Author: kannadanewsnow05

ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ತಮ್ಮ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಹುಕ್ಕೇರಿ ತಾಲ್ಲೂಕಿನ ಹಟ್ಟಿಆಲೂರಿನ ರಾಯಪ್ಪ ಸುರೇಶ ಕಮತಿ(28) ಕೊಲೆಯಾದವರು. ಬಸವರಾಜ ಕಮತಿ(24) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಬಸವರಾಜ್ ಕಮತಿ ಕುವೈತ್ ನ್ಯಾಷನಲ್ ಪೆಟ್ರೋಲಿಯಂ ಕಂಪನಿಯಲ್ಲಿ ವಾಲ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ರಜೆ ಮೇಲೆ ತನ್ನ ಊರಾದ ಹಟ್ಟಿ ಆಲೂರಿಗೆ ತೆರಳಿದ್ದ. ಈ ವೇಳೆ ಅಣ್ಣ ರಾಯಪ್ಪ ಕಮತಿ, ಬಸವರಾಜ್ ಗೆ ಮತ್ತೆ ಕೆಲಸಕ್ಕೆ ಹೋಗಲು ಬಿಡದೇ ತನ್ನೊಂದಿಗೆ ಕುರಿ ಕಾಯಲು ಬಾ ಎಂದು ಕರೆಯುತ್ತಿದ್ದನಂತೆ. ಅಲ್ಲದೇ ಪ್ರತಿದಿನ ಕುರಿದೊಡ್ಡಿಯಲ್ಲಿ ಮಲಗಲು ಹೇಳುತ್ತಿದ್ದನಂತೆ. ಇದೇ ಕಾರಣಕ್ಕೆ ಸಹೋದರರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಬೇಸತ್ತ ಬಸವರಾಜ್ ಅಣ್ಣನನ್ನೇ ಕೊಲ್ಲಲು ಪ್ಲಾನ್ ಮಾಡಿದ್ದಾನೆ. ಅಣ್ಣ ಕುರಿ ಕಾಯಲು ಜಮೀನು ಬಳಿ ಹೋಗಿದ್ದಾಗ ಬಸವರಾಜ್ ಮನೆಯಿಂದ ಖಾರದ ಪುಡಿ ತೆಗೆದುಕೊಂಡು ಹೋಗಿದ್ದಾನೆ. ಅಣ್ಣ ಮರದ ಕೆಳಗೆ ಮೊಬೈಲ್ ನಲ್ಲಿ ರೀಲ್ಸ್ ನೋಡುತ್ತ…

Read More

ಮಂಗಳೂರು : ನಗರದಲ್ಲಿ ಕಳೆದ ಕೆಲ ಗಂಟೆಯಿಂದ ಭಾರೀ ಮಳೆಯಾಗುತ್ತಿದ್ದು, ಪಂಪ್‌ವೆಲ್ ವೃತ್ತವು ಮತ್ತೆ ಮುಳುಗಡೆಯಾಗಿದೆ. ಭಾರೀ ಮಳೆ ನೀರು ರಸ್ತೆಯಲ್ಲೇ ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನು ರಸ್ತೆಯಲ್ಲಿ ನಿಂತ ನೀರಿನಿಂದ ಬಸ್ಸೊಂದು ಕೆಟ್ಟು ನಿಂತಿದ್ದು, ಸಾರ್ವಜನಿಕರು ಬಸ್ಸನ್ನು ರಸ್ತೆ ಬದಿಗೆ ತಳ್ಳಿದ್ದಾರೆ. ಇನ್ನು ಪಡೀಲ್ ರೈಲ್ವೆ ಅಂಡರ್ ಪಾಸ್​​ನಲ್ಲಿಯೂ ರಸ್ತೆಯಲ್ಲಿ ನೀರು ತುಂಬಿ ವಾಹನ ಓಡಾಟಕ್ಕೆ ಅಡಚಣೆಯಾಗಿದೆ. ನಗರದ ಕಾರ್​ಸ್ಟ್ರೀಟ್​ನಲ್ಲಿ ಕೃತಕ ನೆರೆಗೆ ರಸ್ತೆಯಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ಇರುವ ಮನೆಗಳಿಗೆ ನೀರು ತುಂಬಿದ್ದು, ಮನೆಯೊಳಗೆ ನೀರು ನುಗ್ಗಿದೆ. ಹವಾಮಾನ ಇಲಾಖೆ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್​​ ಅಲರ್ಟ್ ಘೋಷಿಸಿದ್ದರೂ ಜಿಲ್ಲೆಯಲ್ಲಿ ಭಾರೀ ಮಳೆ ಆಗಿರಲಿಲ್ಲ. ಆದರೆ, ಇಂದು ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು, ದಟ್ಟ ಮೋಡಗಳು ಇನ್ನಷ್ಟು ಮಳೆಯ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್ 16ರ ಮುಂಜಾನೆ ವರೆಗೆ ರೆಡ್​​ ಅಲರ್ಟ್ ಎಚ್ಚರಿಕೆ…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಅನ್ಯ ಭಾಷಿಕರ ದಬ್ಬಾಳಿಕೆ ಹಾಗೂ ಕನ್ನಡಿಗರ ಮೇಲೆ ಹಲ್ಲೆ ಮಾಡಿರುವ ಘಟನೆಗಳು ನಡೆದಿತ್ತು.ಅಲ್ಲದೆ ಇದಕ್ಕೆ ಕನ್ನಡಿಗರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದರು.ಆದರೆ ಇದೀಗ ವಿಪರ್ಯಾಸ ಅಂದರೆ ಕಾಲೇಜು ಒಂದರಲ್ಲಿ ಕನ್ನಡದಲ್ಲಿ ಪ್ರಶ್ನೆ ಕೇಳಿದ ವಿದ್ಯಾರ್ಥಿಗೆ ಉಪನ್ಯಾಸಕರು ಕನ್ನಡದಲ್ಲಿ ಉತ್ತರ ಹೇಳಿದ್ದಕ್ಕೆ ತನ್ನ ಕೆಲಸವನ್ನೇ ಕಳೆದುಕೊಂಡಿದ್ದಾರೆ. ಹೌದು, ಈ ಒಂದು ಘಟನೆ ನಡೆದಿದ್ದು ಬೆಂಗಳೂರಿನ ಕೋಣನಕುಂಟೆಯಲ್ಲಿರುವ ಆರ್ ವಿ ಪಿಯು ಕಾಲೇಜಿನಲ್ಲಿ ಎಂದು ತಿಳಿದುಬಂದಿದೆ. ಕನ್ನಡದಲ್ಲಿ ವಿದ್ಯಾರ್ಥಿ ಪ್ರಶ್ನೆ ಕೇಳಿದ್ದ ಅದಕ್ಕೆ ಉಪನ್ಯಾಸಕ ಕನ್ನಡದಲ್ಲಿ ಉತ್ತರಿಸಿದ್ದರು . ಕನ್ನಡದಲ್ಲಿ ಉತ್ತರ ನೀಡಿದ್ದಕ್ಕೆ ಉಪನ್ಯಾಸಕನ ವಿರುದ್ಧ ಕಾಲೇಜು ಆಡಳಿತ ಮಂಡಳಿಗೆ ಓರ್ವ ವಿದ್ಯಾರ್ಥಿ ದೂರು ನೀಡಿದ್ದಾನೆ.ಉಪನ್ಯಾಸಕ ರಾಜೀನಾಮೆಗೆ ಕಾಲೇಜು ಆಡಳಿತ ಮಂಡಳಿ ಆಗ್ರಹಿಸಿದೆ. ರಾಜೀನಾಮೆ ಕೊಡಲು ನಿರಾಕರಿಸಿದಕ್ಕೆ ಉಪನ್ಯಾಸಕನಿಗೆ ಬೆದರಿಕೆ ಹಾಕಿದ್ದಾರೆ. ಉಪನ್ಯಾಸಕನ ಪುತ್ರಿ ಅದೇ ಕಾಲೇಜಿನ ಬೇರೆ ಬ್ರ್ಯಾಂಚ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಮಗಳ ಟಿ.ಸಿ ಹಾಗು ದಾಖಲೆಗಳನ್ನು ಕೊಡಲ್ಲ ಅಂತ ಉಪನ್ಯಾಸಕನಿಗೆ ಬೆದರಿಕೆ ಹಾಕಿದ್ದಾರೆ.ಮಗಳ ಭವಿಷ್ಯ ಮತ್ತು…

Read More

ಮಂಗಳೂರು : ಕಳೆದ ತಿಂಗಳು ಮಂಗಳೂರಿನಲ್ಲಿ ರೌಡಿಶೀಟರ್ ಹಾಗು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದ್ದು, ಇದೀಗ ಎನ್ ಐಎ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ಸುಹಾಶ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ ಐ ಕಾರ್ಯಕರ್ತರು ಶಾಮೀಲಾಗಿರುವ ಆರೋಪ ಕೇಳಿಬಂದಿದೆ ಇದರಿಂದ ಈ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ಎನ್ ಐಎ ತನಿಖೆಗೆ ವಹಿಸಿದೆ. ಹಾಗಾಗಿ ಇದೀಗ ಡಿಎಸ್ ಪಿ ಪವನ್ ಕುಮಾರ್ ನೇತೃತ್ವದ ತಂಡ ಮಂಗಳೂರು ಸಿಸಿಬಿ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದೆ.ಮೇ 1 ರಂದು ಮಂಗಳೂರಿನ ಜನನಿಬಿಡ ಪ್ರದೇಶದಲ್ಲಿ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದರು.

Read More

ಉಡುಪಿ : ಕಾಲೇಜು ವಿದ್ಯಾರ್ಥಿ ನಿಗೆ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಿಜೆಪಿಯ ಯುವ ಮೋರ್ಚಾ ವಿರುದ್ಧ ಆರೋಪ ಕೇಳಿ ಬಂದಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗು NSUI ವಿದ್ಯಾರ್ಥಿ ಸಂಘಟನೆಯೂ ಪ್ರತ್ಯೇಕವಾಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೌದು ಬಿಜೆಪಿ ಯುವ ಮೋರ್ಚ ಮುಖಂಡ, ಶಿಕ್ಷಕ ಸುಹಾಸ್‌ ಶೆಟ್ಟಿ ಮುಟ್ಟುಪಾಡಿ ತನ್ನ ಕಾಲೇಜಿನ ವಿದ್ಯಾರ್ಥಿನಿಗೆ ಪೋನ್ ಕರೆ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾರೆನ್ನಲಾದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮಹಿಳಾ ಕಾಂಗ್ರೆಸ್‌ ಮತ್ತು ಎನ್.ಎಸ್.ಯು.ಐ.ವಿದ್ಯಾರ್ಥಿ ಸಂಘಟನೆಯು ಪ್ರತ್ಯೇಕವಾಗಿ ಉಪ ಪೋಲೀಸ್‌ ಅಧೀಕ್ಷಕರಿಗೆ ದೂರು ಸಲ್ಲಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಆಡಿಯೋದಲ್ಲಿ ಸುಹಾಸ್ ಶೆಟ್ಟಿಯು ಅಪ್ರಾಪ್ತ ವಿದ್ಯಾರ್ಥಿನಿಗೆ ತನ್ನ ಜೊತೆ ಬರುವಂತೆ ಬಲವಂತವಾಗಿ ಒತ್ತಾಯಿಸುತ್ತಿದ್ದಾರೆ. ಈ ಹಿಂದೆಯು ಕೂಡ ಒಂದು ಕಾಲೇಜಿನಲ್ಲಿ ತನ್ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕಾಲೇಜು ಮಂಡಳಿ ಕೆಲಸದಿಂದ ವಜಾ ಮಾಡಿತ್ತು. ವಿದ್ಯಾರ್ಥಿಗಳು ಭಯದಿಂದ…

Read More

ಧಾರವಾಡ : ಧಾರವಾಡದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಅಪರ ಜಿಲ್ಲಾಧಿಕಾರಿ ಸಿಡಿ ಗೀತಾ ಅವರ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಒಂದು ಡಿಕ್ಕಿ ಹೊಡೆದಿದೆ. ಆದರೆ ಅಪಘಾತದಲ್ಲಿ ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಹೌದು ಧಾರವಾಡ ಅಪರ ಜಿಲ್ಲಾಧಿಕಾರಿ ಸಿ.ಡಿ ಗೀತಾ ಅವರ ಕಾರು ಅಪಘಾತವಾಗಿದೆ. ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಹೆಬಸೂರು ಬಳಿ ಈ ಒಂದು ಭೀಕರ ಅಪಘಾತ ಸಂಭವಿಸಿದೆ.ಅಪರ ಜಿಲ್ಲಾಧಿಕಾರಿ ಗೀತಾ ಕಾರಿಗೆ ಸಿಲಿಂಡರ್ ತುಂಬಿದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಯಾವುದೇ ರೀತಿಯಾದ ಪ್ರಾಣಪಾಯ ಸಂಭವಿಸಿಲ್ಲ. ಮಳೆ ಹಾನಿ ವೀಕ್ಷಣೆಗೆ ಸಚಿವ ಸಂತೋಷ ಲಾಡ್ ಅವರ ಜೊತೆಗೆ ಅಪರ ಜಿಲ್ಲಾಧಿಕಾರಿ ಗೀತಾ ಅವರು ಮಳೆ ಹಾನಿ ಪ್ರದೇಶ ಪರಿಶೀಲಿಸುವ ಬರುವಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಯಾದಗಿರಿ : ಒಂದು ವರ್ಷದಲ್ಲಿ ಅನುಭವ ಮಂಟಪ ನಿರ್ಮಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯ ಆವಿಷ್ಕಾರಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಂದು ವರ್ಷದಲ್ಲಿ ಅನುಭವ ಮಂಟಪ ನಿರ್ಮಾಣ ಮಾಡುತ್ತೇವೆ ಎಂದು ಘೋಷಣೆ ಮಾಡಿದರು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಮೃತ ಪಟ್ಟಿದ್ದಕ್ಕೆ ಸಿಎಂ ಮತ್ತು ಡಿಸಿಎಂ ಕಾರಣ ಎಂದರು. ಕುಂಭಮೇಳದಲ್ಲಿ ನಡೆದ ಘಟನೆಗೆ ಯಾರು ಜವಾಬ್ದಾರರು? ಇಂತಹ ಘಟನೆಗಳು ಯಾವುದೇ ಸರ್ಕಾರದಲ್ಲೂ ನಡೆಯಬಾರದು. ಬಿಜೆಪಿಯವರು ಅಭಿವೃದ್ಧಿ ಮಾಡಿಲ್ಲ ಲೂಟಿ ಮಾಡುವ ಕೆಲಸ ಮಾಡಿದ್ದಾರೆ. ಕೊಟ್ಟ ಮಾತಿನಂತೆ ನಡೆದಿರುವುದು ಕಾಂಗ್ರೆಸ್ ಸರ್ಕಾರ. ಮುಂದಿನ ವರ್ಷ 5000 ಕೋಟಿ ಖರ್ಚು ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಬೆಲೆ ಏರಿಕೆಗೆ ಮೋದಿ ಸರ್ಕಾರ ಕಾರಣ ಪೆಟ್ರೋಲ್ ಗ್ಯಾಸ್ ಅರಸೋ ಗೊಬ್ಬರ ಬೆಲೆ ಏರಿಕೆಯಾಗಲು ಪ್ರಧಾನ ಮಂತ್ರಿ ಮೋದಿ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ…

Read More

ಯಾದಗಿರಿ : ಮನಮೋಹನ್ ಸಿಂಗ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಕಲ್ಯಾಣ ಕರ್ನಾಟಕ ಭಾಗದಲ್ಲಿ 371 ಜೆ ವಿಧಿ ಜಾರಿ ಮಾಡಿದರು. ಈ ಭಾಗದಲ್ಲಿ 371 ಜೆ ವಿಧಿ ಜಾರಿಯಾಗಲು ಮಾಜಿ ಮುಖ್ಯಮಂತ್ರಿ ದಿ.ಎನ್. ಧರ್ಮಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಕಾರಣ. ಕಳೆದ ಮೂರು ವರ್ಷದಲ್ಲಿ ಕೆಕೆಆರ್‌ಡಿಬಿಗೆ 13000 ಕೋಟಿ ರೂಪಾಯಿ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಇಂದು ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ಆರೋಗ್ಯ ಆವಿಷ್ಕಾರಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರದ ಬಳಿ ದುಡ್ಡಿಲ್ಲ ಅದಕ್ಕೆ ಅಭಿವೃದ್ಧಿ ಕೆಲಸ ನಿಂತಿದೆ ಅಂತಾರೆ, ಬಿಜೆಪಿಯವರು ಹೇಳುತ್ತಿರುವುದು ಅಪ್ಪಟ ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಗ್ಯಾರಂಟಿ ಯೋಜನೆ ಜಾರಿಗೆ ಮಾಡಿದ್ದೇವೆ ಅದರ ಜೊತೆಗೆ ಅಭಿವೃದ್ಧಿ ಕಾರ್ಯಗಳನ್ನು ಸಹ ಮಾಡುತ್ತಿದ್ದೇವೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 371 ಜೆ ವಿಧಿ ಜಾರಿ ಮಾಡಿದರು. 371 ಜೆ ಜಾರಿಯಾಗಲು ಎನ್. ಧರ್ಮಸಿಂಗ್ ಮಲ್ಲಿಕಾರ್ಜುನ ಖರ್ಗೆ ಕಾರಣ.ಕಳೆದ…

Read More

ಮೈಸೂರು : ರಾಜ್ಯದಲ್ಲಿ ಆಗ್ಗಾಗ್ಗೆ ಕೇಳಿಬರುತ್ತಿರುವ ಸಿಎಂ ಸಿದ್ದರಾಮಯ್ಯ ಅವರ ಬದಲಾವಣೆ ಸಂಬಂಧ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಭವಿಷ್ಯ ನುಡಿದಿದ್ದು, ಮುಂಬರುವ ನವೆಂಬರ್ ನಲ್ಲಿ ಬದಲಾವಣೆಯಾಗಲಿದೆ ಎಂದಿದ್ದಾರೆ. ಅಲ್ಲದೆ ಈ ಇಬ್ಬರು ನಾಯಕರಲ್ಲಿ ಒಬ್ಬರು ಸಿಎಂ ಆಗಲಿದ್ದಾರೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಥವಾ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಎಚ್ ವಿಶ್ವನಾಥ್ ಅವರ ಈ ಒಂದು ಹೇಳಿಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹತ್ತು ವರ್ಷಗಳ ಹಿಂದೆಯೇ ಜಾತಿವಾರು ಜನಗಣತಿ ಮಾಡಿಸಿದ್ದರು. ಸುಮಾರು ಒಂದೂವರೆ ಲಕ್ಷ ಶಿಕ್ಷಕರು ಗಣತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಕ್ಕಾಗಿ 170 ಕೋಟಿ ರೂಪಾಯಿ ಹಣ ಖರ್ಚು ಮಾಡಲಾಗಿತ್ತು. ಅಂದಿನಿಂದ ಜಾತಿವಾರು ಜನಗಣತಿ ವರದಿಯನ್ನು ಬಹಿರಂಗಪಡಿಸಲಿಲ್ಲ. ಕುಮಾರಸ್ವಾಮಿ, ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಇದನ್ನು…

Read More

ರಾಯಚೂರು : ರಾಯಚೂರಿನಲ್ಲಿ ಇಂದು ಘೋರವಾದ ದುರಂತ ಒಂದು ಸಂಭವಿಸಿದ್ದು ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಭೂತಲದಿನ್ನಿ ಎಂಬ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಟ್ಯಾಂಕರ್ ನಿಂದ ಪೂರಿಕೈಯಾದ ನೀರು ಕುಡಿದು 30 ಜನರು ಅಸ್ವಸ್ಥರಾಗಿದ್ದಾರೆ. ವಾಂತಿ, ಭೇದಿಯಿಂದ 25ಕ್ಕೂ ಹೆಚ್ಚು ಆಸ್ಪತ್ರೆಗೆ ದಾಖಲಾಗಿದ್ದಾರೆ. ಟ್ಯಾಂಕರ್ ಅನ್ನು ಸ್ವಚ್ಛಗೊಳಿಸದೆ ನೀರು ಪೂರೈಕೆ ಮಾಡಿರುವ ಆರೋಪ ಇದೀಗ ಕೇಳಿಬರುತ್ತಿದೆ. ಗ್ರಾಮ ಪಂಚಾಯಿತಿ ವಿರುದ್ಧ ಗ್ರಾಮಸ್ಥರು ಇದೀಗ ಆಕ್ರೋಶ ಹೊರಹಾಕುತ್ತಿದ್ದಾರೆ. ಭೂತಲದಿನ್ನಿ ನಿವಾಸಿಗಳ ಆರೋಗ್ಯವನ್ನು ಇದೀಗ ವೈದ್ಯರು ತಪಾಸಣೆ ನಡೆಸಿದ್ದಾರೆ.

Read More