Subscribe to Updates
Get the latest creative news from FooBar about art, design and business.
Author: kannadanewsnow05
ತುಮಕೂರು : ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ, ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತರು ಬಿಜೆಪಿ ನಾಯಕರು ಹಾಗೂ ಮಠಾಧೀಶರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಡಳಿತ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಹೌದು ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಬಿಜೆಪಿ ಶಾಸಕರು ಮಠಾಧೀಶರು ರೈತರಿಂದ ಭಾರಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಹೆದ್ದಾರಿಗೆ ಮಣ್ಣು ಸುರಿದು ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದರು. ಆಕ್ರೋಶದ ಕಿಚ್ಚಿನ ಬಳಿಕ ಇದೀಗ ಹೇಮಾವತಿ ಕೆನಾಲ್ ಲಿಂಕ್ ಕಾಮಗಾರಿಯನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ರಸ್ತೆಯಲ್ಲಿಯೇ ಅಡ್ಡಲಾಗಿ ಮಲಗಿ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರ ಮನವೊಲಿಕೆಗೆ ಪೊಲೀಸರು ಹರಸಾಹಸಪಟ್ಟಿದ್ದಾರೆ. ಆದಾಗ್ಯೂ ಪ್ರತಿಭಟನೆ ಹಿಂಪಡೆಯದ ಹೋರಾಟಗಾರರು ಕೆನಾಲ್ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ತೆರಳಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಮಾರ್ಗಮಧ್ಯೆಯೇ ತಡೆದು ವಶಕ್ಕೆ ಪಡೆದಿದ್ದಾರೆ.
ಹಾಸನ : ಅನ್ನ ಹಾಕಿದ ಮಾಲೀಕನಿಗೆ ದ್ರೋಹ ಬಗೆದ ಕಾರ್ಮಿಕರು ಇದೀಗ ಆತನನ್ನೇ ಭೀಕರವಾಗಿ ಕೊಲೆ ಮಾಡಿ ಆತನ ಮೈಮೇಲಿದ್ದ ಚಿನ್ನವನ್ನು ದೋಚಿ ಪರಾರಿಯಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ಅರಸೀಕೆರೆ ನಗರದ ಸುಬ್ರಹ್ಮಣ್ಯ ನಗರ ಬಡಾವಣೆ ಯ ನಿವಾಸಿ ವಿಜಯ್ ಕುಮಾರ್(46) ಎನ್ನುವರನ್ನು ಕಾರ್ಮಿಕರು ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಅರಸೀಕೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ಡಿಪೋ ಮುಂಭಾಗದಲ್ಲಿ ಕಾಂಟ್ರಕ್ಟರ್ ವಿಜಯ್ ಕುಮಾರ್ ನನ್ನು ಚಿನ್ನದ ಒಡವೆಗಳನ್ನು ದೋಚುವುದಕ್ಕಾಗಿ ಅವರ ಬಳಿ ಕೆಲಸ ಮಾಡುತ್ತಿದ್ದವರೇ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಅಷ್ಟೆ ಅಲ್ಲದೇ ಕೊಲೆ ಮಾಡಿದ ಬಳಿಕ ವಿಜಯ್ ಮೈಮೇಲಿದ್ದ ಬಂಗಾರದ ಚಿನ್ನ ಹಾಗೂ ಕೈನಲ್ಲಿದ್ದ ಉಂಗುರಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಅಚ್ಚರಿ ಅಂದ್ರೆ ಉಂಗುರು ತೆಗೆಯಲು ಬರಲಿಲ್ಲವೆಂದು ಕೈ ಬೆರಳನ್ನೇ ಕಟ್ ಮಾಡಿಕೊಂಡು ಕೊಂಡೊಯ್ದಿದ್ದಾರೆ. ವಿಕ್ರಂನಿಗೆ ಮೊದಲಿನಿಂದಲೂ ವಿಜಯ್ ಕುಮಾರ್ ಮೈಮೇಲಿದ್ದ ಚಿನ್ನಾಭರಣಗಳ ಮೇಲೆ ಕಣ್ಣಿತ್ತು. ಈ ಸಂಬಂಧ ಪತ್ನಿ ಹಾಗೂ ಮಕ್ಕಳನ್ನು ಊರಿನಲ್ಲಿ ಬಿಟ್ಟು…
ನವದೆಹಲಿ : ಉಗ್ರರ ಜೊತೆಗೆ ಸಂಪರ್ಕ ಹೊಂದಲಾಗಿದೆ ಎಂದು ಇದೀಗ ದೇಶದ 5 ರಾಜ್ಯಗಳಲ್ಲಿ 15 ಕಡೆ ಎನ್ಐಎ ದಾಳಿ ನಡೆಸಿದೆ. ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ದೆಹಲಿ, ಹರಿಯಾಣ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಅಸ್ಸಾಂನಲ್ಲಿ ಶೋಧ ನಡೆಸಲಾಗುತ್ತಿದೆ. ಹೌದು ಪಾಕಿಸ್ತಾನದ ಗುಪ್ತಚರ ಅಧಿಕಾರಿಗಳೊಂದಿಗೆ ವರ್ಗೀಕೃತ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ನ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಒಬ್ಬರನ್ನು ಬಂಧಿಸಿದ ಕೆಲವು ದಿನಗಳ ನಂತರ, ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಹಲವಾರು ತಂಡಗಳು ಶನಿವಾರ ದೆಹಲಿ, ಚಂಡೀಗಢ ಮತ್ತು ಕೋಲ್ಕತ್ತಾದಲ್ಲಿ ಶೋಧ ನಡೆಸುತ್ತಿವೆ. ಎನ್ಐಎ ದೆಹಲಿಯಿಂದ ಸಿಆರ್ಪಿಎಫ್ ಎಎಸ್ಐ ಮೋತಿ ರಾಮ್ ಜಾಟ್ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ ಎಂದು ಹೇಳಿದೆ. ಟಿವಿ ಪತ್ರಕರ್ತರಂತೆ ನಟಿಸಿದ ಪಾಕಿಸ್ತಾನಿ ಏಜೆಂಟ್‌ಗಳೊಂದಿಗೆ ಅವರು ವರ್ಗೀಕೃತ ಮಾಹಿತಿಯನ್ನು ಹಂಚಿಕೊಂಡರು ಮತ್ತು ಅವರಿಂದ ಹಣವನ್ನು ಪಡೆಯುತ್ತಿದ್ದರು ಎಂದು ಕೇಂದ್ರ ಸಂಸ್ಥೆ ಆರೋಪಿಸಿದೆ. ಅವರನ್ನು ಜೆ &…
ಮಂಗಳೂರು : ನಿನ್ನೆ ಮಂಗಳೂರಿನ ಮಂಜನಾಡಿಯ ಮೊಂಟೆಪದವು ಗುಡ್ಡ ಕುಸಿತ ಪ್ರಕರಣದಲ್ಲಿ ಮೂವರು ಸಾವನಪ್ಪಿದ್ದರು. ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಈ ಒಂದು ದುರಂತದಲ್ಲಿ ಮೃತಪಟ್ಟ ಬಾಲಕರ ತಾಯಿ ಅಶ್ವಿನಿ ಗಾಯಗೊಂಡಿದ್ದು ಇದೀಗ ಅಶ್ವಿನಿ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ. ಹೌದು ಮಂಗಳೂರಿನ ಮಂಜನಾಡಿಯ ಮೊಂಟೆಪದವು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗಾಯಾಳು ಅಶ್ವಿನಿ ದುರಂತದಲ್ಲಿ ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾರೆ. ಅಶ್ವಿನಿ ಸಂಪೂರ್ಣವಾಗಿ ಕಾಲಿನ ಸ್ವಾಧೀನವನ್ನು ಕಳೆದುಕೊಂಡಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿ ಅಶ್ವಿನಿಯ ಎರಡು ಕಾಲುಗಳನ್ನು ವೈದ್ಯರು ಇದೀಗ ತೆಗೆದಿದ್ದಾರೆ. ಅಶ್ವಿನಿ ಅವರ ಒಂದು ಕಾಲಿನ ಪಾದದ ಭಾಗ ಕಟ್ ಆಗಿದೆ. ಮತ್ತೊಂದು ಪೂರ್ತಿ ಕಾಲು ಕಟ್ ಮಾಡಿ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಸದ್ಯ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಅಶ್ವಿನಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು 24 ಗಂಟೆಗಳ ಕಾಲ ಅಬ್ಸರ್ವೇಷನ್ ನಲ್ಲಿ ಇಟ್ಟಿದ್ದಾರೆ.
ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ. ಈ ನಡುವೆಯೂ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಮುಂದುವರಿದಿದೆ. ಇದೀಗ ಗ್ಯಾರಂಟಿ ಜಾರಿ ಸಮಿತಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಬರೋಬ್ಬರಿ 7.65 ಕೋಟಿ ಹಣ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹೌದು ಸರ್ಕಾರ ಸ್ಥಳೀಯ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನೇ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿದೆ. ಈ ವಿಚಾರದ ಬಗ್ಗೆ ಕಳೆದ ಅಧಿವೇಶನದಲ್ಲಿ ಸರ್ಕಾರ ಹಾಗೂ ವಿಪಕ್ಷಗಳ ಮಧ್ಯೆ ಭಾರೀ ಜಟಾಪಟಿ ನಡೆದಿತ್ತು. ಈ ಬೆನ್ನಲ್ಲೇ ಜಿ.ಪಂ, ತಾಪಂ.ಗಳಿಗೆ 7.65 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಆರ್ಥಿಕ ಇಲಾಖೆ ಆದೇಶಿಸಿದೆ. ಜಿಲ್ಲಾ ಪಂಚಾಯಿತಿಗಳಿಗೆ 1.31 ಕೋಟಿ ರೂ., ತಾಲೂಕು ಪಂಚಾಯಿತಿಗಳಿಗೆ 6.33 ಕೋಟಿ ರೂ. ಹಾಗೂ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರ ಗೌರವಧನ ಮತ್ತು ಸದಸ್ಯರ ಸಭಾ…
ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಐದು ಜನರು ಮೃತಪಟ್ಟಿದ್ದಾರೆ. ಭೂಕುಸಿತ, ಪ್ರವಾಹದಿಂದ ಹಲವಾರು ಮನೆಗಳಿಗೆ ಹಾನಿಯಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹೌದು ಮಳೆಯಿಂದಾಗಿ ಜಿಲ್ಲೆಯಲ್ಲಿ ಒಂದೇ ದಿನ ಐವರು ಮೃತಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಮಳೆಯಾಗುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ ಘೋಷಣೆ ಮಾಡಿದೆ.
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಳೆ ಹೆಚ್ಚಾಗುತ್ತಿದೆ. ಈಗಾಗಲೇ ಬೆಂಗಳೂರು ಮಹಾನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದೆ. ಈ ಒಂದು ಮಹಾ ಮಳೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿವೆ. ಈ ನಡುವೆ ಇಂದು ಮಳೆ ಹಾಗೂ ರಸ್ತೆ ಅಪಘಾತಗಳಂತಹ ಪ್ರಕರಣದಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ. ಹೌದು ಮಂಗಳೂರಿನ ಉಳ್ಳಾಲದಲ್ಲಿ ಭಾರೀ ಮಳೆಯಿಂದಾಗಿ ಮುಂಜಾನೆ 4 ಗಂಟೆ ಸುಮಾರಿಗೆ ಮನೆ ಮೇಲೆ ಗುಡ್ಡ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಇನ್ನು ನೇರಳಕಟ್ಟೆಯಲ್ಲಿ ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು 6 ವರ್ಷದ ಫಾತಿಮಾ ನಯೀಮ್ ಸಾವನಪ್ಪಿದ್ದಾಳೆ. ಅಲ್ಲದೆ ಮಂಗಳೂರಲ್ಲಿ ಮೀನುಗಾರಿಕೆಗೆ ತೆರಳಿದ ವೇಳೆ ಹಡಗು ಮಗುಚಿ ಇಬ್ಬರು ಮೀನುಗಾರರು ನೀರು ಪಾಲಾಗಿ ಸಾವನಪ್ಪಿದ್ದಾರೆ. ಇನ್ನು ಇದೇ ಜಿಲ್ಲೆಯಲ್ಲಿ ಲೈನ್ ದುರಸ್ತಿ ಮಾಡುವ ವೇಳೆ ಮೆಸ್ಕಾಂ ನೌಕರರ ವಿದ್ಯುತ್ ತಗುಲಿ ಸಾವನಪ್ಪಿದ್ದಾನೆ. ಇತ್ತ ದಾವಣಗೆರೆಯಲ್ಲಿ ಕಾರುಗಳ ನಡುವೆ ಡಿಕ್ಕಿಯಾಗಿ ವೃದ್ಧೆ ಮೃತಪಟ್ಟಿದ್ದಾರೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ನೀರಿನ ಹೊಂಡಕ್ಕೆ ಕಾರು…
ದಕ್ಷಿಣಕನ್ನಡ : ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿದ್ದು ಅದರಲ್ಲೂ ಇಂದು ದಕ್ಷಿಣ ಕನ್ನಡದಲ್ಲಿ ಸುರಿದ ಮಹಾಮಳೆಗೆ ಒಂದೇ ದಿನ ಐವರು ಬಲಿಯಾಗಿದ್ದಾರೆ. ಇದೀಗ ಐವರ ಕುಟುಂಬಸ್ಥರಿಗೂ ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು 6 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹೌದು ಇಂದು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಗೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ಭೂಕುಸಿತದಿಂದ ಅಜ್ಜಿ ಹಾಗೂ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದಾರೆ. ಅಲ್ಲದೇ ನೇರಳಕಟ್ಟೆ ಬಳಿ ಭಾರಿ ಮಳೆಯಿಂದಾಗಿ ಪ್ರವಾಹ ಸೃಷ್ಟಿಯಾಗಿತ್ತು. ಈ ವೇಳೆ ಮನೆಯ ಹಿಂದಿನ ಕಟ್ಟಡ ಕುಸಿದು ಆರು ವರ್ಷದ ಫಾತಿಮಾ ನಯೀಮ್ ಸಾವನಪ್ಪಿದ್ದಾಳೆ. ಇನ್ನು ಓಡಿನ್ಮಾಡದಲ್ಲಿ ಟಿಸಿ ದುರಸ್ತಿ ಮಾಡುವ ವೇಳೆ ಮೆಸ್ಕಾಂ ನೌಕರ ವಿಜೇಶ್ ಜೈನ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ. ಸಮುದ್ರಕ್ಕೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಸೂಚನೆ ನೀಡಿದ್ದರು ಇಂದು ಇಬ್ಬರು ಮೀನುಗಾರರು ಸಮುದ್ರಕ್ಕೆ ಮೀನು ಹಿಡಿಯಲು ತೆರಳಿದಾಗ…
ಬೆಂಗಳೂರು : ರಾಜ್ಯದಲ್ಲಿ ಕೊರೊನ ರೂಪಾಂತರೀಯ ಎರಡನೇ ಹೊಸ ತಳಿ ಎಂಟ್ರಿ ಆಗಿದ್ದು, ಇಂದು ರಾಜ್ಯದಲ್ಲಿ 114 ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಈ ಕುರಿತು ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದ್ದು, ಇಂದು ರಾಜ್ಯದಲ್ಲಿ 114 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಕರೋನ ಸಕ್ರಿಯ ಪ್ರಕರಣಗಳ ಸಂಖ್ಯೆ 234 ಇವೆ. ಇದುವರೆಗೂ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 367 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ಶಾರದಾ ವಿದ್ಯಾನಿಕೇತನ ಶಾಲೆಗೆ ಪುಡಿ ರೌಡಿಗಳನ್ನು ಬಿಟ್ಟು ದಾಂಧಲೆ ನಡೆಸಿರುವ ಆರೋಪದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಮುಖಂಡ ಧನಂಜಯ ಸೇರಿದಂತೆ ಹಲವರ ವಿರುದ್ಧ FIR ದಾಖಲಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ದಾಸರಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಧನಂಜಯ್ ಸ್ಪರ್ಧಿಸಿದ್ದರು. ಶಾರದಾ ವಿದ್ಯಾನಿಕೇತನ ಶಾಲೆಯ ಕಿಟಕಿ, ಬಾಗಿಲು, ಸಿಸಿ ಕ್ಯಾಮೆರಾ, ಧ್ವಂಸಗೊಳಿಸಿದ್ದು ನಿನ್ನೆ ಸಂಜೆ ಪುಡಿ ರೌಡೆಗಳನ್ನು ಬಿಟ್ಟು ದಾಂದಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಧನಂಜಯ್ ಮಾಲೀಕತ್ವದ ಸ್ಕೂಲ್ ಶಾರದಾ ಶಾಲೆಯ ಪಕ್ಕದಲ್ಲಿದೆ. ಆದರೆ ಎನ್ ಪಿ ಎಸ್ ಶಾಲೆ ನಡೆಸಲು ಇತ್ತೀಚಿಗೆ ಕಾನೂನಿನ ತೊಡಕ್ಕಾಗಿತ್ತು. ಶಾರದಾ ಶಾಲೆಯ ಜಾಗ ಸರ್ಕಾರದಿಂದ ಲೀಸ್ ಗೆ ಪಡೆಯಲಾಗಿತ್ತು. ಜಾಗವನ್ನು ಶಾರದಾ ವಿದ್ಯಾನಿಕೇತನ ಸೊಸೈಟಿಗೆ ಸರ್ಕಾರ ಲೀಸಿಗೆ ನೀಡಿತ್ತು.ಶಾರದಾ ವಿದ್ಯಾನಿಕೇತನ ಸೊಸೈಟಿಗೆ ಮುಖಂಡ ಧನಂಜಯ್ ಅಧ್ಯಕ್ಷರಾಗಿದ್ದರು. 2023ರ ವರೆಗೂ ಶಾಲೆಯ ಲೀಸ್ ಅವಧಿ ಇದೆ. ಹಾಗಿದ್ದರೂ ಶಾಲೆಯನ್ನು ಅತಿಕ್ರಮಣ ಮಾಡಲು ಧನಂಜಯ್ ಸಂಚು ಮಾಡಿದ್ದಾರೆ. ಕೋರ್ಟ್…














