Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಬೆಂಗಳೂರಿನಲ್ಲಿ ಇತ್ತೀಚಿಗೆ ಬಿಎಂಟಿಸಿ ಸಿಬ್ಬಂದಿಗಳ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದೀಗ ಕೇವಲ ಬಸ್ ನಿಲ್ಲಿಸದಕ್ಕಾಗಿ ಮಹಿಳೆ ಒಬ್ಬರು ಬಿಎಂಟಿಸಿ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.ಜೂನ್ 11 ರಂದು ನಡೆದ ಘಟನೆ ಇದೀಗ ಬೆಳಕಿಗೆ ಬಂದಿದೆ. ಜೂ. 11ರಂದು ಟಿನ್ ಫ್ಯಾಕ್ಟರಿಯಿಂದ ಎಲೆಕ್ಟ್ರಾನಿಕ್ ಸಿಟಿಗೆ ಸಂಚರಿಸುತ್ತಿದ್ದ ಕೆಎ57, ಎಫ್ 0836 ಬಸ್‌ನಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 8.40ರ ಹೊತ್ತಿಗೆ ಬಸ್ ಸರ್ಜಾಪುರ ರಸ್ತೆಯ ಕೈಕೊಂಡರಹಳ್ಳಿ ಸಮೀಪ ತಲುಪಿದಾಗ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಕಾವ್ಯ ಎಂಬ ಮಹಿಳೆ, ಬಸ್ ಸ್ಟಾಪ್ ಇಲ್ಲದೇ ಇದ್ರೂ, ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ಹೋಗುವಾಗ ಕಚೇರಿ ಮುಂದೆ ಬಸ್ ನಿಲ್ಲಿಸಲು ಹೇಳಿದ್ದಳು. ಟ್ರಾಫಿಕ್‌ನಿಂದ ಬಸ್ ಡ್ರೈವರ್ ಬಸ್ ನಿಲ್ಲಿಸಿಲ್ಲ. ಆಗ ಹೊಟ್ಟೆ ಹಿಡಿದುಕೊಂಡು ಕಿರುಚಿ, ಅವಾಚ್ಯ ಶಬ್ದಗಳಿಂದ 42 ವರ್ಷದ ಚಾಲಕ ಅತಹರ್ ಹುಸೇನ್ ಅವರನ್ನು ನಿಂದಿಸಿದ್ದಳು. ಬಳಿಕ ಮಹಿಳೆ ಬಲ ಚಪ್ಪಲಿ ತೆಗೆದುಕೊಂಡು…
ಚಿಕ್ಕಬಳ್ಳಾಪುರ : ಪ್ರಪಂಚದಲ್ಲಿ ಕೆಟ್ಟ ತಂದೆ ತಾಯಿಗಳು ಯಾರು ಇರಲ್ಲ. ಆದರೆ ಕೆಟ್ಟ ಮಕ್ಕಳು ಇರುತ್ತಾರೆ ಅಂತ ಹೇಳುತ್ತಾರೆ. ಆದರೆ ಪ್ರಸ್ತುತ ದಿನಗಳಲ್ಲಿ ಹೆತ್ತವರು ಕೂಡ ಕೆಟ್ಟ ದಾರಿ ತುಳಿದು ತಮ್ಮ ಮಕ್ಕಳನ್ನು ಕೆಟ್ಟದಾರಿಗೆ ದೂಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ. ಇದೀಗ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಅನ್ಯ ವ್ಯಕ್ತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ತನ್ನ ಅಪ್ರಾಪ್ತ ಮಗಳಿಗೆ ಪಾಪಿ ತಂದೆಯೊಬ್ಬ ಒತ್ತಾಯಿಸಿದ ಘಟನೆ ಬೆಳಕಿಗೆ ಬಂದಿದೆ. ಹೌದು ಬೇರೊಬ್ಬನೊಂದಿಗೆ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹೆತ್ತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳಿಗೆ ಬಲವಂತ ಮಾಡಿದ ಬೆಚ್ಚಿ ಬೀಳಿಸೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲ್ಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಲೈಂಗಿಕ ಕ್ರಿಯೆಗೆ ಸಹಕರಿಸಲು ಬಾಲಕಿ ಒಪ್ಪದಿದ್ದಾಗ ಈ ದುರುಳ ತಂದೆ ಆಕೆಗೆ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಲೈಂಗಿಕ ಕ್ರಿಯೆ ನಡೆಸದಿದ್ದಕ್ಕೆ ಬಲವಂತವಾಗಿ ರೂಮಿನಲ್ಲಿ ಕೂಡಿ ಹಾಕಿದ್ದು, ತಾನು ಹೇಳಿದಂತೆ ಮಾಡದಿದ್ದರೆ ಊಟ ತಿಂಡಿ ಕೊಡುವುದಿಲ್ಲ ಎಂದು ಬೆದರಿಸಿದ್ದಾನೆ.…
ದಾವಣಗೆರೆ : ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದ್ದು ಈಗ ದಾವಣಗೆರೆಯಲ್ಲಿ ಹೆರಿಗೆಯಾದ ಎರಡು ದಿನಕ್ಕೆ ಬಾಣಂತಿಯೊಬ್ಬರು ಸಾವನಪ್ಪಿರುವ ಘಟನೆ ದಾವಣಗೆರೆ ತಾಲೂಕಿನ ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯನ್ನು ದುರ್ಗಮ್ಮ (21) ಎಂದು ತಿಳಿದುಬಂದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನಲ್ಲಿರುವ ತನ್ನ ತಾಯಿ ಮನೆಗೆ ಹೆರಿಗೆ ಬಂದಿದ್ದ ಅವರಿಗೆ ಮೂರು ದಿನಗಳ ಹಿಂದೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಪೋಷಕರು ತಕ್ಷಣ ಹತ್ತಿರದ ಹರಪನಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ಹರಪನಹಳ್ಳಿ ವೈದ್ಯರು ಸಿಸೇರಿಯನ್ ಮೂಲಕ ಹೆರಿಗೆ ಮಾಡಿಸಿದ್ದರು. ಹೆಣ್ಣು ಮಗು ಜನಿಸಿತ್ತು. ಬಳಿಕ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆರೋಗ್ಯದಲ್ಲಿ ಏರುಪೇರು ಆದ ಬಳಿಕ ದುರ್ಗಮ್ಮ ಸಾವನ್ನಪ್ಪಿದ್ದಾರೆ. ಬಾಣಂತಿ ಸಾವಿನ ನಂತರ ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣವೆಂದು ಮೃತಳ ಕುಟುಂಬಸ್ಥರು ಆರೋಪಿಸಿದ್ದಾರೆ.
ನವದೆಹಲಿ : ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ವಿಮಾನ ಪತನ ಇಡಿ ಭಾರತದ ಇತಿಹಾಸದಲ್ಲಿಯೇ ಅತ್ಯಂತ ಘೋರ ದುರಂತ. ಈ ಒಂದು ಅಪಘಾತದಲ್ಲಿ ವಿಮಾನದಲ್ಲಿದ್ದ ಪೈಲಟ್, ಸಿಬ್ಬಂದಿಗಳು ಸೇರಿ ಎಲ್ಲರೂ ಸಾವನಪ್ಪಿದ್ದಾರೆ. ಆದರೆ ಒಬ್ಬ ಪ್ರಯಾಣಿಕ ಮಾತ್ರ ಬದುಕು ಉಳಿದಿದ್ದು, ವಿಮಾನ ದುರಂತದ ಕುರಿತು ಇಂದು ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಸುದ್ದಿ ಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿ ಆರಂಭಿಸಿದ ಅವರು ಕಳೆದ ಎರಡು ದಿನದಿಂದ ಬಹಳ ಕಠಿಣ ಪರಿಸ್ಥಿತಿಯನ್ನು ಎದುರಿಸಿದ್ದೇವೆ. ವಿಮಾನ ದುರಂತದಲ್ಲೇ ನಾನು ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ. ತಮ್ಮವರನ್ನು ಕಳೆದುಕೊಂಡ ನೋವನ್ನು ನಾನು ಅನುಭವಿಸಿದ್ದೇನೆ. ರಕ್ಷಣಾ ತಂಡಗಳು ತಕ್ಷಣ ಕಾರ್ಯ ಪ್ರವೃತ್ತರಾಗಿ ಕೆಲಸ ನಿರ್ವಹಿಸಿವೆ. ನಿನ್ನೆ ಸಂಜೆ 5 ಗಂಟೆಗೆ ದುರಂತ ಸ್ಥಳದಲ್ಲಿ ಒಂದು ಬ್ಲಾಕ್ ಬಾಕ್ಸ್ ಸಿಕ್ಕಿದೆ. ಸದ್ಯ ಬ್ಲಾಕ್ ಬಾಕ್ಸ್ ಡಿಕೋಡ್ ಮಾಡುವ ಕೆಲಸ ನಡೆಯುತ್ತಿದೆ. ಬ್ಲಾಕ್ ಬಾಕ್ಸ್ ನಿಖರವಾದ ಮಾಹಿತಿ ಸಿಗಲಿದೆ. ತನಿಖೆಗೆ ಮತ್ತೊಂದು ಉನ್ನತ ಮಟ್ಟದ ಸಮಿತಿ ರಚಿಸಿದ್ದೇವೆ ಎಂದು ವಿಮಾನಯಾನ…
ಶಿವಮೊಗ್ಗ : ಕ್ಯಾನ್ಸರ್ ತೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯ ಸೇರಿದಂತೆ ಅವರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಶೀಘ್ರದಲ್ಲಿ ಕ್ಯಾನ್ಸರ್ ಪೀಡಿತ ವಸತಿ ಶಾಲೆ ಆರಂಭಿಸುವ ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಯಾನ್ಸರ್ ಪೀಡಿತ ವಸತಿ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತದೆ. ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲು ಮಿನಿ ಬಸ್ ಹಾಗೂ ಕಾರಿನ ಸೌಲಭ್ಯ ಕಲ್ಪಿಸಲಾಗುತ್ತದೆ. ಆಟ,ಪಾಠಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಎಲ್ಲ ಮಕ್ಕಳಂತೆ ಅವರು ಗೌರವಯುತವಾಗಿ ಬದುಕಬೇಕು ಎಂಬುದು ನನ್ನ ಉದ್ದೇಶ ಎಂದರು. ಈಗಾಗಲೇ ಖಾಸಗಿ ಎನ್‌ಜಿಓ ಒಂದು ಜೊತೆ ಸಭೆ ನಡೆಸಿ ಯೋಜನೆ ರೂಪಿಸಿದ್ದೇನೆ. ಕಿದ್ವಾಯಿ ಆಸ್ಪತ್ರೆ ಸಮೀಪದಲ್ಲಿ ಖಾಸಗಿ ಕಟ್ಟಡವನ್ನು ನೋಡಲಾಗಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆದುಕೊಂಡು ಜುಲೈ ಅಂತ್ಯದೊಳಗೆ ಪ್ರಾರಂಭಿಸಲಾಗುವುದು. ಎನ್‌ಜಿಓ ಅವರ ಮಾಹಿತಿ ಪ್ರಕಾರ ಈಗಾಗಲೇ 1,500 ಸಾವಿರ ಮಕ್ಕಳನ್ನು ಗುರುತಿಸಿದ್ದಾರೆ. ಇದಕ್ಕೂ ಹೆಚ್ಚು…
ಮಂಗಳೂರು : ಕಳೆದ ತಿಂಗಳು ಮಂಗಳೂರಿನಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಕೊಲೆಯಾಗಿತ್ತು. ಅದಾದ ನಂತರ ಕೆಲವೇ ದಿನಗಳಲ್ಲಿ ರೆಹಿಮಾನ್ ಎನ್ನುವ ಯುವಕನ ಬರ್ಬರ ಕೊಲೆಯಾಗಿತ್ತು. ಹೀಗೆ ಮಂಗಳೂರಿನಲ್ಲಿ ಕೋಮು ದ್ವೇಷಕ್ಕೆ ಇಬ್ಬರ ಕೊಲೆಯಾಗಿದೆ. ಇನ್ನು ಕರಾವಳಿ ಭಾಗದಲ್ಲಿ ಕೋಮು ಸಂಘರ್ಷ ತಡೆಗಟ್ಟಲು ನಿನ್ನೆ ತಾನೇ ಗೃಹ ಸಚಿವ ಜಿ. ಪರಮೇಶ್ವರ್ ಅವರು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (SAF) ಗೆ ಚಾಲನೆ ನೀಡಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ಇದೀಗ ಮಂಗಳೂರಿನಲ್ಲಿ ಮತ್ತೆ ಲಾಂಗು ಮಚ್ಚುಗಳು ಝಳಪಿಸಿದ್ದು, ಓರ್ವ ವ್ಯಕ್ತಿ ಮೇಲೆ ದುಷ್ಕರ್ಮಿಗಳಿಂದ ತಲ್ವಾರ್ ದಾಳಿಗೆ ಯತ್ನಿಸಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ನಡೆದಿದೆ. ಸಜೀಪಮುನ್ನೂರಿನ ಉಮರ್ ಫಾರೂಕ್ ಮೇಲೆ ದಾಳಿಗೆ ಯತ್ನಿಸಲಾಗಿದೆ. ಉಮರ್ ಫಾರೂಕ್ ಘಟನೆ ನಡೆದ ದಿನ ಮುಂಜಾನೆ ಮನೆಯಿಂದ ಜೀಪ್ನಲ್ಲಿ ದೇರಳಕಟ್ಟೆಗೆ ತೆರಳುತ್ತಿದ್ದರು. ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ ಬೈಕ್ನಲ್ಲಿ…
ವಿಜಯನಗರ : ಜಮಿನಲ್ಲಿ ವಿದ್ಯುತ್ ಹೈ ಟೆನ್ಶನ್ ಲೈನ್ ಅಳವಡಿಕೆ ವಿರೋಧ ವ್ಯಕ್ತಪಡಿಸಿದ್ದು, ರೈತನ ವಿರೋಧದ ನಡುವೆಯೂ ಕೂಡ ಇಲಾಖೆಯ ಸಿಬ್ಬಂದಿ ಕಾಮಗಾರಿ ಆರಂಭಿಸಿದ್ದಾರೆ. ಹಾಗಾಗಿ ಸಿಬ್ಬಂದಿ ವರ್ತನೆಗೆ ಬೇಸತ್ತು ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಯತ್ನಿಸಿರುವ ಘಟನೆ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿ ತಾಂಡಾದ ಜಮೀನಿನಲ್ಲಿ ಈ ಒಂದು ಘಟನೆ ನಡೆದಿದೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಮಾಜಿ ಹಳ್ಳಿ ತಂಡದಲ್ಲಿ ವಿಷ ಸೇವಿಸಿ ಗಜೇಂದ್ರ ನಾಯಕ (48) ಮಟ್ಟು ಪತ್ನಿ ವಿಜಯಲಕ್ಷ್ಮಿ ಬಾಯಿ (38) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ತಕ್ಷಣ ದಂಪತಿಗಳನ್ನು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಜೇಂದ್ರ ಜಮೀನಿನಲ್ಲಿ 220 ಕೆವಿ ವಿದ್ಯುತ್ ಲೈನ್ ಹಾದುಹೋಗಿದೆ. ನನಗೆ ಇರುವುದು ಒಂದೇ ಎಕರೆ ಜಮೀನು ಹೀಗಾಗಿ ಜಮೀನಿನಲ್ಲಿ ವಿದ್ಯುತ್ ಲೈನ್ ಹಾಕದಂತೆ ರೈತ ಸಿಬ್ಬಂದಿ ಬಳಿ ಮನವಿ ಮಾಡಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಸಿಬ್ಬಂದಿಗಳು ಕಾಮಗಾರಿ ಆರಂಭಿಸಿದ್ದಾರೆ. ವಿದ್ಯುತ್ ಇಲಾಖೆಯ ವರ್ತನೆಗೆ ಬೇಸತ್ತು ದಂಪತಿಗಳು ಇಬ್ಬರು ವಿಷ…
ನವದೆಹಲಿ : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಸೆಸ್ ಚಾರ್ಜ್ ನಷ್ಟವಾಗಿದೆ. ಒಂದು ವರ್ಷಕ್ಕೆ ರೂ.8,084 ಕೋಟಿ ಸೆಸ್ ಚಾರ್ಜ್ ನಷ್ಟವಾಗಿದೆ ನ್ಯಾಯಯುತವಾಗಿ ಹಣ ಹಂಚಿ ಅಂತ ಹೇಳಿದ್ದೇವೆ. ರಾಜ್ಯಗಳು ಅಭಿವೃದ್ಧಿ ಆದರೆ ದೇಶದ ಅಭಿವೃದ್ಧಿ ಸಾಧ್ಯ ಆಗುತ್ತೆ ಅಲ್ವಾ? ಕೇರಳಕ್ಕೆ 3,800 ಕೋಟಿ ವಿಶೇಷ ಅನುದಾನ ಬಂದಿದೆ. ಕರ್ನಾಟಕಕ್ಕೆ ಯಾವುದೇ ರೀತಿಯಾದ ರೆವೆನ್ಯೂ ಡಿಪೆನ್ಸೀಸ್ ಹಣ ಬಂದಿಲ್ಲ. ನಮ್ಮ ರಾಜ್ಯಕ್ಕೆ 545 ಕೋಟಿ ವಿಶೇಷ ಅನುದಾನ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದೆಹಲಿಯಲ್ಲಿ ಇಂದು ನಡೆದ 16ನೇ ಹಣಕಾಸು ಆಯೋಗದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2011-2012ರಲ್ಲಿ ಕರ್ನಾಟಕ ರಾಜ್ಯವು ಜಿಡಿಪಿಗೆ ಶೇ 7ರಷ್ಟು ಕೊಡುಗೆ ನೀಡಿದ್ದರೆ, 2024-25 ರಲ್ಲಿ ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದೆ. ಜಿಎಸ್ ಟಿ ಸಂಗ್ರಹಣೆಯಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 2 ನೇ ಸ್ಥಾನದಲ್ಲಿದೆ. ಒಟ್ಟು ಜನಸಂಖ್ಯೆಯಲ್ಲಿ ಶೇ 5 ರಷ್ಟಿದ್ದೇವೆ. 5 ವಷರ್ಗಳಿಗೊಮ್ಮೆ ಹಣಕಾಸಿನ ಆಯೋಗ ರಚನೆಯಾಗುತ್ತದೆ.…
ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 150 ಕೊರೊನ ಕೇಸ್ ಪತ್ತೆಯಾಗಿವೆ. ಅಲ್ಲದೇ ಸೋಂಕಿತರಾದಂತ 18 ಜನರು ಗುಣಮುಖರಾಗಿದ್ದಾರೆ ಹಿಂದೂರಾಜ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಈ ಕುರಿತು ಮಾಹಿತಿ ನೀಡಿದೆ. ಇನ್ನು ರಾಜ್ಯದಲ್ಲಿ ಕೊರೊನ ಸೋಂಕಿ ತರ ಸಂಖ್ಯೆ 1,705 ಕ್ಕೆ ಏರಿಕೆಯಾಗಿದ್ದು ಪ್ರಸ್ತುತ ರಾಜ್ಯದಲ್ಲಿ ಕೋರೋನ ಆಕ್ಟಿವ್ ಪ್ರಕರಣಗಳ ಸಂಖ್ಯೆ 527 ಇದೆ. ಕಳೆದ 24 ಗಂಟೆಯಲ್ಲಿ 496 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು 150 ಮಂದಿಗೆ ಕೊರೋನಾ ಸೋಂಕು ಪತ್ತೆಯಾದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 527ಕ್ಕೆ ಏರಿಕೆಯಾಗಿದೆ. ಇವರಲ್ಲಿ 520 ಮಂದಿ ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೇ, 7 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ.
ಅಹಮದಾಬಾದ್ : ನಿನ್ನೆ ಗುಜರಾತಿನ ಅಹಮದಾಬಾದ್ ಏರ್ಪೋರ್ಟ್ ಬಳಿ ವಿಮಾನ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ ವಿಮಾನದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಹೌದು ಅಹ್ಮದಾಬಾದ್ ನಿಂದ ಲಂಡನ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ನಿನ್ನೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನವಾಗಿತ್ತು. ಈ ಒಂದು ದುರಂತದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 270ಕ್ಕೆ ಏರಿಕೆಯಾಗಿದೆ. ಇನ್ನು ಗಾಯಾಳು 24 ವೈದ್ಯಕೀಯ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನು ಕೆಲವರ ಮೃತ ದೇಹಗಳು ಅಹಮದಾಬಾದ್ ಸಿವಿಲ್ ಆಸ್ಪತ್ರೆಯಲ್ಲಿದ್ದು, ಡಿಎನ್ಎ ವರದಿಯ ಬಳಿಕ 8 ಕುಟುಂಬಸ್ಥರಿಗೆ ಮೃತ ದೇಹಗಳನ್ನು ಹಸ್ತಾಂತರಿಸಲಾಗಿದೆ. ಅನೇಕ ಜನರ ಗುರುತುಪತೆಯಾಗದ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ನಂತರ ಕುಟುಂಬಸ್ಥರಿಗೆ ಮೃತ ದೇಹಗಳನ್ನು ಹಸ್ತಾಂತರಿಸಲು ನಿರ್ಧರಿಸಲಾಗಿದೆ.














