Subscribe to Updates
Get the latest creative news from FooBar about art, design and business.
Author: kannadanewsnow05
ಮಂಗಳೂರು : ಮಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಕಾರೊಂದು ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ನಡುವೆ ನಿನ್ನೆ ತಡರಾತ್ರಿ ನಡೆದಿದೆ. ಮೃತ ವೈದ್ಯರನ್ನು ಕೇರಳದ ಆಳಪ್ಪುಝ ನಿವಾಸಿ, ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಅಲ್ಲಿಯೇ ಫಿಸಿಯೋಥೆರಪಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ| ಮೊಹಮ್ಮದ್ ಅಮಲ್ (29) ಎಂದು ತಿಳಿದುಬಂದಿದೆ. ಇನ್ನು ಕಾರಿನಲ್ಲಿದ್ದ ಕೇರಳ ಮೂಲದ ವೈದ್ಯ ವಿದ್ಯಾರ್ಥಿನಿ ಗಾಯಗೊಂಡಿದ್ದಾಳೆ. ನಂತೂರಿನ ತಾರೆತೋಟ ಬಳಿ ಘಟನೆ ನಡೆದಿದ್ದು, ರಾತ್ರಿ ಮಳೆ ಬರುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿದ ಕಾರು ಸ್ಕಿಡ್ ಆಗಿ ಡಿವೈಡರ್‌ಗೆ ಬಡಿದು ಬಳಿಕ ಮೂರು ಪಲ್ಟಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಈ ವೇಳೆ ಅವರು ಮೃತಪಟ್ಟಿದ್ದರು. ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ : ಬೆಳಗಾವಿಯಲ್ಲಿ ಒಂದು ವಿಚಿತ್ರವಾದ ಘಟನೆ ನಡೆದಿದ್ದು, ವಿಷಕಾರಿ ಹಾವು ಕಚ್ಚಿಸಿಕೊಂಡ ಬಳಿಕ ರೈತನೋಬ್ಬ ಅದೇ ಹಾವಿನೊಂದಿಗೆ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿರುವ ಘಟನೆ, ಬೆಳಗಾವಿಯಲ್ಲಿ ನಡೆದಿದೆ. ಹೌದು ಬೆಳಗಾವಿ ತಾಲೂಕಿನ ಅಂಬೇವಾಡಿಯಲ್ಲಿ ಈ ಒಂದು ಘಟನೆ ನಡೆದಿದ್ದು ಜಮೀನಿನಲ್ಲಿ ಕೆಲಸ ಮಾಡುವಾಗ ರೈತನಿಗೆ ಹಾವು ಕಚ್ಚಿದೆ. ಕೂಡಲೇ ಹಾವನ್ನು ಬಾಟಲಿಯಲ್ಲಿ ಹಾಕಿಕೊಂಡು ರೈತ ಯಲ್ಲಪ್ಪ ಆಸ್ಪತ್ರೆಗೆ ಬಂದಿದ್ದಾನೆ. ರುಸೇಲ್ಸ್ ಎಂಬ ವಿಷಕಾರಿ ಹಾವು ಕಡಿದ ಹಿನ್ನೆಲೆಯಲ್ಲಿ ರೈತನ ಸ್ಥಿತಿ ಗಂಭೀರವಾಗಿದ್ದು ಬೆಳಗಾವಿಯ ಬಿಮ್ಸ್ ತುರ್ತು ಚಿಕಿತ್ಸಾ ಘಟಕದಲ್ಲಿ ರೈತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನ : ಹಾಸನದಲ್ಲಿ ಭಾರಿ ಮಳೆಯಿಂದಾಗಿ ಶಿರಾಡಿ ಘಾಟ್ ರಸ್ತೆಯಲ್ಲಿ ತಡೆಗೋಡೆ ನಾಶವಾಗಿದ್ದು, ಮಳೆಗೆ ನೂತನವಾಗಿ ನಿರ್ಮಿಸಿದ್ದ ರಸ್ತೆ ತಡೆಗೋಡೆ ಕೊಚ್ಚಿ ಹೋಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಆನೆ ಮಹಲ್ ಬಳಿ ಈ ಒಂದು ಘಟನೆ ಸಂಭವಿಸಿದೆ. ಹೌದು ಶಿರಾಡಿ ಘಾಟ್ ಬಳಿ ಆನೆ ಮಹಲ್ ಎಂಬಲ್ಲಿ ಸುಮಾರು 100 ಮೀಟರ್ ಉದ್ದಕ್ಕೂ ಗೆಬ್ರಿಯನ್ ವಾಲ್ ಕುಸಿದು ಬಿದ್ದಿದೆ. ರಸ್ತೆಯ ಸುರಕ್ಷತೆಗೆ ಎಂದು ನಿರ್ಮಿಸಿದ್ದ ತಡೆಗೋಡೆ ಇದೀಗ ಭಾರಿ ಮಳೆಗೆ ಕೊಚ್ಚಿಕೊಂಡು ಹೋಗಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಶಿರಾಡಿ ಘಾಟ್ ರಸ್ತೆಯಲ್ಲಿ ಇಂತಹ ಅವಘಡಗಳು ಹೆಚ್ಚುತ್ತಿವೆ.
ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಲ್ಲಿ ಕೊಲೆ ಆರೋಪಿ ನಟ ದರ್ಶನಗೆ ರಾಜಾತಿಥ್ಯ ನೀಡಲಾಗುತ್ತಿತ್ತು ಎನ್ನುವ ಪ್ರಕರಣ ಬಾರಿ ಸದ್ದು ಮಾಡಿತ್ತು. ಅದಾದ ಬಳಿಕ ತನಿಖೆ ಕೂಡ ನಡೆದಿತ್ತು. ಇದೀಗ ಪರಪ್ಪನ ಅಗ್ರಹಾರ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿ ಗಾಂಜಾ, ಚಾಕು, ಬ್ಲೇಡ್ ಸೇರಿದಂತೆ ಹಲವು ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಹೌದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಕೇಂದ್ರ ಅಪರಾಧ ವಿಭಾಗ ಪೊಲೀಸರು ಏಕಾಏಕಿ ದಾಳಿ ನಡೆಸಿ ಗಾಂಜಾ, ಬ್ಲೇಡ್, ಚಾಕು, ನಗದು ಹಣ ಸೇರಿ ಹಲವಾರು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ನಿನ್ನೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಸಿಸಿಬಿ ತಂಡ ಜೈಲಿನಲ್ಲಿ ತೀವ್ರ ತಪಾಸಣೆ ನಡೆಸಿದ್ದು, ಕೈದಿಗಳ ಬಳಿಯಿಂದ ಅನೇಕ ಅಸಾಧಾರಣ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಈ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ದಾಳಿ ವೇಳೆ ಕಸೂರಿ ಮೇತಿ ಸೊಪ್ಪು, ಬೀಡಿ ಪ್ಯಾಕೆಟ್ಸ್, ಗಾಂಜಾ ಚಿಲ್ಲಂಸ್, ಮೊಳೆಗಳು, ಹರಿತವಾದ…
ಶಿವಮೊಗ್ಗ : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತಗೊಂಡಿದ್ದು, ಕುಂದಗಲ್ ಬಳಿ ಭಾರಿ ಪ್ರಮಾಣದಲ್ಲಿ ಬಿರುಕು ಬಿಟ್ಟು ಭೂಮಿ ಕುಸಿತವಾಗಿದೆ. ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂದಗಲ್ ನಲ್ಲಿ ಈ ಘಟನೆ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕುಂದಗಲ ಗ್ರಾಮದಲ್ಲಿ ಒಂದು ಅಡಿ ಕುಸಿತ ಕಂಡಿದ್ದ ಭೂಮಿಯಲ್ಲಿ ಮತ್ತೆ ಎರಡು ಅಡಿ ಕುಸಿತವಾಗಿದೆ. ಎರಡು ಅಡಿ ಆಳಕ್ಕೆ ಭೂಮಿ ಕುಸಿದಿವೆ.ಗ್ರಾಮದ ರಸ್ತೆಯು ಸೇರಿದಂತೆ ಭಾರಿ ಪ್ರಮಾಣದಲ್ಲಿ ಭೂಮಿ ಕುಸಿತವಾಗಿದೆ. ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಅಲ್ಲದೆ ಬಹುವಿಜ್ಞಾನ ಮತ್ತು ಕಂದಾಯ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಘೋರವಾದ ದುರಂತ ಒಂದು ನಡೆದಿದ್ದು, ಕರೆಂಟ್ ಶಾಕ್ ನಿಂದ ಬಾಲಕನೊಬ್ಬ ಸುಟ್ಟ ಗಾಯಗಳಿಂದ ನೆರಳಾಡುತ್ತಿರುವ ಘಟನೆ, ಬೆಂಗಳೂರಿನ ಕೆಆರ್ ಪುರಂ 53ನೇ ವಾರ್ಡ್ನಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ. ನಿರ್ಮಾಣ ಹಂತದ ಕಟ್ಟಡದ ಬಳಿ ವಿದ್ಯುತ್ ಪ್ರವಹಿಸಿದ್ದರಿಂದ ಬಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ಹೌದು ಅಪಾಯಕಾರಿಯಾಗಿ ಹಾದುಹೋಗಿರುವ ವಿದ್ಯುತ್ ತಂತಿಯ ಬಳಿ ನಿನ್ನೆ ಆಟ ಆಡುತ್ತಾ ಬಾಲಕ ಪೊರಕೆ ಬಿಸಾಡಲು ಹೋಗಿದ್ದ. ವಿದ್ಯುತ್ ತಂತಿಗೆ ಪೊರಕೆ ತಾಗಿ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ. ಕರೆಂಟ್ ಶಾಕ್ ಗಾಯಗಳಿಂದ ಬಾಲಕ ಇದೀಗ ತೀವ್ರವಾಗಿ ನರಳಾಡುತ್ತಿದ್ದಾನೆ. ಸದ್ಯ ಬಾಲಕನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಸುಟ್ಟ ಗಾಯಗಳ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಕೆಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ : RCB, KSCA & DNA ಸಂಸ್ಥೆಗಳಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಇಂದು ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರಣೆ ನಡೆಯಿತು. ಇದೆ ವೇಳೆ ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟಕ್ಕೆ ವರದಿಯನ್ನು ಸಲ್ಲಿಸಿತು. ವಿಚಾರಣೆಯ ಬಳಿಕ ಆರ್‌ಸಿಬಿ ಕೆ ಎಸ್ ಸಿ ಎ ಹಾಗೂ ಡಿಎನ್ಎ ಸಂಸ್ಥೆಗಳಿಗೆ ಹೈ ಕೋರ್ಟ್ ನೋಟಿಸ್ ನೀಡಿ ವಿಚಾರಣೆಯನ್ನು ಜೂನ್ 23ಕ್ಕೆ ನಿಗದಿಪಡಿಸಿತು ವಿಚಾರಣೆಯ ಆರಂಭದ ವೇಳೆ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಕೆ ಏಕೆ ಎಂದು ಹೈಕೋರ್ಟ್ ಪ್ರಶ್ನಿಸಿತು. ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು ಹಾಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ ಎಂದು ಹೈಕೋರ್ಟಿಗೆ ಸರ್ಕಾರದ ಪರವಾಗಿ ಎಜಿ ಶಶಿಕಿರಣಶೆಟ್ಟಿ ಉತ್ತರಿಸಿದರು. ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೆ ಸರ್ಕಾರದ ಆಕ್ಷೇಪವಿಲ್ಲ. ಆದರೆ ನ್ಯಾಯಾಂಗ ತನಿಖೆ ಬಾಕಿ ಇರುವುದರಿಂದ ವರದಿ ಬಹಿರಂಗ ಅಗಿದು ಬೇಡ ಎಂದು ಎಜಿ ಶಶಿಕಿರಣ್ ಶೆಟ್ಟಿ ತಿಳಿಸಿದರು. ಈ ಪ್ರಕರಣದಲ್ಲಿ ಅಮೈಕಸ್ ಕ್ಯೂರಿ ಅಗತ್ಯವಿದೆ ಎಂದು ಇದೇ ವೇಳೆ ಹೈಕೋರ್ಟ್…
ಮೈಸೂರು : ಮುಂಬರುವ ನವೆಂಬರ್ ತಿಂಗಳಿನಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಅಥವಾ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಗಲಿದ್ದಾರೆ ಎಂದು ಇತ್ತೀಚಿಗೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದದ್ದರು. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಪ್ರತಿಕ್ರಿಯೆ ನೀಡಿದ್ದು, ಮುಖ್ಯಮಂತ್ರಿ ಬದಲಾವಣೆಗೆ ಯಾವುದೇ ಕಾರಣಗಳಿಲ್ಲ ಎಂದರು. ಮೈಸೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂಚೆಯಿಂದಲೂ ಈಗ ಆಗುತ್ತೆ ಅಂತ ಹೇಳ್ತಾನೆ ಇದ್ದಾರೆ. ಮುಖ್ಯಮಂತ್ರಿ ಬದಲಾವಣೆ ಮಾಡಲಿಕ್ಕೆ ಯಾವುದೇ ಕಾರಣಗಳು ಸದ್ಯಕ್ಕೆ ಇಲ್ಲ. ನಮ್ಮ ಪಕ್ಷ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಚೆನ್ನಾಗಿ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳ ಬದಲಾವಣೆ ಪಕ್ಷ ತೀರ್ಮಾನಕ್ಕೆ ಬಿಟ್ಟಿದ್ದು, ಇದರ ಬಗ್ಗೆ ಯಾರು ಪ್ರತಿಕ್ರಿಯೆ ಮಾಡುವುದು ಬೇಡ ಎಂದು ಮೈಸೂರಲ್ಲಿ ಕಾಂಗ್ರೆಸ್ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಬೆಂಗಳೂರು : ಅಕ್ರಮವಾಗಿ ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದ, ಆಂಧ್ರಪ್ರದೇಶದ YSRCP ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿಯನ್ನು ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಹೌದು ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ಬಾರಿ ಆಂಧ್ರಪ್ರದೇಶದ ಚಂದ್ರಗಿರಿ ಶಾಸಕರಾಗಿದ್ದ ಹೆವಿ ರೆಡ್ಡಿ ಭಾಸ್ಕರ ರೆಡ್ಡಿ, ಇದೀಗ ವಿದೇಶಕ್ಕೆ ಅಕ್ರಮವಾಗಿ ತೆರಳಲು ಯತ್ನಿಸುತ್ತಿದ್ದ. ಈ ವೇಳೆ ಚೆವಿರೆಡ್ಡಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಆಂಧ್ರ ಪ್ರದೇಶದ ಅಬಕಾರಿ ಹಗರಣದ ಆರೋಪಿಯಾಗಿದ್ದು, ಸದ್ಯ ಕೆಂಪೇಗೌಡ ಏರ್ಪೋರ್ಟ್ ಪೊಲೀಸ್ ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಶಕ್ಕೆ ಪಡೆದುಕೊಂಡಿರುವ ಕುರಿತು ಏರ್ಪೋರ್ಟ್ ಪೊಲೀಸರು ಆಂಧ್ರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ದಾವಣಗೆರೆ : ಮೋದಿ ಅವರು ಅಧಿಕಾರಕ್ಕೆ ಬಂದು 11 ವರ್ಷ ಆಯಿತು. 56 ಇಂಚಿನ ಎದೆ ಇದೆ ಎನ್ನುತ್ತಾರೆ. ಎದೆಯಲ್ಲಿ ಮನುಷ್ಯತ್ವ ಇರಬೇಕು, ಕರುಣೆ ಇರಬೇಕು. ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುವ ಇವರು ಬೆಲೆ ಏರಿಕೆ ವಿರುದ್ಧ ಏಕೆ ಮಾತನಾಡಲ್ಲ?. ಮೋದಿ ಪಿಎಂ ಆಗುವ ವೇಳೆ 28 ಸಾವಿರ ಚಿನ್ನದ ಬೆಲೆ ಇತ್ತು. ಇದೀಗ 1 ಲಕ್ಷ ಬೆಲೆ ಇದೆ. ಇದಕ್ಕೆ ನರೇಂದ್ರ ಮೋದಿಯೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿ ಸೋಮವಾರ ನಡೆದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಅವರು, ಒಂದು ಕೆಜಿ ಬೆಳ್ಳಿಯ ಬೆಲೆ 43 ಸಾವಿರ ಇತ್ತು, ಇದೀಗ 95 ಸಾವಿರ ಆಗಿದೆ. ಅಲ್ಲದೆ ಪೆಟ್ರೋಲ್, ಡಿಸಿಲ್, ಗ್ಯಾಸ್ ಬೆಲೆ ಗಗನಕ್ಕೆ ಏರಿಕೆ ಆಗಿದೆ. 400 ರೂಪಾಯಿ ಇದ್ದ ಗ್ಯಾಸ್ 890 ರೂಪಾಯಿ ಆಗಿದೆ. ಗ್ಯಾಸ್ ಸಬ್ಸಿಡಿ ಕೊಡ್ತಿದ್ದರು ಅದನ್ನೂ ನಿಲ್ಲಿಸಿದ್ದಾರೆ. ಇದರಿಂದ ಜನ…














