Author: ಸುರೇಶ್‌

"ಕನ್ನಡ ನ್ಯೂಸ್ ನೌ ಜಾಲತಾಣದ ಮುಖ್ಯ ಸಂಪಾದಕರಾದ ಸುರೇಶ್ ಅವರು ಕಳೆದ 4 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ. ಸರ್ಕಾರದ ಯೋಜನೆಗಳು, ಶಿಕ್ಷಣ ಮತ್ತು ಪ್ರಚಲಿತ ವಿದ್ಯಮಾನಗಳನ್ನು ಸಾಮಾನ್ಯ ಜನರಿಗೂ ಅರ್ಥವಾಗುವಂತೆ ವಿವರಿಸುವುದು ಇವರ ವಿಶೇಷತೆ. ಈ ಮೊದಲು ವಿವಿಧ ವೆಬ್‌ಸೈಟ್‌ಗಳಲ್ಲಿ ನಾಗರಿಕ ಸಮಸ್ಯೆಗಳ ಬಗ್ಗೆ ವರದಿಗಾರರಾಗಿ ಕೆಲಸ ಮಾಡಿರುವ ಇವರು, ಸಮಯೋಚಿತ ಹಾಗೂ ವಿಶ್ವಾಸಾರ್ಹ ಮಾಹಿತಿ ನೀಡುವ ಮೂಲಕ ಓದುಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಡಿಜಿಟಲ್ ಸಾಕ್ಷರತೆ ಇವರ ನೆಚ್ಚಿನ ವಿಷಯಗಳಲ್ಲೊಂದು

ದಕ್ಷಿಣಕನ್ನಡ : ಧರ್ಮಸ್ಥಳ ಪ್ರಕರಣದ ತನಿಖೆ ಚುರುಕುಗೊಳಿಸಿದ ಎಸ್ಐಟಿ ಧರ್ಮಸ್ಥಳ ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ನಾಲ್ವರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು ವಿಚಾರಣೆಗೆ ಹಾಜರಾಗಿದ್ದಾರೆ. ಧರ್ಮಸ್ಥಳ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಕೇಶವ ಬೆಳಾಲು, ಗೀತಾ, ಚಂದನ್ ಕಾಮತ್, ಪ್ರಭಾಕರ್ ವಿಚಾರಣೆಗೆ ಹಾಜರಾಗಿದ್ದಾರೆ. ಶವ ಹೂತು ಹಾಕಿರುವ ಕುರಿತು ಎಸ್ಐಟಿ ಅಧಿಕಾರಿಗಳು ಗ್ರಾಂ ಪಂಚಾಯಿತಿ ಮಾಜಿ ಅಧ್ಯಕ್ಷರಿಗೆ ಬುಲಾವ್ ನೀಡಿದ್ದರು. ಹೀಗಾಗಿ ಗ್ರಾಮ ಪಂಚಾಯತಿ ನಾಲ್ವರು ಅಧ್ಯಕ್ಷರು ಬೆಳ್ತಂಗಡಿ ತಾಲೂಕಿನಲ್ಲಿರುವ ಎಸ್ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.

Read More

ಬೆಂಗಳೂರು : ಬೆಂಗಳೂರಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 7.8 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿಕೊಳ್ಳಲಾಗಿದೆ. ಎಂಡಿಎಂಎ ಕ್ರಿಸ್ಟಲ್ 3.8 ಕೆಜಿ ಹಾಗೂ ಎಂಡಿಎಂಎ ಬ್ರೌನ್ ವೈಟ್ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಇನ್ನು ದಾಳಿಯ ವೇಳೆ 42 ಗ್ರಾಂ ತೂಕದ 82 ಎಕ್ಸೆಟ್ಸಿ ಮಾತ್ರೆಗಳು, 23 ಕೆಜಿ ಗಾಂಜಾ, ಹಾಗು 482 ಗ್ರಾಂ ಹೈಡ್ರೋ ಗಾಂಜಾ ವಶಕ್ಕೆ ಪಡೆದಿದ್ದಾರೆ ಇನ್ನು ನೈಜೀರಿಯಾ ಮೂಲದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಇದೆ ವೇಳೆ ಅರೆಸ್ಟ್ ಮಾಡಿದ್ದಾರೆ. ಕೆಮಿನ್ ರೋಜರ್ ಮತ್ತು ಥಾಮಸ್ ನವೀದ್ ಬಂಧಿತರು. ಸಿಸಿಬಿ ಮತ್ತು ಮಹದೇವಪುರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಈ ಇಬ್ಬರು ಆರೋಪಿಗಳು ದೆಹಲಿ ಮತ್ತು ಮುಂಬೈನಿಂದ ಡ್ರಗ್ಸ್ ತರಿಸುತ್ತಿದ್ದರು. ಹೆಬ್ಬಗೋಡಿಯ ಮನೆ ಒಂದರಲ್ಲಿ ಡ್ರಗ್ಸ್ ಡೀಲ್ ಮಾಡುತ್ತಿದ್ದರು. ವಾಟ್ಸಾಪ್ ಮೂಲಕ ಲೊಕೇಶನ್ ಡ್ರಾಪ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಟೆಕ್ಕಿಗಳು, ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದರು. ಇತ್ತೀಚಿಗಷ್ಟೇ ಆರೋಪಿಗಳಾದ ಕೆವಿನ್…

Read More

ಮಂಡ್ಯ : ಮಂಡ್ಯದಲ್ಲಿ 18 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ ಮಂಡ್ಯ ಜಿಲ್ಲೆಯ ಹಲಗೂರು ಗ್ರಾಮದಲ್ಲಿ ನಾಯಿಗಳ ದಾಳಿಯಿಂದ ಜನರು ಬೆಚ್ಚಿಬಿದ್ದಿದ್ದಾರೆ. ಕಳೆದ ಮೂರು ದಿನಗಳಲ್ಲಿ 18 ಜನರ ಮೇಲೆ ಬೀದಿನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ಹಾಗಾಗಿ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ. ಮಕ್ಕಳು, ವೃದ್ದರು ಹೊರಗೆ ಓಡಾಡುವುದಕ್ಕೆ ಹೆದರುತ್ತೀದ್ದಾರೆ. ಬೀದಿ ನಾಯಿಗಳ ಹಾವಳಿ ನಿಯಂತ್ರಿಸುದಕ್ಕೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಮಕ್ಕಳು ಸೇರಿದಂತೆ ಇದುವರೆಗೂ 18 ಜನರ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ.

Read More

ಬೆಂಗಳೂರು : ಬೆಂಗಳೂರಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದರೋಡೆ ಗ್ಯಾಂಗ್ ಒಂದನ್ನು ಪೊಲೀಸರು ಇದೀಗ ಹೆಡೆಮುರಿ ಕಟ್ಟಿದ್ದಾರೆ. ಮಾದನಾಯಕನಹಳ್ಳಿ, ಸೂರ್ಯನಗರ, ನೆಲಮಂಗಲ ದೊಡ್ಡಬಳ್ಳಾಪುರ ಮತ್ತು ಬ್ಯಾಡರಹಳ್ಳಿ ಸುತ್ತಮುತ್ತಲು ಕೇವಲ ಮೂರೇ ಮೂರು ದಿನಗಳಲ್ಲಿ 37 ದರೋಡೆ ಪ್ರಕರಣಗಳು ನಡೆದಿದ್ದವು. ಸದ್ಯ 6 ಮಂದಿ ಅಪ್ರಾಪ್ತರು ಸೇರಿದಂತೆ ಒಟ್ಟು 7 ಜನ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಾಕು ತೋರಿಸಿ ಮೊಬೈಲ್ ಹಣ ಕೊಡುವಂತೆ ಬೆದರಿಕೆ ಹಾಕುತ್ತಿದ್ದರು. ಹಣ ಕೊಟ್ಟರೆ ಸೈಲೆಂಟಾಗಿ ತಗೊಂಡು ಎಸ್ಕೇಪ್ ಆಗುತ್ತಿದ್ದರು. ಅಕಸ್ಮಾತ್ ಹಣ ಮೊಬೈಲ್ ಕೊಡಲು ನಿರಾಕರಿಸಿದರೆ ಚಾಕು ಇರಿಯುತ್ತಿದ್ದರು. ಮಾದನಾಯಕನಹಳ್ಳಿ ಠಾಣೆಯಲ್ಲಿ ಚಾಕು ಇರಿದ ಪ್ರಕರಣ ದಾಖಲಾಗಿತ್ತು. ಪೊಲೀಸರು ಅಲರ್ಟ್ ಆಗಿ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ್ದಾರೆ. ಸೆಪ್ಟೆಂಬರ್ 26ರಂದು ಆಟೋದಲ್ಲಿ ಬಂದು ಕಾರ್ ಮೇಲೆ ಅಟ್ಯಾಕ್ ಮಾಡಿದ್ದಾರೆ, ಆಟೋ ಜಾಡು ಹಿಡಿದು ಪೊಲೀಸರು ರಾಬರ್ಸ್ ರನ್ನ ಬಂಧಿಸಿದ್ದಾರೆ. ಇದೀಗ 6 ಅಪ್ರಾಪ್ತರು ಸೇರಿದಂತೆ ಒಟ್ಟು 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಆಗಾಗ ಅನೇಕ ಬೈಕ್ ಸವಾರರು ಸಾವನಪುತ್ತಿರುವ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಹಿಟ್ ಅಂಡ್ ರನ್ ಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ದ್ವಿತೀಯ ವರ್ಷದ ಬಿಕಾಂ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ದುರ್ಮರಣ ಹೊಂದಿದ್ದಾಳೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದಿದೆಯಾ? ಅಥವಾ ರಸ್ತೆಯಲ್ಲಿ ಗುಂಡಿ ಇರುವುದರಿಂದ ಅದನ್ನು ತಪ್ಪಿಸಲು ಹೋಗಿ ವಿದ್ಯಾರ್ಥಿಗೆ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ಟಿಪ್ಪರ್ ಏನಾದರೂ ವಿದ್ಯಾರ್ಥಿನಿ ಮೇಲೆ ಹರಿದಿದೆಯಾ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ ಕೆಆರ್ ಪುರಂ ಸಂಚಾರಿ ಠಾಣೆ ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬೆಂಗಳೂರು : ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆಸಿದ ಘಟನೆ ಇಡಿ ರಾಜ್ಯಾದ್ಯಂತ ಹಿಂದೂ ಕಾರ್ಯಕರ್ತರನ್ನು ಕೆರಳಿಸಿತ್ತು. ಇದೀಗ ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪೂರ್ವಯೋಜಿತ ಕೃತ್ಯವೆಂಬುದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಘಟನೆಗೆ ಸಂಬಂಧಿಸಿದಂತೆ 32 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ. ಹೌದು ಪೊಲೀಸರ ತನಿಖೆಯಲ್ಲಿ ಕಲ್ಲುತೂರಾಟ ಪೂರ್ವ ನಿಯೋಜಿತ ಎನ್ನುವ ಸ್ಫೋಟಕ ಅಂಶ ಬಯಲಾಗಿದೆ ಈ ವಿಚಾರವಾಗಿ, ತನಿಖೆಯ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದು, ಸ್ವಾಮಿ ಎಂಬುವವರ ನೇತೃತ್ವದಲ್ಲಿ ಕೂರಿಸಿದ್ದ ಗಣೇಶ ಮೂರ್ತಿ ಮೇಲೆ ಕಲ್ಲು ತೂರಲು ಪೂರ್ವಯೋಜನೆ ಮಾಡಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಆದರೆ ಟಾರ್ಗೆಟ್ ಮಾಡಿದ್ದ ಗಣೇಶ ಮೆರವಣಿಗೆಯ ಬದಲು ಬೇರೆ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿರುವುದು ಪತ್ತೆಯಾಗಿದೆ. ಮದ್ದೂರಿನ ರಾಮ್​ ರಹೀಮ್ ನಗರದಲ್ಲಿ ಗಣೇಶ ಮೆರವಣಿಗೆ ವೇಳೆ ಸೆಪ್ಟೆಂಬರ್ 7 ರಂದು ಸಂಜೆ ಮಸೀದಿಯಿಂದ ಕಲ್ಲು ತೂರಾಟ ಮಾಡಲಾಗಿತ್ತು. ಘಟನೆ ನಂತರ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ…

Read More

ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರವಾದ ಅಪಘಾತ ಸಂಭವಿಸಿದ್ದು, ಇನೋವಾ ಕಾರು ಹಾಗೂ ಟಂಟಂ ವಾಹನ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿ ಬ್ರಿಡ್ಜ್ ಬಳಿ ಒಂದು ಘಟನೆ ನಡೆದಿದೆ. ಮಹೇಶ್ ನಾಯ್ಕರ್ (27) ಹಾಗೂ ಮಹಬೂಬ್ ಶೇಖ್ (30) ಮೃತ ದುರ್ದವಿಗಳು, ಇನ್ನು ಅಪಘಾತದಲ್ಲಿ ವಿಶಾಲ ವರತಿಲ್ಲೆ, ವಿಜಯಕುಮಾರ್ ಹಾಗೂ ಗುರುಪ್ರಸಾದ್ ಎನ್ನುವವರಿಗೆ ಗಂಭೀರವಾದ ಗಾಯಗಳಾಗಿವೆ.  ಮೃತರು ಮತ್ತು ಗಾಯಾಳುಗಳು ನವನಗರದ 45 ನೇ ಸೆಕ್ಟರ್ ನಿವಾಸಿಗಳೇ ಆಗಿದ್ದು, ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಇನ್ನೋವಾ ಕಾರು ಚಾಲಕನ ಅಜಾಗರೂಕತೆ ಚಾಲನೆ ಕಾರಣ ಎಂದು ಹೇಳಲಾಗುತ್ತಿದೆ. ಮುಂದೆ ಹೋಗುತ್ತಿದ್ದ ಮಹಿಂದ್ರಾ ಪಿಕ್ ಅಪ್ ವಾಹನ್ ಡಿಕ್ಕಿ ತಪ್ಪಿಸಲು ಹೋಗಿ ಎದುರಿಗೆ ಬರುತ್ತಿದ್ದ ಟಂ ಟಂ ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು : ಬೆಂಗಳೂರಿನಲ್ಲಿ ಬಿಡಿಎ ನಿವೇಶನ ಖರೀದಿಯಲ್ಲಿ ಭಾರಿ ಗೋಲ್ಮಾಲ್ ನಡೆದಿದ್ದು, ಮೂಲ ಮಾಲೀಕನ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಕೆ ಮಾಡಿ ಬಿಡಿಎ ನಿವೇಶನ ನೋಂದಣಿ ಮಾಡಿಕೊಂಡಿದ್ದ ಮೂವರು ಆರೋಪಿಗಳನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಿಡಿಎನ ನಿವೃತ್ತ ವಿಶೇಷ ಸಹಾಯಕ ಚಿಕ್ಕರಾಯಿ ಕೆ.ಎನ್​. (62), ಮುರುಳೀಧರ್ (60) ಹಾಗೂ ಮಂಜುನಾಥ್ (48) ಎಂದು ತಿಳಿದುಬಂದಿದೆ. ಬೆಂಗಳೂರು‌ ಅಭಿವೃದ್ಧಿ ಪ್ರಾಧಿಕಾರದ ವಿಜಿಲೆನ್ಸ್ ಅಧಿಕಾರಿಗಳು ನೀಡಿದ ದೂರಿನನ್ವಯ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಹಿನ್ನೆಲೆ? ಅರ್ಕಾವತಿ ಬಡಾವಣೆಯ 2ನೇ ಬ್ಲಾಕ್‌ನಲ್ಲಿರುವ 40×60ರ ನಿವೇಶನ 2006ರಲ್ಲಿ ಬೈಲಪ್ಪ ಎಂಬುವರಿಗೆ ಹಂಚಿಕೆಯಾಗಿತ್ತು. ನಂತರ ಆ ನಿವೇಶನಕ್ಕೆ ಬದಲಿಯಾಗಿ ನಾಡಪ್ರಭು ಕೆಂಪೇಗೌಡ ಬಡಾವಣೆಯ 3ನೇ ಬ್ಲಾಕ್‌ನಲ್ಲಿರುವ ನಿವೇಶನವನ್ನು 2018ರಲ್ಲಿ ಮಂಜೂರು ಮಾಡಲಾಗಿತ್ತು. ಈ ನಡುವೆ 2019ರಲ್ಲಿ ಬೈಲಪ್ಪ ಅವರು ಮೃತಪಟ್ಟಿದ್ದರು. ಆದ್ದರಿಂದ ನಿವೇಶನದ ಹಕ್ಕು ವರ್ಗಾವಣೆ ಕೋರಿ ಅವರ ಪತ್ನಿ ಲಕ್ಷ್ಮೀದೇವಮ್ಮ ಅವರು ಬಿಡಿಎಗೆ ಅರ್ಜಿ ಸಲ್ಲಿಸಿದ್ದರು. ಆದರೆ ಬಿಡಿಎ…

Read More

ತಮಿಳುನಾಡು : ತಮಿಳುನಾಡಿನಲ್ಲಿ ನಟ ವಿಜಯ್ ರ‍್ಯಾಲಿಯಲ್ಲಿ 40 ಜನರು ಸಾವನಪ್ಪಿದು 50 ಜನರ ಸತಿ ಗಂಭೀರವಾಗಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರೂರಿನಲ್ಲಿ ತಮಿಳುನಾಡು ಬಿಜೆಪಿ ನಾಯಕ ಅಣ್ಣಮಲೈ ಇದರಲ್ಲಿ ನಟ ವಿಜಯ್ ಅವರ ಯಾವುದೇ ತಪ್ಪು ಇಲ್ಲ ಈ ಒಂದು ದುರಂತಕ್ಕೆ ರಾಜ ಸರ್ಕಾರ ಹಾಗೂ ಪೊಲೀಸರ ವೈಫಲ್ಯವೇ ಕಾರಣ ಈ ಒಂದು ಪ್ರಕರಣದ ತನಿಖೆಯನ್ನು ತಕ್ಷಣ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ಕರೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ದುರಂತಕ್ಕೆ ರಾಜ್ಯ ಸರ್ಕಾರ ಹಾಗೂ ಪೊಲೀಸರೇ ನೇರ ಹೊಣೆಯಾಗಿದ್ದಾರೆ. ಇದರಲ್ಲಿ ನಟ ರಾಜಕಾರಣಿ, ವಿಜಯ್ ತಪ್ಪು ಏನು ಇಲ್ಲ. ವಿಜಯ್ ರ್ಯಾಲಿಗೆ ಅನುಮತಿ ನೀಡಿದ್ದು ಸ್ಥಳೀಯ ಆಡಳಿತ 10,000 ಜನ ಸೇರುತ್ತಾರೆ ಎಂದು ಅನುಮತಿ ಕೇಳಿದ್ರು ಅಂತಾರೆ. ಹಾಗಾದರೆ ಗುಪ್ತಚರ ದಳ ಇದರಲ್ಲಿ ವಿಫಲ ಆಗಿದೆಯಾ?ಪೊಲೀಸರಿಗೆ ಗೊತ್ತಿಲ್ವಾ ವಿಜಯ್ ದೊಡ್ಡ ಸ್ಟಾರ್ ಎಂದು? ಇಲ್ಲಿನ ಡಿಸಿ ಮತ್ತು ಎಸ್ ಪಿ ಯನ್ನು ತಕ್ಷಣ ಸಸ್ಪೆಂಡ್ ಮಾಡಬೇಕು…

Read More

ತುಮಕೂರು : ತುಮಕೂರಿನ ಕೈಗಾರಿಕಾ ಪ್ರದೇಶದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ತುಮಕೂರು ನಗರದ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಈ ಒಂದು ಬೆಂಕಿ ದುರಂತ ಸಂಭವಿಸಿದೆ. ಫೋಮ್ ಮ್ಯಾನು ಫ್ಯಾಕ್ಟರಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಇಂದು ಭಾನುವಾರ ಆದುದ್ದರಿಂದ ಯಾವುದೇ ಕಾರ್ಮಿಕರು ಫ್ಯಾಕ್ಟರಿಯಲ್ಲಿ ಇರಲಿಲ್ಲ. ಹಾಗಾಗಿ ಯಾವುದೇ ರೀತಿಯಾದ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಆದರೆ ಫ್ಯಾಕ್ಟರಿಯಲ್ಲಿ ಇದ್ದಂತಹ ವಸ್ತುಗಳು ಸಂಪೂರ್ಣವಾಗಿ ಸುಟ್ಟು ತರಕಲಾಗಿದೆ. ಘಟನೆ ಕುರಿತಂತೆ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More