ ಮತ್ತು ಎಫ್ಐಆರ್ ರದ್ದು ಮಾಡುವುದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ತ ಯಾದವ್ ಅವರಿದ್ದ ನ್ಯಾಯಪೀಠ ಅರ್ಜಿಯನ್ನು ಭಾಗಶಃ ಪುರಸ್ಕರಿಸಿದೆ. ಕೋಕಾ ಕಾಯಿದೆ ರದ್ದುಮಾಡಿದ್ದು, ಇನ್ನುಳಿದ ಅರ್ಜಿಗಳನ್ನು ವಜಾಗೊಳಿಸಿ ಆದೇಶಿಸಿದೆ. ಕೋಕಾ ಕಾಯಿದೆ ಜಾರಿ ಮಾಡುವಲ್ಲಿ…
ಬೆಂಗಳೂರು : ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ವಿರುದ್ಧ ಆಹಾರ ಇಲಾಖೆ ಅಧಿಕಾರಿಗಳು ಮೆಗಾ ಆಪರೇಷನ್ ನಡೆಸಿದ್ದಾರೆ. ಅಕ್ರಮವಾಗಿ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿರುವವರ ವಿರುದ್ಧ ಕಾರ್ಯಚರಣೆ ನಡೆಸಿದ್ದು ಮೂರು ತಿಂಗಳಲ್ಲಿ 15056 ಅಕ್ರಮ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಇನ್ನು 5,632 ಕಾರ್ಡ್ ಗಳ ವಿಚಾರಣೆ ಕಾಯ್ದಿರಿಸಿ ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಇನ್ನು ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿ ಅಂದರೆ ಬಿಪಿಎಲ್ ಕಾರ್ಡ್ ಒಟ್ಟು 1,13,56,089 ಹಾಗೂ ಅಂತ್ಯೋದಯ ಕಾರ್ಡ್ 42,94,924 ಚಾಲ್ತಿಯಲ್ಲಿದ್ದು ಒಟ್ಟು 1, 53,65,889 ಪಡಿತರ ಚೀಟಿ ರಾಜ್ಯದಲ್ಲಿ ಚಾಲ್ತಿಯಲ್ಲಿವೆ ಎಂದು ತಿಳಿದುಬಂದಿದೆ. ಕಳೆದ ಮೂರು ತಿಂಗಳಲ್ಲಿ 15056 ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗಿದ್ದು ಇನ್ನು 5632 ಬಿಪಿಎಲ್ ಕಾರ್ಡ್ ಗಳನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ. ಇನ್ನು ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ 3.9 ಲಕ್ಷ ಕಾರ್ಡ್ ಗಳನ್ನು ಬದಲಾವಣೆ ಮಾಡಲಾಗಿದ್ದು, ಇನ್ನು 4.10 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಪರಿಷ್ಕರಣೆ ಮಾಡಲಾಗಿದೆ ಅಕ್ರಮ ಫಲಾನುಭವಿಗಳು 14 ಲಕ್ಷ…
ರಾಯಚೂರು : ರಾಯಚೂರಿನಲ್ಲಿ ಹಾಡಾಗಲೇ ಭೀಕರವಾದ ಕೊಲೆಯಾಗಿದ್ದು, ಡ್ರೈಫ್ರೂಟ್ಸ್ ವ್ಯಾಪಾರಿಯನ್ನು ಅಟ್ಟಾಡಿಸಿ ಭೀಕರವಾಗಿ ಕೊಲೆ ಮಾಡಲಾಗಿದೆ. ಆಂಧ್ರಪ್ರದೇಶ ಮೂಲದ ಕಡಪ ಮೂಲದ ಇಮಾಮ್ ಹುಸೇನ್ 24 ಎನ್ನುವ ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ರಾಯಚೂರಿನ ರೇಡಿಯೋ ಸ್ಟೇಷನ್ ಬಳಿ ಮತ್ತು ತಡರಾತ್ರಿ ಈ ಒಂದು ಭೀಕರ ಕೊಲೆ ನಡೆದಿದೆ. ಕರೀಂ ಎಂಬವನಿಗೆ ಗಂಭೀರವಾದ ಗಾಯಗಳಾಗಿದ್ದು ಆತನನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 10 ದಿನದಿಂದ ರಾಯಚೂರಿನಲ್ಲಿ ಬೀದಿಬದಿ ವ್ಯಾಪಾರ ಮಾಡುತ್ತಿದ್ದರು. ಜ್ ವೇಳೆ ನಾಲ್ವರು ಹಣ ವಸೂಲಿ ಮಾಡಲು ಬಂದಿದ್ದಾರೆ. ಅದಕ್ಕೆ ಹಣ ನೀಡಲ್ಲ ಎಂದಿದಕ್ಕೆ ಕಲ್ಲಿನಿಂದ ಜಜ್ಜಿ ಭೀಕರ ಇಮಾಮ ಹುಸೇನ್ ನನ್ನು ಕೊಲೆ ಮಾಡಿದ್ದಾರೆ. ಈ ವೇಳೆ ಕರೀಂ ಎಂಬತನಿಗೂ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ ಸದರ ಭಾಜರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ : ಕಳೆದ ಕೆಲವು ತಿಂಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳಿಗೆ ವಿಷ ಹಾಕಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಹಸುವಿನ ಮಾಲೀಕ ಚಂದು, ಸಿದ್ದರಾಜು, ಸಂಪು ಹಾಗೂ ಗಣೇಶ ಎಂಬವರು ಹುಲಿ ಕೊಂದ ಆರೋಪ ಹೊತ್ತಿದ್ದರು. ಕೊಳ್ಳೇಗಾಲ ಜೆಎಂಎಫ್‌ಸಿ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ. ಹಸುಗಳನ್ನು ಹುಲಿಗಳು ಕೊಂದಿವೆ ಎಂದು ಅದೇ ಸಿಟ್ಟಿನಲ್ಲಿ ಹಸುವಿನ ಮಾಲೀಕ ಮಾಂಸದಲ್ಲಿ ವಿಷ ಹಾಕಿದ್ದರು ಹಾಗಾಗಿ ಹುಲಿಗಳು ಮಾಂಸ ಸೇವಿಸಿ ಸಾವನ್ನಪ್ಪಿದ್ದವು. ಪ್ರಕರಣ ಹಿನ್ನೆಲೆ ? ಮಲೆ ಮಹದೇಶ್ವರಬೆಟ್ಟ ವನ್ಯಧಾಮದ ಪಚ್ಚೆದೊಡ್ಡಿ ಅರಣ್ ಪ್ರದೇಶದಲ್ಲಿ ಅ.2 ರಂದು ಹುಲಿಯೊಂದನ್ನು ಮೂರು ಭಾಗಗಳಾಗಿ ತುಂಡರಿಸಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ತಲೆಯಿಂದ ಭುಜದವರೆಗೆ ಒಂದು ಭಾಗ, ಭುಜದಿಂದ ಹೊಟ್ಟೆವರೆಗೆ ಮತ್ತೊಂದು ಭಾಗ ಹಾಗೂ ಅದರಿಂದ ಕೆಳಕ್ಕೆ ಇನ್ನೊಂದು ಭಾಗವಾಗಿ ಹುಲಿಯನ್ನು ತುಂಡರಿಸಲಾಗಿತ್ತು. ವನ್ಯಜೀವಿ ಸಪ್ತಾಹದ ವೇಳೆಯೇ ಇಂತಹ ಕೃತ್ಯ ನಡೆದಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ…
ಬೆಂಗಳೂರು ದಕ್ಷಿಣ : ಲವ್ ಮಾಡು ಎಂದು ಯುವತಿಯ ಬೆನ್ನು ಹತ್ತಿದ್ದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. 19 ವರ್ಷದ ಯುವತಿಯ ಹಿಂದೆ 40 ವರ್ಷದ ವ್ಯಕ್ತಿ ಲವ್ ಮಾಡು ಎಂದು ದುಂಬಾಲು ಬಿದಿದ್ದಾನೆ. ನನ್ನನ್ನು ಪ್ರೀತಿ ಮಾಡು ಎಂದು ಬೆನ್ನು ಬಿದ್ದಿದ್ದ. ಇದನ್ನ ಸಹಿಸದ ಯುವತಿಯ ತಂದೆ ಹಾಗೂ ಸೋದರ ಮಾವ 40 ವರ್ಷದ ಚೆಲುವ ಎನ್ನುವ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಮಾಗಡಿ ತಾಲೂಕಿನ ಗಟ್ಟಿಪುರ ಗ್ರಾಮದ ಬಳಿ ವ್ಯಕ್ತಿಯ ಕೊಲೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಈ ಒಂದು ಕೊಲೆ ನಡೆದಿದೆ ಯುವತಿ ಹೋದಲ್ಲಿ ಬಂದಲ್ಲಿ ಈತ ಪ್ರೀತ್ಸೇ ಎಂದು ಪೀಡಿಸುತ್ತಿದ್ದ ಎನ್ನುವ ಆರೋಪ ಕೇಳಿ ಬಂದಿದೆ.ಈ ವಿಚಾರ ತಿಳಿದು ಪಾಗಲ್ ಪ್ರೇಮಿ ಹತ್ಯೆಗೆ ಪ್ಲಾನ್ ಮಾಡಿದ್ದಾರೆ ನಿನ್ನೆ ಕಾರಿನಲ್ಲಿ ಯುವತಿಯ ಪೋಷಕರು ಚೆಲುವನನ್ನು ಅಪಹರಣ ಮಾಡಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ.
ಬೆಳಗಾವಿ : ರಾಜ್ಯದ ರೈತರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಒಂದನ್ನು ನೀಡಿದ್ದು ಇಷ್ಟು ದಿನ ಪ್ರತಿ ಲೀಟರ್ಗೆ ಐದು ರೂಪಾಯಿ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು. ಬೆಳಗಾವಿ ಅಧಿವೇಶನದಲ್ಲಿ ರೈತರ ಹಿತ ದೃಷ್ಟಿಯಿಂದ ರೈತರಿಗೆ ನೀಡುತ್ತಿದ್ದ ಐದು ರೂಪಾಯಿ ಪ್ರೋತ್ಸಾಹ ಧನವನ್ನು 7 ರೂಪಾಯಿಗೆ ಹೆಚ್ಚಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. ಪ್ರಸ್ತುತ ಪ್ರೋತ್ಸಾಹಧನವು ರೈತರಿಗೆ ಸಂಪೂರ್ಣವಾಗಿ ತಲುಪುತ್ತಿಲ್ಲ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆ ಹೊರತಾಗಿಯೂ ಸರ್ಕಾರದಿಂದ ನೆರವು ಮುಂದುವರಿಯುತ್ತದೆ ಎಂದರು. ತಮ್ಮ ಸರ್ಕಾರದ ಹಿಂದಿನ ಅವಧಿಯ (2013-18) ಪ್ರಣಾಳಿಕೆ ಭರವಸೆಗಳನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ, 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರ ಜೊತೆಗೆ ಬಜೆಟ್‌ನಲ್ಲಿ ಘೋಷಿಸದೆ 30 ಹೊಸ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದರು.a
ಬೆಳಗಾವಿ : ವಿಪಕ್ಷ ನಾಯಕ ಆರ್.ಅಶೋಕ್ CLP ಸಭೆಯಲ್ಲಿ ನಿಮ್ಮನ್ನು ಆಯ್ಕೆ ಮಾಡಿರುವುದು 5 ವರ್ಷಕ್ಕಾ ಅಥವಾ ಎರಡೂವರೆ ವರ್ಷಕ್ಕೊ ಸರಿಯಾಗಿ ಹೇಳಿ ಎಂದು ಸಿಕ್ ಸಿದ್ದರಾಮಯ್ಯಗೆ ಒತ್ತಾಯ ಮಾಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಎರಡೂವರೆ ವರ್ಷವೆಂದು ಹೇಳಿಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದು ಸದನದಲ್ಲೂ ಕೂಡ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ನಡುವೆ ಮತ್ತೆ ಕುರ್ಚಿಯ ವಿಚಾರವಾಗಿ ಜಟಾಪಟಿ ನಡೆಯಿತು. ಈ ವೇಳೆ ಸಿಎಂ ಸಿದ್ದರಾಮಯ್ಯ ಈಗ ನಾನು ಸಿಎಂ ಆಗಿದ್ದೇನೆ ಮುಂದೇನು ನಾನೇ ಇರುತ್ತೇನೆ ಎಂದು ಮತ್ತೆ ಗುಡುಗಿದ್ದಾರೆ. ಸದನದಲ್ಲಿ ನಾಯಕತ್ವ ವಿಚಾರವಾಗಿ ಚರ್ಚೆ ನಡೆಯುವ ವೇಳೆ ನಾಯಕತ್ವ ಬದಲಾವಣೆ ಇದು ನಮ್ಮ ಪಕ್ಷದ ವಿಚಾರ. ಏನೇ ಇದ್ದರು ನಮ್ಮ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈಗ ನಾನು ಸಿಎಂ ಆಗಿದ್ದೇನೆ ಮುಂದೆಯೂ ನಾನೇ ಇರುತ್ತೇನೆ ಎಂದರು. ಈ ವೇಳೆ ಈಗ ಉತ್ತರ ಕರ್ನಾಟಕ ಭಾಗಕ್ಕೆ…














