Subscribe to Updates
Get the latest creative news from FooBar about art, design and business.
Author: kannadanewsnow05
ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಗ್ಯಾಸ್ ಸಿಲೆಂಡರ್ ಡೆಲಿವರಿ ಮಾಡಲು ಬಂದ ಡೆಲಿವರಿ ಬಾಯ್ ನಿಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತಮಾರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಮೇ 21ರಂದು ಮಧ್ಯಾಹ್ನದ ವೇಳೆ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ಮಹೇಶ್ ಗ್ಯಾಸ್ ಏಜೆನ್ಸಿಯ ಡೆಲಿವರಿ ಬಾಯ್ ಮಹೇಶ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಮಹಿಳೆ ಮೈಸೂರಿಗೆ ತೆರಳಲು ಸಿದ್ಧವಾಗುತ್ತಿದ್ದ ವೇಳೆ ಮಹೇಶ್ ಮನೆಗೆ ಬಂದಿದ್ದಾನೆ. ಮನೆಯ ಬಳಿ ಗ್ಯಾಸ್ ಸಿಲಿಂಡರ್ ವಾಹನ ತಂದು ನಿಲ್ಲಿಸಿದ್ದ. ಮನೆ ಬಾಗಿಲು ಬಡಿದು ಗ್ಯಾಸ್ ಸಿಲಿಂಡರ್ ತೆಗೆದುಕೊಳ್ಳಿ ಅಂದಿದ್ದ. ಈ ವೇಳೆ ನಾವು ಸಿಲಿಂಡರ್ ಬುಕ್ ಮಾಡಿಲ್ಲ ಎಂದು ಮಹಿಳೆ ನಿರಾಕರಿಸಿದ್ದಾರೆ. ಸಿಲಿಂಡರ್ ಖಾಲಿಯಾಗಿದ್ದರೆ ತೆಗೆದುಕೊಳ್ಳಿ ಎಂದು ಒತ್ತಾಯಿಸಿದ್ದ. ಆತನ ಮಾತು ನಂಬಿ 950 ನೀಡಿ ಸಿಲಿಂಡರ್ ಪಡೆದಿದ್ದರು. ಈ ವೇಳೆ ಅಡುಗೆಮನೆ ಫೋಟೋ ತೆಗೆಯಬೇಕು ಅಂತ ಮಹೇಶ್ ಹೇಳಿದ್ದಾನೆ. ಫೋಟೋ ತೆಗೆದು ಆನ್ಲೈನ್…
ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ನಗರದ ಹೊರವಲಯ ಟಿ.ದಾಸರಹಳ್ಳಿಯಲ್ಲಿರುವ ಎಲೆಕ್ಟ್ರಿಕ್ ಬೈಕ್ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು, ಕ್ಷಣಾರ್ಧದಲ್ಲೇ ಹೊತ್ತಿ ಉರಿದಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಶೋರೂಂನಲ್ಲಿದ್ದ ಎಲೆಕ್ಟ್ರಿಕ್ ಬೈಕ್‌ಗಳ ಬ್ಯಾಟರಿ ಬ್ಲಾಸ್ಟ್ ಆಗಿ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿದ ಪೀಣ್ಯಾ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಗ್ನಿ ಅವಘಡದಲ್ಲಿ 4 ಎಲೆಕ್ಟ್ರಿಕ್ ಬೈಕ್‌ಗಳು ಬೆಂಕಿಗಾಹುತಿಯಾಗಿದೆ. ಇನ್ನೂ ಮನೀಷ್ ಎಂಬುವವರಿಗೆ ಸೇರಿದ್ದ ಎಲೆಕ್ಟ್ರಿಕ್ ಬೈಕ್ ಶೋರೂಂ ಆಗಿದ್ದು, ರಾತ್ರಿ ಶೋರೂಂ ಕ್ಲೋಸ್ ಮಾಡಿ ಮನೆಗೆ ತೆರಳಿದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಅವಾಂತರಗಳು ಸೃಷ್ಟಿಯಾಗಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನಪ್ಪಿದ್ದಾರೆ. ಇದೀಗ ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಸಾವನಪ್ಪಿದ್ದಾನೆ. ಹೌದು ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡ ಕಿರುಕುಂಬಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ವಿದ್ಯುತ್ ಶಾಕ್ ನಿಂದ SSLC ವಿದ್ಯಾರ್ಥಿ ಮಾದೇಶ್ (16) ಸಾವನ್ನಪ್ಪಿದ್ದಾನೆ. ಡ್ರೈನೇಜ್ ಪೈಪ್ ಸ್ವಚ್ಛಗೊಳಿಸುವಾಗ ವಿದ್ಯುತ್ ಪ್ರವಹಿಸಿ ಈ ಒಂದು ದುರಂತ ಸಂಭವಿಸಿದೆ. ಪೈಪ್ನಲ್ಲಿ ಸಿಲುಕಿದ್ದ ಕಂಬಿಯನ್ನು ಹೊರಗೆ ಎಳೆಯುತ್ತಿದ್ದಾಗ, ಕಬ್ಬಿಣದ ಕಂಬಿ ವಿದ್ಯುತ್ ತಂತಿಗೆ ತಗುಲಿ ಸ್ಥಳದಲ್ಲೇ ಮಾದೇಶ್ ಸಾವನ್ನಪ್ಪಿದ್ದಾನೆ. ನಿನ್ನೆಯಷ್ಟೇ ಮಾದೇಶ್ SSLC ಮರು ಪರೀಕ್ಷೆ ಬರೆದು ಬಂದಿದ್ದ. ನಂದಿ ಗಿರಿಧಾಮ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ವರ್ಣಾರ್ಭಟದಿಂದ ಇಂದು ಘೋರವಾದ ದುರಂತ ಸಂಭವಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಗುಡ್ಡ ಕುಸಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಕಾಂತಪ್ಪ ಪೂಜಾರಿ ಎಂಬುವವರ ಮೇಲೆ ಗುಡ್ಡ ಕುಸಿದು ದುರಂತ ಸಂಭವಿಸಿದೆ. ಈ ಒಂದು ದುರಂತದಲ್ಲಿ ಕಾಂತಪ್ಪ ಪೂಜಾರಿ ಅವರ ಪತ್ನಿ ಹಾಗೂ ಅವರಿಬ್ಬರ ಮೊಮ್ಮಕ್ಕಳು ಸಾವನಪ್ಪಿದ್ದಾರೆ. ಇದೀಗ ಈ ಒಂದು ಘಟನೆಗೆ ಸಂಬಂಧಿಸಿದಂತೆ, ಮಂಗಳೂರಿನ ಉಳ್ಳಾಲದಲ್ಲಿ ಗುಡ್ಡ ಕುಸಿತ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಕ್ಷಣ ಮಂಗಳೂರಿಗೆ ತೆರಳಲು ಸಚಿವ ದಿನೇಶ್ ಗುಂಡೂರಾವ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ. ದುರಂತದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದಾರೆ.ತಕ್ಷಣ ಜಿಲ್ಲೆಗೆ ತೆರಳಿ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡುರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿದ್ದಾರೆ. ಇದೀಗ ಅವಶೇಷಗಳಡಿ ಸಿಲುಕಿದ್ದ ತಾಯಿ ಅಶ್ವಿನಿ ಹಾಗೂ ಮಗು ಆರುಷ್ ರಕ್ಷಣೆ ಮಾಡಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗಿದೆ ಒಂದು ವರ್ಷದ ಮಗು ಆರುಷ್ ಕೊನೆಯುಸಿರೆಳಿದಿದ್ದಾನೆ. ಹೌದು ಮಂಗಳೂರಿನ ಉಳ್ಳಾಲದಲ್ಲಿ ಗುಡ್ಡ ಕುಸಿತ ದುರಂತದಲ್ಲಿ ತಾಯಿ ಅಶ್ವಿನಿ ಹಾಗೂ ಮಗುವನ್ನು ರಕ್ಷಣೆ ಮಾಡಲಾಗಿತ್ತು. ಆದರೆ ಇದೀಗ ರಕ್ಷಣೆ ಮಾಡಿದ್ದ ಆರುಷ್ ಇದೀಗ ಬದುಕುಳಿದಿಲ್ಲ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳಿದಿದ್ದಾನೆ. ಅಂಬುಲೆನ್ಸ್ ನಲ್ಲಿ ಮಗು ಆರುಷ್ ಸಾವನ್ನಪ್ಪಿದ್ದಾನೆ ಎಂದು ಇದೀಗ ತಿಳಿದು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ. ಬಳಿಕ ತಾಯಿ ಅಶ್ವಿನಿ ಹಾಗೂ ತನ್ನ ಇನ್ನೋರ್ವ ಮಗು ಆರುಷ್ ನನ್ನು ಸಿಬ್ಬಂದಿಗಳು ರಕ್ಷಣೆ ಮಾಡಿದ್ದರು. ತಾಯಿ ಮತ್ತು ಮಗುವನ್ನು ರಕ್ಷಣೆ ಮಾಡಿದ್ದರು.…
ಬೆಂಗಳೂರು : ಕರಾವಳಿ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಕೋಮು ಗಲಭೆ ತಡೆಗೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಕೋಮು ಗಲಭೆ ನಿಯಂತ್ರಣ ಕ್ರಮವಾಗಿ ಡಿಐಜಿ, ಎಸ್ಪಿ ವರ್ಗಾವಣೆ ಮಾಡಿದ್ದು, ಆ ಸ್ಥಳಕ್ಕೆ ಹಿರಿಯ ಐಪಿಎಸ್ ಅಧಿಕಾರಿಗಳನ್ನು ನೇಮಿಸಿದೆ. ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಉಪ ನಿರೀಕ್ಷಕ ಜನರಲ್ ಆಫ್ ಪೊಲೀಸ್, ಆರ್ಥಿಕ ಅಪರಾಧಗಳು, ಅಪರಾಧ ತನಿಖಾ ಇಲಾಖೆ, ಸಿ. ವಂಶಿ ಕೃಷ್ಣ, ಐಪಿಎಸ್ ಅವರನ್ನು ಏಕಕಾಲೀನ ಆರೋಪದಿಂದ ಮುಕ್ತಗೊಳಿಸಲಾಗಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಆಗುತ್ತಿರುವುದರಿಂದ ರಾಜ್ಯ ಸರ್ಕಾರ ಇದೀಗ ಐಪಿಎಸ್ ಅಧಿಕಾರಿಗಳನ್ನು ದಿಢೀರನೇ ಎತ್ತಗಂಡಿ ಮಾಡಿದೆ.…
ಯಾದಗಿರಿ : ರೈತರೊಬ್ಬರ ಬಳಿ ಸಬ್ಸಿಡಿ ಹಣದಲ್ಲಿ 5 ಸಾವಿರ ರೂ. ಫೋನ್ ಪೇ ಮೂಲಕ ಲಂಚ ಪಡೆದ ಹಿನ್ನೆಲೆಯಲ್ಲಿ ಯಾದಗಿರಿ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವದತ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬದ್ದೆಪಲ್ಲಿ ಗ್ರಾಮದ ರೈತ ಶಂಕರಪ್ಪ ಈರುಳ್ಳಿ ಶೆಡ್ ನಿರ್ಮಾಣ ಮಾಡಿಕೊಂಡಿದ್ದರು.ಅವರಿಗೆ ಸರಕಾರ 80 ಸಾವಿರ ರೂ. ಸಬ್ಸಿಡಿ ಹಣ ಮಂಜೂರು ಮಾಡಿತ್ತು. ಸಬ್ಸಿಡಿ ಹಣದಲ್ಲಿ ಸುಮಾರು 20 ಸಾವಿರ ರೂ. ನೀಡುವಂತೆ ಶಿವದತ್ತ ಬೇಡಿಕೆ ಇಟ್ಟಿದ್ದ. ಗುರುವಾರ ರೈತ ಶಂಕರಪ್ಪನಿಗೆ ಲಂಚದ ಹಣ ವರ್ಗಾವಣೆ ಮಾಡಲು ಫೋನ್ ಪೇ ನಂಬರ್ ನೀಡಿದ್ದ. 5 ಸಾವಿರ ರೂ. ಹಣವನ್ನು ಫೋನ್ ಪೇ ಮೂಲಕ ಜಮೆ ಮಾಡಿದ ರೈತ ಬಳಿಕ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ. ಇದರಿಂದಾಗಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್ಪಿ ಜೆ.ಎಚ್.ಇನಾಂದಾರ್ ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಸಿದ್ದರಾಯ, ಸಂಗಮೇಶ ಅವರ ನೇತೃತ್ವದ ತಂಡ ಯಾದಗಿರಿಯ ಅಂಬೇಡ್ಕರ್ ನಗರದಲ್ಲಿರುವ ತೋಟಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಮೇಲೆ…
ಮೈಸೂರು : ರಾಜ್ಯದಲ್ಲಿ ಇಂದು ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮೈಸೂರಿನಲ್ಲಿ ಬೈಕ್ ಒಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬೈಕ್ ಸವಾರನ ರುಂಡವೆ ಕಟ್ ಆಗಿದೆ. ಈ ಒಂದು ಅಪಘಾತದಲ್ಲಿ ಹಿಂಬದಿ ಸವಾರ ಕೂಡ ಸಾವನಪ್ಪಿದ್ದಾನೆ. ಹೌದು ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನ ತಲೆ ಕಟ್ ಆಗಿ ಹಾರಿಹೋದ ಘಟನೆ ಮೈಸೂರು ಜಿಲ್ಲೆಯ ಗೊರಹಳ್ಳಿ ಕೆರೆ ಏರಿಯ ಮೇಲೆ ನಡೆದಿದೆ. ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಮೃತರನ್ನು ಶೇಖರ್ (26) ಹಾಗೂ ಶಂಕರ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಪಿರಿಯಾಪಟ್ಟಣ ತಾಲೂಕು ಹಿಟ್ನೆಬಾಗಿಲು ಗ್ರಾಮದ ಯುವಕರು ಎಂದು ತಿಳಿದು ಬಂದಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಇದೀಗ ಕೊರೋನಾ ಎರಡನೇ ರೂಪಾಂತರಿ ಹೊಸ ತಳಿ ಎಂಟ್ರಿ ಕೊಟ್ಟಿದ್ದು, ಇಂದು ಬೆಳಗಾವಿಯಲ್ಲಿ 70 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ ಇಂದು ರಾಜ್ಯದಲ್ಲಿ ಒಟ್ಟು 42 ಹೊಸ ಕರೋನ ಪ್ರಕರಣಗಳು ದಾಖಲಾಗಿವೆ. ಹೌದು ರಾಜ್ಯದಲ್ಲಿ ಇಂದು 42 ಕೊರೊನ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೊರೊನ ಸಕ್ರಿಯ ಪ್ರಕರಣಗಳ ಸಂಖ್ಯೆ 148 ಇದ್ದು, ರಾಜ್ಯದಲ್ಲಿ ಇದುವರೆಗೂ ಕೊರೊನಗೆ ಬಲಿಯಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.
ರಾಯಚೂರು : ರಸ್ತೆ ಬದಿ ನಿಂತಾಗ ಬಸ್ ಒಂದು ರಸ್ತೆ ಮೇಲೆ ಚಲಿಸುವಾಗ ಯುವಕನಿಗೆ ಕೆಸರು ಸಿಡಿದಿದೆ. ಈ ವೇಳೆ ಯುವಕ ಹಾಗೂ ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ. ನನ್ನ ಮೇಲೆ ಕೇಸ್ ಹಾಕುತ್ತಾರೆ ಎಂದು ಹೆದರಿದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂಡು ತಾಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹುನುಕುಂಟಿ ಗ್ರಾಮದ ಮುತ್ತಣ್ಣ ದೇವಪ್ಪ ಕುರಿ (18) ನೇಣಿಗೆ ಶರಣಾದ ಯುವಕನಾಗಿದ್ದಾನೆ. ಮೃತ ಯುವಕನ ಕುಟಂಬಸ್ಥರು ಹಾಗೂ ಗ್ರಾಮಸ್ಥರು ಪಟ್ಟಣದ ಸಾರಿಗೆ ಘಟಕದ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು. ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಕೆಲವೊತ್ತು ವಾತಾವರಣ ಬಿಗುವಿನಿಂದ ಕೂಡಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರ ಮವೊಲಿಸಿಲು ಯಶಸ್ವಿಯಾದರು.














