Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬೆಂಗಳೂರು : 1,200 ಚದರಡಿಯೊಳಗೆ ನಿರ್ಮಿಸಿರುವ ಕಟ್ಟಡಗಳಿಗೆ ಒಸಿ ಹಾಗೂ ಸಿಸಿ ನೀಡುವ ಸಂಬಂಧ ಎದುರಾಗುವ ಕಾನೂನಿನ ಅಡೆತಡೆ ನಿವಾರಣೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದು ಡಿಸಿಎಂ ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಬುಧವಾರ ಸಭೆ ನಡೆಯಿತು. ಈ ಸಂಬಂಧ ಡಿಸಿಎಂ ಡಿಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ, ನಕ್ಷೆ ಅನುಮೋದನೆ ಪಡೆಯದೆ ಕಾನೂನು ಉಲ್ಲಂಘಿಸಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಲ್ಪಿಸಬಾರದೆಂದು ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಆದಾಗ್ಯೂ 1,200 ಅಡಿಯೊಳಗೆ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಒಸಿ ಹಾಗೂ ಸಿಸಿ ನೀಡಲು ಹಿಂದಿನ ಕ್ಯಾಬಿನೆಟ್ ಮೀಟಿಂಗ್ನಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ, ಅನುಷ್ಠಾನಗೊಳಿಸಲು ಇಂಧನ ಇಲಾಖೆಗೆ ಕಾನೂನು ಅಡ್ಡಿ ಬರಲಿದೆ. ಈ ಕುರಿತು…
ಗುರುವಾರ ಕುಬೇರನಿಗೆ ಶುಭ ದಿನವಾಗಿದ್ದು, ಇದು ಸಂಪತ್ತನ್ನು ತರುತ್ತದೆ. ಸಮೃದ್ಧ ಜೀವನ ನಡೆಸಲು ನಾವು ಪೂಜಿಸಬೇಕಾದ ಪ್ರಮುಖ ದೇವತೆಗಳಲ್ಲಿ ಭಗವಾನ್ ಕುಬೇರ ಒಬ್ಬರು ಎಂದು ನಮಗೆಲ್ಲರಿಗೂ ತಿಳಿದಿದೆ. ಮಹಾಲಕ್ಷ್ಮಿ ಸಂಪತ್ತಿನ ಅಧಿಪತಿಯಾಗಿದ್ದರೂ, ಮಹಾಲಕ್ಷ್ಮಿ ಬಯಸಿದಷ್ಟು ಬೇಗ ನಮಗೆ ಸಂಪತ್ತನ್ನು ದಯಪಾಲಿಸಲು ಸಾಧ್ಯವಿಲ್ಲ. ಕುಬೇರ ಆ ಸಂಪತ್ತಿನ ರಕ್ಷಕನಾಗಿರುವುದರಿಂದ, ನಾವು ಕುಬೇರನ ಅನುಗ್ರಹವನ್ನು ಪಡೆದರೆ ಮಾತ್ರ ನಾವು ಸಮೃದ್ಧ ಜೀವನವನ್ನು ನಡೆಸಲು ಸಾಧ್ಯ. ಕುಬೇರನ ಅನುಗ್ರಹವನ್ನು ಪಡೆಯುವ ಮೂಲಕ ಪಡೆಯಬಹುದಾದ ಸಂಪತ್ತನ್ನು ಕುಬೇರ ಸಂಪತ್ತು ಎಂದು ಕರೆಯಲಾಗುತ್ತದೆ. ಅಂತಹ ಕುಬೇರ ಸಂಪತ್ತನ್ನು ಪಡೆಯುವವರು ತಮ್ಮ ಜೀವನದಲ್ಲಿ ಬಡತನದ ಬಗ್ಗೆ ಮಾತನಾಡಲು ಯಾವುದೇ ಸ್ಥಾನವಿರುವುದಿಲ್ಲ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಈ ಕುಬೇರ ಸಂಪತ್ತನ್ನು ಪಡೆಯಲು ಮಾಡಬೇಕಾದ ಕುಬೇರನ ಪೂಜೆಯನ್ನು ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ…
ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತು ಈಗಾಗ್ಲೇ ಹಲವಾರು ಬಾರಿ ಚರ್ಚೆ ನಡೆದಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಬದಲಾವಣೆ ಆಗಲಿದ್ದು ಬಿಹಾರ್ ಚುನಾವಣೆ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಹೌದು ಬಿಹಾರ್ ಫಲಿತಾಂಶ ಬಳಿಕ ಸಂಪುಟ ಪುನಾರಚನೆ ಪಕ್ಕಾ ಎಂದು ಹೇಳಲಾಗುತ್ತಿದೆ. ಸುಮಾರು 15ಕ್ಕೂ ಹೆಚ್ಚು ಸಚಿವರನ್ನು ಸಂಪುಟದಿಂದ ಸಿಎಂ ಸಿದ್ದರಾಮಯ್ಯ ಕೈ ಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಚಿವರನ್ನ ಕೈಬಿಟ್ಟು ಹೊಸ ತಂಡ ಸಿದ್ದಪಡಿಸುವ ಸಾಧ್ಯತೆ ಇದೆ. ಈಗಾಗಲೇ ಹೈಕಮಾಂಡ್ ಮಟ್ಟದಲ್ಲಿ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಸಂಪುಟ ಪುನಾರಚನೆ ಮೂಲಕ ಸಂದೇಶದ ಲೆಕ್ಕಾಚಾರ ಹಾಕಲಾಗಿದ್ದು, ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶಕ್ಕೆ ಪ್ಲಾನ್ ಮಾಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಈಗಾಗಲೇ ಕೆ.ಸಿ ವೇಣುಗೋಪಾಲ್ ಜತೆ ಸಿಎಂ ಸಿದ್ದರಾಮಯ್ಯ ಚರ್ಚೆ ಮಾಡಿದ್ದಾರೆ. ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೆ ಸಿಎಂ ಸಿದ್ದರಾಮಯ್ಯ…
BREAKING : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ನವವಿವಾಹಿತೆ : ಡೆತ್ ನೋಡ್ ಬರೆದಿಟ್ಟು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!
ಚಿಕ್ಕಬಳ್ಳಾಪುರ : ಪತಿಯ ಅಕ್ರಮ ಸಂಬಂಧ ಆರೋಪ ಹಿನ್ನೆಲೆಯಲ್ಲಿ ನವವಿವಾಹಿತೆ ಡೆತ್ ನೋಟ್ ಬರೆದಿಟ್ಟು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಕೊಂಡವಲಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ಬೆಂಕಿ ಹಚ್ಚಿಕೊಂಡು ಕೆ ಎಸ್ ಜಯಶ್ರೀ (25) ಆತ್ಮಹತ್ಯೆಗೆ ಶರಣಾಗಿರುವ ನವವಿವಾಹಿತೆ ಎಂದು ತಿಳಿದುಬಂದಿದೆ. ಜಯಶ್ರೀ ಆರು ತಿಂಗಳ ಹಿಂದೆ ಅಷ್ಟೆ ಚಂದ್ರಶೇಖರ್ ಎನ್ನುವವರನ್ನು ಮದುವೆಯಾಗಿದ್ದರು. ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪನಹಳ್ಳಿ ಗ್ರಾಮದ ಚಂದ್ರಶೇಖರ್ ಬೇರೆ ಯುವತಿಯ ಜೊತೆಗೆ ಸದಾ ಚಾಟಿಂಗ್ ಮಾಡುತ್ತಿದ್ದ. ಇದನ್ನು ಪ್ರಶ್ನಿಸಿದಕ್ಕೆ, ಚಂದ್ರಶೇಖರ್ ಜಯಶ್ರೀಗೆ ಕಿರುಕುಳ ನೀಡುತ್ತಿದ್ದ. ಪತಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದು ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.ಘಟನೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಚಂದ್ರಶೇಖರ್ ಅರೆಸ್ಟ್ ಮಾಡುವವರೆಗೂ ಶವ ಸಂಸ್ಕಾರ ಮಾಡಲ್ಲ ಎಂದು ಮೃತ ಜಯಶ್ರೀ ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.
ಕೊಡಗು : ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ವಿದ್ಯಾರ್ಥಿ ಸಜೀವ ದಹನ ಆಗಿದ್ದಾನೆ. ಕಾಟಕೇರಿ ಗ್ರಾಮದ ಹರಿ ಮಂದಿರ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದ್ದು, ಕೊಡಗು ಜಿಲ್ಲೆಯ ಮಡಿಕೆರಿ ತಾಲೂಕಿನ ಕಾಟಕೇರಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದ್ದು ಹರಿ ಮಂದಿರ ವಸತಿ ಶಾಲೆಯ ಪುಷ್ಪಕ್ ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬೆಳಿಗ್ಗೆ 5:30 ಕ್ಕೆ ಮಕ್ಕಳನ್ನು ಎಬ್ಬಿಸಲಾಗುತ್ತದೆ ಅಗ್ನಿ ಅವಘಡ ಸಂಭವಿಸುತ್ತಿದ್ದಂತೆ ಮಕ್ಕಳೆಲ್ಲರೂ ಹೊರಗಡೆ ಓಡಿ ಬಂದರು. ಆದರೆ ವಿದ್ಯಾರ್ಥಿ ಪುಷ್ಪಕ್ ಮಾತ್ರ ಒಬ್ಬನ್ನ ಬಿಟ್ಟು ಎಲ್ಲರೂ ಹೊರಗಡೆ ಬಂದಿದ್ದಾರೆ. ಹಾಗಾಗಿ ಪುಷ್ಪಕ್ ಸಜೀವ ದಹನಗೊಂಡಿದ್ದಾನೆ ಎಂದು ಹಾಸ್ಟೆಲ್ ವಾರ್ಡನ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು : ದರ್ಶನ್ ಅಭಿಮಾನಿಗಳಿಂದ ನಟಿ ರಮ್ಯಾ ಗೆ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಸಿಬಿ ಪೊಲೀಸರು 11 ಆರೋಪಿಗಳ ವಿರುದ್ಧ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಸುಮಾರು 380 ಪುಟಗಳ ಚಾರ್ಜ್ ಶೀಟ್ ಅನ್ನು ಬೆಂಗಳೂರಿನ 45ನೇ ACJM ಕೋರ್ಟಿಗೆ ಸಲ್ಲಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ್ದ ಸ್ಕ್ರೀನ್ ಶಾಟ್, ಆರೋಪಿಗಳ ಮೊಬೈಲ್, ದೂರುದಾರೆ ರಮ್ಯಾ ಸ್ಟೇಟ್ಮೆಂಟ್, ಹಾಗೂ ಎಫ್ ಎಸ್ ಎಲ್ ವರದಿ ಆರೋಪಿಗಳ ಸ್ವ ಇಚ್ಚ ಹೇಳಿಕೆ ಆಧಾರದಲ್ಲಿ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು ಸಾಕ್ಷಿ ಆಧಾರಗಳು ಲಭಿಸಿದ ಹಿನ್ನೆಲೆಯಲ್ಲಿ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅಶ್ಲೀಲ ಕಮೆಂಟ್ ಹಾಕಿದ್ದ ಇನ್ನೂ ಆರು ಆರೋಪಿಗಳು ಪೊಲೀಸರಿಗೆ ಸಿಕ್ಕಿಲ್ಲ. ಇನ್ನುಳಿದವರು ಸಿಕ್ಕ ಬಳಿಕ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಾಗುತ್ತಿದೆ. ಅಶ್ಲೀಲ ಕಮೆಂಟ್ ಹಾಕಿದ್ದ ಇನ್ನೂ ನಾಲ್ವರಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ ಸಿಸಿಬಿ ಪೊಲೀಸರು ಶೀಘ್ರದಲ್ಲಿಯೇ ಟ್ರಯಲ್ ಆರಂಭಕ್ಕೆ ಸಿದ್ಧತೆ ಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ತುಮಕೂರು : ರಾಜ್ಯದಲ್ಲಿ ಪೈಶಾಚಿಕ ಕೃತ್ಯ ಒಂದು ನಡೆದಿದ್ದು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಆಕೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ವಿನಯ್ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿ ಮತ್ತು ಯುವಕ ಅಕ್ಕಪಕ್ಕದ ಮನೆಯ ನಿವಾಸಿಗಳು. ‘ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ವಿನಯ್ ವಿರುದ್ಧ ಕ್ರಮ ಕೈಗೊಳ್ಳುವಂತೆ’ ಕೋರಿ ಬಾಲಕಿ ತಾಯಿ ನೀಡಿದ ದೂರಿನ ಮೇರೆಗೆ ಕುಣಿಗಲ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಸುಪ್ರೀಂ ಕೋರ್ಟ್ ಸಿಜೆಐ ಆಗಿರುವಂತಹ ಬಿ.ಆರ್ ಗವಾಯಿ ಅವರ ಮೇಲೆ ಹಿರಿಯ ವಕೀಲರೊಬ್ಬರು ಶೂ ಎಸೆದಿರುವ ಘಟನೆ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ವಕೀಲ ರಾಕೇಶ್ ಕಿಶೋರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಿರಿಯ ವಕೀಲ ಭಕ್ತವತ್ಸಲ ಎಂಬುವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆ ಪೊಲೀಸರು ಸುಪ್ರೀಂ ಕೋರ್ಟ್ ಹಿರಿಯ ವಕೀಲ ರಾಕೇಶ್ ಕಿಶೋರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅ.6ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆ ವೇಳೆ ವಕೀಲ ರಾಕೇಶ್ ಕಿಶೋರ್ ಏಕಾಏಕಿ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ಕಡೆ ವಸ್ತು ಎಸೆದಿದ್ದರು. ಇದು ಕಾನೂನುಬಾಹಿರ. ಕೂಡಲೇ ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಭಕ್ತವತ್ಸಲ ದೂರಿನಲ್ಲಿ ಕೋರಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದರು.
ಮೈಸೂರು : ಮೈಸೂರಿನ ವಸ್ತು ಪ್ರದರ್ಶನದ ಬಳಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಅಂದಾಜು 10 ರಿಂದ 13 ವರ್ಷದ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಇದೇ ಸ್ಥಳದಲ್ಲಿ ಮೊನ್ನೆ ವೆಂಕಟೇಶ್ ಎಂಬವರ ಭೀಕರ ಕೊಲೆಯಾಗಿತ್ತು. ಮೈಸೂರು ದಸರಾಗೆ ಬಾಲಕಿ ಗೊಂಬೆ ಹಾಗು ಬಲೂನ್ ಮಾರಲು ಬಂದಿದ್ದಳು. ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು : ನಿಯಮ ಉಲ್ಲಂಘನೆ ಮಾಡಿದ್ದು ಅಲ್ಲದೆ, ಪೋಲಿಸ್ ಇಲಾಖೆಯ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಸೀಸನ್ 12 ಶೋ ಆರಂಭಿಸಿದ್ದಕ್ಕಾಗಿ ನಿನ್ನೆ ಬಿಗ್ ಬಾಸ್ ಮನೆಗೆ ಬೀಗ ಜಡಿಯಲಾಗಿತ್ತು. ಬಿಗ್ ಬಾಸ್ ಮನೆಗೆ ಬೀಗ ಹಾಕಿದ್ದನ್ನು ಪ್ರಶ್ನಿಸಿ ಇಂದು ಹೈಕೋರ್ಟಿಗೆ ಕಾರ್ಯಕ್ರಮದ ಆಯೋಜಕರು ಅರ್ಜಿ ಸಲ್ಲಿಸಲಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ನಾಳೆ ಮುಂದೂಡಿದೆ. ಜಾಲಿವುಡ್ ಸ್ಟುಡಿಯೋದಿಂದ ರಿಟ್ ಅರ್ಜಿ ಸಲ್ಲಿಸಲಾಗಿದೆ. ನಿನ್ನೆ ಸಂಜೆ ಕಂದಾಯ ಅಧಿಕಾರಿಗಳು ಪೊಲೀಸರ ಸಮ್ಮುಖದಲ್ಲಿ ಬಿಗ್ ಬಾಸ್ ಮನೆಗೆ ಬೀಗ ಹಾಕಲಾಯಿತು. ಬಳಿಕ ಒಂದು ಗಂಟೆಗಳ ಕಾಲ ಸ್ಪರ್ಧಿಗಳಿಗೆ ಮನೆಯಿಂದ ಹೊರಗಡೆ ಹೋಗಲು ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿದಾರರಿಂದ ರಿಟ್ ಅರ್ಜಿಯ 2ನೇ ಪ್ರತಿ ಸಲ್ಲಿಸಿದ್ದಾರೆ. ಕಚೇರಿ ಆಕ್ಷೇಪಣೆಗಳನ್ನ ಸರಿಪಡಿಸಿದ ಹಿನ್ನೆಲೆ ರಿಟ್ ಅರ್ಜಿ ವಿಚಾರಣೆ ನಾಳೆಗೆ ಹೈಕೋರ್ಟ್ ನಿಗದಿಪಡಿಸಿತು.














