Subscribe to Updates
Get the latest creative news from FooBar about art, design and business.
Author: kannadanewsnow05
ಬೆಂಗಳೂರು : ಧರ್ಮಸ್ಥಳ ಪ್ರಕರಣ ದಿನದಿಂದ ದಿನಕ್ಕೆ ವಿವಿಧ ಸ್ವರೂಪ ಪಡೆಯುತ್ತಿದ್ದು, ಇದೀಗ ಧರ್ಮಸ್ಥಳ ದೇವಸ್ಥಾನದ ವಿರುದ್ಧ ಷ್ಯಡಂತ್ರದ ಆರೋಪ ಹೊತ್ತಿರುವ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ. ಹೌದು ಹುಬ್ಬಳ್ಳಿ ಮೂಲದ ರೌಡಿಶೀಟರ್ ಮದನ್ ಬುಗಾಡಿ ಎಂಬಾಂತನನ್ನ ಮಾನವಹಕ್ಕುಗಳ ಆಯೋಗದವರೆಂದು ಧರ್ಮಸ್ಥಳ ಪೊಲೀಸರಿಗೆ ಪರಿಚಯಿಸಿದ್ದಾರೆ ಎಂದು ಹಿಂದೂ ಮುಖಂಡ ಸುರೇಶ್ ಗೌಡ ದೂರು ದಾಖಲಿಸಿದ್ದಾರೆ. ಸುಳ್ಳು ಹೇಳಿ ಮಾನವ ಹಕ್ಕುಗಳ ಆಯೋಗವನ್ನ ಬಳಕೆ ಮಾಡಿಕೊಂಡಿದ್ದಾರೆ. ಇದು ಸರಿ ಅಲ್ಲ. ಅಧಿಕಾರಿಗಳು ಕೂಡ ಶೀಘ್ರ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಪೊಲೀಸ್ ಠಾಣೆಗೂ ಈ ಸಂಬಂಧ ಶೀಘ್ರ ದೂರು ನೀಡುತ್ತೇವೆ. ಗಿರೀಶ್ ಮಟ್ಟಣ್ಣನವರ್ ಇಲಾಖೆಯ ಹೆಸರನ್ನು ಸುಳ್ಳು ಹೇಳಲು ಬಳಸಿಕೊಂಡಿದ್ದಾರೆಂದು ಆರೋಪಿಸಿ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ದೂರು ಪಡೆದಿರುವ ಅಧಿಕಾರಿಗಳು ಈ ಬಗ್ಗೆ ಸಮಗ್ರ ಪರಿಶೀಲನೆ ಮಾಡಿ, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಸುರೇಶ್ ಗೌಡ ತಿಳಿಸಿದರು.
ಹಾಸನ : ಹಾಸನದಲ್ಲಿ ಭೀಕರವಾದ ಕೊಲೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆಗೈಯ್ಯಲಾಗಿದೆ. ಹಾಸನದ ದೊಡ್ಡ ಮಂಡಿಗನಹಳ್ಳಿ ನಿವಾಸಿ ಅಂಕಿತ್ (26) ಎನ್ನುವ ಆಟೋ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ಅಂಕಿತ್ ಬೈಕ್ನಲ್ಲಿ ರಾಗಿ ಮುದ್ದನಹಳ್ಳಿ ಕಡೆಗೆ ಹೋಗುತ್ತಿದ್ದ ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ. ಘಟನೆ ಕುರಿತಂತೆ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣಪತಿ ಅಥರ್ವಶೀರ್ಷ ಮಂತ್ರವನ್ನು ಪಠಿಸಿ ಅದೃಷ್ಟವು ಒಲಿಯುದು ಇಷ್ಟಾರ್ಥ ಕಾರ್ಯ ಪೂರ್ಣ ಸಿದ್ದಿಯಾಗಲಿದೆ..! ಬುಧವಾರ ಗಣೇಶನನ್ನು ಅಥವಾ ಗಣಪತಿ ದೇವರನ್ನು ಸಂಪೂರ್ಣ ವಿಧಿ – ವಿಧಾನಗಳ ಮೂಲಕ ಪೂಜಿಸಲಾಗುತ್ತದೆ. ಶುಕ್ರವಾರ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಮತ್ತು ಅವನ ಎಲ್ಲಾ ದುಃಖಗಳನ್ನು ತೆಗೆದುಹಾಕಲಾಗುತ್ತದೆ. ಆ 3 ಮಂತ್ರಗಳು ಯಾವುವು..? ಬುಧವಾರ ಈ 3 ಗಣಪತಿ ಮಂತ್ರ ಪಠಿಸಿದರೆ ಗಣಪತಿ ಒಲಿಯುವನು..! ಮಂತ್ರಗಳಾವುವು..? ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ…
ಬೆಂಗಳೂರು : ಈತ ಸಾಮಾನ್ಯ ಕಳನಲ್ಲ ಎಲ್ಲಿ ಮದುವೆ ನಡೆಯುತ್ತವೆಯೋ ಆ ಒಂದು ಕಲ್ಯಾಣ ಮಂಟಪಕ್ಕೆ ಅಥಿತಿಯಂತೆ ತೆರಳಿ ವಧು-ವರರ ಒಡವೆ ಕೊಠಡಿಗಳಿಗೆ ನುಗ್ಗಿ ಚೆನ್ನಾಭರಣ ದೋಚಿ ಅದೇ ಹಣದಿಂದ ಮೂರು ಸೈಟ್ ಮತ್ತು ಒಂದು ಮನೆ ಕಟ್ಟಿದ್ದ. ಮದುವೆ ನಡೆಯುವಾಗ ಕಲ್ಯಾಣ ಮಂಟಪಗಳಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ಮಾಗಡಿ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೌದು ತುಮಕೂರು ಜಿಲ್ಲೆ ಗುಬ್ಬಿಯ ಪರಮೇಶ್ ಬಂಧಿತ ಆರೋಪಿ. ಈತನಿಂದ 400 ಗ್ರಾಂ ಚಿನ್ನಾಭರಣ, 91,000 ರೂ. ನಗದು ಸೇರಿ 36.91 ಲಕ್ಷ ರೂ.ಮೌಲ್ಯದ ವಸ್ತು ಜಪ್ತಿ ಮಾಡಲಾಗಿದೆ. ಅತಿಥಿ ಸೋಗಿನಲ್ಲಿ ಮದುವೆ ಸಮಾರಂಭ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಹೋಗುತ್ತಿದ್ದ ಎನ್ನಲಾಗಿದೆ. ಆರೋಪಿ ಮಾಂಗಲ್ಯ ಧಾರಣೆ ಸಂದರ್ಭದಲ್ಲಿ ವಧು, ವರನ ಕಡೆಯವರ ರೂಂ ಗೆ ಹೋಗಿ ನಗದು, ಚಿನ್ನಾಭರಣ ದೋಚಿ ಪರಾರಿ ಆಗುತ್ತಿದ್ದ. ಕದ್ದ ಆಭರಣಗಳನ್ನು ಮಾರಾಟ ಮಾಡುತ್ತಿದ್ದ. ಕಾಮಾಕ್ಷಿಪಾಳ್ಯ, ಕೆಂಗೇರಿ, ಬಸವನಗುಡಿ, ಮಾಗಡಿ ರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ…
ಬೆಂಗಳೂರು : ದೊಡ್ಡಬಳ್ಳಾಪುರದಲ್ಲಿ ಘೋರ ಘಟನೆ ನಡೆದಿದ್ದು, ಒಣಗಲು ಹಾಕಲಾಗಿದ್ದ ಬಟ್ಟೆಯನ್ನ ತೆಗೆಯಲು ಹೋದ ತಾಯಿ ಹಾಗೂ ತಾಯಿಯನ್ನ ಉಳಿಸಲು ಹೋದ ಮಗನಿಗೂ ವಿದ್ಯುತ್ ಸ್ವರ್ಶಿಸಿ ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ತಾಯಿ ಮತ್ತು ಅಣ್ಣನನ್ನ ರಕ್ಷಿಸಲು ಮುಂದಾಗ ತಂಗಿಗೂ ವಿದ್ಯುತ್ ತಗುಲಿದೆ. ವಿದ್ಯುತ್ ಅವಘಡದಲ್ಲಿ ತಾಯಿ – ಮಗ ದುರಂತ ಸಾವನ್ನಪ್ಪಿದ್ದು, ಗಾಯಗೊಂಡ ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕಾರನಾಳ ಗ್ರಾಮದಲ್ಲಿ ಇಂದು ರಾತ್ರಿ ಘಟನೆ ನಡೆದಿದ್ದು, ವಿದ್ಯುತ್ ಅವಘಡದಲ್ಲಿ ತಾಯಿ ಲಲಿತಮ್ಮ (55), ಮಗ ಸಂಜಯ್ (35) ಸಾವನ್ನಪ್ಪಿದ್ದಾರೆ. ವಿದ್ಯುತ್ ಸ್ವರ್ಶದಿಂದ ಸುಟ್ಟಗಾಯಕ್ಕೆ ತುತ್ತಾಗಿರುವ ಮಗಳು ಲಕ್ಷ್ಮೀದೇವಿ(32)ಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ವಿರುದ್ಧ ತನಿಖೆಗೆ ಸರ್ಕಾರಕ್ಕೆ ಒತ್ತಡ ಹೇರುವಂತೆ, ಪ್ರಸಿದ್ಧ ಸ್ವಾಮೀಜಿ ಮೊರೆ ಹೋಗಿದ್ದ ‘ಬುರುಡೆ’ ಗ್ಯಾಂಗ್!
ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಸ್ಕ್ ಮ್ಯಾನ್ ಚೆನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಅರೆಸ್ಟ್ ಮಾಡಿ ತೀವ್ರ ವಿಚಾರಣೆ ಒಳಪಡಿಸಿದ್ದು ಸ್ಫೋಟಕವಾದ ಮಾಹಿತಿ ಬಾಯಿ ಬಿಟ್ಟಿದ್ದಾನೆ. ಬುರುಡೆ ಗ್ಯಾಂಗ್ ಧರ್ಮಸ್ಥಳದ ವಿರುದ್ಧ ತನಿಖೆ ನಡೆಸಲು ಸರ್ಕಾರಕ್ಕೆ ಒತ್ತಡ ಇರುವಂತೆ ಸ್ವಾಮೀಜಿಗಳ ಮೊರೆ ಹೋಗಲಾಗಿತ್ತು ಎಂದು ಹೇಳಿಕೆ ನೀಡಿದ್ದಾನೆ. ಹೌದು ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯ, ಇದೀಗ ಮತ್ತೊಂದು ಸ್ಫೋಟಕ ಮಾಹಿತಿಯನ್ನು ಎಸ್‌ಐಟಿ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ಬುರುಡೆ ಗ್ಯಾಂಗ್ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಿತ್ತು ಎನ್ನುವ ಸ್ಫೋಟಕ ಮಾಹಿತಿಯನ್ನು ಚಿನ್ನಯ್ಯ ಬಾಯ್ಬಿಟ್ಟಿದ್ದಾನೆ ಎಂದು ಹೇಳಲಾಗಿದೆ. ಇದೊಂದು ಹಿಂದೂ ವಿರೋಧಿ ಹೋರಾಟ ಎಂದು ಗುರುತಿಸಿಕೊಳ್ಳಬಾರದು ಎನ್ನುವ ಕಾರಣಕ್ಕೆ ಸ್ವಾಮೀಜಿಯನ್ನು ಭೇಟಿ ಮಾಡಿದ ತಂಡ, ಸರ್ಕಾರಕ್ಕೆ ಒತ್ತಡ ಹೇರಲು ಮುಂದಾಗಿತ್ತು. ಸ್ವಾಮೀಜಿ ಮೂಲಕ ಧರ್ಮಸ್ಥಳ ಪ್ರಕರಣದ ತನಿಖೆ ತಮ್ಮ ಯೋಜನೆಯಂತೆಯೇ ಮುಂದೆ ಸಾಗಲು ಪ್ಲ್ಯಾನ್ ಮಾಡಿತ್ತು. ಸ್ವಾಮೀಜಿ ಮೂಲಕ ಸರ್ಕಾರಕ್ಕೆ ಒತ್ತಡ ಹಾಕುವುದು, ಈ ಹೋರಾಟದಲ್ಲಿ ಇಡೀ ಹಿಂದೂ…
ಚಿತ್ರದುರ್ಗ : 97 ಲಕ್ಷ ರೂಪಾಯಿ ಸಮೇತ ಬಾಡಿಗೆ ಕಾರು ಚಾಲಕ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಸೀನಿಮಿಯ ರೀತಿಯಲ್ಲಿ ಆರೋಪಿ ಚಾಲಕರನ್ನು ಅರೆಸ್ಟ್ ಮಾಡಿದ್ದಾರೆ. ಚಳ್ಳಕೆರೆ ಠಾಣೆ ಸಿಪಿಐ ಕುಮಾರ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿತ್ತು ಬೆಂಗಳೂರು ಮೂಲದ ನಿವೃತ್ತ ಎಸ್ಪಿ ಗುರುಪ್ರಸಾದ್ ಗೆ ವಂಚನೆ ಎಸಗಲಾಗಿತ್ತು. ನಿನ್ನೆ ಗುರುಪ್ರಸಾದ್ ಪತ್ನಿಯ ಸಮೇತ ಬಳ್ಳಾರಿಗೆ ತೆರಳಿದ್ದರು. ಬಳ್ಳಾರಿಯಲ್ಲಿದ್ದ ಜಮೀನನ್ನು ಗುರುಪ್ರಸಾದ್ ಮಾರಾಟ ಮಾಡಿದ್ದಾರೆ. ಜಾಮೀನು ಮಾರಾಟ ಮಾಡಿದ ಒಟ್ಟು 97 ಲಕ್ಷ ರೂಪಾಯಿ ಪಡೆದು ಕಾರಿನಲ್ಲಿ ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಈ ವೇಳೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದ ಬಳಿ ಊಟಕ್ಕಾಗಿ ಗುರುಪ್ರಸಾದ್ ಹೋಟೆಲಿಗೆ ತೆರಳಿದ್ದಾರೆ, ಈ ವೇಳೆ ಕಾರಿನಲ್ಲಿ ಇದ್ದಂತಹ ಹಣದ ಸಮೇತ ರಮೇಶ್ ಎಸ್ಕೇಪ್ ಆಗಿದ್ದ ಹಿಂದೂಪುರ ಮೂಲದ ರಮೇಶ್ ಆಂಧ್ರಕ್ಕೆ ಪ್ರಾರಾಗಲು ಯತ್ನಿಸಿದ್ದಾನೆ. ಸದ್ಯ ಚಳ್ಳಕೆರೆ ಪೊಲೀಸರು ಆರೋಪಿ ರಮೇಶನ್ನು ಅರೆಸ್ಟ್ ಮಾಡಿದ್ದಾರೆ ಅಲ್ಲದೆ…
ಬೆಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಬೇಡ ಎಂಬ ಬಿಜೆಪಿ ನಾಯಕರ ವಿರೋಧದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ ಪ್ರಾರ್ಥನೆ ಮಾಡಿಕೊಳ್ಳುತ್ತಾರೆ. ಇದು ಹಿಂದೂಗಳ ಆಸ್ತಿಯಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ನಿನ್ನೆ ಈ ವಿಚಾರವಾಗಿ ಪ್ರತಿಕ್ರಿಸಿದ ಅವರು, ನಾವುಗಳು ಮಸೀದಿ, ದರ್ಗಾಗಳಿಗೆ, ಜೈನರ ಬಸದಿಗಳಿಗೆ, ಚರ್ಚ್, ಗುರುದ್ವಾರಗಳಿಗೆ ಹೋಗುತ್ತೇವೆ. ನಾವು ಗುರುದ್ವಾರಕ್ಕೆ ಹೋಗೋದನ್ನ ಯಾರಾದರೂ ತಪ್ಪಿಸಿದ್ದಾರಾ? ಹಿಂದೂ ದೇವಸ್ಥಾನಗಳಿಗೆ ಅವರುಗಳು ಬರುವುದನ್ನು ನಾವು ವಿರೋಧಿಸಿದ್ದೇವೆಯೇ? ಯಾವುದೇ ಶ್ರದ್ದಾ ಕೇಂದ್ರಗಳಿಗೆ ಯಾರು ಬೇಕಾದರೂ ಹೋಗಿ ಬರಬಹುದು ಎಂದರು. ನಮ್ಮದು ಜಾತ್ಯತೀತ ರಾಷ್ಟ್ರ. ನಮ್ಮ ಸಂವಿಧಾನದ ಮೂಲಕ ಎಲ್ಲರಿಗೂ ಅವಕಾಶ, ಸ್ವಾತಂತ್ರ್ಯ ಕಲ್ಪಿಸಲಾಗಿದೆ. ಎಲ್ಲರಿಗೂ ಸಂವಿಧಾನದ ರಕ್ಷಣೆಯಿದೆ. ಎಲ್ಲರಿಗೂ ಅವರವರ ನಂಬಿಕೆ ಮೇಲೆ ವಿಶ್ವಾಸವಿದೆ. ಮುಸ್ಲಿಂ ಅಥವಾ ಕ್ರಿಶ್ಚಿಯನ್ ಹೆಣ್ಣು, ಹಿಂದೂ ಅಥವಾ ಇತರೇ ಧರ್ಮದ ಗಂಡಿಗೆ ಜನಿಸಿದ ಮಕ್ಕಳು…
ಬೆಂಗಳೂರು : ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟಿದ್ದು ಅದರಲ್ಲೂ ಚಿಕ್ಕ ಮಕ್ಕಳಿಗೆ ಗಣೇಶ ಹಬ್ಬ ಅಂದರೆ ಅಚ್ಚುಮೆಚ್ಚು. ಇದೀಗ ಬೆಂಗಳೂರಿನ ಕೆಆರ್ ಮಾರುಕಟ್ಟೆಯಲ್ಲಿ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೂವು ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಭರಾಟೆಯು ಜೋರಾಗಿದೆ. ಕೆ.ಆರ್ ಮಾರುಕಟ್ಟೆಯಲ್ಲಿ ಕಾಲಿಡಲು ಆಗದೆ ಜನಜಂಗುಳಿಯಿಂದ ಕೂಡಿದೆ. ಹೌದು ಗೌರಿ ಗಣೇಶ ಹಬ್ಬ ಹಿನ್ನೆಲೆ ಬೆಳ್ಳಂ ಬೆಳಗ್ಗೆ ಖರೀದಿ ಭರಾಟೆ ಜೋರಾಗಿದೆ ಬೆಂಗಳೂರಿನ ಕೆ.ಆರ್ ಮಾರುಕಟ್ಟೆಯಲ್ಲಿ ಜನರು ಖರೀದಿ ಭರಾಟೆಯಲ್ಲಿ ತೊಡಗಿದ್ದಾರೆ. ಹೂವು ಹಣ್ಣು ಹಾಗು ಪೂಜಾ ಸಾಮಗ್ರಿಗಳನ್ನು ಜನರು ಮುಗಿಬಿದ್ದು ಖರೀದಿಸುತ್ತಿದ್ದಾರೆ. ಹಬ್ಬ ಹಿನ್ನೆಲೆಯಲ್ಲಿ ಹೂವು ಹಣ್ಣುಗಳ ಬೆಲೆ ಏರಿಕೆ ನಡುವೆಯೂ ಕೂಡ ಜನರ ಖರೀದಿ ಭರಾಟೆ ಜೋರಾಗಿದೆ.
ಕೊಪ್ಪಳ : ಗಂಗಾವತಿಯಿಂದ ಅಕ್ರಮವಾಗಿ ವಿದೇಶಕ್ಕೆ ಅಕ್ಕಿ ಮಾರಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಠಾಣೆಯಲ್ಲಿ ರೈಸ್ ಮಿಲ್ ಮಾಲೀಕ ಸೇರಿದಂತೆ ಒಟ್ಟು ನಾಲ್ವರ ವಿರುದ್ಧ FIR ದಾಖಲಾಗಿದೆ. ಆದರೆ FIR ನಲ್ಲಿ ರೈಸ್ ಮೇಲ್ ಮಾಲೀಕನ ಹೆಸರನ್ನು ದೂರಿನಲ್ಲಿ ಅಧಿಕಾರಿಗಳು ಉಲ್ಲೇಖಿಸಿಲ್ಲ. ಉಮಾಶಂಕರ್ ರೈಸ್ ಮಿಲ್ ಮಾಲೀಕ ಉಮೇಶ ಸಿಂಗನಾಳ ಹೆಸರನ್ನು ಉಲ್ಲೇಖಿಸದೆ ದೂರಿನಲ್ಲಿ ಕೇವಲ ಉಮಾಶಂಕರ ರೈಸ್ ಮಿಲ್ ಮಾಲೀಕ ಎಂದು ಉಲ್ಲೇಖಿಸಲಾಗಿದೆ. ಗೋದಾಮು ಮ್ಯಾನೇಜರ್ ಸೋಮಶೇಖರ್ ರೈಸ್ ಮಿಲ್ ಮಾಲೀಕ, ಲಾರಿ ಚಾಲಕ ಹಾಗೂ ಕ್ಲಿನರ್ ವಿರುದ್ಧ ಇದೀಗ FIR ದಾಖಲಾಗಿದೆ ಇನ್ನು ಇದೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಅಧಿಕಾರಿಗಳು ಭಾಗಿಯಾಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗೆ ಹೇಳಿಕೆ ನೀಡಿದರು. ಅಕ್ರಮ ನಡೆದಿರುವುದು ನನ್ನ ಗಮನಕ್ಕೆ ಬಂದಿದೆ ಸರ್ಕಾರಿ ಗೋದಾಮಿನಲ್ಲಿ ತಪ್ಪು ಮಾಡಿರುವ ಮಾಹಿತಿ ಇದೆ…













