Subscribe to Updates
Get the latest creative news from FooBar about art, design and business.
Author: ಸುರೇಶ್
"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು
ಬಳ್ಳಾರಿ : ಯಾವುದೇ ಕ್ಷಣದಲ್ಲಿ ಆದರೂ ಸಚಿವ ಸಂಪುಟ ವಿಸ್ತರಣೆಯಾಗಲಿದೆ. 10 ದಿನಗಳಲ್ಲಿ ಬಿ.ನಾಗೇಂದ್ರ ಮತ್ತೆ ಸಚಿವರಾಗಲಿದ್ದಾರೆ ಎಂಬುದಾಗಿ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯಾವುದೇ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆ ಆಗಬಹುದು. ನಮ್ಮ ಕೈಯಲ್ಲಿ ನಿರ್ಧಾರ ಇಲ್ಲ. ಹೈಕಮಾಂಡ್ ನೋಡಿಕೊಳ್ಳಲಿದೆ ಎಂದರು. ಬಿ.ನಾಗೇಂದ್ರ ಮತ್ತೆ ಸಚಿವರಾಗುತ್ತಾರೆ. 10 ದಿನಗಳಲ್ಲಿ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಗಲಿದೆ. ಸಿದ್ಧರಾಮಯ್ಯನವರೇ ಐದು ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರು. ಬಳ್ಳಾರಿ ಜಿಲ್ಲೆಯಲ್ಲಿ ಯಾವ ಕೆಲಸಗಳು ಪೆಂಡಿಂಗ್ ಉಳಿದಿಲ್ಲ. ಎಲ್ಲಾ ಕೆಲಸ ಕಾರ್ಯಗಳು ನಡೆಯುತ್ತಿವೆ. ನಾಗೇಂದ್ರ ಮೂಲಕ ಸಮಸ್ಯೆಗಳ ಬಗ್ಗೆ ನನಗೆ ಮಾಹಿತಿ ಬರ್ತಿದೆ. ಸಾಹಿತ್ಯ ಸಮ್ಮೇಳನ ನಡೆಸಲು ನಾಲ್ಕು ಸ್ಥಳ ಗುರುತಿಸಲಾಗಿದೆ. ಬಳ್ಳಾರಿ ಶಾಸಕರೊಂದಿಗೆ ಸೇರಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಬಳ್ಳಾರಿಯಲ್ಲಿ ಅದ್ಧೂರಿಯಾಗಿ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದರು.
ಹುಬ್ಬಳ್ಳಿ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಆರಂಭಿಸಲಾಗಿದ್ದು, ಇದೀಗ ಹುಬ್ಬಳ್ಳಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನಿರ್ಲಕ್ಷ್ಯವಹಿಸಿದ ಹಿನ್ನೆಲೆ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಹುಬ್ಬಳ್ಳಿ ಶಹರದಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ಕಾರ್ಯದಲ್ಲಿ ನಿರ್ಲಕ್ಷ್ಯವಹಿಸಿ, ಕರ್ತವ್ಯಲೋಪ ಮಾಡಿರುವ ಮಹಾನಗರಪಾಲಿಕೆಯ ಇಬ್ಬರು ಸಿಬ್ಬಂದಿಗಳನ್ನು ಅಮಾನತು ಮಾಡಿ, ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಆದೇಶಿದ್ದಾರೆ. ಸಮೀಕ್ಷೆಗೆ ನಿಯೋಜನೆಗೊಂಡಿರುವ ಎಲ್ಲ ಸಮೀಕ್ಷೆದಾರಿಗೆ ಅಗತ್ಯ ತರಬೇತಿ ನೀಡಿ, ಅಗತ್ಯ ಮಾರ್ಗದರ್ಶನ ಮಾಡಲಾಗಿದೆ. ಪ್ರತಿಯೊಬ್ಬರು ನೀಡಿರುವ ಸಮೀಕ್ಷಾ ಗುರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ತಾಂತ್ರಿಕ ಸಮಸ್ಯೆಗಳು ಉಂಟಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ಸಹಾಯವಾಣಿಗೆ ಸಂಪರ್ಕಿಸಿ, ಪರಿಹರಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಗೆ ಗುರಿ ನಿಗದಿ ಮಾಡಲಾಗಿದೆ. ಕರ್ತವ್ಯಲೋಪ, ನಿರ್ಲಕ್ಷ್ಯ ಮತ್ತು ಸಮೀಕ್ಷೆಯಲ್ಲಿ ಉದಾಸೀನತೆ ತೋರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸಲಾಗುವುದು. ಕಾಲಮಿತಿಯಲ್ಲಿ…
ಯಾವುದೇ ಒಂದು ಜಾತಿ ಧರ್ಮಗಳಿಗೆ ಇದು ಸೀಮಿತ ಅಲ್ಲ, 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ : ಸಿಎಂ
ಬೆಂಗಳೂರು : ರಾಜ್ಯದಲ್ಲಿ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು ಆರಂಭದಲ್ಲಿ ಸರ್ವರ್ ಸಮಸ್ಯೆ ಹಾಗೂ ಕೆಲವು ತಾಂತ್ರಿಕ ದೋಷಗಳಿಂದ ತುಂಬ ಸಮಸ್ಯೆ ಆಗಿತ್ತು. ಇದೀಗ ಸಮೀಕ್ಷೆ ವೇಗ ಪಡೆದುಕೊಂಡಿದ್ದು, ಈ ವಿಚಾರವಾಗಿ ವಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು ಇದು ಯಾವುದೇ ಜಾತಿ ಧರ್ಮಗಳಿಗೆ ಸೀಮಿತ ಅಲ್ಲ ರಾಜ್ಯದ 7 ಕೋಟಿ ಜನರ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿದೆ ಎಂದು ತಿಳಿಸಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಜಾತಿ ಗಣತಿಯನ್ನು ವಿರೋಧಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಸಮೀಕ್ಷೆ ಆಗಿದ್ದು, ಯಾವುದೇ ಒಂದು ಜಾತಿ ಧರ್ಮಗಳಿಗೆ ಇದು ಸೀಮಿತ ಅಲ್ಲ, 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದು ಯಾರ ವಿರುದ್ಧವಾದ ಸಮೀಕ್ಷೆ ಅಲ್ಲವೇ ಅಲ್ಲ ಇದು ಎಲ್ಲರ ಪರವಾಗಿರುವ ಸಮೀಕ್ಷೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘ ಮತ್ತೆ ಇದೀಗ ಸಿಡಿದೆದ್ದಿದೆ. ಕಮಿಷನ್ ದುಪ್ಪಟ್ಟು ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಗುತ್ತಿಗೆದಾರರು ಅಸಮಾಧಾನ ಹೊರ ಹಾಕುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಗುತ್ತಿಗೆದಾರರ ಸಂಘ ಇದೀಗ ಆಕ್ರೋಶ ಹೊರಹಾಕಿದೆ. ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ ಸಮಸ್ಯೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾಮಗಾರಿ ಕೈಗೊಳ್ಳುವ 8 ಇಲಾಖೆಗಳಿಂದ ಹಣ ಬಂದಿಲ್ಲ. ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಬಾಕಿ ಹಣ ಬಿಡುಗಡೆ ಆಗಿಲ್ಲ. ಗುತ್ತಿಗೆದಾರರ ಬಾಕಿ ಹಣ ಬಿಡುಗಡೆಗೆ ಇದೀಗ ತೀವ್ರ ಆಗ್ರಹ ಕೇಳಿ ಬರುತ್ತಿದೆ. ಒಟ್ಟು ರಾಜ್ಯ ಸರ್ಕಾರ 33,000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಹಿಂದಿನ ಸರ್ಕಾರಕ್ಕಿಂತ ಈಗಿನ ಕಮಿಷನ್ ದುಪ್ಪಟ್ಟು ಆಗಿದೆ ಎರಡು ವರ್ಷಗಳಿಂದ ಸಮಸ್ಯೆ ಇದ್ದು ಬಾಕಿ ಹಣ ಬಿಡುಗಡೆ ಮಾಡಿ ಎಂದು ಅಗ್ರಹಿಸಿದ್ದಾರೆ. ಸರ್ಕಾರದಿಂದ ನಮಗೆ ಯಾವ ಪ್ರಯೋಜನ ಆಗಿಲ್ಲ ಅಂತ ಸೇವ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ. ಇದೆ ವಿಚಾರವಾಗಿ ಬಿಜೆಪಿ ಶಾಸಕ ಅಶ್ವತ್ಥನಾರಾಯಣ್…
ಬೆಂಗಳೂರು : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಮಹಿಳೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಈ ಒಂದು ಘಟನೆ ಬೆಂಗಳೂರು ನಗರ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ನಡೆದಿದೆ. ಗಂಡನ ಮನೆಯವರು ಮಳೆಯ ಮೇಲೆ ಮೃಗೀಯ ವರ್ತನೆ ತೋರಿದ್ದಾರೆ. ಬೆಂಗಳೂರಿನ ಆನೇಕಲ್ ಪಟ್ಟಣದ ನಾರಾಯಣಪುರದಲ್ಲಿ ಪತಿ ಅರುಣ್, ಅತ್ತೆ ಪ್ರಭಾವತಿ, ಮಾವ ಚೌಡಪ್ಪ ಮೂವರು ಸೇರಿಕೊಂಡು ಮಹಿಳೆಯ ಮೇಲೆ ಹಲ್ಲೆ ಮಾಡಿದ್ದಾರೆ. ಅರುಣ್ ಪತ್ನಿ ಶ್ರೀಲಜಾ ಮೇಲೆ ಗಜೇಂದ್ರ, ನರಸಿಂಹಮೂರ್ತಿ, ಲಕ್ಷ್ಮಿ, ಚೌಡಪ್ಪ ಅವರು ಹಲ್ಲೆ ಮಾಡಿ ಕಾಲಿನಿಂದ ಒದ್ದು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. 5 ವರ್ಷಗಳ ಹಿಂದೆ ಅರುಣ್ ಜೊತೆ ಶ್ರೀಲಜಾ ಮದುವೆಯಾಗಿದ್ದರು. ದಂಪತಿಗಳಿಗೆ ನಾಲ್ಕು ವರ್ಷದ ಹೆಣ್ಣು ಮಗು ಕೂಡ ಇದೆ. ಮದುವೆಯಾದ ಮೇಲು ಕೂಡ ಪತಿ ಹಾಗೂ ಪತಿಯ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಅಲ್ಲದೆ ಶ್ರೀಲಜಾ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ. ಈ ವೇಳೆ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯತಿ ಕೂಡ…
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆ ನೀಡಿದ ಹಿನ್ನೆಲೆಯಲ್ಲಿ. ಇದೀಗ ತೀರ್ಪು ಪ್ರಶ್ನಿಸಿ ಹೈಕೋರ್ಟಿಗೆ ಪ್ರಜ್ವಲ್ ರೇವಣ್ಣ ಮೇಲ್ಮನವಿ ಸಲ್ಲಿಸಿದ್ದಾರೆ. ಮೇಲ್ಮನವಿ ಅರ್ಜಿಯಲ್ಲಿ ರಾಜಕೀಯ ದುರುದೇಶದಿಂದ ಮಹಿಳೆಯನ್ನು ಅಸ್ತ್ರವಾಗಿಸಿ ಎಫ್ಐಆರ್ ದಾಖಲಿಸಿದ್ದಾರೆ. 2023ರಲ್ಲಿ ಫಾರ್ಮ್ ಹೌಸ್ ಗೃಹಪ್ರವೇಶದಲ್ಲಿ ಮಹಿಳೆ ಪಾಲ್ಗೊಂಡಿದ್ದಾರೆ. ಅತ್ಯಾಚಾರವಾಗಿದ್ದರೆ ಮಹಿಳೆ ಗೃಹಪ್ರವೇಶಕ್ಕೆ ಹೇಗೆ ಬರುತ್ತಿದ್ದರು? ಈ ಮಹಿಳೆಯಿಂದ ಮೂರು ವರ್ಷದ ಬಳಿಕ ಪೊಲೀಸರು ದೂರು ಪಡೆದಿದ್ದಾರೆ ಮಹಿಳೆ ಗುರುತಿಸಿಲ್ಲ. ಬ್ಯಾಟರಿ ಮತ್ತು ಪೇಂಟ್ ಇದ್ದ ರೂಮಿನಲ್ಲಿ ಉಡುಪು ಸಿಕ್ಕಿದಂದು ಹೇಳಿದ್ದಾರೆ. ಲಾಕ್ ಆಗಿದ್ದರೂಮಿನಲ್ಲಿ ವೀರ್ಯಾಣುವಿದ್ದ ಬಟ್ಟೆ ಸಿಗಲು ಸಾಧ್ಯವೇ? ಕೂದಲನ್ನು ಸುತ್ತಿ ಬ್ಯಾಗಿನಲ್ಲಿ ಇಟ್ಟ ರಹಸ್ಯ ತಿಳಿಯುತ್ತಿಲ್ಲ. ಮಹಿಳೆಯ ಸಿಆರ್ಪಿಸಿ 164 ಹೇಳಿಕೆಯನ್ನು ಕೋರ್ಟಿಗೆ ಹಾಜರುಪಡಿಸಿಲ್ಲ. ವಿಡಿಯೋ ಇತ್ತು ಎಂದು ಆರೋಪಿಸಲಾದ ಮೊಬೈಲ್ ಅನ್ನೇ ವಶಕ್ಕೆ ಪಡೆದಿಲ್ಲ. ಎಫ್ಎಸ್ಎಲ್ ವರದಿಯಲ್ಲೂ ವಿರೋಧಭಾಸಗಳಿವೆ ಎಂದು ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಶಿಕ್ಷೆ ರದ್ದುಪಡಿಸುವಂತೆ ಹೈಕೋರ್ಟಿಗೆ ಪ್ರಜ್ವಲ್ ಮನವಿ ಮಾಡಿದ್ದಾರೆ.
ಬೆಂಗಳೂರು : ಖ್ಯಾತ ನಟ, ಹಾಸ್ಯ ರಂಗಕರ್ಮಿ ಯಶವಂತ ಸರ್ ದೇಶಪಾಂಡೆ (55) ಹೃದಯಾಘಾತದಿಂದ ನಿಧನನಾಗಿದ್ದಾರೆ. ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯಶವಂತ್ ಸರ್ ದೇಶಪಾಂಡೆ, ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಖ್ಯಾತ ನಟ ಹಾಗೂ ರಂಗಭೂಮಿ ನಿರ್ದೇಶಕರಾಗಿ ಇವರು ಸೇವೆ ಸಲ್ಲಿಸಿದ್ದಾರೆ.
ಬೆಂಗಳೂರು : ಬೆಂಗಳೂರಲ್ಲಿ ಅಕ್ರಮವಾಗಿ ವಾಸವಿದ್ದ ವಿದೇಶಿ ಪ್ರಜೆಗಳ ವಿರುದ್ಧ ಇದೀಗ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಶ್ರೀಲಂಕಾದ ಮೂವರು ಪ್ರಜೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ದೇವನಹಳ್ಳಿ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ನಲ್ಲಿ ಶ್ರೀಲಂಕಾದ ಮೂವರು ಪ್ರಜೆಗಳು ವಾಸವಿದ್ದರು. ಇದೀಗ ಮೂವರು ಶ್ರೀಲಂಕಾ ಪ್ರಜೆಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಶ್ರೀಲಂಕಾದ ಜಾಫ್ನ ದಿಂದ ಬೋಟ್ ಮೂಲಕ ತಮಿಳುನಾಡಿಗೆ ಮೂವರು ಶ್ರೀಲಂಕಾ ಪ್ರಜೆಗಳು ಎಂಟ್ರಿ ಆಗಿದ್ದಾರೆ. ಅಲ್ಲಿಂದ ನೇರವಾಗಿ ರಾಮೇಶ್ವರಂ ಗೆ ಹೋಗಿದ್ದ ಮೂವರು ಶ್ರೀಲಂಕಾ ಪ್ರಜೆಗಳು, ಬಳಿಕ ಸ್ಥಳೀಯ ವ್ಯಕ್ತಿಯ ಸಹಾಯ ಪಡೆದು ಬೆಂಗಳೂರಿಗೆ ಬಂದಿದ್ದರು. ಬೆಂಗಳೂರಿನಲ್ಲಿ ಅಕ್ರಮವಾಗಿ ಮೂವರು ವಾಸವಿದ್ದರು. ಇದೀಗ ಶ್ರೀಲಂಕಾದ ಮೂವರು ಪ್ರಜೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಕುರಿತು ನಿನ್ನೆ ತಾನೆ ಸಿಎಂ ಸಿದ್ದರಾಮಯ್ಯ ಬೆಂಗಳೂರು ಸಿಟಿ ರೌಂಡ್ ಮಾಡಿ ಅಧಿಕಾರಿಗಳಿಗೆ ಒಂದು ತಿಂಗಳಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಕಡಕ್ ಸೂಚನೆ ನೀಡಿದ್ದಾರೆ.ಇದರ ಬೆನ್ನಲ್ಲೆ, ರಸ್ತೆ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ಧನುಶ್ರೀ (22) ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ವಿದ್ಯಾರ್ಥಿನಿ ಧನುಶ್ರೀ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಟಿಪ್ಪರ್ ಹರಿದಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಸಂಚಾರಿ ಠಾಣೆ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಚಿಕ್ಕಮಗಳೂರು : ರಾಜ್ಯ ಸರಕಾರದಿಂದ ಶೈಕ್ಷಣಿಕ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಗೆ ಗೈರಾಗಿದ್ದ ಶಿಕ್ಷಕರಿಗೆ ಕಾರಣ ಕೇಳಿ ಇದೀಗ ನೋಟಿಸ್ ಜಾರಿಗೊಳಿಸಲಾಗಿದೆ. ಶಿಕ್ಷಕರಿಗೆ ಕಾರಣ ಕೇಳಿ ಚಿಕ್ಕಮಗಳೂರು ಡಿಡಿಪಿಐ ನೋಟಿಸ್ ಜಾರಿ ಮಾಡಿದ್ದಾರೆ. ಸಮೀಕ್ಷೆ ಆರಂಭವಾದ ದಿನದಿಂದ ಶಿಕ್ಷಕರು ಗೈರಾಗಿದ್ದಾರೆ. ಗೈರಾದ 18 ಶಿಕ್ಷಕರಿಗೆ ಡಿಡಿಪಿಐ ತಿಮ್ಮರಾಜು ನೋಟಿಸ್ ನೀಡಿದ್ದಾರೆ. ಗೈರು ಆಗಿರುವುದಕ್ಕೆ ಕಾರಣ ಕೇಳಿ ಕ್ರಮದ ಎಚ್ಚರಿಕೆ ನಡೆಯನ್ನು ನೋಟಿಸ್ ನೀಡಿದ್ದಾರೆ. ಡಿಡಿಪಿಐ ಅಥವಾ ತಹಶೀಲ್ದಾರ್ ಗೆ ದಾಖಲೆ ನೀಡುವಂತೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 2882 ಶಿಕ್ಷಕರು ಸಮೀಕ್ಷೆಗೆ ನೇಮಕವಾಗಿದ್ದಾರೆ. ನೇಮಕವಾದ 2882 ಶಿಕ್ಷಕರ ಪೈಕಿ 18 ಶಿಕ್ಷಕರು ಮೊದಲ ದಿನದಿಂದಲೇ ಸಮೀಕ್ಷೆಗೆ ಗೈರಾಗಿದ್ದಾರೆ. ಕಳಸ ಹಾಗೂ ಶೃಂಗೇರಿ ತಾಲೂಕಿನಲ್ಲಿ ಅತಿ ಕಡಿಮೆ ಸಮೀಕ್ಷೆ ನಡೆದಿದೆ. ಹಾಗಾಗಿ ಸಮೀಕ್ಷೆಗೆ ಗೈರಾಗಿದ್ದಕ್ಕೆ ಕಾರಣ ಕೇಳಿ ಎಚ್ಚರಿಕೆ ಕ್ರಮ ನೀಡಿ ನೋಟಿಸ್ ನೀಡಿದ್ದಾರೆ.








