Author: kannadanewsnow05

ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದಂತಹ ಫಲಾನುಭವಿಗಳಿಗೆ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನಿಂಗ್ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಬಡವರು ಈ ಸೇವೆಗೆ ದುಬಾರಿ ವೆಚ್ಚ ಭರಿಸಬೇಕಿತ್ತು. ಹೀಗಾಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ ಸಿಟಿ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನು ಉಚಿತವಾಗಿಸಲು ನಿರ್ಣಯಿಸಲಾಗಿದೆ. ರೋಗಿಗಳು ಅನಗತ್ಯವಾಗಿ ಸ್ಕ್ಯಾನ್​ಗೆ ಒಳಪಡುವುದನ್ನು ತಪ್ಪಿಸಲು, ಯೋಜನೆ ನಿಜವಾದ ಫಲಾನುಭವಿಯನ್ನು ತಲುಪುವುದನ್ನು ಖಚಿತಪಡಿಸಲು ಪಿಹೆಚ್​ಹೆಚ್ ಫಲಾನುಭವಿಗಳಿಗೆ ಉಚಿತವಾಗಿ ಹಾಗೂ ಇತರರಿಗೆ ಶೇ.70 ವಿಧಿಸಲು ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ ಫಲಾನುಭವಿಗಳು ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನ್ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ.

Read More

ಬೆಂಗಳೂರು : 2025 ಹೊಸ ವರ್ಷಕ್ಕೆ ಹೊಸ ಕಾರು ಹಾಗೂ ಬೈಕ್ ಖರೀದಿಸುವವರಿಗೆ ಇದೀಗ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಲು ಮುಂದಾಗಿದೆ. ಹೌದು ಹೊಸ ಕಾರು ಹಾಗೂ ಬೈಕ್ ಕೊಂಡುಕೊಳ್ಳುವವರಿಗೆ ಖರೀದಿಯ ನೋಂದಣಿ ಶುಲ್ಕ ತಲಾ 1000 ರೂ. ಹಾಗೂ 500 ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ಈಗಾಗಲೇ ಬೆಳಗಾವಿಯ ಅಧಿವೇಶನದಲ್ಲಿ ರಿಜಿಸ್ಟ್ರೇಷನ್ ಶುಲ್ಕ ಹೆಚ್ಚಳದ ಮಸೂದೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಹೌದು ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ, ಹೊಸ ಬೈಕ್ ಹಾಗೂ ಕಾರು ಖರೀದಿಸುವ ನೊಂದಣಿ ಶುಲ್ಕ ಹೆಚ್ಚಳ ಮಾಡುವ ಕುರಿತು ಮಸೂದೆ ಮಂಡನೆ ಮಾಡಲಾಗಿತ್ತು. ಹಾಗಾಗಿ ಫೆಬ್ರವರಿಯಿಂದ ಪರಿಷ್ಕೃತ ದರ ಜಾರಿ ಆಗಲಿದೆ.ದರ ಹೆಚ್ಚಳದಿಂದ ಬಂದ ಹಣವನ್ನು ಯೆಲ್ಲೋ ಬೋರ್ಡ್ ಚಾಲಕರ ಅಭಿವೃದ್ಧಿಗೆ ಬಳಕೆ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ದರ ಹೆಚ್ಚಳ ಸಂಬಂದ ಈಗಾಗಲೇ ಗೆಜೆಟ್ ನೋಟಿಫಿಕೇಷನ್ ಆಗಿದ್ದು, ಸದ್ಯ ವಾಹನ್ – 4 ನಲ್ಲಿ ಅಪ್​ಡೇಟ್ ಮಾಡಲಾಗುತ್ತಿದೆ‌.…

Read More

ಬೀದರ್ : ಬೀದರ್ ಹಾಡು ಹಗಲೇ ಶೂಟೌಟ್ ಮಾಡಿ 83 ಲಕ್ಷ ದರೋಡೆ ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆಯಲ್ಲಿ ಇಬ್ಬರೂ ಸಿಬ್ಬಂದಿಗಳು ಗಾಯಗೊಂಡಿದ್ದು ಇದರಲ್ಲಿ ನಿನ್ನೆ ಗಿರಿ ವೆಂಕಟೇಶ್ ಎನ್ನುವ ಸಿಬ್ಬಂದಿ ನಿನ್ನೆ ಸಾವನಪ್ಪಿದ್ದಾನೆ. ಇನ್ನೋರ್ವ ಗಾಯಗೊಂಡಂತಹ ಸಿಬ್ಬಂದಿ ಶಿವಕುಮಾರ್ ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ನಿನ್ನೆ ರಾತ್ರಿ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಶಿವಕುಮಾರ್ ಆರೋಗ್ಯ ವಿಚಾರಿಸಿದರು. ಹೌದು ಬೀದರ್ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಹೈದ್ರಾಬಾದ್ ನ ಕೇರ್ ಆಸ್ಪತ್ರೆಗೆ ನಿನ್ನೆ ರಾತ್ರಿ 11 ಗಂಟೆ ಸುಮಾರಿನಲ್ಲಿ ಭೇಟಿ ನೀಡಿ, ಬೀದರ್ ನಲ್ಲಿ ನಿನ್ನೆ ಎ.ಟಿ.ಎಂ. ದರೋಡೆ ವೇಳೆ ಗುಂಡೇಟಿನಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿ ಶಿವಕುಮಾರ್ ಆರೋಗ್ಯ ವಿಚಾರಿಸಿದರು. ಶಿವಕುಮಾರ್ ಕುಟುಂಬದವರಿಗೆ ಧೈರ್ಯ ಹೇಳಿದ ಅವರು, ಶಿವಕುಮಾರ್ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ನಂತರ, ವೈದ್ಯರೊಂದಿಗೆ ಸಮಾಲೋಚಿಸಿದ ಸಚಿವರು ಎಲ್ಲ ಅಗತ್ಯ ಚಿಕಿತ್ಸೆ ನೀಡುವಂತೆ ಮನವಿ ಮಾಡಿದರು. ಮೃತ ಗಿರಿ ಮನೆಗೆ ಖಂಡ್ರೆ ಭೇಟಿ…

Read More

ಗದಗ : ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಶೀರನಹಳ್ಳಿ, ಗಂಗಾಪೂರ ಹಾಗೂ ಕೊರ್ಲಹಳ್ಳಿ ಗ್ರಾಮಗಳ ಮುಂದೆ ಹರಿಯುತ್ತಿರುವ ತುಂಗಭದ್ರಾ ನದಿ ನೀರು ಎರಡು-ಮೂರು ದಿನಗಳಿಂದ ಗಾಢವಾದ ಹಸಿರು ಬಣ್ಣಕ್ಕೆ ತಿರುಗಿದ್ದು, ನದಿ ದಂಡೆಯ ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿದೆ. ಹೌದು ಮುಂಡರಗಿ ತಾಲೂಕು ಕೊರ್ಲಳ್ಳಿ ಬಳಿ ನದಿಯ ನೀರು ಸಂಪೂರ್ಣ ಹಸಿರಾಗಿದೆ. ಹಾಗಾಗಿ ಗದಗ ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ. ವಿಪರ್ಯಾಸ ಅಂದರೆ, ಕಳೆದ ಒಂದು ವಾರದಿಂದ ನದಿ ನೀರು ಈ ರೀತಿಯ ಬಣ್ಣಕ್ಕೆ ತಿರುಗಿದ್ದು, ಮೊದ ಮೊದಲು, ನದಿ ನೀರು ಪಾಚಿಗಟ್ಟಿರಬಹುದು ಎಂದು ಸುಮ್ಮನಾಗಿದ್ದರು. ಆದರೆ ದಿನಗಳೆದರೂ, ನೀರು ತನ್ನ ಮೊದಲಿನ ಬಣ್ಣಕ್ಕೆ ಹಿಂದಿರುಗಿಲ್ಲ. ನದಿ ದಂಡೆಯ ಮೇಲೆ ಜಮೀನು ಹೊಂದಿರುವ ಸಾಕಷ್ಟು ರೈತರು ತುಂಗಭದ್ರಾ ನದಿ ನೀರನ್ನು ಆಶ್ರಯಿಸಿ ತಮ್ಮ ಜಮೀನಿನಲ್ಲಿ ಭತ್ತ ಬೆಳೆಯುತ್ತಿದ್ದಾರೆ. ಉತ್ತಮ ಇಳುವರಿ ಪಡೆದುಕೊಳ್ಳಲು ರೈತರು ಪೈರಿಗೆ ಸಾಕಷ್ಟು ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ, ಕಳೆ ನಾಶಕ ಮೊದಲಾದವುಗಳನ್ನು ಬಳಸುತ್ತಾರೆ. ಹೀಗೆ ರಾಸಾಯನಿಕದಿಂದ ಕಲುಷಿತಗೊಂಡ ನೀರನ್ನು…

Read More

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಅಪಾರ್ಟ್ಮೆಂಟ್ ಒಂದಕ್ಕೆ ಕರೆಸಿಕೊಂಡಿದ್ದಾರೆ. ಬಳಿಕ ಅಲ್ಲಿ ರೌಡಿಶೀಟರ್ ಮತ್ತು ಅವರ ನಡುವೆ ಗಲಾಟೆ ನಡೆದಿದ್ದು ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿದಾಗ ದುಷ್ಕರ್ಮಿಗಳು ರೌಡಿಶೀಟರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು ಅಲ್ಲದೆ ಶವವನ್ನು ತಮಿಳುನಾಡಿಗೆ ಸಾಗಾಟ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಹಣಕಾಸು ವಿಚಾರ ಸಂಬಂಧ ರೌಡಿ ಶೀಟರ್‌ನನ್ನು ಅಪಾಟ್ ೯ಮೆಂಟ್‌ಗೆ ಕರೆಸಿಕೊಂಡು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಬಾಗಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊತ್ತನೂರು ನಿವಾಸಿ ಗುಣ(30) ಕೊಲೆ ಯಾದ ರೌಡಿ ಎಂದು ತಿಳಿದುಬಂದಿದೆ. ಜ.10ರಂದು ಕೊತ್ತನೂರಿನ ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್‌ಮೆಂಟ್ ನಿವಾಸಿ ಬ್ರಿಜೇಶ್ ಎಂಬಾತನ ರೌಡಿ ಗುಣನನ್ನು ಅಪಾರ್ಟ್‌ಮೆಂಟ್ ಗೆ ಕರೆಸಿಕೊಂಡು ಬಳಿಕ ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಕೊಲೆಯಾದ ಗುಣನ ಮೃತದೇಹ ತಮಿಳುನಾಡಿನಲ್ಲಿ ಪತ್ತೆಯಾಗಿದೆ. ಈ ಸಂಬಂಧ ಮೃತ ಗುಣನ ಪತ್ನಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಬ್ರಿಜೇಶ್…

Read More

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದ ಆರುವಿನ ನಕ್ಷಲರನ್ನು ಎನ್ಐಎ ಕೋರ್ಟ್ ಜನವರಿ 23ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದ್ದು ಈ ಹಿನ್ನೆಲೆಯಲ್ಲಿ ಇಂದಿನಿಂದ ನಕ್ಸಲರ ವಿಚಾರಣೆ ಆರಂಭವಾಗಲಿದೆ. ಹೌದು 6 ನಕ್ಸಲರನ್ನು ಪೊಲೀಸರ ವಶಕ್ಕೆ ನೀಡಿದ ಎನ್ಐಎ ಕೋರ್ಟ್ ಜನವರಿ 23ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿದೆ. ಹಾಗಾಗಿ ಇಂದು ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ನಕ್ಸಲರ ವಿಚಾರಣೆ ನಡೆಯಲಿದೆ. ಚಿಕ್ಕಮಂಗಳೂರು ಎಸ್ಪಿ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಶರಣಾಗತಿಯಾಗಿರುವ ಮುಂಡಗರು ಲತಾ, ಸುಂದರಿ, ವನಜಾಕ್ಷಿ, ಜಯಣ್ಣ, ಜೀಶ, ಹಾಗೂ ವಸಂತ್ ವಿಚಾರಣೆ ನಡೆಯಲಿದೆ. ಶಸ್ತ್ರಾಸ್ತ್ರ ಸೇರಿದಂತೆ ಹಳೆಯ ಪ್ರಕರಣಗಳು ಕುರಿತು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.

Read More

ಆಂಧ್ರಪ್ರದೇಶ : ಟಿಪ್ಪರ್ ಲಾರಿಯನ್ನು ತಪ್ಪಿಸಲು ಹೋಗಿ ಟೂರಿಸ್ಟ್ ಬಸ್ ಒಂದು ಪಲ್ಟಿಯಾಗಿ ಭೀಕರವಾದ ಅಪಘಾತ ಸಂಭವಿಸಿರುವ ಘಟನೆ ಆಂಧ್ರಪ್ರದೇಶದ, ಚಿತ್ತೂರು ಬಳಿಯ ಗಂಗಾಸಾಗರಂ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ.ಈ ಒಂದು ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, 22 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಸ್ ನಲ್ಲಿದ್ದ ಪ್ರಯಾಣಿಕರೆಲ್ಲರೂ ತಿರುಪತಿಯಿಂದ ತಮಿಳುನಾಡಿನ ತಿರುಚ್ಚಿಗೆ ತೆರಳುತ್ತಿದ್ದರು. ಈ ವೇಳೆ ಟಿಪ್ಪರ್ ಲಾರಿ ತಪ್ಪಿಸಲು ಹೋಗಿ ಬಸ್ ಪಲ್ಟಿಯಾಗಿ ಈ ಒಂದು ಘೋರ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರವಾಗಿ ಗಾಯಗೊಂಡವರಿಗೆ ವೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಬೆಂಗಳೂರು : ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು ಅಶ್ಲೀಲ ಪದ ಬಳಸಿದ್ದ ವಿಡಿಯೋ ಒಂದು ಇದೀಗ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ ಸಿ.ಟಿ.ರವಿ ಅವರು 7 ಬಾರಿ ಹೆಬ್ಬಾಳ್ವ‌ರ್ ಅವರಿಗೆ ನಿಂದಿಸಿರುವುದು ಕೇಳಿಬರುತ್ತದೆ ಎಂದು ಸಿಐಡಿ ಮೂಲಗಳು ತಿಳಿಸಿವೆ. ಸಿಟಿ ರವಿ ನಿಂದನೆ ಕುರಿತು ಖಾಸಗಿ ವಾಹಿನಿಗಳಲ್ಲಿ ವಿಡಿಯೋ ದಾಖಲಾಗಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯ ವಿಲ್ಲ ಎಂದು ಸಭಾಪತಿ ಹೇಳುತ್ತಿದ್ದರು. ಆದರೆ ಸದನದಲ್ಲಿನ ಸರ್ಕಾರಿ ಟೀವಿಯಲ್ಲಿನ ವಿಡಿಯೋವೇ ಇದೀಗ ಸಿಕ್ಕಿದೆ. ಈ ವಿಡಿಯೋ ಸಿ.ಟಿ.ರವಿ ಅವರಿಗೆ ಕಂಟಕವಾಗಬಹುದಾದ ಸಾಧ್ಯತೆಯಿದೆ. ಇದೇ ಕಾರಣಕ್ಕೆ ಅವರು ಧ್ವನಿ ಪರೀಕ್ಷೆಗೊಳ ಪಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ. ಈವರೆಗೆ ತಾನು ಸಚಿವೆಯನ್ನು ಉದ್ದೇಶಿಸಿ ‘ಪ್ರಸ್ಟೇಟ್’ ಎಂದು ಹೇಳಿದ್ದೇನೆ ಯೇ ಹೊರತು…

Read More

ಬೆಂಗಳೂರು : ಬೆಳಗಾವಿಯ ಅಧಿವೇಶನ ಸಂದರ್ಭದಲ್ಲಿ ಸದನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿಯ ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್ ಎಂಎಲ್ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿಯಾಗಿದೆ. ಹೌದು ಸಿಐಡಿ ಡಿವೈಎಸ್ಪಿ ಪಿ. ಕೇಶವಮೂರ್ತಿ ಅವರಿಂದ ಯತಿಂದ್ರರಿಗೆ ನೋಟಿಸ್ ನೀಡಲಾಗಿದ್ದು, ಶಿಕ್ಷಕರ ಕ್ಷೇತ್ರದಿಂದ ಎಂಎಲ್ಸಿ ಆಗಿ ಆಯ್ಕೆಯಾಗಿದ್ದ ಶ್ರೀನಿವಾಸಗೂ ನೋಟಿಸ್ ನೀಡಲಾಗಿದೆ. ಅಲ್ಲದೇ ಕಲಬುರ್ಗಿ ಮೂಲದ ಎಂಎಲ್ಸಿ ಬೇಗಂಗು ಸಿಐಡಿನ ನೋಟಿಸ್ ನೀಡಲಾಗಿದೆ. ಯತೀಂದ್ರ ಸಿದ್ದರಾಮಯ್ಯ ಈ ಒಂದು ಪ್ರಕರಣದ ಪ್ರತ್ಯಕ್ಷ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ನೋಟಿಸ್ ಜಾರಿ ಮಾಡಲಾಗಿದೆ. ಇದುವರೆಗೂ ಎಂಎಲ್ಸಿ ಉಮಾಶ್ರೀ ರಾಮಾಜಿ ಹಾಗೂ ನಾಗರಾಜ್ ಯಾದವ್ ಅವರ ವಿಚಾರಣೆ ನಡೆಸಿ ಸೆಕ್ಷನ್ 161ರ ಅಡಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಇಂದು ಮತ್ತೆ ಮೂರು ಎಂಎಲ್‌ಸಿಗಳ ಹೇಳಿಕೆಗಳನ್ನು ಸಿಐಡಿ ಅಧಿಕಾರಿ ದಾಖಲಿಸಿಕೊಳ್ಳಲಿದ್ದು, ಇದೇ ಕೆಲಸ ಸಂಬಂಧ ಕೋರ್ಟ್ ಮೂಲಕ ಸಿ ಟಿ ರವಿಗೆ ಸಿಐಡಿ ನೋಟಿಸ್…

Read More

ಹೈದ್ರಾಬಾದ್ : ಕರ್ನಾಟಕದ ಬೀದರ್ ನಲ್ಲಿ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಬೇಕಿದ್ದ 93 ಲಕ್ಷ ರೂ ದರೋಡೆ ಮಾಡಿ ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರು ಹೈದರಾಬಾದ್ ನಲ್ಲೂ ಶೂಟೌಟ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.ಮೂಲಗಳ ಪ್ರಕಾರ ಕರ್ನಾಟಕದಿಂದ ತಪ್ಪಿಸಿಕೊಂಡು ತೆಲಂಗಾಣಕ್ಕೆ ಪರಾರಿಯಾಗಿದ್ದ ದರೋಡೆಕೋರರ ತಂಡ ತೆಲಂಗಾಣ ರಾಜಧಾನಿ ಹೈದರಾಬಾದ್ ನ ಅಫ್ಜಲ್ ಗಂಜ್ ನಲ್ಲಿರುವ ಒಂದು ಟ್ರಾವೆಲ್ ಕಚೇರಿಗೆ ನುಗ್ಗಿ ಅಲ್ಲಿನ ಮ್ಯಾನೇಜರ್ ಮೇಲೂ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಬೀದರ್ ಪೊಲೀಸರು ಅಪರಾಧಿಗಳನ್ನು ಹಿಡಿಯಲು ವಿಶೇಷ ತಂಡಗಳನ್ನು ರಚನೆ ಮಾಡಿದ್ದರು. ಬೀದರ್ ನಲ್ಲಿ ದರೋಡೆ ಮಾಡಿರುವ ದುಷ್ಕರ್ಮಿಗಳು ಇಲ್ಲಿಂದ ತಪ್ಪಿಸಿಕೊಂಡ ಬಳಿಕ ಹೈದರಾಬಾದ್‌ ತಲುಪಿದ್ದಾರೆ. ಶಸ್ತ್ರಸಜ್ಜಿತ ದರೋಡೆಕೋರರು ಹೈದರಾಬಾದ್‌ನ ಅಫ್ಜಲ್‌ಗಂಜ್‌ನಲ್ಲಿ ಪೊಲೀಸರ ಮೇಲೆಯೇ ಗುಂಡು ಹಾರಿಸಿದ್ದಾರೆ.ಜನನಿಬಿಡ ಪ್ರದೇಶದಲ್ಲೇ ಪೊಲೀಸರ ಮೇಲೆ ಗುಂಡು ಹಾರಿಸಿದ ಘಟನೆ ಈ ಪ್ರದೇಶದ ಜನರನ್ನು ಬೆಚ್ಚಿ ಬೀಳಿಸಿದೆ. ಬೀದರ್ ನಿಂದ ಓಡಿಹೋದ ಕಳ್ಳರನ್ನು ಹಿಡಿಯಲು ಪೊಲೀಸ್ ತಂಡಗಳು ಬೆನ್ನು ಬಿದ್ದಿದ್ದು ಹೈದರಾಬಾದ್‌ನ…

Read More