Subscribe to Updates
Get the latest creative news from FooBar about art, design and business.
Author: kannadanewsnow05
ಶಿವಮೊಗ್ಗ : ಕಾಂತರ ಚಾಪ್ಟರ್ 1 ರಲ್ಲಿ ಯಾಕೋ ಎಲ್ಲವು ಸರಿ ಇಲ್ಲ ಸಿನೆಮಾ ಸೆಟ್ ನಲ್ಲಿ ಒಂದಾದರೋಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಈಗಾಗಲೇ ಚಿತ್ರತಂಡ ಮೂವರು ಕಲಾವಿದರನ್ನು ಕಳೆದುಕೊಂಡಿದೆ. ಇದರ ಬೆನ್ನಲ್ಲೆ ನಿನ್ನೆ ರಾತ್ರಿ ಮತ್ತೊಂದು ಅವಘಡ ಸಂಭವಿಸಿದೆ.ಚಿತ್ರದ ನಾಯಕ ರಿಷಬ್ ಶೆಟ್ಟಿ ಸೇರಿದಂತೆ 30 ಕಲಾವಿದರಿದಂತ ಬೋಟ್ ಒಂದು ಮುಗುಚಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಹೌದು ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಬೋಟ್ ಒಂದು ಮುಗಿಚಿದೆಯಂತೆ. ಬೋಟ್ನಲ್ಲಿ ರಿಷಬ್ ಶೆಟ್ಟಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಮಂದಿ ಕಲಾವಿದರು, ಹಾಗೂ ತಂತ್ರಜ್ಞರು ಇದ್ದರೆಂದು ವರದಿ ಆಗಿದೆ. ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಬೋಟು ಮುಗಿಚಿದೆ ಆದರೆ ಯಾವುದೇ ಜೀವ ಹಾನಿ ಆಗಿಲ್ಲ. ಕಲಾವಿದರು, ತಂತ್ರಜ್ಞರೆಲ್ಲರೂ ಈಜಿಕೊಂಡು ದಡಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದೆ. ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿತ್ತು. ಕತ್ತಲಿನಲ್ಲೇ ಸಿನಿಮಾದ ಶೂಟಿಂಗ್ ಮಾಡಲಾಗುತ್ತಿತ್ತು. ದೋಣಿ ಮುಗಿಚಿದರೂ ಕಲಾವಿದರು ಮತ್ತು ತಂತ್ರಜ್ಞರು ಸೇಫ್ ಆಗಿದ್ದಾರಾದರೂ ಕ್ಯಾಮೆರಾ ಇನ್ನಿತರೆ ಸೆಟ್…
ಯಾದಗಿರಿ : ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಅನುದಾನ ನೀಡುವುದನ್ನು ಮುಂದುರೆಸುತ್ತೇವೆ. ಈ ಹಿಂದೆ ಕಲಬುರಗಿಗೆ ಬಂದಾಗ ಪ್ರತಿ ವರ್ಷ 5 ಸಾವಿರ ಕೋಟಿ ರು. ಕೊಡುವೆ ಅಂತ ಹೇಳಿದ್ದೆ. ಕೊಟ್ಟ ಮಾತಿನಂತೆ ನಡೆದಿದ್ದೇವೆ. ಮುಂದಿನ ವರ್ಷವೂ 5 ಸಾವಿರ ಕೋಟಿ ರು. ಖರ್ಚು ಮಾಡಬೇಕು ಅಂತ ಸೂಚನೆ ಕೊಟ್ಟಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ನಿನ್ನೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ ಆಯೋಜಿಸಿದ್ದ ‘ಆರೋಗ್ಯ ಅವಿಷ್ಕಾರ’ ಕಾರ್ಯಕ್ರಮದಡಿ, ಈ ಪ್ರದೇಶದ 7 ಜಿಲ್ಲೆಗಳ ₹440.63 ಕೋಟಿಗಳ ವೆಚ್ಚದ ಆರೋಗ್ಯ ಇಲಾಖೆಯ ವಿವಿಧ ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಜಿಲ್ಲಾ ಬಂಜಾರಾ ಭವನದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿ ಜೊತೆಗೆ, ಸಮಗ್ರ ಕರ್ನಾಟಕ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಡಾ। ಡಿ.ಎಂ.ನಂಜುಂಡಪ್ಪ ಅವರ ವರದಿ ನೀಡಿ ಎರಡು ದಶಕಗಳು ಕಳೆದಿದೆ. ಹಾಗಾಗಿ ಹಿಂದುಳಿದ ಪ್ರದೇಶಗಳ ಹೊಸ ಸೂಚ್ಯಂಕ ನಿಗದಿಪಡಿಸಲು ಆರ್ಥಿಕ ತಜ್ಞ…
ವಿಜಯಪುರ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಲಾಡ್ಜ್ ನಲ್ಲಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಕೋಳೂರು ತಾಂಡಾದ ಅನಿಲ್ ಜಾಧವ, ಲಾಡ್ಜ್ ಮ್ಯಾನೇಜರ್ ಉಡುಪಿ ಜಿಲ್ಲೆ ಕಾರ್ಕಳದ ರಘುನಾಥ ಶೆಟ್ಟಿ, ಕಾಪು ತಾಲ್ಲೂಕಿನ ದಿನೇಶ ಶೆಟ್ಟಿ, ಚಿಕ್ಕಮಗಳೂರಿನ ಗೌತಮ, ಯಾದಗಿರಿ ಜಿಲ್ಲೆ ಹುಣಸಗಿಯ ಭೀಮರಾಯ ಬೂದಿಹಾಳ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ನಿನ್ನೆ ಬೆಂಗಳೂರಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಾಧ್ಯಾಪಕರೊಬ್ಬರು ಕನ್ನಡ ಮಾತನಾಡಿದ್ದಕ್ಕೆ ಕೆಲಸದಿಂದ ತೆಗೆದುಹಾಕಿದರು ಎಂದು ಆರೋಪ ಮಾಡಿ ವಿಡಿಯೊ ಮಾಡಿದ್ದರು. ಬೆಂಗಳೂರಿನ ಕೋಣನಕುಂಟೆಯಲ್ಲಿರುವ ಆರ್ ವಿ ಪಿಯು ಕಾಲೇಜ್ ನಲ್ಲಿ ಈ ಒಂದು ಘಟನೆ ನಡೆದಿತ್ತು. ಆರ್‌ವಿ ಲರ್ನಿಂಗ್ ಹಬ್ ಎಂಬ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸುತ್ತಿದ್ದ ರೂಪೇಶ್ ಪುತ್ತೂರು ವಿದ್ಯಾರ್ಥಿಯೊಬ್ಬ ಕನ್ನಡದಲ್ಲಿ ಕೇಳಿದ ಗೊಂದಲದ ಬಗ್ಗೆ ಕನ್ನಡದಲ್ಲಿ ಉತ್ತರಿಸಿದ್ದಾರೆ.ಆದರೆ ಇದೇ ಸಮಯಕ್ಕೆ ವಿದ್ಯಾರ್ಥಿನಿಯೊಬ್ಬಳು ದನಿ ಎತ್ತಿ ಕನ್ನಡದಲ್ಲಿ ಸಂವಹಿಸದಂತೆ ತಾಕೀತು ಮಾಡಿದ್ದಾಳೆ. ಏನೇ ಮಾತನಾಡುವುದಿದ್ದರೂ ಇಂಗ್ಲಿಷ್‌ನಲ್ಲೇ ಮಾತನಾಡಿ, ತನಗೆ ಕನ್ನಡ ಬರುವುದಿಲ್ಲ ಎಂದು ಹೇಳಿದ್ದಾಳೆ. ಇದಕ್ಕೆ ಕನ್ನಡ ಕ್ರಿಮಿನಲ್ ಭಾಷೆಯಲ್ಲ, ಇಷ್ಟು ದ್ವೇಷ ಬೇಡ ಎಂದು ಪ್ರಾಧ್ಯಾಪಕ ಬುದ್ದಿ ಹೇಳಿದ್ದು, ವಿದ್ಯಾರ್ಥಿನಿ ಪ್ರಾಂಶುಪಾಲರಿಗೆ ದೂರು ನೀಡಿದ್ದಾಳೆ. ಈ ದೂರಿನ ಮೇರೆಗೆ ಪ್ರಾಧ್ಯಾಪಕರನ್ನು ಕರೆಸಿದ ಕಾಲೇಜು ಮ್ಯಾನೇಜ್‌ಮೆಂಟ್ ಕೆಲಸಕ್ಕೆ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿತ್ತು. ಅಲ್ಲದೇ ಒಂದುವೇಳೆ ರಾಜೀನಾಮೆ ಸಲ್ಲಿಸದಿದ್ದರೆ ಮತ್ತೊಂದು ಆರ್‌ವಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವ…
ದುಬೈ : ಶುಕ್ರವಾರ ತಡರಾತ್ರಿ ದುಬೈ ಮರೀನಾದಲ್ಲಿರುವ 67 ಅಂತಸ್ತಿನ ವಸತಿ ಗೋಪುರವಾದ ಮರೀನಾ ಪಿನಾಕಲ್ ಒಳಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 6 ಗಂಟೆಗಳ ನಂತರ ಅಗ್ನಿಶಾಮಕ ದಳ ಮತ್ತು ಇತರ ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಈ ಎತ್ತರದ ಕಟ್ಟಡದಲ್ಲಿ 3,820 ನಿವಾಸಿಗಳಿದ್ದರು, ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ಈ ಘಟನೆಯಲ್ಲಿ ಯಾವುದೇ ಗಾಯಗಳು ಅಥವಾ ಸಾವುನೋವುಗಳು ವರದಿಯಾಗಿಲ್ಲ. ಆಗಸದೆತ್ತರಕ್ಕೆ ಹೊಗೆ ಹರಡುತ್ತಿರುವ ವಿಡಿಯೋ ವೈರಲ್ ಆಗಿದೆ. ಅಗ್ನಿ ಅವಘಡ ಕುರಿತು ಶನಿವಾರ ನಸುಕಿನ 1.44ಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಡಿಎಂಒ ಮಾಹಿತಿ ಹಂಚಿಕೊಂಡಿದ್ದಾರೆ. 67 ಅಂತಸ್ತಿನ ಕಟ್ಟಡದಲ್ಲಿದ್ದ ಜನರನ್ನು ಸುರಕ್ಷಿತವಾಗಿ ಹೊರಕ್ಕೆ ತರಲಾಗಿದೆ. ಅವರ ದೈಹಿಕ ಆರೋಗ್ಯ ಮತ್ತು ಮಾನಸಿಕ ಆರೈಕೆಯ ಕಾಳಜಿಗೆ ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ. ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ತಂಡ ತನ್ನ ಪ್ರಯತ್ನ ಮುಂದುವರಿಸಿದೆ ಎಂದು ತಿಳಿಸಿದ್ದರು. ಆಂಬುಲೆನ್ಸ್ ಸಹಿತ ವೈದ್ಯಕೀಯ ತಂಡ ಭೇಟಿ ನೀಡಿದೆ ಎಂದು ನಸುಕಿನ 2.09ಕ್ಕೆ ಸಂದೇಶ ಕಳುಹಿಸಿದ್ದಾರೆ. ಬಹುಮಹಡಿ…
ಬೆಂಗಳೂರು : ರಾಜ್ಯದಲ್ಲಿ ಓಲಾ, ಉಬರ್ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಜೂನ್ 24ಕ್ಕೆ ನಿಗದಿ ಪಡಿಸಿದೆ. ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಕೆಗೆ ಪೂರಕವಾದ ಮಧ್ಯಂತರ ಪರಿಹಾರ ನೀಡಲು ನ್ಯಾಯಪೀಠ ನಿರಾಕರಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 15ರ ಬಳಿಕ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳ್ಳುವುದು ಬಹುತೇಕ ಖಚಿತವಾಗಿದೆ. ರಾಜ್ಯದಲ್ಲಿ ಸೂಕ್ತ ನಿಯಮಗಳ ರಚನೆ ಯಾಗದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳಿಸಲು ನಿರ್ದೇಶನ ನೀಡಿರುವ ಏಕ ಸದಸ್ಯಪೀಠ ಆದೇಶ ಪ್ರಶ್ನಿಸಿ ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಎನ್‌ಐ ಟಕ್ನಾಲಜಿ ಪ್ರೈವೇಟ್ ಲಿಮಿಟೆಡ್ (ಓಲಾ), ವರ್ಕುಟಿ ಮಹೇಂದ್ರ ರೆಡ್ಡಿ(ಬೈಕ್ ಟ್ಯಾಕ್ಸಿಗಳ ಮಾಲೀಕರು) ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯ ಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯ ಮೂರ್ತಿ ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅಡ್ವೋಕೆಟ್ ಜನರಲ್ ಶಶಿಕಿರಣ್ ಶೆಟ್ಟಿ…
ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾದೀನ ಕೈದಿಯ ಮೇಲೆ ಹಲ್ಲೆ ನಡೆಸಲಾಗಿದೆ. ಜೈಲಿನೊಳಗೆ ನಡೆದಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ಇದೀಗ ವೈರಲ್ ಆಗಿದೆ. ಫೇಸ್ಬುಕ್ ನಲ್ಲಿ ಭದ್ರಾವತಿ ಜೆಡಿಎಸ್ ಮುಖಂಡ ಅಜಿತ್ ಅಪ್ಪಾಜಿಗೌಡ ಪೋಸ್ಟ್ ಅಪ್ ಲೋಡ್ ಮಾಡಿದ್ದು, ಕಾರ್ಯಗೃಹದಲ್ಲಿ ಸಹಪಾಠಿ ಗಳಿಂದ ಕಿರಣ್ ಸೇಠ ಎಂಬುವನ ಮೇಲೆ ಹಲ್ಲೆ ನಡೆದಿದೆ. ನಿನ್ನೆ ಅಟ್ರಾಸಿಟಿ ಕೇಸ್ ನಲ್ಲಿ ಜೆಡಿಎಸ್ ಕಾರ್ಯಕರ್ತ ಕಿರಣ್ ಜೈಲು ಸೇರಿದ್ದ ಕಿರಣ್ ನನ್ನು ಬಂಧಿಸಿ ಭದ್ರಾವತಿ ಗ್ರಾಮಾಂತರ ಪೊಲೀಸರು ಜೈಲಿಗೆ ಕಳುಹಿಸಿದ್ದರು. ಸಂಜೆ ಊಟಕ್ಕೆ ಬಿಟ್ಟಾಗ ರೂಮ್ಗೆ ಕರೆದುಕೊಂಡು ಹೋಗಿ ಹಲ್ಲಿ ನಡೆಸಿದ್ದಾರೆ. ಪರಶುರಾಮ್ ಯಾನೆ, ಅಪ್ಪು ನಾಯ್ಕ್, ಶಬರೀಶ್ ಹಾಗು ಪ್ರದೀಪ್ ಎನ್ನುವ ಸಹ ಕೈದಿಗಳು ಹಲ್ಲೆ ಮಾಡಿದ್ದಾರೆ. ಪಕ್ಷದ ವಿಚಾರದಲ್ಲಿ ಹೊಡೆದಾಡಿಕೊಂಡ ಬಗ್ಗೆ ಮಾಹಿತಿ ಇದೆ ಈ ಕುರಿತು FIR ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಜೈಲರ್ ರಂಗನಾಥ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್ 4ರಂದು ಕಾರ್ಯಕ್ರಮ ಹಮ್ಮಿಕೊಂಡಿರತ್ತು. ಈ ಒಂದು ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಈ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದಾರೆ. ಈ ಒಂದು ಘಟನೆಯನ್ನು ಖಂಡಿಸಿ ಇದೇ ಜೂನ್ 16 ಮತ್ತು 17ರಂದು ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಹೌದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ಜೂನ್ 16 ಮತ್ತು 17 ರಂದು ಪ್ರತಿಭಟನೆ ನಡೆಸಲಿದೆ. ಜೂನ್ 16 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದ್ದು, ಅದೇ ರೀತಿಯಾಗಿ ಜೂನ್ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ನಿನ್ನೆ ನಿಗದಿಯಾಗಿದ್ದ ಧರಣಿ, ಅಹಮದಾಬಾದ್ ವಿಮಾನ ದುರಂತದಿಂದ ಪ್ರತಿಭಟನೆ ಮುಂದೂಡಲ್ಪಟ್ಟಿತ್ತು. ಹಾಗಾಗಿ ಜೂನ್…
ಮಂಡ್ಯ : ಮಂಡ್ಯದಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಯುವಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿನಿಯ ಬಳಿ ಈ ಒಂದು ದುರ್ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಆಕಾಶ್ (24) ಎಂದು ಗುರುತಿಸಲಾಗಿದೆ. ಆಕಾಶ್ ಮೈಸೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ರೈಲು ಹರಿದ ರಭಸಕ್ಕೆ ರುಂಡ ಮತ್ತು ಮುಂಡ ಬೇರ್ಪಟ್ಟಿವೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಮೈಸೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಾಗಲಕೋಟೆ : ಶಿಕ್ಷಣ ಇಲಾಖೆಯಲ್ಲಿ CRP ಆಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಷಣೆ ಎಸೆಗಿದ ಆರೋಪದ ಅಡಿ ಇದೀಗ ಬಾಗಲಕೋಟೆಯಲ್ಲಿ ಶಿಕ್ಷಕ ಮುತ್ತು ಮುಳ್ಳಾ ಎನ್ನುವವನನ್ನು ಅರೆಸ್ಟ್ ಮಾಡಲಾಗಿದೆ. ಹೌದು ಬಾಗಲಕೋಟೆಯ ವಿದ್ಯಗಿರಿ ನಿವಾಸಿಯಾಗಿರುವ ಮುತ್ತು ಮುಳ್ಳ ಎನ್ನುವ ಶಿಕ್ಷಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಅಪ್ರಾಪ್ತ ಬಾಲಕಿಯ ಮೇಲೆ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿ ಕೇಸ್ ದಾಖಲಾಗಿತ್ತು. ಬಾಗಲಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಶಿಕ್ಷಕರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಶಿಕ್ಷಣ ಇಲಾಖೆಯಲ್ಲಿ ಸಿಆರ್ಪಿ ಆಗಿ ಕೆಲಸ ಮಾಡುತ್ತಿದ್ದ ಶಿಕ್ಷಕನನ್ನು ಇದೀಗ ಅರೆಸ್ಟ್ ಮಾಡಲಾಗಿದೆ.














